Abu Salem: ಮುಂಬೈ ಸ್ಫೋಟದ ಪ್ರಮುಖ ಆರೋಪಿ, ಭೂಗತ ಪಾತಕಿ ಅಬು ಸಲೇಂನನ್ನು ಮನ್ಮಾಡ್‌ಗೆ ರೈಲಿನಲ್ಲಿ ಕರೆತಂದ ಪೊಲೀಸರು - Vistara News

ವೈರಲ್ ನ್ಯೂಸ್

Abu Salem: ಮುಂಬೈ ಸ್ಫೋಟದ ಪ್ರಮುಖ ಆರೋಪಿ, ಭೂಗತ ಪಾತಕಿ ಅಬು ಸಲೇಂನನ್ನು ಮನ್ಮಾಡ್‌ಗೆ ರೈಲಿನಲ್ಲಿ ಕರೆತಂದ ಪೊಲೀಸರು

Abu Salem: 1993ರ ಮುಂಬೈ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ, ಭೂಗತ ಪಾತಕಿ ಅಬು ಸಲೇಂ ನನ್ನು ಶನಿವಾರ ದೆಹಲಿಯಿಂದ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮನ್ಮಾಡ್‌ಗೆ ರೈಲಿನಲ್ಲಿ ಬಿಗಿ ಭದ್ರತೆಯಲ್ಲಿ ಕರೆತರಲಾಯಿತು. ಬಳಿಕ ಪೊಲೀಸ್ ವ್ಯಾನ್‌ನಲ್ಲಿ ಆತನನ್ನು ನಾಸಿಕ್ ರಸ್ತೆಯ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಯಿತು. ಮನ್ಮಾಡ್ ರೈಲ್ವೆ ನಿಲ್ದಾಣಕ್ಕೆ ಅಬು ಸಲೇಂನನ್ನು ಕರೆದುಕೊಂಡು ಬರುವ ವಿಚಾರವನ್ನು ಅತ್ಯಂತ ಗೌಪ್ಯವಾಗಿ ಇಡಲಾಗಿತ್ತು.

VISTARANEWS.COM


on

Abu Salem
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: 1993ರ ಮುಂಬೈ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ, ಭೂಗತ ಪಾತಕಿ ಅಬು ಸಲೇಂ (Abu Salem)ನನ್ನು ಶನಿವಾರ ದೆಹಲಿಯಿಂದ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮನ್ಮಾಡ್‌ (Manmad)ಗೆ ರೈಲಿನಲ್ಲಿ ಬಿಗಿ ಭದ್ರತೆಯಲ್ಲಿ ಕರೆತರಲಾಯಿತು. ಬಳಿಕ ಪೊಲೀಸ್ ವ್ಯಾನ್‌ನಲ್ಲಿ ಆತನನ್ನು ನಾಸಿಕ್ ರಸ್ತೆಯ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಯಿತು. ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯದಲ್ಲಿ ವೈರಲ್‌ ಆಗಿದೆ (Viral Video).

ಮನ್ಮಾಡ್ ರೈಲ್ವೆ ನಿಲ್ದಾಣಕ್ಕೆ ಅಬು ಸಲೇಂನನ್ನು ಕರೆದುಕೊಂಡು ಬರುವ ವಿಚಾರವನ್ನು ಅತ್ಯಂತ ಗೌಪ್ಯವಾಗಿ ಇಡಲಾಗಿತ್ತು. ಆದರೆ ನವದೆಹಲಿ-ಬೆಂಗಳೂರು-ಕರ್ನಾಟಕ ಎಕ್ಸ್‌ಪ್ರೆಸ್ ರೈಲಿನಿಂದ ಮನ್ಮಾಡ್‌ಗೆ ಸ್ಟೇಷನ್‌ನಲ್ಲಿ ಅಬು ಸಲೇಂ ಇಳಿದಾಗ ಜನ ಸಮೂಹವೇ ನೆರೆದಿತ್ತು.

ಬಾಂಬ್ ಸ್ಫೋಟದಲ್ಲಿ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿರುವ ಸಲೇಂ ಕಳೆದ ತಿಂಗಳು ‘ಸುರಕ್ಷತಾ ಕಾರಣಗಳನ್ನು’ ಉಲ್ಲೇಖಿಸಿ ತಲೋಜಾ ಕೇಂದ್ರ ಕಾರಾಗೃಹದಿಂದ ನಾಸಿಕ್ ಕೇಂದ್ರ ಕಾರಾಗೃಹಕ್ಕೆ ವರ್ಗಾಯಿಸುವುದನ್ನು ತಡೆಯಲು ಪ್ರಯತ್ನಿಸಿದ್ದ. ಈ ಬಗ್ಗೆ ಬಾಂಬೆ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದ. ಆರಂಭಿಕ ಮೇಲ್ಮನವಿಯನ್ನು ಸೆಷನ್ಸ್ ನ್ಯಾಯಾಲಯವು ಜೂನ್ 25ರಂದು ನಿರಾಕರಿಸಿತ್ತು. ಆದರೆ ನ್ಯಾಯಾಲಯವು ಜುಲೈ 3ರವರೆಗೆ ವರ್ಗಾವಣೆಯನ್ನು ವಿಳಂಬಗೊಳಿಸುವಂತೆ ಜೈಲು ಅಧಿಕಾರಿಗಳಿಗೆ ಸೂಚಿಸಿತ್ತು.

