Enilla.. Enilla! : ಏನಿಲ್ಲ ಏನಿಲ್ಲ.. ಕರಿಮಣಿ ಮಾಲೀಕ ನೀನಲ್ಲ.. ಹಾಡು ಬಳಸಿ ಸಿದ್ದರಾಮಯ್ಯ ಟ್ರೋಲ್‌ ! - Vistara News

ವೈರಲ್ ನ್ಯೂಸ್

Enilla.. Enilla! : ಏನಿಲ್ಲ ಏನಿಲ್ಲ.. ಕರಿಮಣಿ ಮಾಲೀಕ ನೀನಲ್ಲ.. ಹಾಡು ಬಳಸಿ ಸಿದ್ದರಾಮಯ್ಯ ಟ್ರೋಲ್‌ !

Enilla.. Enilla! : 25 ವರ್ಷಗಳ ಹಿಂದೆ ಬಿಡುಗಡೆಯಾದ ಉಪೇಂದ್ರ ಚಿತ್ರದ ಏನಿಲ್ಲ ಏನಿಲ್ಲ.. ಕರಿಮಣಿ ಮಾಲೀಕ ನೀನಲ್ಲ ಹಾಡು ಎಷ್ಟು ಜನಪ್ರಿಯ ಎನ್ನುವುದು ನಿಮಗೆ ಗೊತ್ತು. ಇದನ್ನು ಸಿಎಂ ಸಿದ್ದರಾಮಯ್ಯ ಅವರನ್ನು ಟ್ರೋಲ್‌ ಮಾಡಲು ಕೂಡಾ ಬಳಸಲಾಗಿದೆ.

VISTARANEWS.COM


on

Enilla.. Enilla! CM Siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಏನಿಲ್ಲ.. ಏನಿಲ್ಲ.. (Enilla.. Enilla!) ಕರಿಮಣಿ ಮಾಲೀಕ ನೀನಲ್ಲ.. ಈ ಹಾಡು ಎಷ್ಟು ಕ್ರೇಜ್‌ ಸೃಷ್ಟಿ ಮಾಡಿದೆ. ಈ ಹಾಡನ್ನು ಅದರಲ್ಲೂ ಮುಖ್ಯವಾಗಿ ʻಏನಿಲ್ಲ.. ಏನಿಲ್ಲʼ ಎಂಬ ವಾಕ್ಯವನ್ನು ಬಳಸಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರನ್ನು ಗೇಲಿ ಮಾಡಲಾಗಿದೆ. ವೈರಲ್‌ ಹಾಡಿನ ರಿಮಿಕ್ಸ್‌ (Remix Song) ಈಗ ಭಾರಿ ಗಮನ ಸೆಳೆದಿದೆ. ಇದನ್ನು ಬಿಜೆಪಿ ತನ್ನ ವಾಟ್ಸ್‌ ಆಪ್‌ ಗ್ರೂಪ್‌ಗಳಲ್ಲಿ ಹಂಚಿಕೊಂಡಿದೆ.

ವಿಧಾನಸಭಾ ಚುನಾವಣೆ ವೇಳೆ ಗ್ಯಾರಂಟಿಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಗ್ಯಾರಂಟಿಗಳ ಬಗ್ಗೆ ಆಡಿದ ಮಾತುಗಳನ್ನು ವಿಡಿಯೊದಲ್ಲಿ ತೋರಿಸಿ, ‘ಸುಳ್ಳು ರಾಮಯ್ಯ’ ಎಂದು ಬಿಂಬಿಸಲಾಗಿದೆ. ಸಿದ್ದರಾಮಯ್ಯ ಅವರು ಕರೆಂಟ್ ಫ್ರೀ, ಬಸ್ ಫ್ರೀ, ಹತ್ತು ಕೆಜಿ ಅಕ್ಕಿ ಫ್ರೀ ಎಂದು ಹೇಳಿರುವ ಮಾತುಗಳನ್ನು ಈ ವಿಡಿಯೋದಲ್ಲಿ ತೋರಿಸಲಾಗಿದ್ದು, ಇದೆಲ್ಲ ಸುಳ್ಳು ಎಂಬಂತೆ ಏನಿಲ್ಲ ಏನಿಲ್ಲ ಹಾಡನ್ನು ಜೋಡಿಸಲಾಗಿದೆ.

ರೈತರು‌ ಬೇಡಿಕೆಗೂ ನೋ ನೋ, ಮುಸ್ಲಿಮರಿಗೆ ಎಸ್ಸೆಸ್ಸು ಎನ್ನುತ್ತಿರುವ ಸಿದ್ದರಾಮಯ್ಯ

“ರೈತರು ಸಾಕಷ್ಟು ಕಷ್ಟದಲ್ಲಿದ್ದೇವೆ. ಆದಷ್ಟು ಬೇಗ ಪರಿಹಾರದ ಹಣ ಬಿಡುಗಡೆ ಮಾಡಿ’ ಎಂದು ರೈತನೊಬ್ಬ ಮನವಿ ಮಾಡುವಂತೆ ತೋರಿಸಲಾಗಿದೆ. ಮುಸ್ಲಿಮರು ಅನುದಾನ ಕೊಡಿ ಎಂದು ಕೇಳಿದರೂ ಸಿದ್ದರಾಮಯ್ಯ ನೋ ನೋ ಎಂದಿದ್ದಾರೆ. ಇದಕ್ಕೆ ಬೆಳಗಾವಿ ಅಧಿವೇಶನದಲ್ಲಿ ‘ನಾನೇನು ಪ್ರಿಂಟಿಂಗ್ ಮೆಷಿನ್ ಇಟ್ಟಿದಿನಾ?” ಎಂಬ ಮಾತನ್ನು ಜೋಡಿಸಲಾಗಿದೆ. ಹಾಗೆಯೇ, ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ಬಿಡುಗಡೆ ಮಾಡಿದ್ದನ್ನು ಈ ವಿಡಿಯೋದಲ್ಲಿ ತೋರಿಸಲಾಗಿದ್ದು, ಹಿಗ್ಗಾಮುಗ್ಗಾ ಟೀಕಿಸಲಾಗಿದೆ.

