Guinness World Records: ಬರೋಬ್ಬರಿ 168 ಅಕ್ಷರಗಳನ್ನೊಳಗೊಂಡ ಈ ನಗರದ ಹೆಸರಿನಲ್ಲಿದೆ ವಿಶ್ವ ದಾಖಲೆ - Vistara News

ವೈರಲ್ ನ್ಯೂಸ್

Guinness World Records: ಬರೋಬ್ಬರಿ 168 ಅಕ್ಷರಗಳನ್ನೊಳಗೊಂಡ ಈ ನಗರದ ಹೆಸರಿನಲ್ಲಿದೆ ವಿಶ್ವ ದಾಖಲೆ

Guinness World Records: ಥೈಲ್ಯಾಂಡ್‌ ರಾಜಧಾನಿ ಬ್ಯಾಂಕಾಕ್‌ನ ಪೂರ್ಣ ನಾಮ ಅತೀ ಹೆಚ್ಚು ಅಕ್ಷರಗಳನ್ನೊಳಗೊಂಡ ನಗರದ ಹೆಸರು ಎನ್ನುವ ವಿಶ್ವ ದಾಖಲೆ ಬರೆದಿದೆ.

VISTARANEWS.COM


on

bankok
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬ್ಯಾಂಕಾಕ್‌: ಥೈಲ್ಯಾಂಡ್‌ (Thailand)ನ ರಾಜಧಾನಿ ಬ್ಯಾಂಕಾಕ್‌ (Bangkok) ಸದಾ ಪ್ರವಾಸಿಗರು ಆಕರ್ಷಿಸುವ ನಗರ. ಆಗ್ನೇಯ ಏಷ್ಯಾದ ಈ ನಗರ ಸಾಹಸಪ್ರಿಯರ ಗಮನ ಸೆಳೆಯುತ್ತದೆ. ಇಲ್ಲಿನ ಚೈತನ್ಯಶೀಲನೆ, ವೈವಿಧ್ಯ ಪಾಕ ಪದ್ಧತಿ ಮತ್ತು ಬೆರಗುಗೊಳಿಸುವ ದೃಶ್ಯಗಳು ಆಹ್ಲಾದಕರವಾಗಿರುತ್ತದೆ. ಇದೇ ಕಾರಣಕ್ಕೆ ಇಲ್ಲಿಗೆ ಪ್ರತಿ ವರ್ಷ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಿರುತ್ತಾರೆ. ಇನ್ನೊಂದು ವಿಶೇಷ ಎಂದರೆ ಬ್ಯಾಂಕಾಕ್‌ ಪೂರ್ಣ ಹೆಸರು ಗಿನ್ನೆಸ್‌ ವರ್ಲ್ಡ್‌ ರೆಕಾರ್ಡ್‌ನಲ್ಲಿ ಸ್ಥಾನ ಗಿಟ್ಟಿಸಿದೆ. ಅತೀ ಹೆಚ್ಚು ಅಕ್ಷರಗಳನ್ನು ಹೊಂದಿರುವ ನಗರದ ಹೆಸರು ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.

ಬರೋಬ್ಬರಿ 168 ಅಕ್ಷರ!

ವಿಶೇಷ ಎಂದರೆ ಬ್ಯಾಂಕಾಕ್‌ನ ಪೂರ್ಣ ಹೆಸರು ಬರೋಬ್ಬರಿ 168 ಅಕ್ಷರವನ್ನು ಒಳಗೊಂಡಿದೆ. ಹಾಗಾದರೆ ಬ್ಯಾಂಕಾಕ್‌ನ ಪೂರ್ಣ ಹೆಸರು ಏನು ಎನ್ನುವ ಕುತೂಹಲ ನಿಮ್ಮಲ್ಲಿರಬಹುದು. ಅದಕ್ಕೆ ಉತ್ತರ ಇಲ್ಲಿದೆ. Krung Thep Mahanakhon Amon Rattanakosin Mahinthara Ayuthaya Mahadilok Phop Noppharat Ratchathani Burirom Udomratchaniwet Mahasathan Amon Piman Awatan Sathit Sakkathattiya Witsanukam Prasit (ಕ್ರುಂಗ್ ಥೆಪ್ ಮಹಾನಖೋನ್ ಅಮೋನ್ ರಟ್ಟನಕೋಸಿನ್ ಮಹಿಂತರಾ ಆಯುತಾಯ ಮಹಾದಿಲೋಕ್ ಫಾಪ್ ನೊಪ್ಪರತ್ ರಚಥಾನಿ ಬುರಿರೋಮ್ ಉಡೋಮ್ರಚನಿವೆಟ್ ಮಹಾಸಂಸ್ಥಾನ್ ಅಮೋನ್ ಪಿಮನ್ ಅವತನ್ ಸತೀಶ್ ಸಕ್ಕತಟ್ಟಿಯಾ ವಿಟ್ಸಾನುಕಂ ಪ್ರಸಿತ್)-ಇದು ಯಾವುದೋ ಕವನವಲ್ಲ. ಬ್ಯಾಂಕಾಕ್‌ನ ಪೂರ್ಣ ನಾಮ ಇದು. ಅಂದರೆ ಇದರ ಅರ್ಥ ದೇವದೂತರ ನಗರ, ಅಮರರ ಮಹಾನ್ ನಗರ, ಒಂಬತ್ತು ರತ್ನಗಳ ಭವ್ಯವಾದ ನಗರ, ರಾಜನ ಆಸನ, ರಾಜಮನೆತನದ ಅರಮನೆಗಳ ನಗರ, ದೇವತೆಗಳ ಅವತಾರ, ಇಂದ್ರನ ಆಜ್ಞೆಯ ಮೇರೆಗೆ ವಿಶ್ವಕರ್ಮನು ನಿರ್ಮಿಸಿದ ದೇವರ ಮನೆ. ಹೆಚ್ಚಿನ ಹೆಚ್ಚಿನ ಥಾಯ್ ಜನರು ಇದರ ಸಂಕ್ಷಿಪ್ತ ರೂಪ Krung Thep Maha Nakhon (ಕ್ರುಂಗ್ ಥೆಪ್ ಮಹಾ ನಖೋನ್) ಅನ್ನು ಬಳಸುತ್ತಾರೆ.

