Google maps: ರಸ್ತೆಯೆಂದು ಕೊಂಡೊಯ್ದು ನದಿಗಿಳಿಸಿದ ಗೂಗಲ್‌ ಮ್ಯಾಪ್!‌ ನೀರು ಕುಡಿದು ಪಾರಾದ ಪ್ರಯಾಣಿಕರು - Vistara News

ವೈರಲ್ ನ್ಯೂಸ್

Google maps: ರಸ್ತೆಯೆಂದು ಕೊಂಡೊಯ್ದು ನದಿಗಿಳಿಸಿದ ಗೂಗಲ್‌ ಮ್ಯಾಪ್!‌ ನೀರು ಕುಡಿದು ಪಾರಾದ ಪ್ರಯಾಣಿಕರು

Google maps: ಹೈದರಾಬಾದ್‌ನ ಪ್ರವಾಸಿ ತಂಡವೊಂದು ದಕ್ಷಿಣ ಕೇರಳ ಜಿಲ್ಲೆಯ ಕುರುಪ್ಪಂಥಾರ ಬಳಿ ನ್ಯಾವಿಗೇಟ್ ಮಾಡಲು ಗೂಗಲ್ ಮ್ಯಾಪ್‌ಗಳನ್ನು ಬಳಸುತ್ತಿತ್ತು. ಗೂಗಲ್‌ ಮ್ಯಾಪ್‌ ಅವರನ್ನು ನೀರಿನಿಂದ ತುಂಬಿಕೊಂಡಿದ್ದ ಹೊಳೆಯೊಳಗೆ ಕರೆದುಕೊಂಡು ಹೋಯಿತು. ಕಾರಿನಲ್ಲಿ ಮಹಿಳೆ ಸೇರಿದಂತೆ ನಾಲ್ವರ ಗುಂಪು ಆಲಪ್ಪುಳ ಕಡೆಗೆ ಹೋಗುತ್ತಿತ್ತು. ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದೆ.

VISTARANEWS.COM


on

google maps kerala river
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಕೊಟ್ಟಾಯಂ, ಕೇರಳ: ಗೂಗಲ್‌ ಮ್ಯಾಪ್ಸ್ (Google maps) ಬಳಸಿ ಪ್ರಯಾಣಿಸುತ್ತಿದ್ದ ಪ್ರವಾಸಿ (tourists) ತಂಡವೊಂದು ಕೇರಳದಲ್ಲಿ (Kerala) ಸೀದಾ ಹೋಗಿ ನದಿನೀರಿಗೆ (River) ಇಳಿದಿದೆ. ಕಾರು ಮುಳುಗಿದೆ; ಆದರೆ ಪ್ರಯಾಣಿಕರು ಹೇಗೋ ಪಾರಾಗಿದ್ದಾರೆ.

ಹೈದರಾಬಾದ್‌ನ ಪ್ರವಾಸಿ ತಂಡವೊಂದು ದಕ್ಷಿಣ ಕೇರಳ ಜಿಲ್ಲೆಯ ಕುರುಪ್ಪಂಥಾರ ಬಳಿ ನ್ಯಾವಿಗೇಟ್ ಮಾಡಲು ಗೂಗಲ್ ಮ್ಯಾಪ್‌ಗಳನ್ನು ಬಳಸುತ್ತಿತ್ತು. ಗೂಗಲ್‌ ಮ್ಯಾಪ್‌ ಅವರನ್ನು ನೀರಿನಿಂದ ತುಂಬಿಕೊಂಡಿದ್ದ ಹೊಳೆಯೊಳಗೆ ಕರೆದುಕೊಂಡು ಹೋಯಿತು. ಕಾರಿನಲ್ಲಿ ಮಹಿಳೆ ಸೇರಿದಂತೆ ನಾಲ್ವರ ಗುಂಪು ಆಲಪ್ಪುಳ ಕಡೆಗೆ ಹೋಗುತ್ತಿತ್ತು. ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದೆ.

ಅವರು ಪ್ರಯಾಣಿಸುತ್ತಿದ್ದ ರಸ್ತೆಯ ಪಕ್ಕ ಹೊಳೆಯಿದ್ದು, ಭಾರೀ ಮಳೆಯಿಂದಾಗಿ ರಸ್ತೆ ಕೂಡ ತುಂಬಿ ಹರಿಯುತ್ತಿತ್ತು. ಪ್ರವಾಸಿಗರಿಗೆ ಈ ಪ್ರದೇಶದ ಪರಿಚಯವಿಲ್ಲದ ಕಾರಣ, ಅವರು ಗೂಗಲ್ ಮ್ಯಾಪ್ ಬಳಸಿ ನ್ಯಾವಿಗೇಟ್ ಮಾಡುತ್ತಿದ್ದರು. ಅದು ಅವರನ್ನು ನೇರವಾಗಿ ನೀರಿನೊಳಗೇ ಕೊಂಡೊಯ್ದಿತ್ತು!

