ಬಾಗಲಕೋಟೆ: ಆ ದಂಪತಿ ತಮ್ಮ ಒಂದು ವರ್ಷದ ಮಗನ (Miracle case) ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದರು. ಸಂಬಂಧಿಕರು, ಬಂಧು ಬಳಗದವರೆಲ್ಲರ ಆಕ್ರಂದನ ಮುಗಿಲು ಮುಟ್ಟಿತ್ತು. ಇನ್ನೇನು ಮಗುವನ್ನು ಮಣ್ಣು ಮಾಡಬೇಕು ಎನ್ನುವಾಗ ದಿಢೀರ್ ಕಣ್ಣು ಬಿಟ್ಟು, ಜೋರಾಗಿ ಕೆಮ್ಮಿ ಪುನಃ ಬದುಕಿ ಬಂದಿದೆ. ಬಾಗಲಕೋಟೆ ಜಿಲ್ಲೆ ಇಳಕಲ್ ನಗರದಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ.
ಒಂದು ವರ್ಷದ ದ್ಯಾಮಣ್ಣ ಭಜಂತ್ರಿ ಎಂಬ ಮಗುವಿಗೆ ಉಸಿರಾಟ ತೊಂದರೆ, ಹೃದಯ ಸಂಬಂಧಿ ಖಾಯಿಲೆ ಸೇರಿದಂತೆ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿತ್ತು. ಹುಟ್ಟಿದಾಗಿನಿಂದ ಖಾಯಿಲೆಯಿಂದ ಬಳಲುತ್ತಿದ್ದ ಮಗುವನ್ನು ಕಳೆದ ನಾಲ್ಕು ದಿನಗಳಿಂದ ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.
ಈ ವೇಳೆ ವೈದ್ಯರು ಮಗು ಬದುಕೋದು ಕಷ್ಟ ಎಂದು ಹೇಳಿ ಡಿಸ್ಜಾರ್ಜ್ ಮಾಡಿದ್ದಾರೆ. ವಾಪಸ್ ವಾಹನದಲ್ಲಿ ಮನೆಗೆ ಬರುವಾಗ ಮಗು ಪ್ರಜ್ಞೆ ತಪ್ಪಿದೆ. ಪ್ರಜ್ಞೆ ತಪ್ಪಿದ ಮಗುವನ್ನು ಮೃತಪಟ್ಟಿದೆ ಎಂದು ಭಾವಿಸಿದ ಬಸವರಾಜ ಭಜಂತ್ರಿ ಹಾಗೂ ನೀಲಮ್ಮ ದಂಪತಿ, ಸಂಬಂಧಿಕರಿಗೆ ಸಾವಿನ ಸುದ್ದಿ ಮುಟ್ಟಿಸಿದ್ದಾರೆ.
ಇತ್ತ ಮಗು ಸಾವಿನ ಸುದ್ದಿ ತಿಳಿದು ಬಂಧು ಬಳಗದವರು ಮನೆಗೆ ಬಂದಿದ್ದಾರೆ. ಅಂತ್ಯಸಂಸ್ಕಾರಕ್ಕೆ ತಯಾರಿ ನಡೆಸುತ್ತಿರುವಾಗಲೇ ಮಗು ಕೆಮ್ಮಿದೆ ಈ ಮೂಲಕ ಬದುಕಿದೆ ಎಂದು ಅಚ್ಚರಿಗೊಂಡಿದ್ದಾರೆ.ಇದು ಮುರ್ತುಜಾ ಖಾದ್ರಿ ಪವಾಡ ಎಂದು ತಿಳಿದ ಪೋಷಕರು ಅಂತ್ಯಸಂಸ್ಕಾರದ ಜಾಗದಿಂದ ದರ್ಗಾಕ್ಕೆ ಮಗುವನ್ನು ಕರೆದುಕೊಂಡು ಹೋಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಅಲ್ಲಿಂದ ಕೂಡಲೇ ಇಳಕಲ್ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಮಗುವಿಗೆ ಚಿಕಿತ್ಸೆ ಮುಂದುವರೆದಿದೆ.
ಇದನ್ನೂ ಓದಿ: Thunderbolt: ಮುಂಗಾರಿಗೆ ಮೊದಲೇ ಸಿಡಿಲಿನ ದುಃಸ್ವಪ್ನ, ಇಬ್ಬರು ಬಲಿ, ಇಬ್ಬರು ಗಂಭೀರ
ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು, ಆದರೆ ಆ ಹುಡುಗಿ ಒಪ್ಪಲಿಲ್ಲ ಎಂದ ಸಿದ್ದರಾಮಯ್ಯ
ಮೈಸೂರು: ಅಂತರ್ಜಾತಿ ವಿವಾಹಗಳಿಂದ ಜಾತಿ ನಾಶ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Mysore News) ಅಭಿಪ್ರಾಯಪಟ್ಟರು. ನನಗೂ ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು. ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ. ಆದರೆ ಆ ಹುಡುಗಿ ಒಪ್ಪಲಿಲ್ಲ, ಅವರ ಮನೆಯವರೂ ಒಪ್ಪಲಿಲ್ಲ ಎಂದು ತಮ್ಮ ಕಾಲೇಜು ದಿನಗಳನ್ನು ಮುಖ್ಯಮಂತ್ರಿಗಳು ಸ್ಮರಿಸಿದರು.
ಮೈಸೂರಿನಲ್ಲಿ ಜನ ಸ್ಪಂದನ ಮತ್ತು ಮಾನವ ಮಂಟಪ ಆಯೋಜಿಸಿದ್ದ ಅಂತರ್ಜಾತಿ ವಿವಾಹಿತರ ನೋಂದಣಿ ವೇದಿಕೆಯ ವೆಬ್‌ಸೈಟ್ ಉದ್ಘಾಟಿಸಿ ಮಾತನಾಡಿದ ಅವರು, ಅಂತರ್ಜಾತಿ ವಿವಾಹಗಳ ಜತೆಗೆ ಮಹಿಳೆಯರಿಗೆ ಹಾಗೂ ಎಲ್ಲಾ ವರ್ಗದ ದುರ್ಬಲರಿಗೆ ಆರ್ಥಿಕ ಶಕ್ತಿ ಸಿಕ್ಕಾಗ ಸಮಾಜದಲ್ಲಿ ಚಲನೆಯುಂಟಾಗುತ್ತದೆ. ಸಮ ಸಮಾಜದ ಆಶಯ ಈಡೇರಲು, ಜಾತಿ ನಾಶವಾಗಲು ಸಾಧ್ಯ ಎಂದು ಹೇಳಿದರು.
ನಮ್ಮ ಸರ್ಕಾರ ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುವ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ ಎಂದ ಅವರು, ಅಂಬೇಡ್ಕರ್ ಮತ್ತು ಕುವೆಂಪು ಅವರ ಆಶಯದಂತೆ ಸಮ ಸಮಾಜ ನಿರ್ಮಾಣ ಆಗಬೇಕಾದರೆ ಅಂತರ್ಜಾತಿ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು. ಇದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ತಿಳಿಸಿದರು.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