ಶ್ರೀನಗರ: ಮಹತ್ವದ ಬೆಳವಣಿಗೆಯೊಂದರಲ್ಲಿ ಜಮ್ಮು ಮತ್ತು ಕಾಶ್ಮೀರದ (Jammu & Kashmir) ರಿಯಾಸಿ ಭಯೋತ್ಪಾದಕ ದಾಳಿ (Reasi Terror Attack)ಯ ಹಿಂದಿನ ಮಾಸ್ಟರ್ ಮೈಂಡ್ ಅನ್ನು ಪಾಕಿಸ್ತಾನದಲ್ಲಿ ‘ಅಪರಿಚಿತ ವ್ಯಕ್ತಿಗಳು’ ಹತ್ಯೆ ಮಾಡಿದ್ದಾರೆ ಎಂದು ಪಾಕಿಸ್ತಾನದ ಮಾಧ್ಯಮಗಳು ಮತ್ತು ಯೂಟ್ಯೂಬರ್‌ಗಳು ಹೇಳಿದ್ದಾರೆ. ಜೂನ್ 9ರಂದು ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ನಡೆದ ಭೀಕರ ಭಯೋತ್ಪಾದಕರ ದಾಳಿಗೆ ಪುಟ್ಟ ಕಂದಮ್ಮನೂ ಸೇರಿ ಒಟ್ಟು 9 ಮಂದಿ ಮೃತಪಟ್ಟು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಇದೀಗ ಈ ಕೃತ್ಯಕ್ಕೆ ಸಂಚು ರೂಪಿಸಿದವನ ವಿರುದ್ಧ ಪ್ರತಿಕಾರ ಕೈಗೊಳ್ಳಲಾಗಿದೆ ಎನ್ನಲಾಗಿದ್ದು, ಸದ್ಯ ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ (Viral Video).
The mastermind of #ReasiTerrorAttack has been neutralized in Pakistan by 'unknown men, claims Pak media and YouTubers.#AllEyesOnReasipic.twitter.com/SnmZb81vKH
— Megh Updates 🚨™ (@MeghUpdates) June 15, 2024
ಇಬ್ಬರು ವ್ಯಕ್ತಿಗಳು ಈ ಬಗ್ಗೆ ಮಾಹಿತಿ ನೀಡುತ್ತಿರುವುದು ವಿಡಿಯೊದಲ್ಲಿ ಕಂಡು ಬಂದಿದೆ. ಈ 16 ಸೆಕೆಂಡುಗಳ ಈ ಪುಟ್ಟ ವಿಡಿಯೊ ಇದೀಗ ಇಂಟರ್‌ನೆಟ್‌ನಲ್ಲಿ ಸಂಚಲನ ಸೃಷ್ಟಿಸಿದೆ. ಇಬ್ಬರು ಕ್ಯಾಮೆರಾ ಮುಂದೆ ನಿಂತು ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಗಳ ಬಗ್ಗೆ ಚರ್ಚಿಸುತ್ತಾರೆ. ಬಳಿಕ ಪಾಕಿಸ್ತಾನದಲ್ಲಿ ಅಪರಿಚಿತ ವ್ಯಕ್ತಿಗಳು ಈ ಕೃತ್ಯದ ಮಾಸ್ಟರ್ ಮೈಂಡ್ ಅನ್ನು ಹತ್ಯೆ ಮಾಡಿದ್ದಾರೆ ಎಂದು ಹೇಳುತ್ತಾರೆ. ಸದ್ಯ ಈ ಬಗ್ಗೆ ಚರ್ಚೆ ನಡೆಯುತ್ತಿದೆ.
