Site icon Vistara News

Goldman of Bihar: ಈತ ಬಂಗಾರದ ಮನುಷ್ಯ! ಕೊರಳಲ್ಲಿದೆ 5 ಕೆಜಿ ಚಿನ್ನ! ಬೈಕ್‌ನಲ್ಲೂ ಇದೆ ಬಂಗಾರ!

Goldman of Bihar

ಐದು ಕಿಲೋ ಗ್ರಾಂನಷ್ಟು ಚಿನ್ನವನ್ನು ಧರಿಸಿಕೊಂಡು ಚಿನ್ನದ ಬೈಕ್ ನಲ್ಲಿ ಆತ ಸವಾರಿ ಮಾಡುತ್ತಿದ್ದರೆ ಎಲ್ಲರೂ ಹುಬ್ಬೇರಿಸಿಕೊಂಡು ನೋಡುತ್ತಾರೆ. ಬಿಹಾರದ (bihar) ಗೋಲ್ಡ್ ಮ್ಯಾನ್ (Goldman of Bihar) ಎಂದೇ ಕರೆಯಲಾಗುವ ಆತನಿಗೆ ಚಿನ್ನದ ಮೇಲಿನ ಪ್ರೀತಿ ಈಗ ದೇಶಾದ್ಯಂತ ಚರ್ಚೆಯಲ್ಲಿದೆ. ಆತನ ಕುರಿತಾದ ವಿಡಿಯೋ, ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ (social media) ಭಾರೀ ವೈರಲ್ (viral video) ಆಗುತ್ತಿದೆ.

ಬಿಹಾರದ ಗೋಲ್ಡ್ ಮ್ಯಾನ್ ಎಂದೇ ಕರೆಯಲ್ಪಡುವ ಪ್ರೇಮ್ ಸಿಂಗ್ ಅವರು ಚಿನ್ನವನ್ನು ಹೆಚ್ಚು ಇಷ್ಟಪಡುತ್ತಾರೆ. ಅವರು ಸುಮಾರು ಐದು ಕಿಲೋಗ್ರಾಂಗಳಷ್ಟು ಚಿನ್ನವನ್ನು ಧರಿಸಿಕೊಂಡೇ ಓಡಾಡುತ್ತಾರೆ. ಮಾತ್ರವಲ್ಲದೇ ಅವರು ಚಿನ್ನದ ಬೈಕ್ ಅನ್ನೂ ಹೊಂದಿದ್ದಾರೆ. ಇದನ್ನು ಬೆಂಗಳೂರಿನಲ್ಲಿ ರಚಿಸಲಾಗಿದೆ. ಇದರ ನಿರ್ಮಾಣಕ್ಕೆ ಏಳರಿಂದ ಎಂಟು ತಿಂಗಳು ಬೇಕಾಯಿತು ಮತ್ತು 11 ರಿಂದ 12 ಲಕ್ಷ ರೂ. ಖರ್ಚಾಗಿದೆ ಎನ್ನಲಾಗಿದೆ.


ಬಿಹಾರದ ಬಂಗಾರದ ಮನುಷ್ಯ ಪ್ರೇಮ್ ಸಿಂಗ್ ಅವರಿಗೆ ತಾವು ಧರಿಸುವ ಚಿನ್ನದಿಂದಲೇ ಸುದ್ದಿಯಲ್ಲಿದ್ದಾರೆ. ಇವರ ಕುರಿತು ವಿಡಿಯೋ ಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.

ಇದನ್ನೂ ಓದಿ: Viral Video: ರೀಲ್ಸ್‌ಗಾಗಿ ಸಿಗರೇಟ್‌ ದಂ ಹೊಡೆದ ಯುವತಿ; ಮನೇಲಿ ಹಿಗ್ಗಾಮುಗ್ಗಾ ಹೊಡೆದ ಅಪ್ಪ!

ಬಿಹಾರದಲ್ಲಿ ನಿತೀಶ್ ಕುಮಾರ್ ಅವರ ಸರ್ಕಾರ ಉತ್ತಮ ಆಡಳಿತ ನಡೆಸುತ್ತಿದ್ದು, ಹೀಗಾಗಿ ಯಾವುದೇ ಕಳ್ಳರ ಭಯವಿಲ್ಲದೆ ಇಷ್ಟೊಂದು ಚಿನ್ನವನ್ನು ಧರಿಸಿಕೊಂಡು ಓಡಾಡುತ್ತೇನೆ. ಬೈಕ್‌ಗೂ 150 ರಿಂದ 200 ಗ್ರಾಂ ಚಿನ್ನವನ್ನು ಹಾಕಿದ್ದೇನೆ. ಇದು ಬಿಹಾರ ಸರ್ಕಾರ ಹಾಗೂ ಪೊಲೀಸರ ಪಾಲಿಗೆ ಗೌರವದ ವಿಷಯವಾಗಿದೆ ಎಂದು ಅವರು ತಿಳಿಸಿದ್ದಾರೆ.

