ಹಾಸನ ಟಿಕೆಟ್ ದಂಗಲ್ ತೀವ್ರ ಕುತೂಹಲದ ಘಟ್ಟಕ್ಕೆ ತಲುಪಿದ್ದು, ಇಂದು ಸಂಜೆ ಅಥವಾ ನಾಳೆಯೊಳಗೆ ಹಾಸನ ಟಿಕೆಟ್ ಅಂತಿಮವಾಗುವ ಸಾಧ್ಯತೆ ಇದೆ. ಸ್ವರೂಪ್ ಹಾಗು ರೇವಣ್ಣ ಕುಟುಂಬ ಕಡೆಯಿಂದ ಕಡೆಯ ಹಂತದ ಕಸರತ್ತು ನಡೆದಿದೆ.
ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತರಿಗೆ ಅನುಕೂಲವಾಗುವ ಈ ಯೋಜನೆ ಜಾರಿಗೆ ತರುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ.
ಪಂಚರತ್ನ ಯೋಜನೆಯಲ್ಲಿ ಕೃಷಿಯೂ ಒಂದು ವಿಚಾರವಾಗಿದ್ದು, ಕೃಷಿ ಸಮಸ್ಯೆಗಳ ಕುರಿತು ರೈತರೊಂದಿಗೆ ಆನ್ಲೈನ್ ಸಂವಾದ ನಡೆಸಲು ಕುಮಾರಸ್ವಾಮಿ ಮುಂದಾಗಿದ್ದಾರೆ.
ಬರಪೀಡಿತ ಜಿಲ್ಲೆಗಳಿಗೆ ಎತ್ತಿನ ಹೊಳೆ ಯೋಜನೆಯಿಂದ ನೀರು ತರಬೇಕು ಎಂಬ ಪ್ರಯತ್ನಗಳ ಕುರಿತೂ ಪರ ವಿರೋಧದ ಮಾತುಗಳಿವೆ. ಈ ಬಗ್ಗೆಯೂ ಕುಮಾರಸ್ವಾಮಿ ಮಾತನಾಡಿದ್ದಾರೆ.
ಹಳೆ ಮೈಸೂರು ಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಅದರಲ್ಲೂ ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಎಚ್.ಡಿ. ದೇವೇಗೌಡರನ್ನು ಆಹ್ವಾನಿಸದೇ ಇರುವುದು ಜೆಡಿಎಸ್ ಪಕ್ಷವನ್ನು ಕೆರಳಿಸಿದೆ.
JDS Pancharatna Yatre | ಎಸ್ಸಿ, ಎಸ್ಟಿ ಸಮುದಾಯದವರಿಗೆ ಈಚೆಗೆ ಮೀಸಲಾತಿ ಪ್ರಕಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರದ್ದು ಗಂಡೆದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಶ್ಲಾಘನೆ ವ್ಯಕ್ತಪಡಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡುವ ಭರದಲ್ಲಿ...
JDS Pancharatna Yatre | ಮುಂಬುರುವ ಚುನಾವಣೆ ಸಂಬಂಧ ಜೆಡಿಎಸ್ ಹಮ್ಮಿಕೊಂಡಿರುವ ಪಂಚರತ್ನ ರಥಯಾತ್ರೆಗೆ ಗುರುವಾರ ಚಾಲನೆ ಸಿಕ್ಕಿದೆ. ಜೆಡಿಎಸ್ ಚುನಾಯಿತಗೊಂಡರೆ ಕಲ್ಪಿಸಿ ಕೊಡುವ ಮೂಲಭೂತ ಸೌಕರ್ಯಗಳ ಮಾಹಿತಿಯನ್ನು ಈ ಯಾತ್ರೆ ಮೂಲಕ ಜನರಿಗೆ ತಲುಪಿಸಲಾಗುತ್ತದೆ.
ವಿಧಾನ ಮಂಡಲ ಅಧೀವೇಶನದ 9ನೇ ದಿನದ ಕಾರ್ಯಕಲಾಪ ಆರಂಭಕ್ಕೂ ಮುನ್ನ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆಯೋಜಿಸಿದ್ದ ಸಭೆಯಲ್ಲಿ ಮೂವರೂ ಭಾಗವಹಿಸಿದ್ದರು.
ಬಿಡಿಎ ನಾಲ್ಕು ಸಾವಿರ ಎಕರೆ ಬಡಾವಣೆಗಾಗಿ ಭೂಮಿ ನೋಟಿಫೈ ಮಾಡುತ್ತದೆ. ಮತ್ತೆ ಯಾರಾದರೂ ಪ್ರಭಾವ ಬೀರಿದರೆ ಡಿನೋಟಿಫೈ ಮಾಡುತ್ತದೆ ಎಂದು ಕಾರ್ಯವೈಖರಿಯನ್ನು ಕುಮಾರಸ್ವಾಮಿ ಟೀಕಿಸಿದರು.
ಕೇಂದ್ರ ಸರ್ಕಾರದಿಂದ ಇವತ್ತು ಹಿಂದಿ ಆಚರಣೆ ಮಾಡುತ್ತಿರುವುದಕ್ಕೆ ನಮ್ಮ ಪಕ್ಷದ ವಿರೋಧ ಇದೆ. ಕೇಂದ್ರ ಬಿಜೆಪಿ ಸರ್ಕಾರ ಕೇವಲ ಒಂದು ಭಾಷೆಯನ್ನು ರಾಜ್ಯಗಳ ಮೇಲೆ ಹೇರಿಕೆ ಮಾಡುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದರು.