ಭವಿಷ್ಯ/ಧಾರ್ಮಿಕ
Simha Rashi | ಕೆಲಸದಲ್ಲಿ ಬೆಳವಣಿಗೆ ಹೇಗಿದೆ? ರಾಜಕಾರಣಿಗಳೇ ಎಚ್ಚರ!
ಕರ್ನಾಟಕ
Food Poisoning : ಗಣೇಶ ವಿಸರ್ಜನೆಯಲ್ಲಿ ಪ್ರಸಾದ ಸೇವಿಸಿದ 28ಕ್ಕೂ ಹೆಚ್ಚು ಮಂದಿ ಅಸ್ವಸ್ಥ
Tumkur News : ತುಮಕೂರಲ್ಲಿ ಗಣೇಶ ವಿಸರ್ಜನೆ (Ganesh Chaturthi) ವೇಳೆ ಪ್ರಸಾದ ಸೇವಿಸಿದ 20ಕ್ಕೂ ಹೆಚ್ಚು ಜನರು (Food Poisoning) ಅಸ್ವಸ್ಥಗೊಂಡಿದ್ದಾರೆ. ಹಲವರು ಗಂಭೀರವಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ.
ತುಮಕೂರು: ಇಲ್ಲಿನ ಶೆಟ್ಟಪ್ಪನಹಳ್ಳಿಯಲ್ಲಿ ಆಹಾರ ಸೇವಿಸಿದ 28ಕ್ಕೂ ಹೆಚ್ಚು ಮಂದಿ (Food Poisoning) ಅಸ್ವಸ್ಥಗೊಂಡಿದ್ದಾರೆ. ಭಾನುವಾರ (ಸೆ.24) ಗಣೇಶ ವಿಸರ್ಜನೆ ಸಮಯದಲ್ಲಿ ಪ್ರಸಾದ ಸೇವಿಸಿದ್ದರೂ ಜತೆಗೆ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿರುವ ಶಂಕೆ ವ್ಯಕ್ತವಾಗಿದೆ.
6 ಮಂದಿ ಆರೋಗ್ಯವು ಗಂಭೀರವಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಜಯಲಕ್ಷ್ಮಿ (35), ಬೋರಮ್ಮ (68), ಬೈರಪ್ಪ(80), ಗಂಗಮ್ಮ (70), ನಂಜಮ್ಮ(85) ಎಂಬುವವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು 20ಕ್ಕೂ ಹೆಚ್ಚು ಜನರಿಗೆ ಗೂಳೂರು ಪ್ರಾಥಮಿಕ ವೈದ್ಯರಿಂದ ಗ್ರಾಮದಲ್ಲೇ ಚಿಕಿತ್ಸೆ ಮುಂದುವರಿದಿದೆ.
ತುಮಕೂರು ತಾಲೂಕಿನ ಶೆಟ್ಟಪ್ಪನಹಳ್ಳಿ ಗ್ರಾಮದಲ್ಲಿ ಸುಮಾರು 54 ಮನೆಗಳಿದ್ದು, ಕಳೆದ ಭಾನುವಾರ ಗ್ರಾಮದ ಓರ್ವರಿಗೆ ವಾಂತಿ ಭೇದಿ ಕಾಣಿಸಿಕೊಂಡಿತ್ತು. ನಿನ್ನೆ ಬೆಳಗ್ಗೆ (ಸೆ.25) 10 ಗಂಟೆ ಸುಮಾರಿಗೆ 6 ಜನರ ಆರೋಗ್ಯದಲ್ಲಿ ಏರುಪೇರಾಗಿದೆ. ಅಸ್ವಸ್ಥರು ಗೂಳೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಈ ವೇಳೆ ಎಚ್ಚತ್ತ ಆರೋಗ್ಯ ಅಧಿಕಾರಿಗಳು ವೈದ್ಯರ ತಂಡ ಸಮೇತ ಶೆಟ್ಟಪ್ಪನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡಿದ್ದಾರೆ. ಇದುವರೆಗೆ ಸುಮಾರು 28ಮಂದಿ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ಗ್ರಾಮದಲ್ಲೇ ಆರೋಗ್ಯ ಇಲಾಖೆ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ. ಅಸ್ವಸ್ಥಗೊಂಡಿರುವವರ ಮನೆಗೆ ತೆರಳಿ ಚಿಕಿತ್ಸೆ ನೀಡುತ್ತಿದ್ದಾರೆ. ಅಸ್ವಸ್ಥಗೊಂಡಿದ್ದ 28 ಜನರಲ್ಲಿ 24 ಜನರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ.
