Dolly Chaiwala: ಅಬ್ಬಬ್ಬಾ ಲಾಟರಿ: ಬಿಲ್ ಗೇಟ್ಸ್ ಭೇಟಿ ಆಯ್ತು; ಈಗ ಮಾಲ್ಡೀವ್ಸ್‌ನಲ್ಲಿ ಡಾಲಿ ಚಾಯ್‌ವಾಲಾ ಮಿಂಚು - Vistara News

ವೈರಲ್ ನ್ಯೂಸ್

Dolly Chaiwala: ಅಬ್ಬಬ್ಬಾ ಲಾಟರಿ: ಬಿಲ್ ಗೇಟ್ಸ್ ಭೇಟಿ ಆಯ್ತು; ಈಗ ಮಾಲ್ಡೀವ್ಸ್‌ನಲ್ಲಿ ಡಾಲಿ ಚಾಯ್‌ವಾಲಾ ಮಿಂಚು

Dolly Chaiwala: ತಮ್ಮ ವಿಶಿಷ್ಟ ಶೈಲಿಯಿಂದಲೇ ಇಂಟರ್‌ನೆಟ್‌ನಲ್ಲಿ ಸದ್ದು ಮಾಡುತ್ತಿರುವ ನಾಗ್ಪುರದ ಡಾಲಿ ಚಾಯ್‌ವಾಲಾ ಸದ್ಯ ಮಾಲ್ಡೀವ್ಸ್ ಪ್ರವಾಸದಲ್ಲಿದ್ದಾರೆ. ಅಲ್ಲಿ ಅವರು ಸ್ಥಳೀಯರೊಂದಿಗೆ ಪೋಸ್‌ ನೀಡುತ್ತಿರುವ ಫೋಟೊ ವೈರಲ್‌ ಆಗಿದೆ.

VISTARANEWS.COM


on

Dolly Chaiwala
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಅದೃಷ್ಟ ಯಾವಾಗ ಯಾರಿಗೆ ಒಲಿಯುತ್ತದೆ ಎನ್ನುವುದನ್ನು ಹೇಳಲು ಸಾಧ್ಯವಿಲ್ಲ. ತನ್ನ ವಿಶಿಷ್ಟ ಉಡುಗೆ, ಹೇರ್‌ ಸ್ಟೈಲ್‌, ಚಹಾ ಮಾಡುವ ರೀತಿಯಿಂದಲೇ ಸೋಷಿಯಲ್‌ ಮೀಡಿಯಾದಲ್ಲಿ ಜನಪ್ರಿಯರಾಗಿದ್ದ ನಾಗ್ಪುರದ ಡಾಲಿ ಚಾಯ್‌ವಾಲಾ (Dolly Chaiwalla) ಅವರನ್ನು ಇತ್ತೀಚೆಗೆ ಮೈಕ್ರೋಸಾಫ್ಟ್‌ನ (Microsoft) ಸಹ-ಸಂಸ್ಥಾಪಕ, ಕೋಟ್ಯಧಿಪತಿ ಮತ್ತು ಸಮಾಜಸೇವಕ ಬಿಲ್ ಗೇಟ್ಸ್ (Bill Gates) ಭೇಟಿಯಾಗಿದ್ದರು. ಡಾಲಿ ಚಾಯ್‌ವಾಲಾ ಅವರ ಚಹಾ ಅಂಗಡಿಗೆ ಬಿಲ್‌ ಗೇಟ್ಸ್‌ ಆಗಮಿಸಿದ ವಿಡಿಯೊ ಭಾರೀ ವೈರಲ್‌ ಆಗಿತ್ತು. ಆ ಮೂಲಕ ಡಾಲಿ ಚಾಯ್‌ವಾಲಾ ಹೆಸರು ಮತ್ತಷ್ಟು ಜನಪ್ರಿಯವಾಗಿತ್ತು. ಇದೀಗ ಅವರ ವಿಚಾರ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಡಾಲಿ ಚಾಯ್‌ವಾಲಾ ಸದ್ಯ ಮಾಲ್ಡೀವ್ಸ್ ಪ್ರವಾಸದಲ್ಲಿದ್ದಾರೆ. ಅಲ್ಲಿ ಬಾಲಿವುಡ್ ನಟ ಸೊಹೈಲ್ ಖಾನ್ ಅವರೊಂದಿಗೆ ಫೋಟೊಕ್ಕೆ ಪೋಸ್‌ ನೀಡಿದ್ದು, ಮತ್ತೊಮ್ಮೆ ವೈರಲ್‌ ಆಗಿದ್ದಾರೆ (Viral News).

ಪ್ರವಾಸಿಗರೊಂದಿಗೆ ಪೋಸ್‌

ಇದರ ಜತೆಗೆ ಡಾಲಿ ಚಾಯ್‌ವಾಲಾ ದ್ವೀಪ ರಾಷ್ಟ್ರದ ನಿವಾಸಿಗಳೊಂದಿಗೆ ಪೋಸ್‌ ನೀಡುತ್ತಿರುವ ಫೋಟೊಗಳು ಇಂಟರ್‌ನೆಟ್‌ನಲ್ಲಿ ಹರಿದಾಡುತ್ತಿವೆ. ಅನೇಕರು ಈ ಪೋಟೊಗಳಿಗೆ ಕಮೆಂಟ್‌ ಕೂಡ ಮಾಡಿದ್ದಾರೆ. ಕೆಲವರು ಡಾಲಿಯ ಯಶಸ್ಸಿಗೆ ಅಭಿನಂದನೆ ಸಲ್ಲಿಸಿದರೆ, ಕೆಲವರು ತಮಾಷೆಯಾಗಿ ಪ್ರತಿಕ್ರಿಯಿಸಿದ್ದಾರೆ. “ಡಾಲಿ ಸದ್ಯದಲ್ಲೇ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ” ಎಂದು ಒಬ್ಬರು ಹೇಳಿದ್ದಾರೆ. ಇನ್ನೊಬ್ಬರು “ಡಾಲಿ ಚಾಯ್‌ವಾಲಾ ಮತ್ತು ಬಿಲ್ ಗೇಟ್ಸ್ ಸ್ನೇಹಿತರು” ಎಂದು ಬರೆದಿದ್ದಾರೆ.

“ದೇವರು ನಿಮಗೆ ಹೆಚ್ಚಿನ ಯಶಸ್ಸನ್ನು ನೀಡಲಿ, ಸಹೋದರ” ಎಂದು ನೆಟ್ಟಿಗರೊಬ್ಬರು ಹಾರೈಸಿದ್ದಾರೆ. “ಡಾಲಿಯ ಯಶಸ್ಸು ನನಗೆ ಖುಷಿ ತಂದುಕೊಟ್ಟಿದೆ. ಸಣ್ಣ ವ್ಯಾಪಾರಿಯೊಬ್ಬ ಈ ಮಟ್ಟಕ್ಕೆ ಬೆಳೆದಾಗ ಅದನ್ನು ನೋಡಲು ನನಗೆ ತುಂಬಾ ಸಂತೋಷವಾಗುತ್ತದೆʼʼ ಎಂದು ಮತ್ತೊಬ್ಬರು ತಿಳಿಸಿದ್ದಾರೆ. ನಿಮ್ಮ ಬಗ್ಗೆ ಹೆಮ್ಮೆ ಎನಿಸುತ್ತದೆ ಎಂದು ಮಗದೊಬ್ಬರು ಹೇಳಿದ್ದಾರೆ. ʼʼಡಾಲಿ ಚಾಯ್‌ವಾಲಾ ಅಸಾಧಾರಣ ಪ್ರತಿಭೆ ಹೊಂದಿದ್ದಾರೆ. ಆದ್ದರಿಂದ ಅವರು ಈಗ ಇಲ್ಲಿದ್ದಾರೆ. ಚಹಾದಿಂದಾಗಿ ಅಲ್ಲ, ತಮ್ಮ ವಿಶಿಷ್ಟ ಶೈಲಿಯಿಂದಾಗಿ ಅವರು ಇಷ್ಟು ಯಶಸ್ಸು ದಾಖಲಿಸಿದ್ದಾರೆ” ಎಂದು ನೆಟ್ಟಿಗರೊಬ್ಬರು ಅಭಿಪ್ರಾಯ ಪಟ್ಟಿದ್ದಾರೆ.

