ಸಲಿಂಗಿ ಪುರುಷರ ಅದ್ಧೂರಿ ಮದುವೆ; ಸಂಭ್ರಮದ ಕ್ಷಣದ ಫೋಟೊ, ವಿಡಿಯೊ ವೈರಲ್‌ - Vistara News

ವೈರಲ್ ನ್ಯೂಸ್

ಸಲಿಂಗಿ ಪುರುಷರ ಅದ್ಧೂರಿ ಮದುವೆ; ಸಂಭ್ರಮದ ಕ್ಷಣದ ಫೋಟೊ, ವಿಡಿಯೊ ವೈರಲ್‌

ಕಳೆದ ವರ್ಷ ಹೈದರಾಬಾದ್‌ನಲ್ಲಿ ಸಲಿಂಗಿಗಳು ವಿವಾಹವಾಗಿದ್ದರು. ಈಗ ಕೋಲ್ಕತ್ತದಲ್ಲಿ ಮದುವೆ ನಡೆದಿದೆ. ಭಾರತದಲ್ಲಿ ಸಲಿಂಗಿಗಳ ವಿವಾಹಕ್ಕೆ ಕಾನೂನು ಮಾನ್ಯತೆ ಇಲ್ಲದಿದ್ದರೂ ಆಗಾಗ ನಡೆಯುತ್ತಲೇ ಇರುತ್ತವೆ!

VISTARANEWS.COM


on

Kolkata gay couple ties
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲ್ಕೊತಾ: ಭಾರತದಲ್ಲಿ ಸಲಿಂಗಿಗಳ ಪ್ರೀತಿ ಒಪ್ಪಿತವಿದ್ದರೂ, ಅವರ ಮದುವೆಗೆ ಕಾನೂನು ಮಾನ್ಯತೆ ಇಲ್ಲ. ಹಾಗಿದ್ದಾಗ್ಯೂ ಅಲ್ಲೊಂದು-ಇಲ್ಲೊಂದು ಸಲಿಂಗಿ ಜೋಡಿ ಅದ್ಧೂರಿಯಾಗಿಯೇ ಮದುವೆಯಾಗುತ್ತಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಹೈದರಾಬಾದ್‌ನಲ್ಲಿ ಇಬ್ಬರು ಯುವಕರು ದಾಂಪತ್ಯ ಜೀವನಕ್ಕೆ ಕಾಲಿಟ್ಟದ್ದರು. ಹಾಗೇ ಈಗ ಕೋಲ್ಕತ್ತದಲ್ಲಿ ಕೂಡ ಪುರುಷರಿಬ್ಬರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ಹಲವು ವರ್ಷಗಳ ಸಂಬಂಧಕ್ಕೆ ಮದುವೆಯೆಂಬ ಮುದ್ರೆ ಒತ್ತಿದ್ದಾರೆ. ಜುಲೈ 3ರಂದು ನಡೆದ ಮದುವೆಯಲ್ಲಿ ಅವರ ಆಪ್ತ ಸ್ನೇಹಿತರು, ಕುಟುಂಬದ ಸದಸ್ಯರು ಪಾಲ್ಗೊಂಡಿದ್ದರು.

ಈ ಯುವಕರಲ್ಲಿ ಒಬ್ಬನ ಹೆಸರು ಅಭಿಷೇಕ್‌ ರಾಯ್‌ ಮತ್ತು ಇನ್ನೊಬ್ಬನ ಹೆಸರು ಚೈತನ್ಯ ಶರ್ಮಾ. ಇವರಿಬ್ಬರ ಮದುವೆ ಕ್ಷಣಗಳ ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿವೆ. ಅರಿಶಿಣ ಶಾಸ್ತ್ರ, ಮಾಲೆ ಹಾಕಿದ ಕ್ಷಣದ ಸಂಭ್ರಮದ ಫೋಟೋ-ವಿಡಿಯೋಗಳನ್ನು ಇವರು ಇನ್‌ಸ್ಟಾಗ್ರಾಂನಲ್ಲಿ ಶೇರ್‌ ಮಾಡಿಕೊಂಡಿದ್ದಾರೆ. ಇದರಲ್ಲಿ ಅಭಿಷೇಕ್‌ ಬೆಂಗಾಳಿ ಸಂಪ್ರದಾಯದಂತೆ ಧೋತಿ-ಕುರ್ತಾ ಧರಿಸಿದ್ದರೆ, ಚೈತನ್ಯ ಶೆರ್ವಾನಿ ತೊಟ್ಟಿದ್ದಾರೆ. ಇಲ್ಲಿದೆ ನೋಡಿ ಸಲಿಂಗಿಗಳ ವಿವಾಹದ ಫೋಟೋಗಳು..

ಇದನ್ನೂ ಓದಿ: ನಂಜನಗೂಡಿನ ಛೋಟಾ ಪಾಕಿಸ್ತಾನ್‌ ಪ್ರಕರಣದಲ್ಲಿ ಇಬ್ಬರು ಆರೋಪಿಗಳ ಗುರುತು ಪತ್ತೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Viral Video: ಐಷಾರಾಮಿ ಹಾರ್ಲೆ –ಡೇವಿಡ್ಸನ್​ ಬೈಕ್​ನಲ್ಲಿ ಫುಡ್​ ಡೆಲಿವರಿ ಕೊಟ್ಟ ಯುವಕ; ವಿಡಿಯೊ ವೈರಲ್

Viral Video ಜೊಮ್ಯಾಟೋ ಡೆಲಿವರಿ ಬಾಯ್ ಒಬ್ಬ ಹಾರ್ಲೆ –ಡೇವಿಡ್ಸ್ ನ ಬೈಕ್ ನಲ್ಲಿ ಪಾರ್ಸೆಲ್ ಅನ್ನು ಸಾಗಿಸುತ್ತಿದ್ದಾನೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ತುಣುಕೊಂದು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

