Viral Video | ರೈಲು ಪ್ರಯಾಣದ ವೇಳೆ ಬಾಲಕನ ಅದ್ಭುತ ಗಾಯನ; ಮಂತ್ರಮುಗ್ಧರಾದ ಪ್ರಯಾಣಿಕರು - Vistara News

ವೈರಲ್ ನ್ಯೂಸ್

Viral Video | ರೈಲು ಪ್ರಯಾಣದ ವೇಳೆ ಬಾಲಕನ ಅದ್ಭುತ ಗಾಯನ; ಮಂತ್ರಮುಗ್ಧರಾದ ಪ್ರಯಾಣಿಕರು

ಕುಟುಂಬದವರೊಂದಿಗೆ ರೈಲಿನಲ್ಲಿ ಹೋಗುತ್ತಿದ್ದ ಬಾಲಕ ಅದ್ಭುತವಾಗಿ ಶಾಸ್ತ್ರೀಯ ಸಂಗೀತ ಹಾಡಿದ್ದಾನೆ. ಈತ ಹಾಡಲು ಶುರು ಮಾಡುತ್ತಿದ್ದಂತೆ ಬೇರೆ ಬೋಗಿಗಳ ಪ್ರಯಾಣಿಕರೂ ಇಲ್ಲಿಗೇ ಬಂದು ಕುಳಿತಿದ್ದಾರೆ. ಕೆಲವರು ವಿಡಿಯೊ ಮಾಡಿಕೊಂಡಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಎಲ್ಲಿ ಸಂಗೀತ ನಾದ ಹೊಮ್ಮಿಸುತ್ತಿರುತ್ತದೆಯೋ ಅಲ್ಲಿ ಮಾತು ಮೌನವಾಗುತ್ತದೆ. ಜನ ಮಂತ್ರಮುಗ್ಧರಾಗುತ್ತಾರೆ. ಈ 8 ವರ್ಷದ ಬಾಲಕ ರೈಲಿನಲ್ಲಿ ಅದ್ಭುತವಾಗಿ ಹಾಡುವ ಮೂಲಕ ಪ್ರಯಾಣಿಕರನ್ನು ಮೌನಕ್ಕೆ ಜಾರಿಸಿದ್ದಾನೆ. ಮುದ್ದು ಹುಡುಗ ರಾಗ-ಭಾವ ತುಂಬಿಕೊಂಡು ಶಾಸ್ತ್ರೀಯ ಸಂಗೀತ ಹಾಡುತ್ತಿದ್ದರೆ, ಆ ಪ್ರಯಾಣಿಕರೆಲ್ಲ ಭಕ್ತಿಯಿಂದ ಕೇಳುತ್ತಿದ್ದರು. ಹೀಗೊಂದು ದೃಶ್ಯ ಕಂಡುಬಂದಿದ್ದು ಚೆನ್ನೈನಿಂದ ಕಾಶಿಗೆ ಹೋಗುತ್ತಿರುವ ರೈಲಿನಲ್ಲಿ. ಅದರ ಅಪ್ಪರ್ ಬರ್ತ್ ನಲ್ಲಿ ಕುಟುಂಬದವರ ಜತೆ ಪ್ರಯಾಣ ಮಾಡುತ್ತಿದ್ದ ಬಾಲಕ ಅತ್ಯಂತ ಸುಂದರವಾಗಿ ಹಾಡಿದ್ದಾನೆ. ಇವನು ಚೆನ್ನೈ ಮೂಲದ ಸೂರ್ಯನಾರಾಯಣನ್​ ಎಂಬ ಬಾಲಕ ಎಂದು ವಿಡಿಯೊ ಶೇರ್ ಮಾಡಿಕೊಂಡ ಸಂಗೀತಾ ತಿಳಿಸಿದ್ದಾರೆ.

ರೈಲಿನಲ್ಲಿ ಕುಟುಂಬದವರು, ಸ್ನೇಹಿತರೊಟ್ಟಿಗೆ ಪ್ರಯಾಣ ಮಾಡುವಾಗ ಅವರವರೇ ಸೇರಿಕೊಂಡು ಅಂತ್ಯಾಕ್ಷರಿ ಆಡುವುದೋ, ಹರಟೆ ಹೊಡೆಯುವುದೋ ಇದ್ದೇ ಇರುತ್ತದೆ. ಆದರೆ ಈ ಬಾಲಕ ತನ್ನ ಪ್ರತಿಭೆಯಿಂದ ರೈಲು ಪ್ರಯಾಣಿಕರ ಗಮನ ಸೆಳೆದಿದ್ದಾನೆ. ಆತನ ಹಾಡು ಮುಗಿಯುವವರೆಗೂ ಒಬ್ಬೇ ಒಬ್ಬ ಪ್ರಯಾಣಿಕನೂ ತನ್ನ ಸೀಟ್​​ಗೆ ಮರಳಲಿಲ್ಲ. ಇನ್ನು ವೈರಲ್​ ಆದ ವಿಡಿಯೊ ನೋಡಿ ನೆಟ್ಟಿಗರೂ ಬಾಲಕನನ್ನು ಹೊಗಳಿದ್ದಾರೆ. ಎಂಥಾ ಅದ್ಭುತ ಗಾಯನ ಎಂದು ಕೊಂಡಾಡಿದ್ದಾರೆ.

ಇದನ್ನೂ ಓದಿ: Viral video | ಮೈನಸ್‌ 40 ಡಿಗ್ರಿಯಲ್ಲಿ ಬಾಂಗ್ಡಾ ಡ್ಯಾನ್ಸ್‌ ಮಾಡಿ ಮೈ ಬೆಚ್ಚಗಾಗಿಸಿದ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Ayodhya: ಅಯೋಧ್ಯೆಗೆ ವಿಮಾನ ತಲುಪುತ್ತಲೇ ಭೂಮಿಗೆ ನಮಸ್ಕರಿಸಿದ ಗಗನಸಖಿ; ಭುಗಿಲೆದ್ದಿತು ವಿವಾದ!