ಡಾಲಿ ಚಾಯ್‌ವಾಲಾ ಹಿನ್ನೆಲೆ

ಮಹಾರಾಷ್ಟ್ರ ನಾಗಪುರದ ಸರ್ದಾರ್‌ ಏರಿಯಾದ ಹಳೆ ವಿಸಿಎ ಮೈದಾನ (Old VCA stadium)ದ ಬಳಿ ಬೀದಿ ಬದಿಯ ಚಹಾ ಗಾಡಿ ಇಟ್ಟುಕೊಂಡಿರುವ ಡಾಲಿ ಚಾಯ್‌ವಾಲಾ ತಮ್ಮ ವಿಶಿಷ್ಟ ಶೈಲಿಯ ಚಹಾ ತಯಾರಿಯ ಮೂಲಕವೇ ಜನಪ್ರಿಯರಾಗಿದ್ದಾರೆ. ಅವರ ನಿಜ ಹೆಸರು ಯಾರಿಗೂ ತಿಳಿದಿಲ್ಲ. ಆದರೆ ಅವರ ವಿಡಿಯೊಗಳನ್ನು ಸೋಷಿಯಲ್‌ ಮೀಡಿಯಾಗಳಲ್ಲಿ ಲಕ್ಷಗಟ್ಟಲೆ ಮಂದಿ ವೀಕ್ಷಿಸುತ್ತಾರೆ. ತಮ್ಮದೇ ಅನನ್ಯ ಶೈಲಿಯಲ್ಲಿ ಚಹಾ ಮಾಡುವ ವಿಡಿಯೊಗಳನ್ನು ಅವರು ಆಗಾಗ ಅಪ್‌ಲೋಡ್‌ ಮಾಡುತ್ತಿರುತ್ತಾರೆ. ಚಹಾ ಮಾತ್ರವಲ್ಲ ಡಾಲಿ ಚಾಯ್‌ವಾಲಾ ಅಂಗಡಿಯಲ್ಲಿ ಸಿಗರೇಟ್‌ ಕೂಡ ಲಭ್ಯ. ಹೀಗಾಗಿಯೇ ಅವರ ಅಂಗಡಿ ಮುಂದೆ ಯಾವಾಗಲೂ ಜನ ಸಂದಣಿ ಕಂಡು ಬರುತ್ತದೆ. ಇತ್ತೀಚೆಗೆ ಭಾರತದ ಪ್ರವಾಸ ಕೈಗೊಂಡಿದ್ದ ಬಿಲ್ ಗೇಟ್ಸ್ ಅವರು ಬೀದಿ ಬದಿಯ ಡಾಲಿ ಚಾಯ್‌ವಾಲಾ ಅವರ ಚಹಾ ಗಾಡಿ ಬಳಿ ಚಹಾ ಮಾಡಿಸಿಕೊಂಡು ಸವಿಯುತ್ತಿರುವ ವಿಡಿಯೊ ಎಲ್ಲೆಡೆ ಹರಿದಾಡಿ ಸಂಚಲನ ಸೃಷ್ಟಿಸಿತ್ತು. ಅಂದಿನಿಂದ ಅವರ ಅದೃಷ್ಟ ಖುಲಾಯಿಸಿತ್ತು.

ಇದನ್ನೂ ಓದಿ: Viral News: ಬಿಲ್‌ ಗೇಟ್ಸ್ ಮನಗೆದ್ದ ಈ ಡಾಲಿ ಚಾಯ್‌ವಾಲಾ ಯಾರು? ಏನಿವರ ಕಥೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Miss Universe Buenos Aires: ಈಕೆ ಬ್ಯೂನಸ್‌ ಐರಿಸ್‌ ವಿಶ್ವ ಸುಂದರಿ; ಇವಳ ವಯಸ್ಸು ನೀವೇ ಊಹಿಸಿ!

Miss Universe Buenos Aires: ಅರ್ಜೆಂಟೀನಾದ ಬ್ಯೂನಸ್ ಐರಿಸ್ ಪ್ರಾಂತ್ಯದ ರಾಜಧಾನಿ ಲಾ ಪ್ಲಾಟಾದಿಂದ ಬಂದ ರೋಡ್ರಿಗಸ್ ಕೇವಲ ಸೌಂದರ್ಯ ರಾಣಿಯಲ್ಲ. ಅವರು ಅನುಭವಿ ವಕೀಲರು ಮತ್ತು ಪತ್ರಕರ್ತರು. ಸಮಕಾಲೀನ ಸೌಂದರ್ಯದ ಬಹುಮುಖಿ ಸ್ವಭಾವವನ್ನು ಪ್ರದರ್ಶಿಸಿದ್ದಾರೆ. ಅವರ ಗೆಲುವು ಸೌಂದರ್ಯದ ಹಾಗೂ ವಯಸ್ಸಿನ ವಯಸ್ಸಿನ ಸಾಂಪ್ರದಾಯಿಕ ಮಾನದಂಡಗಳನ್ನು ಮರು ವ್ಯಾಖ್ಯಾನಿಸುವಂತೆ ಮಾಡಿದೆ.

VISTARANEWS.COM


on

miss universe Buenos Aires
Koo

ಹೊಸದಿಲ್ಲಿ: ಅರ್ಜೆಂಟೀನಾದ (Argentina) ಅಲೆಜಾಂಡ್ರಾ ಮಾರಿಸಾ ರೋಡ್ರಿಗಸ್ (Alejandra Marisa Rodriguez) ಅವರು `ಬ್ಯೂನಸ್ ಐರಿಸ್ ವಿಶ್ವ ಸುಂದರಿ’ (Miss Universe Buenos Aires) ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದು, ಈ ಸೌಂದರ್ಯ ಸ್ಪರ್ಧೆ (Beauty Pageant) ಗೆಲ್ಲಲು ಅಗತ್ಯವಾದ ಯವ್ವನದ ಬಗೆಗಿನ ಸ್ಟಿರಿಯೋಟೈಪ್‌ಗಳನ್ನು ಮುರಿದಿದ್ದಾರೆ. ಅಂದ ಹಾಗೆ ಈಕೆಯ ವಯಸ್ಸು 60 ವರ್ಷ!

ಈ ಮೂಲಕ ಈ ಆಂಟಿ ಇತಿಹಾಸ ಬರೆದಿದ್ದಾರೆ. ಬುಧವಾರ ನಡೆದ ಸ್ಪರ್ಧೆಯಲ್ಲಿ ಈಕೆಯ ಗೆಲುವು ಘೋಷಿಸಲಾಯಿತು. ವಿಶ್ವ ಸುಂದರಿ ಸೌಂದರ್ಯ ಸ್ಪರ್ಧೆ ವೈವಿಧ್ಯತೆಯನ್ನು ಅಳವಡಿಸಿಕೊಳ್ಳುತ್ತಿರುವುದರತ್ತವೂ ಇದು ಗಮನ ಸೆಳೆದಿದೆ.