VISTARANEWS.COM


on

Video Viral
Koo

ಬೆಂಗಳೂರು: ನಮ್ಮಲ್ಲಿ ಹಲವಾರು ಫುಡ್ ಡೆಲಿವರಿ ಕಂಪೆನಿಗಳಿವೆ. ಅವುಗಳಲ್ಲಿ ಹಲವಾರು ಯುವಕರು ಕೆಲಸ ಮಾಡುತ್ತಿದ್ದಾರೆ. ಸಾಮಾನ್ಯವಾಗಿ ಈ ಡೆಲಿವರಿ ಬಾಯ್​ ಕೆಲಸವನ್ನು (Viral Video) ತುಂಬಾ ಬಡತನದಲ್ಲಿರುವವರೇ ಆಯ್ಕೆ ಮಾಡಿಕೊಳ್ಳುತ್ತಾರೆ. ತಮ್ಮ ಮನೆಯ ದಿನನಿತ್ಯದ ಖರ್ಚುಗಳನ್ನು ತೂಗಿಸಲು, ಓದಿನ ಫೀಸ್ ಗಾಗಿ ಇಲ್ಲಿ ಕೆಲಸಕ್ಕೆ ಸೇರುತ್ತಾರೆ. ಬಿಸಿಲು, ಮಳೆ, ಚಳಿ ಎನ್ನದೇ ಸಮಯಕ್ಕೆ ಸರಿಯಾಗಿ ಗ್ರಾಹಕರ ಮನೆಗೆ ಫುಡ್ ಅನ್ನು ತಂದು ಕೊಡುತ್ತಾರೆ.

ಫುಡ್ ಡೆಲಿವರಿ ಕಂಪೆನಿಗಳಲ್ಲಿ ಕೆಲಸ ಮಾಡುವ ಹುಡುಗರು ಬೈಕ್ ಅನ್ನು ಹೊಂದಿರಲೇಬೇಕು. ಯಾಕೆಂದರೆ ಫುಡ್ ಗಳನ್ನು ಡೆಲಿವರಿ ಮಾಡಲು ಬೈಕ್ ಮೂಲಕವೇ ಹೋಗಬೇಕಾಗುತ್ತದೆ ಹಾಗಾಗಿ ಇಲ್ಲಿ ಕೆಲಸ ಮಾಡುವಂತಹ ಹೆಚ್ಚಿನ ಯುವಕರು ಬೈಕ್ ಅನ್ನು ಸಾಲ ಮಾಡಿ ಖರೀದಿಸಿರುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುತ್ತದೆ. ಆದರೆ ಇಲ್ಲೊಬ್ಬ ಡೆಲಿವರಿ ಬಾಯ್ ಸೂಪರ್ ಬೈಕ್​ನಲ್ಲಿ ಹೋಗಿ ಡೆಲಿವರಿ ಮಾಡುತ್ತಿದ್ದಾನೆ. ಆತನ ವೈಖರಿ ನೋಡಿ ಎಲ್ಲರೂ ಚಕಿತರಾಗಿದ್ದಾರೆ.

ಜೊಮ್ಯಾಟೋ ಡೆಲಿವರಿ ಬಾಯ್ ಒಬ್ಬ ಹಾರ್ಲೆ –ಡೇವಿಡ್ಸನ್​ ಬೈಕ್ ನಲ್ಲಿ ಪಾರ್ಸೆಲ್ ಅನ್ನು ಸಾಗಿಸುವುದು ಕಂಡು ಬಂದಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ತುಣುಕೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಈ ವಿಡಿಯೊದಲ್ಲಿರುವ ಸಿಟಿ ಪೊಲೀಸ್ ಬ್ಯಾರಿಕೆಡ್ ಮತ್ತು ಪೊಲೀಸರ ಸಮವಸ್ತ್ರ ನೋಡಿ ಇದು ಬೆಂಗಳೂರಿನಲ್ಲಿ ಶೂಟ್ ಮಾಡಿದ ವಿಡಿಯೊ ಎನ್ನಲಾಗಿದೆ.

ಈ ವಿಡಿಯೊ ಡೆಲಿವರಿ ಬಾಯ್ ಕೆಲಸವನ್ನು ಕೀಳುಮಟ್ಟದಲ್ಲಿ ನೋಡತ್ತಿಲ್ಲ. ಆದರೆ ಹಾರ್ಲೆ ಡೇವಿಡ್ಸ್ ಕಂಪೆನಿ ಅಮೇರಿಕಾ ಪ್ರಸಿದ್ಧ ಬೈಕ್ ಉತ್ಪಾದನಾ ಕಂಪೆನಿಯಾಗಿದೆ. ಕೆಲ ದಿನಗಳ ಹಿಂದೆ ಈ ಕಂಪೆನಿ ಎಕ್ಸ್ 440 ಬೈಕ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿತ್ತು. ಈ ಬೈಕ್ ನ ಬೆಲೆ 2.4 ಲಕ್ಷ ರೂಪಾಯಿಯಾಗಿದೆ. ಇಂತಹ ಐಷರಾಮಿ ಬೈಕ್ ಅನ್ನು ಹೆಚ್ಚಾಗಿ ಶ್ರೀಮಂತರು ಬಳಸುತ್ತಾರೆ. ಆದರೆ ಇದನ್ನು ಜೊಮೆಟೊ ಡೆಲಿವರಿ ಬಾಯ್ ಬಳಿ ನೋಡಿ ಜನರು ಆಶ್ಚರ್ಯಚಕಿತರಾಗಿದ್ದಾರೆ.

ಇದನ್ನೂ ಓದಿ: Raj Kundra: ಬಿಟ್‌ಕಾಯಿನ್‌ ಪೋಂಜಿ ಸ್ಕೀಮ್‌; ಇಡಿಯಿಂದ ರಾಜ್‌ ಕುಂದ್ರಾ ₹97 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

ಫುಡ್ ಕಂಪೆನಿಯ ಗಿಮಿಕ್!

ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇದುವರೆಗೂ 2 ಮಿಲಿಯನ್ ಕ್ಕಿಂತ ಹೆಚ್ಚು ವೀವ್ಸ್​ ಅನ್ನು ಪಡೆದಿದೆ ಎನ್ನಲಾಗಿದೆ. ಅಲ್ಲದೇ ಈ ವಿಡಿಯೊಗೆ ಹೆಚ್ಚು ಕಾಮೆಂಟ್ ಬಂದಿದ್ದು, ಕೆಲವರು ವ್ಯಕ್ತಿಯನ್ನು ಹೊಗಳಿದರೆ ಇನ್ನು ಕೆಲವರು ತಮಾಷೆ ಮಾಡಿದ್ದಾರೆ. ಇದು ಫುಡ್ ಕಂಪೆನಿಯ ಪ್ರಚಾರಕ್ಕಾಗಿ ಮಾಡಿರಬಹುದು ಎಂದರೆ ಕೆಲವರು ಜೊಮ್ಯಾಟೋ ಫುಡ್ ಕಂಪೆನಿ ಮಾಲೀಕರು ಈ ಫುಡ್ ಅನ್ನು ಡೆಲಿವರಿ ಮಾಡುತ್ತಿರಬಹುದು ಎಂದಿದ್ದಾರೆ. ಇನ್ನೂಬ್ಬರು ಮನೆಯಲ್ಲಿ ಖರ್ಚಿಗೆ ಹಣ ನೀಡದ ಕಾರಣ ಈ ಕೆಲಸ ಮಾಡುತ್ತಿದ್ದಾನೆ ಎಂದಿದ್ದಾರೆ. ಒಟ್ಟಾರೆ ಡೆಲಿವರಿ ಬಾಯ್ ಬಳಿ ಈ ಬೈಕ್ ನೋಡಿ ಜನರು ಅಚ್ಚರಿಗೊಂಡಿದ್ದಲ್ಲದೇ ಡೆಲಿವರಿ ಬಾಯ್ ಐಷರಾಮಿ ಬೈಕ್ ಅನ್ನು ಹೊಂದಲು ಸಾಧ್ಯವಿಲ್ಲ ಎಂಬ ನಿಲುವನ್ನು ಬದಲಾಯಿಸಿದ್ದಾರೆ.

Continue Reading

ದೇಶ

Mahua Moitra: ‘ಸೆಕ್ಸ್’‌ ನನ್ನ ಸಾಮರ್ಥ್ಯದ ಗುಟ್ಟು ಎಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ!

Mahua Moitra: ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದ ಪಡೆದ ಆರೋಪ ಹೊತ್ತಿರುವ ಟಿಎಂಸಿ ಉಚ್ಚಾಟಿತ ಸಂಸದೆ ಮಹುವಾ ಮೊಯಿತ್ರಾ ಅವರು ಮತ್ತೊಂದು ವಿವಾದಕ್ಕೆ ಸಿಲುಕಿದ್ದಾರೆ. ನನ್ನ ಸಾಮರ್ಥ್ಯದ ಗುಟ್ಟು ಎಂದರೆ ಅದು ಸೆಕ್ಸ್‌ ಎಂಬುದಾಗಿ ಅವರು ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ.

VISTARANEWS.COM


on

Mahua Moitra
Koo

ಕೋಲ್ಕೊತಾ: ಕೇಂದ್ರ ಸರ್ಕಾರದ (Central Government) ವಿರುದ್ಧ ಸಂಸತ್ತಿನಲ್ಲಿ ಟೀಕಾಸ್ತ್ರ ಬಳಸುತ್ತಿದ್ದ, ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದ ಆರೋಪದಲ್ಲಿ ಸಿಲುಕಿರುವ ಟಿಎಂಸಿ ಉಚ್ಚಾಟಿತ ಸಂಸದೆ ಮಹುವಾ ಮೊಯಿತ್ರಾ (Mahua Moitra) ಅವರೀಗ ಮತ್ತೆ ವಿವಾದಕ್ಕೆ ಸಿಲುಕಿದ್ದಾರೆ. ಟಿಎಂಸಿಯಿಂದ ಕೃಷ್ಣನಗರ ಲೋಕಸಭೆ ಕ್ಷೇತ್ರದಲ್ಲಿ ಕಣಕ್ಕಿಳಿದಿರುವ ಮಹುವಾ ಮೊಯಿತ್ರಾ ಅವರು ಪತ್ರಕರ್ತರೊಬ್ಬರ ಪ್ರಶ್ನೆಗೆ, “ನನ್ನ ಸಾಮರ್ಥ್ಯದ ಗುಟ್ಟು ಎಂದರೆ ಸೆಕ್ಸ್”‌ ಎಂಬುದಾಗಿ ಹೇಳಿದ್ದಾರೆ ಎನ್ನಲಾದ ವಿಡಿಯೊ ಈಗ ಭಾರಿ ವೈರಲ್‌ (Viral Video) ಆಗಿದೆ. ಇದು ವಿವಾದಕ್ಕೂ ಕಾರಣವಾಗಿದೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೃಷ್ಣನಗರ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಪ್ರತಿ ಮನೆಗೆ, ಪ್ರತಿ ಗ್ರಾಮಕ್ಕೆ ತೆರಳಿ ಪ್ರಚಾರ ಮಾಡುತ್ತಿದ್ದಾರೆ. ಹೀಗೆ, ಬಿಡುವಿಲ್ಲದ ಪ್ರಚಾರದಲ್ಲಿ ತೊಡಗಿರುವ ಮಹುವಾ ಮೊಯಿತ್ರಾ ಅವರಿಗೆ ಪತ್ರಕರ್ತರೊಬ್ಬರು “ನಿಮ್ಮ ಸಾಮರ್ಥ್ಯದ ಗಟ್ಟೇನು” ಎಂದು ಪ್ರಶ್ನಿಸಿದ್ದಾರೆ. ಇದೇ ವೇಳೆ ಮಹುವಾ ಮೊಯಿತ್ರಾ ಅವರು, “ಸೆಕ್ಸ್‌ ನನ್ನ ಸಾಮರ್ಥ್ಯದ ಗುಟ್ಟು” ಎಂದಿದ್ದಾರೆ. ವಿಡಿಯೊ ವೈರಲ್‌ ಆಗುತ್ತಲೇ ಜನ ಟೀಕೆ ವ್ಯಕ್ತಪಡಿಸಿದ್ದಾರೆ. ಒಬ್ಬ ಸಂಸದೆಯಾಗಿ ಬಹಿರಂಗವಾಗಿ ಹೀಗೆ ಹೇಳುವುದು ತಪ್ಪು ಎಂದು ಖಂಡಿಸಿದ್ದಾರೆ.