ಪೋರ್ಚುಗಲ್‌ನಲ್ಲಿ ಆಶ್ರಯ ಪಡೆದಿದ್ದ ಪಾತಕಿ

ಮುಂಬೈ ಸರಣಿ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾಗಿರುವ ಗ್ಯಾಂಗ್‌ಸ್ಟರ್‌ ಅಬು ಸಲೇಂ ಪೋರ್ಚುಗಲ್‌ನಲ್ಲಿ ಆಶ್ರಯ ಪಡೆದಿದ್ದ. ಆತನನ್ನು ಅಲ್ಲಿಂದ ಗಡಿಪಾರು ಮಾಡಿ ತರಲು ಕೇಂದ್ರ ಸರ್ಕಾರ ಹರಸಾಹಸವನ್ನೇ ನಡೆಸಿತ್ತು. ಕೊನೆಗೆ ಪೋರ್ಚುಗಲ್‌ ಸರ್ಕಾರದೊಂದಿಗಿನ ಸಂಧಾನದಲ್ಲಿ ಆರೋಪಿಗೆ 25 ವರ್ಷಕ್ಕಿಂತ ಹೆಚ್ಚು ಅವಧಿಯ ಶಿಕ್ಷೆ ವಿಧಿಸುವುದಿಲ್ಲ, 25 ವರ್ಷದ ಶಿಕ್ಷೆಯ ಬಳಿಕ ಬಂಧಮುಕ್ತಗೊಳಿಸಲಾಗುವುದು ಎಂದು ವಾಗ್ದಾನ ನೀಡಲಾಗಿತ್ತು. ಜತೆಗೆ ಆತನಿಗೆ ಮರಣದಂಡನೆ ಶಿಕ್ಷೆ ನೀಡುವುದಿಲ್ಲ ಎಂದು ಭರವಸೆ ನೀಡಲಾಗಿತ್ತು. ಹೀಗಾಗಿ 2005ರ ನವೆಂಬರ್‌ 5ರಂದು ಅಬು ಸಲೇಂನನ್ನು ಭಾರತಕ್ಕೆ ಕರೆ ತರಲಾಗಿತ್ತು. ಈ ವಾಗ್ದಾನದ ಅವಧಿ 2030ರವರೆಗೆ ಜಾರಿಯಲ್ಲಿರುತ್ತದೆ.

ಈ ನಡುವೆ 1995ರಲ್ಲಿ ನಡೆದ ಮುಂಬೈ ಮೂಲದ ಬಿಲ್ಡರ್‌ ಪ್ರದೀಪ್‌ ಜೈನ್‌ ಅವರ ಕೊಲೆಗೆ ಸಂಬಂಧಿಸಿ ಟಾಡಾ ಕೋರ್ಟ್‌ 2005ರ ಫೆಬ್ರವರಿ 25ರಂದು ತೀರ್ಪು ನೀಡಿದೆ. ಇದರಲ್ಲಿ ಸಲೇಂ ಮತ್ತು ಆತನ ಚಾಲಕ ಮೆಹದಿ ಹಸನ್‌ಗೆ ಜೀವನಪೂರ್ತಿ ಜೈಲು ಶಿಕ್ಷೆ ವಿಧಿಸಲಾಗಿದೆ.

ಇದನ್ನೂ ಓದಿ: ಅಬು ಸಲೇಂನನ್ನು ಜೀವನಪೂರ್ತಿ ಜೈಲಲ್ಲಿ ಇರಿಸುವಂತಿಲ್ಲ, 25 ವರ್ಷದ ಬಳಿಕ ಬಿಡುಗಡೆ ಮಾಡಲೇಬೇಕೆಂದ ಸುಪ್ರೀಂ

ಇದನ್ನು ಪ್ರಶ್ನಿಸಿ ಅಬು ಸಲೇಂ ಎರಡು ವರ್ಷಗಳ ಹಿಂದೆ ಸುಪ್ರೀಂಕೋರ್ಟ್‌ ಮೊರೆ ಹೊಕ್ಕಿದ್ದ. ಇದನ್ನು ಪರಿಗಣಿಸಿದ ಕೋರ್ಟ್‌ ಮಹತ್ವದ ತೀರ್ಪನ್ನು ನೀಡಿ, ಕೇಂದ್ರ ಸರಕಾರವು ಪೋರ್ಚುಗಲ್‌ ಸರಕಾರಕ್ಕೆ ನೀಡಿರುವ ವಾಗ್ದಾನವನ್ನು ಮುರಿಯುವಂತಿಲ್ಲ. ಶಿಕ್ಷೆಯ ಅವಧಿ ಪೂರ್ಣಗೊಳ್ಳುತ್ತಿದ್ದಂತೆಯೇ ಬಿಡುಗಡೆಗೆ ಸಂಬಂಧಿಸಿದ ಪ್ರಕ್ರಿಯೆಯನ್ನು ಕೈಗೊಳ್ಳಬೇಕಾಗುತ್ತದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ವಚನ ಬದ್ಧತೆ ಮತ್ತು ಸಂವಿಧಾನದ 72ನೇ ವಿಧಿಯ ಅಡಿ ಯಾವ ರೀತಿ ಕ್ರಮ ಕೈಗೊಳ್ಳಬಹುದು ಎಂಬ ಬಗ್ಗೆ ಸರಕಾರ ರಾಷ್ಟ್ರಪತಿಗಳ ಸಲಹೆಯನ್ನು ಕೋರಬಹುದು ಎಂದು ನ್ಯಾಯಮೂರ್ತಿಗಳಾದ ಎಸ್‌.ಕೆ.ಕೌಲ್‌ ಮತ್ತು ಎಂ.ಎಂ.ಸುಂದರೇಶ್‌ ಅವರನ್ನು ಒಳಗೊಂಡ ವಿಭಾಗೀಯ ಪೀಠ ಹೇಳಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Rashid Khan: ಧೋನಿಯಂತೆ ಹೆಲಿಕಾಪ್ಟರ್ ಶಾಟ್ ಮೂಲಕ ಸಿಕ್ಸರ್ ಬಾರಿಸಿದ ರಶೀದ್​ ಖಾನ್; ವಿಡಿಯೊ ವೈರಲ್​

Rashid Khan: ದಿ ಹಂಡ್ರೆಡ್​ ಕ್ರಿಕೆಟ್​ ಲೀಗ್​ನ ಪಂದ್ಯವೊಂದರಲ್ಲಿ ರಶೀದ್​ ಖಾನ್​ ಅವರು ಟೈಮಲ್‌ ಮಿಲ್ಸ್‌ ಎಸೆತವನ್ನು ಹೆಲಿಕಾಪ್ಟರ್ ಶಾಟ್ ಮೂಲಕ ಆಫ್​ ಸೈಡ್​ ಕಡೆಗೆ ಸಿಕ್ಸರ್​ ಬಾರಿಸಿ ಮಿಂಚಿದ್ದಾರೆ.

