Site icon Vistara News

Aadhaar update: ಆಧಾರ್‌ ವಿವರ ಈಗಲೇ ಉಚಿತವಾಗಿ ನವೀಕರಿಸಿ; ಎಲ್ಲಿ, ಹೇಗೆ, ಎಷ್ಟು ದಿನ?

Aadhaar card

ಹೊಸದಿಲ್ಲಿ: ನೀವೀಗ ನಿಮ್ಮ ಆಧಾರ್‌ ಕಾರ್ಡ್‌ನಲ್ಲಿ (Aadhaar Card) ತಮ್ಮ ವಿವರಗಳನ್ನು ಯಾವುದೇ ಶುಲ್ಕವಿಲ್ಲದೆ ನವೀಕರಿಸಬಹುದು (Aadhaar update for free). ಈ ಸೌಲಭ್ಯ ಸೆಪ್ಟೆಂಬರ್ 14ರವರೆಗೆ ಮಾತ್ರ ಲಭ್ಯ.

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಆನ್‌ಲೈನ್ ಆಧಾರ್ ನವೀಕರಣಗಳಿಗಾಗಿ (online Aadhaar update) ಇಟ್ಟಿದ್ದ ರೂ. 50ರ ಸಾಮಾನ್ಯ ಶುಲ್ಕವನ್ನು ಸೆ.14ರವರೆಗೆ ಮನ್ನಾ ಮಾಡಿದೆ. ಹೆಸರು, ವಿಳಾಸ, ಜನ್ಮ ದಿನಾಂಕ, ಲಿಂಗ, ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಮುಂತಾದ ವಿವರಗಳನ್ನು ನವೀಕರಿಸಬಹುದು.

ಆದರೆ ಭಾವಚಿತ್ರ, ಐರಿಸ್ ಅಥವಾ ಇತರ ಬಯೋಮೆಟ್ರಿಕ್ (Biometric details) ವಿವರಗಳನ್ನು ನವೀಕರಿಸಲು ಬಯಸಿದರೆ, ಆಧಾರ್ ನೋಂದಣಿ ಕೇಂದ್ರಕ್ಕೆ ಭೇಟಿ ನೀಡಬೇಕು ಮತ್ತು ಅಗತ್ಯ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಏಕೆಂದರೆ ಬಯೋಮೆಟ್ರಿಕ್ ಅಪ್‌ಡೇಟ್‌ಗಳಿಗೆ ಫಿಂಗರ್‌ಪ್ರಿಂಟ್‌ಗಳು, ಐರಿಸ್ ಮತ್ತು ಇತರ ಬಯೋಮೆಟ್ರಿಕ್ ಡೇಟಾ ಸ್ಕ್ಯಾನಿಂಗ್ ಅಗತ್ಯವಿದೆ. ಇದನ್ನು ದಾಖಲಾತಿ ಕೇಂದ್ರಗಳಲ್ಲಿ ಲಭ್ಯವಿರುವ ಬಯೋಮೆಟ್ರಿಕ್ ಸ್ಕ್ಯಾನಿಂಗ್ ಯಂತ್ರಗಳೊಂದಿಗೆ ಮಾತ್ರ ಮಾಡಬಹುದು. ಜತೆಗೆ ವಂಚನೆ ತಡೆಯಲು ಕೂಡ ಬಯೋಮೆಟ್ರಿಕ್ ಪರಿಶೀಲನೆ ಅಗತ್ಯವಿದೆ.

ಆಧಾರ್ ಏಕೆ ನವೀಕರಿಸಬೇಕು?

ಆಧಾರ್‌ನ ಆಡಳಿತ ಮಂಡಳಿ UIDAI, ಪ್ರಜೆಗಳು ತಮ್ಮ ಆಧಾರ್ ವಿವರಗಳನ್ನು ಪ್ರತಿ 10 ವರ್ಷಗಳಿಗೊಮ್ಮೆ ನವೀಕರಿಸುವುದನ್ನು ಕಡ್ಡಾಯಗೊಳಿಸಿದೆ. ಡೇಟಾಬೇಸ್‌ನಲ್ಲಿನ ಡೇಟಾ ನಿಖರವಾಗಿದೆ ಮತ್ತು ನವೀಕೃತವಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕಿದೆ.

