Sunita Williams: ಡ್ಯಾನ್ಸ್‌ ಮಾಡುತ್ತಲೇ ಬಾಹ್ಯಾಕಾಶ ನಿಲ್ದಾಣ ಪ್ರವೇಶಿಸಿದ ಭಾರತ ಮೂಲದ ಸುನೀತಾ ವಿಲಿಯಮ್ಸ್; ವಿಡಿಯೊ ವೈರಲ್‌ - Vistara News

ವೈರಲ್ ನ್ಯೂಸ್

Sunita Williams: ಡ್ಯಾನ್ಸ್‌ ಮಾಡುತ್ತಲೇ ಬಾಹ್ಯಾಕಾಶ ನಿಲ್ದಾಣ ಪ್ರವೇಶಿಸಿದ ಭಾರತ ಮೂಲದ ಸುನೀತಾ ವಿಲಿಯಮ್ಸ್; ವಿಡಿಯೊ ವೈರಲ್‌

Sunita Williams: ನಾಸಾದ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಸಂಚರಿಸಿದ್ದ ಬೋಯಿಂಗ್‌ ಸಂಸ್ಥೆಯ ಸ್ಟಾರ್‌ಲೈನರ್ (Boeing Starliner) ಬಾಹ್ಯಾಕಾಶ ನೌಕೆ ಗುರುವಾರ (ಜೂನ್‌ 6) ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ(ISS)ದಲ್ಲಿ ಸುರಕ್ಷಿತವಾಗಿ ಇಳಿದಿದೆ. ಈ ವೇಳೆ ಸುನೀತಾ ವಿಲಿಯಮ್ಸ್‌ ಅವರು ಇತರ ಏಳು ಗಗನಯಾತ್ರಿಗಳನ್ನು ಆತ್ಮೀಯವಾಗಿ ತಬ್ಬಿಕೊಂಡಿದ್ದಾರೆ. ಜತೆಗೆ ಡ್ಯಾನ್ಸ್‌ ಮಾಡುವ ಮೂಲಕ ತಮ್ಮ ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಸದ್ಯ ಈ ವಿಡಿಯೊ ಭಾರೀ ವೈರಲ್‌ ಆಗಿದೆ.

VISTARANEWS.COM


on

Sunita Williams
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಾಷಿಂಗ್ಟನ್:‌ ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ (Sunita Williams) ಅವರು ಮೂರನೇ ಬಾರಿಗೆ ಬಾಹ್ಯಾಕಾಶ ಯಾನ ಕೈಗೊಳ್ಳುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ನಾಸಾದ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಸಂಚರಿಸಿದ್ದ ಬೋಯಿಂಗ್‌ ಸಂಸ್ಥೆಯ ಸ್ಟಾರ್‌ಲೈನರ್ (Boeing Starliner) ಬಾಹ್ಯಾಕಾಶ ನೌಕೆ ಗುರುವಾರ (ಜೂನ್‌ 6) ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ(ISS)ದಲ್ಲಿ ಸುರಕ್ಷಿತವಾಗಿ ಇಳಿದಿದೆ. ಈ ವೇಳೆ ಸುನೀತಾ ವಿಲಿಯಮ್ಸ್‌ ಅವರು ಇತರ ಏಳು ಗಗನಯಾತ್ರಿಗಳನ್ನು ಆತ್ಮೀಯವಾಗಿ ತಬ್ಬಿಕೊಂಡಿದ್ದಾರೆ. ಜತೆಗೆ ಡ್ಯಾನ್ಸ್‌ ಮಾಡುವ ಮೂಲಕ ತಮ್ಮ ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ (Viral Video) ಆಗಿದೆ.

ಐಎಸ್ಎಸ್‌ನ ಸಂಪ್ರದಾಯದಂತೆ ಗಂಟೆ ಬಾರಿಸುವ ಮೂಲಕ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರನ್ನು ಸ್ವಾಗತಿಸಲಾಯಿತು. ಡ್ಯಾನ್ಸ್‌ ಮಾಡುತ್ತಲೇ ಅವರು ಕಾಲಿಟ್ಟರು. ಸುನೀತಾ ವಿಲಿಯಮ್ಸ್ ʼಡ್ಯಾನ್ಸ್ ಪಾರ್ಟಿʼ ಬಗ್ಗೆ ಮಾತನಾಡುತ್ತಾ, ತಮ್ಮ ಸಿಬ್ಬಂದಿಯನ್ನು ʼಮತ್ತೊಂದು ಕುಟುಂಬʼ ಎಂದು ಕರೆದಿದ್ದಾರೆ. ಅಂತಹ ದೊಡ್ಡ ಸ್ವಾಗತಕ್ಕಾಗಿ ಧನ್ಯವಾದ ಅರ್ಪಿಸಿದರು.