ಹತ್ತಿರದ ಪೊಲೀಸ್ ಗಸ್ತು ಘಟಕ ಮತ್ತು ಸ್ಥಳೀಯ ನಿವಾಸಿಗಳ ರಕ್ಷಣಾ ಪ್ರಯತ್ನಗಳಿಂದ ನಾಲ್ವರು ಅಪಾಯವಿಲ್ಲದೆ ಪಾರಾಗುವಲ್ಲಿ ಯಶಸ್ವಿಯಾದರು. ಆದರೆ ಅವರ ವಾಹನ ನೀರಿನಲ್ಲಿ ಮುಳುಗಿದೆ. “ವಾಹನವನ್ನು ಹೊರತೆಗೆಯಲು ಪ್ರಯತ್ನಗಳು ನಡೆಯುತ್ತಿವೆ” ಎಂದು ಕಡುತುರುತಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೇರಳದಲ್ಲಿ ಇಂತಹ ಘಟನೆ ವರದಿಯಾಗುತ್ತಿರುವುದು ಇದೇ ಮೊದಲಲ್ಲ. ಕಳೆದ ವರ್ಷ ಅಕ್ಟೋಬರ್‌ನಲ್ಲಿ, ಇಬ್ಬರು ಯುವ ವೈದ್ಯರು ಹೀಗೇ ಒಂದು ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದರು. ಅವರು Google map ನಿರ್ದೇಶನಗಳನ್ನು ಅನುಸರಿಸಿ ಕಾರು ಓಡಿಸಿ ನದಿಗೆ ಬಿದ್ದಿದ್ದರು. ಈ ಘಟನೆಯ ನಂತರ, ಕೇರಳ ಪೊಲೀಸರು ಮಳೆಗಾಲದಲ್ಲಿ ಈ ತಂತ್ರಜ್ಞಾನವನ್ನು ಬಳಸುವ ಬಗ್ಗೆ ಎಚ್ಚರಿಕೆಯ ಮಾರ್ಗಸೂಚಿಗಳನ್ನು ನೀಡಿದ್ದರು.

ಬೆಂಗಳೂರಿಗರಿಗೆ ಗುಡ್‌ ನ್ಯೂಸ್;‌ ಶೀಘ್ರವೇ ಬರಲಿದೆ ಹೊಸ ನ್ಯಾವಿಗೇಟಿಂಗ್‌ ಆ್ಯಪ್‌

ಬೆಂಗಳೂರು: ಹೊಸತನ, ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವುದರಲ್ಲಿ ಸಿಲಿಕಾನ್‌ ಸಿಟಿ ಬೆಂಗಳೂರು (Bengaluru) ಎಂದಿಗೂ ಹಿಂದೆಬಿದ್ದಿಲ್ಲ. ಇದೇ ಕಾರಣಕ್ಕಾಗಿ ಬೆಂಗಳೂರು ದೇಶದ ನಾನಾ ಭಾಗಗಳ ಜನರನ್ನು ಕೈಬೀಸಿ ಕರೆಯುತ್ತದೆ. ಇದಕ್ಕೆ ನಿದರ್ಶನ ಎಂಬಂತೆ ಬೆಂಗಳೂರು ಈಗ ಮತ್ತೊಂದು ಹೊಸತನಕ್ಕೆ ತೆರೆದುಕೊಳ್ಳುತ್ತಿದೆ. ಹೌದು, ರಾಜ್ಯ ರಾಜಧಾನಿಯಲ್ಲಿ ಶೀಘ್ರವೇ ಪ್ರಯಾಣಿಕರ (Commuters) ಅನುಕೂಲಕ್ಕಾಗಿ ಹೊಸ ನ್ಯಾವಿಗೇಟಿಂಗ್‌ ಆ್ಯಪ್‌ (Navigating App) ಬರಲಿದೆ. ಬೆಂಗಳೂರಿನಲ್ಲಿ ಸಂಚರಿಸುವರಿಗೆ ಇದು ಉತ್ತಮ ‘ಮಾರ್ಗ’ದರ್ಶನ ನೀಡಲಿದೆ.

ಬೆಂಗಳೂರಿನಲ್ಲಿ ಸಂಚರಿಸುವವರಿಗೆ ಅನುಕೂಲವಾಗಲಿ, ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಬರಲಿ ಎಂಬ ದೃಷ್ಟಿಯಿಂದ ಬೆಂಗಳೂರು ಟ್ರಾಫಿಕ್‌ ಪೊಲೀಸ್‌ ಇಲಾಖೆಯು ಮ್ಯಾಪ್‌ಪ್ಲಸ್‌ ಮ್ಯಾಪ್‌ಮೈಇಂಡಿಯಾ (Mappls MapmyIndia) ಎಂಬ ಕಂಪನಿಯ ಜತೆ ಒಡಂಡಿಕೆ (MoU) ಮಾಡಿಕೊಂಡಿದೆ. ಈಗಾಗಲೇ ಮ್ಯಾಪ್‌ಪ್ಲಸ್‌ ಮ್ಯಾಪ್‌ಮೈಇಂಡಿಯಾ ಕಂಪನಿಯು ಆ್ಯಪ್‌ ಅಭಿವೃದ್ಧಿಪಡಿಸಿದ್ದು, ಶೀಘ್ರದಲ್ಲೇ ಸಾರ್ವಜನಿಕರಿಗೆ ಲಭ್ಯವಿರಲಿದೆ ಎಂದು ಹೇಳಲಾಗುತ್ತಿದೆ.