ಅರ್ಜೆಂಟೀನಾದ ಬ್ಯೂನಸ್ ಐರಿಸ್ ಪ್ರಾಂತ್ಯದ ರಾಜಧಾನಿ ಲಾ ಪ್ಲಾಟಾದಿಂದ ಬಂದ ರೋಡ್ರಿಗಸ್ ಕೇವಲ ಸೌಂದರ್ಯ ರಾಣಿಯಲ್ಲ. ಅವರು ಅನುಭವಿ ವಕೀಲರು ಮತ್ತು ಪತ್ರಕರ್ತರು. ಸಮಕಾಲೀನ ಸೌಂದರ್ಯದ ಬಹುಮುಖಿ ಸ್ವಭಾವವನ್ನು ಪ್ರದರ್ಶಿಸಿದ್ದಾರೆ. ಅವರ ಗೆಲುವು ಸೌಂದರ್ಯದ ಹಾಗೂ ವಯಸ್ಸಿನ ವಯಸ್ಸಿನ ಸಾಂಪ್ರದಾಯಿಕ ಮಾನದಂಡಗಳನ್ನು ಮರು ವ್ಯಾಖ್ಯಾನಿಸುವಂತೆ ಮಾಡಿದೆ.

ಇಂತಹ ಪ್ರತಿಷ್ಠಿತ ಸೌಂದರ್ಯ ಪ್ರಶಸ್ತಿಯನ್ನು ಪಡೆದ ಈ ವಯಸ್ಸಿನ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಆಕೆಯ ಸೊಬಗು, ಚರಿಷ್ಮಾ ಮತ್ತು ಸಾಂಕ್ರಾಮಿಕ ನಗು ನ್ಯಾಯಾಧೀಶರು ಮತ್ತು ಪ್ರೇಕ್ಷಕರನ್ನು ಸಮಾನವಾಗಿ ಆಕರ್ಷಿಸಿತು.

ಮೇ 2024ರಂದು ನಡೆಯಲಿರುವ ʼಮಿಸ್ ಯೂನಿವರ್ಸ್ ಅರ್ಜೆಂಟೀನಾʼಗೆ ಮುಂಬರುವ ರಾಷ್ಟ್ರೀಯ ಆಯ್ಕೆಯಲ್ಲಿ ಬ್ಯೂನಸ್ ಐರಿಸ್ ಅನ್ನು ಪ್ರತಿನಿಧಿಸಲು ಈಕೆ ತಯಾರಿ ನಡೆಸುತ್ತಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾದ ವೀಡಿಯೊಗಳು ಆಕೆಯ ನಿರ್ಣಯವನ್ನು ಬಹಿರಂಗಪಡಿಸಿವೆ. ಅವರು ಅಲ್ಲಿ ವಿಜಯಶಾಲಿಯಾದರೆ, ʼಮಿಸ್ ಯೂನಿವರ್ಸ್ ವರ್ಲ್ಡ್‌ʼನ ಜಾಗತಿಕ ವೇದಿಕೆಯಲ್ಲಿ ರೋಡ್ರಿಗಸ್ ಅರ್ಜೆಂಟೀನಾದ ಧ್ವಜವನ್ನು ಹಾರಿಸಲಿದ್ದಾರೆ. ಸ್ಪರ್ಧೆಯನ್ನು ಸೆಪ್ಟೆಂಬರ್ 28, 2024ರಂದು ಮೆಕ್ಸಿಕೋದಲ್ಲಿ ನಿಗದಿಪಡಿಸಲಾಗಿದೆ.

“ಸೌಂದರ್ಯ ಸ್ಪರ್ಧೆಗಳಲ್ಲಿ ಈ ಹೊಸ ಮಾದರಿ ರೂಪಿಸುವುದರ ಮೂಲಕ ನಾನು ರೋಮಾಂಚನಗೊಂಡಿದ್ದೇನೆ. ನಾವು ಹೊಸ ಹಂತವನ್ನು ಉದ್ಘಾಟಿಸುತ್ತಿದ್ದೇವೆ. ಇದರಲ್ಲಿ ಮಹಿಳೆಯರು ಕೇವಲ ದೈಹಿಕ ಸೌಂದರ್ಯವಲ್ಲ. ಮೌಲ್ಯಗಳ ಮತ್ತೊಂದು ಮಾದರಿ” ಎಂದು ಅವರು ಗೆದ್ದ ನಂತರ ಮಾಧ್ಯಮಗಳಿಗೆ ಹೇಳಿದರು.

“ಮಿಸ್ ಯೂನಿವರ್ಸ್ ಸ್ಪರ್ಧೆಯು ಇನ್ನು ಮುಂದೆ ಸ್ಪರ್ಧಿಗಳಿಗೆ ವಯಸ್ಸಿನ ಮಿತಿಗಳನ್ನು ಹೊಂದಿರುವುದಿಲ್ಲ” ಎಂದು ಕಳೆದ ವರ್ಷ ಘೋಷಿಸಲಾಗಿತ್ತು. ಈ ವರ್ಷದಿಂದ 18 ವರ್ಷ ಮೇಲ್ಪಟ್ಟ ಯಾವುದೇ ಮಹಿಳೆ ಸ್ಪರ್ಧಿಸಲು ಅರ್ಹರಾಗಿರುತ್ತಾರೆ. ಹಿಂದೆ, 18-28 ವರ್ಷ ವಯಸ್ಸಿನ ಮಹಿಳೆಯರು ಮಾತ್ರ ಸ್ಪರ್ಧೆಯನ್ನು ಪ್ರವೇಶಿಸಬಹುದಾಗಿತ್ತು. ಮಿಸ್ ಯೂನಿವರ್ಸ್ 2024ರಲ್ಲಿ ಡೊಮಿನಿಕನ್ ರಿಪಬ್ಲಿಕ್ ಅನ್ನು ಪ್ರತಿನಿಧಿಸುವ 47 ವರ್ಷದ ಹೈಡಿ ಕ್ರೂಜ್, ಈ ರೀತಿ ವಯಸ್ಸಿನ ಅಡೆತಡೆ ಮೀರಿದ ಇನ್ನೊಬ್ಬ ಸೌಂದರ್ಯ ಸ್ಪರ್ಧಿ.

ಇದನ್ನೂ ಓದಿ: Harnaaz Sandhu | ಮಿಸ್‌ ಯುನಿವರ್ಸ್‌ ವೇದಿಕೆ ಮೇಲೆ ಎಡವಿದ ಮಾಜಿ ಭುವನ ಸುಂದರಿ ಹರ್ನಾಜ್‌ ಸಂಧು, ವಿಡಿಯೊ ವೈರಲ್

Continue Reading

ವೈರಲ್ ನ್ಯೂಸ್

Fact Check: ಓವೈಸಿ ವಿರುದ್ಧ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಮಹಿಳೆ ಅಲ್ಲವೆ?

Fact Check: ತಾವು ಮಹಿಳೆಯೇ ಅಲ್ಲ ಎಂದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಹೈದರಾಬಾದ್ ನ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಅವರು ತಾವು ಮಹಿಳೆಯೇ ಅಲ್ಲ ಎಂದು ಹೇಳಿರುವುದು ನಿಜವೇ, ಅವರು ಯಾಕೆ ಹಾಗೆ ಹೇಳಿದರು. ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿಡಿಯೋದ ನಿಜಾಂಶ ಏನು? ಇಲ್ಲಿದೆ ಸಂಪೂರ್ಣ ವಿವರ.

