ಮದುವೆಯಾದ ಮೇಲೂ ಪತ್ನಿಗೆ ಹಳೇ ಲವ್ವರ್‌ ಮೇಲೆ ಮೋಹ; ಆತನೊಂದಿಗೇ ಮದುವೆ ಮಾಡಿಸಿದ ಪತಿ! - Vistara News

ವೈರಲ್ ನ್ಯೂಸ್

ಮದುವೆಯಾದ ಮೇಲೂ ಪತ್ನಿಗೆ ಹಳೇ ಲವ್ವರ್‌ ಮೇಲೆ ಮೋಹ; ಆತನೊಂದಿಗೇ ಮದುವೆ ಮಾಡಿಸಿದ ಪತಿ!

ಚಂದನ್‌ ಹಾಗೂ ಖುಷ್ಬೂ ಬಾಲ್ಯದಿಂದಲೂ ಸ್ನೇಹಿತರಾಗಿದ್ದರು. ಸ್ನೇಹಿತರಾದ ಕೆಲವೇ ವರ್ಷಗಳಲ್ಲಿ ಅವರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಪರಿಸ್ಥಿತಿಯ ಒತ್ತಡಕ್ಕೋ, ಮನೆಯವರ ಒತ್ತಾಯಕ್ಕೋ ಮಣಿದಿದ್ದ ಖುಷ್ಬೂ, ರಾಜೇಶ್‌ ಕುಮಾರ್‌ನನ್ನು ಮದುವೆಯಾಗಿದ್ದಳು. ಆದರೂ, ಮಾಜಿ ಪ್ರೇಮಿಯನ್ನು ಖುಷ್ಬೂ ಮರೆತಿರಲಿಲ್ಲ.

VISTARANEWS.COM


on

Marriage
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಪಟನಾ: ಮದುವೆಯಾದ ಮೇಲೆ ಹೆಂಡತಿ ಮೇಲೆ ಸುಖಾಸುಮ್ಮನೆ ಅನುಮಾನ ಪಡುವವರಿದ್ದಾರೆ. ಹಾಗೊಂದು, ವೇಳೆ ಹೆಂಡತಿಗೆ ಮದುವೆಯಾದ ಮೇಲೂ ಬೇರೆಯವರೊಂದಿಗೆ ಸಂಬಂಧ ಇಟ್ಟುಕೊಂಡರೆ ಆಕೆಯ ಮೇಲೆ ಹಲ್ಲೆ ನಡೆಸುವ, ಕೆಲವೊಮ್ಮೆ ಕೊಲೆಯನ್ನೂ ಮಾಡುವ ಪ್ರಕರಣಗಳು ಸುದ್ದಿಯಾಗುತ್ತಲೇ ಇರುತ್ತವೆ. ಆದರೆ, ಬಿಹಾರದಲ್ಲೊಬ್ಬ (Bihar) 26 ವರ್ಷದ ವ್ಯಕ್ತಿಯು ಮದುವೆಯಾದ ಬಳಿಕ ಹೆಂಡತಿಯನ್ನು ಆಕೆಯ ಮಾಜಿ ಪ್ರಿಯತಮನೊಂದಿಗೆ ಮದುವೆ ಮಾಡಿಸಿದ್ದಾನೆ. ಈ ಸುದ್ದಿ ಈಗ ವೈರಲ್‌ (Viral News) ಆಗಿದೆ.

ಬಿಹಾರದ ರಾಮನಗರ ಗ್ರಾಮದ ನಿವಾಸಿಯಾದ ರಾಜೇಶ್‌ ಕುಮಾರ್‌ ಎಂಬಾತನೇ ಹೆಂಡತಿಯನ್ನು ಆಕೆಯ ಮಾಜಿ ಪ್ರಿಯತನಮ ಜತೆ ಜೀವನ ಸಾಗಿಸಿಲು ಅವಕಾಶ ಮಾಡಿಕೊಟ್ಟಿದ್ದಾನೆ. ಕೆಲ ದಿನಗಳ ಹಿಂದಷ್ಟೇ ರಾಜೇಶ್‌ ಕುಮಾರ್‌ ಮನೆಯಲ್ಲಿ ಇಲ್ಲದಿದ್ದಾಗ ಆತನ ಪತ್ನಿ ಖುಷ್ಬೂ (22) ಮಾಜಿ ಪ್ರಿಯತಮ ಚಂದನ್‌ನನ್ನು (24) ಮನೆಗೆ ಕರೆಸಿದ್ದಳು. ಇಬ್ಬರೂ ಮನೆಯಲ್ಲಿ ಸರಸವಾಡುತ್ತಿದ್ದಾಗಲೇ ರಾಜೇಶ್‌ ಕುಮಾರ್‌ ಮನೆಗೆ ಬಂದಿದ್ದಾನೆ. ಆಗ ಇಬ್ಬರ ಪ್ರೇಮಪುರಾಣ ಬಯಲಾಗಿದೆ.