ವಿಡಿಯೊ ವೈರಲ್‌

ಇತ್ತೀಚೆಗೆ ಟೂರ್‌ ಗೈಡ್‌ ಒಬ್ಬರು ಚಲಿಸುವ ಬಸ್‌ನಲ್ಲಿ ಬ್ಯಾಂಕಾಕ್‌ನ ಪೂರ್ಣ ಹೆಸರು ಹೇಳುವ ವಿಡಿಯೊ ಇನ್‌ಸ್ಟಾಗ್ರಾಮ್‌ನಲ್ಲಿ ವೈರಲ್‌ ಆಗಿದೆ. ʼʼಸ್ಥಳವೊಂದರ ಅತೀ ದೀರ್ಘ ಹೆಸರು ಎನ್ನುವ ಕಾರಣಕ್ಕೆ ಬ್ಯಾಂಕಾಕ್‌ನ ಪೂರ್ತಿ ಹೆಸರು ಗಿನ್ನೆಸ್‌ ವರ್ಲ್ಡ್‌ ರೆಕಾರ್ಡ್‌ನಲ್ಲಿ ದಾಖಲಾಗಿದೆʼʼ ಎಂದು ವಿಡಿಯೊಕ್ಕೆ ಕ್ಯಾಪ್ಶನ್‌ ನೀಡಲಾಗಿದೆ. ಈ ಪೂರ್ಣ ಹೆಸರು ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಹೊಂದಿದ್ದು, ನಗರದ ಶ್ರೀಮಂತ ಗತಕಾಲದ ವೈಭವವನ್ನು ಸೂಚಿಸುತ್ತದೆ ಎಂದು ಹಿರಿಯರು ಅಭಿಪ್ರಾಯಪಡುತ್ತಾರೆ.

ಇದನ್ನೂ ಓದಿ: Visa Free: ಶ್ರೀಲಂಕಾ ಮಾತ್ರವಲ್ಲ; ಇನ್ನು ವೀಸಾ ಇಲ್ಲದೆ ಥೈಲ್ಯಾಂಡ್‌ಗೂ ತೆರಳಬಹುದು

ಥೈಲ್ಯಾಂಡ್‌ ಪ್ರಮುಖ ಪ್ರವಾಸಿ ದೇಶವಾಗಿ ಗುರುತಿಸಿಕೊಂಡಿದೆ. ಥೈಲ್ಯಾಂಡ್‌ ಸರ್ಕಾರ ಭಾರತ ಮತ್ತು ತೈವಾನ್‌ನ ಪ್ರವಾಸಿಗರು ನವೆಂಬರ್ 1ರಿಂದ ಮೇ 10ರ ನಡುವೆ ವೀಸಾ ಇಲ್ಲದೆ (Visa Free) ದೇಶಕ್ಕೆ ಪ್ರವೇಶ ನೀಡಬಹುದು ಎಂದು ಘೋಷಿಸಿದೆ. ಪ್ರವಾಸಿಗರನ್ನು ಹೆಚ್ಚಿನ ಸಂಖ್ಯೆಯಲ್ಲಿ ದೇಶದತ್ತ ಆಕರ್ಷಿಸಿ ನಿಧಾನಗತಿಯಲ್ಲಿ ಸಾಗುತ್ತಿರುವ ಆರ್ಥಿಕತೆಯನ್ನು ಉತ್ತೇಜಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

Viral News: ಜೈಲಿಂದ ಹೊರಬಂದ ಖುಷಿಗೆ ರೌಡಿಯ ಬೃಹತ್ ಮೆರವಣಿಗೆ; ಮತ್ತೆ ಜೈಲಿಗೇ ಕಳುಹಿಸಿದ ಪೊಲೀಸರು!

Viral News ಮಹಾರಾಷ್ಟ್ರ ಅಪಾಯಕಾರಿ ಚಟುವಟಿಕೆಗಳ ತಡೆ (ಎಂಪಿಡಿಎ) ಕಾಯ್ದೆಯಡಿ ಶಿಕ್ಷೆ ಅನುಭವಿಸುತ್ತಿದ್ದ ನಾಸಿಕ್‌ನ ಕುಖ್ಯಾತ ರೌಡಿ ಹರ್ಷದ್ ಪಟಾಂಕರ್ ಜುಲೈ 23 ರಂದು ಜೈಲಿನಿಂದ ಬಿಡುಗಡೆಯಾಗಿದ್ದ. ಜೈಲಿನಿಂದ ಬಿಡುಗಡೆಯಾದ ಹರ್ಷದ್ ಪಟಾಂಕರ್ ಅನ್ನು ಸ್ವಾಗತಿಸಲು ಆತನ ಬೆಂಬಲಿಗರು ಬೃಹತ್ ರ‍್ಯಾಲಿಯನ್ನು ಆಯೋಜಿಸಿದ್ದರು. ಇದರ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದರೆ ಈ ರ‍್ಯಾಲಿ ನಡೆಸಿ ಮತ್ತೆ ಆತ ಜೈಲು ಪಾಲಾಗಿದ್ದಾನೆ ಎನ್ನಲಾಗಿದೆ.

