Site icon Vistara News

Kanyakumari Tour: ತುಂಬಾ ದುಬಾರಿ ಏನಿಲ್ಲ, ನೀವೂ ಮಾಡಬಹುದು ಕನ್ಯಾಕುಮಾರಿ ಪ್ರವಾಸ

Kanyakumari Tour

ನೈಸರ್ಗಿಕ ಸೌಂದರ್ಯಕ್ಕೆ ಹೆಸರುವಾಸಿಯಾಗಿರುವ ಕನ್ಯಾಕುಮಾರಿಗೆ ಪ್ರವಾಸ (Kanyakumari Tour) ಹೊರಡುವ ಯೋಚನೆಯಲ್ಲಿದ್ದರೆ ಇಲ್ಲಿನ ಕೆಲವೊಂದು ಸಂಗತಿಗಳನ್ನು ಮಿಸ್ ಮಾಡಿಕೊಳ್ಳದಿರಿ. ಅತ್ಯದ್ಭುತ ನೈಸರ್ಗಿಕ ಸೌಂದರ್ಯ ಮತ್ತು ಆಧ್ಯಾತ್ಮಿಕ ಮಹತ್ವ ಎರಡಕ್ಕೂ ಹೆಸರುವಾಸಿಯಾಗಿರುವ ಕನ್ಯಾಕುಮಾರಿಗೆ ಜೀವನದಲ್ಲೊಮ್ಮೆಯಾದರೂ ಭೇಟಿ ನೀಡಲೇಬೇಕು.


ಕನ್ಯಾಕುಮಾರಿ ನಗರವು ಐಷಾರಾಮಿ ಹಾಟ್‌ಸ್ಪಾಟ್ ಎಂಬ ಖ್ಯಾತಿಯನ್ನು ಪಡೆದಿದ್ದರೂ ಇಲ್ಲಿ ನಿಮ್ಮ ಬಜೆಟ್ ಮೀರದ ಹಾಗೆ ಪ್ರವಾಸ ಮಾಡಲು ಹಲವು ಆಯ್ಕೆಗಳನ್ನೂ ನೀಡುತ್ತದೆ. ಕೆಲವು ಯೋಜನೆ ಮತ್ತು ಸ್ಥಳೀಯರ ಸಲಹೆ ಪಡೆದರೆ ಬಜೆಟ್ ಮೀರದ ಹಾಗೆ ಪ್ರವಾಸವನ್ನೂ ಪೂರ್ಣಗೊಳಿಸಬಹುದು. ಜೀವನದಲ್ಲಿ ಅತ್ಯಂತ ಸುಂದರ ಅನುಭವವನ್ನು ತಮ್ಮದಾಗಿಸಿಕೊಳ್ಳಬಹುದು.

ಸೂರ್ಯೋದಯ – ಸೂರ್ಯಾಸ್ತ

ಕನ್ಯಾಕುಮಾರಿಗೆ ಭೇಟಿ ನೀಡುವ ಅವಕಾಶ ಸಿಕ್ಕಾಗ ಇಲ್ಲಿನ ಸೂರ್ಯೋದಯ, ಸೂರ್ಯಾಸ್ತವನ್ನು ವೀಕ್ಷಿಸುವ ಅವಕಾಶವನ್ನು ತಪ್ಪಿಸಿಕೊಳ್ಳಬೇಡಿ. ಅರಬ್ಬಿ ಸಮುದ್ರ (Arabian Sea), ಬಂಗಾಳ ಕೊಲ್ಲಿ (Bay of Bengal) ಮತ್ತು ಹಿಂದೂ ಮಹಾಸಾಗರದ (Indian Ocean) ಭೇಟಿಯ ಸ್ಥಳದಲ್ಲಿ ಅತ್ಯಂತ ಸುಂದರವಾದ ಸೂರ್ಯೋದಯ ಮತ್ತು ಸೂರ್ಯಾಸ್ತವನ್ನು ಕಣ್ತುಂಬಿ ಕೊಳ್ಳಬಹದು. ಇದಕ್ಕಾಗಿ ಯಾವುದೇ ಹಣವನ್ನು ಖರ್ಚು ಮಾಡುವ ಅಗತ್ಯವಿಲ್ಲ; ತೀರದ ಪಕ್ಕದಲ್ಲಿ ಕುಳಿತುಕೊಂಡು ಪ್ರಕೃತಿಯ ಸೌಂದರ್ಯವನ್ನು ಕಣ್ತುಂಬಿ ಕೊಳ್ಳಬಹುದು.