ಸದ್ಯ ಆರೋಗ್ಯ ಇಲಾಖೆ ಅಧಿಕಾರಿಗಳು ಪ್ರಕರಣ ಸಂಬಂಧ ಮಾಹಿತಿ ಕಲೆಹಾಕುತ್ತಿದ್ದಾರೆ. ಅಣಬೆ ಸೇವಿಸಿದ್ದ ಬಗ್ಗೆಯೂ ಶಂಕೆ ಇದೆ. ಮೇಲ್ನೋಟಕ್ಕೆ ಕುಡಿಯುವ ನೀರು ಕಲುಷಿತಗೊಂಡಿರಬಹುದು, ಆಹಾರದಲ್ಲಿ ವ್ಯತ್ಯಾಸಗೊಂಡಿರಬಹುದೆಂದು ಅಂದಾಜಿಸಲಾಗಿದೆ. ಕುಡಿಯುವ ನೀರನ್ನು ಲ್ಯಾಬ್‌ಗೆ ಕಳುಹಿಸಲಾಗಿದೆ. ಬಳಿಕ ಪ್ರಕರಣದ ಸತ್ಯಸಂಗತಿ ಹೊರಬರಲಿದೆ. ಗ್ರಾಮಸ್ಥರಲ್ಲಿ ಸಾಂಕ್ರಾಮಿಕ ರೋಗದ ಆತಂಕವು ಹೆಚ್ಚಾಗಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಪ್ರಮುಖ ಸುದ್ದಿ
Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ
Dina Bhavishya : ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷದ ದ್ವಾದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಚಂದ್ರನು ಮಂಗಳವಾರ ಕುಂಭ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಕಟಕ, ಸಿಂಹ, ವೃಶ್ಚಿಕ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ಹಾಗೂ ತುಲಾ, ವೃಶ್ಚಿಕ ರಾಶಿಯವರು ಹೂಡಿಕೆ ವ್ಯವಹಾರವನ್ನು ಮಾಡಬೇಡಿ. ಮೇಷ, ತುಲಾ, ಮೀನ ರಾಶಿಯವರು ಮಾತಿನಲ್ಲಿ ಹಿಡಿತವಿರಲಿ. ವೃಷಭ ರಾಶಿಯವರು ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ತೊಡಗಿದ್ದರೆ ಲಾಭ ಪಡೆಯುವಿರಿ. ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.
ಇಂದಿನ ಪಂಚಾಂಗ (kannada panchanga) (26-09-2023)
ಮೇಷ: ಆಪ್ತರ ವರ್ತನೆಯು ನಿಮ್ಮ ಮನಸ್ಸಿಗೆ ನೋವು ತರಬಹುದು, ತಾಳ್ಮೆಯಿಂದ ಇರಿ. ದಿನದ ಮಟ್ಟಿಗೆ ಹಣಕಾಸಿನ ಹೂಡಿಕೆ ವ್ಯವಹಾರ ಮಾಡುವುದು ಬೇಡ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ತಲೆದೋರಬಹುದು, ಮಾತಿನಲ್ಲಿ ಹಿಡಿತವಿರಲಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4
ವೃಷಭ: ಆಹಾರ ಕ್ರಮದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ಇದರಿಂದ ಆರೋಗ್ಯದ ಕಡೆಗೆ ಗಮನ ಹರಿಸಿ. ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಪ್ರಗತಿಯೊಂದಿಗೆ ಲಾಭ ಪಡೆಯುವಿರಿ. ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ನಿಮ್ಮ ಶ್ರಮಕ್ಕೆ ಪ್ರತಿಫಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4
ಮಿಥುನ: ಯಾರಾದರೂ ನಿಮ್ಮ ಸಹಾಯ ಬೇಡಿ ಬರಬಹುದು, ಯೋಚಿಸಿ ಸಹಾಯ ಮಾಡಿ. ಆರ್ಥಿಕ ಪ್ರಗತಿ ದಿನದ ಮಟ್ಟಿಗೆ ಸಾಧಾರಣವಾಗಿರಲಿದೆ. ಯಾರಾದರೂ ನಿಮ್ಮ ಭಾವನೆಗಳನ್ನು ನಿರಾಸೆ ಮಾಡುವ ಸಾಧ್ಯತೆ ಇದೆ. ಅವರ ಮಾತನ್ನು ಲಕ್ಷಿಸದೆ ಕಾರ್ಯದಲ್ಲಿ ಮುನ್ನುಗ್ಗಿ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಹೊಸ ಭರವಸೆಯ ಆಶಾಭಾವನೆ ಮೂಡಲಿದೆ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2
ಕಟಕ: ನಿಮ್ಮ ಆಸೆ-ಆಕಾಂಕ್ಷೆಗಳು ಯಶಸ್ಸನ್ನು ತಂದುಕೊಡಲಿವೆ. ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಸಾಧ್ಯತೆ ಇದೆ. ಅಪರಿಚತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರಿಕೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5
