ಭೋಪಾಲ್: ಕೇಂದ್ರ ಸಚಿವ, ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ (Shivraj Chouhan) ರೈಲಿನಲ್ಲಿ ಸಾಮಾನ್ಯರಂತೆ ಪ್ರಯಾಣ ಬೆಳೆಸಿರುವ ವಿಡಿಯೊ ಸದ್ಯ ವೈರಲ್ ಆಗಿದೆ. ಕೇಂದ್ರ ಸಚಿವರ ಸರಳತೆಗೆ ಮೆಚ್ಚುಗೆ ವ್ಯಕ್ತವಾಗಿದೆ (Viral News). ಲೋಕಸಭಾ ಚುನಾವಣೆಯಲ್ಲಿ ತಮ್ಮ ತವರು ಕ್ಷೇತ್ರ ವಿದಿಶಾದಿಂದ ಜಯಗಳಿಸಿರುವ ಅವರು ದೆಹಲಿಯಿಂದ ಭೋಪಾಲ್‌ಗೆ ರೈಲಿನಲ್ಲಿ ತೆರಳಿದರು.
ಶಿವರಾಜ್ ಸಿಂಗ್ ಚೌಹಾಣ್ ಅವರು ತಮ್ಮ ಪತ್ನಿಯೊಂದಿಗೆ ದೆಹಲಿಯಿಂದ ಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಸಂಚರಿಸಿದ್ದು, ಪ್ರಯಾಣದ ವೇಳೆ ರೈಲಿನಲ್ಲಿದ್ದ ಸಹಯಾತ್ರಿಕರೊಂದಿಗೆ ನಗು ನಗುತ್ತಾ ಮಾತನಾಡಿದರು. ಚಿಕ್ಕ ಮಕ್ಕಳನ್ನು ಎತ್ತಿ ಮುದ್ದಾಡಿ, ಫೋಟೊಗಳಿಗೆ ಪೋಸ್ ನೀಡಿದರು. ಕೆಲವರು ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸುತ್ತಿರುವುದು ಸಹ ಕಂಡುಬಂತು.
ट्रेन के सफर का अपना अलग आनंद है, कुछ घंटों के सफर में सहयात्रियों के साथ आत्मीय रिश्ता बन जाता है। pic.twitter.com/PpZz2LupH4
— Shivraj Singh Chouhan (मोदी का परिवार ) (@ChouhanShivraj) June 16, 2024
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತಮ್ಮ ರೈಲು ಪ್ರಯಾಣದ ಚಿತ್ರಗಳನ್ನು ಹಂಚಿಕೊಂಡಿರುವ ಶಿವರಾಜ್ ಸಿಂಗ್ ಚೌಹಾಣ್ ಅವರು, ಭಾರತೀಯ ರೈಲ್ವೆ ಇಲಾಖೆಯಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದರು.
ʼʼಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರ ಮುಂದಾಳತ್ವದಲ್ಲಿ ಭಾರತೀಯ ರೈಲ್ವೆ ನಿರ್ವಹಣೆ ಮತ್ತು ಕಾರ್ಯಾಚರಣೆಯ ಎಲ್ಲ ಕ್ಷೇತ್ರಗಳಲ್ಲಿ ಕ್ರಾಂತಿಕಾರಿ ಬದಲಾವಣೆಗಳಿಗೆ ಸಾಕ್ಷಿಯಾಗಿದೆ. ನವ ಭಾರತದ ವೇಗದ ಅಗತ್ಯಗಳನ್ನು ಪೂರೈಸಲು ಮತ್ತು ಪ್ರಯಾಣವನ್ನು ಸುರಕ್ಷಿತ ಮತ್ತು ಆರಾಮದಾಯಕವಾಗಿಸಲು ಭಾರತೀಯ ರೈಲ್ವೆ ನಿರಂತರವಾಗಿ ಕೆಲಸ ಮಾಡುತ್ತಿದೆ” ಎಂದು ಅವರು ಬರೆದುಕೊಂಡಿದ್ದಾರೆ.