ಪತ್ನಿಯು ತನಗೆ ಮೋಸ ಮಾಡಿದಳು, ಅಕ್ರಮ ಸಂಬಂಧ ಹೊಂದಿದಳು ಎಂದು ಗಲಾಟೆ ಮಾಡದ, ಚಂದನ್‌ ಮೇಲೆ ಹಲ್ಲೆ ನಡೆಸದ, ಕೋಪದ ಕೈಗೆ ಬುದ್ಧಿ ಕೊಡದ ರಾಜೇಶ್‌ ಕುಮಾರ್‌, ಖುಷ್ಬೂ ಹಾಗೂ ಚಂದನ್‌ರ ಮದುವೆ ಮಾಡಿಸಿದ್ದಾರೆ. ಇಡೀ ಗ್ರಾಮದ ಜನರನ್ನು ಕರೆಸಿ, ಅವರನ್ನು ಸ್ಥಳೀಯ ದೇವಾಲಯಕ್ಕೆ ಕರೆದುಕೊಂಡು ಹೋಗಿ, ಇಬ್ಬರಿಗೂ ಮದುವೆ ಮಾಡಿಸಿದ್ದಾರೆ. ಮದುವೆ ಮಾಡಿಸಿದ ಬಳಿಕ ಅವರಿಗೆ ಶುಭ ಹಾರೈಸಿ, ಬೀಳ್ಕೊಟ್ಟಿದ್ದಾರೆ.

ಚಂದನ್‌ ಹಾಗೂ ಖುಷ್ಬೂ ಬಾಲ್ಯದಿಂದಲೂ ಸ್ನೇಹಿತರಾಗಿದ್ದರು. ಸ್ನೇಹಿತರಾದ ಕೆಲವೇ ವರ್ಷಗಳಲ್ಲಿ ಅವರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಪರಿಸ್ಥಿತಿಯ ಒತ್ತಡಕ್ಕೋ, ಮನೆಯವರ ಒತ್ತಾಯಕ್ಕೋ ಮಣಿದಿದ್ದ ಖುಷ್ಬೂ, ರಾಜೇಶ್‌ ಕುಮಾರ್‌ನನ್ನು ಮದುವೆಯಾಗಿದ್ದರು. ಆದರೆ, ಮದುವೆಯಾದ ಬಳಿಕವೂ ಚಂದನ್‌ ಜತೆ ಖುಷ್ಬೂ ಸಂಪರ್ಕದಲ್ಲಿದ್ದಳು. ರಾಜೇಶ್‌ ಕುಮಾರ್‌ ಇಲ್ಲದಿದ್ದಾಗ ಚಂದನ್‌ ಮನೆಗೆ ಬರುತ್ತಿದ್ದ ಎಂದು ತಿಳಿದುಬಂದಿದೆ. ಒಟ್ಟಿನಲ್ಲಿ ಪತ್ನಿಯ ಸಂಬಂಧದ ಬಳಿಕವೂ ಗಲಾಟೆ, ಜಗಳ ಮಾಡಿಕೊಳ್ಳದ ರಾಜೇಶ್‌, ಆಕೆಯನ್ನು ಬೀಳ್ಕೊಟ್ಟಿರುವ ಸಮಾಧಾನದ ಗುಣಕ್ಕೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪತ್ನಿ ಇದ್ದರೂ ಮಹಿಳಾ ಇನ್ಸ್‌ಪೆಕ್ಟರ್‌ ಜತೆ ವ್ಯಕ್ತಿ ಸರಸ; ರೆಡ್‌ ಹ್ಯಾಂಡ್‌ ಆಗಿ ಹಿಡಿದ ಪತ್ನಿ ಮಾಡಿದ್ದೇನು? Video ಇದೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಮುಂದೆ ಕಾದಿದೆ ಘೋರ ವಿಪತ್ತು: ಹವಾಮಾನ ವೈಪರಿತ್ಯ, ಅನ್ನ-ನೀರಿಗೂ ಹಾಹಾಕಾರ! ಕೋಡಿ ಶ್ರೀಗಳ ಭಯಾನಕ ಭವಿಷ್ಯಕ್ಕೆ ನಡುಗಿದ ನಾಡು