VISTARANEWS.COM


on

Rashid Khan
Koo

ಲಂಡನ್​: ಮಹೇಂದ್ರ ಸಿಂಗ್​ ಧೋನಿ(MS Dhoni) ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿಯಾಗಿ ಹಲವು ವರ್ಷ ಕಳೆದಿದ್ದರೂ ಕೂಡ ಅವರು ಪರಿಚಯಿಸಿದ ‘ಹೆಲಿಕಾಪ್ಟರ್ ಶಾಟ್’(MS Dhoni Helicopter shot) ಮಾತ್ರ ಆಗಾಗ ಕ್ರಿಕೆಟ್​ನಲ್ಲಿ ಸದ್ದು ಮಾಡುತ್ತಿರುತ್ತದೆ. ಈ ಶಾಟ್​ ಹೊಡೆಯಲು ಅನೇಕರು ಪ್ರಯತ್ನಿಸಿದರೂ ಸಫಲರಾಗಿದ್ದು ಮಾತ್ರ ಕೆಲವರಷ್ಟೇ. ಇದೀಗ ಅಫಘಾನಿಸ್ತಾನ ತಂಡದ ಸ್ಪಿನ್​​ ಆಲ್​ರೌಂಡರ್​ ರಶೀದ್​ ಖಾನ್​(Rashid Khan) ಧೋನಿಯ ನೆಚ್ಚಿನ ಹೆಲಿಕಾಪ್ಟರ್ ಶಾಟ್ ಮೂಲಕ ಸಿಕ್ಸರ್​ ಬಾರಿಸಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

ದಿ ಹಂಡ್ರೆಡ್​ ಕ್ರಿಕೆಟ್​ ಲೀಗ್​ನ ಪಂದ್ಯವೊಂದರಲ್ಲಿ ರಶೀದ್​ ಖಾನ್​ ಅವರು ಟೈಮಲ್‌ ಮಿಲ್ಸ್‌ ಎಸೆತವನ್ನು ಹೆಲಿಕಾಪ್ಟರ್ ಶಾಟ್ ಮೂಲಕ ಆಫ್​ ಸೈಡ್​ ಕಡೆಗೆ ಸಿಕ್ಸರ್​ ಬಾರಿಸಿ ಮಿಂಚಿದ್ದಾರೆ. ರಶೀದ್​ ಸಿಕ್ಸರ್​ ಬಾರಿಸುತ್ತಿದ್ದಂತೆ ಕಾಮೆಂಟ್ರಿ ಮಾಡುತ್ತಿದ್ದವರು ಓ ಸೊಗಸಾದ ಹೆಲಿಕಾಪ್ಟರ್ ಶಾಟ್ ಎಂದು ವರ್ಣಿಸಿದ್ದಾರೆ. ಈ ಹೊಡೆತ ಧೋನಿಯಂತೆ ಪರಿಪೂರ್ಣವಾಗಿರದಿದ್ದತರೂ ಕೂಡ ಕೊಂಚ ಸಾಮ್ಯತೆ ಕಂಡುಬಂತು. ರಶೀದ್​ ಖಾನ್​ ಐಪಿಎಲ್​ನಲ್ಲಿಯೂ ಇದೇ ರೀತಿ ಹಲವು ಬಾರಿ ಹೆಲಿಕಾಪ್ಟರ್ ಶಾಟ್ ಬಾರಿಸಿದ್ದರು.

ಕೆಲ ದಿನಗಳ ಹಿಂದಷ್ಟೇ ರಶೀದ್ ಖಾನ್ ಅವರು ಟಿ20 ಕ್ರಿಕೆಟ್​ನಲ್ಲಿ ಹೊಸ ದಾಖಲೆಯೊಂದನ್ನು ಬರೆದಿದ್ದರು. ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ‘ದಿ ಹಂಡ್ರೆಡ್’ ಕ್ರಿಕೆಟ್​ ಲೀಗ್​ನಲ್ಲಿ 2 ವಿಕೆಟ್ ಕಬಳಿಸುವುದರೊಂದಿಗೆ ರಶೀದ್ ಖಾನ್ ಎಲ್ಲ ಮಾದರಿಯ ಟಿ20 ಕ್ರಿಕೆಟ್​ನಲ್ಲಿ 600 ವಿಕೆಟ್(Rashid khan 600 wickets)​ ಪೂರ್ತಿಗೊಳಿಸಿದ ವಿಶ್ವದ ಮೊದಲ ಸ್ಪಿನ್ನರ್ ಹಾಗೂ 2ನೇ ಬೌಲರ್​​ ಎನಿಸಿಕೊಂಡಿದ್ದರು.

ಇದನ್ನೂ ಓದಿ Rashid Khan : ಟಿ20 ಕ್ರಿಕೆಟ್​ನಲ್ಲಿ ವಿಕೆಟ್​ಗಳ ಹೊಸ ಮೈಲುಗಲ್ಲು ಸೃಷ್ಟಿಸಿದ ಅಫಘಾನಿಸ್ತಾನ ಬೌಲರ್ ರಶೀದ್ ಖಾನ್​

ಟಿ20 ಕ್ರಿಕೆಟ್​ನಲ್ಲಿ 600 ವಿಕೆಟ್​ ಪೂರ್ತಿಗೊಳಿಸಿದ್ದ ವಿಶ್ವ ದಾಖಲೆಯನ್ನು ಮೊದಲ ನಿರ್ಮಿಸಿದ್ದು ವೆಸ್ಟ್ ಇಂಡೀಸ್​ನ ಮಾಜಿ ಆಟಗಾರ ಡ್ವೇನ್ ಬ್ರಾವೊ. ಇದೀಗ ರಶೀದ್​ ಖಾನ್​ ಈ ದಾಖಲೆಯನ್ನು ಸರಿಗಟ್ಟಿದ್ದಾರೆ. ಅತೀ ವೇಗವಾಗಿ ಟಿ20 ಕ್ರಿಕೆಟ್​ನಲ್ಲಿ 600 ವಿಕೆಟ್ ಕಬಳಿಸಿದ ದಾಖಲೆ ರಶೀದ್ ಹೆಸರಿಗೆ ದಾಖಲಾಗಿದೆ. ಬ್ರಾವೊ 545 ಟಿ20 ಪಂದ್ಯಗಳ ಮೂಲಕ ಈ ಸಾಧನೆ ಮಾಡಿದ್ದರೆ, ರಶೀದ್​ ಖಾನ್​ ಕೇವಲ 441 ಪಂದ್ಯಗಳನ್ನಾಡಿ ಈ ಮೈಲುಗಲ್ಲು ನಿರ್ಮಿಸಿದ್ದಾರೆ.