VISTARANEWS.COM


on

Viral News
Koo

ಮಹಾರಾಷ್ಟ್ರ : ಮದುವೆ, ದೇವಸ್ಥಾನದ ಪ್ರತಿಷ್ಠಾಪನೆ ಸಮಾರಂಭದ ವೇಳೆ ಬೃಹತ್ ಮೆರವಣಿಗೆಯನ್ನು ಮಾಡಲಾಗುತ್ತದೆ. ಆದರೆ ಇತ್ತೀಚೆಗೆ ಜೈಲಿನಿಂದ ಬಿಡುಗಡೆಯಾದ ಮಹಾರಾಷ್ಟ್ರದ ಕುಖ್ಯಾತ ರೌಡಿನೊಬ್ಬನನ್ನು ಸ್ವಾಗತಿಸಲು ಆತನ ಬೆಂಬಲಿಗರು ಬೃಹತ್‌ ರ‍್ಯಾಲಿಯನ್ನು  ಆಯೋಜಿಸಿದ್ದರು. ಇದರ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral News) ಆಗಿದೆ. ಆದರೆ ಈ ರ‍್ಯಾಲಿ ನಡೆಸಿ ಮತ್ತೆ ಆತ ಜೈಲು ಪಾಲಾಗಿದ್ದಾನೆ ಎನ್ನಲಾಗಿದೆ.

ಮಹಾರಾಷ್ಟ್ರ ಅಪಾಯಕಾರಿ ಚಟುವಟಿಕೆಗಳ ತಡೆ (ಎಂಪಿಡಿಎ) ಕಾಯ್ದೆಯಡಿ ಶಿಕ್ಷೆ ಅನುಭವಿಸುತ್ತಿದ್ದ ನಾಸಿಕ್‌ನ ಕುಖ್ಯಾತ ರೌಡಿ ಹರ್ಷದ್ ಪಟಾಂಕರ್ ಜುಲೈ 23 ರಂದು ಜೈಲಿನಿಂದ ಬಿಡುಗಡೆಯಾಗಿದ್ದ. ಹಾಗಾಗಿ ಆ ದಿನ ಮಧ್ಯಾಹ್ನ 3:30 ಕ್ಕೆ ಸುಮಾರು 15 ದ್ವಿಚಕ್ರ ವಾಹನಗಳೊಂದಿಗೆ ಬೃಹತ್ ಮೆರವಣಿಗೆ ನಡೆಸಲಾಗಿದೆ. ಈ ಮೆರವಣಿಗೆ ಬೆತೆಲ್ ನಗರದಿಂದ ಪ್ರಾರಂಭವಾಗಿ ಅಂಬೇಡ್ಕರ್ ಚೌಕ್, ಸಾಧು ವಾಸ್ವಾನಿ ರಸ್ತೆ ಮತ್ತು ಶರಣಪುರ ರಸ್ತೆ ಮೂಲಕ ಸಾಗಿದೆ. ಕಾರಿನ ಸನ್ ರೂಫ್‌ನಿಂದ ಕೈ ಬೀಸುತ್ತಿದ್ದ ಪಟಾಂಕರ್ ಅವರೊಂದಿಗೆ ಅವರ ಸ್ನೇಹಿತರು ಮತ್ತು ಕುಟುಂಬ ಸದಸ್ಯರು ಸಂಭ್ರಮಾಚರಣೆಯಲ್ಲಿ ಭಾಗವಹಿಸಿ ಘೋಷಣೆಗಳನ್ನು ಕೂಗುತ್ತಿದ್ದರು.

ವರದಿ ಪ್ರಕಾರ, ಪಟಾಂಕರ್ ಮಾತ್ರವಲ್ಲದೆ ಅವರ ಏಳು ಸಹಚರರ ವಿರುದ್ಧವೂ ಸರ್ಕಾರ್ವಾಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪಟಾಂಕರ್ ಅವರನ್ನು ಈ ಹಿಂದೆ ಕೊಲೆ ಯತ್ನ, ಕಳ್ಳತನ ಮತ್ತು ಹಿಂಸಾಚಾರ ಸೇರಿದಂತೆ ಹಲವಾರು ಅಪರಾಧಗಳಿಗಾಗಿ ಬಂಧಿಸಲಾಗಿತ್ತು ಮತ್ತು ಜೈಲಿಗೆ ಹಾಕಲಾಗಿತ್ತು.

ಇದನ್ನೂ ಓದಿ: 34 ಲಕ್ಷ ರೂ.ಗೆ ಮಾರಾಟವಾಯಿತು ʼರಾಮ ಜನ್ಮಭೂಮಿʼ ಸ್ಪೆಷಲ್‌ ವಾಚ್!