ಫ್ಲೊರಿಡಾದಲ್ಲಿರುವ ಕೇಪ್‌ ಕ್ಯಾನವರಲ್‌ ಸ್ಪೇಸ್‌ ಫೋರ್ಸ್‌ ಸೆಂಟರ್‌ನಿಂದ ಬಾಹ್ಯಾಕಾಶ ನೌಕೆಯನ್ನು ಉಡಾವಣೆ ಮಾಡಲಾಯಿತು. ಉಡಾವಣೆಯಾದ ಸುಮಾರು 26 ಗಂಟೆಗಳ ನಂತರ ಬಾಹ್ಯಾಕಾಶ ನೌಕೆ ಐಎಸ್‌ಎಸ್‌ನಲ್ಲಿ ಇಳಿಯಿತು. ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಬಾಹ್ಯಾಕಾಶದಲ್ಲಿ ಒಂದು ವಾರ ಕಳೆಯಲಿದ್ದಾರೆ ಮತ್ತು ವೈಜ್ಞಾನಿಕ ಪ್ರಯೋಗಗಳನ್ನು ನಡೆಸಲಿದ್ದಾರೆ. ನಾಸಾ ಬಾಹ್ಯಾಕಾಶ ವಿಜ್ಞಾನಿಗಳು ಅಭಿವೃದ್ಧಿಪಡಿಸಿದ ಆರನೇ ಬಾಹ್ಯಾಕಾಶ ನೌಕೆ ಎಂಬ ಖ್ಯಾತಿಗೆ ಸ್ಟಾರ್‌ಲೈನರ್‌ ಭಾಜನವಾಯಿತು. 

ಸುನೀತಾ ವಿಲಿಯಮ್ಸ್‌ ಬಾಹ್ಯಾಕಾಶಕ್ಕೆ ಪ್ರಯಾಣ ಬೆಳೆಸಿರುವುದು ಇದು ಮೂರನೇ ಬಾರಿ. ಈ ಹಿಂದೆ ಅವರ ಈ ಮೂರನೇ ಬಾಹ್ಯಾಕಾಶ ಪ್ರಯಾಣ ತಾಂತ್ರಿಕ ಕಾರಣಗಳಿಂದ ಎರಡು ಬಾರಿ ಮುಂದೂಡಲ್ಪಟ್ಟಿತ್ತು. ಸುನೀತಾ ವಿಲಿಯಮ್ಸ್ ಅತೀ ಹೆಚ್ಚು ಬಾರಿ ಬಾಹ್ಯಾಕಾಶಕ್ಕೆ ಹಾರಿದ ಹಾಗೂ ಬಾಹ್ಯಾಕಾಶದಲ್ಲಿ ಅಧ್ಯಯನ ನಡೆಸಿದ ಮಹಿಳಾ ಗಗನ ಯಾತ್ರಿ ಎಂದೂ ಗುರುತಿಸಲ್ಪಡುತ್ತಿದ್ದಾರೆ. ಇದುವರೆಗೆ ಸುನೀತಾ ವಿಲಿಯಮ್ಸ್ ಗರಿಷ್ಠ ಬಾಹ್ಯಾಕಾಶ ಪ್ರಯಾಣ (ಮೂರು ಬಾರಿ) ಮಾಡಿದ್ದಾರೆ. 