ವರದಿಗಾರನ ಸ್ಪಷ್ಟನೆ ಏನು?

“ಮಹುವಾ ಮೊಯಿತ್ರಾ ಅವರನ್ನು ಸಂದರ್ಶನ ಮಾಡಿದ್ದು ನಾನೇ. ನಿಮ್ಮ ಸಾಮರ್ಥ್ಯದ ಗುಟ್ಟೇನು ಎಂಬುದಾಗಿ ಕೇಳಿದೆ. ಅದಕ್ಕೆ ಅವರು, ಎಗ್ಸ್‌ (ಮೊಟ್ಟೆಗಳು) ಎಂಬುದಾಗಿ ಉತ್ತರಿಸಿದರು. ಆದರೆ, ಭಕ್ತ ಮಂಡಳಿಯು ಎಗ್ಸ್‌ ಎಂಬುದನ್ನು ಸೆಕ್ಸ್‌ ಎಂಬುದಾಗಿ ತಿರುಚಿದೆ” ಎಂಬುದಾಗಿ ನ್ಯೂಸ್‌ ದಿ ಟ್ರುತ್‌ ಎಂಬ ಮಾಧ್ಯಮ ಸಂಸ್ಥೆ ವರದಿಗಾರ ತಮಲ್‌ ಸಾಹ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಆದರೆ, ವರದಿಗಾರ ಸ್ಪಷ್ಟನೆ ನೀಡುವ ಹೊತ್ತಿಗೆ ವಿಡಿಯೊ ಭಾರಿ ವೈರಲ್‌ ಆಗಿದ್ದು, ಟೀಕೆಗಳು ವ್ಯಕ್ತವಾಗಿವೆ.

49 ವರ್ಷದ ಮಹುವಾ ಮೊಯಿತ್ರಾ ಅವರು ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸುವ ಪ್ರಶ್ನೆಗಳನ್ನು ಕೇಳಲು 2 ಕೋಟಿ ರೂ. ನಗದು ಸೇರಿದಂತೆ ಲಂಚ ಪಡೆದ ಆರೋಪ ಹೊತ್ತಿದ್ದಾರೆ. ಮೊಯಿತ್ರಾ ಅವರು ತಮ್ಮ ಸಂಸತ್ತಿನ ಲಾಗ್-ಇನ್ ವಿವರಗಳನ್ನು ಉದ್ಯಮಿ ದರ್ಶನ್ ಹಿರಾನಂದಾನಿಗೆ ಒಪ್ಪಿಸಿದ್ದಾರೆ. ಅವರು ಲಂಚವನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು. ಲಾಗಿನ್‌ ವಿವರ ನೀಡಿದ್ದನ್ನು ಮೋಯಿತ್ರಾ ಒಪ್ಪಿಕೊಂಡಿದ್ದರು. ಅಲ್ಲದೆ ಇದು ಸಂಸದರಲ್ಲಿ ಸಾಮಾನ್ಯ ಅಭ್ಯಾಸ ಎಂದು ವಾದಿಸಿದ್ದರು. ಆರು ಸದಸ್ಯರ ಸಮಿತಿಯಲ್ಲಿ ನಾಲ್ಕು ಮಂದಿ ಮಹುವಾ ಮೊಯಿತ್ರಾ ಅವರನ್ನು ಉಚ್ಚಾಟಿಸಲು ಮತ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಡಿಸೆಂಬರ್ 8, 2023ರಂದು ಲೋಕಸಭೆಯಿಂದ ಉಚ್ಚಾಟಿಸಲಾಗಿತ್ತು. ಈಗಲೂ ಅವರ ವಿರುದ್ಧ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Mahua Moitra: ಹಣ ಅಕ್ರಮ ವರ್ಗಾವಣೆ; ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ವಿರುದ್ಧ ಪ್ರಕರಣ ದಾಖಲಿಸಿದ ಇ.ಡಿ

Continue Reading

ವೈರಲ್ ನ್ಯೂಸ್

Viral News: ಬಿಕಿನಿ ಧರಿಸಿ ಬಸ್‌ ಏರಿದ ಮಹಿಳೆಯಿಂದ ಅಸಭ್ಯ ವರ್ತನೆ: ಬೆಚ್ಚಿಬಿದ್ದ ಪ್ರಯಾಣಿಕರು; ಇಲ್ಲಿದೆ ವಿಡಿಯೊ

Viral News: ಬಸ್‌ ಏರಿದ ಮಹಿಳೆಯೊಬ್ಬಳು ಅಸಭ್ಯವಾಗಿ ವರ್ತಿಸಿರುವ ಘಟನೆ ದಿಲ್ಲಿಯಲ್ಲಿ ನಡೆದಿದೆ. ಸದ್ಯ ಈ ವಿಡಿಯೊ ವೈರಲ್‌ ಆಗಿದೆ. ಬಿಕಿನಿ ಧರಿಸಿದ್ದ ಈ ಮಹಿಳೆ ದೆಹಲಿಯ ಡಿಟಿಸಿ ಬಸ್‌ಗೆ ಏರಿ ಅಶ್ಲೀಲವಾಗಿ ವರ್ತಿಸಿದ್ದಾಳೆ. ಬಳಿಕ ಪುರುಷರತ್ತ ಅಸಭ್ಯವಾಗಿ ಸನ್ನೆ ಮಾಡಿದ್ದಾಳೆ. ಆಕೆಯ ವರ್ತನೆಯಿಂದ ಬೇಸತ್ತ ಪ್ರಯಾಣಿಕನೊಬ್ಬ ಕುಳಿತಿದ್ದ ಸೀಟಿನಿಂದಲೇ ಎದ್ದು ಆಚೆ ಬರುತ್ತಾನೆ. ಅಲ್ಲದೆ ಆಕೆಯ ಮೈ ಪೂರ್ತಿ ಒದ್ದೆಯಾಗಿರುವುದೂ ವಿಡಿಯೊದಲ್ಲಿ ಕಂಡು ಬಂದಿದೆ. ಮಹಿಳೆಯ ಈ ವರ್ತನೆಗೆ ಸಾಕಷ್ಟು ಟೀಕೆ ವ್ಯಕ್ತವಾಗಿದೆ.