ರಶೀದ್ ಖಾನ್ 93 ಅಂತಾರಾಷ್ಟ್ರೀಯ ಟಿ 20 ಪಂದ್ಯಗಳಲ್ಲಿ 14.14 ಸರಾಸರಿ ಮತ್ತು 6.08 ಎಕಾನಮಿ ರೇಟ್​ನಲ್ಲಿ 152 ವಿಕೆಟ್​ಗಳನ್ನು ಪಡೆದಿದ್ದಾರೆ. ಐಪಿಎಲ್​​ನಲ್ಲಿ 121 ಪಂದ್ಯಗಳಲ್ಲಿ 21.82ರ ಸರಾಸರಿಯಲ್ಲಿ 149 ವಿಕೆಟ್ ಪಡೆದಿದ್ದಾರೆ. ರಶೀದ್ 2017 ರಿಂದ 2021 ರವರೆಗೆ ಸನ್ರೈಸರ್ಸ್ ಹೈದರಾಬಾದ್ (ಎಸ್​ಆರ್​ಎಚ್​) ಪರ ಆಡಿದ್ದರು. ನಂತರ ಗುಜರಾತ್​ ಟೈಟನ್ಸ್ ಸೇರಿಕೊಂಡಿದ್ದಾರೆ.

Continue Reading

ದೇಶ

Wayanad Landslide: ‘ಪ್ರೀತಿಯ ಯೋಧರೇ…ʼ ಭಾರತೀಯ ಸೇನೆಗೆ 3ನೇ ತರಗತಿ ಬಾಲಕ ಬರೆದ ಪತ್ರದಲ್ಲೇನಿದೆ?

Wayanad Landslide: ಕೇರಳದ IMLP ಶಾಲೆಯ ಮೂರನೇ ತರಗತಿ ವಿದ್ಯಾರ್ಥಿಯಾಗಿರುವ ರಾಯನ್‌ ಮಲಯಾಳಂನಲ್ಲಿ ಈ ಪತ್ರ ಬರೆದಿದ್ದು, ಆತ್ಮೀಯ ಭಾರತೀಯ ಸೇನೆ, ನನ್ನ ಪ್ರೀತಿಯ ವಯನಾಡ್ ಭಾರಿ ಭೂಕುಸಿತದಿಂದ ಅಪ್ಪಳಿಸಿತು ಮತ್ತು ವಿನಾಶವನ್ನು ಸೃಷ್ಟಿಸಿತು. ಶಿಲಾಖಂಡರಾಶಿಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ನೀವು ರಕ್ಷಿಸುತ್ತಿರುವುದನ್ನು ನೋಡಿ ನನಗೆ ಹೆಮ್ಮೆ ಮತ್ತು ಸಂತೋಷವಾಯಿತು ಎಂದು ಬಾಲಕ ಬರೆದಿದ್ದಾನೆ.

VISTARANEWS.COM


on

wayanad Landslide
Koo

ವಯನಾಡ್‌: ಕೇರಳದ ವಯನಾಡಿನ ಭೂಕುಸಿತ(Wayanad Landslide)ಕ್ಕೆ ಬಲಿಯಾದವರ ಸಂಖ್ಯೆ ಕ್ಷಣ ಕ್ಷಣಕ್ಕೂ ಏರಿಎ ಆಗುತ್ತಲೇ ಇದ್ದು, 360ರ ಗಡಿ ದಾಟಿದೆ. ಈ ನಡುವೆ ರಕ್ಷಣಾ ಕಾರ್ಯಾಚರಣೆ(Rescue Operation)ಯೂ ಅಷ್ಟೇ ಬಿರುಸಿನಲ್ಲಿ ಸಾಗುತ್ತಿದೆ. ಭಾರತೀಯ ಸೇನೆ(Indian Army) ಪ್ರಾಣವನ್ನು ಪಣಕ್ಕೀಡು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಈ ನಡುವೆ ಭಾರತೀಯ ಸೇನೆಯ ಅವಿರತ ಶ್ರಮವನ್ನು ಮೆಚ್ಚಿ ಮೂರನೇ ತರಗತಿ ಬಾಲಕನೋರ್ವ ಭಾರತೀಯ ಸೇನೆಗೆ ಪತ್ರ ಬರೆದಿದ್ದಾನೆ. ಈ ಹೃದಯಸ್ಪರ್ಶಿ ಪತ್ರ ಇದೀಗ ಎಲ್ಲೆಡೆ ವೈರಲ್‌ ಆಗುತ್ತಿದೆ.

ಕೇರಳದ IMLP ಶಾಲೆಯ ಮೂರನೇ ತರಗತಿ ವಿದ್ಯಾರ್ಥಿಯಾಗಿರುವ ರಾಯನ್‌ ಮಲಯಾಳಂನಲ್ಲಿ ಈ ಪತ್ರ ಬರೆದಿದ್ದು, ಆತ್ಮೀಯ ಭಾರತೀಯ ಸೇನೆ, ನನ್ನ ಪ್ರೀತಿಯ ವಯನಾಡ್ ಭಾರಿ ಭೂಕುಸಿತದಿಂದ ಅಪ್ಪಳಿಸಿತು ಮತ್ತು ವಿನಾಶವನ್ನು ಸೃಷ್ಟಿಸಿತು. ಶಿಲಾಖಂಡರಾಶಿಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ನೀವು ರಕ್ಷಿಸುತ್ತಿರುವುದನ್ನು ನೋಡಿ ನನಗೆ ಹೆಮ್ಮೆ ಮತ್ತು ಸಂತೋಷವಾಯಿತು. ನೀವು ಬಿಸ್ಕತ್ತುಗಳನ್ನು ಸೇವಿಸಿ ನಿಮ್ಮ ಹಸಿವು ನೀಗಿಸಿಕೊಂಡು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವುದನ್ನು ನಾನು ವಿಡಿಯೋದಲ್ಲಿ ನೋಡಿದ್ದೇನೆ. ಜನರ ರಕ್ಷಣೆಗಾಗಿ ಸೇತುವೆಯನ್ನು ನಿರ್ಮಿಸುತ್ತಿದ್ದೀರಿ. ಆ ದೃಶ್ಯ ನನ್ನ ಮನಸ್ಸನ್ನು ನಾಟಿದೆ. ಮುಂದೊಂದು ದಿನ ನಾನು ಭಾರತೀಯ ಸೇನೆಯನ್ನು ಸೇರಲು ಮತ್ತು ನನ್ನ ರಾಷ್ಟ್ರವನ್ನು ರಕ್ಷಿಸಲು ಬಯಸುತ್ತೇನೆ ಎಂದು ಬರೆದಿದ್ದಾನೆ.

