ಸತ್ತು ಹೋದವ 4ತಿಂಗಳ ಬಳಿಕ ಮೊಮೊಸ್​ ತಿನ್ನುತ್ತಿದ್ದ!; ಕಿಡ್ನ್ಯಾಪ್​ ಕೇಸ್​​ನಲ್ಲಿ ಸಿನಿಮೀಯ ಮಾದರಿ ಟ್ವಿಸ್ಟ್​ - Vistara News

ವೈರಲ್ ನ್ಯೂಸ್

ಸತ್ತು ಹೋದವ 4ತಿಂಗಳ ಬಳಿಕ ಮೊಮೊಸ್​ ತಿನ್ನುತ್ತಿದ್ದ!; ಕಿಡ್ನ್ಯಾಪ್​ ಕೇಸ್​​ನಲ್ಲಿ ಸಿನಿಮೀಯ ಮಾದರಿ ಟ್ವಿಸ್ಟ್​

ಭಾಗಲ್ಪುರದ ನಿಶಾಂತ್​ ಕುಮಾರ್​ ನಾಲ್ಕು ತಿಂಗಳ ಹಿಂದೆ, ಅಂದರೆ ಜನವರಿ 31ರಂದು ನಿಗೂಢವಾಗಿ ನಾಪತ್ತೆಯಾಗಿದ್ದ. ಆತ ಸತ್ತೇ ಹೋಗಿದ್ದಾನೆ ಎಂದೇ ಭಾವಿಸಲಾಗಿತ್ತು.

VISTARANEWS.COM


on

Eating Momos
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಸತ್ತುಹೋಗಿದ್ದಾನೆ ಎಂದುಕೊಂಡಿದ್ದ ವ್ಯಕ್ತಿಯೊಬ್ಬ ನಾಲ್ಕು ತಿಂಗಳ ನಂತರ ಮೊಮೊಸ್​ ತಿನ್ನುತ್ತ, ರಸ್ತೆ ಬದಿಯಲ್ಲಿ ನಿಂತಿದ್ದ..!. ಇಂಥ ಘಟನೆಗಳು ಈಗೀಗ ಸಹಜವಾಗುತ್ತಿವೆ. ಸತ್ತು ಹೋಗಿದ್ದಾರೆ ಎಂದುಕೊಂಡು ಸ್ಮಶಾನಕ್ಕೆ ಕರೆದೊಯ್ದಾಗ ಚಿತೆಯ ಮೇಲೆ ಎದ್ದುಕುಳಿತಿದ್ದು, ಶವಯಾತ್ರೆ ಮಾಡುವಾಗ ಮಾರ್ಗ ಮಧ್ಯೆ ಎಚ್ಚೆತ್ತುಕೊಂಡವರು..ಹೀಗೆ ಇಂಥ ಹಲವು ವರದಿಗಳನ್ನು ನಾವು ಓದಿದ್ದೇವೆ. ಹಾಗೇ, ಬಿಹಾರದ ಭಗಲ್ಪುರದಲ್ಲಿ ಕೂಡ ಆಗಿತ್ತು. ಆದರೆ ಇದೊಂದು ಕ್ರೈಂ..ಅಪಹರಣ ಕೇಸ್​​!

ಭಾಗಲ್ಪುರದ ನಿಶಾಂತ್​ ಕುಮಾರ್​ ನಾಲ್ಕು ತಿಂಗಳ ಹಿಂದೆ, ಅಂದರೆ ಜನವರಿ 31ರಂದು ನಿಗೂಢವಾಗಿ ನಾಪತ್ತೆಯಾಗಿದ್ದ. ಅವರ ತಂದೆ ಸಚ್ಚಿದಾನಂದ ಸಿಂಗ್ ಪೊಲೀಸರಿಗೆ ದೂರು ಕೊಟ್ಟಿದ್ದರು. ‘ನನ್ನ ಮಗನನ್ನು ಆತನ ಮಾವ ನವೀನ್​ ಸಿಂಗ್​ ಮತ್ತು ಅವನ ಮಗ ರವಿಶಂಕರ್​ ಸಿಂಗ್​ ಸೇರಿ ಅಪಹರಣ ಮಾಡಿದ್ದಾರೆ’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. ಆದರೆ ಎಷ್ಟೇ ಹುಡುಕಿದರೂ ನಿಶಾಂತ್ ಸಿಕ್ಕಿರಲಿಲ್ಲ. ಆತ ಸತ್ತೇ ಹೋಗಿದ್ದಾನೆ ಎಂದು ಕುಟುಂಬದವರು, ಸಂಬಂಧಿಕರು ಭಾವಿಸಿದ್ದರು.

