ಉಡುಪಿ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಮನೆಯಲ್ಲಿ ಮತದಾನ (Voting) ಮಾಡಿದ ಕೆಲವೇ ಕ್ಷಣಗಳಲ್ಲಿ ವಯೋವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ. ಸಾವಿನ ಮುನ್ನದ ಕ್ಷಣಗಳಲ್ಲೂ ಹಕ್ಕು ಚಲಾಯಿಸಿದ ನಿರ್ವಹಿಸಿದ ಹಿರಿಯ ನಾಗರಿಕರ (Senior Citizen) ಈ ಕರ್ತವ್ಯಪ್ರಜ್ಞೆಗೆ ಶ್ಲಾಘನೆ ವ್ಯಕ್ತವಾಗಿದೆ.
ಪಿ.ಯಶೋದಾ ನಾರಾಯಣ ಉಪಾಧ್ಯ (83) ಮೃತಪಟ್ಟ ಹಿರಿಯ ಜೀವ. ಇವರು ಬ್ರಹ್ಮಾವರ ತಾಲೂಕು ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರದ ನಿವಾಸಿಯಾಗಿದ್ದು, ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ದಿ.ನಾರಾಯಣ ಉಪಾಧ್ಯ ಅವರ ಪತ್ನಿಯಾಗಿದ್ದಾರೆ. ಹಿರಿಯ ನಾಗರಿಕರಿಗಾಗಿ ರೂಪಿಸಲಾಗಿರುವ ʼಮನೆಯಿಂದ ಮತʼ ಕಾರ್ಯಕ್ರಮದಡಿ ಮನೆಯಿಂದಲೇ ಮತದಾನ ಮಾಡಿದ್ದರು.
ಮತದಾನದ ದಿನ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಆದರೆ ಮತದಾನ ಮಾಡಿಯೇ ಆಸ್ಪತ್ರೆಗೆ ತೆರಳಲು ಅವರು ನಿಶ್ಚಯಿಸಿದ್ದರು. ಮತದಾನ ಮಾಡಿದ ಬಳಿಕವೇ ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ತೆರಳಿ ಅಲ್ಲಿ ದಾಖಲಾಗಿದ್ದರು. ರಾತ್ರಿ 9 ಗಂಟೆ ಸುಮಾರಿಗೆ ಚಿಕಿತ್ಸೆಗೆ ಸ್ಪಂದಿಸದೆ ಯಶೋದಮ್ಮ ಮೃತಪಟ್ಟಿದ್ದಾರೆ. ಮೃತರು ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಇನ್ನೊಂದೇ ದಿನ ಅವಕಾಶ
ಲೋಕಸಭೆ ಚುನಾವಣೆಯ (Lok Sabha Election 2024) ʼಅಂಚೆ ಮತದಾನʼ (Postal ballet) ಕಾರ್ಯಕ್ರಮ ಏಪ್ರಿಲ್ 13ರಿಂದ ಆರಂಭವಾಗಿದ್ದು, ಏಪ್ರಿಲ್ 18ರವರೆಗೆ ನಡೆಯುತ್ತಿದೆ. 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು (Senior citizen) ಹಾಗೂ ಹಾಗೂ ವಿಶೇಷ ಚೇತನರಿಗೆ (Specially abled) ಮನೆಯಿಂದಲೇ ಅಂಚೆ ಮತದಾನ ಮಾಡುವ ಸೌಲಭ್ಯವನ್ನು ಇದರಲ್ಲಿ ನೀಡಲಾಗಿದೆ.
ನೋಂದಣಿ ಮಾಡಿಕೊಂಡ ಮತದಾರರ ಮನೆಗೆ ಮತಗಟ್ಟೆ ಅಧಿಕಾರಿಗಳ ತಂಡ ಭೇಟಿ ನೀಡುತ್ತದೆ. ಮತದಾರರ ಮನೆಗೆ ಇಬ್ಬರು ಮತಗಟ್ಟೆ ಅಧಿಕಾರಿಗಳು, ಭದ್ರತಾ ಸಿಬ್ಬಂದಿ, ವೀಡಿಯೋಗ್ರಾಫರ್ ತಂಡ ಭೇಟಿ ನೀಡಲಿದ್ದು, ಜೊತೆಗೆ ಪೊಲೀಸ್ ಸಿಬ್ಬಂದಿ ಹಾಗೂ ಒಬ್ಬ ಅಬ್ಸರ್ವರ್ ಕಡ್ಡಾಯವಿದೆ. ತಂಡವು ಮನೆಗೆ ತೆರಳಿ ಮತದಾನ ಗುರುತಿನ ಚೀಟಿ ಪರಿಶೀಲನೆ ಮಾಡಲಿದ್ದು, ಗೌಪ್ಯ ಮತದಾನಕ್ಕಾಗಿ ಅಂಚೆ ಮತಪತ್ರದಲ್ಲಿ ಮತ ಚಲಾಯಿಸಲು ಅವಕಾಶ ನೀಡುತ್ತದೆ.
