ನವದೆಹಲಿ: ಕೃತಕ ಬುದ್ದಿಮತ್ತೆ (artificial intelligence) ಸ್ಪರ್ಧೆಯಲ್ಲಿ ಎಲ್ಲ ಕಂಪನಿಗಳು ಇಳಿದಿವೆ. ಈ ಕೃತಕ ಬುದ್ಧಿಮತ್ತೆಯ ಓಟವು ಸರ್ಚ್ ಎಂಜಿನ್, ಉತ್ಪಾದಕತೆ ಮತ್ತು ಆನ್‌ಲೈನ್ ಶಾಪಿಂಗ್ ಜಾಲತಾಣಗಳ ಮೂಲ ಕಾರ್ಯವೈಖರಿಯನ್ನು ಬದಲಿಸಲಿದೆ ಎಂದು ಮೈಕ್ರೋಸಾಫ್ಟ್ ಕಾರ್ಪ್‌ನ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ (Bill Gates) ಅವರು ಅಭಿಪ್ರಾಯಪಟ್ಟಿದ್ದಾರೆ.
ಕೃತಕ ಬುದ್ಧಿಮತ್ತೆ ಎಷ್ಟರಮಟ್ಟಿಗೆ ನಮ್ಮ ಜೀವನದ ಮೇಲೆ ಪರಿಣಾಮ ಬೀರಲಿದೆ ಎಂದರೆ, ಭವಿಷ್ಯದಲ್ಲಿ ನೀವು ಸರ್ಚ್ ಎಂಜಿನ್ ಸೈಟ್‌ಗೆ ಹೋಗಲಾರರಿ ಮತ್ತು ಅಮೆಜಾನ್ ಜಾಲತಾಣಕ್ಕೆ ಭೇಟಿ ಕೊಡಲಾರರಿ ಎಂದು ಬಿಲ್ ಗೇಟ್ಸ್ ಹೇಳಿದ್ದಾರೆ.
ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಗೋಲ್ಡ್‌ಮನ್ ಸ್ಯಾಚ್ಸ್ ಗ್ರೂಪ್ ಇಂಕ್ ಮತ್ತು ಎಸ್‌ವಿ ಏಂಜೆಲ್ ಆಯೋಜಿಸಿದ್ದ ಎಐ ಫಾರ್ವರ್ಡ್ ಕಾರ್ಯಕ್ರಮದಲ್ಲಿ ಮಾತನಾಡಿದ ಗೇಟ್ಸ್, ಈ ರೇಸ್‌ನಲ್ಲಿ ಮೈಕ್ರೋಸಾಫ್ಟ್ ಚಾಲನೆಯಲ್ಲಿಲ್ಲದಿದ್ದರೆ ಅದು ಅವರನ್ನು ನಿರಾಶೆಗೊಳಿಸುತ್ತದೆ ಎಂದು ಹೇಳಿದರು. ಉದ್ಯಮಿ ರೀಡ್ ಹಾಫ್‌ಮನ್ ಸಹ ಸಂಸ್ಥಾಪನೆಯ ಇನ್‌ಫ್ಲೆಕ್ಷನ್ ಎಐ ತಮ್ಮನ್ನು ಸಮ್ಮೋಹನಗೊಳಿಸಿದೆ ಎಂದು ಅವರು ಹೇಳಿದರು.
ಇಟ್ಟು ಮರೆತು ಹೋದ ವಸ್ತುಗಳನ್ನು ಹುಡುಕಲು ‘ಕೃತಕ ಜ್ಞಾಪಕ ಶಕ್ತಿ’ ಅಭಿವೃದ್ಧಿ!