आज नई दिल्ली से 'शताब्दी एक्सप्रेस' ट्रेन में यात्रा कर रहा हूं। इस दौरान यात्रा का अनुभव अत्यंत आनंददायक है।
— Shivraj Singh Chouhan (मोदी का परिवार ) (@ChouhanShivraj) June 16, 2024
आदरणीय प्रधानमंत्री श्री @narendramodi जी के मार्गदर्शन तथा रेलमंत्री श्री @AshwiniVaishnaw जी के विजन से भारतीय रेल प्रबंधन और संचालन के सभी क्षेत्रों में युगांतरकारी… pic.twitter.com/LzwEN1UVOs
ಕಳೆದ ವರ್ಷ ನಡೆದ ಮಧ್ಯ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಭರ್ಜರಿ ಗೆಲುವಿನಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಅವರು ಪ್ರಧಾನ ಪಾತ್ರ ವಹಿಸಿದ್ದರು. ಮುಖ್ಯಮಂತ್ರಿಯಾಗಿ ಹಲವು ಜನಪರ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೊಳಿಸಿದ ಖ್ಯಾತಿ ಅವರದ್ದು. ಸದ್ಯ ಶಿವರಾಜ್ ಸಿಂಗ್ ಚೌಹಾಣ್ ಅವರು ಸತತ ಮೂರನೇ ಬಾರಿ ಅಧಿಕಾರಕ್ಕೆ ಬಂದ ಎನ್‌ಡಿಎ ಸರ್ಕಾರದಲ್ಲಿ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾಗಿ ಆಯ್ಕೆಯಾಗಿದ್ದಾರೆ. ಬುಡಕಟ್ಟು ನಾಯಕ ಅರ್ಜುನ್ ಮುಂಡಾ ಅವರ ಬದಲಿಗೆ ಶಿವರಾಜ್ ಸಿಂಗ್ ಚೌಹಾಣ್ ಅವರು ಈ ಹೊಣೆ ಹೊತ್ತಿದ್ದಾರೆ.
ಶಿವರಾಜ್ ಸಿಂಗ್ ಚೌಹಾಣ್ ಅವರು 2024ರ ಲೋಕಸಭಾ ಚುನಾವಣೆಯಲ್ಲಿ ವಿದಿಶಾ ಕ್ಷೇತ್ರದಿಂದ ಸ್ಪರ್ಧಿಸಿ ಕಾಂಗ್ರೆಸ್‌ನ ಪ್ರತಾಪ್ ಭಾನು ಶರ್ಮಾ ಅವರ ವಿರುದ್ಧ ಬರೋಬ್ಬರಿ 8.2 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದಾರೆ.
ಶಿವರಾಜ್ ಸಿಂಗ್ ಚೌಹಾಣ್‌ಗೆ ಸಿಗದ ಸಿಎಂ ಹುದ್ದೆ; ಬಿಕ್ಕಿ ಬಿಕ್ಕಿ ಅತ್ತ ಮಹಿಳೆಯರು!
ಕಳೆದ ಡಿಸೆಂಬರ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಬಹುಮತ ಪಡೆದು ಅಧಿಕಾರಕ್ಕೆ ಮರಳಿದ್ದರೂ ಮುಖ್ಯಮಂತ್ರಿಯಾಗಿ ಹೊಸ ಮುಖ ಮೋಹನ್ ಯಾದವ್ ಅವರನ್ನು ಆಯ್ಕೆ ಮಾಡಲಾಗಿತ್ತು. ನಿರ್ಗಮಿತ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜ್ಯಪಾಲ ಮುಂಗುಭಾಯ್ ಪಟೇಲ್ ಅವರಿಗೆ ರಾಜೀನಾಮೆ ಸಲ್ಲಿಸಿ ಹೊರ ಬಂದಾಗ ಮಹಿಳಾ ಅಭಿಮಾನಿಗಳು ಅವರನ್ನು ಭೇಟಿ ಮಾಡಿ ತಮ್ಮ ದುಃಖ ವ್ಯಕ್ತಪಡಿಸಿದ್ದರು. ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಅಪ್ಪಿಕೊಂಡ ಮಹಿಳೆಯರು ಬಿಕ್ಕಿ ಬಿಕ್ಕಿ ಅತ್ತಿರುವ ವಿಡಿಯೊ ವೈರಲ್ ಆಗಿತ್ತು.