Site icon Vistara News

BSNL 4G Plan: ಜಿಯೋಗೆ ಪೈಪೋಟಿ ನೀಡಲು ಸಜ್ಜಾಗಿದೆ ಬಿಎಸ್‌ಎನ್‌ಎಲ್ 4ಜಿ; ಹೊಸ ರಿಚಾರ್ಜ್ ಪ್ಲ್ಯಾನ್‌ ಪ್ರಕಟ

BSNL 4G Plan

ಬಿಎಸ್‌ಎನ್‌ಎಲ್ (BSNL 4G Plan) ತನ್ನ ಟೆಲಿಕಾಂ (telecom) ಬಳಕೆದಾರರಿಗೆ ಹಲವಾರು ಹೊಸ ಪ್ರಿಪೇಯ್ಡ್ ರೀಚಾರ್ಜ್ ಯೋಜನೆಗಳನ್ನು (new prepaid recharge plans) ಪರಿಚಯಿಸಿದೆ. ಇವುಗಳು ದೀರ್ಘಾವಧಿಯ ಲಾಭದೊಂದಿಗೆ ಕೈಗೆಟುಕುವ ಬೆಲೆಯಲ್ಲಿ ಅನಿಯಮಿತ ಧ್ವನಿ ಕರೆಗಳು ಮತ್ತು ಡೇಟಾದಂತಹ ಪ್ರಯೋಜನಗಳನ್ನು ನೀಡಲಿದೆ. ಜುಲೈನಲ್ಲಿ ಖಾಸಗಿ ಕಂಪನಿಗಳು ತಮ್ಮ ಪ್ರಿಪೇಯ್ಡ್ ಯೋಜನೆಗಳ ಬೆಲೆಗಳನ್ನು ಹೆಚ್ಚಿಸಿದ ಕಾರಣ ಅನೇಕ ಬಳಕೆದಾರರು ಬಿಎಸ್‌ಎನ್‌ಎಲ್‌ಗೆ ತಮ್ಮ ನಂಬರ್ ಗಳನ್ನು ಪೋರ್ಟ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪನಿಯು ಈಗ ದೇಶದ ಎಲ್ಲಾ ಟೆಲಿಕಾಂ ವಲಯಗಳಲ್ಲಿ 4ಜಿ ಸೇವೆಗಳನ್ನು ಪ್ರಾರಂಭಿಸಲು ತಯಾರಿ ನಡೆಸುತ್ತಿದೆ. ಕೆಲವು ರಾಜ್ಯಗಳಲ್ಲಿ ಬಿಎಸ್‌ಎನ್‌ಎಲ್ 4ಜಿ ಸೇವೆಯನ್ನು ಈಗಾಗಲೇ ಹೊರತರಲಾಗಿದೆ.


ಬಿಎಸ್‌ಎನ್‌ಎಲ್‌ನಿಂದ ಗ್ರಾಹಕರಿಗೆ ಹೆಚ್ಚಿನ ಲಾಭ ಕೊಡುವ ಒಂದು ರೀಚಾರ್ಜ್ ಯೋಜನೆಯು 160 ದಿನಗಳ ಮಾನ್ಯತೆಯನ್ನು ನೀಡುತ್ತದೆ. ಈ ಪ್ರಿಪೇಯ್ಡ್ ಯೋಜನೆಯಲ್ಲಿ, ಬಳಕೆದಾರರು ಒಟ್ಟು 320 ಜಿಬಿ ಡೇಟಾವನ್ನು ಪಡೆಯುತ್ತಾರೆ. 997 ರೂ. ಬೆಲೆಯ ಈ ಪ್ಲಾನ್ ಪ್ರತಿದಿನ 100 ಉಚಿತ ಎಸ್‌ಎಂಎಸ್ ಜೊತೆಗೆ ದಿನಕ್ಕೆ 2ಜಿಬಿ ಹೈ-ಸ್ಪೀಡ್ ಡೇಟಾವನ್ನು ಒದಗಿಸುತ್ತದೆ.

ಹೆಚ್ಚುವರಿಯಾಗಿ ಬಳಕೆದಾರರು ದೇಶದ ಯಾವುದೇ ನೆಟ್‌ವರ್ಕ್‌ಗೆ ಅನಿಯಮಿತ ಉಚಿತ ಧ್ವನಿ ಕರೆಗಳನ್ನು ಮಾಡಬಹುದಾಗಿದೆ. ಈ ಯೋಜನೆಯು ಭಾರತದಾದ್ಯಂತ ಉಚಿತ ರೋಮಿಂಗ್ ಮತ್ತು ಜಿಂಗ್ ಮ್ಯೂಸಿಕ್ ಮತ್ತು ಬಿಎಸ್‌ಎನ್‌ಎಲ್ ಟ್ಯೂನ್‌ಗಳಂತಹ ಹಲವಾರು ಮೌಲ್ಯವರ್ಧಿತ ಸೇವೆಗಳೊಂದಿಗೆ ಬರುತ್ತದೆ.

ಇದನ್ನೂ ಓದಿ: Phone Charging Tips: ಫೋನ್‌ಗಳನ್ನು ಚಾರ್ಜ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ!


ಬಿಎಸ್‌ಎನ್‌ಎಲ್‌ ಕೂಡ ಶೀಘ್ರದಲ್ಲೇ 5ಜಿ ಸೇವೆಗಳನ್ನು ಪ್ರಾರಂಭಿಸಲು ಕೆಲಸ ಮಾಡುತ್ತಿದೆ. ಕಂಪನಿಯು ತನ್ನ 4ಜಿ ಸೇವೆಗಾಗಿ ಎಲ್ಲಾ ಟೆಲಿಕಾಂ ವಲಯಗಳಲ್ಲಿ ಸಾವಿರಾರು ಹೊಸ ಮೊಬೈಲ್ ಟವರ್‌ಗಳನ್ನು ಸ್ಥಾಪಿಸಿದೆ ಮತ್ತು 5ಜಿ ನೆಟ್‌ವರ್ಕ್ ಪರೀಕ್ಷೆಯು ಈಗಾಗಲೇ ಪ್ರಾರಂಭವಾಗಿದೆ.

ಮುಂಬರುವ ತಿಂಗಳುಗಳಲ್ಲಿ ಸರ್ಕಾರಿ ಟೆಲಿಕಾಂ ಕಂಪನಿಯು 5ಜಿ ಸೇವೆಗಳನ್ನು ಪರಿಚಯಿಸುವ ನಿರೀಕ್ಷೆಯಿದೆ. ಇದಲ್ಲದೆ ದೆಹಲಿ ಮತ್ತು ಮುಂಬೈನಲ್ಲಿರುವ ಎಂಟಿಎನ್ ಎಲ್ ಬಳಕೆದಾರರು ಶೀಘ್ರದಲ್ಲೇ 4ಜಿ ಸೇವೆಗಳಿಗೆ ಪ್ರವೇಶವನ್ನು ಪಡೆಯುತ್ತಾರೆ. ಯಾಕೆಂದರೆ ಎಂಟಿಎನ್‌ಎಲ್ ಬಿಎಸ್‌ಎನ್‌ಎಲ್ ನ 4ಜಿ ಮೂಲಸೌಕರ್ಯವನ್ನು ಬಳಸುತ್ತಿದೆ.

Exit mobile version