VISTARANEWS.COM


on

Viral News
Koo

ನವದೆಹಲಿ: ಸಾರ್ವಜನಿಕ ಸ್ಥಳಗಳಲ್ಲಿ, ಸಾರಿಗೆಗಳಲ್ಲಿ ಮಹಿಳೆಯರ ವಿರುದ್ಧ ಪುರುಷರು ಅಸಭ್ಯವಾಗಿ ವರ್ತಿಸುವುದು, ಕಿರುಕುಳ ನೀಡುವುದನ್ನು ಕೇಳಿದ್ದೇವೆ, ಓದಿದ್ದೇವೆ. ಆದರೆ ಇಲ್ಲೊಂದು ಇದಕ್ಕೆ ತದ್ವಿರುದ್ಧ ಪ್ರಸಂಗ ನಡೆದಿದೆ. ಬಸ್‌ ಏರಿದ ಮಹಿಳೆಯೊಬ್ಬಳು ಅಸಭ್ಯವಾಗಿ ವರ್ತಿಸಿದ್ದಾಳೆ. ದೆಹಲಿಯಲ್ಲಿ ಈ ಘಟನೆ ನಡೆದಿದ್ದು, ಸದ್ಯ ಈ ವಿಡಿಯೊ ವೈರಲ್‌ ಆಗಿದೆ (Viral News).

ಬಿಕಿನಿ ಧರಿಸಿದ್ದ ಈ ಮಹಿಳೆ ದೆಹಲಿಯ ಡಿಟಿಸಿ ಬಸ್‌ಗೆ ಏರಿ ಅಶ್ಲೀಲವಾಗಿ ವರ್ತಿಸಿದ್ದಾಳೆ. ಬಳಿಕ ಪುರುಷರತ್ತ ಅಸಭ್ಯವಾಗಿ ಸನ್ನೆ ಮಾಡಿದ್ದಾಳೆ. ಆಕೆಯ ವರ್ತನೆಯಿಂದ ಬೇಸತ್ತ ಪ್ರಯಾಣಿಕನೊಬ್ಬ ಕುಳಿತಿದ್ದ ಸೀಟಿನಿಂದಲೇ ಎದ್ದು ಆಚೆ ಬರುತ್ತಾನೆ. ಅಲ್ಲದೆ ಆಕೆಯ ಮೈ ಪೂರ್ತಿ ಒದ್ದೆಯಾಗಿರುವುದೂ ವಿಡಿಯೊದಲ್ಲಿ ಕಂಡು ಬಂದಿದೆ.

ಸಾಮಾಜಿಕ ಜಾಲತಾಣ ಎಕ್ಸ್‌ನ ʼದಿಲ್ಲಿ ಬಸ್‌ʼ (Delhi Buses) ಎಂಬ ಖಾತೆಯಲ್ಲಿ ಈ ವಿಡಿಯೊವನ್ನು ಪೋಸ್ಟ್‌ ಮಾಡಲಾಗಿದೆ. ಈಗಾಗಲೇ 5 ಲಕ್ಷಕ್ಕಿಂತ ಅಧಿಕ ಮಂದಿ ಈ ವಿಡಿಯೊವನ್ನು ವೀಕ್ಷಿಸಿ ಮಹಿಳೆಯ ವರ್ತನೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೆಹಲಿ ಸಾರಿಗೆ ಕಾರ್ಪೋರೇಷನ್‌ಗೆ ಸೇರಿದ ಬಸ್‌ನಲ್ಲಿ ಈ ಘಟನೆ ನಡೆದಿದೆ. ʼʼಮಹಿಳೆ ಬಸ್ ಏರುತ್ತಿದ್ದಂತೆ ಅಸಭ್ಯವಾಗಿ ವರ್ತಿಸಲು ಆರಂಭಿಸಿದ್ದಾಳೆ. ಅಲ್ಲದೇ ಇತರ ಪ್ರಯಾಣಿಕರ ಜತೆ ವಾದ ಮಾಡುತ್ತಾಳೆ. ಈಕೆಯ ವರ್ತನೆ ಪ್ರಯಾಣಿಕರನ್ನು ಗೊಂದಲಕ್ಕೀಡು ಮಾಡಿದೆ. ಅನೇಕರು ಈಕೆಯ ವರ್ತನೆಯಿಂದ ಕಿರಿಕಿರಿಗೊಳಗಾಗಿದ್ದರು. ಇಂತಹ ವರ್ತನೆಗೆ ಕಡಿವಾಣ ಹಾಕಲೇ ಬೇಕಿದೆʼʼ ಎಂದು ನೆಟ್ಟಿಗರೊಬ್ಬರು ತಿಳಿಸಿದ್ದಾರೆ.