ಆದರೆ ನೊಯ್ಡಾದ ಮೊಮೊ ತಿನಿಸಿನ ಶಾಪ್​ ಎದುರು ನಿಶಾಂತ್​ ಪತ್ತೆಯಾಗಿದ್ದಾನೆ. ಅಪಹರಣ ಕೇಸ್​ನಲ್ಲಿ ಆರೋಪಿಯಾಗಿರುವ ರವಿಶಂಕರ್​ ಸಿಂಗ್​ ಕಣ್ಣಿಗೇ ಬಿದ್ದಿದ್ದಾನೆ. ನಿಶಾಂತ್ ಕೂದಲು ಕೆದರಿತ್ತು. ಕೊಳಕಾದ ಬಟ್ಟೆ ಧರಿಸಿ ಅಂಗಡಿಯ ಎದುರು ನಿಂತಿದ್ದ. ಅವನಿಗೆ ಅಂಗಡಿಯವನು ತಿನ್ನಲು ಮೊಮೊಸ್ ಕೊಟ್ಟಿದ್ದರೂ, ಅದೇನೋ ಬೈಯ್ಯುತ್ತಿದ್ದ. ರವಿಶಂಕರ್ ಸಿಂಗ್​ ಹತ್ತಿರ ಹೋಗಿ ನಿಶಾಂತ್​​ನನ್ನು ನೋಡಿದ್ದಾನೆ. ನಿಶಾಂತ್ ಹೌದೋ-ಅಲ್ಲವೋ ಎಂದು ಸ್ಪಷ್ಟಪಡಿಸಿಕೊಂಡಿದ್ದಾನೆ. ಆತ ನಿಶಾಂತ್ ಎಂಬುದು ಅವನಿಗೆ ಸ್ಪಷ್ಟವಾದ ಮೇಲೆ ಒಂದು ಕ್ಷಣ ಶಾಕ್​ಗೂ ಒಳಗಾಗಿದ್ದಾನೆ.

ಇದನ್ನೂ ಓದಿ: Viral Video: ಮೊಸಳೆ ಕ್ರೂರಿಯೋ? ಮಾನವ ಕಟುಕನೋ?-ಗಂಗಾನದಿ ತಟದಲ್ಲಿ ಭಯಾನಕ ಘಟನೆ!