Enilla.. Enilla! : ಸುಳ್ಳುರಾಮಯ್ಯ ಎಂದ ಬಿಜೆಪಿ

ಸಿದ್ದರಾಮಯ್ಯ ಅವರು ಚುನಾವಣೆ ಪ್ರಚಾರದ ವೇಳೆ ಬಡವರಿಗೆ ಹತ್ತು ಕೆಜಿ ಅಕ್ಕಿ ನೀಡುವುದಾಗಿ ಹೇಳುವ ವಿಡಿಯೋವನ್ನು ಹಾಕಿ ಬಳಿಕ ಉಪೇಂದ್ರ ಅವರ ವಿಡಿಯೊ ಹಾಕಿ, ʻಬರಿ ಓಳು.. ಬರಿ ಓಳುʼ ಎಂದು ಹಾಡು ಹಾಕಲಾಗಿದೆ.

ಇದನ್ನೂ ಓದಿ: Congress Guarantee: ಧಮ್ಮು, ತಾಕತ್ತು ಇದ್ದರೆ ಬಿಜೆಪಿ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆ ನಿಲ್ಲಿಸಲಿ; ಬಿಜೆಪಿಗೆ ಸಿದ್ದರಾಮಯ್ಯ ನೇರ ಸವಾಲು

Enilla.. Enilla! : ಸಿದ್ದರಾಮಯ್ಯ ಕರಿಮಣಿ ಮಾಲೀಕ ಆಗುವುದು ಇದು ಮೊದಲೇನಲ್ಲ !

ಅಂದ ಹಾಗೆ ಈ ಕರಿಮಣಿ ಮಾಲೀಕ ಹಾಡಿನ ಮೂಲಕ ಸಿಎಂ ಸಿದ್ದರಾಮಯ್ಯ ಅವರನ್ನು ಟ್ರೋಲ್‌ ಮಾಡುತ್ತಿರುವುದು ಇದು ಮೊದಲೇನಲ್ಲ. ಈ ಹಿಂದೆ ಒಂದು ವೇಳೆ ಮೋದಿ ಮೂರನೇ ಬಾರಿ ಪ್ರಧಾನಿಯಾದರೆ ಸಿದ್ದರಾಮಯ್ಯನವರ ಸ್ಥಿತಿ ಹೀಗಾಗಲಿದೆ ಎಂದು ʻಕರಿಮಣಿ ಮಾಲೀಕʼ ಹಾಡು ಹಾಕಿ ಒಂದು ಡ್ಯಾನ್ಸ್‌ ಎಡಿಟ್‌ ಮಾಡಲಾಗಿದೆ. ಇದು ಸಿದ್ದರಾಮಯ್ಯ ಅವರು ತಮ್ಮ ಗೆಳೆಯರ ಜತೆ ಸೇರಿ ಸೋಮನ ಕುಣಿತಕ್ಕೆ ಕುಣಿಯುವ ಹಾಡಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಾಮರಾಜನಗರ

Chamarajanagar News : ಜೋಳದ ಬೆಳೆ ತಿಂದ ಎತ್ತುಗಳ ಕಾಲು ಕತ್ತರಿಸಿದ ಟಿಬೆಟಿಯನ್ನರು!

Chamarajanagar News: ಎತ್ತುಗಳು ಜೋಳದ ಬೆಳೆಯನ್ನು ತಿಂದು ನಾಶ ಮಾಡಿವೆ ಎಂದು ಅವುಗಳ ಕಾಲುಗಳನ್ನೇ ಕತ್ತರಿಸಿರುವ ಅಮಾನವೀಯ ಘಟನೆ ನಡೆದಿದೆ. ಮೂವರು ಟಿಬೆಟಿಯನರು ಈ ಕೃತ್ಯ ಎಸಗಿದ್ದು, ಮಾಲೀಕರ ಆಕ್ರಂದನ ಮುಗಿಲು ಮುಟ್ಟಿದೆ.

VISTARANEWS.COM


on

By

Tibetans cut off the legs of bulls for eating their crops
Koo

ಚಾಮರಾಜನಗರ: ಜೋಳದ ಬೆಳೆಯನ್ನು ಎತ್ತುಗಳು ತಿಂದು ನಾಶ ಮಾಡಿವೆ ಎಂದು ಪಾಪಿಗಳು ಎತ್ತುಗಳ ಕಾಲುಗಳನ್ನೇ ಕತ್ತರಿಸಿದ್ದಾರೆ. ಈ ಕ್ರೂರ ಘಟನೆ ಚಾಮರಾಜನಗರದ ಹನೂರು ತಾಲೂಕಿನ ಒಡೆಯರ ಪಾಳ್ಯದ ಟಿಬೆಟಿಯನ್ ಕ್ಯಾಂಪ್‌ನ ದಿ ವಿಲೇಜ್‌ನಲ್ಲಿ (Chamarajanagar News) ನಡೆದಿದೆ.

ದಿ ವಿಲೇಜ್‌ನಲ್ಲಿ ಟಿಬೆಟಿಯನ್ನರು ವ್ಯವಸಾಯ ಮಾಡಿಕೊಂಡು ವಾಸವಿದ್ದಾರೆ. ಜೋಳದ ಫಸಲನ್ನು ನಾಶ ಮಾಡಿವೆ ಎಂಬ ಕಾರಣಕ್ಕೆ ಮೂವರು ಟಿಬೆಟಿಯನ್ನರು ಈ ಕೃತ್ಯವನ್ನು ಎಸಗಿದ್ದಾರೆ. ಗಡಿ ಜಿಲ್ಲೆ ರೈತರ ಮೇಲೆ ದರ್ಪ ಮೆರೆಯುತ್ತಿರುವ ಟಿಬೆಟಿಯನ್ನರು, 15ಕ್ಕೂ ಹೆಚ್ಚು ಎತ್ತುಗಳ ಕಾಲು, ಬಾಲ, ಕೊಂಬುಗಳನ್ನು ಕತ್ತರಿಸಿದ್ದಾರೆ. ಇದರಿಂದಾಗಿ ಎತ್ತುಗಳು ಬದುಕಿದ್ದು ಸತ್ತಂತೆ ಆಗಿವೆ.