ಒಂದು ವರ್ಷದ ಹಿಂದೆ ಎಂಪಿಡಿಎ ಕಾಯ್ದೆಯಡಿ ಅವರನ್ನು ಬಂಧಿಸಲಾಗಿತ್ತು. ಆದಾಗ್ಯೂ, ಸಂಭ್ರಮಾಚರಣೆಯ ರ‍್ಯಾಲಿಯಿಂದಾಗಿ ಪೊಲೀಸ್ ಕ್ರಮಕೈಗೊಂಡು ಈಗ ಅವರನ್ನು ಮತ್ತೆ ಜೈಲಿಗೆ ತಳ್ಳಿದೆ ಎನ್ನಲಾಗಿದೆ. ಅವರ ಆರು ಸಹಚರರನ್ನು ಗೋಪಾಲ್ ನಾಗೋರ್ಕರ್, ವೇದಾಂತ್ ಚಾಲ್ಡೆ, ಶಾನ್ ಮೈಕೆಲ್, ಜಾಯ್ ಮೈಕೆಲ್, ರಾಬಿನ್ಸನ್ ಬ್ಯಾಟಿಸ್, ವೈಭವ್ ಖಂಡ್ರೆ ಮತ್ತು ವಿಕಾಸ್ ನೇಪಾಳಿ ಎಂದು ಗುರುತಿಸಲಾಗಿದೆ.

Continue Reading

Latest

Viral Video: ಕೈದಿಗೆ ಕೈಕೋಳ ಹಾಕಿ ತಾಜ್ ಮಹಲ್‌ ತೋರಿಸಲು ಹೋಗಿದ್ದ ಪೊಲೀಸರು! ವಿಡಿಯೊ ನೋಡಿ

Viral Video: ಇತ್ತೀಚೆಗೆ ಕೈಕೋಳ ಧರಿಸಿದ ಕೈದಿಯೊಬ್ಬನನ್ನು ಪೊಲೀಸ್ ಅಧಿಕಾರಿಯೊಬ್ಬರು ತಾಜ್ ಮಹಲ್‌ಗೆ ಕರೆದೊಯ್ಯುತ್ತಿರುವ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕೈಕೋಳ ತೊಡಿಸಿದ್ದರಿಂದ ಕೈದಿಗೆ ತಾಜ್ ಮಹಲ್ ಒಳಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ಭಾರತೀಯ ಪುರಾತತ್ವ ಸಮೀಕ್ಷೆ (ಎಎಸ್ಐ) ತಿಳಿಸಿದೆ. ಈ ಘಟನೆ ಈಗ ರಾಜಸ್ಥಾನದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

VISTARANEWS.COM


on

Viral Video
Koo


ಆಗ್ರಾ: ಕೈಗೆ ಬೇಡಿ ಹಾಕಿದ ಎಂದ ಮೇಲೆ ಅವರು ಕೈದಿಯಾಗಿರುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುತ್ತದೆ. ಕೈದಿ ಜೈಲಿನಲ್ಲಿರಬೇಕು. ಅವರನ್ನು ಮನಬಂದಂತೆ ಹೊರಗಡೆ ಬಿಡುವ ಹಾಗಿಲ್ಲ. ಅದರಲ್ಲೂ ಸಾರ್ವಜನಿಕ ಸ್ಥಳಗಳಲ್ಲಿ ಕೈದಿಗಳನ್ನು ಕರೆದುಕೊಂಡು ಬರುವಂತಿಲ್ಲ. ಆದರೆ ಇತ್ತೀಚೆಗೆ ಕೈಕೋಳ ಧರಿಸಿದ ಕೈದಿಯೊಬ್ಬನನ್ನು ಪೊಲೀಸ್ ಅಧಿಕಾರಿಯೊಬ್ಬರು ತಾಜ್ ಮಹಲ್‍ಗೆ ಕರೆದೊಯ್ಯುತ್ತಿರುವ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.

ಕೈಕೋಳ ತೊಡಿಸಿದ್ದರಿಂದ ಕೈದಿಗೆ ತಾಜ್ ಮಹಲ್ ಒಳಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ಭಾರತೀಯ ಪುರಾತತ್ವ ಸಮೀಕ್ಷೆ (ಎಎಸ್ಐ) ತಿಳಿಸಿದೆ. ತಾಜ್ ಮಹಲ್‌ ಬಳಿ ರಕ್ಷಣೆಗೆ ನಿಯೋಜಿಸಲಾಗಿರುವ ಸಹಾಯಕ ಪೊಲೀಸ್ ಆಯುಕ್ತ ಸೈಯದ್ ಆರೀಬ್ ಅಹ್ಮದ್ ಅವರು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಈ ವಿಡಿಯೊ ಹಳೆಯದು ಎಂದು ತಿಳಿಸಿದ್ದಾರೆ. ಅಲ್ಲದೇ ಕೈದಿಯ ಜೊತೆಗಿದ್ದ ಪೊಲೀಸ್ ಅಧಿಕಾರಿಯನ್ನು ಹಿಮಾಚಲ ಪ್ರದೇಶದ ಪೊಲೀಸ್ ಇಲಾಖೆಯಲ್ಲಿ ನಿಯೋಜಿಸಲಾಗಿತ್ತು ಎಂದು ಹೇಳಿದ್ದಾರೆ. ಈ ವಿಷಯದ ಬಗ್ಗೆ ಹಿಮಾಚಲ ಪ್ರದೇಶ ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಮತ್ತು ಈ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ತಾಜ್ ಮಹಲ್‍ನಿಂದ 500 ಮೀಟರ್ ದೂರದಲ್ಲಿ ಬಿಳಿ ಪೊಲೀಸ್ ಜೀಪ್ ನಿಲ್ಲಿಸಲಾಗಿತ್ತು ಮತ್ತು ಅಲ್ಲಿ ರಕ್ಷಣೆಗೆ ನಿಯೋಜಿಸಲಾದ ಸ್ಥಳೀಯ ಪೊಲೀಸರು ಹಿಮಾಚಲ ಪ್ರದೇಶದ ಅಧಿಕಾರಿಗಳಿಗೆ ತಮ್ಮ ಶಸ್ತ್ರಾಸ್ತ್ರಗಳನ್ನು ಅಲ್ಲಿಯೇ ಬಿಡುವಂತೆ ಕೇಳಿಕೊಂಡರು. ಇದರ ನಂತರ, ಒಬ್ಬ ಅಧಿಕಾರಿ ಕೈದಿಯೊಂದಿಗೆ ಪ್ರವೇಶಿಸಲು ಪ್ರಯತ್ನಿಸಿದರು. ಆದರೆ ಎಎಸ್ಐ ಸಿಬ್ಬಂದಿ ಅವರನ್ನು ತಡೆದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: 34 ಲಕ್ಷ ರೂ.ಗೆ ಮಾರಾಟವಾಯಿತು ʼರಾಮ ಜನ್ಮಭೂಮಿʼ ಸ್ಪೆಷಲ್‌ ವಾಚ್!