ಹೊಸ ಆ್ಯಪ್‌ನಿಂದ ಏನೆಲ್ಲ ಅನುಕೂಲ?

ಹೊಸ ಆ್ಯಪ್‌ನಿಂದ ಸಾರ್ವಜನಿಕರಿಗೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ. ಕಡಿಮೆ ಟ್ರಾಫಿಕ್‌ ಇರುವ ರಸ್ತೆಗಳನ್ನು ಸೂಚಿಸುವುದು, ರಿಯಲ್‌ ಟೈಮ್‌ ಆಗಿ ನ್ಯಾವಿಗೇಟ್‌ ಮಾಡುವುದು, ಯಾವ ರಸ್ತೆಗಳು ಕ್ಲೋಸ್‌ ಆಗಿವೆ, ಯಾವ ಕಡೆ ಹೋದರೆ ಉತ್ತಮ ರಸ್ತೆ ಇದೆ, ಯಾವ ಮಾರ್ಗಗಳು ಇಕ್ಕಟ್ಟವಾಗಿವೆ ಎಂಬುದು ಸೇರಿ ಪ್ರಯಾಣಿಕರಿಗೆ ಹಲವು ಮಾಹಿತಿ ನೀಡಲಿದೆ. ಇದು ಗೂಗಲ್‌ ಮ್ಯಾಪ್‌ಗೆ ಪರ್ಯಾಯವಾಗಿ ಹಾಗೂ ಪ್ರಯಾಣಿಕರಿಗೆ ಇನ್ನಷ್ಟು ಅನುಕೂಲವಾಗಲಿ ಎಂಬುದಾಗಿ ತಿಳಿದುಬಂದಿದೆ.

“ಹೊಸ ಆ್ಯಪ್‌ನಿಂದ ಪ್ರಯಾಣಿಕರಿಗೆ ಮಾತ್ರವಲ್ಲ ಟ್ರಾಫಿಕ್‌ ಪೊಲೀಸರಿಗೆ ಇದು ಅನುಕೂಲವಾಗಲಿದೆ. ಎಲ್ಲೆಲ್ಲಿ ಟ್ರಾಫಿಕ್‌ ಇದೆ ಎಂಬುದನ್ನು ಆ್ಯಪ್‌ ಮೂಲಕವೇ ಪತ್ತೆಹಚ್ಚಿ, ಆ ಸಂಚಾರ ದಟ್ಟಣೆಯನ್ನು ನಿಯಂತ್ರಿಸಬಹುದಾಗಿದೆ. ರೋಡ್‌ಬ್ಲಾಕ್‌ಗಳು, ಗುಂಡಿಗಳು, ದುರಸ್ತಿ ಕೆಲಸ ನಡೆಯುತ್ತಿರುವ ರಸ್ತೆಗಳ ಕುರಿತು ಕೂಡ ಮಾಹಿತಿ ನೀಡಲಿದೆ” ಎಂಬುದಾಗಿ ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Google: 10 ಲಕ್ಷ ಕೋಟಿ ರೂ. ಮೌಲ್ಯದ ಪಿಂಚಣಿ ಡೇಟಾ ಡಿಲೀಟ್‌ ಮಾಡಿ Sorry ಎಂದ ಗೂಗಲ್; ಮುಂದೇನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಕಿಂಗ್ ಕೊಹ್ಲಿಗಾಗಿ ಪುಟಾಣಿ ಫ್ಯಾನ್ ಹಠ: ಹೋಟೆಲ್ ಸಿಬ್ಬಂದಿ ತಡೆದಿದ್ದಕ್ಕೆ ಕಣ್ಣೀರು ಹಾಕಿದ ಬಾಲಕ

VISTARANEWS.COM


on

ಆರ್‌ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ವಿಶ್ವದಾದ್ಯಂತ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಇತ್ತೀಚೆಗೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್‌ಸಿಬಿ ಜಯಗಳಿಸಿದ ನಂತರ, ಹೋಟೆಲ್‌ನಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಕೊಹ್ಲಿ ಅವರ ಆಟೋಗ್ರಾಫ್ ಪಡೆಯಲು ಪುಟಾಣಿ ಬಾಲಕನೊಬ್ಬ ಬ್ಯಾಟ್ ಹಿಡಿದು ಬಹಳ ಹೊತ್ತು ಕಾತರದಿಂದ ಕಾಯುತ್ತಿದ್ದ. ಆದರೆ ಕೊಹ್ಲಿ ಹೋಟೆಲ್‌ಗೆ ಆಗಮಿಸಿದಾಗ ಭದ್ರತಾ ಸಿಬ್ಬಂದಿ ಬಾಲಕನನ್ನು ಹತ್ತಿರ ಹೋಗಲು ಬಿಡದೆ ತಡೆದಿದ್ದಾರೆ. ಇದರಿಂದ ಮನನೊಂದ ಬಾಲಕ ತನ್ನ ಕೈಯಲ್ಲಿದ್ದ ಬ್ಯಾಟನ್ನು ನೆಲಕ್ಕೆ ಎಸೆದು ಗಳಗಳನೇ ಅತ್ತಿದ್ದಾನೆ.

