ಮೊದಲ ದಿನದ ಪಂಚರತ್ನ ಕಾರ್ಯಕ್ರಮವನ್ನು ಜೆಡಿಎಸ್ ಮುಖಂಡ ಎಚ್.ಡಿ ಕುಮಾರಸ್ವಾಮಿ ಅವರು ನಿನ್ನೆ ಮುಕ್ತಾಯಗೊಳಿಸಿದ್ದು, ಮಿಟ್ಟೂರಿನಲ್ಲಿ ಗ್ರಾಮವಾಸ್ತವ್ಯ ಮಾಡಿದ್ದಾರೆ.
ಬಿಜೆಪಿ ಹಾಗೂ ಕಾಂಗ್ರೆಸ್ಗಳ ನಂತರ ಜೆಡಿಎಸ್ ಕೂಡ ರಣೋತ್ಸಾಹ ಪ್ರದರ್ಶಿಸಲು ಮುಂದಾಗಿದ್ದು, ಇಂದಿನಿಂದ ಪಂಚರತ್ನ ರಥಯಾತ್ರೆಗೆ ಚಾಲನೆ, ಜೆಡಿಎಸ್ ಕಾರ್ಯಕಾರಿಣಿ ಸಭೆ ನಡೆಯಲಿವೆ.
ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆ ಡಿ ಕೆ ಶಿವಕುಮಾರ್ ಮತ್ತು ಎಚ್ ಡಿ ಕುಮಾರಸ್ವಾಮಿ ಹತ್ತಿರವಾಗುತ್ತಿದ್ದಾರೆ. ಇದರ ಹಿಂದೆ ಹಲವು ಹಕ್ಕಿಗಳನ್ನು ಹೊಡೆಯುವ ಗುರಿಯಿದೆ.
ದಾವಣಗೆರೆಯಲ್ಲಿ ಬುಧವಾರ ನಡೆದಿದ್ದ ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕೈ ಕೈ ಹಿಡಿದುಕೊಂಡು ಒಗ್ಗಟ್ಟು ಪ್ರದರ್ಶನ ಮಾಡಿದ್ದರ ಬಗ್ಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಎಚ್.ಡಿ.ದೇವೇಗೌಡರು ಮನೆಯಿಂದಲೇ ಟಿವಿಯಲ್ಲಿ ಸಮಾರಂಭ ವೀಕ್ಷಣೆ ಮಾಡುತ್ತಿದ್ದದ್ದನ್ನು ಕಂಡು ಎಚ್.ಡಿ.ಕುಮಾರಸ್ವಾಮಿ ಮತ್ತು ಇತರ ಮುಖಂಡರು ಭಾವುಕರಾದರು.
ತಾವು ಜಾತಿ ಆಧಾರದಲ್ಲಿ ರಾಜಕಾರಣ ಮಾಡುವುದಿಲ್ಲ ಎನ್ನುತ್ತಲೇ ತಮ್ಮನ್ನು ಒಕ್ಕಲಿಗ ಎಂದು ಹೇಳಿಕೊಳ್ಳುವ ಮೂಲಕ ಸಮುದಾಯದ ಮತಗಳ ಮೇಲೆ ಕಣ್ಣಿಟ್ಟಿರುವುದನ್ನು ಸಿ.ಟಿ. ರವಿ ಪರೋಕ್ಷವಾಗಿ ತಿಳಿಸಿದ್ದಾರೆ.
ಎಚ್.ಡಿ. ಕುಮಾರಸ್ವಾಮಿ ಅವರು ಈಗ ಮುಖ್ಯಮಂತ್ರಿ ಆಗಿದ್ದಿದ್ದರೆ ದಾಸರಹಳ್ಳಿ ಕ್ಷೇತ್ರಕ್ಕೆ ಇಂಥ ದುಸ್ಥಿತಿ ಬರುತ್ತಿರಲಿಲ್ಲ ಎಂದು ದಾಸರಹಳ್ಳಿ ಶಾಸಕ ಮಂಜುನಾಥ್ ನೋವು ವ್ಯಕ್ತಪಡಿಸಿದರು.
ನಮ್ಮ ಮುಖ್ಯಮಂತ್ರಿ ಮಾತನಾಡುವ ಬಸವಣ್ಣ ಅಲ್ಲ, ದುಡಿಯುವ ಬಸವಣ್ಣ. ರಾಜ್ಯದ ಆರೂವರೆ ಕೋಟಿ ಜನರ ಅಭಿವೃದ್ಧಿ ನೊಗವನ್ನು ಹೊತ್ತು ಎಳೆಯುತ್ತಿದ್ದಾರೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.
ಘಟನೆ ದೊಡ್ಡದಾಗಲು ಸರಕಾರದ ನಿರ್ಲಕ್ಷ್ಯವೇ ಕಾರಣ. ಸರಕಾರವೇ ಕಿಡಿಗೇಡಿಗಳಿಗೆ ಉತ್ತೇಜನ ಕೊಟ್ಟು ಮೌನವಾಯಿತು ಎಂದು ಟೀಕಿಸಿದ್ದಾರೆ.