ಸ್ಥಳೀಯರು ಈ ಘಟನೆಯನ್ನು ವಿಡಿಯೊದಲ್ಲಿ ಸೆರೆಹಿಡಿದಿದ್ದು, ಇದರಲ್ಲಿ ಕೈಕೋಳ ಧರಿಸಿದ ಕೈದಿ ಮತ್ತು ಅವರ ಬೆಂಗಾವಲಿಗೆ ಇದ್ದ ಅಧಿಕಾರಿಯನ್ನು ತೋರಿಸಿದ್ದಾರೆ. ಅಲ್ಲದೇ ವಿಡಿಯೊ ತೆಗೆಯದಂತೆ ಅಧಿಕಾರಿಗಳು ಆಕ್ಷೇಪ ಮಾಡುತ್ತಿರುವುದನ್ನು ವಿಡಿಯೊದಲ್ಲಿ ತೋರಿಸಲಾಗಿದೆ.

Continue Reading

ದೇಶ

Rahul Gandhi: ಚಮ್ಮಾರನ ಅಂಗಡಿಗೆ ದಿಢೀರ್‌ ಭೇಟಿ ನೀಡಿ, ಚಪ್ಪಲಿ ಹೊಲಿದ ರಾಹುಲ್‌ ಗಾಂಧಿ; Video ಇಲ್ಲಿದೆ

Rahul Gandhi: ಉತ್ತರ ಪ್ರದೇಶದ ವಿಧಾಯಕ ನಗರದಲ್ಲಿರುವ ಚಮ್ಮಾರನ ಅಂಗಡಿಯೊಂದಕ್ಕೆ ರಾಹುಲ್‌ ಗಾಂಧಿ ಅವರು ಭೇಟಿ ನೀಡಿದರು. ಇದೇ ವೇಳೆ, ಚಮ್ಮಾರರ ಸಮಸ್ಯೆಗಳನ್ನು ಆಲಿಸಿದ ಅವರು, ಚಪ್ಪಲಿಯನ್ನೂ ಹೊಲಿದರು. ಚಪ್ಪಲಿ ಹೊಲಿಯುವುದು ಹೇಗೆ ಎಂಬುದನ್ನು ಅಂಗಡಿ ಮಾಲೀಕ ಹೇಳಿಕೊಟ್ಟರು.

VISTARANEWS.COM


on

Rahul Gandhi
Koo

ಲಖನೌ: ದೇಶಾದ್ಯಂತ ಸಂಚರಿಸುವ ಭಾರತ್‌ ಜೋಡೋ ಯಾತ್ರೆಯ (Bharat Jodo Yatra) ಹೊರತಾಗಿಯೂ ಕಾಂಗ್ರೆಸ್‌ ನಾಯಕರೂ ಆಗಿರುವ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಸಾಮಾನ್ಯ ಜನರೊಂದಿಗೆ ಬೆರೆಯುತ್ತಿದ್ದಾರೆ. ರೈತರು, ಕುಶಲಕರ್ಮಿಗಳು, ಯುವಕರೊಂದಿಗೆ ಬೆರೆಯುವ ಮೂಲಕ ಅವರ ಸಮಸ್ಯೆಗಳಿಗೆ ಕಿವಿಯಾಗುತ್ತಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ರಾಹುಲ್‌ ಗಾಂಧಿ ಅವರು ಶುಕ್ರವಾರ (ಜುಲೈ 26) ಉತ್ತರ ಪ್ರದೇಶದಲ್ಲಿ ಚಪ್ಪಲಿ ಅಂಗಡಿಯೊಂದಕ್ಕೆ (Cobbler Shop) ದಿಢೀರನೆ ಭೇಟಿ ನೀಡಿ, ಅಲ್ಲಿ ಚಪ್ಪಲಿ ಹೊಲಿಯುವ ಮೂಲಗ ಗಮನ ಸೆಳೆದಿದ್ದಾರೆ.

ರಾಹುಲ್‌ ಗಾಂಧಿ ಅವರು ತಮ್ಮ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಸುಲ್ತಾನ್‌ಪುರದಲ್ಲಿರುವ ಸಂಸದರು ಮತ್ತು ಶಾಸಕರ ನ್ಯಾಯಾಲಯಕ್ಕೆ ಹಾಜರಾದರು. ಕೋರ್ಟ್‌ಗೆ ಹಾಜರಾದ ಬಳಿಕ ಲಖನೌಗೆ ವಾಪಸಾಗುವ ವೇಳೆ ವಿಧಾಯಕ ನಗರದಲ್ಲಿರುವ ಚಮ್ಮಾರನ ಅಂಗಡಿಗೆ ತೆರಳಿದ ಅವರು, ಮಾತುಕತೆ ನಡೆಸುವ ಜತೆಗೆ ಚಪ್ಪಲಿ ಹೊಲಿದರು. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್‌ ಆಗಿದೆ.