ಹೋಟೆಲ್ ಪ್ರವೇಶಿಸಿದ ವಿರಾಟ್ ಕೊಹ್ಲಿ ಸುತ್ತಲೂ ಸಿಬ್ಬಂದಿಗಳು ಬೌನ್ಸರ್‌ಗಳಂತೆ ನಿಂತು ಯಾರೂ ಹತ್ತಿರ ಸುಳಿಯದಂತೆ ನೋಡಿಕೊಳ್ಳುತ್ತಿದ್ದರು. ಈ ವೇಳೆ ಓಡೋಡಿ ಬಂದ ಬಾಲಕನನ್ನು ಸಿಬ್ಬಂದಿ ಬಲವಂತವಾಗಿ ತಡೆದಿದ್ದಾರೆ. ಇತ್ತ ಕೊಹ್ಲಿ ಕೂಡ ಬಾಲಕನತ್ತ ಗಮನ ಹರಿಸದೆ ನೇರವಾಗಿ ಮುಂದೆ ಸಾಗಿದ್ದಾರೆ. ತನ್ನ ನೆಚ್ಚಿನ ಕ್ರಿಕೆಟಿಗನನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ ಎಂಬ ನೋವಿನಿಂದ ಬಾಲಕ ಪೋಷಕರ ಬಳಿ ತೆರಳಿ ಜೋರಾಗಿ ಅಳಲಾರಂಭಿಸಿದನು. ಪೋಷಕರು ಎಷ್ಟೇ ಸಮಾಧಾನ ಪಡಿಸಿದರೂ ಆ ಪುಟ್ಟ ಅಭಿಮಾನಿಯ ಸಿಟ್ಟು ಮತ್ತು ಬೇಸರ ಮಾತ್ರ ಕಡಿಮೆಯಾಗಲಿಲ್ಲ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. “ಕೊಹ್ಲಿ ಕನಿಷ್ಠ ಪಕ್ಷ ಆ ಮಗುವಿಗೆ ಕೈಬೀಸಿ ವಿಶ್ ಮಾಡಬೇಕಿತ್ತು, ಆಗ ಆ ಮಗುವಿನ ಮುಖದಲ್ಲಿ ನಗು ಮೂಡುತ್ತಿತ್ತು” ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಇನ್ನು ಕೆಲವರು, “ಕೊಹ್ಲಿಗೆ ಆ ಸಮಯದಲ್ಲಿ ಬಾಲಕ ಅವರ ಗಮನಕ್ಕೆ ಬಂದಿರಲಿಕ್ಕಿಲ್ಲ” ಎಂದು ಸಮರ್ಥಿಸಿಕೊಂಡಿದ್ದಾರೆ. ಏನೇ ಇರಲಿ, ಕ್ರಿಕೆಟ್ ತಾರೆಗಳ ಮೇಲಿರುವ ಅಭಿಮಾನವು ಕೆಲವೊಮ್ಮೆ ಇಂತಹ ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾಗುವುದು ಸಹಜ ಎಂಬ ಚರ್ಚೆಗಳು ನಡೆಯುತ್ತಿವೆ.

Continue Reading

Latest

ಹಣ ಪಡೆಯಲು ಬ್ಯಾಂಕಿಗೆ ಸಹೋದರಿಯ ಅಸ್ಥಿಪಂಜರವನ್ನೇ ತಂದ ವ್ಯಕ್ತಿ!