ಸಿಂಹ: ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು. ವ್ಯಾಪಾರ ವ್ಯವಹಾರಗಳಲ್ಲಿ ಆರ್ಥಿಕವಾಗಿ ಲಾಭ ಕಡಿಮೆ ಇರಲಿದೆ. ಹೊಸ ಆಲೋಚನೆಗಳು ನಿಮ್ಮನ್ನು ಸೃಜನಾತ್ಮಕವಾಗಿ ಏನಾದರೂ ಮಾಡಲು ಪ್ರಯತ್ನಿಸುವಂತೆ ಮಾಡುವಂತೆ ಪ್ರೇರೇಪಿಸುತ್ತದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ಕನ್ಯಾ: ಕುಟುಂಬದ ಆಪ್ತರೊಂದಿಗೆ ಸಂತಸ ಹಂಚಿಕೊಳ್ಳವಿರಿ. ಹಣಕಾಸು ಪರಿಸ್ಥಿತಿ ಸಾಧಾರಣವಾಗಿರಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ದುಬಾರಿ ವಸ್ತುಗಳನ್ನು ಖರೀದಿಸುವ ಮುನ್ನ ನಿಮ್ಮ ಹಣಕಾಸಿನ ಪರಿಸ್ಥಿತಿ ನೋಡಿಕೊಂಡು ಹಾಸಿಗೆ ಇದ್ದಷ್ಟು ಕಾಲು ಚಾಚಿ. ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಪ್ರಭಾವಿ ಜನರ ಬೆಂಬಲ ಸಿಗಲಿದೆ. ಇದರಿಂದ ನೈತಿಕ ಸ್ಥೈರ್ಯ ಹೆಚ್ಚಾಗಲಿದೆ. ಒಡಹುಟ್ಟಿದವರ ಸಹಕಾರ ಸಿಗಲಿದೆ. ಆತುರದಲ್ಲಿ ಯಾರೊಂದಿಗೂ ಅತಿರೇಕದ ಮಾತುಗಳನ್ನು ಆಡಿ, ಅಪಾಯ ತಂದುಕೊಳ್ಳುವುದು ಬೇಡ. ದಿನದ ಮಟ್ಟಿಗೆ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4
ವೃಶ್ಚಿಕ: ಸಕಾರಾತ್ಮಕ ಆಲೋಚನೆಗಳು ಪುಷ್ಟಿ ನೀಡಿ, ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಇಂದು ಹಣಕಾಸಿನ ಹೂಡಿಕೆ ವ್ಯವಹಾರ ಮಾಡುವುದು ಬೇಡ. ವ್ಯಾಪಾರದಲ್ಲಿ ಯಶಸ್ಸು ಸಿಗಲಿದೆ. ಪ್ರಯಾಣದಿಂದ ಲಾಭ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6
ಧನಸ್ಸು: ಭಾವನಾ ಜೀವಿಗಳಾದ ನೀವು ನಕಾರಾತ್ಮಕ ಆಲೋಚನೆಗಳಿಂದ ದೂರ ಇರಿ. ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ, ಕ್ಷೇತ್ರ ದರ್ಶನ ಪಡೆದು ಮಾನಸಿಕ ನೆಮ್ಮದಿ ತಂದುಕೊಳ್ಳುವುದು ಅವಶ್ಯಕವಿದೆ. ಮಕ್ಕಳ ಆರೋಗ್ಯದ ಕಡೆಗೆ ಗಮನ ಹರಿಸಿ. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಸಾಧಾರಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ಜ್ಯೋತಿಷ್ಯಕ್ಕೆ ಶ್ರದ್ಧೆ, ಭಕ್ತಿ ಎಷ್ಟು ಮುಖ್ಯ
ಮಕರ: ಭರವಸೆಯ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಸ್ನೇಹಿತರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ನಿಮ್ಮ ಶಕ್ತಿ ಸಾಮರ್ಥ್ಯವನ್ನು ಕೆಲಸ ಕಾರ್ಯಗಳಲ್ಲಿ ಬಳಸಿಕೊಂಡರೆ ಇನ್ನೂ ಹೆಚ್ಚು ಆಕರ್ಷಕ ವ್ಯಕ್ತಿತ್ವ ವಿಕಸನ ಆಗುತ್ತದೆ. ಆರೋಗ್ಯ ಉತ್ತಮವಾಗಿರಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ಕುಂಭ: ಅತಿಥಿಗಳ ಆಗಮನ ಸಂತಸ ತರುವುದು. ಆತ್ಮವಿಶ್ವಾಸದ ಹೊಸ ಭರವಸೆ ಮೂಡಲಿದೆ. ಹೂಡಿಕೆಯ ಲಾಭ ಇಂದು ಉಪಯೋಗಕ್ಕೆ ಬರುವುದು. ದೀರ್ಘಕಾಲದ ಪ್ರಯತ್ನ ಇಂದು ಯಶಸ್ಸು ತಂದು ಕೊಡಲಿದೆ.ಆರೋಗ್ಯ, ಉದ್ಯೋಗದಲ್ಲಿ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ಇದನ್ನೂ ಓದಿ : ತಾತಯ್ಯ ತತ್ವಾಮೃತಂ: ದೇಹದಲ್ಲಿ ಜೀವ ಇರುವಾಗ ಏನು ಮಾಡಬೇಕು?