2023ರ ಸೆಪ್ಟೆಂಬರ್‌ನಲ್ಲಿ ರಾಹುಲ್‌ ಗಾಂಧಿ ಅವರು ದೆಹಲಿಯ ಕೀರ್ತಿ ನಗರ ಫರ್ನಿಚರ್‌ ಮಾರುಕಟ್ಟೆಗೆ ತೆರಳಿದ್ದರು. ಆಗ ಅವರು ಹಲವು ಮೇಜುಗಳನ್ನು ತಯಾರಿಸಿದ್ದರು. ಕಾರ್ಪೆಂಟರ್‌ಗಳ ಜತೆಗೂಡಿ ರಾಹುಲ್‌ ಗಾಂಧಿ ಅವರು ಮೇಜುಗಳನ್ನು ತಯಾರಿಸಿದ್ದರು. ಈ ಮೇಜುಗಳನ್ನು ದೆಹಲಿ ಕಾಂಗ್ರೆಸ್‌ ಅಧ್ಯಕ್ಷ ಅರವಿಂದರ್‌ ಸಿಂಗ್‌ ಲವ್ಲಿ ಹಾಗೂ ಕಾರ್ಪೆಂಟರ್‌ಗಳು ಜತೆಗೂಡಿ ಪ್ರಮೀಳಾ ಬಾಯಿ ಚವ್ಹಾಣ್ ಶಾಲೆಗೆ ದೇಣಿಗೆಯಾಗಿ ನೀಡಿದ್ದರು. ಕಾರ್ಕರ್‌ಡೂಮಾದಲ್ಲಿರುವ ಶಾಲೆಗೆ ಮೇಜುಗಳನ್ನು ದೇಣಿಗೆ ನೀಡಲಾಗಿದೆ ಎಂದು ಕಾಂಗ್ರೆಸ್‌ ಮಾಹಿತಿ ನೀಡಿತ್ತು.

ಬೈಕ್‌ ರಿಪೇರಿ ಮಾಡಿದ್ದ ರಾಹುಲ್‌ ಗಾಂಧಿ

2023ರ ಜೂನ್‌ನಲ್ಲಿ ರಾಹುಲ್‌ ಗಾಂಧಿ ಅವರು ದೆಹಲಿಯ ಕಾಜೋಲ್‌ಬಾಗ್‌ನಲ್ಲಿರುವ ಬೈಕ್‌ ರಿಪೇರಿ ಅಂಗಡಿಗಳಿಗೆ ತೆರಳಿ ಬೈಕ್‌ ರಿಪೇರಿ ಮಾಡಿದ್ದರು. “ಬೈಕ್‌ ರಿಪೇರಿ ಅಂಗಡಿಗಳಿಗೆ ತೆರಳಿ, ನಾನೂ ವ್ರೆಂಚ್‌ಗಳನ್ನು ತಿರುಗಿಸಿದೆ. ಅವರಿಂದ ಬೈಕ್‌ ರಿಪೇರಿ ಮಾಡುವುದನ್ನು ಕಲಿತೆ. ಬೈಕ್‌ ರಿಪೇರಿ ಮಾಡುವ ಇಂತಹ ಕೈಗಳೇ ಭಾರತವನ್ನು ನಿರ್ಮಿಸಿವೆ. ಇಲ್ಲಿಗೆ ಭೇಟಿ ನೀಡುವ ಮೂಲಕ ನಾನು ಮತ್ತೆ ಭಾರತ್‌ ಜೋಡೋ ಯಾತ್ರೆಯನ್ನು ಮುಂದುವರಿಸಿದ್ದೇನೆ” ಎಂದು ರಾಹುಲ್‌ ಗಾಂಧಿ ಪೋಸ್ಟ್‌ ಮಾಡಿದ್ದರು.

ಇದನ್ನೂ ಓದಿ: Acharya Pramod Krishnam: ರಾಹುಲ್‌ ಗಾಂಧಿಯನ್ನು ‘ರಾಷ್ಟ್ರೀಯ ಸಮಸ್ಯೆ’ ಎಂದ ಆಚಾರ್ಯ ಪ್ರಮೋದ್‌ ಕೃಷ್ಣಂ!

Continue Reading

ದೇಶ

Acharya Pramod Krishnam: ರಾಹುಲ್‌ ಗಾಂಧಿಯನ್ನು ‘ರಾಷ್ಟ್ರೀಯ ಸಮಸ್ಯೆ’ ಎಂದ ಆಚಾರ್ಯ ಪ್ರಮೋದ್‌ ಕೃಷ್ಣಂ!

