Site icon Vistara News

Russia Tourism: ವೀಸಾ ಇಲ್ಲದೆ ಭಾರತೀಯರಿನ್ನು ರಷ್ಯಾಕ್ಕೆ ಭೇಟಿ ನೀಡಬಹುದು!

Russia Tourism

ವಿಶ್ವವನ್ನು ಸುತ್ತಬೇಕು (world tour) ಎನ್ನುವ ಆಸೆ ಉಳ್ಳ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು (indians) ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ (Russia Tourism) ಮಾಡಬಹುದು. ಪ್ರವಾಸೋದ್ಯಮ ಕ್ಷೇತ್ರವನ್ನು ಹೆಚ್ಚಿಸಲು ಎರಡೂ ದೇಶಗಳು ಪ್ರಯಾಣದ ಪರಿಸ್ಥಿತಿಗಳನ್ನು ಸರಾಗಗೊಳಿಸಲು ಯೋಜನೆ ರೂಪಿಸುತ್ತಿವೆ.

ರಷ್ಯಾ ಮತ್ತು ಭಾರತ ದ್ವಿಪಕ್ಷೀಯ ಒಪ್ಪಂದದ ಅಡಿಯಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಮಾನದಂಡಗಳನ್ನು ಅಂತಿಮಗೊಳಿಸಲು ಸಮಾಲೋಚನೆಗಳನ್ನು ಜೂನ್‌ ನಿಂದ ಪ್ರಾರಂಭಿಸಲಿದೆ. ವೀಸಾ ಮುಕ್ತ ಗುಂಪು ಪ್ರವಾಸಿ ವಿನಿಮಯವನ್ನು ಪ್ರಾರಂಭಿಸಿದ ಅನಂತರ ಭಾರತೀಯರು ರಷ್ಯಾಕ್ಕೆ ಸುಲಭವಾಗಿ ಪ್ರಯಾಣಿಸಬಹುದು.

ರಷ್ಯಾದ ಆರ್ಥಿಕ ಅಭಿವೃದ್ಧಿ ಸಚಿವಾಲಯದ ಬಹುಪಕ್ಷೀಯ ಆರ್ಥಿಕ ಸಹಕಾರ ಮತ್ತು ವಿಶೇಷ ಯೋಜನೆಗಳ ವಿಭಾಗದ ನಿರ್ದೇಶಕಿ ನಿಕಿತಾ ಕೊಂಡ್ರಾಟ್ಯೆವ್, ಭಾರತವು ಆಂತರಿಕ ರಾಜ್ಯ ಸಮನ್ವಯದ ಅಂತಿಮ ಹಂತದಲ್ಲಿದೆ ಎಂದು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ. ರಷ್ಯಾಕ್ಕೆ ವೀಸಾ ಮುಕ್ತ ಪ್ರಯಾಣದ ಬಗ್ಗೆ ತಿಳಿದುಕೊಳ್ಳಬೇಕಾದ ಕೆಲವು ವಿಚಾರಗಳಿವೆ.

ರಷ್ಯಾಕ್ಕೆ ವೀಸಾ ಮುಕ್ತ ಪ್ರಯಾಣ

ರಷ್ಯಾ ಮತ್ತು ಭಾರತದ ನಡುವಿನ ಮಾತುಕತೆಗಳು ಇನ್ನೂ ನಡೆಯುತ್ತಿವೆ ಮತ್ತು ಜೂನ್‌ನಲ್ಲಿ ಪ್ರಯಾಣವನ್ನು ಸರಾಗಗೊಳಿಸುವ ದ್ವಿಪಕ್ಷೀಯ ಒಪ್ಪಂದದ ಕುರಿತು ಉಭಯ ರಾಷ್ಟ್ರಗಳು ಸಮಾಲೋಚನೆಗಳನ್ನು ಪ್ರಾರಂಭಿಸುತ್ತವೆ. ಅಂತಿಮಗೊಳಿಸುವಿಕೆಯ ಅನಂತರ ರಷ್ಯಾ ಮತ್ತು ಭಾರತವು ಒಟ್ಟಾಗಿ ವೀಸಾ- ಮುಕ್ತ ಗುಂಪು ಪ್ರವಾಸಿ ವಿನಿಮಯವನ್ನು ಪ್ರಾರಂಭಿಸುತ್ತದೆ ಎಂದು ರಷ್ಯಾದ ಸಚಿವರನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.