ಮೀನ: ಅತಿರೇಕದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಕೋಪಗೊಳ್ಳುವಂತೆ ಉದ್ರೇಕವಾಗುವ ವಿಷಯಗಳಿಂದ ದೂರ ಇರಿ. ತಾಳ್ಮೆಯಿಂದ ವರ್ತಿಸಿ. ಉದ್ಯೋಗಿಗಳಿಗೆ ಬಡ್ತಿ ಸಿಗುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | [email protected]
ಭವಿಷ್ಯ/ಧಾರ್ಮಿಕ
Camphor Benefits: ಮನೆಯ ಯಾವೆಲ್ಲ ಭಾಗಗಳಲ್ಲಿ ಕರ್ಪೂರವನ್ನಿಡುವುದು ಶುಭದಾಯಕ ಗೊತ್ತೇ?
ಮನೆಯ ಯಾವೆಲ್ಲ ಭಾಗಗಳಲ್ಲಿ ಕರ್ಪೂರವನ್ನು ಇಡುವ ಮೂಲಕ ಸಕಾರಾತ್ಮಕ ಪರಿಣಾಮಗಳನ್ನು ಪಡೆಯಬಹುದು (Camphor vastu Benefits) ಎಂಬ ನಂಬಿಕೆಯಿದೆ ಎಂಬುದನ್ನು ನೋಡೋಣ.
ಕರ್ಪೂರದ (Camphor) ಬಳಕೆ ಭಾರತೀಯರಲ್ಲಿ ಸಾಮಾನ್ಯ. ಕರ್ಪೂರದ ಪರಿಮಳ ಆಘ್ರಾಣಿಸಿದರೆ ಸಾಕು ನಮ್ಮಲ್ಲಿ ದೈವಿಕ ಭಾವ, ಭಕ್ತಿ ಒಳಗಿನಿಂದ ಜಾಗೃತವಾಗುತ್ತದೆ. ದೇವರಿಗೆ ಆರತಿ ಮಾಡುವಾಗ ಕರ್ಪೂರದಲ್ಲಿ ಮಾಡುತ್ತೇವೆ. ಇಂತಹ ಕರ್ಪೂರ ನಕಾರಾತ್ಮಕ ಶಕ್ತಿಯನ್ನು (Negative energy) ದೂರ ಇರಿಸಿ ಸಕಾರಾತ್ಮಕತೆಯನ್ನು (Positive energy) ಪಸರಿಸುತ್ತದೆ ಎಂಬ ನಂಬಿಕೆಯೂ ಇದೆ. ಅಷ್ಟೇ ಅಲ್ಲ, ಕರ್ಪೂರವೆಂದರೆ ಶುಭದಾಯಕ (Camphor Benefits) ಎಂಬ ಅಗಾಧ ನಂಬಿಕೆಯೂ ಹಿಂದಿನಿಂದಲೇ ಬೆಳೆದು ಬಂದಿದೆ. ಹೀಗಾಗಿಯೇ ಹಲವರು, ದೇವರ ಕೋಣೆಯಲ್ಲಿ ಅಷ್ಟೇ ಅಲ್ಲ, ಮನೆಯ ಹಲವು ಜಾಗಗಳಲ್ಲಿ ಕರ್ಪೂರವನ್ನು ಇಡುವ ರೂಢಿ (vastu tips) ಮಾಡಿಕೊಂಡಿರುತ್ತಾರೆ. ಹಾಗಾದರೆ ಬನ್ನಿ, ಮನೆಯ ಯಾವೆಲ್ಲ ಭಾಗಗಳಲ್ಲಿ ಕರ್ಪೂರವನ್ನು ಇಡುವ ಮೂಲಕ ಸಕಾರಾತ್ಮಕ ಪರಿಣಾಮಗಳನ್ನು ಪಡೆಯಬಹುದು (Camphor vastu Benefits) ಎಂಬ ನಂಬಿಕೆಯಿದೆ ಎಂಬುದನ್ನು ನೋಡೋಣ.
1. ಕರ್ಪೂರವನ್ನಿಡಲು ಪ್ರಶಸ್ತವಾದ ಸ್ಥಳ ಎಂದರೆ ಅದು ಪೂಜೆ ಮಾಡುವ ಕೋಣೆ. ನಿಮ್ಮ ಮನೆಯಲ್ಲೊಂದು ಪೂಜೆ, ಧ್ಯಾನದ ಕೋಣೆ ಇದ್ದರೆ, ಅಲ್ಲಿ ಪುಡಿ ಮಾಡಿದ ಕರ್ಪೂರವನ್ನು ಇಟ್ಟುಕೊಳ್ಳುವುದು ಶುಭದಾಯಕ ಎಂದು ನಂಬಲಾಗುತ್ತದೆ. ನೀವು ಪೂಜೆಯ ಸಂದರ್ಭ ಇದನ್ನು ಹೊತ್ತಿಸಿಕೊಳ್ಳಬಹುದು, ಅಥವಾ ಶುಭ ಸಂದರ್ಭಗಳಲ್ಲಿಯೂ ಕರ್ಪೂರದ ದೀಪ ಹಚ್ಚಬಹುದು.