Acharya Pramod Krishnam: ಪಂಜಾಬ್‌ ಮಾಜಿ ಸಿಎಂ ಚರಣ್‌ಜಿತ್‌ ಸಿಂಗ್‌ ಚನ್ನಿ ಅವರು ಖಲಿಸ್ತಾನಿ ಪ್ರತ್ಯೇಕವಾದಿ ಅಮೃತ್‌ಪಾಲ್ ಸಿಂಗ್‌ ಪರವಾಗಿ ಮಾತನಾಡಿದ್ದನ್ನು ಕೂಡ ಆಚಾರ್ಯ ಪ್ರಮೋದ್‌ ಕೃಷ್ಣಂ ಅವರು ಟೀಕಿಸಿದರು. ಇನ್ನು, ದೇಶದಲ್ಲಿ ರಾಜಕೀಯ ಇರಬೇಕು, ಆದರೆ, ರಾಜಕೀಯಕ್ಕಾಗಿ ದೇಶವನ್ನು ಬಿಟ್ಟುಕೊಡಬಾರದು ಎಂದು ಕೂಡ ಹೇಳಿದರು.

VISTARANEWS.COM


on

Acharya Pramod Krishnam
Koo

ನವದೆಹಲಿ: ಕಾಂಗ್ರೆಸ್‌ ಮಾಜಿ ನಾಯಕ ಆಚಾರ್ಯ ಪ್ರಮೋದ್‌ ಕೃಷ್ಣಂ (Acharya Pramod Krishnam) ಅವರು ರಾಹುಲ್‌ ಗಾಂಧಿ ಅವರ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ. ಕೆಲ ತಿಂಗಳ ಹಿಂದಷ್ಟೇ ಕಾಂಗ್ರೆಸ್‌ನಿಂದ (Congress) ಉಚ್ಚಾಟನೆಗೊಂಡಿರುವ, ಕಲ್ಕಿ ಧಾಮದ ಪೀಠಾಧೀಶರೂ ಆಗಿರುವ ಅವರು, ಇಂಡಿಯಾ ಡೈಲಿ ಲೈವ್‌ ಸುದ್ದಿವಾಹಿನಿಯ ಕಾರ್ಯಕ್ರಮದಲ್ಲಿ ಮಾತನಾಡುತ್ತ, “ರಾಹುಲ್‌ ಗಾಂಧಿ (Rahul Gandhi) ಅವರು ಈಗ ರಾಷ್ಟ್ರೀಯ ಸಮಸ್ಯೆ” ಎಂಬುದಾಗಿ ಹೇಳಿದ್ದಾರೆ.

“ರಾಹುಲ್‌ ಗಾಂಧಿ ಅವರು ಇದುವರೆಗೆ ಕಾಂಗ್ರೆಸ್‌ನ ಸಮಸ್ಯೆಯಾಗಿದ್ದರು. ಈಗ ಅವರು ರಾಷ್ಟ್ರೀಯ ಸಮಸ್ಯೆಯಾಗಿ ಬದಲಾಗಿದ್ದಾರೆ” ಎಂದು ಟೀಕಿಸಿದರು. ಇನ್ನು, ಪಂಜಾಬ್‌ ಮಾಜಿ ಸಿಎಂ ಚರಣ್‌ಜಿತ್‌ ಸಿಂಗ್‌ ಚನ್ನಿ ಅವರು ಖಲಿಸ್ತಾನಿ ಪ್ರತ್ಯೇಕವಾದಿ ಅಮೃತ್‌ಪಾಲ್ ಸಿಂಗ್‌ ಪರವಾಗಿ ಮಾತನಾಡಿದ್ದನ್ನು ಕೂಡ ಆಚಾರ್ಯ ಪ್ರಮೋದ್‌ ಕೃಷ್ಣಂ ಅವರು ಟೀಕಿಸಿದರು. ಇನ್ನು, ದೇಶದಲ್ಲಿ ರಾಜಕೀಯ ಇರಬೇಕು, ಆದರೆ, ರಾಜಕೀಯಕ್ಕಾಗಿ ದೇಶವನ್ನು ಬಿಟ್ಟುಕೊಡಬಾರದು ಎಂದು ಕೂಡ ಹೇಳಿದರು.

ಆಚಾರ್ಯ ಪ್ರಮೋದ್‌ ಕೃಷ್ಣಂ ಅವರು ಕೆಲ ದಿನಗಳ ಹಿಂದಷ್ಟೇ ರಾಹುಲ್‌ ಗಾಂಧಿ ಕುರಿತು ಮಾತನಾಡಿದ್ದರು. “ರಾಹುಲ್‌ ಗಾಂಧಿ ಅವರು ಕಾಂಗ್ರೆಸ್‌ಅನ್ನು ಮುಗಿಸಲು 15 ವರ್ಷ ತೆಗೆದುಕೊಂಡರು. ಇನ್ನು, ರಾಹುಲ್‌ ಗಾಂಧಿ ಅವರು ಪ್ರತಿಪಕ್ಷಗಳನ್ನು 15 ತಿಂಗಳೊಳಗೇ ಮುಗಿಸಲಿದ್ದಾರೆ” ಎಂದು ಹೇಳಿದ್ದರು. ಸಂಸತ್‌ನಲ್ಲಿ ಪ್ರಮಾಣವಚನ ಸ್ವೀಕರಿಸುವ ವೇಳೆ ಜೈ ಪ್ಯಾಲೆಸ್ತೀನ್‌ ಎಂದು ಅಸಾದುದ್ದೀನ್‌ ಓವೈಸಿ ಘೋಷಣೆ ಕೂಗಿದ ಕುರಿತು ಪ್ರತಿಕ್ರಿಯಿಸಿದ್ದ ಅವರು, “ಇದು ಭಾರತ ಸಂಸತ್ತು. ಭಾರತದ ಸಂಸತ್‌ನಲ್ಲಿ ಹಾಗೆ ಘೋಷಣೆ ಕೂಗುವುದು ಸರಿಯಲ್ಲ. ಅವರು ಕೂಡಲೇ ಕ್ಷಮೆಯಾಚಿಸಬೇಕು” ಎಂದು ಒತ್ತಾಯಿಸಿದ್ದರು.