Ayodhya: ಇಂಡಿಗೋ ವಿಮಾನದಲ್ಲಿ ಗಗನಸಖಿಯಾಗಿರುವ ಆಕಾಂಕ್ಷಾ ಪಾರ್ಮರ್‌ ಅವರು ವಿಮಾನ ಇಳಿಯುತ್ತಲೇ ಡಾಂಬರ್‌ ಇದ್ದರೂ ಭೂಮಿಗೆ ನಮಸ್ಕಾರ ಮಾಡಿದ್ದಾರೆ. ಇದಾದ ಬಳಿಕ ರಾಮಮಂದಿರದ ಕಡೆ ಮುಖ ಮಾಡಿ ನಮಸ್ಕಾರ ಮಾಡಿದ್ದಾರೆ. ಈ ವಿಡಿಯೊವನ್ನು ಅವರೇ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

VISTARANEWS.COM


on

Ayodhya
Koo

ಅಯೋಧ್ಯೆ: ರಾಮಮಂದಿರ ನಿರ್ಮಾಣವಾದ ಬಳಿಕ ಅಯೋಧ್ಯೆಗೆ ವಿಶೇಷ ವಿಮಾನದ ವ್ಯವಸ್ಥೆ ಮಾಡಲಾಗಿದ್ದು, ಸಾವಿರಾರು ಜನ ವಿಮಾನಗಳಲ್ಲಿ ಪ್ರಯಾಣಿಸಿ ಅಯೋಧ್ಯೆ ತಲುಪುತ್ತಿದ್ದಾರೆ. ಶ್ರೀರಾಮನ ದರ್ಶನ ಪಡೆಯಲು ಜನ ಭಕ್ತಿ-ಭಾವದಿಂದ ಅಯೋಧ್ಯೆಗೆ ಆಗಮಿಸುತ್ತಾರೆ. ಜನಸಾಮಾನ್ಯರು ಮಾತ್ರವಲ್ಲ, ವಿಮಾನದ ಸಿಬ್ಬಂದಿಗೂ ರಾಮಮಂದಿರ, ಅಯೋಧ್ಯೆಯ ಮೇಲೆ ವಿಶೇಷ ಗೌರವ ಇದೆ. ಇದಕ್ಕೆ ನಿದರ್ಶನ ಎಂಬಂತೆ, ಆಕಾಂಕ್ಷಾ ಪಾರ್ಮರ್‌ ಎಂಬ ಇಂಡಿಗೋ ವಿಮಾನದ ಗಗನಸಖಿಯು ವಿಮಾನ ಅಯೋಧ್ಯೆ ತಲುಪುತ್ತಲೇ, ಕೆಳಗೆ ಇಳಿದು ನೆಲಕ್ಕೆ ನಮಸ್ಕಾರ ಮಾಡಿದ್ದಾರೆ. ರಾಮನ ಕಾರಣಕ್ಕಾಗಿ ಅಯೋಧ್ಯೆ ಪುಣ್ಯಭೂಮಿ ಎಂದು ಅವರು ಭಕ್ತಿ ಪ್ರದರ್ಶಿಸಿದ್ದಾರೆ. ಈ ವಿಡಿಯೊ ಜಾಲತಾಣಗಳಲ್ಲಿ ವೈರಲ್‌ ಆಗುತ್ತಲೇ ಪರ-ವಿರೋಧ ಚರ್ಚೆಯಾಗುತ್ತಿದೆ.

ಇಂಡಿಗೋ ವಿಮಾನದಲ್ಲಿ ಗಗನಸಖಿಯಾಗಿರುವ ಆಕಾಂಕ್ಷಾ ಪಾರ್ಮರ್‌ ಅವರು ವಿಮಾನ ಇಳಿಯುತ್ತಲೇ ಡಾಂಬರ್‌ ಇದ್ದರೂ ಭೂಮಿಗೆ ನಮಸ್ಕಾರ ಮಾಡಿದ್ದಾರೆ. ಇದಾದ ಬಳಿಕ ರಾಮಮಂದಿರದ ಕಡೆ ಮುಖ ಮಾಡಿ ನಮಸ್ಕಾರ ಮಾಡಿದ್ದಾರೆ. ಈ ವಿಡಿಯೊವನ್ನು ಅವರೇ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. “ಅಯೋಧ್ಯೆಯ ಭೂಮಿಗೆ ನಮಸ್ಕಾರ ಮಾಡುವುದು ಹೆಮ್ಮೆ ಅನಿಸುತ್ತಿದೆ. ಹಿಂದು ಆಗಿರುವುದಕ್ಕೆ ನನಗೆ ಹೆಮ್ಮೆ ಇದೆ. ಜೈ ಶ್ರೀರಾಮ್”‌ ಎಂಬುದಾಗಿ ಅವರು ಬರೆದುಕೊಂಡಿದ್ದಾರೆ.

ವಿಡಿಯೊ ವೈರಲ್‌ ಆಗುತ್ತಲೇ ಆಕಾಂಕ್ಷಾ ಅವರ ವಿಡಿಯೊವನ್ನು ಉದ್ಯಮಿ ಮೋಹನ್‌ದಾಸ್‌ ಪೈ ಹಂಚಿಕೊಂಡಿದ್ದಾರೆ. ಅಲ್ಲದೆ, ಆಕಾಂಕ್ಷಾ ಹಾಗೂ ಇಂಡಿಗೋ ಬಗ್ಗೆ ಹೆಮ್ಮೆ ಎನಿಸುತ್ತದೆ. ಭಗವಾನ್‌ ಶ್ರೀರಾಮನು 500 ವರ್ಷಗಳ ಬಳಿಕ ಅಯೋಧ್ಯೆಗೆ ಬಂದಿದ್ದು, ಅಂತಹ ರಾಮನನ್ನು ಆರಾಧಿಸುವ ಉದ್ಯೋಗಿಯನ್ನು ಹೊಂದಿರುವುದಕ್ಕೆ ಸಂಸ್ಥೆಯು ಹೆಮ್ಮೆಪಡಬೇಕು” ಎಂಬುದಾಗಿ ಮೋಹನ್‌ದಾಸ್‌ ಪೈ ಅವರು ಒಕ್ಕಣೆ ಬರೆದುಕೊಂಡಿದ್ದಾರೆ.