ಮದುವೆ, ವಾಸಸ್ಥಾನ ಬದಲಾವಣೆ ಇತ್ಯಾದಿ ಜೀವನ ಘಟನೆಗಳಿಂದ ವ್ಯಕ್ತಿ ಹೆಸರು ಮತ್ತು ವಿಳಾಸದಂತಹ ಮೂಲಭೂತ ಜನಸಂಖ್ಯಾ ವಿವರಗಳನ್ನು ಬದಲಾಯಿಸಬೇಕಾಗಬಹುದು. ವಿಳಾಸ ಮತ್ತು ಮೊಬೈಲ್ ಸಂಖ್ಯೆ ಹೊಸ ಸ್ಥಳಗಳಿಗೆ ವಲಸೆ ಹೋದಾಗ ಬದಲಾಗಬಹುದು.

ಇದರ ಜೊತೆಗೆ ಮಕ್ಕಳ ಆಧಾರ್ ವಿವರಗಳನ್ನು ನವೀಕರಿಸಲು ಸರ್ಕಾರ ಈಗ ಮಾರ್ಗಸೂಚಿಗಳನ್ನು ಜಾರಿಗೆ ತಂದಿದೆ. ಈ ಮಾರ್ಗಸೂಚಿಗಳ ಪ್ರಕಾರ, ಮಗುವಿಗೆ 15 ವರ್ಷ ವಯಸ್ಸಾದಾಗ ನವೀಕರಣಕ್ಕಾಗಿ ಎಲ್ಲಾ ಬಯೋಮೆಟ್ರಿಕ್‌ಗಳನ್ನು ಒದಗಿಸಬೇಕು. ಇದು ಮಗುವಿನ ಆಧಾರ್ ಡೇಟಾ ನಿಖರವಾಗಿದೆ ಮತ್ತು ನವೀಕೃತವಾಗಿದೆ ಎಂದು ಖಚಿತಪಡಿಸಿಕೊಳ್ಳುತ್ತದೆ.

ಯಾಕೆ ಮುಖ್ಯ?

ಆನ್‌ಲೈನ್‌ನಲ್ಲಿ ಆಧಾರ್ ಅಪ್‌ಡೇಟ್‌ ಮಾಡುವುದು ಹೇಗೆ?

UIDAI ವೆಬ್‌ಸೈಟ್‌ಗೆ ಹೋಗಿ, ಅಲ್ಲಿ ಲಾಗಿನ್ ಐಡಿ ಮತ್ತು ಪಾಸ್‌ವರ್ಡ್ ಸೃಷ್ಟಿಸಿಕೊಳ್ಳಿ. ಲಾಗ್ ಇನ್ ಆಗಿ ಅಪ್‌ಡೇಟ್‌ ವಿನಂತಿ ಸಲ್ಲಿಸಿದರೆ, UIDAI ವಿನಂತಿಯನ್ನು ಪರಿಶೀಲಿಸುತ್ತದೆ ಮತ್ತು 15 ದಿನಗಳಲ್ಲಿ ಆಧಾರ್ ವಿವರಗಳನ್ನು ನವೀಕರಿಸುತ್ತದೆ.

ಇದನ್ನೂ ಓದಿ: PAN -Aadhaar linking : ಪ್ಯಾನ್-‌ ಆಧಾರ್‌ ಲಿಂಕ್‌ ಆಗಿಲ್ಲವೇ? ನಿಮ್ಮ ಡಿವಿಡೆಂಡ್‌ ಆದಾಯಕ್ಕೆ ಟಿಡಿಎಸ್‌ ಹೆಚ್ಚಳ ಖಚಿತ

Exit mobile version