VISTARANEWS.COM


on

ತಮ್ಮ ನಿಖರ ಭವಿಷ್ಯವಾಣಿಗಳಿಗೆ ಹೆಸರಾಗಿರುವ ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು, ಇದೀಗ ದೇಶದ ಭವಿಷ್ಯದ ಕುರಿತು ಭಯಾನಕ ಮುನ್ಸೂಚನೆ ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಮಾತನಾಡಿದ ಶ್ರೀಗಳು, ಹವಾಮಾನ ವೈಪರಿತ್ಯದಿಂದ ಪ್ರಕೃತಿಯಲ್ಲಿ ಭಾರಿ ಏರುಪೇರು ಉಂಟಾಗಲಿದೆ ಎಂದು ಎಚ್ಚರಿಸಿದ್ದಾರೆ. ಈ ಹವಾಮಾನ ಬದಲಾವಣೆಯು ದೇಶದ ಹಲವು ಭಾಗಗಳಲ್ಲಿ ಅನ್ನ ಮತ್ತು ನೀರಿಗಾಗಿ ತೀವ್ರ ಹಾಹಾಕಾರ ಸೃಷ್ಟಿಸಲಿದ್ದು, ಅಪಮೃತ್ಯುಗಳ (ಅಕಾಲಿಕ ಮರಣ) ಸಂಖ್ಯೆ ಹೆಚ್ಚಾಗಲಿದೆ ಎಂಬ ಆಘಾತಕಾರಿ ಭವಿಷ್ಯ ನುಡಿದಿದ್ದಾರೆ.

ಜಾಗತಿಕ ಮಟ್ಟದಲ್ಲಿಯೂ ಭಾರಿ ಅಪಾಯಗಳು ಸಂಭವಿಸುವ ಲಕ್ಷಣಗಳಿವೆ ಎಂದು ಹೇಳಿರುವ ಶ್ರೀಗಳು, 2026ರ ಸಾಲಿನ ಬಗ್ಗೆ ಮಾರ್ಮಿಕವಾಗಿ ಮಾತನಾಡಿದ್ದಾರೆ. ಜಗತ್ತಿನಾದ್ಯಂತ ಜಲಪ್ರಳಯ ಹಾಗೂ ಅಗ್ನಿ ಅವಘಡಗಳಿಂದ ಲಕ್ಷಾಂತರ ಜನರು ಸಾವನ್ನಪ್ಪಿದ್ದಾರೆ, ಆದರೆ ಅತೃಪ್ತ ಆತ್ಮಗಳಿಗೆ ಸರಿಯಾದ ಸಂಸ್ಕಾರ ನಡೆಯದ ಕಾರಣ ಅವು ಮನುಕುಲಕ್ಕೆ ಕಂಟಕವಾಗಲಿವೆ ಎಂದು ಭೀತಿ ವ್ಯಕ್ತಪಡಿಸಿದ್ದಾರೆ. ಹವಾಮಾನ ವೈಪರಿತ್ಯದ ಈ ಭೀಕರತೆಯ ನಡುವೆ ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿಯೂ ಅತಂತ್ರ ಸ್ಥಿತಿ ನಿರ್ಮಾಣವಾಗಲಿದೆ ಎಂದು ಅವರು ಮುನ್ಸೂಚನೆ ನೀಡಿದ್ದಾರೆ.

ಈ ಎಲ್ಲಾ ಆತಂಕಕಾರಿ ಬೆಳವಣಿಗೆಗಳ ನಡುವೆ ಕರ್ನಾಟಕದ ಜನತೆಗೆ ಶ್ರೀಗಳು ಸಮಾಧಾನದ ಸುದ್ದಿಯನ್ನೂ ನೀಡಿದ್ದಾರೆ. ದೇಶದ ಬೇರೆ ಭಾಗಗಳಲ್ಲಿ ಸಮಸ್ಯೆಗಳಿದ್ದರೂ, ಕರ್ನಾಟಕದಲ್ಲಿ ಜನರಿಗೆ ದೈವಾರಾಧನೆ ಮತ್ತು ಭಕ್ತಿಯ ಮೇಲಿನ ಶ್ರದ್ಧೆ ಹೆಚ್ಚಿರುವುದರಿಂದ ನಾಡಿನಲ್ಲಿ ಮಳೆ-ಬೆಳೆ ಸಮೃದ್ಧವಾಗಿರಲಿದೆ ಎಂದು ಅವರು ಹೇಳಿದ್ದಾರೆ. ರಾಜ್ಯದ ಜನರಲ್ಲಿ ಹೆಚ್ಚುತ್ತಿರುವ ಧಾರ್ಮಿಕ ಪ್ರಜ್ಞೆಯು ನಾಡನ್ನು ಬರಗಾಲದಿಂದ ರಕ್ಷಿಸಲಿದ್ದು, ಸಮೃದ್ಧ ಜೀವನ ನಡೆಸಲು ಸಹಕಾರಿಯಾಗಲಿದೆ ಎಂದು ಕೋಡಿ ಶ್ರೀಗಳು ಅಭಿಪ್ರಾಯಪಟ್ಟಿದ್ದಾರೆ.

