ಇಸ್ಲಾಂನಲ್ಲಿ ಹಿಜಾಬ್ ಕಡ್ಡಾಯವಲ್ಲ. ಹಾಗಾಗಿ ಶಿಕ್ಷಣ ಸಂಸ್ಥೆಗಳಿಗೆ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಹೋಗುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿತ್ತು. ಈ ಆದೇಶ ಪ್ರಶ್ನಿಸಿ, ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಕೆಯಾಗಿತ್ತು.
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧಾರಣೆಗೆ ಸಂಬಂಧಿಸಿ ಇಂದು ಸುಪ್ರೀಂ ಕೋರ್ಟ್ ನೀಡಲಿರುವ ತೀರ್ಪು ಕುತೂಹಲ ಮೂಡಿಸಿದೆ. ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.
ಅನೇಕ ದಿನಗಳಿಂದ ರಾಜ್ಯದಲ್ಲಿ ತಣ್ಣಗಾಗಿದ್ದ Hijab ವಿವಾದ ಇದೀಗ ಮತ್ತೆ ಗರಿಗೆದರಿದೆ. ಹೈಕೋರ್ಟ್ ಆದೇಶದ ನಂತರವೂ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ವಿದ್ಯಾರ್ಥಿನಿಯರು ಆಗ್ರಹಿಸಿದ್ದಾರೆ.
ವಿದ್ಯಾರ್ಥಿನಿಯರು ಹೈಕೋರ್ಟ್ ಆದೇಶ ಹೊರತಾಗಿಯೂ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಮುಂದಾಗಿದ್ದು, ಅವರ ಮೇಲೆ ಪ್ರಕರಣ ದಾಖಲಿಸಬೇಕು ಎಂದು ಶಾಸಕ ರಘುಪತಿ ಭಟ್ ಹೇಳಿದ್ದರು.