VISTARANEWS.COM


on

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ ಮಾನವೀಯತೆ ಮರೆತ ಬ್ಯಾಂಕ್ ಸಿಬ್ಬಂದಿಯ ನಡೆಗೆ ಇಡೀ ದೇಶವೇ ಮರುಗುವಂತಾಗಿದೆ. ಮೃತ ಸಹೋದರಿಯ ಹೆಸರಿನಲ್ಲಿದ್ದ ಠೇವಣಿ ಹಣವನ್ನು ಹಿಂಪಡೆಯಲು ಹೋದ ಜೀತು ಮುಂಡಾ ಎಂಬ ಅನಕ್ಷರಸ್ಥ ಬುಡಕಟ್ಟು ವ್ಯಕ್ತಿಗೆ, ಬ್ಯಾಂಕ್ ಸಿಬ್ಬಂದಿ ಪದೇ ಪದೇ “ಖಾತೆದಾರಳನ್ನು ಕರೆತನ್ನಿ” ಎಂದು ಕಿರುಕುಳ ನೀಡಿದ್ದಾರೆ. ಆಕೆ ನಿಧನಳಾಗಿದ್ದಾಳೆ ಎಂದು ಹೇಳಿದರೂ ಕೇಳದ ಸಿಬ್ಬಂದಿಯ ವರ್ತನೆಯಿಂದ ಹತಾಶರಾದ ಜೀತು, ಸಾವಿನ ಪುರಾವೆ ತೋರಿಸಲು ಸಮಾಧಿಯನ್ನು ಅಗೆದು ಸಹೋದರಿಯ ಅಸ್ಥಿಪಂಜರವನ್ನೇ ಬ್ಯಾಂಕಿಗೆ ಹೊತ್ತು ತಂದಿದ್ದಾರೆ.

ಈ ವಿಚಿತ್ರ ಮತ್ತು ಆಘಾತಕಾರಿ ಘಟನೆಯಿಂದ ಎಚ್ಚೆತ್ತ ಪೊಲೀಸರು ಹಾಗೂ ಸ್ಥಳೀಯ ಆಡಳಿತವು ಕೂಡಲೇ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಜೀತು ಮುಂಡಾ ಅವರ ಸಹೋದರಿಯ ಖಾತೆಯಲ್ಲಿದ್ದ ನಾಮಿನಿ ಕೂಡ ಈಗಾಗಲೇ ಮೃತಪಟ್ಟಿದ್ದು, ಕಾನೂನಿನ ಪ್ರಕಾರ ಜೀತು ಅವರೇ ಈ ಹಣಕ್ಕೆ ಏಕೈಕ ಹಕ್ಕುದಾರರಾಗಿದ್ದಾರೆ. ಬ್ಯಾಂಕ್ ಅಧಿಕಾರಿಗಳು ಮೃತ ವ್ಯಕ್ತಿಯ ಖಾತೆಯಿಂದ ಹಣ ಹಿಂಪಡೆಯುವ ಸರಳ ನಿಯಮಗಳನ್ನು ವಿವರಿಸುವಲ್ಲಿ ವಿಫಲರಾಗಿ, ಒಬ್ಬ ಅಮಾಯಕ ವ್ಯಕ್ತಿಯನ್ನು ಇಂತಹ ದಾರುಣ ಸ್ಥಿತಿಗೆ ತಳ್ಳಿದ್ದು ನಿಜಕ್ಕೂ ದುರದೃಷ್ಟಕರ.

ಸದ್ಯ ಪೊಲೀಸರ ಸಮ್ಮುಖದಲ್ಲಿ ಅಸ್ಥಿಪಂಜರವನ್ನು ಮರು ಅಂತ್ಯಕ್ರಿಯೆ ಮಾಡಲಾಗಿದ್ದು, ಜೀತು ಮುಂಡಾ ಅವರಿಗೆ ಬರಬೇಕಾದ ಹಣವನ್ನು ಶೀಘ್ರವಾಗಿ ವಿತರಿಸುವಂತೆ ಜಿಲ್ಲಾಡಳಿತವು ಬ್ಯಾಂಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ಈ ಘಟನೆಯು ಸರ್ಕಾರಿ ಮತ್ತು ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಸಾಮಾನ್ಯ ಜನರಿಗೆ, ಅದರಲ್ಲೂ ವಿಶೇಷವಾಗಿ ಅನಕ್ಷರಸ್ಥರಿಗೆ ಸಿಗಬೇಕಾದ ಕನಿಷ್ಠ ಗೌರವ ಮತ್ತು ಮಾರ್ಗದರ್ಶನದ ಕೊರತೆಯನ್ನು ಎತ್ತಿ ತೋರಿಸಿದೆ.

Continue Reading

Latest

ಮುಂದೆ ಕಾದಿದೆ ಘೋರ ವಿಪತ್ತು: ಹವಾಮಾನ ವೈಪರಿತ್ಯ, ಅನ್ನ-ನೀರಿಗೂ ಹಾಹಾಕಾರ! ಕೋಡಿ ಶ್ರೀಗಳ ಭಯಾನಕ ಭವಿಷ್ಯಕ್ಕೆ ನಡುಗಿದ ನಾಡು