ಬಾಲಕನ ಪತ್ರಕ್ಕೆ ಸೇನೆ ಪ್ರತಿಕ್ರಿಯೆ

ಬಾಲಕನ ಹೃದಯಸ್ಪರ್ಶಿ ಪತ್ರಕ್ಕೆ ಭಾರತೀಯ ಸೇನೆ ಪ್ರತಿಕ್ರಿಯಿಸಿದ್ದು, “ಯುವ ಯೋಧನಿಗೆ” ಧನ್ಯವಾದಗಳು ಎಂದು ಬರೆದಿದೆ. ನಿಮ್ಮ ಹೃತ್ಪೂರ್ವಕ ಮಾತುಗಳು ನಮ್ಮನ್ನು ಆಳವಾಗಿ ಮುಟ್ಟಿವೆ. ಪ್ರತಿಕೂಲ ಸಮಯದಲ್ಲಿ, ನಾವು ಭರವಸೆಯ ದಾರಿದೀಪವಾಗಲು ಗುರಿ ಹೊಂದಿದ್ದೇವೆ ಮತ್ತು ನಿಮ್ಮ ಪತ್ರವು ಈ ಧ್ಯೇಯವನ್ನು ಪುನರುಚ್ಚರಿಸುತ್ತದೆ. ನೀವು ಸಮವಸ್ತ್ರವನ್ನು ಧರಿಸುವ ದಿನಕ್ಕಾಗಿ ನಾವು ಕಾತುರದಿಂದ ಕಾಯುತ್ತಿದ್ದೇವೆ ಮತ್ತು ನಿಮ್ಮ ಧೈರ್ಯ ಮತ್ತು ಸ್ಫೂರ್ತಿಗಾಗಿ ನಾವು ಒಟ್ಟಾಗಿ ನಮ್ಮ ರಾಷ್ಟ್ರವನ್ನು ಹೆಮ್ಮೆಪಡುವಂತೆ ಮಾಡುತ್ತೇವೆ ಎಂದು ಪ್ರತಿಕ್ರಿಯಿಸಿದೆ. ಇದೀಗ ಈ ಪತ್ರಗಳೂ ಸಾಮಾಜಿಕ ಜಾಲತಾಣದಲ್ಲಿ ಬಹಳಷ್ಟು ವೈರಲ್‌ ಆಗುತ್ತಿದೆ.

ಇದನ್ನೂ ಓದಿ: Wayanad landslide: ವಯನಾಡ್‌ ಭೂಕುಸಿತ ಸಂತ್ರಸ್ತರಿಗೆ 100 ಮನೆ ನಿರ್ಮಾಣ: ಕೇರಳ ಸಿಎಂಗೆ ಸಿದ್ದರಾಮಯ್ಯ ಭರವಸೆ

Continue Reading

ದೇಶ

ಪತ್ನಿ ಇದ್ದರೂ ಮಹಿಳಾ ಇನ್ಸ್‌ಪೆಕ್ಟರ್‌ ಜತೆ ವ್ಯಕ್ತಿ ಸರಸ; ರೆಡ್‌ ಹ್ಯಾಂಡ್‌ ಆಗಿ ಹಿಡಿದ ಪತ್ನಿ ಮಾಡಿದ್ದೇನು? Video ಇದೆ

Uttar Pradesh: ರೆಸ್ಟ್‌ ಹೌಸ್‌ನಿಂದ ಇನ್ಸ್‌ಪೆಕ್ಟರ್‌ನನ್ನು ಹೊರಗೆ ಎಳೆದ ಅವರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಇನ್ಸ್‌ಪೆಕ್ಟರ್‌ನ ಬನಿಯನ್‌ ಹರಿದು, ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿದ್ದಾರೆ. ಇನ್ನು, ಇನ್ಸ್‌ಪೆಕ್ಟರ್‌ ಪತ್ನಿಯೂ ಅಷ್ಟೇ, ಮಹಿಳಾ ಇನ್ಸ್‌ಪೆಕ್ಟರ್‌ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

VISTARANEWS.COM


on

Uttar Pradesh
Koo

ಲಖನೌ: ಮನೆಯಲ್ಲಿ ಮುದ್ದಾದ ಮಡದಿ ಇದ್ದರೂ ಹೊರಗೆ ಅಕ್ರಮ ಸಂಬಂಧ (Extra Marital Affair) ಇಟ್ಟುಕೊಳ್ಳುವ ಚಾಳಿ ತುಂಬ ಜನರಿಗೆ ಇರುತ್ತದೆ. ಇನ್ನು, ವ್ಯಕ್ತಿಗೆ ಮದುವೆಯಾಗಿದೆ ಎಂಬುದು ಗೊತ್ತಿದ್ದರೂ ಆತನ ಬಲೆಗೆ ಬೀಳುವ ಹೆಣ್ಣುಮಕ್ಕಳು ಇರುತ್ತಾರೆ ಇಲ್ಲವೇ ಹೆಣ್ಣುಮಕ್ಕಳೇ ಆತನನ್ನು ಬಲೆಗೆ ಬೀಳಿಸಿಕೊಳ್ಳುತ್ತಾರೆ. ಇಂತಹ ಪ್ರಕರಣಗಳಿಗೆ ನಿದರ್ಶನ ಎಂಬಂತೆ, ಉತ್ತರ ಪ್ರದೇಶದಲ್ಲಿ (Uttar Pradesh) ವ್ಯಕ್ತಿಯೊಬ್ಬರು ಮನೆಯಲ್ಲಿ ಪತ್ನಿ ಇದ್ದರೂ, ಸರ್ಕಾರಿ ಗೆಸ್ಟ್‌ಹೌಸ್‌ನಲ್ಲಿ ಮಹಿಳಾ ಇನ್ಸ್‌ಪೆಕ್ಟರ್‌ ಜತೆ ಕಾಲ ಕಳೆಯುವಾಗ ಸಿಕ್ಕಿಬಿದ್ದಿದ್ದಾರೆ. ಪತಿ ಹಾಗೂ ಮಹಿಳಾ ಇನ್ಸ್‌ಪೆಕ್ಟರ್‌ ಅವರನ್ನು ರೆಡ್‌ ಹ್ಯಾಂಡ್‌ ಆಗಿ ಹಿಡಿದ ಪತ್ನಿಯು ತಕ್ಕ ಶಾಸ್ತಿಯನ್ನೇ ಮಾಡಿದ್ದಾರೆ. ಈ ವಿಡಿಯೊ (Viral Video) ಈಗ ಭಾರಿ ವೈರಲ್‌ ಆಗಿದೆ.