ವಿವಾದ ಉಂಟಾಗಿದ್ದೇಕೆ?

ಇಂಡಿಗೋ ವಿಮಾನದ ಸಿಬ್ಬಂದಿಯು ಅಯೋಧ್ಯೆ ಭೂಮಿಗೆ ನಮಸ್ಕಾರ ಮಾಡಿರುವ ವಿಡಿಯೊ ಹಂಚಿಕೊಂಡು, ಮೆಚ್ಚುಗೆಯ ಮಾತುಗಳನ್ನು ಆಡಿದ ಮೋಹನ್‌ದಾಸ್‌ ಪೈ ಹಾಗೂ ಗಗನಸಖಿ ವಿರುದ್ಧ ಜನ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಇದೆಲ್ಲ ಗಿಮಿಕ್‌, ರೀಲ್ಸ್‌ಗಾಗಿ ಇಂತಹ ವಿಡಿಯೊ ಮಾಡುತ್ತಾರೆ, ಮೊದಲೇ ಪ್ಲಾನ್‌ ಮಾಡಿ, ರೆಕಾರ್ಡ್‌ ಮಾಡಿದ ವಿಡಿಯೊ ಇದು, ಇಂತಹ ನಾಟಕದ ವಿಡಿಯೊವನ್ನು ಮೋಹನ್‌ ದಾಸ್‌ ಪೈ ಬೆಂಬಲಿಸಬಾರದು, ಅಷ್ಟೊಂದು ಭಕ್ತಿ ಇದ್ದರೆ ದೇವಾಲಯಕ್ಕೆ ಹೋಗಲಿ, ಗಗನಸಖಿಯಾದವರು ಹೇಗೆ ವರ್ತಿಸಬೇಕು ಎಂಬುದು ಮೊದಲು ಗೊತ್ತಿರಬೇಕು” ಎಂಬುದು ಸೇರಿ ಹತ್ತಾರು ರೀತಿಯಲ್ಲಿ ಜನ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Ayodhya Ram Mandir : ರಾಮಮಂದಿರದ ಚಾವಣಿ ಸೋರುತ್ತಿಲ್ಲ; ನಿರ್ಮಾಣ ಸಮಿತಿ ಸ್ಪಷ್ಟನೆ

Continue Reading

ವೈರಲ್ ನ್ಯೂಸ್

Viral Video: ಪ್ರವಾಹದಲ್ಲಿ ಸಿಲುಕಿದ ನಾಯಿಗಳಿಗೆ ಡ್ರೋನ್‌ ಮೂಲಕ ಬಿರಿಯಾನಿ ರವಾನೆ; ಮಾನವೀಯತೆ ಅಂದ್ರೆ ಇದು!

Viral Video: ಭಾರಿ ಮಳೆಯಿಂದಾಗಿ ಮೂರು ದಿನಗಳ ಹಿಂದೆ ಮೆಟ್ಟೂರು ಡ್ಯಾಮ್‌ನಿಂದ ಹೆಚ್ಚಿನ ಪ್ರಮಾಣದ ನೀರನ್ನು ಹೊರಗೆ ಬಿಟ್ಟ ಕಾರಣ ಪ್ರವಾಹ ಉಂಟಾಗಿದೆ. ಹಾಗಾಗಿ, ನದಿಯ ಪಾತ್ರದಲ್ಲಿಯೇ ಏಳು ನಾಯಿಗಳು ಉಳಿದುಕೊಂಡಿವೆ. ಮೂರು ದಿನಗಳಿಂದ ನಾಯಿಗಳಿಗೆ ತಿನ್ನಲು ಏನೂ ಸಿಕ್ಕಿರಲಿಲ್ಲ. ಆದರೆ, ರಕ್ಷಣಾ ಸಿಬ್ಬಂದಿಯು ಡ್ರೋನ್‌ ಮೂಲಕ ನಾಯಿಗಳಿಗೆ ಆಹಾರ ಪೂರೈಸಿ ಮಾನವೀಯತೆ ಮೆರೆದಿದ್ದಾರೆ.