ರವಿಶಂಕರ್ ಸಿಂಗ್​ ಬಳಿಕ ನಿಶಾಂತ್​ನನ್ನು ಕರೆದುಕೊಂಡು ಬಿಹಾರಕ್ಕೆ ಹೋಗಿ, ತನ್ನ ವಿರುದ್ಧ ದೂರು ದಾಖಲಾಗಿದ್ದ ಸುಲ್ತಾನ್​ಗಂಜ್​ ಠಾಣೆಯಲ್ಲಿ ಹಾಜರುಪಡಿಸಿದ್ದಾನೆ. ಇದೀಗ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಿಶಾಂತ್ ಸಿಂಗ್ ನಿಜವಾಗಲೂ ಕಿಡ್ನ್ಯಾಪ್ ಆಗಿದ್ದನಾ? ಇದು ನಾಟಕವಾ? ಎಂಬಿತ್ಯಾದಿ ಆಯಾಮಗಳಲ್ಲಿ ಪ್ರಶ್ನೆ ಮಾಡುತ್ತಿದ್ದಾರೆ. ಅಷ್ಟೇ ಅಲ್ಲ, ನಿಶಾಂತ್​ ದೆಹಲಿಯನ್ನು ತಲುಪಿದ್ದು ಹೇಗೆಂಬ ಬಗ್ಗೆಯೂ ವಿಚಾರಣೆ ನಡೆಸುತ್ತಿದ್ದಾರೆ. ನಿಶಾಂತ್​​ನನ್ನು ಠಾಣೆಗೆ ಹಾಜರುಪಡಿಸಿದ ರವಿಶಂಕರ್ ಸಿಂಗ್​ ‘ನಾವು ನಿಶಾಂತ್​ಗೆ ಏನೂ ಮಾಡಿಲ್ಲ. ನಿಶಾಂತ್ ಕುಟುಂಬದವರು ಮೊದಲಿನಿಂದಲೂ ನಮ್ಮ ಮೇಲೆ ದೌರ್ಜನ್ಯ ಎಸಗುತ್ತಿದ್ದಾರೆ. ನಾವು ಅಪಹರಣ ಮಾಡಿದ್ದರೆ, ಈಗ ನಿಶಾಂತ್​ನನ್ನು ಇಲ್ಲಿಗೆ ಕರೆದುಕೊಂಡು ಬರುತ್ತಿರಲಿಲ್ಲ. ಈ ಕಿಡ್ನ್ಯಾಪ್​ ಕೇಸ್​​ನಲ್ಲಿ ನಮಗೆ ನ್ಯಾಯ ಒದಗಿಸಬೇಕು’ ಎಂದು ಒತ್ತಾಯಿಸಿದ್ದಾರೆ. ಈ ಮೂಲಕ ಘಟನೆಗೆ ಸಿನಿಮೀಯ ಮಾದರಿಯಲ್ಲಿ ಟ್ವಿಸ್ಟ್​ ಸಿಕ್ಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಶಿಸ್ತು ಮರೆತರಾ ರಿಯಾನ್ ಪರಾಗ್? ಕಾನೂನು ಸಂಕಷ್ಟಕ್ಕೆ ಸಿಲುಕುತ್ತಾರಾ ರಾಜಸ್ಥಾನ ರಾಯಲ್ಸ್ ಆಟಗಾರ?

VISTARANEWS.COM


on

ಶಿಸ್ತು ಮರೆತರಾ ರಿಯಾನ್ ಪರಾಗ್? ಕಾನೂನು ಸಂಕಷ್ಟಕ್ಕೆ ಸಿಲುಕುತ್ತಾರಾ ರಾಜಸ್ಥಾನ ರಾಯಲ್ಸ್ ಆಟಗಾರ?

ಪಂಜಾಬ್ ಕಿಂಗ್ಸ್ ವಿರುದ್ಧದ ಐಪಿಎಲ್ ಪಂದ್ಯದ ವೇಳೆ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ ದೊಡ್ಡ ವಿವಾದಕ್ಕೆ ಸಿಲುಕಿದ್ದಾರೆ. ಪಂದ್ಯದ ನಡುವೆ ಡ್ರೆಸ್ಸಿಂಗ್ ರೂಮ್‌ನಲ್ಲಿ ಕುಳಿತಿದ್ದ ಪರಾಗ್ ‘ವೇಪಿಂಗ್’ (ಇ-ಸಿಗರೇಟ್) ಬಳಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಭಾರತದಲ್ಲಿ 2019 ರಿಂದಲೇ ಇ-ಸಿಗರೇಟ್ ಬಳಕೆಯನ್ನು ನಿಷೇಧಿಸಲಾಗಿದ್ದು, ಸಾರ್ವಜನಿಕವಾಗಿ ಮತ್ತು ಕ್ರೀಡಾಂಗಣದ ಶಿಸ್ತು ಉಲ್ಲಂಘಿಸಿ ಈ ರೀತಿ ನಡೆದುಕೊಂಡಿರುವುದು ಈಗ ಅವರಿಗೆ ಕಾನೂನು ಸಂಕಷ್ಟ ತಂದೊಡ್ಡುವ ಸಾಧ್ಯತೆ ಇದ

