Site icon Vistara News

Robot Suicide: ದ. ಕೊರಿಯಾದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೋಬೋಟ್! ಕೆಲಸದ ಹೊರೆ ಕಾರಣ?

Robot Suicide

ದಕ್ಷಿಣ ಕೊರಿಯಾದ ನಾಗರಿಕ ಸೇವಕ ರೋಬೋಟ್ ಆತ್ಮಹತ್ಯೆ (Robot Suicide) ಮಾಡಿಕೊಂಡಿದೆ. ಮೆಟ್ಟಿಲಿನಿಂದ ಹಾರಿ ಅದು ಆತ್ಮಹತ್ಯೆ ಮಾಡಿಕೊಂಡಿದ್ದು, ಮೆಟ್ಟಿಲುಗಳಿಂದ ಕೆಳಗೆ ಬಿದ್ದ ಬಳಿಕ ಅದು ನಿಷ್ಕ್ರಿಯವಾಗಿದೆ. ವಿಶ್ವದ ಮೊದಲ ರೋಬೋಟ್ ಆತ್ಮಹತ್ಯೆ (Suicide) ಬಳಿಕ ದಕ್ಷಿಣ ಕೊರಿಯಾ (South Korea) ನಗರದ ಜನತೆ ಶೋಕ ವ್ಯಕ್ತಪಡಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುಮಿ ಸಿಟಿ ಕೌನ್ಸಿಲ್ ನ ( Gumi City Council ) ಸೈಬೋರ್ಗ್ ಎಂಬ ರೋಬೋಟ್ ಜೂನ್ 26ರಂದು ಆರೂವರೆ ಅಡಿ ಮೆಟ್ಟಿಲಿನಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದೆ. ಬಳಿಕ ಅದನ್ನು ಪರೀಕ್ಷಿಸಿದ ಪ್ರಧಾನ ಆಡಳಿತ ಅಧಿಕಾರಿ ರೋಬೋಟ್ ಸತ್ತಿದೆ ಎಂದು ಘೋಷಿಸಿದರು.

ರೋಬೋಟ್ ಒಂದು ಸ್ಥಳದಲ್ಲಿ ‘ಏನೋ ಇದ್ದಂತೆ’ ಎಂಬಂತೆ ತಿರುಗುತ್ತಿತ್ತು. ಆದರೆ ಆತ್ಮಹತ್ಯೆಗೆ ನಿಖರವಾದ ಕಾರಣವನ್ನು ತನಿಖೆ ಮಾಡಲಾಗುತ್ತಿದೆ. ರೋಬೋಟ್ ನ ತುಂಡುಗಳನ್ನು ಸಂಗ್ರಹಿಸಲಾಗಿದೆ. ಕಂಪನಿಯು ಈ ಬಗ್ಗೆ ವಿಶ್ಲೇಷಿಸುತ್ತದೆ ಎಂದು ಅಧಿಕಾರಿ ಹೇಳಿದ್ದಾರೆ.

ರೋಬೋಟ್ ದೈನಂದಿನ ದಾಖಲೆಗಳ ವಿತರಣೆ, ನಗರ ಪ್ರಚಾರ ಮತ್ತು ಸ್ಥಳೀಯ ನಿವಾಸಿಗಳಿಗೆ ಮಾಹಿತಿಯನ್ನು ತಲುಪಿಸಲು ಸಹಾಯ ಮಾಡುತಿತ್ತು. ಇದು ಅಧಿಕೃತವಾಗಿ ಸಿಟಿ ಹಾಲ್‌ನ ಒಂದು ಭಾಗವಾಗಿತ್ತು. ನಮ್ಮಲ್ಲಿ ಒಬ್ಬರಾಗಿತ್ತು ಎಂದು ಗುಮಿ ಸಿಟಿ ಕೌನ್ಸಿಲ್‌ನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರೋಬೋಟ್ ಶ್ರದ್ಧೆಯಿಂದ ಸೇವೆ ಸಲ್ಲಿಸಿತ್ತು. ಈ ರೀತಿಯಲ್ಲಿ ಬಳಸಲಾದ ಮೊದಲ ರೋಬೋಟ್ ಇದಾಗಿದೆ ಮತ್ತು ಇದನ್ನು ಅಕ್ಟೋಬರ್ 2023 ರಲ್ಲಿ ನೇಮಿಸಲಾಗಿತ್ತು ಎನ್ನುತ್ತಾರೆ ಅಧಿಕಾರಿಗಳು.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಸಾಕಷ್ಟು ಮಂದಿ ನೆಟ್ಟಿಗರು ಈಗ ರೋಬೋಟ್‌ಗೆ ನಿಭಾಯಿಸಲು ಕೆಲಸದ ಹೊರೆ ಹೆಚ್ಚು ಎಂದು ಹೇಳಿದ್ದಾರೆ.