Tibetans cut off the legs of bulls for eating their crops

ಇತ್ತ ಎತ್ತುಗಳ ಸ್ಥಿತಿ ಕಂಡು ರೈತ ಮಹಿಳೆಯರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳೀಯರ ಮೇಲೆ ಟಿಬೆಟಿಯನ್‌ರ ದರ್ಪಕ್ಕೆ ಕಿಡಿಕಾರಿದ್ದಾರೆ. ಕೃಷಿಗೆ ಈ ಎತ್ತುಗಳೇ ಆಧಾರವಾಗಿದ್ದವು. ಮನೆ ಮಕ್ಕಳಂತೆ ಜೋಪಾನ ಮಾಡಿದ್ದ ಎತ್ತುಗಳ ಕಾಲುಗಳನ್ನು ಕತ್ತರಿಸಿದ್ದಾರೆ. ನಮ್ಮ ಬದುಕು ಬೀದಿಗೆ ಬಂದಿದೆ.

Tibetans cut off the legs of bulls for eating their crops

ಇದನ್ನೂ ಓದಿ: Road Accident : ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು; ಇಬ್ಬರು ಸಾವು, ಮತ್ತಿಬ್ಬರು ಗಂಭೀರ

ಮಗು ಅಳುತ್ತಿದ್ದಕ್ಕೆ ಸಿಟ್ಟಾಗಿ ಗೋಡೆಗೆ ಎಸೆದು ಬಿಸಾಡಿದ ಪಾಪಿ ತಂದೆ!

ಧಾರವಾಡ: ಮಗಳಿಗೆ ಬೆರಗುವ ಮೂಡಿಸುವ ಜಾದೂಗಾರನಾಗಿ ಇರಬೇಕಾದ ಅಪ್ಪನೊಬ್ಬ ಕ್ರೂರಿಯಾದ ಸುದ್ದಿ ಇದು. ಮಗು ಮಲಗುವಾಗ ಅಳುತ್ತೆ ಎಂಬ ಕಾರಣಕ್ಕೆ ಪಾಪಿ ತಂದೆ ಗೋಡೆಗೆ ಎಸೆದು ಬೀಸಾಕಿದ್ದಾನೆ. ಧಾರವಾಡ ತಾಲೂಕಿನ ಯಾದವಾಡ ಗ್ರಾಮದಲ್ಲಿ ಈ ಅಮಾನವೀಯ ಘಟನೆ ನಡೆದಿದೆ.

ಒಂದು ವರ್ಷದ ಹೆಣ್ಣು ಮಗು ಸಾವು ಬದುಕಿನ ಮಧ್ಯೆ ಹೋರಾಡಿ ಕಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ. ಶಂಬುಲಿಂಗಯ್ಯ ಶಾಪುರಮಠ ಎಂಬಾತ ಪಾಪಿ ತಂದೆಯಾಗಿದ್ದಾನೆ. ಕಳೆದ ರಾತ್ರಿ ಮಗು ಅಳುತ್ತಿತ್ತು. ಅಳುವ ಮಗುವಿಗೆ ಸಮಾಧಾನ ಪಡಿಸುವ ಬದಲಿಗೆ ಮಗುವಿನ ಕಾಲು ಹಿಡಿದು ಗೋಡೆಗೆ ಎಸೆದಿದ್ದಾನೆ.

ಗೋಡೆಗೆ ರಭಸವಾಗಿ ಎಸೆದ ಪರಿಣಾಮ ಮಗುವಿನ ತಲೆಗೆ ಬಲವಾದ ಪೆಟ್ಟಾಗಿದೆ. ಕೂಡಲೇ ಮಗುವಿನ ತಾಯಿ ಕಿಮ್ಸ್‌ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಗು ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿತ್ತು. ಆದರೆ ತಲೆಗೆ ಗಂಭೀರವಾಗಿ ಪೆಟ್ಟಾಗಿದ್ದರಿಂದ ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ.

ಸದ್ಯ ಕುಟುಂಬಸ್ಥರಿಂದ ಗರಗ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪಾಪಿ ತಂದೆ ಶಂಬುಲಿಂಗಯ್ಯನನ್ನು ಬಂಧಿಸಿದ್ದಾರೆ. ಗರಗ ಪೊಲೀಸ್ ಠಾಣಾ ವ್ಯಾಪ್ತಿಯನ್ನ ನಡೆದ ಘಟನೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ‌

Continue Reading

ಧಾರವಾಡ

Assault Case : ಮಗು ಅಳುತ್ತಿದ್ದಕ್ಕೆ ಸಿಟ್ಟಾಗಿ ಗೋಡೆಗೆ ಎಸೆದು ಬಿಸಾಡಿದ ಪಾಪಿ ತಂದೆ!

Assault Case: ಎತ್ತಾಡಿಸಿದ ಕೈಗಳಿಂದ ಮುದ್ದಿಸಿಕೊಳ್ಳಬೇಕಾದ ಮಗುವೊಂದು ಮೃತಪಟ್ಟಿದೆ. ಮಲಗುವಾಗ ಮಗು ಅಳುತ್ತೆ ಎಂಬ ಕಾರಣಕ್ಕೆ ಕರುಣೆ ಇಲ್ಲದ ತಂದೆಯೊಬ್ಬ ಗೋಡೆಗೆ ಎಸೆದಿದ್ದಾನೆ.

VISTARANEWS.COM


on

By

Father throws baby crying
Koo

ಧಾರವಾಡ: ಮಗಳಿಗೆ ಬೆರಗುವ ಮೂಡಿಸುವ ಜಾದೂಗಾರನಾಗಿ ಇರಬೇಕಾದ ಅಪ್ಪನೊಬ್ಬ ಕ್ರೂರಿಯಾದ ಸುದ್ದಿ ಇದು. ಮಗು ಮಲಗುವಾಗ ಅಳುತ್ತೆ ಎಂಬ ಕಾರಣಕ್ಕೆ ಪಾಪಿ ತಂದೆ ಗೋಡೆಗೆ ಎಸೆದು ಬೀಸಾಕಿದ್ದಾನೆ. ಧಾರವಾಡ ತಾಲೂಕಿನ ಯಾದವಾಡ ಗ್ರಾಮದಲ್ಲಿ ಈ ಅಮಾನವೀಯ ಘಟನೆ ನಡೆದಿದೆ.