Continue Reading

Latest

ಬದುಕು ಸುಂದರವಾಗಿರಲು ಮದುವೆ-ಮಕ್ಕಳೇ ಬೇಕಿಲ್ಲ! ವೈಯಕ್ತಿಕ ಜೀವನದ ಬಗ್ಗೆ ನಿತ್ಯಾ ಮೆನನ್ ಹಂಚಿಕೊಂಡ ಮನದಾಳದ ಮಾತು

VISTARANEWS.COM


on

ದಕ್ಷಿಣ ಭಾರತದ ಪ್ರತಿಭಾವಂತ ನಟಿ ನಿತ್ಯಾ ಮೆನನ್ ತಮ್ಮ ನೇರ ನುಡಿ ಹಾಗೂ ವೈಚಾರಿಕ ನಿಲುವುಗಳಿಂದ ಸದಾ ಸುದ್ದಿಯಲ್ಲಿರುತ್ತಾರೆ. ಇತ್ತೀಚೆಗೆ ಕನ್ನಡ ನಟಿ ಭಾವನಾ ರಾಮಣ್ಣ ಅವರು ಮದುವೆಯಾಗದೆ ಐವಿಎಫ್ (IVF) ಮೂಲಕ ಮಗು ಪಡೆದ ವಿಷಯದ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪರ-ವಿರೋಧದ ಚರ್ಚೆಗಳು ನಡೆಯುತ್ತಿವೆ. ಈ ಬೆನ್ನಲ್ಲೇ, ಮದುವೆ ಮತ್ತು ಮಾತೃತ್ವದ ಕುರಿತು ನಿತ್ಯಾ ಮೆನನ್ ಈ ಹಿಂದೆ ನೀಡಿದ್ದ ಹೇಳಿಕೆಗಳು ಮತ್ತೆ ಮುನ್ನಲೆಗೆ ಬಂದಿದ್ದು, ಭಾರೀ ವೈರಲ್ ಆಗುತ್ತಿವೆ. ಮದುವೆಯಾಗದೆಯೇ ಮಕ್ಕಳನ್ನು ಹೊಂದುವ ನಿರ್ಧಾರದಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳುವ ಮೂಲಕ ಅವರು ಆಧುನಿಕ ಬದುಕಿನ ಆಯ್ಕೆಗಳನ್ನು ಸಮರ್ಥಿಸಿಕೊಂಡಿದ್ದಾರೆ.

ತಮಿಳಿನ ‘ಕಾದಲಿಕ್ಕಾ ನೇರಮಿಲ್ಲೈ’ ಸಿನಿಮಾದ ಪ್ರಚಾರದ ವೇಳೆ ನೀಡಿದ ಸಂದರ್ಶನವೊಂದರಲ್ಲಿ ಅವರು ಈ ಕುರಿತು ಮುಕ್ತವಾಗಿ ಮಾತನಾಡಿದ್ದಾರೆ. “ಮದುವೆಗಿಂತ ಮೊದಲು ಅಥವಾ ನಂತರ ಗರ್ಭಿಣಿಯಾಗುವುದು ಎನ್ನುವುದಕ್ಕಿಂತ, ಮದುವೆಯೇ ಇಲ್ಲದೆ ಗರ್ಭಿಣಿಯಾಗುವುದು ಅಥವಾ ಮಗು ಪಡೆಯುವುದರಲ್ಲಿ ತಪ್ಪೇನಿಲ್ಲ” ಎಂಬುದು ನಿತ್ಯಾ ಅವರ ಅಭಿಪ್ರಾಯ. ಒಬ್ಬ ಹೆಣ್ಣಿಗೆ ಮಗು ಬೇಕು ಎನಿಸಿದರೆ, ಆದರೆ ಮದುವೆಯ ಬಂಧನ ಇಷ್ಟವಿಲ್ಲದಿದ್ದರೆ ಅವಳು ಮಗು ಪಡೆಯುವ ನಿರ್ಧಾರ ಮಾಡಬಹುದು. ಇದಕ್ಕೆ ಈಗ ವೈದ್ಯಕೀಯವಾಗಿ ಸಾಕಷ್ಟು ಅವಕಾಶಗಳಿವೆ ಮತ್ತು ಹಲವರು ಇದನ್ನು ಯಶಸ್ವಿಯಾಗಿ ಅನುಸರಿಸುತ್ತಿದ್ದಾರೆ ಎಂದು ಅವರು ವಿವರಿಸಿದ್ದಾರೆ.