ಈ ರೀತಿ ಅಸಭ್ಯವಾಗಿ ವರ್ತಿಸಿದ ಮಹಿಳೆ ಯಾರು ಎಂಬುದು ತಿಳಿದು ಬಂದಿಲ್ಲ. ಅಧಿಕಾರಿಗಳು ಈಕೆಯ ಗುರುತನ್ನು ಕೆಲವು ಕಾರಣಗಳಿಗಾಗಿ ಬಹಿರಂಗಪಡಿಸಿಲ್ಲ ಎಂದು ಮೂಲಗಳು ತಿಳಿಸಿವೆ. ಈ ವಿಡಿಯೊ ವೀಕ್ಷಿಸಿದ ಅನೇಕರು ಇಂತಹ ವರ್ತನೆಗಳನ್ನು ತಡೆಯುವ ಯಾವುದೇ ಕಾನೂನುಗಳು ಇಲ್ಲವೇ ಎಂದು ಪ್ರಶ್ನಿಸಿದ್ದಾರೆ. ಇದವರೆಗೆ ಇಂತಹ ಅಸಹ್ಯ ವರ್ತನೆ ದೆಹಲಿ ಮೆಟ್ರೋದಲ್ಲಿ ಕಂಡು ಬರುತ್ತಿತ್ತು. ಇದೀಗ ಈ ಚಾಳಿ ಡಿಟಿಸಿ ಬಸ್‌ಗೂ ವ್ಯಾಪಿಸಿದೆ ಎಂದು ಹಲವರು ಬೇಸರ ವ್ಯಕ್ತಪಡಿಸಿದ್ದಾರೆ. ಮಹಿಳೆಯರು, ಮಕ್ಕಳು ಸೇರಿದಂತೆ ಹಲವರು ಪ್ರಯಾಣಿಸುತ್ತಿರುತ್ತಾರೆ. ಈ ವೇಳೆ ಇಂತಹ ವರ್ತನೆ ತೋರುವುದು ಮುಜುಗರ ಉಂಟು ಮಾಡುತ್ತದೆ ಎಂದು ನೆಟ್ಟಿಗರು ಹೇಳಿದ್ದಾರೆ.

ಇದನ್ನೂ ಓದಿ: Viral video: ಫುಟ್‌ರೆಸ್ಟ್‌ ಮೇಲೆ ಮಗು ನಿಲ್ಲಿಸಿಕೊಂಡು ಬೆಂಗಳೂರು ದಂಪತಿ ಬೈಕ್‌ ರೈಡ್‌! ಬೆಚ್ಚಿಬಿದ್ದ ನೆಟಿಜನ್ಸ್

ಈ ಮಧ್ಯೆ ಕೆಲವರು ಆಕೆಯ ಬೆಂಬಲಕ್ಕೂ ಧಾವಿಸಿದ್ದಾರೆ. “ಇದು ಅವಳ ದೇಹ ಮತ್ತು ಅವಳ ಆಯ್ಕೆ. ಅವಳನ್ನು ಒಂಟಿಯಾಗಿ ಬಿಡಿ” ಎಂದು ಒಬ್ಬರು ಹೇಳಿದ್ದಾರೆ. ಆಕೆ ಧರಿಸುವ ಬಟ್ಟೆಯಲ್ಲಿ ಯಾವುದೇ ಸಮಸ್ಯೆ ಇಲ್ಲ. ಆದರೆ ದೇಹವನ್ನು ಪ್ರದರ್ಶಿಸುವಂತಹ, ಪ್ರಚೋದನಕಾರಿ ಬಟ್ಟೆ ಧರಿಸುವುದು ಎಷ್ಟು ಸರಿ ಎನ್ನುವ ಪ್ರಶ್ನೆಯೂ ಉದ್ಭವಿಸಿದೆ. ಸಾರ್ವಜನಿಕ ಸ್ಥಳದಲ್ಲಿ ಕಾಣಿಸಿಕೊಳ್ಳುವಾಗ ಸಾಕಷ್ಟು ಎಚ್ಚರಿಕೆ ವಹಿಸಬೇಕು. ಅವರದ್ದೆ ಮನೆಯಲ್ಲಿ ಹೇಗೆ ಬೇಕಾದರೂ ಇರಲಿ. ಹೊರಗೆ ಬಂದಾಗ ಇತರರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವುದು ಎಲ್ಲರ ಕರ್ತವ್ಯ ಎಂದು ಅನೇಕರು ಸಲಹೆ ನೀಡಿದ್ದಾರೆ. ಒಟ್ಟಿನಲ್ಲಿ ಆಕೆಯ ವರ್ತನೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

Continue Reading

ಕ್ರೀಡೆ

Shubman Gill: ಗ್ಯಾಲರಿಯಲ್ಲಿ ಕುಳಿತಿದ್ದ ಸುಂದರ ಹುಡುಗಿಯನ್ನು ಕಂಡು ಕ್ಲೀನ್​ ಬೌಲ್ಡ್​ ಆದ ಗಿಲ್​; ವಿಡಿಯೊ ವೈರಲ್​

Shubman Gill: ಡೆಲ್ಲಿ ತಂಡ ಗೆಲುವು ಸಾಧಿಸಿದನ್ನು ಕಂಡು ಗ್ಯಾಲರಿಯಲ್ಲಿದ್ದ ಹುಡುಗಿಯೊಬ್ಬಳು ಚಪ್ಪಾಳೆ ತಟ್ಟುತ್ತಾ ತಂಡಕ್ಕೆ ಅಭಿನಂದಿಸಿದ್ದಾಳೆ. ಇದೇ ವೇಳೆ ಗಿಲ್​ ಈ ಹುಡುಗಿಯನ್ನು ಕಂಡು ವಾಹ್​… ಎಂಬ ಸನ್ನೆ ಮಾಡಿದರು. ಈ ವಿಡಿಯೊ ವೈರಲ್​ ಆಗಿದೆ.

VISTARANEWS.COM


on

Shubman Gill
Koo

ಅಹಮದಾಬಾದ್​: ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧದ ಪಂದ್ಯದಲ್ಲಿ ಗುಜರಾತ್​ ತಂಡ 6 ವಿಕೆಟ್​ಗಳ ಸೋಲು ಕಂಡಿತು. ಇದೇ ಪಂದ್ಯದಲ್ಲಿ ಶುಭಮನ್​ ಗಿಲ್(Shubman Gill)​ ಅವರು ಗ್ಯಾಲರಿಯಲ್ಲಿ ಕುಳಿತಿದ್ದ ಸುಂದರ ಹುಡುಗಿಯನ್ನು ಕಂಡು ಜೊಲ್ಲು ಸುರಿಸಿದ ವಿಡಿಯೊ ವೈರಲ್(viral video)​ ಆಗಿದೆ. ಈ ವಿಡಿಯೊಗೆ ‘ಮೆನ್​ ವಿಲ್​ ಬಿ ಮೆನ್​” ಎಂದು ನೆಟ್ಟಿಗರು ಕಮೆಂಟ್​ ಮಾಡಿದ್ದಾರೆ.