VISTARANEWS.COM


on

ತಮ್ಮ ನಿಖರ ಭವಿಷ್ಯವಾಣಿಗಳಿಗೆ ಹೆಸರಾಗಿರುವ ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು, ಇದೀಗ ದೇಶದ ಭವಿಷ್ಯದ ಕುರಿತು ಭಯಾನಕ ಮುನ್ಸೂಚನೆ ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಮಾತನಾಡಿದ ಶ್ರೀಗಳು, ಹವಾಮಾನ ವೈಪರಿತ್ಯದಿಂದ ಪ್ರಕೃತಿಯಲ್ಲಿ ಭಾರಿ ಏರುಪೇರು ಉಂಟಾಗಲಿದೆ ಎಂದು ಎಚ್ಚರಿಸಿದ್ದಾರೆ. ಈ ಹವಾಮಾನ ಬದಲಾವಣೆಯು ದೇಶದ ಹಲವು ಭಾಗಗಳಲ್ಲಿ ಅನ್ನ ಮತ್ತು ನೀರಿಗಾಗಿ ತೀವ್ರ ಹಾಹಾಕಾರ ಸೃಷ್ಟಿಸಲಿದ್ದು, ಅಪಮೃತ್ಯುಗಳ (ಅಕಾಲಿಕ ಮರಣ) ಸಂಖ್ಯೆ ಹೆಚ್ಚಾಗಲಿದೆ ಎಂಬ ಆಘಾತಕಾರಿ ಭವಿಷ್ಯ ನುಡಿದಿದ್ದಾರೆ.

ಜಾಗತಿಕ ಮಟ್ಟದಲ್ಲಿಯೂ ಭಾರಿ ಅಪಾಯಗಳು ಸಂಭವಿಸುವ ಲಕ್ಷಣಗಳಿವೆ ಎಂದು ಹೇಳಿರುವ ಶ್ರೀಗಳು, 2026ರ ಸಾಲಿನ ಬಗ್ಗೆ ಮಾರ್ಮಿಕವಾಗಿ ಮಾತನಾಡಿದ್ದಾರೆ. ಜಗತ್ತಿನಾದ್ಯಂತ ಜಲಪ್ರಳಯ ಹಾಗೂ ಅಗ್ನಿ ಅವಘಡಗಳಿಂದ ಲಕ್ಷಾಂತರ ಜನರು ಸಾವನ್ನಪ್ಪಿದ್ದಾರೆ, ಆದರೆ ಅತೃಪ್ತ ಆತ್ಮಗಳಿಗೆ ಸರಿಯಾದ ಸಂಸ್ಕಾರ ನಡೆಯದ ಕಾರಣ ಅವು ಮನುಕುಲಕ್ಕೆ ಕಂಟಕವಾಗಲಿವೆ ಎಂದು ಭೀತಿ ವ್ಯಕ್ತಪಡಿಸಿದ್ದಾರೆ. ಹವಾಮಾನ ವೈಪರಿತ್ಯದ ಈ ಭೀಕರತೆಯ ನಡುವೆ ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿಯೂ ಅತಂತ್ರ ಸ್ಥಿತಿ ನಿರ್ಮಾಣವಾಗಲಿದೆ ಎಂದು ಅವರು ಮುನ್ಸೂಚನೆ ನೀಡಿದ್ದಾರೆ.

ಈ ಎಲ್ಲಾ ಆತಂಕಕಾರಿ ಬೆಳವಣಿಗೆಗಳ ನಡುವೆ ಕರ್ನಾಟಕದ ಜನತೆಗೆ ಶ್ರೀಗಳು ಸಮಾಧಾನದ ಸುದ್ದಿಯನ್ನೂ ನೀಡಿದ್ದಾರೆ. ದೇಶದ ಬೇರೆ ಭಾಗಗಳಲ್ಲಿ ಸಮಸ್ಯೆಗಳಿದ್ದರೂ, ಕರ್ನಾಟಕದಲ್ಲಿ ಜನರಿಗೆ ದೈವಾರಾಧನೆ ಮತ್ತು ಭಕ್ತಿಯ ಮೇಲಿನ ಶ್ರದ್ಧೆ ಹೆಚ್ಚಿರುವುದರಿಂದ ನಾಡಿನಲ್ಲಿ ಮಳೆ-ಬೆಳೆ ಸಮೃದ್ಧವಾಗಿರಲಿದೆ ಎಂದು ಅವರು ಹೇಳಿದ್ದಾರೆ. ರಾಜ್ಯದ ಜನರಲ್ಲಿ ಹೆಚ್ಚುತ್ತಿರುವ ಧಾರ್ಮಿಕ ಪ್ರಜ್ಞೆಯು ನಾಡನ್ನು ಬರಗಾಲದಿಂದ ರಕ್ಷಿಸಲಿದ್ದು, ಸಮೃದ್ಧ ಜೀವನ ನಡೆಸಲು ಸಹಕಾರಿಯಾಗಲಿದೆ ಎಂದು ಕೋಡಿ ಶ್ರೀಗಳು ಅಭಿಪ್ರಾಯಪಟ್ಟಿದ್ದಾರೆ.