VISTARANEWS.COM


on

Viral Video
Koo

ಚೆನ್ನೈ: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದ (Wayanad Landslide) ಸಾವಿನ ಸಂಖ್ಯೆ 360 ದಾಟಿದೆ. ಇನ್ನೂ ನೂರಾರು ಜನ ನಾಪತ್ತೆಯಾಗಿದ್ದು, ಅವರಿಗಾಗಿ ಹಗಲು-ರಾತ್ರಿ ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌, ಸೇನೆ ಸೇರಿ ನೂರಾರು ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಭದ್ರತಾ ಸಿಬ್ಬಂದಿಯು ಜನರನ್ನು ರಕ್ಷಣೆ ಮಾಡುತ್ತಿದ್ದಾರೆ. ಇನ್ನು, ಜನ ಕೂಡ ಮಾನವೀಯತೆಯಿಂದ ಪರಿಹಾರ ನಿಧಿಗೆ ಹಣ ಕಳುಹಿಸುತ್ತಿದ್ದಾರೆ. ಆ ಮೂಲಕ ಮಾನವೀಯತೆ ಮೆರೆಯುತ್ತಿದ್ದಾರೆ. ಇನ್ನು, ತಮಿಳುನಾಡಿನಲ್ಲಿ (Tamil Nadu) ಕೂಡ ಪ್ರವಾಹ ಉಂಟಾಗಿದ್ದು, ಹೀಗೆ ಪ್ರವಾಹದಲ್ಲಿ ಸಿಲುಕಿದ 7 ಶ್ವಾನಗಳಿಗೆ ಡ್ರೋನ್‌ ಮೂಲಕ ಬಿರಿಯಾನಿ, ಮಾಂಸವನ್ನು ರವಾನಿಸುವ ಮೂಲಕ ಭದ್ರತಾ ಸಿಬ್ಬಂದಿಯು ಮಾನವೀಯತೆ ಮೆರೆದಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ಹೌದು, ಮೆಟ್ಟೂರು ಡ್ಯಾಮ್‌ ಬಳಿಯ ಕಾವೇರಿ ನದಿಯಲ್ಲಿ ನೀರಿನ ಹರಿವು ಜಾಸ್ತಿಯಾಗಿದ್ದು, ಸಣ್ಣದೊಂದು ದ್ವೀಪ ಸೃಷ್ಟಿಯಾಗಿದೆ. ಈ ದ್ವೀಪದ ಪ್ರದೇಶದಲ್ಲಿ ಏಳು ನಾಯಿಗಳು ಉಳಿದುಕೊಂಡಿವೆ. ಇದು ಅಗ್ನಿಶಾಮಕ ಸಿಬ್ಬಂದಿಯ ಗಮನಕ್ಕೆ ಬಂದಿದೆ. ಅಗ್ನಿಶಾಮಕ ಸಿಬ್ಬಂದಿಯು ಡ್ರೋನ್‌ಗಳಿಗಾಗಿ ಜಿಯೋಟೆಕ್ನೋವ್ಯಾಲಿ ಎಂಬ ಕಂಪನಿ ಜತೆ ಒಪ್ಪಂದ ಮಾಡಿಕೊಂಡಿದೆ. ಜಿಯೋಟೆಕ್ನೋವ್ಯಾಲಿ ಕಂಪನಿಯಿಂದ ಸುಮಾರು 30 ಕೆ.ಜಿ ತೂಕದ ವಸ್ತುಗಳನ್ನು ಸಾಗಣೆ ಮಾಡುವ ಡ್ರೋನ್‌ ತರಿಸಿಕೊಂಡು, ಶ್ವಾನಗಳಿಗೆ ಮಾಂಸವನ್ನು ರವಾನಿಸಿದ್ದಾರೆ.

ಭಾರಿ ಮಳೆಯಿಂದಾಗಿ ಮೂರು ದಿನಗಳ ಹಿಂದೆ ಮೆಟ್ಟೂರು ಡ್ಯಾಮ್‌ನಿಂದ ಹೆಚ್ಚಿನ ಪ್ರಮಾಣದ ನೀರನ್ನು ಹೊರಗೆ ಬಿಟ್ಟ ಕಾರಣ ಪ್ರವಾಹ ಉಂಟಾಗಿದೆ. ಹಾಗಾಗಿ, ನದಿಯ ಪಾತ್ರದಲ್ಲಿಯೇ ಏಳು ನಾಯಿಗಳು ಉಳಿದುಕೊಂಡಿವೆ. ಮೂರು ದಿನಗಳಿಂದ ನಾಯಿಗಳಿಗೆ ತಿನ್ನಲು ಏನೂ ಸಿಕ್ಕಿರಲಿಲ್ಲ. ಮೊದಲು ಅಗ್ನಿಶಾಮಕ ದಳದ ಸಿಬ್ಬಂದಿಗೆ ಒಂದು ನಾಯಿ ಮಾತ್ರ ಕಾಣಿಸಿದೆ. ಬಳಿಕ ಅವರು ಡ್ರೋನ್‌ ಕ್ಯಾಮೆರಾ ಮೂಲಕ ಪರಿಶೀಲನೆ ನಡೆಸಿದಾಗ ಏಳು ನಾಯಿಗಳು ಇರುವುದು ಗೊತ್ತಾಗಿದೆ. ಆಗ, ಡ್ರೋನ್‌ ಮೂಲಕ ನಾಯಿಗಳಿಗೆ ಮಾಂಸ, ಬಿರಿಯಾನಿಯನ್ನು ರವಾನಿಸಲಾಗಿದೆ.

ನಾಯಿಗಳ ರಕ್ಷಣೆಗೂ ಪ್ಲಾನ್‌

ಅಗ್ನಿಶಾಮಕ ಸಿಬ್ಬಂದಿಯು ನಾಯಿಗಳನ್ನು ರಕ್ಷಣೆ ಮಾಡಲು ಕೂಡ ಪ್ಲಾನ್‌ ಮಾಡಿವೆ. ಭಾನುವಾರ (ಆಗಸ್ಟ್‌ 4) ಡ್ರೋನ್‌ಗಳ ಮೂಲಕ ನಾಯಿಗಳ ಇರುವಿಕೆ ಪತ್ತೆ ಹಚ್ಚಿ, ಅವುಗಳಿಗೆ ಇನ್ನಷ್ಟು ಆಹಾರ ರವಾನಿಸುವ ಸಿಬ್ಬಂದಿಯು, ಬಳಿಕ ಅವುಗಳನ್ನು ರಕ್ಷಿಸಲು ಯೋಜನೆ ರೂಪಿಸಿದ್ದಾರೆ. ನಾಯಿಗಳ ರಕ್ಷಣೆಗಾಗಿ ಪಂಜರವನ್ನು ಕಳುಹಿಸಲಾಗುತ್ತದೆ. ಪಂಜರಗಳಲ್ಲಿ ನಾಯಿಗಳು ಪ್ರವೇಶಿಸುತ್ತಲೇ, ಲಾಕ್‌ ಮಾಡಿಕೊಂಡು, ಅವುಗಳನ್ನು ಏರ್‌ಲಿಫ್ಟ್‌ ಮಾಡುವ ಯೋಜನೆ ಇದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಸಿಬ್ಬಂದಿಯ ಮಾನವೀಯತೆಯ ನಡೆಗೆ ಸಾಮಾಜಿಕ ಜಾಲತಾಣಗಳಲ್ಲಿ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Wayanad Landslide: ವಯನಾಡು ಭೂಕುಸಿತಕ್ಕೆ ಗೋಹತ್ಯೆಯೇ ಕಾರಣ ಎಂದ ಬಿಜೆಪಿ ನಾಯಕ; ಅವರ ವಿವರಣೆ ಹೀಗಿದೆ!