ಕೇವಲ ಮಕ್ಕಳ ಬಗ್ಗೆ ಮಾತ್ರವಲ್ಲದೆ, ಮದುವೆಯಾದ ನಂತರ ಮಕ್ಕಳಿಲ್ಲದ ದಂಪತಿಗಳ ಬಗ್ಗೆಯೂ ನಿತ್ಯಾ ಮೆನನ್ ಸಂವೇದನಾಶೀಲವಾಗಿ ಮಾತನಾಡಿದ್ದಾರೆ. “ಮದುವೆಯಾದ ಮೇಲೆ ಮಕ್ಕಳಾಗಲೇಬೇಕು ಎಂಬ ಹಠ ಬೇಡ, ಮಕ್ಕಳಿಲ್ಲದಿದ್ದರೂ ಬದುಕು ಸುಂದರವಾಗಿರಲು ಸಾಧ್ಯವಿದೆ” ಎಂಬುದು ಅವರ ನಿಲುವು. ಸಮಾಜದ ಅಲಿಖಿತ ನಿಯಮಗಳನ್ನು ಪ್ರಶ್ನಿಸಿರುವ ಅವರು, ಪ್ರತಿಯೊಬ್ಬರಿಗೂ ತಮ್ಮ ಜೀವನದ ಬಗ್ಗೆ ಸ್ವತಂತ್ರ ನಿರ್ಧಾರ ತೆಗೆದುಕೊಳ್ಳುವ ಹಕ್ಕಿದೆ ಎಂದು ಒತ್ತಿ ಹೇಳಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಇವರ ಈ ‘ಬೋಲ್ಡ್’ ಹೇಳಿಕೆಗಳು ಈಗ ಯುವಜನತೆಯ ಮೆಚ್ಚುಗೆಗೆ ಪಾತ್ರವಾಗುತ್ತಿವೆ.

Continue Reading

ಕರ್ನಾಟಕ

ಹುಬ್ಬಳ್ಳಿಯಲ್ಲಿ ವಾರದಲ್ಲಿ ಮೂರನೇ ಬಾರಿ ವಿಮಾನ ಲ್ಯಾಂಡಿಂಗ್ ಸಮಸ್ಯೆ; ಕೂದಲೆಳೆ ಅಂತರದಲ್ಲಿ ಪಾರಾದ ಪ್ರಯಾಣಿಕರು

VISTARANEWS.COM


on

ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಫ್ಲೈ 91 (Fly 91) ವಿಮಾನಯಾನ ಸಂಸ್ಥೆಯ ವಿಮಾನಗಳು ಸತತವಾಗಿ ತಾಂತ್ರಿಕ ಸಂಕಷ್ಟಕ್ಕೆ ಸಿಲುಕುತ್ತಿದ್ದು, ಪ್ರಯಾಣಿಕರಲ್ಲಿ ಭೀತಿ ಮೂಡಿಸಿವೆ. ಕಳೆದ ಒಂದು ವಾರದ ಅವಧಿಯಲ್ಲಿ ಇದು ಮೂರನೇ ಘಟನೆಯಾಗಿದ್ದು, ನಿನ್ನೆ ಹೈದರಾಬಾದ್‌ನಿಂದ ಬಂದ ವಿಮಾನವು ಲ್ಯಾಂಡಿಂಗ್‌ಗಾಗಿ ಸುಮಾರು 40 ನಿಮಿಷಗಳ ಕಾಲ ಆಕಾಶದಲ್ಲಿಯೇ ಸುತ್ತು ಹೊಡೆದಿದೆ. ಮಧ್ಯಾಹ್ನ 3.13ಕ್ಕೆ ಹೈದರಾಬಾದ್‌ನಿಂದ ಹೊರಟಿದ್ದ ವಿಮಾನವು ಸಂಜೆ 4.30ಕ್ಕೆ ಲ್ಯಾಂಡ್ ಆಗಬೇಕಿತ್ತು. ಆದರೆ ಹವಾಮಾನ ವೈಪರೀತ್ಯದ ನೆಪವೊಡ್ಡಿ ವಿಮಾನವನ್ನು ಆಕಾಶದಲ್ಲೇ ತಡೆಹಿಡಿದ ಪರಿಣಾಮ, ಅಂತಿಮವಾಗಿ 5.09ಕ್ಕೆ ಸುರಕ್ಷಿತವಾಗಿ ಲ್ಯಾಂಡ್ ಆಯಿತು. ಈ ವಿಳಂಬದಿಂದಾಗಿ ವಿಮಾನದಲ್ಲಿದ್ದ ಪ್ರಯಾಣಿಕರು ಪ್ರಾಣಭಯದಿಂದ ತತ್ತರಿಸುವಂತಾಯಿತು.