ಕೆಲಸದ ಹೊರೆ ಜಾಸ್ತಿಯಾಗಿ ತುಂಬಾ ಹೊತ್ತು ತಿರುಗಿ ಮೆಟ್ಟಿಲಿನಿಂದ ಹಾರಿತು ಎಂದು ಒಬ್ಬರು ಹೇಳಿದ್ದರೆ ಇನ್ನೊಬ್ಬರು ಸ್ಕ್ರಾಪ್ ಮೆಟಲ್ ಶಾಂತಿಯಿಂದ ವಿಶ್ರಾಂತಿ ಪಡೆಯಲಿ ಎಂದು ಹೇಳಿದ್ದಾರೆ. ಮತ್ತೊಬ್ಬರು ವಿರಾಮಗಳಿಲ್ಲ, ರಜೆಗಳಿಲ್ಲ, ಪ್ರಯೋಜನಗಳಿಲ್ಲ. ರೋಬೋಟ್‌ಗಳಿಗೆ ಒಕ್ಕೂಟದ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ರೋಬೋಟಿಕ್ ಸಹಾಯಕವನ್ನು ಕ್ಯಾಲಿಫೋರ್ನಿಯಾ ಮೂಲದ ಬೇರ್ ರೋಬೋಟಿಕ್ಸ್ ಎಂಬ ಸ್ಟಾರ್ಟಪ್ ತಯಾರಿಸಿದೆ. ಅದು ಉದ್ಯೋಗಿ ಕಾರ್ಡ್ ಅನ್ನು ಹೊಂದಿತ್ತು. ಬೆಳಗ್ಗೆ 9 ರಿಂದ ಸಂಜೆ 4 ರವರೆಗೆ ಕೆಲಸ ಮಾಡುತ್ತಿತ್ತು. ಇತರ ರೋಬೋಟ್‌ಗಳಿಗಿಂತ ಭಿನ್ನವಾಗಿ ಸಾಮಾನ್ಯವಾಗಿ ಒಂದು ಮಹಡಿಯನ್ನು ಮಾತ್ರ ಬಳಸುತ್ತಿತ್ತು. ಸದ್ಯಕ್ಕೆ ಹೊಸ ರೋಬೋಟ್ ಅನ್ನು ಅಳವಡಿಸಿಕೊಳ್ಳುವ ಯಾವುದೇ ಯೋಜನೆ ಇಲ್ಲ. ದಕ್ಷಿಣ ಕೊರಿಯಾವು ವಿವಿಧ ವೃತ್ತಿಗಳಲ್ಲಿ ರೋಬೋಟ್‌ಗಳನ್ನು ಬಳಸುವುದಕ್ಕಾಗಿ ವ್ಯಾಪಕವಾಗಿ ಹೆಸರುವಾಸಿಯಾಗಿದೆ.

ಇದನ್ನೂ ಓದಿ: PM Modi Russia Visit: ಜುಲೈ 8ರಿಂದ ಮೋದಿ ರಷ್ಯಾ ಪ್ರವಾಸ; ಉಕ್ರೇನ್‌ ಆಕ್ರಮಣದ ಬಳಿಕ ಮೊದಲ ಭೇಟಿ

ಈ ಹಿಂದೆ ವಾಷಿಂಗ್ಟನ್ ಡಿಸಿಯ ನೀರಿನ ಕಾರಂಜಿಯಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿರುವ ಭದ್ರತಾ ರೋಬೋಟ್ ಸ್ಟೀವ್ ಎಂದು ಕರೆಯಲಾಗುತ್ತಿತ್ತು. ಆದರೆ ಅದು ಸ್ಕಿಡ್ ಆಗಿ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿತ್ತು.

Exit mobile version