Continue Reading

ದೇಶ

Moon: ಭೂಮಿಯಿಂದ ದೂರ ಹೊರಟ ಚಂದ್ರ, ಮುಂದೆ ದಿನಕ್ಕೆ 24 ಅಲ್ಲ 25 ಗಂಟೆಗಳು ಇರಲಿವೆ!

Moon: ವರ್ಷದಿಂದ ವರ್ಷಕ್ಕೆ ಚಂದಿರನು ಭೂಮಿಯಿಂದ ದೂರವಾಗುತ್ತಿದ್ದಾನೆ ಎಂದು ಅಮೆರಿಕದ ಯುನಿವರ್ಸಿಟಿ ಆಫ್‌ ವಿಸ್ಕಾನ್ಸಿನ್-ಮ್ಯಾಡಿಸನ್‌ನ ತಜ್ಞರು ಮಾಡಿದ ಅಧ್ಯಯನ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಸುಮಾರು 90 ದಶಲಕ್ಷ ವರ್ಷದಷ್ಟು ಹಳೆಯದಾದ ಶಿಲೆಯ ಮೇಲೆ ಗಮನ ಕೇಂದ್ರೀಕರಿಸಿ ಅಧ್ಯಯನ ನಡೆಸಲಾಗಿದ್ದು, ಭೂಮಿಯಿಂದ ಚಂದ್ರನು ಬೇರ್ಪಡುವುದರಿಂದ ಆಗುವ ಪರಿಣಾಮಗಳ ಕುರಿತು ಕೂಡ ಅವರು ಬೆಳಕು ಚೆಲ್ಲಿದ್ದಾರೆ.

VISTARANEWS.COM


on

Moon
Koo

ನವದೆಹಲಿ: ಚಂದಿರನಿಗೂ ಮಾನವನಿಗೂ ಎಲ್ಲಿಲ್ಲದ ನಂಟು. ಚಂದಿರನನ್ನು ತೋರಿಸಿ ಅಮ್ಮ ಕೈತುತ್ತು ತಿನಿಸಿದ, ಚಂದ್ರನ ಬೆಳಕಿನಲ್ಲಿ ರಾತ್ರಿ ರೈತ ಜಮೀನಿನಲ್ಲಿ ಕೆಲಸ ಮಾಡಿದ, ಚಂದಿರನ ಬೆಳದಿಂಗಳಲ್ಲಿ ಊರೆಲ್ಲ ಸುತ್ತಾಡಿದ ನೆನಪುಗಳು ಕಾಡುತ್ತವೆ. ಇನ್ನು ದೇಶದ ಕವಿಗಳೂ ಅಷ್ಟೇ, ಚಂದಿರನ ಬಗ್ಗೆ ಬಗೆಬಗೆಯ ಕವಿತೆಗಳನ್ನು ಬರೆಯುವ ಮೂಲಕ ನಮಗೆ ಚಂದಿರ ಏಕೆ ಮುಖ್ಯ ಎಂಬುದನ್ನು ಸಾರಿದ್ದಾರೆ. ಚಂದಮಾಮ ಎಂದೂ ಕೂಡ ವರ್ಣಿಸಿದ್ದಾರೆ. ಇಂತಹ ಚಂದಮಾಮ ಈಗ ಭೂಮಿಯಿಂದ ದೂರವಾಗುತ್ತಿದ್ದಾನೆ. ಅಷ್ಟೇ ಅಲ್ಲ, ಮುಂದೆ ನಮಗೆ ದಿನದಲ್ಲಿ 24 ಗಂಟೆ ಬದಲು 25 ಗಂಟೆ ಇರಲಿವೆ ಎಂದು ಅಧ್ಯಯನವೊಂದು ಭೀಕರ ಮಾಹಿತಿಯನ್ನು ಬಿಚ್ಚಿಟ್ಟಿದೆ.

ಹೌದು, ವರ್ಷದಿಂದ ವರ್ಷಕ್ಕೆ ಚಂದಿರನು ಭೂಮಿಯಿಂದ ದೂರವಾಗುತ್ತಿದ್ದಾನೆ ಎಂದು ಅಮೆರಿಕದ ಯುನಿವರ್ಸಿಟಿ ಆಫ್‌ ವಿಸ್ಕಾನ್ಸಿನ್-ಮ್ಯಾಡಿಸನ್‌ನ ತಜ್ಞರು ಮಾಡಿದ ಅಧ್ಯಯನ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಸುಮಾರು 90 ದಶಲಕ್ಷ ವರ್ಷದಷ್ಟು ಹಳೆಯದಾದ ಶಿಲೆಯ ಮೇಲೆ ಗಮನ ಕೇಂದ್ರೀಕರಿಸಿ ಅಧ್ಯಯನ ನಡೆಸಲಾಗಿದ್ದು, ಭೂಮಿಯಿಂದ ಚಂದ್ರನು ಬೇರ್ಪಡುವುದರಿಂದ ಆಗುವ ಪರಿಣಾಮಗಳ ಕುರಿತು ಕೂಡ ಅವರು ಬೆಳಕು ಚೆಲ್ಲಿದ್ದಾರೆ. ಈ ಅಧ್ಯಯನ ವರದಿ ಈಗ ಜಗತ್ತಿನಾದ್ಯಂತ ಸುದ್ದಿಯಾಗಿದೆ.