ಇದನ್ನೂ ಓದಿ: Sunita Williams: ಸುನೀತಾ ವಿಲಿಯಮ್ಸ್‌ ಗಗನಯಾತ್ರೆ ಮತ್ತೆ ಸ್ಥಗಿತ; ಮೇ 17ಕ್ಕೆ ಮುಂದೂಡಿಕೆ

ಗಣೇಶನ ಆರಾಧಕಿ

ವಿಶೇಷ ಎಂದರೆ ಸುನೀತಾ ಇಂದಿಗೂ ಭಾರತದೊಂದಿಗಿನ ತಮ್ಮ ನಂಟನ್ನು ಕಡಿದುಕೊಂಡಿಲ್ಲ. ಅವರು ಗಣಪತಿಯನ್ನು ಆರಾಧಿಸುತ್ತಾರೆ. ಈ ಹಿಂದೆ ಬಾಹ್ಯಾಕಾಶಕ್ಕೆ ತೆರಳುವಾಗ ಅವರು ಗಣೇಶ ವಿಗ್ರಹ ಮತ್ತು ಭಗವದ್ಗೀತೆಯನ್ನು ಕೊಂಡೊಯ್ದಿದ್ದರು. ʼʼಯಾವುದೇ ಕೆಲಸಕ್ಕೂ ಮೊದಲು ಗಣೇಶನ ಪ್ರಾರ್ಥಿಸುತ್ತೇನೆ. ಸಿದ್ಧಿ ವಿನಾಯಕ ನನ್ನ ಶುಭ ಸಂಕೇತʼʼ ಎಂದು ಅವರು ಈ ಹಿಂದೆ ಹೇಳಿದ್ದರು. ʼʼಬಾಹ್ಯಾಕಾಶ ಪ್ರಯಾಣ ಸೇರಿದಂತೆ ಯಾವುದೇ ಕೆಲಸಕ್ಕೂ ಗಣೇಶನ ಆಶೀರ್ವಾದ ನನಗೆ ಬೇಕು. ಗಣೇಶ ನನ್ನ ಎಲ್ಲ ಕಾರ್ಯಗಳಿಗೆ ಶಕ್ತಿಯಾಗಿದ್ದಾನೆ. ಪ್ರತಿ ಬಾರಿ ನಾನು ಬಾಹ್ಯಾಕಾಶ ಪ್ರಯಾಣದಲ್ಲೂ ಸಣ್ಣ ಗಣೇಶನ ವಿಗ್ರಹವನ್ನು ತೆಗೆದುಕೊಂಡು ಹೋಗುತ್ತೇನೆʼʼ ಎಂದು ಸುನೀತಾ ವಿಲಿಯಮ್ಸ್ ಹಿಂದೆ ತಿಳಿಸಿದ್ದರು. 

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Viral Video: ನೀರು ತುಂಬಿದ್ದ ರಸ್ತೆ ಗುಂಡಿಗೆ ಬಿದ್ದ ಬಾಲಕಿ; ಜೀವ ಉಳಿಸಿದ ಹುಡುಗ

Viral Video: ಮಧ್ಯಪ್ರದೇಶದ ಇಂದೋರ್‌ನಲ್ಲಿ ಭಾರೀ ಮಳೆಯ ಕಾರಣ ಅಲ್ಲಲ್ಲಿ ರಸ್ತೆ ಹಾಳಾಗಿತ್ತು. ಅದನ್ನು ರಿಪೇರಿ ಮಾಡದೇ ರಸ್ತೆ ಪ್ರಾಧಿಕಾರ ಕೂಡ ನಿರ್ಲಕ್ಷ್ಯ ತೋರಿತ್ತು. ಇದು ಬಾಲಕಿಯೊಬ್ಬಳ ಜೀವವನ್ನೇ ಅಪಾಯದಂಚಿಗೆ ದೂಡಿದ ಘಟನೆ ಇದು. ಇಂದೋರ್‌ನ ಅಮ್ಮರ್ ನಗರದಲ್ಲಿ ರಸ್ತೆ ದಾಟಲು ಪ್ರಯತ್ನಿಸುವಾಗ ಹನ್ನೆರಡು ವರ್ಷದ ಬಾಲಕಿಯೊಬ್ಬಳು 4 ಅಡಿ ಆಳದ ನೀರಿನ ಗುಂಡಿಗೆ ಬಿದ್ದಿದ್ದಾಳೆ. ನಂತರ ನೀರಿನಲ್ಲಿ ಒದ್ದಾಡುತ್ತಿದ್ದ ಬಾಲಕಿಯನ್ನು ಅಲ್ಲಿಗೆ ಬಂದ ಹುಡುಗನೊಬ್ಬ ಕಾಪಾಡಿದ್ದಾನೆ. ಈ ವಿಡಿಯೊ ಸಿಸಿಟಿವಿಯಲ್ಲಿ ಸೆರೆಯಾಗಿದೆ.

