ಉಪ್ಪಿನಂಗಡಿ ಕಾಲೇಜಿನಲ್ಲಿ ನಡೆದ ಹಿಜಾಬ್ ವಿವಾದದ ಸಂದರ್ಭದಲ್ಲಿ ವರದಿ ಮಾಡಲು ಹೋಗಿದ್ದ ಪತ್ರಕರ್ತರ ಮೇಲೆಯೇ ಕೇಸು ದಾಖಲಿಸಿಕೊಂಡಿದ್ದನ್ನು ಖಂಡಿಸಿ ಮಾಧ್ಯಮದ ಮಂದಿ ಶನಿವಾರ ಪ್ರತಿಭಟನೆ ನಡೆಸಿದರು. ಪ್ರಕರಣ ಹಿಂದೆಗೆದುಕೊಳ್ಳುವಂತೆ ಆಗ್ರಹಿಸಿದರು.
ನಿರ್ಬಂಧದ ಮಧ್ಯೆಯೇ ಮಂಗಳೂರು ಕಾಲೇಜಿಗೆ 16 ವಿದ್ಯಾರ್ಥಿನಿಯರು ಮತ್ತೆ ಗುರುವಾರ ಕಾಲೇಜಿಗೆ ಆಗಮಿಸಿದರು. ಆದರೆ ಪ್ರವೇಶ ನಿರಾಕರಿಸಲಾಯಿತು.
ವಿದ್ಯಾರ್ಥಿನಿಯರು ಹಿಜಾಬ್ ಧರಿಸಲೇ ಬೇಕು, ಸಿಡಿಸಿ ಸಭೆಯಲ್ಲಿ ಈ ವಿಚಾರ ನಿರ್ಣಯವಾಗಿರುವುದರಿಂದ ತಾವು ಬದಲಾಯಿಸಲು ಸಾಧ್ಯವಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ವಿದ್ಯಾರ್ಥಿನಿಯರು ಹೈಕೋರ್ಟ್ ಆದೇಶ ಹೊರತಾಗಿಯೂ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಮುಂದಾಗಿದ್ದು, ಅವರ ಮೇಲೆ ಪ್ರಕರಣ ದಾಖಲಿಸಬೇಕು ಎಂದು ಶಾಸಕ ರಘುಪತಿ ಭಟ್ ಹೇಳಿದ್ದರು.
ಹಿಜಾಬ್ ಸೇರಿ ಯಾವುದೇ ಧಾರ್ಮಿಕ ವಸ್ತ್ರಗಳನ್ನು ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಈ ಹಿಂದೆಯೇ ಸ್ಪಷ್ಟಪಡಿಸಿದ್ದರು.