ದಿನಕ್ಕೆ 25 ಗಂಟೆ ಹೇಗೆ?

ಪ್ರತಿ ವರ್ಷ ಚಂದ್ರನು ಭೂಮಿಯಿಂದ 3.8 ಸೆಂಟಿಮೀಟರ್‌ ದೂರವಾಗುತ್ತಿದ್ದಾನೆ. ಇದರಿಂದಾಗಿ ಭೂಮಿಯ ಒಂದು ದಿನದ ಅವಧಿಯು ಹೆಚ್ಚಾಗುತ್ತದೆ. ಅಂದರೆ, ಈಗ ದಿನಕ್ಕೆ 24 ಗಂಟೆ ಇದ್ದರೆ, ಮುಂಬರುವ ವರ್ಷಗಳಲ್ಲಿ ದಿನಕ್ಕೆ 25 ಗಂಟೆ ಇರಲಿವೆ. ಕಾಲಕಾಲಕ್ಕೆ ಭೂಮಿಯ ಮೇಲಿನ ಒಂದು ದಿನದಲ್ಲಿರುವ ಗಂಟೆಗಳ ಸಂಖ್ಯೆ ಹೆಚ್ಚಾಗುತ್ತದೆ. ಇದು ಸಹಜ ಪ್ರಕ್ರಿಯೆಯಾಗಿದೆ ಎಂಬುದಾಗಿ ವಿಜ್ಞಾನಿಗಳು ತಿಳಿಸಿದ್ದಾರೆ.

ಮುಂದಿನ 200 ದಶಲಕ್ಷ ವರ್ಷಗಳ ಬಳಿಕ ದಿನದಲ್ಲಿ 25 ಗಂಟೆ ಇರಲಿವೆ ಎಂದು ವಿಜ್ಞಾನಿಗಳು ವರದಿಯಲ್ಲಿ ಉಲ್ಲೇಖಿಸಿದ್ದಾರೆ. ಸುಮಾರು 1.4 ಶತಕೋಟಿ ವರ್ಷಗಳ ಹಿಂದೆ, ಭೂಮಿಯ ಅವಧಿಯು ದಿನಕ್ಕೆ ಕೇವಲ 18 ಗಂಟೆಯಾಗಿತ್ತು. ಕಾಲಕಾಲಕ್ಕೆ ಅದು ಹೆಚ್ಚಾಗುತ್ತ 24 ಗಂಟೆಗೆ ಏರಿಕೆಯಾಗಿದೆ. “ಭೂಮಿಯಿಂದ ಸೂರ್ಯನು ದೂರವಾಗುತ್ತ ಹೋದರೆ, ಭೂಮಿಯ ಮೇಲಿನ ಒಂದು ದಿನದ ಅವಧಿಯು ವಿಸ್ತರಣೆಯಾಗುತ್ತದೆ” ಎಂದು ವಿವಿ ಪ್ರೊಫೆಸರ್‌ ಸ್ಟೀಫನ್‌ ಮೇಯರ್ಸ್‌ ಹೇಳಿದ್ದಾರೆ.

ಇದನ್ನೂ ಓದಿ: DMK leader Controversy: ಶ್ರೀರಾಮನ ಅಸ್ತಿತ್ವಕ್ಕೆ ಪುರಾವೆಗಳೇ ಇಲ್ಲ: ಡಿಎಂಕೆ ನಾಯಕನ ವಿಡಿಯೋ ಫುಲ್‌ ವೈರಲ್‌

Continue Reading

ದೇಶ

Wayanad Landslide: ವಯನಾಡು ಭೂಕುಸಿತಕ್ಕೆ ಗೋಹತ್ಯೆಯೇ ಕಾರಣ ಎಂದ ಬಿಜೆಪಿ ನಾಯಕ; ಅವರ ವಿವರಣೆ ಹೀಗಿದೆ!

Wayanad Landslide: ಕೇರಳದ ವಯನಾಡು ಭೂಕುಸಿತಕ್ಕೆ ಅಕ್ರಮವಾಗಿ ರೆಸಾರ್ಟ್‌ಗಳನ್ನು ನಿರ್ಮಿಸಿರುವುದು, ಸೂಕ್ಷ್ಮ ಪ್ರದೇಶಗಳಲ್ಲಿ ಕೃಷಿ ಚಟುವಟಿಕೆ ಕೈಗೊಳ್ಳುವುದು, ಅರಣ್ಯ ನಾಶಪಡಿಸುವುದು ಸೇರಿ ಹಲವು ಕಾರಣಗಳನ್ನು ನೀಡಲಾಗುತ್ತಿದೆ. ಆದರೆ, ಬಿಜೆಪಿ ನಾಯಕ ಜ್ಞಾನದೇವ್‌ ಅಹುಜಾ ಅವರು ಭೂಕುಸಿತಕ್ಕೆ ಬೇರೆಯದ್ದೇ ಕಾರಣ ನೀಡಿದ್ದಾರೆ. ಮುಂದೆ ಓದಿ…