VISTARANEWS.COM


on

Viral Video
Koo

ಇಂದೋರ್: ಮಳೆಗಾಲದಲ್ಲಿ ರಸ್ತೆಗಳಲ್ಲಿ ಹೊಂಡಗಳ ಸಮಸ್ಯೆ ಸಾಮಾನ್ಯ ಎನ್ನುವಂತಾಗಿದೆ. ರಸ್ತೆಗಳಲ್ಲಿ ಅಲ್ಲಲ್ಲಿ ಹೊಂಡಗಳು, ಚರಂಡಿಗಳನ್ನು ತೆರೆದಿಡುವುದರಿಂದ ಮಳೆಗಾಲದಲ್ಲಿ ಪ್ರಾಣಕ್ಕೇ ಕುತ್ತು ಬರುವಂತಾಗುತ್ತದೆ. ಇದೀಗ ಅಂತಹದೊಂದು ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.

ಮಧ್ಯಪ್ರದೇಶದ ಇಂದೋರ್‌ನಲ್ಲಿ ಭಾರೀ ಮಳೆಯ ಕಾರಣ ಅಲ್ಲಲ್ಲಿ ರಸ್ತೆ ಹಾಳಾಗಿತ್ತು. ಅದನ್ನು ರಿಪೇರಿ ಮಾಡದೇ ರಸ್ತೆ ಪ್ರಾಧಿಕಾರ ಕೂಡ ನಿರ್ಲಕ್ಷ್ಯ ತೋರಿತ್ತು. ಇದು ಬಾಲಕಿಯೊಬ್ಬಳ ಜೀವವನ್ನೇ ಅಪಾಯದಂಚಿಗೆ ದೂಡಿದ ಸನ್ನಿವೇಶವದು. ಇಂದೋರ್‌ನ ಅಮ್ಮರ್ ನಗರದಲ್ಲಿ ರಸ್ತೆ ದಾಟಲು ಪ್ರಯತ್ನಿಸುವಾಗ ಹನ್ನೆರಡು ವರ್ಷದ ಬಾಲಕಿಯೊಬ್ಬಳು 4 ಅಡಿ ಆಳದ ನೀರಿನ ಗುಂಡಿಗೆ ಬಿದ್ದಿದ್ದಾಳೆ. ನಂತರ ನೀರಿನಲ್ಲಿ ಒದ್ದಾಡುತ್ತಿದ್ದ ಬಾಲಕಿಯನ್ನು ಅಲ್ಲಿಗೆ ಬಂದ ಹುಡುಗನೊಬ್ಬ ಕಾಪಾಡಿದ್ದಾನೆ. ಈ ವಿಡಿಯೊ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬಾಲಕಿ ಅಜ್ಜಿಯ ಜೊತೆಗೆ ರಸ್ತೆ ದಾಟಲು ಮುಂದಾಗಿದ್ದಾಳೆ. ಅಜ್ಜಿ ಮುಂದೆ ಹೋಗಿದ್ದು, ಹಿಂದಿನಿಂದ ಬಂದ ಹುಡುಗಿ ರಸ್ತೆಯಲ್ಲಿ ಸಣ್ಣ ಹೊಂಡವೆಂದು ನೀರಿಗೆ ಕಾಲಿಡಲು ಪ್ರಯತ್ನಿಸಿದ್ದಾಳೆ. ಆಗ ಬ್ಯಾಲೆನ್ಸ್ ತಪ್ಪಿ ಬಾಲಕಿ 4 ಅಡಿ ಆಳದ ನೀರಿನ ಗುಂಡಿಗೆ ಬಿದ್ದಿದ್ದಾಳೆ. ಆಕೆ ಮುಳುಗಿ ನಂತರ ಸಮತೋಲನ ಮಾಡಿ ಗುಂಡಿಯ ಬದಿಗೆ ಬಂದಿದ್ದಾಳೆ. ಆಕೆ ಗುಂಡಿಯಿಂದ ಹೊರಗೆ ಬರಲು ಹೆಣಗಾಡುತ್ತಿರುವಾಗ ಅಲ್ಲಿಗೆ ಬಂದ ಹುಡುಗನೊಬ್ಬ ಆಕೆಯನ್ನು ಮೇಲಕ್ಕೆ ಎತ್ತಿದ್ದಾನೆ. ಇದರಿಂದ ಆಕೆಯ ಜೀವ ಉಳಿದಿದೆ.