VISTARANEWS.COM


on

By

Viral Video
Koo

ಹೈದರಾಬಾದ್: ಭಾರತೀಯ ಜನತಾ ಪಕ್ಷದ (BJP) ಹೈದರಾಬಾದ್ ನ (Hyderabad) ಅಭ್ಯರ್ಥಿ ಮಾಧವಿ ಲತಾ (Madhavi Latha) ಅವರು ತಾವು ಮಹಿಳೆಯೇ ಅಲ್ಲ ಎಂದು ಹೇಳಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ (Viral Video) ಆಗಿದ್ದು, ಇದನ್ನು ನೋಡಿರುವ ನೆಟ್ಟಿಗರು (Fact Check) ನಾನಾ ರೀತಿಯ ಕಾಮೆಂಟ್ ಗಳನ್ನು ಮಾಡಿದ್ದಾರೆ.

ಸಂದರ್ಶನವೊಂದರಲ್ಲಿ ಮಾಧವಿ ಲತಾ ಅವರು “ನಾನು ಮಹಿಳೆ ಅಲ್ಲ” ಎಂದು ಹೇಳುವ ವಿಡಿಯೋವನ್ನು ಕತ್ತರಿಸಿ ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿದೆ. ಹೈದರಾಬಾದ್‌ನ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿ ಮಹಿಳೆ ಅಲ್ಲ ಎಂದು ಸುಳ್ಳು ಪ್ರಚಾರವನ್ನೂ ಮಾಡಲಾಗುತ್ತಿದೆ. ಇದರ ಮೂಲ ಸಂದರ್ಶನದಲ್ಲಿ ಲತಾ ಅವರು ತಾನು ಕೇವಲ ಮಹಿಳೆಯಲ್ಲ ಆದರೆ ಶಕ್ತಿ ಎಂದು ಹೇಳಿದ್ದರು.

ಓವೈಸಿ ವಿರುದ್ಧ ಕಣಕ್ಕೆ

ತೆಲಂಗಾಣದ ಹೈದರಾಬಾದ್‌ನಲ್ಲಿ ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ನ ಹಾಲಿ ಸಂಸದ ಅಸಾದುದ್ದೀನ್ ಓವೈಸಿ ವಿರುದ್ಧ ಬಿಜೆಪಿಯಿಂದ ಕಣಕ್ಕೆ ಇಳಿದಿರುವ ನಟಿ ಲತಾ ಅವರು ಇತ್ತೀಚೆಗೆ ಪ್ರಚಾರ ಕಾರ್ಯಕ್ರಮವೊಂದರಲ್ಲಿ 221 ಕೋಟಿ ರೂ. ಮೌಲ್ಯದ ಕುಟುಂಬದ ಆಸ್ತಿಯನ್ನು ಘೋಷಿಸಿದ ನಂತರ ಹೈದರಾಬಾದ್ ಕ್ಷೇತ್ರದ ಶ್ರೀಮಂತ ಅಭ್ಯರ್ಥಿಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿ: Viral News: ಸಿಂಗಾಪುರ ಏರ್‌ಲೈನ್ಸ್‌ ಪೈಲಟ್‌ ಅಂತಾ ಹೇಳ್ಕೊಂಡು ಪೋಸ್‌ ಕೊಡ್ತಿದ್ದವ ಲಾಕ್‌!

ವಿಡಿಯೋದಲ್ಲಿ ಏನಿದೆ?

ಈಗ ವೈರಲ್ ಆಗಿರುವ ವಿಡಿಯೋದಲ್ಲಿ ಲತಾ ಅವರು ಸುದ್ದಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದು, ಮಹಿಳೆಯಾಗಿ ಪರಿಸ್ಥಿತಿಯನ್ನು ನಿಭಾಯಿಸುವ ಬಗ್ಗೆ ವರದಿಗಾರರ ಪ್ರಶ್ನೆಗೆ ಉತ್ತರಿಸುತ್ತಾ, “ನಾನು ಮಹಿಳೆ ಅಲ್ಲ, ದಯವಿಟ್ಟು ನನ್ನನ್ನು ಮಹಿಳೆ ಎಂದು ಕರೆಯಬೇಡಿ”’ ಎಂದು ನೇರವಾಗಿ ಹೇಳಿದ್ದಾರೆ. ಆದರೆ ಮುಂದೆ ಅವರು, ನಾನು ಮಹಿಳೆ ಅಲ್ಲ, ಕೇವಲ ಮಹಿಳೆ ಅಲ್ಲ, ಮಹಾ ಶಕ್ತಿ ಎಂದು ಮಾಧವಿ ಲತಾ ಹೇಳಿದ್ದರು. ಆದರೆ ಈ ಭಾಗ ತೋರಿಸದೆ ತಾವು ಮಹಿಳೆ ಅಲ್ಲ ಎಂದ ದೃಶ್ಯವನ್ನಷ್ಟೇ ಕಟ್ ಮಾಡಿ ಶೇರ್ ಮಾಡಲಾಗುತ್ತದೆ.

ಈ ಕುರಿತು ಹಲವಾರು ಮಂದಿ ನೆಟ್ಟಿಗರು ಕಾಮೆಂಟ್ ಮಾಡಿದ್ದು, ಹಾಗಾದರೆ ಹೈದರಾಬಾದ್ ಬಿಜೆಪಿ ಅಭ್ಯರ್ಥಿ ಮಹಿಳೆ ಅಲ್ಲವೇ, ಮುಖ ನೋಡುವಾಗ ಮಹಿಳೆಯಂತೆ ಕಾಣುತ್ತಾರೆ, ಹಾಗಾದರೆ ಅವರು ಮಂಗಳಮುಖಿಯೇ… ಹೀಗೆ ಹಲವು ರೀತಿಯಲ್ಲಿ ಕಾಮೆಂಟ್ ಗಳನ್ನು ಮಾಡಿದ್ದಾರೆ.


ಸತ್ಯ ಏನು?

ಲತಾ ಅವರು ಮಹಿಳೆ ಅಲ್ಲ ಎಂದು ನೀಡಿರುವ ಹೇಳಿಕೆಯನ್ನು ಕತ್ತರಿಸಿ ಹಂಚಿಕೊಳ್ಳಲಾಗಿದೆ ಎಂದು ಬೂಮ್ ಕಂಡುಹಿಡಿದಿದೆ. ‘ನ್ಯೂಸ್ ನೇಷನ್’ ಎಂಬ ಹಿಂದಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಲತಾ ಅವರು, ಓವೈಸಿ ವಿರುದ್ಧ ಸ್ಪರ್ಧಿಸುತ್ತಿರುವ ವಿಚಾರವಾಗಿ ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿದ್ದಾರೆ. ಅಲ್ಲದೇ ತಾವು ಬಿಜೆಪಿ ಸೇರಿದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ಕುರಿತಾದ ಹಲವಾರು ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದಾರೆ.