2. ಕೆಲವು ಮಂದಿ ಪುಡಿ ಮಾಡಿದ ಕರ್ಪೂರವನ್ನು ತಮ್ಮ ಕಾರಿನಲ್ಲಿ ಅಥವಾ ತಾವು ಓಡಾಡುವ ವಾಹನದಲ್ಲಿ ಇಟ್ಟುಕೊಳ್ಳಲು ಬಯಸುತ್ತಾರೆ. ಇದರರ್ಥ ಪ್ರಯಾಣ ಶುಭವಾಗಲಿ ಹಾಗೂ ಎಲ್ಲನಕಾರಾತ್ಮಕ ಶಕ್ತಿಯನ್ನು ಕರ್ಪೂರವು ಹೀರಿಕೊಳ್ಳಲಿ ಎಂದು.
3. ಕೆಲವರು ತಮ್ಮ ಸ್ನಾನದ ಮನೆ ಅಥವಾ ಬಾತ್‌ರೂಂನಲ್ಲಿ ಇಟ್ಟುಕೊಳ್ಳಲು ಬಯಸುತ್ತಾರೆ. ಸದಾ ತಾಜಾ ಗಾಳಿ ಸೂಸುತ್ತಿರಲು ಹಾಗೂ ಎಲ್ಲ ಕೆಟ್ಟ ವಾಸನೆಯನ್ನು ಕರ್ಪೂರವು ಹೀರಿಕೊಂಡು ಆ ಕೋಣೆಯನ್ನು ಉತ್ತಮ ಪರಿಮಳದಾಯಕವನ್ನಾಗಿ ಪರಿವರ್ತಿಸಲು ಕರ್ಪೂರದ ಮೊರೆ ಹೋಗುತ್ತಾರೆ.
4. ಅಡುಗೆ ಮನೆ ಎಂದರೆ ಮನೆಯೊಂದರ ಹೃದಯ ಭಾಗವಿದ್ದಂತೆ. ನಮಗೆ ನಿತ್ಯವೂ ಬೇಕಾಗುವ ಆಹಾರ ತಯಾರಾಗುವುದೇ ಅಡುಗೆ ಮನೆಯಲ್ಲಿ. ಹಾಗಾಗಿ ಎಲ್ಲ ಕೋಣೆಗಳಿಗಿಂತ ಹೆಚ್ಚು ಮಹತ್ವ ನಾವು ಅಡುಗೆ ಕೋಣೆಗೆ ನೀಡುತ್ತೇವೆ. ಕೆಲವು ಮಂದಿ ಹೀಗಾಗಿ ಕರ್ಪೂರವನ್ನು ಅಡುಗೆ ಕೋಣೆಯಲ್ಲಿಡಲು ಬಯಸುತ್ತಾರೆ. ಯಾಕೆಂದರೆ, ತಾವು ಮಾಡುವ ಅಡುಗೆಯ ಮೂಲಕ ಸಕಾರಾತ್ಮಕ ಪರಿಣಾಮಗಳು ಆಗಲಿ ಎಂಬ ಉದ್ದೇಶ ಇಲ್ಲಿ ಅಡಗಿದೆ. ಆದರೆ ಸೇಫ್ ಆಗಿ ಬೆಂಕಿ ಇರುವೆಡೆಯಿಂದ ದೂರದಲ್ಲಿಡಲು ಮರೆಯಬೇಡಿ.
5. ಕೆಲವು ಮಂದಿ ತಮ್ಮ ಹಣದ ಪೆಟ್ಟಿಗೆಯಲ್ಲಿ, ಲಾಕರ್‌ನಲ್ಲಿ ಕರ್ಪೂರವನ್ನು ಇಡುತ್ತಾರೆ. ಕಾರಣ ಇಷ್ಟೇ, ಕರ್ಪೂರ ಶುಭದಾಯಕವಾದ್ದರಿಂದ ಮನೆಯಲ್ಲಿ ಸಂಪತ್ತು ಹೆಚ್ಚಲಿ ಎಂದು.
6. ಹಾಗೆಯೇ ಕರ್ಪೂರವನ್ನು ನಿಮ್ಮ ಬೆಡ್‌ರೂಂನಲ್ಲಿಯೂ ಇಡಬಹುದು. ಮಲಗುವ ಕೋಣೆಯಲ್ಲಿ ಸುಖ, ಶಾಂತಿ, ನೆಮ್ಮದಿ, ಸಮೃದ್ಧಿಗಳು ನೆಲೆಸಲಿ ಎಂಬುದಷ್ಟೇ ಇದರ ಉದ್ದೇಶ. ಮಲಗುವ ತಲೆದಿಂಬಿನ ಅಡಿಯಲ್ಲಿ ಅಥವಾ ನಿಮ್ಮ ವಾರ್ಡ್‌ರೋಬಿನಲ್ಲಿ ಒಂದು ಪುಟಾಣಿ ಚೀಲದಲ್ಲಿ ಅಥವಾ ಬಟ್ಟೆತುಂಡಿನಲ್ಲಿ ಕಟ್ಟಿ ಇಟ್ಟುಕೊಳ್ಳಬಹುದು.