Continue Reading

Latest

ಬದುಕು ಸುಂದರವಾಗಿರಲು ಮದುವೆ-ಮಕ್ಕಳೇ ಬೇಕಿಲ್ಲ! ವೈಯಕ್ತಿಕ ಜೀವನದ ಬಗ್ಗೆ ನಿತ್ಯಾ ಮೆನನ್ ಹಂಚಿಕೊಂಡ ಮನದಾಳದ ಮಾತು

VISTARANEWS.COM


on

ದಕ್ಷಿಣ ಭಾರತದ ಪ್ರತಿಭಾವಂತ ನಟಿ ನಿತ್ಯಾ ಮೆನನ್ ತಮ್ಮ ನೇರ ನುಡಿ ಹಾಗೂ ವೈಚಾರಿಕ ನಿಲುವುಗಳಿಂದ ಸದಾ ಸುದ್ದಿಯಲ್ಲಿರುತ್ತಾರೆ. ಇತ್ತೀಚೆಗೆ ಕನ್ನಡ ನಟಿ ಭಾವನಾ ರಾಮಣ್ಣ ಅವರು ಮದುವೆಯಾಗದೆ ಐವಿಎಫ್ (IVF) ಮೂಲಕ ಮಗು ಪಡೆದ ವಿಷಯದ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪರ-ವಿರೋಧದ ಚರ್ಚೆಗಳು ನಡೆಯುತ್ತಿವೆ. ಈ ಬೆನ್ನಲ್ಲೇ, ಮದುವೆ ಮತ್ತು ಮಾತೃತ್ವದ ಕುರಿತು ನಿತ್ಯಾ ಮೆನನ್ ಈ ಹಿಂದೆ ನೀಡಿದ್ದ ಹೇಳಿಕೆಗಳು ಮತ್ತೆ ಮುನ್ನಲೆಗೆ ಬಂದಿದ್ದು, ಭಾರೀ ವೈರಲ್ ಆಗುತ್ತಿವೆ. ಮದುವೆಯಾಗದೆಯೇ ಮಕ್ಕಳನ್ನು ಹೊಂದುವ ನಿರ್ಧಾರದಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳುವ ಮೂಲಕ ಅವರು ಆಧುನಿಕ ಬದುಕಿನ ಆಯ್ಕೆಗಳನ್ನು ಸಮರ್ಥಿಸಿಕೊಂಡಿದ್ದಾರೆ.

ತಮಿಳಿನ ‘ಕಾದಲಿಕ್ಕಾ ನೇರಮಿಲ್ಲೈ’ ಸಿನಿಮಾದ ಪ್ರಚಾರದ ವೇಳೆ ನೀಡಿದ ಸಂದರ್ಶನವೊಂದರಲ್ಲಿ ಅವರು ಈ ಕುರಿತು ಮುಕ್ತವಾಗಿ ಮಾತನಾಡಿದ್ದಾರೆ. “ಮದುವೆಗಿಂತ ಮೊದಲು ಅಥವಾ ನಂತರ ಗರ್ಭಿಣಿಯಾಗುವುದು ಎನ್ನುವುದಕ್ಕಿಂತ, ಮದುವೆಯೇ ಇಲ್ಲದೆ ಗರ್ಭಿಣಿಯಾಗುವುದು ಅಥವಾ ಮಗು ಪಡೆಯುವುದರಲ್ಲಿ ತಪ್ಪೇನಿಲ್ಲ” ಎಂಬುದು ನಿತ್ಯಾ ಅವರ ಅಭಿಪ್ರಾಯ. ಒಬ್ಬ ಹೆಣ್ಣಿಗೆ ಮಗು ಬೇಕು ಎನಿಸಿದರೆ, ಆದರೆ ಮದುವೆಯ ಬಂಧನ ಇಷ್ಟವಿಲ್ಲದಿದ್ದರೆ ಅವಳು ಮಗು ಪಡೆಯುವ ನಿರ್ಧಾರ ಮಾಡಬಹುದು. ಇದಕ್ಕೆ ಈಗ ವೈದ್ಯಕೀಯವಾಗಿ ಸಾಕಷ್ಟು ಅವಕಾಶಗಳಿವೆ ಮತ್ತು ಹಲವರು ಇದನ್ನು ಯಶಸ್ವಿಯಾಗಿ ಅನುಸರಿಸುತ್ತಿದ್ದಾರೆ ಎಂದು ಅವರು ವಿವರಿಸಿದ್ದಾರೆ.