ಹೈದರಾಬಾದ್‌ನ ಹಳೆಯ ನಗರ ಭಾಗದ ಕೆಲವು ಪ್ರದೇಶಗಳಿಗೆ ಭೇಟಿ ನೀಡಿಲ್ಲ ಎಂದಿರುವ ಅವರು, ನಗರದ ಅತಿದೊಡ್ಡ ಕೊಳೆಗೇರಿ ವಸಾಹತುಗಳಲ್ಲಿ ಒಂದಾದ ತಾಲಾಬ್ ಕಟ್ಟಾ ಮುಂತಾದವುಗಳ ಬಗ್ಗೆ ವರದಿಗಾರ ಪ್ರಶ್ನೆಗಳಿಗೆ ಉತ್ತರಿಸಿದರು. ಒಬ್ಬ ಮಹಿಳೆಯಾಗಿ ನೀವು ಆ ಪರಿಸ್ಥಿತಿಯನ್ನು ಹೇಗೆ ಎದುರಿಸಲು ಯೋಜಿಸುತ್ತೀರಿ ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸಿಟ್ಟಾದ ಸ್ವರದಲ್ಲಿ ನಾನು ಮಹಿಳೆ ಅಲ್ಲ, ನಾನು ಶಕ್ತಿ. ನೀವು ಅದನ್ನು ಮೊದಲು ಸ್ಪಷ್ಟಪಡಿಸಬೇಕು. ನನ್ನನ್ನು ಮಹಿಳೆ ಎಂದು ಪದೇ ಪದೇ ಕರೆಯಬೇಡಿ. ನೀವು ನನ್ನನ್ನು ದುರ್ಬಲ ಎಂದು ಪರಿಗಣಿಸುವಂತೆ ತೋರುತ್ತಿದೆ ಎಂದು ಹೇಳಿದ್ದಾರೆ.

ಇದಾದ ನಂತರ ಲತಾ ಕ್ಯಾಮೆರಾದತ್ತ ತಿರುಗಿ, ನೇರವಾಗಿ ವೀಕ್ಷಕರನ್ನು ಉದ್ದೇಶಿಸಿ, ನಾನು ಒಬ್ಬ ಮಹಿಳೆ ಅಲ್ಲ, ತನ್ನ ಸಹೋದರ ಸಹೋದರಿಯರ ಶಕ್ತಿಯಿಂದ ಇಲ್ಲಿರುವ ಶಕ್ತಿ ಸ್ವತಃ ನಾನು. ಅವರ ಶಕ್ತಿಯಿಂದಾಗಿ ನಾನು ಉಳಿದಿದ್ದೇನೆ ಎಂದು ತಿಳಿಸಿದ್ದಾರೆ.

ಶಕ್ತಿ ಎಂಬ ಪದವನ್ನು ಹಿಂದೂ ಧರ್ಮದಲ್ಲಿ ವಿವಿಧ ರೂಪಗಳಲ್ಲಿ ಪೂಜಿಸುವ ದೈವಿಕ ಸ್ತ್ರೀಲಿಂಗ ಶಕ್ತಿಯನ್ನು ಉಲ್ಲೇಖಿಸಲು ಇದನ್ನು ಬಳಸಲಾಗುತ್ತದೆ. ವೈರಲ್ ಆಗಿರುವ ವಿಡಿಯೋದಲ್ಲಿ ಲತಾ ಅವರ ಹೇಳಿಕೆಯನ್ನು ಕತ್ತರಿಸಿ ಹಾಕಲಾಗಿದೆ.

Continue Reading

ವೈರಲ್ ನ್ಯೂಸ್

Jai SriRam Slogan: ಉತ್ತರಪತ್ರಿಕೆಯಲ್ಲಿ `ಜೈ ಶ್ರೀರಾಮ್’ ಬರೆದ ವಿದ್ಯಾರ್ಥಿಗಳು ಪಾಸ್;‌ ಪ್ರಾಧ್ಯಾಪಕರು ವಜಾ!

Jai SriRam Slogan: ಉತ್ತರ ಪತ್ರಿಕೆಯಲ್ಲಿ ಸಿನಿಮಾ ಹಾಡುಗಳು, ಮ್ಯೂಸಿಕ್‌ ಮತ್ತು ಧಾರ್ಮಿಕ ಘೋಷಣೆಗಳನ್ನು ಬರೆದು, ಅದಕ್ಕೆ ಅಂಕಗಳನ್ನು ನೀಡುವುದಕ್ಕಾಗಿ ವಿದ್ಯಾರ್ಥಿಗಳಿಂದ ಹಣವನ್ನು ಲಂಚ ಪಡೆದ ಆರೋಪದ ಮೇಲೆ ಜೌನ್‌ಪುರದ ವೀರ್ ಬಹದ್ದೂರ್ ಸಿಂಗ್ ಪೂರ್ವಾಂಚಲ್ ವಿಶ್ವವಿದ್ಯಾಲಯದ ಇಬ್ಬರು ಪ್ರಾಧ್ಯಾಪಕರನ್ನು ಅಮಾನತುಗೊಳಿಸಲಾಗಿದೆ.

VISTARANEWS.COM


on

jai sriram slogan viral news
Koo

ಲಖನೌ: ಉತ್ತರ ಪ್ರದೇಶದ (Uttar Pradesh) ವಿಶ್ವವಿದ್ಯಾನಿಲಯವೊಂದರಲ್ಲಿ (University) ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳು ಉತ್ತರ ಪತ್ರಿಕೆಯಲ್ಲಿ (Answer Paper) ಉತ್ತರಗಳ ಬದಲು “ಜೈ ಶ್ರೀ ರಾಮ್” ಘೋಷಣೆ (Jai SriRam Slogan) ಮತ್ತು ಕ್ರಿಕೆಟಿಗರ ಹೆಸರನ್ನು ಬರೆದು ಪರೀಕ್ಷೆ ಮುಗಿಸಿದ್ದಾರೆ. ಅವರೇನೋ ಪಾಸಾಗಿದ್ದಾರೆ. ಆದರೆ ನಂತರ ಕಾನೂನು ಉರುಳು ಪ್ರಾಧ್ಯಾಪಕರನ್ನು ಸುತ್ತಿಕೊಂಡಿದೆ.

ಉತ್ತರ ಪತ್ರಿಕೆಯಲ್ಲಿ ಸಿನಿಮಾ ಹಾಡುಗಳು, ಮ್ಯೂಸಿಕ್‌ ಮತ್ತು ಧಾರ್ಮಿಕ ಘೋಷಣೆಗಳನ್ನು ಬರೆದು, ಅದಕ್ಕೆ ಅಂಕಗಳನ್ನು ನೀಡುವುದಕ್ಕಾಗಿ ವಿದ್ಯಾರ್ಥಿಗಳಿಂದ ಹಣವನ್ನು ಲಂಚ ಪಡೆದ ಆರೋಪದ ಮೇಲೆ ಜೌನ್‌ಪುರದ ವೀರ್ ಬಹದ್ದೂರ್ ಸಿಂಗ್ ಪೂರ್ವಾಂಚಲ್ ವಿಶ್ವವಿದ್ಯಾಲಯದ ಇಬ್ಬರು ಪ್ರಾಧ್ಯಾಪಕರನ್ನು ಅಮಾನತುಗೊಳಿಸಲಾಗಿದೆ. ವಿಶ್ವವಿದ್ಯಾನಿಲಯದ ಕೆಲವು ಅಧಿಕಾರಿಗಳ ಸಹಕಾರದಿಂದ, ಶೂನ್ಯ ಅಂಕ ಪಡೆದ ವಿದ್ಯಾರ್ಥಿಗಳಿಗೂ ಶೇ.60ಕ್ಕಿಂತ ಹೆಚ್ಚು ಅಂಕ ನೀಡಿ ಉತ್ತೀರ್ಣಗೊಳಿಸಲಾಗಿದೆ ಎಂದು ವಿದ್ಯಾರ್ಥಿ ಮುಖಂಡ ದಿವ್ಯಾಾಂಶು ಸಿಂಗ್ ಅವರು ಪ್ರಧಾನಿ, ಮುಖ್ಯಮಂತ್ರಿ, ರಾಜ್ಯಪಾಲರು ಹಾಗೂ ಉಪಕುಲಪತಿಗಳಿಗೆ ಬರೆದ ಪತ್ರದಲ್ಲಿ ಆರೋಪಿಸಿದ್ದಾರೆ.