ಆಚಾರ್ಯ ಪ್ರಮೋದ್‌ ಕೃಷ್ಣಂ ಅವರು ಕಾಂಗ್ರೆಸ್‌ ನಾಯಕರೂ ಆಗಿದ್ದರು. ಕಲ್ಕಿ ಧಾಮದ ಪೀಠಾಧೀಶರೂ ಆಗಿರುವ ಇವರನ್ನು ಕೆಲವು ತಿಂಗಳ ಹಿಂದಷ್ಟೇ ಕಾಂಗ್ರೆಸ್‌ ಉಚ್ಚಾಟನೆ ಮಾಡಿದೆ. ಕಲ್ಕಿ ದೇವಾಲಯಕ್ಕೆ ನರೇಂದ್ರ ಮೋದಿ ಅವರನ್ನು ಆಹ್ವಾನಿಸಿದ ಬಳಿಕ ಪಕ್ಷ ವಿರೋಧಿ ಚಟುವಟಿಕೆ ಆರೋಪದಲ್ಲಿ ಉಚ್ಚಾಟನೆ ಮಾಡಿತ್ತು. ಇದಾದ ಬಳಿಕ ನರೇಂದ್ರ ಮೋದಿ ಅವರು ಕಲ್ಕಿ ದೇವಾಲಯಕ್ಕೆ ಭೇಟಿ ನೀಡಿ, ಆಚಾರ್ಯ ಪ್ರಮೋದ್‌ ಕೃಷ್ಣಂ ಅವರನ್ನು ಹೊಗಳಿದ್ದರು.

ಇದನ್ನೂ ಓದಿ: Rahul Gandhi: ರಾಹುಲ್‌ ಗಾಂಧಿಯನ್ನು ಭೇಟಿಯಾದ ರೈತರು; ಆ.15ರಂದು ದೇಶಾದ್ಯಂತ ರ‍್ಯಾಲಿಗೆ ನಿರ್ಧಾರ!

Continue Reading
Advertisement
Michel Phelps ರಾಜಮಾರ್ಗ ಅಂಕಣ
ಅಂಕಣ9 mins ago

ರಾಜಮಾರ್ಗ ಅಂಕಣ: 28 ಒಲಿಂಪಿಕ್ ಪದಕಗಳ ವಿಶ್ವದಾಖಲೆ- ಮೈಕೆಲ್ ಫೆಲ್ಪ್ಸ್

Aadhaar Update
ವಾಣಿಜ್ಯ22 mins ago

Aadhaar Update: ಹೊಸ ನಿಯಮ ಪ್ರಕಾರ ಆಧಾರ್ ವಿಳಾಸ ನವೀಕರಣಕ್ಕೆ ಯಾವ ದಾಖಲೆ ಬಳಸಬಹುದು?

Health Tips Kannada
ಆರೋಗ್ಯ37 mins ago

Health Tips Kannada: ಚಹಾ, ಕಾಫಿಯನ್ನು ಯಾವ ಸಮಯದಲ್ಲಿ ಕುಡಿಯಬಾರದು ಗೊತ್ತೇ?

Vastu Tips
ಧಾರ್ಮಿಕ1 hour ago

Vastu Tips: ಮನೆಯಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಬೇಕೆಂದರೆ ಅಡುಗೆ ಮನೆ ಹೀಗಿರಬೇಕು!

Remedies For Fatty Liver
ಆರೋಗ್ಯ2 hours ago

Remedies For Fatty Liver: ಲಿವರ್‌ನ ಕೊಬ್ಬನ್ನು ನೈಸರ್ಗಿಕವಾಗಿ ಹೀಗೆ ಕರಗಿಸಲು ಸಾಧ್ಯ!

Shravan Month 2024
ಧಾರ್ಮಿಕ2 hours ago

Shravan 2024: ಶ್ರಾವಣ ಮಾಸದಲ್ಲಿ ಯಾವ ಆಹಾರ ತಿನ್ನಬೇಕು, ಯಾವುದನ್ನು ತಿನ್ನಬಾರದು?

karnataka Weather Forecast
ಮಳೆ2 hours ago

Karnataka Weather : ಕರಾವಳಿ-ಮಲೆನಾಡಿನಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ- ಇರಲಿ ಎಚ್ಚರ

dina bhavishya
ಭವಿಷ್ಯ2 hours ago

Dina Bhavishya : ಈ ರಾಶಿಯವರಿಗೆ ಮಾತೇ ಮೃತ್ಯು, ಮೌನಕ್ಕೆ ಶರಣಾಗಿ

Paris Olympics 2024
ಪ್ರಮುಖ ಸುದ್ದಿ7 hours ago

Paris Olympics 2024 : ಪ್ರಣಯ ನಗರಿ ಪ್ಯಾರಿಸ್​ನಲ್ಲಿ ಒಲಿಂಪಿಕ್ಸ್​ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ

Mumbai Spa
ಪ್ರಮುಖ ಸುದ್ದಿ7 hours ago

ಕೊಲೆಯಾದ ರೌಡಿಯ ಮೈಮೇಲಿದ್ದ ಟ್ಯಾಟೂ ನೆರವಿನಿಂದ ಆರೋಪಿಗಳ ಬಂಧನ; ಹೇಗಂತೀರಾ? ಇಲ್ಲಿದೆ ರೋಚಕ ಕತೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ12 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ14 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ14 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ16 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ4 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