ಹೌದು, ಪೊಲೀಸ್‌ ಇನ್ಸ್‌ಪೆಕ್ಟರ್‌ ಆಗಿರುವ ವ್ಯಕ್ತಿಯು ಮದುವೆಯಾಗಿದ್ದರೂ, ಮನೆಯಲ್ಲಿ ಪತ್ನಿ ಇದ್ದರೂ, ಆಗ್ರಾದಲ್ಲಿರುವ ಪೊಲೀಸ್‌ ರೆಸ್ಟ್‌ ಹೌಸ್‌ನಲ್ಲಿ ಮತ್ತೊಬ್ಬ ಮಹಿಳಾ ಇನ್ಸ್‌ಪೆಕ್ಟರ್‌ ಜತೆ ಕಾಲ ಕಳೆಯುತ್ತಿದ್ದರು. ಈ ವಿಷಯ ತಿಳಿದ ವ್ಯಕ್ತಿಯ ಪತ್ನಿಯು ನೇರವಾಗಿ ಸರ್ಕಾರಿ ವಿಶ್ರಾಂತಿ ಗೃಹಕ್ಕೆ ಆಗಮಿಸಿದ್ದಾರೆ. ಅಲ್ಲಿ, ಪೊಲೀಸ್‌ ಇನ್ಸ್‌ಪೆಕ್ಟರ್‌ ಹಾಗೂ ಮಹಿಳಾ ಇನ್ಸ್‌ಪೆಕ್ಟರ್‌ ಒಟ್ಟಿಗೆ ಇರುವುದನ್ನು ಕಂಡು ಗಲಾಟೆ ಮಾಡಿದ್ದಾರೆ. ಏನಿದು ಹುಡುಗಾಟ ಎಂದು ಜೋರಾಗಿ ಪ್ರಶ್ನಿಸಿದ್ದಾರೆ.

ಇದೇ ವೇಳೆ ಇನ್ಸ್‌ಪೆಕ್ಟರ್‌ ಪತ್ನಿಯ ಸಂಬಂಧಿಕರು ಸ್ಥಳಕ್ಕೆ ಆಗಮಿಸಿದ್ದಾರೆ. ರೆಸ್ಟ್‌ ಹೌಸ್‌ನಿಂದ ಇನ್ಸ್‌ಪೆಕ್ಟರ್‌ನನ್ನು ಹೊರಗೆ ಎಳೆದ ಅವರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಇನ್ಸ್‌ಪೆಕ್ಟರ್‌ನ ಬನಿಯನ್‌ ಹರಿದು, ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿದ್ದಾರೆ. ಇನ್ನು, ಇನ್ಸ್‌ಪೆಕ್ಟರ್‌ ಪತ್ನಿಯೂ ಅಷ್ಟೇ, ಮಹಿಳಾ ಇನ್ಸ್‌ಪೆಕ್ಟರ್‌ ಮೇಲೆ ಹಲ್ಲೆ ನಡೆಸಿದ್ದಾರೆ. ಅವರಿಗೂ ಬೈದಿದ್ದಾರೆ, ರೆಸ್ಟ್‌ ಆವರಣದಲ್ಲಿಯೇ ಅವರ ಕೈ ಹಿಡಿದು ಎಳೆದಾಡಿದ್ದಾರೆ.

ಮೂಲಗಳ ಪ್ರಕಾರ, ಇನ್ಸ್‌ಪೆಕ್ಟರ್‌ ಆಗಿರುವ ಪತಿಯು ಮಹಿಳಾ ಇನ್ಸ್‌ಪೆಕ್ಟರ್‌ ಜತೆ ಅಕ್ರಮ ಸಂಬಂಧ ಹೊಂದಿರುವ ಕುರಿತು ಮಹಿಳೆಗೆ ಅನುಮಾನ ಬಂದಿತ್ತು. ಇದೆಲ್ಲ ಸರಿ ಬರುವುದಿಲ್ಲ ಎಂಬುದಾಗಿ ಅವರು ಪತಿಯ ಮನವೊಲಿಸಲು ಯತ್ನಿಸಿದ್ದರು. ಎಷ್ಟು ಹೇಳಿದರೂ, ಮನೆ, ಕುಟುಂಬವನ್ನು ನಿರ್ಲಕ್ಷಿಸಿ, ಮಹಿಳಾ ಇನ್ಸ್‌ಪೆಕ್ಟರ್‌ ಜತೆ ಸುತ್ತಾಡುವುದು, ರೆಸ್ಟ್‌ ಹೌಸ್‌ಗಳಲ್ಲಿ ಕಾಲ ಕಳೆಯುವುದನ್ನು ಕಂಡು ಮಹಿಳೆಗೆ ರೋಸಿಹೋಗಿತ್ತು. ಕೊನೆಗೆ, ಒಂದು ದಿನ ರೆಡ್‌ ಹ್ಯಾಂಡ್‌ ಆಗಿ ಹಿಡಿದು, ಸರಿಯಾದ ಪಾಠ ಕಲಿಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Murder case : ಮನೆಯೊಳಗೆ ನುಗ್ಗಿ ಚಾಕುವಿನಿಂದ ಇರಿದು ಪತ್ನಿಯನ್ನು ಕೊಂದ ಕಿರಾತಕ

Continue Reading

ದೇಶ

Ayodhya: ಅಯೋಧ್ಯೆಗೆ ವಿಮಾನ ತಲುಪುತ್ತಲೇ ಭೂಮಿಗೆ ನಮಸ್ಕರಿಸಿದ ಗಗನಸಖಿ; ಭುಗಿಲೆದ್ದಿತು ವಿವಾದ!