ಡೆಲ್ಲಿ ತಂಡ ಗೆಲುವು ಸಾಧಿಸಿದನ್ನು ಕಂಡು ಗ್ಯಾಲರಿಯಲ್ಲಿದ್ದ ಹುಡುಗಿಯೊಬ್ಬಳು ಚಪ್ಪಾಳೆ ತಟ್ಟುತ್ತಾ ತಂಡಕ್ಕೆ ಅಭಿನಂದಿಸಿದ್ದಾಳೆ. ಇದೇ ವೇಳೆ ಗಿಲ್​ ಈ ಹುಡುಗಿಯನ್ನು ಕಂಡು ವಾಹ್​… ಎಂಬ ಸನ್ನೆ ಮಾಡಿದರು. ಈ ದೃಶ್ಯ ಪಂದ್ಯದ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪಂದ್ಯ ಸೋತರೂ ಈ ಹುಡಿಯನ್ನು ಕಂಡ ಗಿಲ್​ ಎಲ್ಲ ಚಿಂತೆಯನ್ನು ಮರೆತರು.

ಗಿಲ್​ ಅವರ ಈ ವಿಡಿಯೊ ಕಂಡ ಕೆಲ ನೆಟ್ಟಿಗರು ಸಾರಾ ತೆಂಡೂಲ್ಕರ್​ ಕಂಡರೆ ನಿಮಗೆ ಮಾರಿ ಹಬ್ಬ ಕಂಡಿತ ಎಂದು ತಮಾಷೆಯ ಕಮೆಂಟ್​ ಮಾಡಿದ್ದಾರೆ. ಪಂದ್ಯಕ್ಕೂ ಮುನ್ನವೇ ನಿಮ್ಮ ತಂಡದ ಆಟಗಾರರು ಈ ಹುಡುಗಿಯನ್ನು ಕಂಡಿರಬೇಕು, ಹೀಗಾಗಿ ಆಟದಲ್ಲಿ ಏಕಾಗ್ರತೆ ಕಳೆದುಕೊಂಡು ಕಳಪೆ ಪ್ರದರ್ಶನ ತೋರಿ ಸೋಲು ಕಂಡಿದ್ದು ಎಂದು ಕಾಲೆಳೆದಿದ್ದಾರೆ.

ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡ ಡೆಲ್ಲಿ(Delhi Capitals) ತಂಡಕ್ಕೆ. ಬೌಲರ್​ಗಳು ತಮ್ಮ ಘಾತಕ ದಾಳಿಯ ಮೂಲಕ ಎದುರಾಳಿ ಗುಜರಾತ್​ ತಂಡವನ್ನು 89 ರನ್​ಗಳಿಗೆ ಆಲೌಟ್​ ಮಾಡಿದರು. ಸಾಧಾರಣ ಮೊತ್ತವನ್ನು ಬೆನ್ನತ್ತಿದ ಡೆಲ್ಲಿ 8.5 ಓವರ್​ಗಳಲ್ಲಿ 4 ವಿಕೆಟ್​ ನಷ್ಟಕ್ಕೆ 92 ರನ್​ ಬಾರಿಸಿ ಗೆಲುವು ತನ್ನದಾಗಿಸಿಕೊಂಡಿತು.

ಇದನ್ನೂ ಓದಿ IPL 2024 POINTS TABLE: ಗುಜರಾತ್​​ ಮಣಿಸಿ ಅಂಕಪಟ್ಟಿಯಲ್ಲಿ 3 ಸ್ಥಾನ ಜಿಗಿತ ಕಂಡ ಡೆಲ್ಲಿ

ಚೇಸಿಂಗ್​ ವೇಳೆ ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್ ಬಿರುಸಿನ ಬ್ಯಾಟಿಂಗ್​ ಮೂಲಕ ತಂಡಕ್ಕೆ ಉತ್ತಮ ಆರಂಭ ಒದಗಿಸಿದರು. ಇವರ ಈ ಆಕ್ರಮಣಕಾರಿ ಬ್ಯಾಟಿಂಗ್​ನಿಂದಾಗಿ 2 ಓವರ್​ ಮುಕ್ತಾಯಗೊಳ್ಳುವ ಮುನ್ನವೇ ತಂಡಕ್ಕೆ 25 ರನ್​ ಹರಿದುಬಂತು. ಆದರೆ ಇವರ ಈ ಆಟ ಹೆಚ್ಚು ಹೊತ್ತು ಸಾಗಲಿಲ್ಲ. ಸ್ಪೆನ್ಸರ್ ಜಾನ್ಸನ್ ಎಸೆದ ವೈಡ್​ ಲೆಂತ್​ ಬಾಲ್​ನ ಮರ್ಮವನರಿಯದೆ ಕ್ಯಾಚ್​ ನೀಡಿ ವಿಕೆಟ್​ ಕಳೆದುಕೊಂಡರು. ಅವರ ಗಳಿಕ 10 ಎಸೆತಗಳಿಂದ 20 ರನ್. ಈ ವಿಕೆಟ್​ ಪತನದ ಬಳಿಕ ಆಡಲಿಳಿದ ಅಭಿಷೇಕ್​ ಪೋರೆಲ್(15)​ ಮತ್ತು ಶಾಯ್ ಹೋಪ್(19)​ ಬೇಗನೆ​ ವಿಕೆಟ್​ ಕಳೆದುಕೊಂಡು ತಂಡಕ್ಕೆ ಆತಂಕ ತಂದೊಡ್ಡಿದರು. ಈ ವೇಳೆ ತಾಳ್ಮೆಯುತ ಬ್ಯಾಟಿಂಗ್​ ನಡೆಸಿದ ನಾಯಕ ಪಂತ್​(16) ಮತ್ತು ಸುಮೀತ್​ ಕುಮಾರ್​(9) ಅಜೇಯರಾಗಿ ಉಳಿದು ತಂಡವನ್ನು ಗೆಲುವಿನ ದಡ ಸೇರಿಸಿದರು. ಗುಜರಾತ್​ ಪರ ಸಂದೀಪ್​ ವಾರಿಯರ್​ 2 ವಿಕೆಟ್​ ಕಿತ್ತರು.