ಪಾಕಿಸ್ತಾನದಲ್ಲಿ ಹೆಚ್ಚುತ್ತಿದೆ ಉಗ್ರರ ಹತ್ಯೆ
ವಿಶೇಷ ಎಂದರೆ ಪಾಕಿಸ್ತಾನದಲ್ಲಿ ಉಗ್ರರ ಹತ್ಯೆ ಹೆಚ್ಚುತ್ತಿದೆ. ಅಪರಿಚಿತರ ಗುಂಡಿನ ದಾಳಿಗೆ ಉಗ್ರರು ಬಲಿಯಾಗುತ್ತಿದ್ದಾರೆ. ಇದಕ್ಕೆ ಇತ್ತೀಚಿನ ಉದಾಹರಣೆ ಎಂದರೆ ಬೇಹುಗಾರಿಕೆ ಆರೋಪ ಹೊತ್ತು ಪಾಕಿಸ್ತಾನದ ಜೈಲಿನಲ್ಲಿದ್ದ ಭಾರತೀಯ ಪ್ರಜೆ ಸರಬ್ಜಿತ್ ಸಿಂಗ್ ಅವರನ್ನು ಹತ್ಯೆ ಮಾಡಿದ್ದ ಅಮೀರ್ ಸರ್ಫರಾಜ್ ಅಲಿಯಾಸ್ ತಾಂಬಾ ಎಂಬಾತನನ್ನು ಏಪ್ರಿಲ್ 14ರಂದು ಪಾಕಿಸ್ತಾನದ ಲಾಹೋರ್‌ನಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದರು.
ಬಂಧಿತರ ಸಂಖ್ಯೆ 50ಕ್ಕೆ ಏರಿಕೆ
ಈತನ್ಮಧ್ಯೆ ಜಮ್ಮು ಮತ್ತು ಕಾಶ್ಮೀರದ ರಿಯಾಸಿಯ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಇದುವರೆಗೆ ಸುಮಾರು 50 ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜೂನ್ 9ರಂದು ಭಯೋತ್ಪಾದಕರು ಜಮ್ಮು ಮತ್ತು ಕಾಶ್ಮೀರದ ಶಿವ ಖೋರಿ ದೇವಸ್ಥಾನಕ್ಕೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ದಾಳಿ ನಡೆಸಿದ್ದರು. ಇದರಿಂದ ಚಾಲಕನ ನಿಯಂತ್ರಣ ತಪ್ಪಿದ ಬಸ್ ಆಳವಾದ ಕಂದಕಕ್ಕೆ ಬಿದ್ದಿತ್ತು. ʼʼಈ ಘಟನೆ ಬಗ್ಗೆ ಕಾಂಡಾ ಪ್ರದೇಶ ಪೊಲೀಸ್ ಠಾಣೆಯ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದ್ದು, ಈವರೆಗೆ 50 ಜನರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆʼʼ ಎಂದು ರಿಯಾಸಿಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮೋಹಿತಾ ಶರ್ಮಾ ಹೇಳಿದ್ದಾರೆ.
ಮತ್ತೆ ಕಣಿವೆ ರಾಜ್ಯದಲ್ಲಿ ಗುಂಡಿನ ಮೊರೆತ
ಇದುವರೆಗೆ ಶಾಂತವಾಗಿದ್ದ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ ಆರಂಭವಾಗಿದೆ. ರಿಯಾಸಿ ಜತೆಗೆ ಭಯೋತ್ಪಾದಕರು ಇತರ ಎರಡು ಕಡೆ ದಾಳಿ ನಡೆಸಿದ್ದಾರೆ. ಕಥುವಾ ಮತ್ತು ದೋಡಾದಲ್ಲಿ ಉಗ್ರರು ದಾಂಧಲೆ ಎಬ್ಬಿಸಿದ್ದಾರೆ. ಈ ಪೈಕಿ 3 ಉಗ್ರರನ್ನು ಹತ್ಯೆ ಮಾಡಲಾಗಿದೆ.
ಇದನ್ನೂ ಓದಿ: All Eyes on Raesi: ಹಿಂದೂ ಯಾತ್ರಿಕರ ಹತ್ಯೆ: ಆಲ್ ಐಸ್ ಆನ್ ರಿಯಾಸಿ; ರಫಾ ರಫಾ ಅನ್ನುತ್ತಿದ್ದ ಸೆಲೆಬ್ರಿಟಿಗಳು ಈಗೆಲ್ಲಿ?