Ayodhya: ಇಂಡಿಗೋ ವಿಮಾನದಲ್ಲಿ ಗಗನಸಖಿಯಾಗಿರುವ ಆಕಾಂಕ್ಷಾ ಪಾರ್ಮರ್‌ ಅವರು ವಿಮಾನ ಇಳಿಯುತ್ತಲೇ ಡಾಂಬರ್‌ ಇದ್ದರೂ ಭೂಮಿಗೆ ನಮಸ್ಕಾರ ಮಾಡಿದ್ದಾರೆ. ಇದಾದ ಬಳಿಕ ರಾಮಮಂದಿರದ ಕಡೆ ಮುಖ ಮಾಡಿ ನಮಸ್ಕಾರ ಮಾಡಿದ್ದಾರೆ. ಈ ವಿಡಿಯೊವನ್ನು ಅವರೇ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

VISTARANEWS.COM


on

Ayodhya
Koo

ಅಯೋಧ್ಯೆ: ರಾಮಮಂದಿರ ನಿರ್ಮಾಣವಾದ ಬಳಿಕ ಅಯೋಧ್ಯೆಗೆ ವಿಶೇಷ ವಿಮಾನದ ವ್ಯವಸ್ಥೆ ಮಾಡಲಾಗಿದ್ದು, ಸಾವಿರಾರು ಜನ ವಿಮಾನಗಳಲ್ಲಿ ಪ್ರಯಾಣಿಸಿ ಅಯೋಧ್ಯೆ ತಲುಪುತ್ತಿದ್ದಾರೆ. ಶ್ರೀರಾಮನ ದರ್ಶನ ಪಡೆಯಲು ಜನ ಭಕ್ತಿ-ಭಾವದಿಂದ ಅಯೋಧ್ಯೆಗೆ ಆಗಮಿಸುತ್ತಾರೆ. ಜನಸಾಮಾನ್ಯರು ಮಾತ್ರವಲ್ಲ, ವಿಮಾನದ ಸಿಬ್ಬಂದಿಗೂ ರಾಮಮಂದಿರ, ಅಯೋಧ್ಯೆಯ ಮೇಲೆ ವಿಶೇಷ ಗೌರವ ಇದೆ. ಇದಕ್ಕೆ ನಿದರ್ಶನ ಎಂಬಂತೆ, ಆಕಾಂಕ್ಷಾ ಪಾರ್ಮರ್‌ ಎಂಬ ಇಂಡಿಗೋ ವಿಮಾನದ ಗಗನಸಖಿಯು ವಿಮಾನ ಅಯೋಧ್ಯೆ ತಲುಪುತ್ತಲೇ, ಕೆಳಗೆ ಇಳಿದು ನೆಲಕ್ಕೆ ನಮಸ್ಕಾರ ಮಾಡಿದ್ದಾರೆ. ರಾಮನ ಕಾರಣಕ್ಕಾಗಿ ಅಯೋಧ್ಯೆ ಪುಣ್ಯಭೂಮಿ ಎಂದು ಅವರು ಭಕ್ತಿ ಪ್ರದರ್ಶಿಸಿದ್ದಾರೆ. ಈ ವಿಡಿಯೊ ಜಾಲತಾಣಗಳಲ್ಲಿ ವೈರಲ್‌ ಆಗುತ್ತಲೇ ಪರ-ವಿರೋಧ ಚರ್ಚೆಯಾಗುತ್ತಿದೆ.

ಇಂಡಿಗೋ ವಿಮಾನದಲ್ಲಿ ಗಗನಸಖಿಯಾಗಿರುವ ಆಕಾಂಕ್ಷಾ ಪಾರ್ಮರ್‌ ಅವರು ವಿಮಾನ ಇಳಿಯುತ್ತಲೇ ಡಾಂಬರ್‌ ಇದ್ದರೂ ಭೂಮಿಗೆ ನಮಸ್ಕಾರ ಮಾಡಿದ್ದಾರೆ. ಇದಾದ ಬಳಿಕ ರಾಮಮಂದಿರದ ಕಡೆ ಮುಖ ಮಾಡಿ ನಮಸ್ಕಾರ ಮಾಡಿದ್ದಾರೆ. ಈ ವಿಡಿಯೊವನ್ನು ಅವರೇ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. “ಅಯೋಧ್ಯೆಯ ಭೂಮಿಗೆ ನಮಸ್ಕಾರ ಮಾಡುವುದು ಹೆಮ್ಮೆ ಅನಿಸುತ್ತಿದೆ. ಹಿಂದು ಆಗಿರುವುದಕ್ಕೆ ನನಗೆ ಹೆಮ್ಮೆ ಇದೆ. ಜೈ ಶ್ರೀರಾಮ್”‌ ಎಂಬುದಾಗಿ ಅವರು ಬರೆದುಕೊಂಡಿದ್ದಾರೆ.

ವಿಡಿಯೊ ವೈರಲ್‌ ಆಗುತ್ತಲೇ ಆಕಾಂಕ್ಷಾ ಅವರ ವಿಡಿಯೊವನ್ನು ಉದ್ಯಮಿ ಮೋಹನ್‌ದಾಸ್‌ ಪೈ ಹಂಚಿಕೊಂಡಿದ್ದಾರೆ. ಅಲ್ಲದೆ, ಆಕಾಂಕ್ಷಾ ಹಾಗೂ ಇಂಡಿಗೋ ಬಗ್ಗೆ ಹೆಮ್ಮೆ ಎನಿಸುತ್ತದೆ. ಭಗವಾನ್‌ ಶ್ರೀರಾಮನು 500 ವರ್ಷಗಳ ಬಳಿಕ ಅಯೋಧ್ಯೆಗೆ ಬಂದಿದ್ದು, ಅಂತಹ ರಾಮನನ್ನು ಆರಾಧಿಸುವ ಉದ್ಯೋಗಿಯನ್ನು ಹೊಂದಿರುವುದಕ್ಕೆ ಸಂಸ್ಥೆಯು ಹೆಮ್ಮೆಪಡಬೇಕು” ಎಂಬುದಾಗಿ ಮೋಹನ್‌ದಾಸ್‌ ಪೈ ಅವರು ಒಕ್ಕಣೆ ಬರೆದುಕೊಂಡಿದ್ದಾರೆ.