ಇದನ್ನೂ ಓದಿ: Vastu Tips For Success: ಜೀವನದಲ್ಲಿ ಯಶಸ್ಸು ಸಿಗಬೇಕೆ? ಈ ವಾಸ್ತು ನಿಯಮ ಪಾಲಿಸಿ
7. ನಿಮ್ಮ ಮನೆಯಲ್ಲಿ ಓದಿಗಾಗಿ ಅಂತಲೇ ಒಂದು ಕೋಣೆ ಇದ್ದರೆ ಅಲ್ಲಿಯೂ ಇಡಬಹುದು. ಒಳ್ಳೆಯ ವಿದ್ಯೆ ತಲೆಗೆ ಹತ್ತಲು, ಏಕಾಗ್ರತೆಗೆ ಹಾಗೂ ಶ್ರದ್ಧೆಗಾಗಿ ಕರ್ಪೂರವನ್ನು ಓದಿನ ಕೋಣೆಯಲ್ಲೂ ಇಡಬಹುದು.
8. ಮಕ್ಕಳ ಕೋಣೆಯಲ್ಲಿಯೂ ಇಡುವುದು ಒಳ್ಳೆಯದನ್ನೇ ತರುತ್ತದೆ. ಮಕ್ಕಳ ಮೇಲಾಗುವ ನಕಾರಾತ್ಮಕ ಪ್ರಭಾವಗಳನ್ನು ಇದು ದೂರ ಇರಿಸಿ ಮಕ್ಕಳನ್ನು ಆರೋಗ್ಯವಾಗಿರಿಸುತ್ತದೆ ಎಂಬ ನಂಬಿಕೆಯಿದೆ.
9. ಮನೆಯ ದ್ವಾರದಲ್ಲಿಯೂ ಕರ್ಪೂರ ಇಡುವ ಕ್ರಮವಿದೆ. ಮನೆಗೆ ಕೆಟ್ಟ ಶಕ್ತಿಗಳು ಪ್ರವೇಶಿಸದೆ, ಮನೆಯಲ್ಲಿ ಒಳ್ಳೆಯ ಸಕಾರಾತ್ಮಕ ಬೆಳವಣಿಗೆ ಆಗುತ್ತಿರಲಿ ಎಂಬುದು ಇದರ ಆಶಯ.
10. ಬಾಲ್ಕನಿಯಲ್ಲೇ ಪುಟಾಣಿ ಗಾರ್ಡನ್ ಇದ್ದರೆ, ಅಥವಾ ಮನೆಯೊಳಗೆ ಪಾಟ್‌ಗಳಲ್ಲಿ ಗಿಡಗಳನ್ನಿಟ್ಟಿದ್ದರೆ, ಅವುಗಳ ಬೇರಿನ ಸಮೀಪವೂ ಈ ಕರ್ಪೂರವನ್ನಿಡಬಹುದು. ಇದು ಶುಭವಷ್ಟೇ ಅಲ್ಲ, ಗಿಡಗಳಿಗೆ ನೈಸರ್ಗಿಕ ಫಲವತ್ತತೆಯನ್ನೂ ನೀಡುತ್ತದೆ.
ಇದನ್ನೂ ಓದಿ: Vastu Tips For Students: ವಿದ್ಯಾರ್ಥಿಗಳು ಸ್ಟಡಿ ಮಾಡುವಾಗ ಈ ವಾಸ್ತು ಸೂತ್ರ ಪಾಲಿಸಿದರೆ ಸಕ್ಸೆಸ್!
ಪ್ರಮುಖ ಸುದ್ದಿ
Dina Bhavishya : ಈ ರಾಶಿಯವರಿಗೆ ಇಂದು ಹೂಡಿಕೆ ಬೇಡ! ಕೆಲ ವಿಷಯದಲ್ಲಿ ಇರಲಿ ಗೌಪ್ಯತೆ
Dina Bhavishya : ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷದ ದಶಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಚಂದ್ರನು ಭಾನುವಾರ ರಾತ್ರಿ 07:29ಕ್ಕೆ ಕುಂಭ ರಾಶಿಯನ್ನು ಪ್ರವೇಶಿಸಿದ್ದು, ಸೋಮವಾರವೂ ಅಲ್ಲೆ ನೆಲಸಲಿದ್ದಾನೆ . ಇದರಿಂದಾಗಿ ಮೇಷ, ಕಟಕ, ಸಿಂಹ, ವೃಶ್ಚಿಕ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರ ಬಹು ದಿನಗಳ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ಮಿಥುನ ರಾಶಿಯವರು ಯಾವುದೇ ಆತುರದ ಮಾತುಗಳನ್ನು ಆಡುವುದು ಬೇಡ. ಸಿಂಹ ರಾಶಿಯವರು ಮಾನಸಿಕ ಒತ್ತಡದಿಂದ ಹೊರಬರಲು ವ್ಯಸನಗಳ ಮೊರೆ ಹೋಗುವುದು ಬೇಡ. ಬದಲಾಗಿ ಕ್ಷೇತ್ರ ದರ್ಶನ, ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವುದು ಸೂಕ್ತವಾಗಿದೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.