ಇಟ್ಟಿರುವ ಸಾಮಾನು ಟೈಮ್‌ಗೆ ಸರಿಯಾಗಿ ಕೈಗೆ ಸಿಗುವುದಿಲ್ಲ ಎಂದು ಮನೆಯಲ್ಲಿ ಆಗಾಗ ಹಿರಿಯರು ಮಾತನಾಡಿಕೊಳ್ಳವುದನ್ನು ಕೇಳಿದ್ದೇವೆ. ಇನ್ನು ಆ ಚಿಂತೆ ಇಲ್ಲ ಬಿಡಿ. ಯಾಕೆಂದರೆ, ಸಂಶೋಧಕರು ಕೃತಕ ಬುದ್ಧಿಮತ್ತೆ (Artificial Intelligence) ಆಧಾರಿತ ಹೊಸ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದ್ದಾರೆ. ಈ ತಂತ್ರಜ್ಞಾನವನ್ನು ಬಳಸಿಕೊಂಡು ರೋಬಾಟ್‌ಗಳು, ವಿಶೇಷವಾಗಿ ಮರೆವಿನ ಕಾಯಿಲೆಯಿಂದ ಬಳಲುತ್ತಿರುವವರಿಗೆ, ಔಷಧಗಳು, ಕನ್ನಡಕ, ಫೋನ್‌ಗಳು ಮತ್ತಿತರ ವಸ್ತುಗಳನ್ನು ಹುಡುಕಿಕೊಡಲು ನೆರವು ನೀಡಲಿವೆ.
ಕೆನಡಾದ ಯುನಿರ್ವಸಿಟಿ ಆಫ್ ವಾಟರ್ಲೂ ಸಂಸೋಧನಾ ವಿದ್ಯಾರ್ಥಿ ಅಲಿ ಅಯೂಬ್ ಅವರು ಈ ಬಗ್ಗ ಮಾಹಿತಿ ನೀಡಿದ್ದು, ದೀರ್ಘಾವಧಿಯಲ್ಲಿ ಈ ತಂತ್ರಜ್ಞಾನ ಪರಿಣಾಮವು ಸಾಕಷ್ಟು ರೋಮಾಂಚನಕಾರಿಯಾಗಿರಲಿದೆ ಎಂದು ಹೇಳಿದ್ದಾರೆ. ಬಳಕೆದಾರರ ಕೇವಲ ರೋಬಾಟ್‌ವನ್ನು ಸಂಗಾತಿಯಂತೆ ಬಳಸುವುದು ಮಾತ್ರವಲ್ಲದೇ, ಅದನ್ನು ಇನ್ನಷ್ಟು ವೈಯಕ್ತಿಕರಿಸಿ, ಹೆಚ್ಚಿನ ಸ್ವಾತಂತ್ರ್ಯವನ್ನು ನೀಡಬಹುದಾಗಿದೆ. ಇದರಿಂದ ಸಾಕಷ್ಟು ಹೊಸ ಸಾಧ್ಯತೆಗಳು ಲಭ್ಯವಾಗಲಿವೆ ಎದು ಅಯೂಬ್ ಅವರು ಹೇಳಿದರು.
ಇದನ್ನೂ ಓದಿ: Indian Military: ಭಾರತೀಯ ಸೇನೆಗೆ ಕೃತಕ ಬುದ್ಧಿಮತ್ತೆ ನೆರವು, ಎಲ್ಲೆಲ್ಲಿ ಬಳಕೆ?
ಮೆರೆವು ಕಾಯಿಲೆಯು, ಮೆದುಳಿನ ಕಾರ್ಯನಿರ್ವಹಣೆಯನ್ನು ನಿರ್ಬಂಧಿಸುತ್ತದೆ. ಇದರಿಂದಾಗಿ ಗೊಂದಲ, ನೆನಪು ನಷ್ಟ ಮತ್ತು ಅಂಗವೈಕಲ್ಯವನ್ನು ಉಂಟುಮಾಡುತ್ತದೆ. ಈ ಸ್ಥಿತಿಯನ್ನು ಹೊಂದಿರುವ ಅನೇಕ ಜನರು ದಿನನಿತ್ಯದ ವಸ್ತುಗಳ ಸ್ಥಳವನ್ನು ಪದೇ ಪದೇ ಮರೆತುಬಿಡುತ್ತಾರೆ. ಇದು ಅವರ ಜೀವನದ ಗುಣಮಟ್ಟವನ್ನು ಕುಗ್ಗಿಸುತ್ತದೆ. ಹಾಗಾಗಿ ಆರೈಕೆ ಮಾಡುವವರ ಮೇಲೆ ಹೆಚ್ಚುವರಿ ಹೊರೆಯಾಗುತ್ತದೆ. ಈ ಹೊರೆಯನ್ನು ಕಡಿಮೆ ಮಾಡಲು ಈ ತಂತ್ರಜ್ಞಾನವು ನೆರವು ಒದಗಿಸಲಿದೆ.
ತಂತ್ರಜ್ಞಾನದ ಇನ್ನಷ್ಟು ಕುತೂಹಲಕರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.