ಯಾವಾಗ ಸಾಧ್ಯವಾಗುತ್ತದೆ?

ಕಜಾನ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಆರ್ಥಿಕ ವೇದಿಕೆ “ರಷ್ಯಾ- ಇಸ್ಲಾಮಿಕ್ ವರ್ಲ್ಡ್: ಕಜಾನ್‌ಫೋರಮ್ 2024” ಭಾಗದಲ್ಲಿ ಸಚಿವರು ಈ ವರ್ಷದ ಅಂತ್ಯದ ವೇಳೆಗೆ ಒಪ್ಪಂದ ಅಂತಿಮಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದರು.

ಇದನ್ನೂ ಓದಿ: Tatkal Tickets: ಕೊನೆ ಘಳಿಗೆಯಲ್ಲಿ ರೈಲು ಪ್ರಯಾಣಕ್ಕೆ ತತ್ಕಾಲ್‌ ಟಿಕೆಟ್‌ ಪಡೆಯುವುದು ಹೇಗೆ?

“ವೀಸಾ-ಮುಕ್ತ ಗುಂಪು ಪ್ರವಾಸಿ ವಿನಿಮಯ ಕೇಂದ್ರಗಳನ್ನು ಪ್ರಾರಂಭಿಸಲು ಸಜ್ಜಾಗುತ್ತಿರುವಂತೆ ರಷ್ಯಾ ಮತ್ತು ಭಾರತವು ತಮ್ಮ ಪ್ರವಾಸೋದ್ಯಮ ಸಂಬಂಧಗಳನ್ನು ಬಲಪಡಿಸಲು ಸಜ್ಜಾಗಿದೆ. ಎರಡು ರಾಷ್ಟ್ರಗಳ ನಡುವಿನ ಮೊದಲ ಸುತ್ತಿನ ಸಮಾಲೋಚನೆಯನ್ನು ಜೂನ್‌ನಲ್ಲಿ ನಿಗದಿಪಡಿಸಲಾಗಿದೆ. ಇದು ದ್ವಿಪಕ್ಷೀಯ ಒಪ್ಪಂದವನ್ನು ಅಂತಿಮಗೊಳಿಸುವ ಗುರಿಯನ್ನು ಹೊಂದಿದೆ.


ಪ್ರಸ್ತುತ ಯಾರಿಗಿದೆ ಅವಕಾಶ?

ರಷ್ಯಾ ಈಗ ಚೀನಾ ಮತ್ತು ಇರಾನ್‌ನ ಜನರಿಗೆ ತನ್ನ ವೀಸಾ ಮುಕ್ತ ಪ್ರವಾಸಿ ವಿನಿಮಯ ಕಾರ್ಯಕ್ರಮದ ಮೂಲಕ ವೀಸಾ ಮುಕ್ತವಾಗಿ ಪ್ರವೇಶಿಸಲು ಅವಕಾಶ ನೀಡುತ್ತದೆ. ಸಚಿವರ ಪ್ರಕಾರ, ಕಾರ್ಯಕ್ರಮದ ಯಶಸ್ಸನ್ನು ಭಾರತದೊಂದಿಗೆ ಪುನರಾವರ್ತಿಸುವ ಗುರಿಯನ್ನು ದೇಶ ಹೊಂದಿದೆ. ರಷ್ಯಾ ಮತ್ತು ಚೀನಾ ನಡುವೆ ಮತ್ತು ರಷ್ಯಾ ಮತ್ತು ಇರಾನ್ ನಡುವೆ ವೀಸಾ-ಮುಕ್ತ ಗುಂಪು ಪ್ರವಾಸಿ ವಿನಿಮಯವು 2023ರ ಆಗಸ್ಟ್ 1ರಂದು ಪ್ರಾರಂಭವಾಯಿತು.

Exit mobile version