ಐಕಾನಿಕ್ ಹೆಗ್ಗುರುತು

ಕನ್ಯಾಕುಮಾರಿಯು ಶ್ರೀಮಂತ ಸಂಸ್ಕೃತಿ ಮತ್ತು ಇತಿಹಾಸವನ್ನು ಪ್ರದರ್ಶಿಸುವ ಅನೇಕ ಪ್ರಸಿದ್ಧ ತಾಣಗಳನ್ನು ಹೊಂದಿದೆ. ಹೆಚ್ಚಿನ ಸ್ಥಳಗಳು ಕಡಿಮೆ ಪ್ರವೇಶ ಶುಲ್ಕವನ್ನು ಹೊಂದಿವೆ ಅಥವಾ ಉಚಿತ ಪ್ರವೇಶವನ್ನು ನೀಡುತ್ತವೆ.
ಹಿಂದೂ ಸಂತ ಸ್ವಾಮಿ ವಿವೇಕಾನಂದರ ಗೌರವಾರ್ಥವಾಗಿ ನಿರ್ಮಿಸಲಾದ ವಿವೇಕಾನಂದ ರಾಕ್ ಮೆಮೋರಿಯಲ್‌ ಗೆ ಹೋಗಲು ದೋಣಿಯಲ್ಲಿ ತೆರಳಬೇಕು. ಈಲ್ಲಿ ಅದ್ಭುತವಾದ ನೋಟಗಳಲ್ಲದೆ, ಧ್ಯಾನ ಮಂದಿರಕ್ಕೂ ಭೇಟಿ ನೀಡಬಹುದು.

ಪ್ರಾಚೀನ ತಮಿಳು ಕವಿ ತಿರುವಳ್ಳುವರ್ ಅವರನ್ನು ಗೌರವಿಸುವ ತಿರುವಳ್ಳುವರ್ ಪ್ರತಿಮೆ ಕನ್ಯಾಕುಮಾರಿ ಕರಾವಳಿಯ ಹೊರವಲಯದಲ್ಲಿದೆ. ಈ ಬೃಹತ್ ರಚನೆಯು ನಿಮ್ಮ ಬಜೆಟ್ ಅನ್ನು ಮೀರಿಸುವುದಿಲ್ಲ. ಅಲ್ಲದೇ ಅತ್ಯಂತ ಸುಂದರ ದೃಶ್ಯಾವಳಿಗಳನ್ನು ಕಣ್ತುಂಬಿಕೊಳ್ಳುವ ಅವಕಾಶ ನೀಡುತ್ತದೆ.


ಪ್ರಕೃತಿಯ ನಡುವೆ ಸುಂದರ ಸಮಯ

ಕನ್ಯಾಕುಮಾರಿಯಲ್ಲಿ ಸುಂದರವಾದ ಪ್ರಕೃತಿಕ ತಾಣಗಳಿಗೆ ಕೊರತೆಯಿಲ್ಲ, ಆದ್ದರಿಂದ ಪ್ರಕೃತಿ ಪ್ರಿಯರು ಇಲ್ಲಿ ಉತ್ತಮ ಸಮಯವನ್ನು ಕಳೆಯಬಹುದು. ಈ ಪ್ರದೇಶವು ಸುಂದರವಾದ ಕಡಲತೀರಗಳಿಂದ ಹಿಡಿದು ಸೊಂಪಾದ ಭೂದೃಶ್ಯಗಳವರೆಗೆ ಎಲ್ಲವನ್ನೂ ನೀಡುತ್ತದೆ.