ಒಂದು ವರ್ಷದ ಹೆಣ್ಣು ಮಗು ಸಾವು ಬದುಕಿನ ಮಧ್ಯೆ ಹೋರಾಡಿ ಕಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ. ಶಂಬುಲಿಂಗಯ್ಯ ಶಾಪುರಮಠ ಎಂಬಾತ ಪಾಪಿ ತಂದೆಯಾಗಿದ್ದಾನೆ. ಕಳೆದ ರಾತ್ರಿ ಮಗು ಅಳುತ್ತಿತ್ತು. ಅಳುವ ಮಗುವಿಗೆ ಸಮಾಧಾನ ಪಡಿಸುವ ಬದಲಿಗೆ ಮಗುವಿನ ಕಾಲು ಹಿಡಿದು ಗೋಡೆಗೆ ಎಸೆದಿದ್ದಾನೆ.

ಗೋಡೆಗೆ ರಭಸವಾಗಿ ಎಸೆದ ಪರಿಣಾಮ ಮಗುವಿನ ತಲೆಗೆ ಬಲವಾದ ಪೆಟ್ಟಾಗಿದೆ. ಕೂಡಲೇ ಮಗುವಿನ ತಾಯಿ ಕಿಮ್ಸ್‌ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಗು ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿತ್ತು. ಆದರೆ ತಲೆಗೆ ಗಂಭೀರವಾಗಿ ಪೆಟ್ಟಾಗಿದ್ದರಿಂದ ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ.

ಮಗಳಿಂದ ನಿದ್ರೆಗೆ ಭಂಗ

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಒಂದು ವರ್ಷದ ಶ್ರೇಯಾ ಮೃತ ದುರ್ದೈವಿ. ಮಗು ಅಳುವುದರಿಂದ ತನ್ನ ನಿದ್ರೆಗೆ ಭಂಗ ಬರುತ್ತಿದೆ ಎಂದು ಶಂಭುಲಿಂಗಯ್ಯ ಶಾಪುರಮಠ ಗೋಡೆಗೆ ಎಸೆದಿದ್ದ. ಮಗುವಿನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಕುಟುಂಬಸ್ಥರಿಂದ ಗರಗ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪಾಪಿ ತಂದೆ ಶಂಬುಲಿಂಗಯ್ಯನನ್ನು ಬಂಧಿಸಿದ್ದಾರೆ. ಗರಗ ಪೊಲೀಸ್ ಠಾಣಾ ವ್ಯಾಪ್ತಿಯನ್ನ ನಡೆದ ಘಟನೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: Namma Metro : ಬಟ್ಟೆ ಗಲೀಜು ಎಂದು ರೈತನಿಗೆ ಅಪಮಾನ; ಸರ್ಕಾರ, ಬಿಎಂಆರ್‌ಸಿಎಲ್‌ಗೆ ಚಾಟಿ ಬೀಸಿದ ಎನ್‌ಎಚ್‌ಆರ್‌ಸಿ

ಸೇನೆ ಸೇರಲಾಗದಿದ್ದ ಮೇಲೆ ಬದುಕಿ ಏನು ಪ್ರಯೋಜನ?; ಬೇಸರದಲ್ಲಿ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು : ಭಾರತೀಯ ಸೇನೆ (Indian Army) ಸೇರುವ ಮಹತ್ವಾಕಾಂಕ್ಷೆ ಹೊತ್ತು ಪರೀಕ್ಷೆ ಎದುರಿಸಿದ್ದ ಯುವಕನೊಬ್ಬ ಪರೀಕ್ಷೆಯಲ್ಲಿ ಫೇಲ್‌ ಆದ (Failed in Army Exam) ಬೇಸರದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ (Chikkamagaluru News) ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದ ಯಡದಾಳು ಗ್ರಾಮದ ಕಾರ್ತಿಕ್ (23) ಆತ್ಮಹತ್ಯೆ (Self Harming) ಮಾಡಿಕೊಂಡ ಯುವಕ.

ಕಾರ್ತಿಕ್‌ ಕಳೆದ ಎರಡು ವರ್ಷದಿಂದ ಸೇನಾ ಪರೀಕ್ಷೆಗೆ ಸಂಬಂಧಿಸಿ ಸಾಕಷ್ಟು ಸಿದ್ಧತೆಗಳನ್ನು ನಡೆಸಿದ್ದ. ಬರೆಯುವ ಪರೀಕ್ಷೆ, ದೈಹಿಕ ಪರೀಕ್ಷೆ, ಕ್ರೀಡೆ ಮತ್ತು ಇತರ ಹಲವು ವಿಚಾರಗಳಲ್ಲಿ ತೊಡಗಿಸಿಕೊಂಡಿದ್ದ. ಇತ್ತೀಚೆಗೆ ಪರೀಕ್ಷೆಯೂ ನಡೆದಿತ್ತು. ಒಂದೆರಡು ದಿನದ ಹಿಂದೆ ಅದರ ಫಲಿತಾಂಶ ಬಂದಿತ್ತು. ಕಾರ್ತಿಕ್‌ ಸೇನೆಗೆ ಸೆಲೆಕ್ಟ್‌ ಆಗಿರಲಿಲ್ಲ. ಈ ಬಾರಿ ಸೆಲೆಕ್ಟ್‌ ಆಗಗಿದ್ದರೂ ಮುಂದೆ ಅವಕಾಶ ಸಿಗಬಹುದು ಎಂಬ ಆಲೋಚನೆಗೂ ಹೋಗದೆ, ಸೇನೆಗೆ ಅವಕಾಶ ಸಿಗಲಿಲ್ಲ ಎಂಬ ಕಾರಣಕ್ಕಾಗಿಯೇ ಖಿನ್ನನಾದ.

Self Harming: ಡೆತ್‌ ನೋಟ್‌ನಲ್ಲಿ ಏನಿತ್ತು?

ಬುಧವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ʻʻಭಾರತೀಯ ಸೇನೆಯ ಪರೀಕ್ಷೆಯಲ್ಲಿ ಫೇಲ್ ಆಗಿದ್ದೇನೆ. ಇದನ್ನು ಮನೆಯವರಿಗೆ ಹೇಳುವ ಧೈರ್ಯ ನನ್ನ ಬಳಿ ಇಲ್ಲ. ಹೀಗಾಗಿ ನಿರ್ಗಮಿಸುತ್ತಿದ್ದೇನೆʼʼ ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾನೆ.

