Site icon Vistara News

Boat Capsizes: ಜಲಾವೃತ ಸೇತುವೆಗೆ ದೋಣಿ ಡಿಕ್ಕಿ; ಶಾಕಿಂಗ್‌ ವಿಡಿಯೋ ವೈರಲ್‌

Boat Capsize

ಬ್ರೆಜಿಲ್‌: ಭೀಕರ ಪ್ರವಾಹದ ರಭಸಕ್ಕೆ ದೋಣಿಯೊಂದು ಮಗುಚಿರುವ ಘಟನೆ (Boat Capsizes) ಬ್ರೆಜಿಲ್‌(Brazil)ನಲ್ಲಿ ನಡೆದಿದೆ. ಭಾರೀ ಮಳೆಯಿಂದ ಪ್ರವಾಹ ಸ್ಥಿತಿ(Flood situation) ಎದುರಿಸುತ್ತಿರುವ ಬ್ರೆಜಿಲ್‌ನಲ್ಲಿ ನೂರಾರು ಜನರನ್ನು ಹೊತ್ತು ಸಾಗುತ್ತಿದ್ದ ದೋಣಿಯೊಂದು ಜಲಾವೃತಗೊಂಡಿದ್ದ ಸೇತುವೆಯಿಂದ ಕೆಳಗೆ ಬಿದ್ದಿದೆ. ಪರಿಣಾಮವಾಗಿ ಮಳೆಯಿಂದಾಗಿ ಸಾವನ್ನಪ್ಪಿರುವವರ ಸಂಖ್ಯೆ 56ಕ್ಕೆ ಏರಿಕೆಯಾಗಿದ್ದು, 74 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು 67 ಮಂದಿ ಕಣ್ಮರೆಯಾಗಿದ್ದಾರೆ ಬ್ರೆಜಿಲ್‌ ಅಧಿಕಾರಿಗಳು ಹೇಳಿದ್ದಾರೆ. ಇನ್ನು ಈ ಭೀಕರ ದುರ್ಘಟನೆ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಫುಲ್‌ ವೈರಲ್‌ ಆಗುತ್ತಿದೆ.

ಬ್ರೆಜಿಲ್‌ನ ರಿಯೊ ಗ್ರಾಂಡೆ ಡೊ ಸುಲ್ ನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಪ್ರವಾಹಕ್ಕೆ ತುತ್ತಾಗಿ ಒಂದೇ ಪ್ರದೇಶದಲ್ಲಿ ಸಿಲುಕಿಕೊಂಡಿದ್ದ ಸಾವಿರಾರು ಜನರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರ ಮಾಡಲಾಗುತ್ತಿತ್ತು. ಈ ವೇಳೆ ಒಂದು ದೋಣಿ ಮುಗುಚಿದೆ ಎನ್ನಲಾಗಿದೆ. ಜನರನ್ನು ಹೊತ್ತು ಸಾಗುತ್ತಿದ್ದ ದೋಣಿ ಜಲಾವೃತಗೊಂಡಿದ್ದ ಸೇತುವೆಗೆ ಡಿಕ್ಕಿ ಹೊಡೆದಿದ್ದು, ಬಳಿಕ ಮಗುಚಿ ಬೀಳುತ್ತಿರುವ ಭಯಾನಕ ದೃಶ್ಯವನ್ನು ವೈರಲ್‌ ಆಗಿರುವ ವಿಡಿಯೋದಲ್ಲಿ ಕಾಣಬಹುದಾಗಿದೆ. ಬ್ರೆಜಿಲ್‌ನಲ್ಲಿ ಕಳೆದ ಅನೇಕ ದಿನಗಳಿಂದ ಎಡೆಬಿಡದೇ ಮಳೆಯಾಗುತ್ತಿದ್ದು, ಭೂಕುಸಿತ, ಪ್ರವಾಹಕ್ಕೆ ಸಿಲುಕಿ ಜನ ತತ್ತರಿಸಿದ್ದಾರೆ.

ಇನ್ನು ನಾಲ್ಕು ತಿಂಗಳ ಹಿಂದೆ ಇಂತಹದ್ದೇ ಒಂದು ದುರಂತ ನಡೆದಿತ್ತು. ಗುಜರಾತ್‌ನ ವಡೋದಾರದ ಹರಿಣಿ ಸರೋವರದಲ್ಲಿ ಬೋಟ್ ಮಗುಚಿ 13 ಶಾಲಾ ಮಕ್ಕಳು ಹಾಗೂ ಇಬ್ಬರು ಶಿಕ್ಷಕರು ಮೃತಪಟ್ಟ ಘಟನೆ ನಡೆದಿತ್ತು.

ಇದನ್ನೂ ಓದಿ:Prajwal Revanna Case: ವಿದೇಶದಿಂದ ಮಧ್ಯಾಹ್ನ 3 ಗಂಟೆಗೆ ಪ್ರಜ್ವಲ್‌ ರೇವಣ್ಣ ಆಗಮನ? ಬಂದ ಕೂಡಲೇ ಅರೆಸ್ಟ್!

ಕಳೆದ ವಾರ ಕಾರವಾರದಲ್ಲೂ ಅರಬ್ಬೀ ಸಮುದ್ರದಲ್ಲಿ ಭಾರಿ ಗಾಳಿ ಮಳೆಯಿಂದಾಗಿ ಒಂದು ಮೀನುಗಾರಿಕಾ ಬೋಟ್ ಮುಳುಗಡೆಯಾಗಿದ್ದು, ಬೋಟ್‌ನಲ್ಲಿದ್ದ 4 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಹಳ ವೈರಲ್‌ ಆಗಿತ್ತು. ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮಾವಿನಕುರ್ವೆ ಮೀನುಗಾರಿಕಾ ಬಂದರು ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮಹಾದೇವ ಖಾರ್ವಿ ಎಂಬವರ ಮಾಲಕತ್ವದ ಓಂ ಮಹಾಗಣಪತಿ ಹೆಸರಿನ ಬೋಟ್ ಮುಳುಗಡೆಯಾಗಿತ್ತು. ಬೆಳಿಗ್ಗೆ 5 ಗಂಟೆಯ ವೇಳೆಗೆ 4 ಮಂದಿ ಮೀನುಗಾರರು ಈ ಬೋಟ್‌ನಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಅರಬ್ಬೀ ಸಮದ್ರದಲ್ಲಿ ಕಾಣಿಸಿಕೊಂಡ ಭಾರೀ ಗಾಳಿ ಮಳೆಗೆ ಬೋಟ್ ಪಲ್ಟಿಯಾಗಿದೆ. ಸ್ಥಳದಲ್ಲಿದ್ದ ಇನ್ನೊಂದು ಬೋಟ್‌ನವರಿಂದ ಮೀನುಗಾರರ ರಕ್ಷಣೆ ಮಾಡಲಾಗಿದೆ. ಬೋಟ್ ದುರ್ಘಟನೆಯಿಂದ ಮಾಲೀಕರಿಗೆ ಲಕ್ಷಾಂತರ ರೂಪಾಯಿ ಹಾನಿಯಾಗಿತ್ತು.

Exit mobile version