ಶಾರುಖ್‌ ಖಾನ್‌ ನನ್ನು ಕಾಪಿ ಮಾಡಲು ಹೋಗಿ ಯೂಟ್ಯೂಬರ್‌ಗಳು ಜೈಲು ಪಾಲು

ಸಾಮಾಜಿಕ ಜಾಲತಾಣದಲ್ಲಿ ಅತಿ ಹೆಚ್ಚು ಲೈಕ್ಸ್ , ಕಾಮೆಂಟ್‌ ಪಡೆಯಲು ಯುವಕರು ಅನೇಕ ದುಸ್ಸಾಹಸಗಳಿಗೆ ಕೈ ಹಾಕಿ ಸಂಕಷ್ಟಕ್ಕೀಡಾಗುತ್ತಿದ್ದಾರೆ. ಅದೇ ರೀತಿ ಇದೀಗ ಯುವಕರು ಸಿನಿಮಾವೊಂದರಲ್ಲಿ ಹೀರೊ ಲುಕ್‌ ಅನ್ನು ನಕಲು ಮಾಡಲು ಹೋಗಿ ಪೊಲೀಸರ ಅತಿಥಿಯಾಗಿದ್ದಾರೆ.

ಉತ್ತರ ಪ್ರದೇಶದ ಬುಲಂದ್ ಶಹರ್‌ನ ದಿಬಾಯ್‌ನಲ್ಲಿ ಆರು ಯುಟ್ಯೂಬರ್‌ಗಳು ಜವಾನ್ ಚಿತ್ರದಲ್ಲಿ ನಟ ಶಾರುಖ್ ಖಾನ್ ಅವರು ಬ್ಯಾಂಡೇಜ್ ಧರಿಸಿದ ಲುಕ್ ಅನ್ನು ನಕಲು ಮಾಡಿ ಇಡೀ ಪಟ್ಟಣವನ್ನು ಸುತ್ತಿದ್ದಾರೆ. ಇವರನ್ನು ಕಂಡು ಸ್ಥಳೀಯರು ಗಾಬರಿಗೊಂಡಿದ್ದಾರೆ ಎನ್ನಲಾಗಿದೆ.

ಈ ವಿಡಿಯೋದಲ್ಲಿ ಆರು ಮಂದಿ ಯುವಕರು ರಕ್ತದಂತೆ ಕಾಣುವ ಬಣ್ಣವನ್ನು ಬ್ಯಾಂಡೇಜ್‌ಗೆ ಬಳಿದುಕೊಂಡು ಅದನ್ನು ಮುಖಕ್ಕೆ ಸುತ್ತಿಕೊಂಡು ಕೈಯಲ್ಲಿ ಕೋಲುಗಳನ್ನು ಹಿಡಿದು ಜವಾನ್ ಚಿತ್ರದಲ್ಲಿ ನಟ ಶಾರುಖ್ ಖಾನ್ ಅವರ ಲುಕ್ ಅನ್ನು ನಕಲು ಮಾಡಿ ಇಡೀ ಪಟ್ಟಣವನ್ನು ಸುತ್ತಿಹಾಕಿದ್ದಾರೆ. ಇವರಲ್ಲಿ ಒಬ್ಬ ಶರ್ಟ್ ಧರಿಸಿದೆ ತನ್ನ ಇಡೀ ದೇಹವನ್ನು ರಕ್ತದ ಕಲೆಯಂತೆ ಕಾಣುವ ಬ್ಯಾಂಡೇಜ್‌ನಿಂದ ಮುಚ್ಚಿಕೊಂಡಿದ್ದಾನೆ. ಇವರನ್ನು ಕಂಡು ಸ್ಥಳೀಯರು ಗಾಬರಿಗೊಂಡಿರುವುದು ವಿಡಿಯೋದಲ್ಲಿ ಕಂಡುಬಂದಿದೆ.

ಈ ವಿಡಿಯೋ ಸೋಶಿಯಲ್ ವೀಡಿಯಾದಲ್ಲಿ ವೈರಲ್ ಆಗಿದ್ದು, ಮಾತ್ರವಲ್ಲ ಇದರಿಂದ ಪೊಲೀಸರು ಇವರನ್ನು ಹುಡುಕಿಕೊಂಡು ಬರುವಂತಾಗಿದೆ. ಈ ಆರು ಮಂದಿ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.
ವಿಡಿಯೋ 15 ನಿಮಿಷಗಳ ಕಾಲವಿದ್ದು, ಸಮಾಜದ ಜನತೆಗೆ ಉಪದ್ರವ ನೀಡುವಂತಹ ಈ ರೀಲ್ಸ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಇದಕ್ಕೆ ಶೀರ್ಷಿಕೆ ನೀಡಲಾಗಿದೆ.

ಈ ಆರು ಮಂದಿ ಸ್ಥಳೀಯರನ್ನು ಹೆದರಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಮತ್ತು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಹಾಗೇ ಮುಂದೆ ಇಂತಹ ಕುಚೇಷ್ಠೆಗಳನ್ನು ಮಾಡದಂತೆ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.

Exit mobile version