ಇಂದಿನ ಪಂಚಾಂಗ (kannada panchanga) (25-09-2023)
ಮೇಷ: ಮಕ್ಕಳ ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಪ್ರಯಾಣ ಮಾಡುವ ಸಾಧ್ಯತೆ ಇದೆ. ಬಹಳ ದಿನಗಳ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ಉದ್ಯೋಗಿಗಳಿಗೆ ಶುಭ ಫಲ.
ಅದೃಷ್ಟ ಸಂಖ್ಯೆ: 2
ವೃಷಭ: ಹಣದ ಹೂಡಿಕೆ ಕುರಿತು ಆಲೋಚನೆ ಮಾಡುವಿರಿ. ನಿಮ್ಮ ಹಾಸ್ಯದ ಮನೋವೃತ್ತಿ ಇತರರನ್ನು ಆಕರ್ಷಿಸುತ್ತದೆ. ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ಮಿಥುನ: ಆರೋಗ್ಯದ ಕುರಿತಾಗಿ ಕಾಳಜಿ ವಹಿಸಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಸ್ನೇಹಿತರು, ಆಪ್ತ ಸಂಬಂಧಿಕರಿಂದ ಮಾರ್ಗದರ್ಶನ, ಉಡುಗೊರೆ ಸಿಗುವ ಸಾಧ್ಯತೆ ಇದೆ. ನಿಮ್ಮ ಪ್ರೀತಿ ಪಾತ್ರರೊಂದಿಗೆ ಸೌಜನ್ಯದಿಂದ ವರ್ತಿಸಿ. ಯಾವುದೇ ಆತುರದ ಮಾತುಗಳನ್ನು ಆಡುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8
ಕಟಕ: ಒತ್ತಡದ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರಲಿದೆ. ನ್ಯಾಯಾಲಯದಲ್ಲಿರುವ ವ್ಯಾಜ್ಯ ಪ್ರಕರಣಗಳು ನಿಮಗೆ ವಿಜಯವನ್ನು ತಂದು ಕೊಡಲಿದೆ. ಸಂಗಾತಿಯ ಮನಸ್ಸಿನ ಭಾವನೆಗಳನ್ನು ಅರ್ಥ ಮಾಡಿಕೊಳ್ಳವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ಸಿಂಹ: ಮಾನಸಿಕ ಒತ್ತಡದಿಂದ ಹೊರಬರಲು ವ್ಯಸನಗಳ ಮೊರೆ ಹೋಗುವುದು ಬೇಡ. ಬದಲಾಗಿ ಕ್ಷೇತ್ರ ದರ್ಶನ, ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವುದು ಸೂಕ್ತವಾಗಿದೆ. ಆರೋಗ್ಯ ಮಧ್ಯಮವಾಗಿರಲಿದೆ. ವ್ಯಾಪಾರ ವ್ಯವಹಾರ ಹಾಗೂ ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಬಿಡುವಿಲ್ಲದ ಕಾರ್ಯ ಚಟುವಟಿಕೆಯ ಮಧ್ಯೆಯೂ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ಕನ್ಯಾ: ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ ಮಾಡುವಿರಿ. ಭೂ ಸಂಬಂಧಿ, ಹಣಕಾಸು ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದ್ದು ಲಾಭವಾಗಲಿದೆ. ಉದ್ಯೋಗಿಗಳಿಗೆ ಶುಭ ಫಲ. ಆರೋಗ್ಯ ಪರಿಪೂರ್ಣವಾಗಿರಲಿದೆ. ಪ್ರಯಾಣ ಮಾಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಹಿರಿಯರ ಮಾರ್ಗದರ್ಶನ ಸಿಗಲಿದೆ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದಲ್ಲಿ ಅನೇಕ ಬದಲಾವಣೆಗಳನ್ನು ಕಾಣುವ ಸಾಧ್ಯತೆ ಇದೆ. ಕುಟುಂಬದ ಆಪ್ತರೊಂದಿಗೆ ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ನಿಮಗೆ ಸಂಬಂಧವಿಲ್ಲದಕ್ಕೆ ಅನಗತ್ಯವಾಗಿ ಚರ್ಚೆ ಮಾಡಿ, ಕುಟುಂಬದ ಸ್ವಾಸ್ಥ್ಯ ಕೆಡಿಸಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2
ವೃಶ್ಚಿಕ: ನಕಾರಾತ್ಮಕ ಆಲೋಚನೆಗಳು ನಿಮ್ಮನ್ನು ಘಾಸಿ ಮಾಡುವ ಸಾಧ್ಯತೆ ಇದೆ. ಆಲಸ್ಯತನದಿಂದ ಕಾರ್ಯ ಮುಂದುಡುವುದು ಬೇಡ. ಅಮೂಲ್ಯ ವಸ್ತುಗಳ ಕುರಿತಾಗಿ ಜಾಗೃತೆ ಇರಲಿ. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ವಹಿಸುವುದು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4