ಈ ಜವಾಬ್ದಾರಿರಹಿತ ವರ್ತನೆಯಿಂದಾಗಿ ರಿಯಾನ್ ಪರಾಗ್ ಅವರಿಗೆ ಭಾರಿ ದಂಡ ಅಥವಾ ಪಂದ್ಯಗಳಿಂದ ನಿಷೇಧ ಹೇರುವ ಭೀತಿ ಎದುರಾಗಿದೆ. ಭಾರತೀಯ ಕಾನೂನಿನ ಪ್ರಕಾರ ಇ-ಸಿಗರೇಟ್ ಬಳಕೆಯ ಮೊದಲ ಅಪರಾಧಕ್ಕೆ ಒಂದು ವರ್ಷದವರೆಗೆ ಜೈಲು ಶಿಕ್ಷೆ ಅಥವಾ ₹1 ಲಕ್ಷದವರೆಗೆ ದಂಡ ವಿಧಿಸಲು ಅವಕಾಶವಿದೆ. ಇದರ ಜೊತೆಗೆ ಬಿಸಿಸಿಐ (BCCI) ಕೂಡ ಕ್ರೀಡಾ ಶಿಸ್ತಿನ ಉಲ್ಲಂಘನೆಗಾಗಿ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ. ಯುವಕರಿಗೆ ಮಾದರಿಯಾಗಬೇಕಾದ ಆಟಗಾರನ ಈ ವರ್ತನೆಯು ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿ ಹಾಗೂ ಐಪಿಎಲ್ ಆಡಳಿತ ಮಂಡಳಿಗೆ ಭಾರಿ ಮುಜುಗರ ತಂದಿದೆ.

Continue Reading

Latest

ಕಿಂಗ್ ಕೊಹ್ಲಿಗಾಗಿ ಪುಟಾಣಿ ಫ್ಯಾನ್ ಹಠ: ಹೋಟೆಲ್ ಸಿಬ್ಬಂದಿ ತಡೆದಿದ್ದಕ್ಕೆ ಕಣ್ಣೀರು ಹಾಕಿದ ಬಾಲಕ

VISTARANEWS.COM


on

ಆರ್‌ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ವಿಶ್ವದಾದ್ಯಂತ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಇತ್ತೀಚೆಗೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್‌ಸಿಬಿ ಜಯಗಳಿಸಿದ ನಂತರ, ಹೋಟೆಲ್‌ನಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಕೊಹ್ಲಿ ಅವರ ಆಟೋಗ್ರಾಫ್ ಪಡೆಯಲು ಪುಟಾಣಿ ಬಾಲಕನೊಬ್ಬ ಬ್ಯಾಟ್ ಹಿಡಿದು ಬಹಳ ಹೊತ್ತು ಕಾತರದಿಂದ ಕಾಯುತ್ತಿದ್ದ. ಆದರೆ ಕೊಹ್ಲಿ ಹೋಟೆಲ್‌ಗೆ ಆಗಮಿಸಿದಾಗ ಭದ್ರತಾ ಸಿಬ್ಬಂದಿ ಬಾಲಕನನ್ನು ಹತ್ತಿರ ಹೋಗಲು ಬಿಡದೆ ತಡೆದಿದ್ದಾರೆ. ಇದರಿಂದ ಮನನೊಂದ ಬಾಲಕ ತನ್ನ ಕೈಯಲ್ಲಿದ್ದ ಬ್ಯಾಟನ್ನು ನೆಲಕ್ಕೆ ಎಸೆದು ಗಳಗಳನೇ ಅತ್ತಿದ್ದಾನೆ.