ಆರ್‌ಟಿಐ ಮೂಲಕ ಪಡೆಯಲಾದ ಉತ್ತರ ಪತ್ರಿಕೆಗಳ ಮೌಲ್ಯಮಾಪನದ ಪ್ರತಿಗಳಲ್ಲಿ ಈ ಅಕ್ರಮಗಳನ್ನು ಗುರುತಿಸಲಾಗಿದೆ. ಮರು ಮೌಲ್ಯಮಾಪನದ ಅಂಕಗಳಲ್ಲಿ ಗಮನಾರ್ಹ ವ್ಯತ್ಯಾಸ ಉಂಟಾಗಿದೆ. “ವಿದ್ಯಾರ್ಥಿಗಳಿಗೆ ಹೆಚ್ಚು ಅಂಕ ನೀಡಲಾಗಿದೆ ಎಂಬ ಆರೋಪವಿತ್ತು. ಹಾಗಾಗಿ ನಾವು ಸಮಿತಿಯನ್ನು ರಚಿಸಿದ್ದೇವೆ. ಆ ಸಮಿತಿಯು ತನ್ನ ವರದಿಯಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚು ಅಂಕಗಳನ್ನು ನೀಡಲಾಗಿದೆ ಎಂದು ಹೇಳಿದೆ” ಎಂದು ಉಪಕುಲಪತಿ ವಂದನಾ ಸಿಂಗ್ ಹೇಳಿದರು.

ಧಾರ್ಮಿಕ ಘೋಷಣೆಗಳ ಬಗ್ಗೆ ಕೇಳಿದಾಗ, ಅವರು ಹೇಳಿದರು: “ಜೈ ಶ್ರೀ ರಾಮ್ ಉತ್ತರಗಳಿರುವ ಪ್ರತಿಯನ್ನು ನಾನು ನೋಡಿಲ್ಲ. ಆದರೆ ವಿದ್ಯಾರ್ಥಿಗೆ ಯಾವ ಅಂಕಗಳನ್ನೂ ನೀಡಲು ಸಾಧ್ಯವಾಗದ ಪ್ರತಿಗಳನ್ನು ನೋಡಿದ್ದೇನೆ. ಕೈಬರಹವು ಸ್ಪಷ್ಟವಾಗಿಲ್ಲ.” ಈ ಕುರಿತು ರಾಜಭವನವು ವಿಶ್ವವಿದ್ಯಾಲಯದ ಉಪಕುಲಪತಿಗಳಿಗೆ ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ಸೂಚಿಸಿತ್ತು.

ಬುಧವಾರ ನಡೆದ ಪರೀಕ್ಷಾ ಸಮಿತಿ ಸಭೆಯಲ್ಲಿ ಪರೀಕ್ಷಕರಾದ ಡಾ ವಿನಯ್ ವರ್ಮಾ ಮತ್ತು ಮನೀಶ್ ಗುಪ್ತಾ ಅವರನ್ನು ಅಮಾನತುಗೊಳಿಸಲಾಗಿದೆ. ಇಂತಹ ಘಟನೆ ಪುನರಾವರ್ತನೆಯಾಗದಂತೆ ಶಿಕ್ಷಕರಿಗೆ ಎಚ್ಚರಿಕೆ ನೀಡಲಾಗಿದೆ. ಈ ಶಿಕ್ಷಕರನ್ನು ವಜಾಗೊಳಿಸಲು ಸಮಿತಿ ಶಿಫಾರಸು ಮಾಡಿದೆ. ಆದರೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ನೀತಿ ಸಂಹಿತೆ ತೆರವಾದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಉಪಕುಲಪತಿ ಹೇಳಿದರು.

ಇದನ್ನೂ ಓದಿ: Jai Sriram Slogan: ಜೈ ಶ್ರೀರಾಮ್‌ ಹೇಳಿದ್ದಕ್ಕೆ ಮುಸ್ಲಿಂ ಯುವಕರಿಂದ ಹಲ್ಲೆ; ಇನ್ನೊಂದು ಘಟನೆ

Continue Reading

Lok Sabha Election 2024

Lok Sabha Election 2024: ತಾಳಿ ಕಟ್ಟುವ ಹತ್ತು ನಿಮಿಷ ಮುಂಚೆ ಓಡೋಡಿ ಹೋದ ವರ; ವೋಟ್‌ ಹಾಕಿ ನಿರಾಳ

Lok Sabha Election 2024: ಕರುನಾಡಿನೆಲ್ಲೆಡೆ ಸಂಭ್ರಮದ ಚುನಾವಣೆ ನಡೆಯುತ್ತಿದ್ದು, ಪ್ರತ್ಯೇಕ ಕಡೆಗಳಲ್ಲಿ ವಧು-ವರರಿಂದಲೂ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಹಕ್ಕು ಚಲಾವಣೆ ಮಾಡಿದ್ದಾರೆ. ಚಾಮರಾಜನಗರದಲ್ಲಿ ವರನೊಬ್ಬ ತಾಳಿ ಕಟ್ಟುವ ಹತ್ತು ನಿಮಿಷ ಮುಂಚೆ ಓಡೋಡಿ ಬಂದರೆ, ಇತ್ತ ಚಿಕ್ಕಮಗಳೂರಲ್ಲಿ ವಧು ಹಸೆಮಣೆ ಏರುವ ಮುನ್ನ ಮತದಾನ ಮಾಡಿದ್ದಾರೆ.

VISTARANEWS.COM


on

By

Lok sabha election 2024
Koo

ಚಾಮರಾಜನಗರ/ಚಿಕ್ಕಮಗಳೂರು: ಲೋಕಸಭಾ ಚುನಾವಣೆ (Lok sabha Election 2024) ಹಿನ್ನೆಲೆಯಲ್ಲಿ ಮತದಾನದ ಹಬ್ಬ ಬಿರುಸಿನ ನಡೆಯುತ್ತಿದೆ. ವಿಶೇಷ ಚೇನತರು, ವೃದ್ಧರೆನ್ನದೆ ಎಲ್ಲರೂ ಸಂಭ್ರಮದಿಂದ ಮತಗಳನ್ನು ಚಲಾವಣೆ ಮಾಡುತ್ತಿದ್ದಾರೆ. ಎಲ್ಲರ ಮನೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಅಲ್ಲದೆ, ನೂತನ ವರ- ವಧುಗಳೂ ಸಹ ವಿವಾಹಕ್ಕೂ ಮುಂಚೆ ಮತಗಟ್ಟೆಗೆ ಬಂದು ಮತವನ್ನು ಚಲಾಯಿಸುವ ಮೂಲಕ ತಮ್ಮ ಹಕ್ಕನ್ನು ಚಲಾವಣೆ ಮಾಡಿದ್ದಾರೆ. ಈ ಮೂಲಕ ಎಲ್ಲರೂ ಮತದಾನ ಮಾಡುವಂತೆ ಕರೆ ಕೊಟ್ಟಿದ್ದಾರೆ.

