Site icon Vistara News

Road Rage Incident: ಒಳಗೆ ಮಗು ಇದೆ ಅಂದ್ರೂ ಬಿಡದ ಕಿಡಿಗೇಡಿ; ಕಾರಿನ ಗ್ಲಾಸ್‌ ಒಡೆದು ದಾಂಧಲೆ!

ಬೆಂಗಳೂರು: ರಾಜಧಾನಿಯಲ್ಲಿ ರೋಡ್ ರೇಜ್ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ರಸ್ತೆಯಲ್ಲಿ ಹೋಗುವಾಗ ಸೈಡ್ ಬಿಡಲಿಲ್ಲ ಎಂದು ಗಲಾಟೆ, ಹಲ್ಲೆ, ಕಿರಿಕ್ ಸೇರಿ ಒಂದಲ್ಲಾ ಒಂದು ಪ್ರಕರಣ ನಡೆಯುತ್ತಲೇ ಇರುತ್ತವೆ. ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಲು ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡರೂ ಪುಂಡರ ಕಾಟ ಮಾತ್ರ ತಪ್ಪುತ್ತಿಲ್ಲ. ಈ ನಡುವೆ ನಗರ ಹೊರವಲಯದ ಸರ್ಜಾಪುರ ಮುಖ್ಯರಸ್ತೆಯ ದೊಡ್ಡಕನ್ನಹಳ್ಳಿಯಲ್ಲಿ ಶನಿವಾರ ರಾತ್ರಿ ಇಂತಹುದೇ ಘಟನೆಯೊಂದು (Road Rage Incident) ನಡೆದಿದ್ದು, ಕಾರು ತಡೆದು ಯುವಕನೊಬ್ಬ ಪುಂಡಾಟ ಮೆರೆದಿರುವ ಘಟನೆ ನಡೆದಿದೆ.

ಸರ್ಜಾಪುರ ಮುಖ್ಯರಸ್ತೆಯ ದೊಡ್ಡಕನ್ನಹಳ್ಳಿಯಲ್ಲಿ ಬಲ ತಿರುವು ಪಡೆಯಲು ಇಂಡಿಕೇಟರ್ ಬಳಸದೆ ಕಾರು ಚಾಲಕ ಏಕಾಏಕಿ ನುಗ್ಗಿಸಿದ್ದ. ಇದರಿಂದ ಹಿಂಬದಿಯಿಂದ ಬರುತ್ತಿದ್ದ ಬೈಕ್ ಸವಾರ ಅನಿಲ್ ರೆಡ್ಡಿ ಎಂಬಾತ ರಸ್ತೆಗೆ ಬಿದ್ದಿದ್ದಾನೆ. ಹೀಗಾಗಿ ಕೋಪಗೊಂಡ ಆತ, ಕಾರನ್ನು ತಡೆದು ಹಲ್ಲೆಗೆ ಯತ್ನಿಸಿದ್ದಾನೆ.

ಸರ್ಜಾಪುರ ಮುಖ್ಯರಸ್ತೆಯ ದೊಡ್ಡಕನ್ನಹಳ್ಳಿಯಲ್ಲಿ ಶನಿವಾರ ರಾತ್ರಿ ಕಾರು ತಡೆದು ಯುವಕನೋರ್ವ ಪುಂಡಾಟ ಮೆರೆದಿರುವ ಘಟನೆ ನಡೆದಿದೆ. ಕಾರಿನಲ್ಲಿ ಮಗು ಮತ್ತು ಮಹಿಳೆ ಇದ್ದರೂ ಯೋಚಿಸದೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಬೈಕ್‌ ಸವಾರ, ಕಲ್ಲು ಹಿಡಿದು ಕಾರಿನಲ್ಲಿದ್ದವರಿಗೆ ಬೆದರಿಸಿ ವೈಪರ್ ಕಿತ್ತು ಗ್ಲಾಸ್ ಒಡೆದಿದ್ದಾನೆ. ಈ ಸನ್ನಿವೇಶವನ್ನು ಕಾರಿನಲ್ಲಿದ್ದ ದಂಪತಿ ವಿಡಿಯೊ ಮಾಡಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ, ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಿ ದೂರು ನೀಡಿದ್ದಾರೆ. ಬೆಳ್ಳಂದೂರು ಪೊಲೀಸರು ಎಫ್ಐಆರ್ ದಾಖಲಿಸಿ, ಕಾರಿನ ಗ್ಲಾಸ್ ಒಡೆದು ಹಾಕಿದ್ದ ಆರೋಪಿ ಅನಿಲ್ ರೆಡ್ಡಿ ಎಂಬಾತನನ್ನು ಬಂಧಿಸಿದ್ದಾರೆ.

ಇಂಡಿಕೇಟರ್‌ ಹಾಕದೆ ಕಾರು ಚಾಲಕ ಯಡವಟ್ಟು

ಘಟನೆ ಸಂಬಂಧ ದೂರು ದಾಖಲಾಗುತ್ತಿದ್ದಂತೆ ಆರೋಪಿ ಅನಿಲ್ ರೆಡ್ಡಿ ಎಂಬಾತನನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ಕಾರು ಚಾಲಕ ಬಲ ತಿರುವ ಪಡೆಯಲು ಇಂಡಿಕೇಟರ್ ಬಳಸದೆ ಏಕಾಏಕಿ ನುಗ್ಗಿದ್ದ. ಈ ವೇಳೆ ಬೈಕ್ ಸವಾರನಿಗೆ ಕಾರ್ ಡಿಕ್ಕಿಯಾಗಿ ಕೆಳಗೆ ಬಿದ್ದಿದ್ದ. ಸಾವರಿಸಿಕೊಂಡು ಮೇಲೆ ಎದ್ದ ಅನಿಲ್ ರೆಡ್ಡಿ ಕಾರಿನಿಂದ ಕೆಳಗೆಇಳಿಯುವಂತೆ ಚಾಲಕನಿಗೆ ಹೇಳಿದ್ದ. ಆದರೆ ಕಾರಿನಿಂದ ಚಾಲಕ ಕೆಳಗೆ ಇಳಿಯದೆ ಕುಳಿತಿದ್ದರಿಂದ ಕೋಪಗೊಂಡು ಕಲ್ಲಿನಿಂದ ಗ್ಲಾಸ್ ಪುಡಿಗಟ್ಟಿದ್ದ. ಘಟನೆ ಸಂಬಂಧ ಕಾರು ಚಾಲಕನಿಂದ ಬೆಳ್ಳಂದೂರು ಠಾಣೆಗೆ ದೂರು ದೂರಿನ ಹಿನ್ನಲೆ ಕೇಸ್ ದಾಖಲಾಗಿತ್ತು. ಕಾರಿನಿಂದ ಚಾಲಕ ಕೆಳಗೆ ಇಳಿಯದೆ ಕುಳಿತಿದ್ದರಿಂದ ಕೋಪಗೊಂಡು ಅನಿಲ್ ರೆಡ್ಡಿ ಗ್ಲಾಸ್ ಪುಡಿಗಟ್ಟಿದ್ದ ಎಂಬುದು ವಿಚಾರಣೆ ವೇಳೆ ಬಯಲಾಗಿದೆ.

Exit mobile version