ಈ ಬಗ್ಗೆ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೇನೆ ಸೇರುವ ಕನಸು ಹೊತ್ತು ಸಾಕಾರವಾಗದೆ ಪ್ರಾಣವನ್ನೇ ಕಳೆದುಕೊಂಡ ಯುವಕನ ಹೆತ್ತವರು ಈಗ ಕಣ್ಣೀರು ಹಾಕುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ‌

Continue Reading

ವೈರಲ್ ನ್ಯೂಸ್

Viral Video: ʼಒನ್‌ ಚಾಯ್‌ ಪ್ಲೀಸ್…‌ʼ ಭಾರತದ ಬೀದಿ ಚಹಾ ಸವಿದ ಬಿಲ್‌ ಗೇಟ್ಸ್! ವಿಡಿಯೋ ವೈರಲ್

Viral Video: ಪ್ರಸಿದ್ಧ ಚಹಾ ಮಾರಾಟಗಾರ ಮತ್ತು ಸೋಶಿಯಲ್‌ ಮೀಡಿಯಾದಲ್ಲಿ ಈಗಾಗಲೇ ಸಾಕಷ್ಟು ಪರಿಚಿತರಾಗಿರುವ ʼಡಾಲಿ ಚಾಯ್‌ವಾಲಾʼ (Dolly Chaiwalla) ಅವರ ಜೊತೆ ಬಿಲ್‌ ಕಾಣಿಸಿಕೊಂಡರು.

VISTARANEWS.COM


on

bill gates chai 2
Koo

ಹೊಸದಿಲ್ಲಿ: ಮೈಕ್ರೋಸಾಫ್ಟ್‌ನ (Microsoft) ಸಹ-ಸಂಸ್ಥಾಪಕ, ಕೋಟ್ಯಧಿಪತಿ ಮತ್ತು ಸಮಾಜಸೇವಕ ಬಿಲ್ ಗೇಟ್ಸ್ (Bill Gates) ಭಾರತದ ಬೀದಿ ಬದಿಯ ಚಹಾ ಗಾಡಿಯೊಂದರ ಬಳಿ ಚಹಾ ಮಾಡಿಸಿಕೊಂಡು ಸವಿಯುತ್ತಿರುವ ವಿಡಿಯೋ ಇದೀಗ ವೈರಲ್‌ (viral video) ಆಗುತ್ತಿದೆ. ಸ್ವತಃ ಅವರೇ ಇನ್‌ಸ್ಟಗ್ರಾಮ್‌ನಲ್ಲಿ (Instagram) ವಿಡಿಯೋವನ್ನು ಶೇರ್‌ ಮಾಡಿಕೊಂಡಿದ್ದಾರೆ.

ಬಿಲ್‌ ಗೇಟ್ಸ್‌ ಪ್ರಸ್ತುತ ಭಾರತ (Bill Gates in India) ಭೇಟಿಯಲ್ಲಿದ್ದಾರೆ. ಅವರ ವಿವಿಧ ವಿಹಾರಗಳು ಅಂತರ್ಜಾಲದಲ್ಲಿ ಸಾಕಷ್ಟು ಗಮನ ಮತ್ತು ಚರ್ಚೆಯನ್ನು ಸೃಷ್ಟಿಸಿವೆ. ಇತ್ತೀಚೆಗೆ ಇನ್‌ಸ್ಟಗ್ರಾಮ್‌ನಲ್ಲಿ ಹಂಚಿಕೊಂಡ ವೀಡಿಯೊದಲ್ಲಿ ಬಿಲ್ ಗೇಟ್ಸ್ ಭಾರತದ ಪ್ರಸಿದ್ಧ ಬೀದಿ ಬದಿ ಟೀ ಸ್ಟಾಲ್‌ನಲ್ಲಿ ಒಂದು ಕಪ್ ಚಾಯ್ ಮಾಡಿಸಿ ಸವಿಯುತ್ತಿರುವುದನ್ನು ಸೆರೆಹಿಡಿಯಲಾಗಿದೆ. ಪ್ರಸಿದ್ಧ ಚಹಾ ಮಾರಾಟಗಾರ ಮತ್ತು ಸೋಶಿಯಲ್‌ ಮೀಡಿಯಾದಲ್ಲಿ ಈಗಾಗಲೇ ಸಾಕಷ್ಟು ಪರಿಚಿತರಾಗಿರುವ ʼಡಾಲಿ ಚಾಯ್‌ವಾಲಾʼ (Dolly Chaiwalla) ಅವರ ಜೊತೆ ಬಿಲ್‌ ಕಾಣಿಸಿಕೊಂಡರು. ಡಾಲಿ ತಯಾರಿಸಿದ ಒಂದು ಕಪ್ ಚಹಾ ಅನ್ನು ಆನಂದಿಸಿದರು.

ಗೇಟ್ಸ್, ಚಾಯ್‌ವಾಲಾ ಅವರಿಗೆ ʼಒಂದು ಚಾಯ್ʼಗಾಗಿ ಆರ್ಡರ್ ಮಾಡುವುದರೊಂದಿಗೆ ವೀಡಿಯೊ ಆರಂಭವಾಗುತ್ತದೆ. ಚಾಯ್‌ವಾಲಾ ನಂತರ ತಮ್ಮ ವಿಶೇಷವಾದ ಗಾಡಿಯಲ್ಲಿರುವ ಸಾಮಗ್ರಿಗಳು ಹಾಗೂ ಸ್ಟವ್‌ ಮೂಲಕ ಚಹಾವನ್ನು ತಯಾರಿಸುತ್ತಾನೆ. ಅಂತಿಮವಾಗಿ ಗೇಟ್ಸ್ ಗಾಜಿನ ಲೋಟದಲ್ಲಿ ಬಿಸಿ ಚಹಾವನ್ನು ಆನಂದಿಸುತ್ತಿರುವುದನ್ನು ತೋರಿಸುತ್ತದೆ. ಡಾಲಿ ಚಾಯ್‌ವಾಲಾನೊಂದಿಗೆ ಗೇಟ್ಸ್‌ ಫೋಟೋಗೆ ಪೋಸ್ ನೀಡುವುದರೊಂದಿಗೆ ವೀಡಿಯೊ ಮುಕ್ತಾಯಗೊಳ್ಳುತ್ತದೆ.