ಫ್ಲೈ 91 ಸಂಸ್ಥೆಯ ವಿಮಾನಗಳಿಗೆ ಹುಬ್ಬಳ್ಳಿಯಲ್ಲಿ ಇಂತಹ ಸಮಸ್ಯೆ ಎದುರಾಗುತ್ತಿರುವುದು ಇದೇ ಮೊದಲೇನಲ್ಲ. ಕಳೆದ ಏಪ್ರಿಲ್ 19 ರಂದು ಹೈದರಾಬಾದ್‌ನಿಂದ ಬರುತ್ತಿದ್ದ ಇದೇ ಸಂಸ್ಥೆಯ ವಿಮಾನವೊಂದು ವೇಗ ನಿಯಂತ್ರಣ ಕಳೆದುಕೊಂಡು ಬರೊಬ್ಬರಿ 4 ಗಂಟೆಗಳ ಕಾಲ ಆಗಸದಲ್ಲೇ ಹಾರಾಡಿ, ಕೊನೆಗೆ ಬೆಂಗಳೂರಿನಲ್ಲಿ ತುರ್ತು ಲ್ಯಾಂಡಿಂಗ್ ಮಾಡಿತ್ತು. ಆಗಲೂ ಹವಾಮಾನದ ಕಾರಣ ನೀಡಲಾಗಿತ್ತಾದರೂ, ತಾಂತ್ರಿಕ ದೋಷವೇ ಅಸಲಿ ಕಾರಣ ಎಂಬ ಬಲವಾದ ಶಂಕೆ ವ್ಯಕ್ತವಾಗಿತ್ತು. ವಿಮಾನಯಾನ ಸಂಸ್ಥೆಯು ಈ ಬಗ್ಗೆ ಸರಿಯಾದ ಮಾಹಿತಿ ನೀಡದೆ ನಿರ್ಲಕ್ಷ್ಯ ತೋರಿದ್ದಕ್ಕೆ ಪ್ರಯಾಣಿಕರ ಕುಟುಂಬಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಘಟನೆ ನಡೆದ ಎರಡೇ ದಿನಗಳಲ್ಲಿ ಅಂದರೆ ಏಪ್ರಿಲ್ 21 ರಂದು ಬೆಂಗಳೂರಿನಿಂದ ಬಂದಿದ್ದ ವಿಮಾನಕ್ಕೂ ಇಂತಹುದೇ ಸ್ಥಿತಿ ಎದುರಾಗಿತ್ತು. ಈಗ ಕೇವಲ ಮೂರು ದಿನಗಳ ಅಂತರದಲ್ಲಿ ಮತ್ತೆ ಅದೇ ರೀತಿಯ ಲ್ಯಾಂಡಿಂಗ್ ಸಮಸ್ಯೆ ಉಂಟಾಗಿರುವುದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಇತರ ವಿಮಾನ ಸಂಸ್ಥೆಗಳು ಸುಗಮವಾಗಿ ಸಂಚರಿಸುತ್ತಿರುವಾಗ ಫ್ಲೈ 91 ವಿಮಾನಗಳಿಗೆ ಮಾತ್ರ ಏಕೆ ಪದೇ ಪದೇ ಈ ತೊಂದರೆ ಆಗುತ್ತಿದೆ ಎಂಬ ಪ್ರಶ್ನೆ ಈಗ ಎದ್ದಿದೆ. ವಿಮಾನಗಳ ಫಿಟ್‌ನೆಸ್ ಹಾಗೂ ನಿರ್ವಹಣೆಯಲ್ಲಿ ಸಂಸ್ಥೆ ತೋರುತ್ತಿರುವ ನಿರ್ಲಕ್ಷ್ಯದ ಬಗ್ಗೆ ಪ್ರಯಾಣಿಕರಿಂದ ಈಗ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದ್ದು, ಉನ್ನತ ಮಟ್ಟದ ತನಿಖೆಗೆ ಒತ್ತಾಯ ಕೇಳಿಬಂದಿದೆ.