ಹೋಟೆಲ್ ಪ್ರವೇಶಿಸಿದ ವಿರಾಟ್ ಕೊಹ್ಲಿ ಸುತ್ತಲೂ ಸಿಬ್ಬಂದಿಗಳು ಬೌನ್ಸರ್‌ಗಳಂತೆ ನಿಂತು ಯಾರೂ ಹತ್ತಿರ ಸುಳಿಯದಂತೆ ನೋಡಿಕೊಳ್ಳುತ್ತಿದ್ದರು. ಈ ವೇಳೆ ಓಡೋಡಿ ಬಂದ ಬಾಲಕನನ್ನು ಸಿಬ್ಬಂದಿ ಬಲವಂತವಾಗಿ ತಡೆದಿದ್ದಾರೆ. ಇತ್ತ ಕೊಹ್ಲಿ ಕೂಡ ಬಾಲಕನತ್ತ ಗಮನ ಹರಿಸದೆ ನೇರವಾಗಿ ಮುಂದೆ ಸಾಗಿದ್ದಾರೆ. ತನ್ನ ನೆಚ್ಚಿನ ಕ್ರಿಕೆಟಿಗನನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ ಎಂಬ ನೋವಿನಿಂದ ಬಾಲಕ ಪೋಷಕರ ಬಳಿ ತೆರಳಿ ಜೋರಾಗಿ ಅಳಲಾರಂಭಿಸಿದನು. ಪೋಷಕರು ಎಷ್ಟೇ ಸಮಾಧಾನ ಪಡಿಸಿದರೂ ಆ ಪುಟ್ಟ ಅಭಿಮಾನಿಯ ಸಿಟ್ಟು ಮತ್ತು ಬೇಸರ ಮಾತ್ರ ಕಡಿಮೆಯಾಗಲಿಲ್ಲ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. “ಕೊಹ್ಲಿ ಕನಿಷ್ಠ ಪಕ್ಷ ಆ ಮಗುವಿಗೆ ಕೈಬೀಸಿ ವಿಶ್ ಮಾಡಬೇಕಿತ್ತು, ಆಗ ಆ ಮಗುವಿನ ಮುಖದಲ್ಲಿ ನಗು ಮೂಡುತ್ತಿತ್ತು” ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಇನ್ನು ಕೆಲವರು, “ಕೊಹ್ಲಿಗೆ ಆ ಸಮಯದಲ್ಲಿ ಬಾಲಕ ಅವರ ಗಮನಕ್ಕೆ ಬಂದಿರಲಿಕ್ಕಿಲ್ಲ” ಎಂದು ಸಮರ್ಥಿಸಿಕೊಂಡಿದ್ದಾರೆ. ಏನೇ ಇರಲಿ, ಕ್ರಿಕೆಟ್ ತಾರೆಗಳ ಮೇಲಿರುವ ಅಭಿಮಾನವು ಕೆಲವೊಮ್ಮೆ ಇಂತಹ ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾಗುವುದು ಸಹಜ ಎಂಬ ಚರ್ಚೆಗಳು ನಡೆಯುತ್ತಿವೆ.

Continue Reading

Latest

ಹಣ ಪಡೆಯಲು ಬ್ಯಾಂಕಿಗೆ ಸಹೋದರಿಯ ಅಸ್ಥಿಪಂಜರವನ್ನೇ ತಂದ ವ್ಯಕ್ತಿ!

VISTARANEWS.COM


on

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ ಮಾನವೀಯತೆ ಮರೆತ ಬ್ಯಾಂಕ್ ಸಿಬ್ಬಂದಿಯ ನಡೆಗೆ ಇಡೀ ದೇಶವೇ ಮರುಗುವಂತಾಗಿದೆ. ಮೃತ ಸಹೋದರಿಯ ಹೆಸರಿನಲ್ಲಿದ್ದ ಠೇವಣಿ ಹಣವನ್ನು ಹಿಂಪಡೆಯಲು ಹೋದ ಜೀತು ಮುಂಡಾ ಎಂಬ ಅನಕ್ಷರಸ್ಥ ಬುಡಕಟ್ಟು ವ್ಯಕ್ತಿಗೆ, ಬ್ಯಾಂಕ್ ಸಿಬ್ಬಂದಿ ಪದೇ ಪದೇ “ಖಾತೆದಾರಳನ್ನು ಕರೆತನ್ನಿ” ಎಂದು ಕಿರುಕುಳ ನೀಡಿದ್ದಾರೆ. ಆಕೆ ನಿಧನಳಾಗಿದ್ದಾಳೆ ಎಂದು ಹೇಳಿದರೂ ಕೇಳದ ಸಿಬ್ಬಂದಿಯ ವರ್ತನೆಯಿಂದ ಹತಾಶರಾದ ಜೀತು, ಸಾವಿನ ಪುರಾವೆ ತೋರಿಸಲು ಸಮಾಧಿಯನ್ನು ಅಗೆದು ಸಹೋದರಿಯ ಅಸ್ಥಿಪಂಜರವನ್ನೇ ಬ್ಯಾಂಕಿಗೆ ಹೊತ್ತು ತಂದಿದ್ದಾರೆ.