“ಹಲವು ಚಾಯ್ ಪೆ ಚರ್ಚಾಕ್ಕಾಗಿ ಎದುರು ನೋಡುತ್ತಿದ್ದೇನೆ” ಎಂಬ ವಾಕ್ಯವನ್ನು ವಿಡಿಯೋ ಜೊತೆಗೆ ಬಿಲ್‌ ಹಾಕಿದ್ದಾರೆ. ಗೇಟ್ಸ್ ಭಾರತ ಭೇಟಿಯ ಸಂದರ್ಭದಲ್ಲಿ ಹೆಚ್ಚಿನ ಸಂವಾದಗಳನ್ನು ಹಮ್ಮಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.

ಈ ವೀಡಿಯೋ ಆನ್‌ಲೈನ್‌ನಲ್ಲಿ ಸಾಕಷ್ಟು ಗಮನ ಸೆಳೆದಿದೆ. ಗೇಟ್ಸ್ ಸ್ಥಳೀಯ ಜನಪ್ರಿಯ ಬೀದಿ ವ್ಯಾಪಾರಿಯಿಂದ ಚಹಾ ಕುಡಿಯುತ್ತಿರುವುದು ಸಾವಿರಾರು ಮಂದಿ ನೋಡಿ ಆಶ್ಚರ್ಯ ಮತ್ತು ಸಂತೋಷಪಟ್ಟಿದ್ದಾರೆ. ಈ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಸರಿಸುಮಾರು 40 ಲಕ್ಷ ವೀಕ್ಷಣೆಗಳನ್ನು ಗಳಿಸಿದೆ. Instagramನಲ್ಲಿ ಸುಮಾರು 300,000 ಲೈಕ್‌ಗಳನ್ನು ಗಳಿಸಿದೆ.

ಇದನ್ನೂ ಓದಿ: ಮೂರ್ತಿಯಂತೆ 70 ಗಂಟೆ, ಬಿಲ್‌ ಗೇಟ್ಸ್‌ರಂತೆ 3 ದಿನ ಅಲ್ಲ; ಕೆಲಸಕ್ಕೆ ಶಶಿ ತರೂರ್‌ ಸೊಲ್ಯೂಷನ್ ಇಲ್ಲಿದೆ!

Continue Reading

ಕ್ರೀಡೆ

WPL 2024: ಮೈದಾನಕ್ಕೆ ಓಡಿ ಬಂದವನ ಹೆಡೆಮುರಿ ಕಟ್ಟಿದ ಯುಪಿ ತಂಡದ ನಾಯಕಿ ಅಲಿಸ್ಸಾ ಹೀಲಿ

ಪಿಚ್​ ಕಡೆ ಓಡಿ ಬಂದ ​ಅಭಿಮಾನಿಯೊಬ್ಬನನ್ನು ಅಲಿಸ್ಸಾ ಹೀಲಿ ಹೆಡೆಮುರಿ ಕಟ್ಟಿ ಭದ್ರತಾ ಸಿಬ್ಬಂದಿಗೆ ಒಪ್ಪಿಸಿದ ಫೋಟೊ ವೈರಲ್​ ಆಗಿದೆ.

VISTARANEWS.COM


on

Alyssa Healy tackles
Koo

ಬೆಂಗಳೂರು: ಬುಧವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಯುಪಿ ವಾರಿಯರ್ಸ್​ ಮತ್ತು ಮುಂಬೈ ಇಂಡಿಯನ್ಸ್(Mumbai Indians) ನಡುವಣ ಡಬ್ಲ್ಯುಪಿಎಲ್(WPL 2024)​ ಪಂದ್ಯದಲ್ಲಿ ​ಅಭಿಮಾನಿಯೊಬ್ಬ ಭದ್ರತಾ ಸಿಬ್ಬಂದಿಗಳನ್ನು ವಂಚಿಸಿ ಮೈದಾನಕ್ಕೆ ನುಗ್ಗಿದ್ದಾನೆ. ಈ ವೇಳೆ ಯಪಿ ವಾರಿಯರ್ಸ್(UP Warriorz) ತಂಡದ ನಾಯಕಿ ಅಲಿಸ್ಸಾ ಹೀಲಿ(Alyssa Healy) ತಮ್ಮ ಭುಜಬಲದ ಪ್ರರಾಕ್ರಮದಿಂದ ಆತನ ಹೆಡೆಮುರಿ ಕಟ್ಟಿದರು. ಈ ಘಟನೆಯ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು ಹೀಲಿ ಧೈರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಮುಂಬೈ ತಂಡದ ಬ್ಯಾಟಿಂಗ್​ ಇನಿಂಗ್ಸ್​ನ ಅಂತಿಮ ಓವರ್​ನ 5ನೇ ಎಸೆತದಲ್ಲಿ ಈ ಘಟನೆ ನಡೆದಿದೆ. ಅಂಜಲಿ ಸೆರ್ವಾನಿ ಎಸೆದ ಈ ಓವರ್​ನ 5ನೇ ಎಸೆತದಲ್ಲಿ ಮುಂಬೈ ತಂಡದ ಬ್ಯಾಟರ್ ಎಸ್​. ಸಂಜನಾ ವಿಕೆಟ್​ ಕಳೆದುಕೊಂಡರು. ಈ ವೇಳೆ ಪ್ರೇಕ್ಷಕರ ಸ್ಯಾಂಡ್​ನಲ್ಲಿದ್ದ ಅಭಿಮಾನಿಯೊಬ್ಬ ಆರ್​ಸಿಬಿಯ ಜೆರ್ಸಿ ಹಿಡಿದುಕೊಂಡು ಬಿಗಿ ಭದ್ರತೆಯನ್ನು ಉಲ್ಲಂಘಿಸಿ ಏಕಾಏಕಿಯಾಗಿ ಮೈದಾನದತ್ತ ಓಡಿ ಬಂದಿದ್ದಾನೆ. ಪಿಚ್​ ಕಡೆ ಓಡಿ ಬಂದ ಆತನನ್ನು ಹೀಲಿ ಏಕಾಂಗಿಯಾಗಿ ಹಿಡಿದು ಭುಜದ ಮೇಲೆ ಎತ್ತಿಕೊಂಡು ಸಾಗಿ ಭದ್ರತಾ ಸಿಬ್ಬಂದಿಗೆ ಒಪ್ಪಿಸಿದ್ದಾರೆ. ಹೀಲಿಯ ಸಾಹಸ ಕಂಡು ಕೆಲ ನೆಟ್ಟಿಗರು ಇದು ನಿಜಕ್ಕೂ ಸೂಪರ್​​ ಟ್ಯಾಕಲ್​ ಎಂದು ವರ್ಣಿಸಿದ್ದಾರೆ. ಹೀಲಿ ಈ ಅಭಿಮಾನಿಯನ್ನು ಹಿಡಿದು ನಿಲ್ಲಿಸಿದ ಫೋಟೊಗಳು ವೈರಲ್​ ಆಗಿದೆ.