ಮತ ಚಲಾವಣೆ ಮಾಡಿದ ವರ ಚೇತನ್‌

ಚಾಮರಾಜನಗರ ಜಿಲ್ಲೆ ಚಾಮರಾಜನಗರ ತಾಲೂಕಿನ ಸಂತೇಮರಳ್ಳಿಯಲ್ಲಿ ವರನೊಬ್ಬ ಮತಗಟ್ಟೆಗೆ ಓಡೋಡಿ ಬಂದು ಮತ ಚಲಾಯಿಸಿದ್ದಾರೆ. ತಾಳಿ ಕಟ್ಟುವ ಹತ್ತು ನಿಮಿಷ ಮುಂಚೆ ಮತಕೇಂದ್ರಕ್ಕೆ ಓಡೋಡಿ ಹೋದ ವರ ವೋಟ್‌ ಹಾಕಿ ನಿರಾಳರಾದರು. ವರ ಚೇತನ್ ಎಂಬುವವರು ಮತಗಟ್ಟೆ ಸಂಖ್ಯೆ 60ರಲ್ಲಿ ಮತದಾನ ಮಾಡಿ ತಮ್ಮ ಹಕ್ಕು ಚಲಾಯಿಸಿ ಇತರರಿಗೂ ಮಾದರಿ ಆದರು. ಚೇತನ್‌ ಅವರು ದೀಪಿಕಾ ಎಂಬುವರ ಜತೆಗೆ ವಿವಾಹವಾಗುತ್ತಿದ್ದು, ತಮ್ಮ ಮುಹೂರ್ತದ ವಸ್ತ್ರದಲ್ಲೇ ಬಂದು ವೋಟ್‌ ಹಾಕಿದ್ದಾರೆ.

ಮುಹೂರ್ತಕ್ಕೂ ಮುನ್ನ ವಧುವಿನ ಮತದಾನ

ಚಿಕ್ಕಮಗಳೂರಿನ ಶೃಂಗೇರಿ ತಾಲೂಕಿನ ಕೊತ್ತುಗೋಡು ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ಮುಹೂರ್ತಕ್ಕೂ ಮುನ್ನ ನವ ವಧುವೊಬ್ಬರು ಮತದಾನ ಮಾಡಿ ಗಮನ ಸೆಳೆದಿದ್ದಾರೆ. ರೇಷ್ಮೆ ಸೀರೆ ಉಟ್ಟಿದ್ದ ಮದುವಣಗಿತ್ತಿ ಸಂಪೂರ್ಣ ರೆಡಿಯಾಗಿ ಬಂದು ಮತ ಚಲಾಯಿಸಿ ಮದುವೆ ಮಂಟಪಕ್ಕೆ ಹೋಗಿದ್ದಾರೆ. ಬಳಿಕ ಹಸೆಮಣೆ ಏರಿದ್ದಾರೆ.

ಈ ಮೂಲಕ ತಮ್ಮ ಹಕ್ಕನ್ನು ಚಲಾವಣೆ ಮಾಡಿದ್ದಾರೆ. ಕುಂದೂರಿನ ತಳವಾರದ ಸೌಮ್ಯ ಅವರು ಮೂಡಿಗೆರೆಯ ಕಲ್ಯಾಣ ಮಂಟಪಕ್ಕೆ ತೆರಳುವ ವೇಳೆ ಕುಟುಂಬ ಸಮೇತ ಮತಗಟ್ಟೆಗೆ ಬಂದು ಮತದಾನ ಮಾಡಿದ್ದಾರೆ.

ಇದನ್ನೂ ಓದಿ: Lok Sabha Election 2024: ಆಕ್ಸಿಜನ್‌ ಸಹಾಯದಿಂದ ಮತ ಚಲಾಯಿಸಿದ ಮಹಿಳೆ; ವೋಟು ಹಾಕಿ ಕುಸಿದು ಮೃತಪಟ್ಟ ವೃದ್ಧೆ!

Lok Sabha Election 2024: ಆಪರೇಷನ್‌ಗೂ ಮುನ್ನ ಆಂಬ್ಯುಲೆನ್ಸ್‌ನಲ್ಲಿ ಬಂದು ವೋಟ್‌ ಮಾಡಿದ ಉತ್ಸಾಹಿ ಮತದಾರ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ (Lok Sabha Election 2024) ಉತ್ಸಾಹಿ ಮತದಾರರೊಬ್ಬರು ಶಸ್ತ್ರಚಿಕಿತ್ಸೆಗೂ ಮುನ್ನ ಮತಗಟ್ಟೆಗೆ ಬಂದು ಮತದಾನ ಮಾಡಿದ್ದಾರೆ. ಮುರಳಿಧರ್‌ ಎಂಬುವವರು ತಮ್ಮ ಹಕ್ಕು ಚಲಾಯಿಸಿ ಇತರರಿಗೂ ಮಾದರಿ ಆಗಿದೆ. 39 ವರ್ಷದ ಎಚ್‌.ಎನ್ ಮುರಳಿಧರ್ ಶುಕ್ರವಾರ ಮಧ್ಯಾಹ್ನ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಅನಾರೋಗ್ಯದ ನಡುವೆಯೂ ನೋವಿನಲ್ಲೂ ಮತಕೇಂದ್ರಕ್ಕೆ ಬಂದು ಮತವನ್ನು ಚಲಾಯಿಸಿದ್ದಾರೆ.

ಮನಿಪಾಲ್ ಆಸ್ಪತ್ರೆ ವೈಟ್‌ಫೀಲ್ಡ್‌ನ ಯೂರೋಲಾಜಿ, ರೋಬೋಟಿಕ್ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಮುರಳಿಧರ್‌ಗೆ ಮೂತ್ರದ್ವಾರದಲ್ಲಿ 6 MM ಕಲ್ಲಿದೆ. ಹೀಗಾಗಿ ಮಧ್ಯಾಹ್ನ ಡಿಜೆ ಸ್ಟೆಂಟಿಂಗ್ ಸರ್ಜರಿ ಮಾಡಬೇಕಿದೆ. ಸರ್ಜರಿಗೂ ಮುನ್ನ ಖುದ್ದು ಆಂಬ್ಯುಲೆನ್ಸ್‌ ಮೂಲಕ ಬಂದ ಮುರಳಿಧರ್‌ ಅವರು ಮತದಾನ ಮಾಡಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದರೂ, ಡೋಂಟ್‌ ಕೇರ್‌ ಮಾಡದ ಮುರಳಿಧರ್‌ ಶಸ್ತ್ರಚಿಕಿತ್ಸೆಗೂ ಮುನ್ನ ಮತದಾನ ಮಾಡಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಈ ಮೂಲಕ ಎಲ್ಲರಿಗೂ ಮಾದರಿ ಆಗಿದ್ದಾರೆ.

ಇದನ್ನೂ ಓದಿ: Lok Sabha Election 2024: ಮತದಾರರು ಜಸ್ಟ್‌ ಮಿಸ್‌; ಮತಗಟ್ಟೆ ಸಮೀಪವೇ ನೆಲಕ್ಕುರುಳಿದ ಬೃಹತ್ ಮರ, ಕಾರು ಜಖಂ

ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ (First phase of polling) ಪ್ರಕ್ರಿಯೆಗೆ ಚಾಲನೆ ಸಿಕ್ಕಿದ್ದು, ಜೆ.ಪಿ.ನಗರ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ಮತ ಚಲಾಯಿಸಲು ಬಂದ ಮಹಿಳೆಯೊಬ್ಬರಿಗೆ ಹೃದಯ ಸ್ತಂಭನ (cardiac arrest) ಆಗಿದೆ. ಬಳಿಕ ಅಲ್ಲಿಯೇ ಮತ ಚಲಾಯಿಸಲು ಬಂದಿದ್ದರಿಂದ ಅವರ ಜೀವ ಉಳಿದಿದೆ.