ಈ ವಿಚಿತ್ರ ಮತ್ತು ಆಘಾತಕಾರಿ ಘಟನೆಯಿಂದ ಎಚ್ಚೆತ್ತ ಪೊಲೀಸರು ಹಾಗೂ ಸ್ಥಳೀಯ ಆಡಳಿತವು ಕೂಡಲೇ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಜೀತು ಮುಂಡಾ ಅವರ ಸಹೋದರಿಯ ಖಾತೆಯಲ್ಲಿದ್ದ ನಾಮಿನಿ ಕೂಡ ಈಗಾಗಲೇ ಮೃತಪಟ್ಟಿದ್ದು, ಕಾನೂನಿನ ಪ್ರಕಾರ ಜೀತು ಅವರೇ ಈ ಹಣಕ್ಕೆ ಏಕೈಕ ಹಕ್ಕುದಾರರಾಗಿದ್ದಾರೆ. ಬ್ಯಾಂಕ್ ಅಧಿಕಾರಿಗಳು ಮೃತ ವ್ಯಕ್ತಿಯ ಖಾತೆಯಿಂದ ಹಣ ಹಿಂಪಡೆಯುವ ಸರಳ ನಿಯಮಗಳನ್ನು ವಿವರಿಸುವಲ್ಲಿ ವಿಫಲರಾಗಿ, ಒಬ್ಬ ಅಮಾಯಕ ವ್ಯಕ್ತಿಯನ್ನು ಇಂತಹ ದಾರುಣ ಸ್ಥಿತಿಗೆ ತಳ್ಳಿದ್ದು ನಿಜಕ್ಕೂ ದುರದೃಷ್ಟಕರ.

ಸದ್ಯ ಪೊಲೀಸರ ಸಮ್ಮುಖದಲ್ಲಿ ಅಸ್ಥಿಪಂಜರವನ್ನು ಮರು ಅಂತ್ಯಕ್ರಿಯೆ ಮಾಡಲಾಗಿದ್ದು, ಜೀತು ಮುಂಡಾ ಅವರಿಗೆ ಬರಬೇಕಾದ ಹಣವನ್ನು ಶೀಘ್ರವಾಗಿ ವಿತರಿಸುವಂತೆ ಜಿಲ್ಲಾಡಳಿತವು ಬ್ಯಾಂಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ಈ ಘಟನೆಯು ಸರ್ಕಾರಿ ಮತ್ತು ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಸಾಮಾನ್ಯ ಜನರಿಗೆ, ಅದರಲ್ಲೂ ವಿಶೇಷವಾಗಿ ಅನಕ್ಷರಸ್ಥರಿಗೆ ಸಿಗಬೇಕಾದ ಕನಿಷ್ಠ ಗೌರವ ಮತ್ತು ಮಾರ್ಗದರ್ಶನದ ಕೊರತೆಯನ್ನು ಎತ್ತಿ ತೋರಿಸಿದೆ.

Continue Reading

Latest

ಮುಂದೆ ಕಾದಿದೆ ಘೋರ ವಿಪತ್ತು: ಹವಾಮಾನ ವೈಪರಿತ್ಯ, ಅನ್ನ-ನೀರಿಗೂ ಹಾಹಾಕಾರ! ಕೋಡಿ ಶ್ರೀಗಳ ಭಯಾನಕ ಭವಿಷ್ಯಕ್ಕೆ ನಡುಗಿದ ನಾಡು

VISTARANEWS.COM


on

ತಮ್ಮ ನಿಖರ ಭವಿಷ್ಯವಾಣಿಗಳಿಗೆ ಹೆಸರಾಗಿರುವ ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು, ಇದೀಗ ದೇಶದ ಭವಿಷ್ಯದ ಕುರಿತು ಭಯಾನಕ ಮುನ್ಸೂಚನೆ ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಮಾತನಾಡಿದ ಶ್ರೀಗಳು, ಹವಾಮಾನ ವೈಪರಿತ್ಯದಿಂದ ಪ್ರಕೃತಿಯಲ್ಲಿ ಭಾರಿ ಏರುಪೇರು ಉಂಟಾಗಲಿದೆ ಎಂದು ಎಚ್ಚರಿಸಿದ್ದಾರೆ. ಈ ಹವಾಮಾನ ಬದಲಾವಣೆಯು ದೇಶದ ಹಲವು ಭಾಗಗಳಲ್ಲಿ ಅನ್ನ ಮತ್ತು ನೀರಿಗಾಗಿ ತೀವ್ರ ಹಾಹಾಕಾರ ಸೃಷ್ಟಿಸಲಿದ್ದು, ಅಪಮೃತ್ಯುಗಳ (ಅಕಾಲಿಕ ಮರಣ) ಸಂಖ್ಯೆ ಹೆಚ್ಚಾಗಲಿದೆ ಎಂಬ ಆಘಾತಕಾರಿ ಭವಿಷ್ಯ ನುಡಿದಿದ್ದಾರೆ.