ಇದನ್ನೂ ಓದಿ WPL 2024 Points Table: ಮುಂಬೈ ಸೋಲಿನ ಬಳಿಕ ಅಂಕಪಟ್ಟಿ ಹೇಗಿದೆ?

ಗೆಲುವಿನ ಖಾತೆ ತೆರೆದ ಯುಪಿ


ಸತತ 2 ಸೋಲಿನಿಂದ ಕಂಗೆಟ್ಟಿದ್ದ ಯುಪಿ ವಾರಿರ್ಸ್ ತಂಡ ಬುಧವಾರ ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಮುಂಬೈ ವಿರುದ್ಧದ ಪಂದ್ಯದಲ್ಲಿ 7 ವಿಕೆಟ್​ಗಳ ಗೆಲುವು ಸಾಧಿಸಿ ಗೆಲುವಿನ ಖಾತೆ ತೆರೆಯಿತು. ಈ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಮುಂಬೈ ಇಂಡಿಯನ್ಸ್(Mumbai Indians vs UP Warriorz) ಉತ್ತಮ ಆರಂಭ ಪಡೆದರೂ ಆ ಬಳಿಕ ನಾಟಕೀಯ ಕುಸಿತ ಕಂಡು ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್​ಗೆ 161 ರನ್​ ಬಾರಿಸಿತು. ಜವಾಬಿತ್ತ ಯುಪಿ ವಾರಿಯರ್ಸ್16.3​ ಓವರ್​ಗಳಲ್ಲಿ 3 ವಿಕೆಟ್​ ಕಳೆದುಕೊಂಡು 163 ರನ್​ ಬಾರಿಸಿ ಗೆಲುವಿನ ನಗೆ ಬೀರಿತು.

ಗುರಿ ಬೆನ್ನಟ್ಟಿದ ಯುಪಿ ತಂಡಕ್ಕೆ ನಾಯಕಿ ಅಲಿಸ್ಸಾ ಹೀಲಿ ಮತ್ತು ಹಾರ್ಡ್​ ಹಿಟ್ಟರ್​ ಕಿರಣ್ ನವಗಿರೆ ಉತ್ತಮ ಜತೆಯಾಟದ ಮೂಲಕ ಭರ್ಜರಿ ಆರಂಭ ಒದಗಿಸಿದರು. ಈ ಜೋಡಿ ಮೊದಲ ವಿಕೆಟ್​ಗೆ 94 ರನ್​ಗಳನ್ನು ರಾಶಿ ಹಾಕಿತು. 6 ಬೌಂಡರಿ ಮತ್ತು 4 ಸಿಕ್ಸರ್​ ಬಾರಿಸಿದ ಕಿರಣ್ ನವಗಿರೆ 57 ರನ್​ ಗಳಿಸಿ ಅಮೆಲಿಯಾ ಕೆರ್​ಗೆ ವಿಕೆಟ್​ ಒಪ್ಪಿಸಿದರು. ಈ ವಿಕೆಟ್​ ಪತನಗೊಂಡು 3 ರನ್​ ಒಟ್ಟುಗೂಡುವಷ್ಟರಲ್ಲಿ ಅಲಿಸ್ಸಾ ಹೀಲಿ ವಿಕೆಟ್​ ಕೂಡ ಉದುರಿತು. ಅವರ ಗಳಿಕೆ 33. ಉಭಯ ಆಟಗಾರ್ತಿಯರ ವಿಕೆಟ್​ ಕಳೆದುಕೊಂಡ ಬಳಿಕ ಆಡಲಿಳಿದ ಗ್ರೇಸ್ ಹ್ಯಾರಿಸ್ ಮತ್ತು ದೀಪ್ತಿ ಶರ್ಮ(ಅಜೇಯ 27) ಜವಾಬ್ದಾರಿಯುತ ಬ್ಯಾಟಿಂಗ್​ ನಡೆಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಯುಪಿ ವಾರಿರ್ಸ್ ತಂಡ ಗೆಲುವು ಕಂಡ ಕಾರಣ ಅಂಕಪಟ್ಟಿಯಲ್ಲಿ 2 ಅಂಕದೊಂದಿಗೆ ನಾಲ್ಕನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

Continue Reading
Advertisement
Modi GDP
ಪ್ರಮುಖ ಸುದ್ದಿ17 mins ago

GDP Growth : ಜಿಡಿಪಿಯ ಭರ್ಜರಿ ಏರಿಕೆಗೆ ಮೋದಿ ಸಂತಸ; ಏನಂದ್ರು ಅವರು?

2nd PU Exam from tomorrow what are the conditions
ಶಿಕ್ಷಣ17 mins ago

2nd PU Exam: ನಾಳೆಯಿಂದ ರಾಜ್ಯಾದ್ಯಂತ ದ್ವಿತೀಯ ಪಿಯು ಪರೀಕ್ಷೆ; ವಿದ್ಯಾರ್ಥಿಗಳಿಗೆ ಇಲ್ಲಿದೆ ಕಂಡಿಷನ್!

insurance
ಮನಿ-ಗೈಡ್19 mins ago

Money Guide: ಸಾಮಾನ್ಯ ವಿಮೆ v/s ಜೀವ ವಿಮೆ; ಯಾವುದು ಉತ್ತಮ? ನಿಮಗೆ ತಿಳಿದಿರಲೇಬೇಕಾದ ಮಾಹಿತಿ ಇಲ್ಲಿದೆ

Budget session Siddaramaiah
ವಿಧಾನಮಂಡಲ ಅಧಿವೇಶನ30 mins ago

Budget Session : ಬಿಜೆಪಿಯ ಜೈ ಶ್ರೀರಾಮ್‌ VS ಸಿದ್ದರಾಮಯ್ಯರ ಜೈ ಸೀತಾರಾಮ್‌!