ಜೆ.ಪಿ. ನಗರದ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ಮಹಿಳೆಯೊಬ್ಬರು ಮತದಾನ ಮಾಡಲು ಬಂದಿದ್ದಾರೆ. ಅವರು ಆಯಾಸವಾಗಿದೆ ಎಂದು ಮತಗಟ್ಟೆಯಲ್ಲಿ ಇಟ್ಟಿದ್ದ ನೀರು ಕುಡಿಯಲು ಹೋಗಿದ್ದಾರೆ. ಅದೇ ವೇಳೆಗೆ ಅವರು ಕುಸಿದು ಬಿದ್ದಿದ್ದಾರೆ. ಅದೇ ಸಮಯದಲ್ಲಿ ಅಲ್ಲಿಗೆ ಬಂದಿದ್ದ ಬೊಮ್ಮಸಂದ್ರದ ನಾರಾಯಣ ಆರೋಗ್ಯ ಕೇಂದ್ರದ ಮೂತ್ರಪಿಂಡ ತಜ್ಞ ಡಾ. ಗಣೇಶ್ ಶ್ರೀನಿವಾಸ ಪ್ರಸಾದ್ ಅವರು ರಕ್ಷಣೆಗೆ ದಾವಿಸಿದ್ದಾರೆ.

ನಾಡಿಮಿಡಿತವನ್ನು ಪರಿಶೀಲಿಸಿದ ಡಾ. ಗಣೇಶ್ ಶ್ರೀನಿವಾಸ ಪ್ರಸಾದ್, ಪಲ್ಸ್‌ ರೇಟ್‌ ಕಡಿಮೆಯಾಗುತ್ತಿರುವುದನ್ನು ಗಮನಿಸಿದ್ದಾರೆ. ಆ ಸಮಯದಲ್ಲಿ ದೇಹ ಕೂಡ ಯಾವುದೇ ಸ್ಪಂದನೆಯನ್ನು ಮಾಡುತ್ತಿರಲಿಲ್ಲ. ಹೀಗಾಗಿ ಕೂಡಲೇ ಸಿಪಿಆರ್‌ ಮಾಡಿದ್ದು, ಪರಿಸ್ಥಿತಿಯು ಕೊಂಚ ಮಟ್ಟಿಗೆ ಸುಧಾರಿಸುವಂತೆ ಮಾಡಿದ್ದಾರೆ. ಚುನಾವಣಾ ಕರ್ತವ್ಯದಲ್ಲಿದ್ದವರು ಧಾವಿಸಿ ಜ್ಯೂಸ್ ನೀಡಿದ್ದಾರೆ. ಕೂಡಲೇ ಆಂಬ್ಯುಲೆನ್ಸ್‌ಗೆ ಕರೆ ಮಾಡಲಾಗಿದೆ. ಐದು ನಿಮಿಷದೊಳಗೆ ಮತಗಟ್ಟೆ ಬಳಿ ಆಂಬ್ಯುಲೆನ್ಸ್ ಬಂದಿದ್ದು, ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
mobile blast woman death
ಕ್ರೈಂ27 mins ago

Mobile Blast: ಬೈಕ್‌ ಚಲಾಯಿಸುತ್ತಿದ್ದಾಗ ಮೊಬೈಲ್‌ ಸ್ಫೋಟ, ಡಿವೈಡರ್‌ಗೆ ಗುದ್ದಿ ಮಹಿಳೆ ಸಾವು

Randeep Surjewala
ಕರ್ನಾಟಕ56 mins ago

Randeep Surjewala: ಕನ್ನಡಿಗರ ತೆರಿಗೆ ಹಣದಲ್ಲಿ ಸುರ್ಜೇವಾಲಾ ಟ್ರಿಪ್;‌ ಕೆರಳಿ ಕೆಂಡವಾದ ಬಿಜೆಪಿ!

Murder case in dharwad
ಕ್ರೈಂ1 hour ago

Murder case: ಹೆಂಡ್ತಿ ಮೇಲೆ ಸಂಶಯ; ಕುಡಿದು ಬಂದು ಕೊಡಲಿಯಿಂದ ಕೊಚ್ಚಿ ಕೊಂದ

miss universe Buenos Aires
ವಿದೇಶ1 hour ago

Miss Universe Buenos Aires: ಈಕೆ ಬ್ಯೂನಸ್‌ ಐರಿಸ್‌ ವಿಶ್ವ ಸುಂದರಿ; ಇವಳ ವಯಸ್ಸು ನೀವೇ ಊಹಿಸಿ!

Gurucharan Singh Taarak Mehta Ka Ooltah Chashmah actor missing
ಕಿರುತೆರೆ1 hour ago

Gurucharan Singh: ‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ಖ್ಯಾತಿಯ ನಟ ನಿಗೂಢ ನಾಪತ್ತೆ

snake bite
ಬೆಂಗಳೂರು ಗ್ರಾಮಾಂತರ2 hours ago

Snake Bite: ತೋಟದ ಮನೆಯಲ್ಲಿ ಆಟವಾಡುತ್ತಿದ್ದ ಬಾಲಕಿಯ ಕಚ್ಚಿದ ಹಾವು; ಕ್ಷಣಾರ್ಧದಲ್ಲೆ ಹಾರಿಹೋಯ್ತು ಪ್ರಾಣ

MDH, Everest Spices
ದೇಶ2 hours ago

MDH, Everest Spices: ಭಾರತದ 527 ಆಹಾರ ಪದಾರ್ಥಗಳಲ್ಲಿ ಕ್ಯಾನ್ಸರ್‌ಕಾರಕ ಕೆಮಿಕಲ್‌ ಪತ್ತೆ

Neha Murder Case neha And fayas
ಹುಬ್ಬಳ್ಳಿ2 hours ago

Neha Murder case : ನ್ಯಾಯಾಧೀಶರ ಎದುರೆ ನೇಹಾ ಕೊಲೆ ಆರೋಪಿ ಫಯಾಜ್‌ನ DNA ಮಾದರಿ ಸಂಗ್ರಹ!

Lok Sabha Election-2024
Lok Sabha Election 20242 hours ago

Lok Sabha Election 2024: ಜೈಲಿನಲ್ಲಿರುವ ಅಮೃತಪಾಲ್ ಚುನಾವಣೆಗೆ ಸ್ಪರ್ಧಿಸಬಹುದು, ಕೇಜ್ರಿವಾಲ್ ಮತ ಚಲಾಯಿಸುವಂತಿಲ್ಲ! ಏನಿದು ನಿಯಮ?

gold rate today beauty
ಚಿನ್ನದ ದರ2 hours ago

Gold Rate Today: 22 ಕ್ಯಾರಟ್‌, 24 ಕ್ಯಾರಟ್‌ ಚಿನ್ನದ ಬೆಲೆ ಇಂದು ಹೀಗಿವೆ; ತುಸುವೇ ಏರಿಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

road Accident in kolar evm
ಕೋಲಾರ3 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ10 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 day ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20241 day ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 day ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ1 day ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20242 days ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

ಟ್ರೆಂಡಿಂಗ್‌