ಕೇವಲ ಮಕ್ಕಳ ಬಗ್ಗೆ ಮಾತ್ರವಲ್ಲದೆ, ಮದುವೆಯಾದ ನಂತರ ಮಕ್ಕಳಿಲ್ಲದ ದಂಪತಿಗಳ ಬಗ್ಗೆಯೂ ನಿತ್ಯಾ ಮೆನನ್ ಸಂವೇದನಾಶೀಲವಾಗಿ ಮಾತನಾಡಿದ್ದಾರೆ. “ಮದುವೆಯಾದ ಮೇಲೆ ಮಕ್ಕಳಾಗಲೇಬೇಕು ಎಂಬ ಹಠ ಬೇಡ, ಮಕ್ಕಳಿಲ್ಲದಿದ್ದರೂ ಬದುಕು ಸುಂದರವಾಗಿರಲು ಸಾಧ್ಯವಿದೆ” ಎಂಬುದು ಅವರ ನಿಲುವು. ಸಮಾಜದ ಅಲಿಖಿತ ನಿಯಮಗಳನ್ನು ಪ್ರಶ್ನಿಸಿರುವ ಅವರು, ಪ್ರತಿಯೊಬ್ಬರಿಗೂ ತಮ್ಮ ಜೀವನದ ಬಗ್ಗೆ ಸ್ವತಂತ್ರ ನಿರ್ಧಾರ ತೆಗೆದುಕೊಳ್ಳುವ ಹಕ್ಕಿದೆ ಎಂದು ಒತ್ತಿ ಹೇಳಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಇವರ ಈ ‘ಬೋಲ್ಡ್’ ಹೇಳಿಕೆಗಳು ಈಗ ಯುವಜನತೆಯ ಮೆಚ್ಚುಗೆಗೆ ಪಾತ್ರವಾಗುತ್ತಿವೆ.

Continue Reading
Advertisement
bigbreaking16 hours ago

ಮೋದಿ ಅಥವಾ ದೀದಿ? ಪ.ಬಂಗಾಳದ ಭವಿಷ್ಯ ನಿರ್ಧರಿಸಲಿದೆ 142 ಸೀಟು

Latest16 hours ago

ಸಿದ್ದರಾಮಯ್ಯನವರು ಹೈಕಮಾಂಡ್ ನಿರ್ಧಾರಕ್ಕೆ ಬದ್ಧ’: ಸಿಎಂ ಬದಲಾವಣೆ ಬಗ್ಗೆ ರಾಜಣ್ಣ ನೀಡಿದ ಹೇಳಿಕೆಯ ಮರ್ಮವೇನು?

ಕ್ರೀಡೆ17 hours ago

ಕಿಂಗ್ ಕೊಹ್ಲಿಗೆ ಟಕ್ಕರ್ ಕೊಟ್ಟ ಯುವ ಕಿಡಿ: ಆರೆಂಜ್ ಕ್ಯಾಪ್ ರೇಸ್‌ನಲ್ಲಿ ವಿರಾಟ್ ಹಿಂದಿಕ್ಕಿದ ವೈಭವ್ ಸೂರ್ಯವಂಶಿ!

Latest18 hours ago

ಅಪ್ಪು ಸರ್ ಕೊಟ್ಟ ಆ ಪ್ರೋತ್ಸಾಹವೇ ನನ್ನ ಯಶಸ್ಸಿನ ಗುಟ್ಟು: ಕನ್ನಡಿಗರ ನೆಚ್ಚಿನ ‘ಅಂಜನಿಪುತ್ರ’ನ ಬಗ್ಗೆ ‘ನ್ಯಾಷನಲ್ ಕ್ರಶ್’ ರಶ್ಮಿಕಾ ಹೇಳಿದ್ದೇನು?

bigbreaking18 hours ago

20 ಸಾವಿರ ಕೋಟಿ ಹಗರಣದ ಮೂಲ ದಾಖಲೆಗಳೇ ನಾಪತ್ತೆ. ಎನ್‌.ಆರ್‌.ರಮೇಶ್‌ ಗಂಭೀರ ಆರೋಪ.

Latest19 hours ago

ಕಿಂಗ್ ಕೊಹ್ಲಿಗಾಗಿ ಪುಟಾಣಿ ಫ್ಯಾನ್ ಹಠ: ಹೋಟೆಲ್ ಸಿಬ್ಬಂದಿ ತಡೆದಿದ್ದಕ್ಕೆ ಕಣ್ಣೀರು ಹಾಕಿದ ಬಾಲಕ

Latest19 hours ago

ಹಣ ಪಡೆಯಲು ಬ್ಯಾಂಕಿಗೆ ಸಹೋದರಿಯ ಅಸ್ಥಿಪಂಜರವನ್ನೇ ತಂದ ವ್ಯಕ್ತಿ!

Latest21 hours ago

ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರ್ತಾರಾ? ಪರಮೇಶ್ವರ್ ಮೌನದ ಹಿಂದೆ ಅಡಗಿದೆಯೇ ದೊಡ್ಡ ರಹಸ್ಯ?

Latest23 hours ago

ಸಾಲದ ಸುಳಿಯಲ್ಲಿ ರಾಜ್ಯ ಸರ್ಕಾರ! ಆರ್ಥಿಕ ಶಿಸ್ತಿನ ಬಗ್ಗೆ ಹೆಚ್‌ಡಿಕೆ ಆತಂಕ

Latest23 hours ago

ರಿಷಬ್ ಶೆಟ್ಟಿ ಸಿನಿಮಾದ ತೆಲುಗು ವರ್ಷನ್ ರೆಡಿ: ಟಾಲಿವುಡ್‌ನಲ್ಲಿ ಬಿಡುಗಡೆಗೆ ದಿನಾಂಕ ನಿಗದಿ! ಯಾವುದು ಆ ಸಿನಿಮಾ?

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