ವಿವಾದ ಉಂಟಾಗಿದ್ದೇಕೆ?

ಇಂಡಿಗೋ ವಿಮಾನದ ಸಿಬ್ಬಂದಿಯು ಅಯೋಧ್ಯೆ ಭೂಮಿಗೆ ನಮಸ್ಕಾರ ಮಾಡಿರುವ ವಿಡಿಯೊ ಹಂಚಿಕೊಂಡು, ಮೆಚ್ಚುಗೆಯ ಮಾತುಗಳನ್ನು ಆಡಿದ ಮೋಹನ್‌ದಾಸ್‌ ಪೈ ಹಾಗೂ ಗಗನಸಖಿ ವಿರುದ್ಧ ಜನ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಇದೆಲ್ಲ ಗಿಮಿಕ್‌, ರೀಲ್ಸ್‌ಗಾಗಿ ಇಂತಹ ವಿಡಿಯೊ ಮಾಡುತ್ತಾರೆ, ಮೊದಲೇ ಪ್ಲಾನ್‌ ಮಾಡಿ, ರೆಕಾರ್ಡ್‌ ಮಾಡಿದ ವಿಡಿಯೊ ಇದು, ಇಂತಹ ನಾಟಕದ ವಿಡಿಯೊವನ್ನು ಮೋಹನ್‌ ದಾಸ್‌ ಪೈ ಬೆಂಬಲಿಸಬಾರದು, ಅಷ್ಟೊಂದು ಭಕ್ತಿ ಇದ್ದರೆ ದೇವಾಲಯಕ್ಕೆ ಹೋಗಲಿ, ಗಗನಸಖಿಯಾದವರು ಹೇಗೆ ವರ್ತಿಸಬೇಕು ಎಂಬುದು ಮೊದಲು ಗೊತ್ತಿರಬೇಕು” ಎಂಬುದು ಸೇರಿ ಹತ್ತಾರು ರೀತಿಯಲ್ಲಿ ಜನ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Ayodhya Ram Mandir : ರಾಮಮಂದಿರದ ಚಾವಣಿ ಸೋರುತ್ತಿಲ್ಲ; ನಿರ್ಮಾಣ ಸಮಿತಿ ಸ್ಪಷ್ಟನೆ

Continue Reading
Advertisement
ಕರ್ನಾಟಕ4 mins ago

Officer Dismissed: ಸುಳ್ಳು ದಾಖಲೆ ನೀಡಿ ನೇಮಕ; ಸಹಾಯಕ ತೋಟಗಾರಿಕೆ ಅಧಿಕಾರಿ ವಜಾ

Dhruva Sarja martin trailer Out
ಸ್ಯಾಂಡಲ್ ವುಡ್6 mins ago

Dhruva Sarja : ʻಮಾರ್ಟಿನ್’ ಟ್ರೈಲರ್ ಬಿಡುಗಡೆ: ಧ್ರುವ ಸರ್ಜಾ ಅಭಿಮಾನಿಗಳ ಅಬ್ಬರ ಬಲು ಜೋರು!

Drowned in water
ಬೆಳಗಾವಿ11 mins ago

Drowned in water : ಮಾರ್ಕಂಡೇಯ ನದಿಗೆ ಆಯತಪ್ಪಿ ಬಿದ್ದು ಕಣ್ಮರೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

PSI Parashuram Case
ಕರ್ನಾಟಕ51 mins ago

PSI Parashuram Case: ಸರ್ಕಾರಿ ಯೋಜನೆ ಹಣ ಬಿಡುಗಡೆಗೂ ಕಮಿಷನ್‌ಗೆ ಬೇಡಿಕೆ; ಎ2 ಪಂಪನಗೌಡ ವಿರುದ್ಧ ಮತ್ತೊಂದು ಆರೋಪ

Wayanad Landslide
ದೇಶ1 hour ago

Wayanad Landslide: ವಯನಾಡಿಗಾಗಿ ಮಿಡಿಯಿತು ವಿದೇಶಿಗರ ಮನ; ಸಂತ್ರಸ್ತರ ನೆರವಿಗೆ ಧಾವಿಸಿದ ಇಂಗ್ಲೆಂಡ್‌ನ ವಿದ್ಯಾರ್ಥಿನಿಯರು

Vastu Tips
ಧಾರ್ಮಿಕ1 hour ago

Vastu Tips: ಮನೆ ಸಂತೋಷದ ತಾಣವಾಗಬೇಕೆಂದರೆ ಮಲಗುವ ಕೋಣೆ ಹೀಗಿರಲಿ

Filmfare South 2024 Daredevil Mustafa is the best film, Rakshit Shetty is the best actor
ಸ್ಯಾಂಡಲ್ ವುಡ್1 hour ago

Filmfare South 2024: ಫಿಲ್ಮ್‌ಫೇರ್ ಅವಾರ್ಡ್ಸ್ ಸೌತ್; `ಡೇರ್​ಡೆವಿಲ್ ಮುಸ್ತಫಾ’ ಬೆಸ್ಟ್‌ ಫಿಲ್ಮ್‌, ರಕ್ಷಿತ್ ಶೆಟ್ಟಿ ಅತ್ಯುತ್ತಮ ನಟ!

assault case
ಬೆಳಗಾವಿ1 hour ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

IPL 2025
ಕ್ರೀಡೆ1 hour ago

IPL 2025: ಮುಂಬೈ ತಂಡದಿಂದ ಪಾಂಡ್ಯಗೆ ಗೇಟ್​ಪಾಸ್​; ಸೂರ್ಯಕುಮಾರ್​ಗೆ ನಾಯಕತ್ವ?

Megha Shetty operation london cafe bigg surprise
ಸ್ಯಾಂಡಲ್ ವುಡ್2 hours ago

Megha Shetty: ಮೇಘಾ ಶೆಟ್ಟಿ ಬರ್ತ್‌ಡೇಗೆ ಸರ್‌ಪ್ರೈಸ್‌ ಕೊಟ್ಟ `ಆಪರೇಷನ್ ಲಂಡನ್ ಕೆಫೆ’ ತಂಡ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ1 hour ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 day ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ5 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ5 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ6 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ6 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