VISTARANEWS.COM


on

Wayanad Landslide
Koo

ತಿರುವನಂತಪುರಂ/ಜೈಪುರ: ಕೇರಳದ ವಯನಾಡು ಈಗ ಅಕ್ಷರಶಃ ಮಸಣದಂತಾಗಿದೆ. ಭಾರಿ ಮಳೆ, ಭೀಕರ ಭೂಕುಸಿತದಿಂದಾಗಿ (Wayanad Landslide) 350ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಇನ್ನೂ 300 ಜನ ನಾಪತ್ತೆಯಾಗಿದ್ದಾರೆ. ಎಲ್ಲೆಂದರಲ್ಲಿ ಶವಗಳು ಸಿಗುತ್ತಿವೆ. ಸಾವಿರಾರು ಎಕರೆ ಕೃಷಿ ಭೂಮಿ ಹಾಳಾಗಿದೆ. ಸಾವಿರಾರು ಜನ ನಿರಾಶ್ರಿತರಾಗಿದ್ದಾರೆ. ಈಗಲೂ ಹಗಲು-ರಾತ್ರಿ ಕಾರ್ಯಾಚರಣೆ ನಡೆಯುತ್ತಿದೆ. ಇನ್ನು, ಭೂಕುಸಿತಕ್ಕೆ ಅರಣ್ಯ ನಾಶ, ರೆಸಾರ್ಟ್‌ಗಳ ನಿರ್ಮಾಣ ಸೇರಿ ಹಲವು ಕಾರಣಗಳನ್ನು ಗುರುತಿಸಲಾಗುತ್ತಿದೆ. ಇದರ ಬೆನ್ನಲ್ಲೇ, “ಕೇರಳದಲ್ಲಿ ಭೂಕುಸಿತ ಉಂಟಾಗಲು ಗೋವುಗಳ ಹತ್ಯೆಯೇ ಕಾರಣ” ಎಂಬುದಾಗಿ ಬಿಜೆಪಿ ನಾಯಕ ಜ್ಞಾನದೇವ್‌ ಅಹುಜಾ ಹೇಳಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.

ರಾಜಸ್ಥಾನದ ಬಿಜೆಪಿ ನಾಯಕ, ಮಾಜಿ ಶಾಸಕ ಜ್ಞಾನದೇವ್‌ ಅಹುಜಾ ಹೇಳಿಕೆ ಈಗ ಭಾರಿ ಚರ್ಚೆಗೂ ಗ್ರಾಸವಾಗಿದೆ. “ವಯನಾಡಿನಲ್ಲಿ ಭೂಕಂಪ ಸಂಭವಿಸಿರುವುದು ಗೋಹತ್ಯೆಯ ಪರಿಣಾಮವಾಗಿದೆ. ಕೇರಳದಲ್ಲಿ ಗೋಹತ್ಯೆಯನ್ನು ನಿಲ್ಲಿಸದಿದ್ದದರೆ ಇಂತಹ ಹಲವು ದುರಂತಗಳು ಸಂಭವಿಸುತ್ತಲೇ ಇರುತ್ತವೆ. 2018ರಿಂದಲೂ ನಾನು ಇದನ್ನು ಗಮನಿಸುತ್ತಿದ್ದೇನೆ. ಎಲ್ಲೆಲ್ಲಿ ಗೋವುಗಳ ಹತ್ಯೆಯು ಜಾಸ್ತಿಯಾಗಿರುತ್ತದೆಯೋ, ಅಲ್ಲೆಲ್ಲ ಭೂಕುಸಿತ ಸಂಭವಿಸುತ್ತಿರುತ್ತವೆ. ಕೇರಳದ ವಯನಾಡು ಇದಕ್ಕೆ ನಿದರ್ಶನ” ಎಂದು ಮಾಧ್ಯಮವೊಂದರ ಜತೆ ಮಾತನಾಡುವಾಗ ಅಹುಜಾ ಹೇಳಿದ್ದಾರೆ. ಆದರೆ, ಗೋವುಗಳ ಹತ್ಯೆಗೂ, ಭೂಕುಸಿತಕ್ಕೂ ಹೇಗೆ ನಂಟಿದೆ ಎಂಬುದನ್ನು ಅವರು ವಿವರಿಸಿಲ್ಲ.

ಸಹಾಯಹಸ್ತ ಚಾಚಿದ ಕರ್ನಾಟಕ

ವಯನಾಡು ಭೂಕುಸಿತದಿಂದ ಸಾವಿರಾರು ಜನ ನಿರಾಶ್ರಿತರಾಗಿದ್ದು, ಅವರ ನೆರವಿಗೆ ಕರ್ನಾಟಕ ಸರ್ಕಾರ ಧಾವಿಸಿದೆ. “ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ತತ್ತರಿಸಿರುವ ಕೇರಳದ ಜೊತೆ ರಾಜ್ಯ ಸರ್ಕಾರ ನಿಂತಿದೆ. ಭೂಕುಸಿತದಿಂದ ಸೂರು ಕಳೆದುಕೊಂಡ 100 ಕುಟುಂಬಗಳಿಗೆ ನಮ್ಮ ಸರ್ಕಾರ ಮಾನವೀಯ ನೆಲೆಯಲ್ಲಿ ಮತ್ತೆ ಮನೆ ನಿರ್ಮಿಸಿಕೊಡಲಿದೆ ಎಂಬ ಭರವಸೆಯನ್ನು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ನೀಡಿದ್ದೇನೆ. ಸಂಕಷ್ಟದ ಕಾಲದಲ್ಲಿ ಜೊತೆ ನಿಂತು ಭರವಸೆಯನ್ನು ಮರಳಿ ಕಟ್ಟೋಣ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೋಸ್ಟ್‌ ಮಾಡಿದ್ದಾರೆ.

