ತಾವು ಶೀಘ್ರದಲ್ಲೆ ಆರೋಪಮುಕ್ತರಾಗಿ ಹೊರಬರುವುದಾಗಿ ಇತ್ತೀಚೆಗೆ ಈಶ್ವರಪ್ಪ ಹೇಳಿದ್ದರು. ತನಿಖೆ ಸೂಕ್ತ ರೀತಿಯಲ್ಲಿ ನಡೆಯುತ್ತಿಲ್ಲ, ನ್ಯಾಯ ದೊರಕಿಸಿಕೊಡಿ ಎಂದು ರಾಜ್ಯಪಾಲರಿಗೆ ಸಂತೋಷ್ ಪತ್ನಿ ಪತ್ರ ಬರೆದಿದ್ದರು.
ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ತನಿಖೆ ಕೆಎಸ್. ಈಶ್ವರಪ್ಪ ಅವರ ನಿರ್ದೇಶನದಂತೆ ನಡೆಯುತ್ತಿದೆ ಎಂಬ ಅನುಮಾನವಿದೆ. ಹೀಗಾಗಿ ತನಿಖೆಯನ್ನು ಪಾರದರ್ಶಕವಾಗಿ ನಡೆಸಬೇಕು ಎಂದು ಸಂತೋಷ್ ಪತ್ನಿ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.
ಸಂತೋಷ್ ಪಾಟೀಲ್ ದಿಲ್ಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಲು ವ್ಯವಸ್ಥೆ ಮಾಡಿದವರ ಮೇಲೆ ಪೊಲೀಸರ ಕಣ್ಣು ನೆಟ್ಟಿದೆ. ಇವರಲ್ಲಿ ಬೆಂಗಳೂರು, ಬೆಳಗಾವಿಯ ಕೆಲವು ಕಾಂಗ್ರೆಸ್ ನಾಯಕರ ಹೆಸರೂ ಇದೆ,
ರಾಜ್ಯ ಸರ್ಕಾರದ ವಿರುದ್ಧ ಈಗಾಗಲೆ 40% ಕಮಿಷನ್ ಆರೋಪವಿದೆ.ಈ ನಡುವೆ ದಿಂಗಾಲೇಶ್ವರ ಸ್ವಾಮೀಜಿಯವರ ಮಾತು ರಾಜ್ಯಾದ್ಯಂತ ರಾಜಕೀಯ ಹೇಳಿಕೆಗಳಿಗೆ ಕಾರಣವಾಗಿದೆ.
ಉಡುಪಿಗೂ ಮುನ್ನ ಸಂತೋಷ್ ಪಾಟೀಲ್ ತಮ್ಮ ಇಬ್ಬರು ಸ್ನೇಹಿತರ ಜತೆಗೆ ಚಿಕ್ಕಮಗಳೂರು ಪ್ರವಾಸ ಮಾಡಿದ್ದರು ಎಂಬ ಮಾಹಿತಿ ಮೇರೆಗೆ ಉಡುಪಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಬಿಜೆಪಿ ಸರ್ಕಾರದ 40% ಕಮಿಷನ್ ಬಗ್ಗೆ ಏಕೆ ಮಾತನಾಡುತ್ತಿಲ್ಲ? ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರಶ್ನಿಸಿದ್ದಾರೆ.
ಈಶ್ವರಪ್ಪ ಅವರ ರಾಜೀನಾಮೆ ಘೋಷಣೆಯಿಂದ ಸರ್ಕಾರಕ್ಕೆ ಹಿನ್ನಡೆ ಅಥವಾ ಮುಜುಗರದ ಪ್ರಶ್ನೆ ಉದ್ಭವಿಸುವುದಿಲ್ಲ. ಕಾನೂನು ಪ್ರಕಾರ ತನಿಖೆ ನಡೆದು ಸತ್ಯಾಂಶ ಹೊರಬರಲು ಅವಕಾಶ ನೀಡೋಣ ಎಂದು ತಿಳಿಸಿದರು.
ಸಚಿವ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ನೀಡುವುದಾಗಿ ಶಿವಮೊಗ್ಗದಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿದ ಈಶ್ವರಪ್ಪ ಘೋಷಣೆ ಮಾಡಿದ್ದಾರೆ.
ಬೆಳಗಾವಿ ತಾಲೂಕಿನ ಬಡಸ ಗ್ರಾಮದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲು ತಡೆದ ಕಾಂಗ್ರೆಸ್ ನಾಯಕರು, ಪರಿಹಾರ ಘೋಷಣೆ ಆಗಲೆಂದು ಒತ್ತಾಯಿಸಿದರು. ಸಂತೋಷ್ ಅಂತಿಮ ಕ್ರಿಯೆಯ ವೇಳೆ ಕುಟುಂಬಸ್ಥರು ಹಾಗೂ ಗ್ರಾಮದವರ ಆಕ್ರಂದನ ಮುಗಿಲುಮುಟ್ಟಿತ್ತು.