ನವದೆಹಲಿ: ಜಿಯೋಫೈಬರ್ (Jio Fiber) ಹಾಗೂ ಜಿಯೋ ಏರ್ ಫೈಬರ್ (Jio Air Fiber) ಗ್ರಾಹಕರಿಗಾಗಿ ರಿಲಯನ್ಸ್ ಜಿಯೋದಿಂದ (Reliance Jio) ಹೊಸ ಪೋಸ್ಟ್ ಪೇಯ್ಡ್ ಯೋಜನೆಯನ್ನು ಪರಿಚಯಿಸಲಾಗಿದ್ದು, ಒಟಿಟಿ ಪ್ಲಾಟ್ ಫಾರ್ಮ್‌ಗಳನ್ನು ಅತಿ ಹೆಚ್ಚು ಬಳಕೆ ಮಾಡುವವರಿಗೆ, ಇಷ್ಟ ಪಡುವವರಿಗೆ ಇದು ಹೇಳಿ ಮಾಡಿಸಿದ ಯೋಜನೆಯಾಗಿದೆ. ಈ ಪ್ಲಾನ್‌ಗೆ ತಿಂಗಳಿಗೆ 888 ರೂಪಾಯಿ ಆಗಲಿದೆ.
ಪೋಸ್ಟ್ ಪೇಯ್ಡ್ ಒಟಿಟಿ ಜತೆಗೂಡಿ ಬರುತ್ತದೆ. ಇದರ ಅಡಿಯಲ್ಲಿ ಗ್ರಾಹಕರು 15 ಪ್ರೀಮಿಯಂ ಒಟಿಟಿ ಅಪ್ಲಿಕೇಷನ್‌ಗಳನ್ನು ಪಡೆಯಲಿದ್ದು, ಅನಿಯಮಿತ (Unlimited) ಡೇಟಾ ಸಹ ದೊರೆಯುತ್ತಿದೆ. ಇದರಿಂದಾಗಿ ಗ್ರಾಹಕರು ತಮ್ಮ ಅಚ್ಚುಮೆಚ್ಚಿನ ಅಪ್ಲಿಕೇಷನ್‌ಗಳಲ್ಲಿ ಯಾವಾಗ ಮತ್ತು ಎಲ್ಲಿ ಬೇಕಾದರೂ ಕಾರ್ಯಕ್ರಮಗಳ ವೀಕ್ಷಣೆ ಮಾಡಬಹುದಾಗಿದೆ.
ಇದನ್ನೂ ಓದಿ: Dr C N Manjunath: ಮತ್ತೆ ವೈದ್ಯ ವೃತ್ತಿಗೆ ಮರಳಿದ್ದಾರೆ ಹೃದ್ರೋಗ ತಜ್ಞ ಡಾ.ಸಿ.ಎನ್. ಮಂಜುನಾಥ್
ಈ ಹೊಸ ಯೋಜನೆಯ ಅಡಿಯಲ್ಲಿ ಗ್ರಾಹಕರು 30 ಎಂಬಿಪಿಎಸ್ (Mbps) ವೇಗವನ್ನು ಪಡೆಯಲಿದ್ದು, ಇದರ ಜತೆಗೆ ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್, ಜಿಯೋಸಿನಿಮಾ ಪ್ರೀಮಿಯಂ ರೀತಿಯ ಹದಿನೈದಕ್ಕೂ ಹೆಚ್ಚು ಪ್ರಮುಖ ಒಟಿಟಿ ಅಪ್ಲಿಕೇಷನ್‌ಗಳು ದೊರೆಯುತ್ತವೆ. ಈ ಅಪ್ಲಿಕೇಷನ್‌ನ ಸಬ್‌ಸ್ಕ್ರಿಪ್ಷನ್ ದೊರೆಯುವುದು ಯೋಜನೆಯ ಜತೆಗೆ ಮಾತ್ರ. ಈ ಯೋಜನೆಯನ್ನು ಹೊಸ ಚಂದಾದಾರಷ್ಟೇ ಅಲ್ಲ, 10 ಅಥವಾ 30 ಎಂಬಿಪಿಎಸ್ ಯೋಜನೆಯನ್ನು ಈಗಾಗಲೇ ಬಳಸುತ್ತಿರುವ ಜಿಯೋದ ಈಗಿನ ಬಳಕೆದಾರರು ಸಹ ಪಡೆಯಬಹುದಾಗಿದೆ.
ಇನ್ನು ಈ 888 ರೂಪಾಯಿಯ ಪೋಸ್ಟ್‌ಪೇಯ್ಡ್ ಯೋಜನೆಯು ಪ್ರತಿಯೊಬ್ಬರಿಗೂ ದೊರೆಯಲಿದ್ದು, ಸದ್ಯಕ್ಕೆ ಪ್ರಿಪೇಯ್ಡ್ ಯೋಜನೆ ಹೊಂದಿರುವ ಗ್ರಾಹಕರು ಈ ಹೊಸ ಪೋಸ್ಟ್ ಪೇಯ್ಡ್ ಯೋಜನೆಗೆ ಅಪ್‌ಗ್ರೇಡ್ ಮಾಡಬಹುದು.
ಇದನ್ನೂ ಓದಿ: T20 World Cup : ವಿಶ್ವ ಕಪ್ಗೆ ಭಾರತ ತಂಡ ಪ್ರಯಾಣಿಸುವ ದಿನಾಂಕ ಪ್ರಕಟಿಸಿದ ಜಯ್ ಶಾ
ಇನ್ನೊಂದು ವಿಶೇಷತೆಯೆಂದರೆ ಇತ್ತೀಚೆಗೆ ಘೋಷಣೆಯಾದ ಜಿಯೋ ಐಪಿಎಲ್ ಧನ್ ಧನಾ ಧನ್ ಆಫರ್ ಕೂಡ ಈ ಯೋಜನೆಗೆ ಅನ್ವಯಿಸುತ್ತದೆ. ಜಿಯೋಫೈಬರ್ ಅಥವಾ ಏರ್ ಫೈಬರ್‌ನ ಅರ್ಹ ಗ್ರಾಹಕರು ತಮ್ಮ ಜಿಯೋ ಹೋಮ್ ಬ್ರಾಡ್ ಬ್ಯಾಂಡ್ ಸಂಪರ್ಕದಲ್ಲಿ 50 ದಿನ ರಿಯಾಯಿತಿ ಕ್ರೆಡಿಟ್ ವೋಚರ್ ಸಹ ಪಡೆಯಬಹುದು. ಈ ಪ್ಲಾನ್ ಮೇ 31, 2024ರ ವರೆಗೆ ಲಭ್ಯವಿರುತ್ತದೆ, ಜಿಯೋ ಡಿಡಿಡಿ (Jio Dhan Dhana Dhan) ಕೊಡುಗೆಯನ್ನು ವಿಶೇಷವಾಗಿ ಟಿ20 ಋತುವಿಗಾಗಿ ವಿನ್ಯಾಸಗೊಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.