ಜಾಗತಿಕ ಮಟ್ಟದಲ್ಲಿಯೂ ಭಾರಿ ಅಪಾಯಗಳು ಸಂಭವಿಸುವ ಲಕ್ಷಣಗಳಿವೆ ಎಂದು ಹೇಳಿರುವ ಶ್ರೀಗಳು, 2026ರ ಸಾಲಿನ ಬಗ್ಗೆ ಮಾರ್ಮಿಕವಾಗಿ ಮಾತನಾಡಿದ್ದಾರೆ. ಜಗತ್ತಿನಾದ್ಯಂತ ಜಲಪ್ರಳಯ ಹಾಗೂ ಅಗ್ನಿ ಅವಘಡಗಳಿಂದ ಲಕ್ಷಾಂತರ ಜನರು ಸಾವನ್ನಪ್ಪಿದ್ದಾರೆ, ಆದರೆ ಅತೃಪ್ತ ಆತ್ಮಗಳಿಗೆ ಸರಿಯಾದ ಸಂಸ್ಕಾರ ನಡೆಯದ ಕಾರಣ ಅವು ಮನುಕುಲಕ್ಕೆ ಕಂಟಕವಾಗಲಿವೆ ಎಂದು ಭೀತಿ ವ್ಯಕ್ತಪಡಿಸಿದ್ದಾರೆ. ಹವಾಮಾನ ವೈಪರಿತ್ಯದ ಈ ಭೀಕರತೆಯ ನಡುವೆ ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿಯೂ ಅತಂತ್ರ ಸ್ಥಿತಿ ನಿರ್ಮಾಣವಾಗಲಿದೆ ಎಂದು ಅವರು ಮುನ್ಸೂಚನೆ ನೀಡಿದ್ದಾರೆ.

ಈ ಎಲ್ಲಾ ಆತಂಕಕಾರಿ ಬೆಳವಣಿಗೆಗಳ ನಡುವೆ ಕರ್ನಾಟಕದ ಜನತೆಗೆ ಶ್ರೀಗಳು ಸಮಾಧಾನದ ಸುದ್ದಿಯನ್ನೂ ನೀಡಿದ್ದಾರೆ. ದೇಶದ ಬೇರೆ ಭಾಗಗಳಲ್ಲಿ ಸಮಸ್ಯೆಗಳಿದ್ದರೂ, ಕರ್ನಾಟಕದಲ್ಲಿ ಜನರಿಗೆ ದೈವಾರಾಧನೆ ಮತ್ತು ಭಕ್ತಿಯ ಮೇಲಿನ ಶ್ರದ್ಧೆ ಹೆಚ್ಚಿರುವುದರಿಂದ ನಾಡಿನಲ್ಲಿ ಮಳೆ-ಬೆಳೆ ಸಮೃದ್ಧವಾಗಿರಲಿದೆ ಎಂದು ಅವರು ಹೇಳಿದ್ದಾರೆ. ರಾಜ್ಯದ ಜನರಲ್ಲಿ ಹೆಚ್ಚುತ್ತಿರುವ ಧಾರ್ಮಿಕ ಪ್ರಜ್ಞೆಯು ನಾಡನ್ನು ಬರಗಾಲದಿಂದ ರಕ್ಷಿಸಲಿದ್ದು, ಸಮೃದ್ಧ ಜೀವನ ನಡೆಸಲು ಸಹಕಾರಿಯಾಗಲಿದೆ ಎಂದು ಕೋಡಿ ಶ್ರೀಗಳು ಅಭಿಪ್ರಾಯಪಟ್ಟಿದ್ದಾರೆ.

Continue Reading
Advertisement
Latest8 hours ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

Latest1 day ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest1 day ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest1 day ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest1 day ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

Latest1 day ago

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

Latest1 day ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

Latest1 day ago

ರಾಜ್ಯದಲ್ಲಿ ನಾಯಕತ್ವ ಗೊಂದಲ: “ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ” – ಖರ್ಗೆ ಸ್ಪಷ್ಟನೆ

Latest1 day ago

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

Latest2 days ago

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಬಲಿ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