Nitasha Kaul
ದೇಶ47 mins ago

Nitasha Kaul : ಬ್ರಿಟನ್​ ಲೇಖಕಿಯನ್ನು ಏರ್​ಪೋರ್ಟ್​​ನಿಂದಲೇ ವಾಪಸ್​ ಕಳಿಸಿದ್ದಕ್ಕೆ ಕಾರಣ ಕೊಟ್ಟ ಕೇಂದ್ರ ಸರ್ಕಾರ

Siddaramaiah plan behind accepting Caste Census Report Sunil Kumar reveals reason
ರಾಜಕೀಯ1 hour ago

‌Caste Census Report: ಜಾತಿ ಗಣತಿ ಸ್ವೀಕಾರದ ಹಿಂದೆ ಸಿದ್ದರಾಮಯ್ಯ ಪ್ಲ್ಯಾನ್‌ ಏನು? ಕಾರಣ ಬಿಚ್ಚಿಟ್ಟಿದ್ದಾರೆ ಸುನಿಲ್‌ ಕುಮಾರ್!

Rowdy sheeter kidnaps cricket bookie
ಕ್ರಿಕೆಟ್1 hour ago

WPL 2024 : ಮಹಿಳಾ ಐಪಿಎಲ್‌ನಲ್ಲಿ ಬೆಟ್ಟಿಂಗ್ ಕಟ್ಟಿದ ಬುಕ್ಕಿಯೇ ಕಿಡ್ನ್ಯಾಪ್‌!

GDP Growth
ಪ್ರಮುಖ ಸುದ್ದಿ1 hour ago

GDP Growth : ನಿರೀಕ್ಷೆಗೂ ಮೀರಿ ಭಾರತದ ಜಿಡಿಪಿ ಬೆಳವಣಿಗೆ; ಕಳೆದ ತ್ರೈಮಾಸಿಕದಲ್ಲಿ ಭರ್ಜರಿ ಪ್ರಗತಿ

film festival
ಸಿನಿಮಾ1 hour ago

Bengaluru Film Festival: 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ

BJP protest demanding action against those who shouted pro Pak slogan
ಉತ್ತರ ಕನ್ನಡ2 hours ago

Uttara Kannada News: ಪಾಕ್‌ ಪರ ಘೋಷಣೆ ಕೂಗಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಯಲ್ಲಾಪುರದಲ್ಲಿ ಬಿಜೆಪಿ ಪ್ರತಿಭಟನೆ

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ4 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ3 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for February 28 2024
ಭವಿಷ್ಯ15 hours ago

Dina Bhavishya: ಇಂದು 12 ರಾಶಿಯವರ ಲಕ್ಕಿ ನಂಬರ್‌ ಏನು? ಯಾರಿಗೆ ಧನ ಲಾಭ?

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ಇಂದು ದೊಡ್ಡದೊಂದು ಸಮಸ್ಯೆಯಿಂದ ಮುಕ್ತಿ ಪಡೆಯುವಿರಿ

Rajya Sabha election Pakistan Zindabad slogans raised inside Vidhana Soudha by Nasir Hussain supporters
ರಾಜಕೀಯ2 days ago

ವಿಧಾನಸೌಧದೊಳಗೇ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ; ನಾಸಿರ್‌ ಹುಸೇನ್‌ ಬೆಂಬಲಿಗ ದೇಶದ್ರೋಹಿಗಳ ಉದ್ಧಟತನ

Ghar Wapsi ST Somashekhar and Shivaram Hebbar to quit BJP
ರಾಜಕೀಯ2 days ago

Ghar Wapsi: ಎಸ್‌.ಟಿ. ಸೋಮಶೇಖರ್‌, ಶಿವರಾಂ ಹೆಬ್ಬಾರ್‌ ಬಿಜೆಪಿಗೆ ಗುಡ್‌ ಬೈ? ಇಂದೇ ರಾಜೀನಾಮೆ?

Rajyasabha Elections 42 Congress MLAs contacted by JDS candidate says DK Shivakumar
ರಾಜಕೀಯ2 days ago

Rajya sabha Election: ಕಾಂಗ್ರೆಸ್‌ನ 42 ಶಾಸಕರನ್ನು ಸಂಪರ್ಕ ಮಾಡಿದ್ದಾರೆ: ಡಿ.ಕೆ. ಶಿವಕುಮಾರ್

read your daily horoscope predictions for february 27 2024
ಭವಿಷ್ಯ3 days ago

Dina Bhavishya : ಇಂದು ಆಪ್ತರಿಂದಲೇ ಈ ರಾಶಿಯವರಿಗೆ ಕಂಟಕ!

Crowd mistakes Arabic words as Quran Verses on the kurta and Pak Women mobbed
ವಿದೇಶ3 days ago

Pak Woman: ಕುರ್ತಾ ಮೇಲಿನ ಅರೇಬಿಕ್ ಪದಗಳನ್ನು ತಪ್ಪಾಗಿ ತಿಳಿದು ಮಹಿಳೆ ಮೇಲೆ ಹಲ್ಲೆಗೆ ಯತ್ನ

read your daily horoscope predictions for february 26 2024
ಭವಿಷ್ಯ4 days ago

Dina Bhavishya : ಈ ಮೂರು ರಾಶಿಯವರು ಇಂದು ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯವರು ಆಪ್ತರೊಂದಿಗೆ ಗೌಪ್ಯ ವಿಷಯವನ್ನು ಹೇಳುವಾಗ ಎಚ್ಚರ!

Video Viral Student falls under school bus He escaped with minor injuries
ವೈರಲ್ ನ್ಯೂಸ್5 days ago

Video Viral: ಸ್ಕೂಲ್ ಬಸ್‌ನಡಿ ಬಿದ್ದ ವಿದ್ಯಾರ್ಥಿ; ಪಾರಾಗಿದ್ದೇ ಪವಾಡ!

ಟ್ರೆಂಡಿಂಗ್‌