ಕನ್ಯಾಕುಮಾರಿ ಬೀಚ್ ನಲ್ಲಿ ಸೂರ್ಯನ ಸ್ನಾನ ಅಥವಾ ಸಮುದ್ರದಲ್ಲಿ ಈಜಲು ಕೆಲವು ಗಂಟೆಗಳ ಕಾಲ ಕಳೆಯಬಹುದು. ವಿವೇಕಾನಂದ ರಾಕ್ ಸ್ಮಾರಕ ಮತ್ತು ತಿರುವಳ್ಳುವರ್ ಪ್ರತಿಮೆಯನ್ನು ನೋಡುತ್ತಾ ಧ್ಯಾನ ಮಗ್ನರಾಗಿ ಕುಳಿತುಕೊಳ್ಳಬಹುದು. ಕನ್ಯಾಕುಮಾರಿಯಿಂದ ಸುಮಾರು 13 ಕಿಲೋಮೀಟರ್ ದೂರದಲ್ಲಿರುವ ಸುಚಿಂದ್ರಂ ದೇವಸ್ಥಾನದ ಕೊಳ ಪ್ರಶಾಂತ ವಾತಾವರಣದ ಮಧ್ಯ ಇದೆ. ಪುರಾತನ ದೇವಾಲಯಗಳಿಂದ ಆವೃತವಾಗಿದೆ. ಇದು ಸುಮ್ಮನೆ ನಡಿಗೆ, ಧ್ಯಾನಕ್ಕಾಗಿ ಸೂಕ್ತ ಅವಕಾಶವನ್ನು ಕಲ್ಪಿಸುತ್ತದೆ.

ವೈಭವದ ಸಾಂಸ್ಕೃತಿಕ ಪರಂಪರೆ

ಕನ್ಯಾಕುಮಾರಿ ನಗರವು ಶ್ರೀಮಂತ ಇತಿಹಾಸ ಮತ್ತು ಸಂಸ್ಕೃತಿಯ ಒಳನೋಟವನ್ನು ನೀಡುತ್ತದೆ. ಕನ್ಯಾಕುಮಾರಿ ಅಮ್ಮನ್ ದೇವಸ್ಥಾನಕ್ಕೆ ದೇಶದ ವಿವಿಧ ಭಾಗಗಳಿಂದ ಯಾತ್ರಿಕರನ್ನು ಆಹ್ವಾನಿಸುತ್ತದೆ. ದೇವಾಲಯದ ಎತ್ತರದ ಗೋಪುರ, ಸಂಕೀರ್ಣವಾದ ಕೆತ್ತಿದ ಕಂಬಗಳು ಈ ಪ್ರದೇಶದಲ್ಲಿ ಅನುಸರಿಸುವ ಸಂಪ್ರದಾಯಗಳು, ಆಚರಣೆಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತದೆ.


ಇದನ್ನೂ ಓದಿ: Porbandar Tour: ಪೋರ್ ಬಂದರಿನಲ್ಲಿ ನೋಡಲೇಬೇಕಾದ ಅದ್ಭುತ ಸ್ಥಳಗಳಿವು

ಸ್ಥಳೀಯ ಖಾದ್ಯ ರುಚಿ

ಬಜೆಟ್ ಸ್ನೇಹಿ ಕರಕುಶಲ ವಸ್ತುಗಳು, ಸಾಂಪ್ರದಾಯಿಕ ಕಲಾಕೃತಿಗಳನ್ನು ಇಲ್ಲಿ ಖರೀದಿ ಮಾಡಬಹುದು, ಜೊತೆಗೆ ಸ್ಥಳೀಯ ತಿನಿಸುಗಳು, ಸಮುದ್ರಾಹಾರ ತಿಂಡಿಗಳು, ಬಾಳೆಹಣ್ಣು ಚಿಪ್ಸ್, ತೆಂಗಿನಕಾಯಿ ಸಿಹಿತಿಂಡಿಗಳು ಕೈಗೆಟಕುವ ದರದಲ್ಲಿ ಲಭ್ಯವಾಗುತ್ತದೆ.

Exit mobile version