ಈ ಹಿಂದೆ ಸಿಎಂ ಸಿದ್ದರಾಮಯ್ಯ ಅವರು ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ಪರಿಹಾರ ಘೋಷಣೆ ಮಾಡಿದ್ದರು. ಭೂಕುಸಿತದಿಂದ ಸಂಕಷ್ಟದಲ್ಲಿರುವ ಕನ್ನಡಿಗರ ನೆರವಿಗೆ ಧಾವಿಸಲು ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳನ್ನು ನೇಮಿಸಲಾಗಿತ್ತು. ಗಡಿ ಜಿಲ್ಲೆ ಚಾಮರಾಜನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ತೆರೆಯಲಾಗಿತ್ತು. ಹೆಚ್.ಡಿ ಕೋಟೆಯಲ್ಲಿ ಗಾಯಾಳುಗಳನ್ನು ಕರೆತಂದು ಅಗತ್ಯ ಚಿಕಿತ್ಸೆ ಕೊಡಿಸಲು ಬಸ್‌ಗಳನ್ನು ಏರ್ಪಡಿಸಲಾಗಿತ್ತು. ಅಗತ್ಯ ಸಲಕರಣೆಗಳನ್ನು ಹೊತ್ತ ಬೆಂಗಳೂರಿನ ಎನ್.ಡಿ.ಆರ್.ಎಫ್ ಹಾಗೂ ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ ಸೇನಾಪಡೆಯ ತಂಡಗಳು ವಯನಾಡು ತಲುಪಿದ್ದವು.

ಇದನ್ನೂ ಓದಿ: Wayanad Landslide: ವಯನಾಡು ಭೂಕುಸಿತ: ದುರಂತದ ಮಧ್ಯೆಯೂ ಭರವಸೆಯ ಕಿರಣ; ಸಂತ್ರಸ್ತರ ರಕ್ಷಣೆಯೇ ರೋಚಕ

Continue Reading
Advertisement
Ayodhya
ದೇಶ11 mins ago

Ayodhya: ಅಯೋಧ್ಯೆಗೆ ವಿಮಾನ ತಲುಪುತ್ತಲೇ ಭೂಮಿಗೆ ನಮಸ್ಕರಿಸಿದ ಗಗನಸಖಿ; ಭುಗಿಲೆದ್ದಿತು ವಿವಾದ!

Wayanad Landslide
ಕರ್ನಾಟಕ1 hour ago

Wayanad Landslide: ವಯನಾಡು ಸಂತ್ರಸ್ತರಿಗೆ ಮಿಡಿದ ಕರುನಾಡು; ಸರ್ಕಾರದ ಜತೆಗೆ ಜನರಿಂದಲೂ ನೆರವು!

Kavya Maran
ಕ್ರಿಕೆಟ್2 hours ago

Kavya Maran : ಐಪಿಎಲ್​ ಆಟಗಾರರ ಹರಾಜಿನ ನಿಯಮಗಳ ಬಗ್ಗೆ ಕಾವ್ಯಾ ಮಾರನ್ ಇಟ್ಟಿರುವ ಬೇಡಿಕೆಗಳು ಇವು…

Champions Trophy 2025
ಪ್ರಮುಖ ಸುದ್ದಿ2 hours ago

Champions Trophy 2025 : ಚಾಂಪಿಯನ್ಸ್​ ಟ್ರೋಫಿಗಾಗಿ 544 ಕೋಟಿ ರೂಪಾಯಿ ಬಿಡುಗಡೆ ಮಾಡಿದ ಐಸಿಸಿ

Viral Video
ವೈರಲ್ ನ್ಯೂಸ್2 hours ago

Viral Video: ಪ್ರವಾಹದಲ್ಲಿ ಸಿಲುಕಿದ ನಾಯಿಗಳಿಗೆ ಡ್ರೋನ್‌ ಮೂಲಕ ಬಿರಿಯಾನಿ ರವಾನೆ; ಮಾನವೀಯತೆ ಅಂದ್ರೆ ಇದು!

Best Teacher Award
ಕರ್ನಾಟಕ2 hours ago

Best Teacher Award: ‘ರಾಜ್ಯ ಮಟ್ಟದ ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಮಾಹಿತಿ

Union Minister Pralhad Joshi latest statement at Mysore Chalo Padayatra
ಕರ್ನಾಟಕ3 hours ago

BJP-JDS Padayatra: ವಾಲ್ಮೀಕಿ ನಿಗಮ, ಮುಡಾ ಹಗರಣದಲ್ಲಿ ಕಾಂಗ್ರೆಸ್ ಹೈಕಮಾಂಡ್ ಶೇರ್ ಹೋಲ್ಡರ್: ಪ್ರಲ್ಹಾದ್‌ ಜೋಶಿ ಆರೋಪ

Farmer dies after falling under power tiller wheel in Moralli village
ಉತ್ತರ ಕನ್ನಡ3 hours ago

Farmer Death: ಪವರ್ ಟಿಲ್ಲರ್ ಚಕ್ರಕ್ಕೆ ಸಿಲುಕಿ ರೈತ ದಾರುಣ ಸಾವು

KHIR City project Launch on August 23 at bengaluru says Minister MB Patil
ಕರ್ನಾಟಕ3 hours ago

KHIR City: ಬೆಂಗಳೂರಿನಲ್ಲಿ ದೇಶದಲ್ಲೇ ಮೊದಲ ‘ನಾಲೆಡ್ಜ್, ಹೆಲ್ತ್, ಇನ್ನೋವೇಶನ್ ಆಂಡ್ ರೀಸರ್ಚ್ ಸಿಟಿ’; ಆ.23ರಂದು ಉದ್ಘಾಟನೆ

IND vs SL ODI
ಪ್ರಮುಖ ಸುದ್ದಿ3 hours ago

IND vs SL ODI : ಶ್ರೀಲಂಕಾ ವಿರುದ್ಧ ಭಾನುವಾರ ಎರಡನೇ ಪಂದ್ಯ; ಮತ್ತೊಂದು ಥ್ರಿಲ್ಲರ್ ನಿರೀಕ್ಷೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka rain
ಮಳೆ11 hours ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ4 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ4 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ5 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ5 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ5 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

ಟ್ರೆಂಡಿಂಗ್‌