Continue Reading

Latest

ವಿಜಯ್ ಪಕ್ಷಕ್ಕೆ ಮತ ಚಲಾಯಿಸಲು ಸಾಧ್ಯವಾಗದೆ ಬಿಕ್ಕಿ ಬಿಕ್ಕಿ ಅತ್ತ ಯುವತಿ! ವಿಡಿಯೋ ವೈರಲ್

VISTARANEWS.COM


on

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಕಣ ರಂಗೇರಿದ್ದು, ನಟ ದಳಪತಿ ವಿಜಯ್ ಅವರ ರಾಜಕೀಯ ಪ್ರವೇಶ ಈ ಬಾರಿಯ ಚುನಾವಣೆಯನ್ನು ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯುವಂತೆ ಮಾಡಿದೆ. ಇದೇ ಹೊತ್ತಲ್ಲಿ, ಮಲೇಷ್ಯಾದಿಂದ ತನ್ನ ನೆಚ್ಚಿನ ನಟನಿಗಾಗಿ ಮತ ಚಲಾಯಿಸಲು ಬಂದ ಯುವತಿಯೊಬ್ಬರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಕೆಲಸದ ನಿಮಿತ್ತ ಮಲೇಷ್ಯಾದಲ್ಲಿದ್ದ ಈ ಯುವತಿ, ಮತದಾನದ ದಿನದಂದೇ ತಾಯ್ನಾಡಿಗೆ ಬರುವ ವಿಮಾನವನ್ನು (Flight) ತಪ್ಪಿಸಿಕೊಂಡ ಕಾರಣ, ಮತ ಚಲಾಯಿಸಲು ಸಾಧ್ಯವಾಗುತ್ತಿಲ್ಲ ಎಂದು ನಡುರಸ್ತೆಯಲ್ಲೇ ಬಿಕ್ಕಿ ಬಿಕ್ಕಿ ಅತ್ತು ವಿಜಯ್ ಬಳಿ ಕ್ಷಮೆಯಾಚಿಸಿದ್ದರು.

“ನನ್ನ ತಪ್ಪಿನಿಂದ ಫ್ಲೈಟ್ ಮಿಸ್ ಆಯ್ತು, ವಿಜಯ್ ಅಣ್ಣನ ಮೊದಲ ಹೆಜ್ಜೆಗೆ ಬೆಂಬಲ ನೀಡಲು ಸಾಧ್ಯವಾಗುತ್ತಿಲ್ಲವಲ್ಲ ಎಂಬ ನೋವು ನನ್ನನ್ನು ಕಾಡುತ್ತಿದೆ. ನನ್ನ ಒಂದು ವೋಟ್‌ನಿಂದ ಏನಾಗುತ್ತೆ ಎಂದು ಕೆಲವರು ಕೇಳಬಹುದು, ಆದರೆ ‘ನಾವು ನಿಮ್ಮ ಜೊತೆ ಇದ್ದೀವಿ’ ಎಂದು ಅವರಿಗೆ ಭರವಸೆ ನೀಡುವ ದಾರಿ ಇದಾಗಿತ್ತು” ಎಂದು ಆ ಯುವತಿ ಕಣ್ಣೀರಿಡುತ್ತಾ ಹೇಳಿಕೊಂಡಿದ್ದರು. ಈ ಹೃದಯವಿದ್ರಾವಕ ವಿಡಿಯೋ ನೋಡಿ ದಳಪತಿ ಅಭಿಮಾನಿಗಳು ಸಹ ಬೇಸರ ವ್ಯಕ್ತಪಡಿಸಿದ್ದರು. ಆದರೆ ಈ ಕಥೆಗೆ ಒಂದು ಸುಖಾಂತ್ಯವಿದ್ದು, ಆ ಯುವತಿ ಕೇವಲ ಅತ್ತು ಸುಮ್ಮನಾಗದೆ, ಎಲ್ಲಾ ಅಡೆತಡೆಗಳನ್ನು ದಾಟಿ ಮತ್ತೊಂದು ವಿಮಾನದ ಮೂಲಕ ಹೇಗಾದರೂ ಮಾಡಿ ತಮಿಳುನಾಡಿಗೆ ತಲುಪಿದ್ದಾರೆ.

ಏಪ್ರಿಲ್ 22, 2026 ರಂದು ಹರಿದಾಡುತ್ತಿರುವ ಲೇಟೆಸ್ಟ್ ಮಾಹಿತಿಯ ಪ್ರಕಾರ, ಕಣ್ಣೀರಿಟ್ಟಿದ್ದ ಅದೇ ಯುವತಿ ಕೊನೆಗೂ ಸಮಯಕ್ಕೆ ಸರಿಯಾಗಿ ತನ್ನ ಮತಗಟ್ಟೆಗೆ ಬಂದು ಮತ ಚಲಾಯಿಸುವಲ್ಲಿ ಯಶಸ್ವಿಯಾಗಿದ್ದಾರೆ. “ಧೈರ್ಯ ಬಿಡದೆ ಮನೆಗೆ ಬಂದು ಮತ ಚಲಾಯಿಸಿದ್ದಾರೆ” ಎಂಬ ಟ್ವೀಟ್‌ಗಳು ಈಗ ಅಭಿಮಾನಿಗಳ ವಲಯದಲ್ಲಿ ಸಂಚಲನ ಮೂಡಿಸಿವೆ. ಇನ್ನುಳಿದಂತೆ ತಮಿಳುನಾಡು ಚುನಾವಣೆಯಲ್ಲಿ ನಟ ಅಜಿತ್ ಕುಮಾರ್ ಮೊದಲನೆಯವರಾಗಿ ಮತ ಚಲಾಯಿಸಿದರೆ, ನಂತರ ರಜನಿಕಾಂತ್, ತ್ರಿಷಾ, ವಿಕ್ರಮ್ ಮತ್ತು ಸೂರ್ಯ ಸೇರಿದಂತೆ ದಿಗ್ಗಜ ನಟರು ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸುವ ಮೂಲಕ ಸಾರ್ವಜನಿಕರಿಗೆ ಮಾದರಿಯಾದರು.