ಧನಸ್ಸು: ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಅತಿಯಾದ ಒತ್ತಡ ಉಂಟುಮಾಡುವ ವಿಚಾರಗಳಿಂದ ದೂರ ಇರಿ. ಕುಟುಂಬದ ಆಪ್ತರಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬ ಸದಸ್ಯರ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯದ ವ್ಯತ್ಯಾಸದಿಂದ ದಿನದ ಮಟ್ಟಿಗೆ ಖರ್ಚು ಮಾಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1
ಇಂಥ ವಿಚಾರಗಳಲ್ಲಿ ಪ್ರಶ್ನಾಶಾಸ್ತ್ರ ಮುಖ್ಯವಾಗುತ್ತದೆ
ಮಕರ: ಹಾಸ್ಯ ಪ್ರವೃತ್ತಿಯಿಂದ,ಬರುವ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ.ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕುಟುಂಬದವರು ನಿಮ್ಮ ಬಗೆಗೆ ಹೆಚ್ಚು ಕಾಳಜಿ ವಹಿಸಲಿದ್ದಾರೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ಕುಂಭ: ಶೀಘ್ರ ಕೋಪದಿಂದ ಅಪಾಯ ತಂದುಕೊಳ್ಳುವುದು ಬೇಡ. ಅತಿಯಾದ ಉತ್ಸಾಹದ ಭರದಲ್ಲಿ ಅತಿರೇಕದ ಮಾತುಗಳನ್ನು ಆಡುವುದು ಸರಿಯಲ್ಲ, ಅಪಾಯ ತಂದಿತು ಎಚ್ಚರಿಕೆ ಇರಲಿ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7
ಇದನ್ನೂ ಓದಿ : ತಾತಯ್ಯ ತತ್ವಾಮೃತಂ: ದೇಹದಲ್ಲಿ ಜೀವ ಇರುವಾಗ ಏನು ಮಾಡಬೇಕು?
ಮೀನ: ಆಹಾರ ಕ್ರಮದಿಂದ ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಸಂಗಾತಿಯ ಮಾತುಗಳು ಹಿತವೇನಿಸಿದರೂ, ಅವರ ಮಾತುಗಳಿಗೆ ಮನ್ನಣೆ ಸಿಗುವುದಿಲ್ಲ. ಆರೋಗ್ಯ ಹಾಗೂ ಹಣಕಾಸಿನ ವಿಷಯದಲ್ಲಿ ಸಾಮಾನ್ಯವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | [email protected]
-
Live News20 hours ago
Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!
-
ವಿದೇಶ10 hours ago
Great auction: ಅಮೆರಿಕದ ಅಪರೂಪದ ನೋಟು 3.9 ಕೋಟಿ ರೂ.ಗೆ ಮಾರಾಟ!
-
ದೇಶ3 hours ago
UNGA Speech: ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಿ, ವಿಶ್ವ ಸಂಸ್ಥೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಪಾಠ!
-
South Cinema13 hours ago
Heart attack : ಹಿರಿಯ ನಟ ಬ್ಯಾಂಕ್ ಜನಾರ್ದನ್ಗೆ ಹೃದಯಾಘಾತ?
-
ಕರ್ನಾಟಕ13 hours ago
Bengaluru Bandh : ಪೊಲೀಸರಿಗೆ ಕೊಟ್ಟ ಊಟದಲ್ಲಿ ಸಿಕ್ಕಿತು ಫ್ರೈಡ್ ಇಲಿ!
-
ಆಟೋಮೊಬೈಲ್10 hours ago
Viral News : ಅಮ್ಮನ ಕಾರಿನಲ್ಲಿಯೇ ಮನೆ ಬಿಟ್ಟು ಹೋದ ಪುಟಾಣಿ ಮಕ್ಕಳು, 300 ಕಿ. ಮೀ ದೂರ ಹೋಗಿ ಸಿಕ್ಕಿಬಿದ್ದರು
-
ಕರ್ನಾಟಕ10 hours ago
Assault Case : ರಸ್ತೆ ವಿಚಾರಕ್ಕೆ ವಕೀಲನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು!
-
ಕ್ರಿಕೆಟ್14 hours ago
ರಾಜ್ಕೋಟ್ನಲ್ಲಿ ಈಡೇರಲಿ ಭಾರತದ ಕ್ಲೀನ್ ಸ್ವೀಪ್ ಯೋಜನೆ; ನಾಳೆ ಅಂತಿಮ ಏಕದಿನ