ಇನಿಂಗ್ಸ್​ ಆರಂಭಿಸಿದ ಗುಜರಾತ್​ ತಂಡದ ಬ್ಯಾಟರ್​ಗಳು ಡೆಲ್ಲಿ ಬೌಲರ್​ಗಳಾದ ಇಶಾಂತ್​ ಶರ್ಮ, ಮುಕೇಶ್​ ಕುಮಾರ್​ ಮತ್ತು ಟ್ರಿಸ್ಟಾನ್ ಸ್ಟಬ್ಸ್ ಅವರ ಕರಾರುವಾಕ್ ಬೌಲಿಂಗ್ ಎದುರು ಅಬ್ಬರಿಸಲು ವಿಫಲರಾದರು. ನಾಯಕ ಶುಭಮನ್​​ ಗಿಲ್​(8), ವೃದ್ಧಿಮಾನ್​ ಸಾಹಾ(2), ಡೇವಿಡ್​ ಮಿಲ್ಲರ್​(2), ಅಭಿನವ್​ ಮನೋಹರ್​(8) ಮತ್ತು ಈ ಆವೃತ್ತಿಯಲ್ಲಿ ಮೊದಲ ಪಂದ್ಯವಾನ್ನಾಡಿದ ಶಾರುಖ್ ಖಾನ್(0) ಸಿಂಗಲ್​ ಡಿಜಿಟ್​ಗೆ ಸೀಮಿತರಾಗಿ ಪೆವಿಲಿಯನ್​ ಪರೇಡ್​ ನಡೆಸಿದರು. 8ನೇ ಕ್ರಮಾಂಕದಲ್ಲಿ ಆಡಲಿಳಿದ ರಶೀದ್​ ಖಾನ್​ ಏಕಾಂಗಿ ಹೋರಾಟ ನಡೆಸಿ 24 ಎಸೆತಗಳಿಂದ 31 ರನ್​ ಚಚ್ಚಿ ತಂಡದ ಮೊತ್ತವನ್ನು 80ರ ಗಡಿ ದಾಟಿಸಿ ಮಾನ ಉಳಿಸಿದರು. 

Continue Reading
Advertisement
murder case gadag
ಕ್ರೈಂ10 mins ago

Murder Case: ನಗರಸಭೆ ಉಪಾಧ್ಯಕ್ಷೆಯ ಮಗ ಸೇರಿ 4 ಮಂದಿ ಮಲಗಿದಲ್ಲೇ ಕೊಚ್ಚಿ ಕೊಲೆ

voting
ಪ್ರಮುಖ ಸುದ್ದಿ37 mins ago

Lok Sabha Election 2024: ಮೊದಲ ಹಂತದ ಮತದಾನ ಆರಂಭ; 102 ಲೋಕಸಭಾ ಕ್ಷೇತ್ರಗಳ ಭವಿಷ್ಯ ಇಂದು ನಿರ್ಣಯ

kalpana chawla rajamarga column
ಅಂಕಣ55 mins ago

ರಾಜಮಾರ್ಗ ಅಂಕಣ: ಭಾರತದ ಹೆಣ್ಣು ಮಕ್ಕಳಿಗೆ ಆಕಾಶದ ಎತ್ತರವೂ ಕಡಿಮೆ ಎಂದು ಸಾಬೀತು ಪಡಿಸಿದ ಕಲ್ಪನಾ ಚಾವ್ಲಾ!

Karnataka Weather Forecast
ಮಳೆ1 hour ago

Karnataka Weather : 40 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ; ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Dina bhavishya
ಭವಿಷ್ಯ3 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Steet Food
ಆಹಾರ/ಅಡುಗೆ8 hours ago

ವಿಸ್ತಾರ ಸಂಪಾದಕೀಯ: ಸಾರ್ವಜನಿಕ ಆಹಾರದಲ್ಲಿ ಆರೋಗ್ಯ ಕಾಳಜಿ ಪ್ರಮುಖವಾಗಿರಲಿ

IPL 2024
ಪ್ರಮುಖ ಸುದ್ದಿ8 hours ago

IPL 2024 : ಪಂಜಾಬ್​ ತಂಡಕ್ಕೆ ವಿರೋಚಿತ 9 ರನ್ ಸೋಲು, ಜಯದ ಹಳಿಗೆ ಮರಳಿದ ಮುಂಬೈ

Physical Abuse
ದೇಶ8 hours ago

Physical Abuse : ಸ್ಪೇನ್​ನ ಮಹಿಳೆ ಮೇಲೆ ಜಾರ್ಖಂಡ್​ನಲ್ಲಿ ಗ್ಯಾಂಗ್​ ರೇಪ್​; ತಿಂಗಳ ಬಳಿಕ ಪ್ರಕರಣ ಬಯಲು

Amanatullah Khan
ದೇಶ9 hours ago

Amanatullah Khan: ಆಪ್‌ಗೆ ಮತ್ತಷ್ಟು ಸಂಕಷ್ಟ; ಶಾಸಕ ಅಮಾನತುಲ್ಲಾ ಖಾನ್ ಅರೆಸ್ಟ್‌

Moral policing
ಪ್ರಮುಖ ಸುದ್ದಿ9 hours ago

Moral policing : ನೈತಿಕ ಪೊಲೀಸ್​ಗಿರಿ; ಮುಸ್ಲಿಮರ ಗುಂಪಿನಿಂದ ಹಿಂದೂ ಯುವಕನ ಮೇಲೆ ಹಲ್ಲೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ3 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ2 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ3 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20244 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ5 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ6 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ7 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ1 week ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

ಟ್ರೆಂಡಿಂಗ್‌