Continue Reading
Advertisement
Latest8 hours ago

ಇತಿಹಾಸ ಬರೆಯಲು ಸಜ್ಜಾದ ರನ್ ಮಷೀನ್: ಐಪಿಎಲ್ ಕ್ರಿಕೆಟ್‌ನಲ್ಲಿ ಕೊಹ್ಲಿ ಹೊಸ ರೆಕಾರ್ಡ್‌

Latest8 hours ago

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಉಗ್ರ ಮೊಹಮ್ಮದ್ ಶಾರಿಕ್‌ಗೆ 10 ವರ್ಷ ಕಠಿಣ ಶಿಕ್ಷೆ ವಿಧಿಸಿದ NIA ನ್ಯಾಯಾಲಯ

Latest9 hours ago

ಪಾಕಿಸ್ತಾನಕ್ಕೆ ಮತ್ತೊಂದು ಆರ್ಥಿಕ ಪೆಟ್ಟು: 3.5 ಬಿಲಿಯನ್ ಡಾಲರ್ ಸಾಲ ಮರುಪಾವತಿಗೆ ಯುಎಇ ಸೂಚನೆ

ಸಿನಿಮಾ10 hours ago

ಎಲೆಕ್ಷನ್ ಮುಗಿದರೂ ಮುಗಿಯದ ದಳಪತಿ ಆಸ್ತಿ ಸಂಘರ್ಷ: ಹೆಂಡತಿಗೆ ಕೊಟ್ಟ 12 ಕೋಟಿ ಸಾಲದ ರಹಸ್ಯವೇನು?

Latest10 hours ago

ಹರಿಹರ ಪೀಠದಲ್ಲಿ ಲೆಕ್ಕ ಸಮರ: ವಚನಾನಂದ ಶ್ರೀ, ಟ್ರಸ್ಟಿಗಳ ನಡುವೆ ಆರೋಪ-ಪ್ರತ್ಯಾರೋಪ.

Latest11 hours ago

RCB v/s GT ಪಂದ್ಯದ ವೇಳೆ ಭದ್ರತಾ ವೈಫಲ್ಯ: 240 ಸಿಸಿಟಿವಿಗಳನ್ನು ನಿಷ್ಕ್ರಿಯಗೊಳಿಸಿದ್ದೇಕೆ? ಹೊರಬಿತ್ತು ಶಾಕಿಂಗ್‌ ಸತ್ಯ!

Latest12 hours ago

ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ ಸಾಧ್ಯತೆ: ಮೇ 1ರಿಂದ ಬದಲಾಗಲಿವೆ ಎಲ್‌ಪಿಜಿ ನಿಯಮಗಳು

Latest14 hours ago

ಮೇನಲ್ಲಿ ನಡೆಯಲಿದೆ ಪ್ಯಾನ್-ಐಐಟಿ ಬೆಂಗಳೂರು ಸಮ್ಮಿಟ್-2026

ಕರ್ನಾಟಕ15 hours ago

ಡಿಕೆಶಿ ಪದೇ ಪದೇ ದೆಹಲಿಗೆ ಹೋಗುತ್ತಿರುವುದೇಕೆ? ಸತೀಶ್ ಜಾರಕಿಹೊಳಿ ನೀಡಿದ ಆ ಗೊಂದಲದ ಹೇಳಿಕೆಯಲ್ಲಿದೆಯೇ ದೊಡ್ಡ ಸುಳಿವು

Latest15 hours ago

ಇರಾನ್‌ನಿಂದ ಹೊಸ ಶಾಂತಿ ಸಂಧಾನ: ಹಾರ್ಮುಜ್ ಜಲಸಂಧಿ ಮುಕ್ತಗೊಳಿಸಲು ಅಮೆರಿಕಕ್ಕೆ ಷರತ್ತುಬದ್ಧ ಪ್ರಸ್ತಾವನೆ ಸಲ್ಲಿಕೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