ಈ ಎಲ್ಲಾ ಪ್ರಕ್ರಿಯೆ ವೀಡಿಯೋಗ್ರಫಿ ಮೂಲಕ ಕಡ್ಡಾಯ ಸೆರೆ ಹಿಡಿಯಲಾಗುತ್ತದೆ. ಪ್ರತಿ ಮತದಾರರ ಮನೆಗೆ ಎರಡು ಬಾರಿ ಟೀಮ್ ಭೇಟಿ ನೀಡಲಿದ್ದು, ಎರಡು ಬಾರಿಯೂ ಮತದಾನ ಪ್ರಕ್ರಿಯೆ ನಡೆಯದೇ ಇದ್ದರೆ ಮತ್ತೆ ಮತದಾನ ನಡೆಸಲು ಅವಕಾಶವಿರುವುದಿಲ್ಲ. ಮನೆಯಿಂದ ಮತದಾನಕ್ಕೆ 12ಡಿ ನಮೂನೆಯಲ್ಲಿ ನೋಂದಣಿ ಮಾಡಿಸಿಕೊಂಡಿರುವವರಿಗೆ ಮತಗಟ್ಟೆಗೆ ಬಂದು ವಿದ್ಯುನ್ಮಾನ ಮತಯಂತ್ರದಲ್ಲಿ ಮತ ಚಲಾಯಿಸುವ ಅವಕಾಶವಿರುವುದಿಲ್ಲ.
ಮತದಾರರ ಪಟ್ಟಿಯಲ್ಲಿ ಹೆಸರು ಇರಬೇಕು
ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರು ಇಲ್ಲದಿದ್ದರೆ ಮತದಾನ ಮಾಡಲು ಅವಕಾಶವಿಲ್ಲ. ಆದರೆ, ವೋಟರ್ ಐಟಿ ಕಾರ್ಡ್ ಅಥವಾ ಮತದಾರರ ಫೋಟೋ ಸಹಿತ ಗುರುತಿನ ಚೀಟಿ ಕಾಣೆಯಾಗಿದ್ದರೆ ಮತದಾನ ಮಾಡಲು ಅವಕಾಶ ಇದೆ. ಆದರೆ ಅವರ ಹೆಸರು ಮತದಾರರ ಪಟ್ಟಿಯಲ್ಲಿ ಇರಲೇ ಬೇಕು. ಮತದಾರರು ಚುನಾವಣಾ ಆಯೋಗ ಪಟ್ಟಿ ಮಾಡಿರುವ 14 ವಿಧದ ಫೋಟೋ ಸಹಿತ ಗುರುತಿನ ಚೀಟಿಗಳ ಪೈಕಿ ಯಾವುದನ್ನಾದರೂ ತೋರಿಸಿ ಮತ ಚಲಾಯಿಸಬಹುದು. ಇದಕ್ಕಾಗಿ ಪ್ರತ್ಯೇಕವಾಗಿ ಫೋಟೋ ತೋರಿಸುವ ಅಗತ್ಯ ಇಲ್ಲ. ಆದರೆ, ಇವೆಲ್ಲವೂ ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರು ಇದ್ದಾಗ ಮಾತ್ರ ಸಾಧ್ಯ.
ಇದನ್ನೂ ಓದಿ: Lok Sabha Election 2024: ವಿವಿಧ ಇಲಾಖೆಗಳ ಉದ್ಯೋಗಿಗಳಿಗೆ ಅಂಚೆ ಮತದಾನ ಸೌಲಭ್ಯ; ಯಾರಿಗೆಲ್ಲ ಇದೆ ಅವಕಾಶ?