ಇದನ್ನೂ ಓದಿ: ಹೆಂಡತಿಯನ್ನು ಯಾಮಾರಿಸಿ ಪ್ರೇಯಸಿಯನ್ನು ಮನೆಗೆ ಕರೆಸಬಾರದಿತ್ತು! ಗೂಸಾ ತಿಂದವನ ಪ್ರತಿಕ್ರಿಯೆ!

ಮಾಹಿತಿಯ ಪ್ರಕಾರ, ನಿರ್ಮಾಣ ಕಾರ್ಯಕ್ಕಾಗಿ ರಸ್ತೆ ಪ್ರಾಧಿಕಾರದ ಅಧಿಕಾರಿಗಳು ಗುಂಡಿಯನ್ನು ಅಗೆದಿದ್ದರು ಆದರೆ ಅದನ್ನು ಮುಚ್ಚದೆ ಹಾಗೇ ಬಿಟ್ಟಿದ್ದರು. ಅದು ಮಳೆಯ ಸಮಯದಲ್ಲಿ ತುಂಬಿದ್ದರಿಂದ ಈ ಘಟನೆ ಸಂಭವಿಸಿದೆ. ಚಂದನ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಅಮ್ಮರ್ ನಗರದ ವಾರ್ಡ್ ನಂ.1ರಲ್ಲಿ ಜೂನ್ 29ರಂದು ಈ ಘಟನೆ ನಡೆದಿದೆ. ಇಡೀ ಘಟನೆಯನ್ನು ಅಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದ್ದು, ಅದು ಬುಧವಾರ ವೈರಲ್ ಆಗಿದೆ. ಆದರೆ ಈ ಘಟನೆಯ ಬಗ್ಗೆ ಯಾವುದೇ ಮಾಹಿತಿ ಅಥವಾ ದೂರು ದಾಖಲಾಗಿಲ್ಲ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ.

Continue Reading

Latest

Viral Video: ಬುಲೆಟ್‌ ಮೇಲೆ ಬಂದ ಹುಡುಗಿ ಆಟೊ ಚಾಲಕನ ಬುರುಡೆ ಒಡೆದಳು!

Viral Video: ದೆಹಲಿಯ ನಿಹಾಲ್ ವಿಹಾರ್‌ ರಸ್ತೆಯೊಂದರಲ್ಲಿ ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಆಟೋ ಚಾಲಕ ಟ್ರಾಫಿಕ್‌ನಿಂದಾಗಿ ತನ್ನ ವಾಹನವನ್ನು ನಿಲ್ಲಿಸಿದಾನೆ. ಆಗ ಹಿಂದೆ ಬುಲೆಟ್‌ನಲ್ಲಿ ಬಂದ ಯುವತಿ ಆಟೋ ಚಾಲಕನಿಗೆ ಹಾರ್ನ್ ಮಾಡಿದ್ದಾಳೆ. ಆದರೆ ಆತನಿಗೆ ವಾಹನವೊಂದು ರಸ್ತೆಗೆ ತಡಲಾಗಿ ನಿಂತಿದ್ದರಿಂದ ತನ್ನ ಆಟೋವನ್ನು ಮುಂದೆ ಸಾಗಿಸಲು ಸಾಧ್ಯವಾಗಲಿಲ್ಲ. ನಂತರ ಯುವತಿ ತಾಳ್ಮೆ ಕಳೆದುಕೊಂಡು ಆಟೊ ಚಾಲಕನೊಂದಿಗೆ ಗಲಾಟೆಗೆ ಇಳಿದಿದ್ದಾಳೆ, ಆಟೋ ಚಾಲಕನ ಮೇಲೆ ಕಬ್ಬಿಣದ ಉಪಕರಣದಿಂದ ಹಲ್ಲೆ ಮಾಡಿದ್ದಾಳೆ.

VISTARANEWS.COM


on

Viral Video
Koo

ಟ್ರಾಫಿಕ್ ಸಮಸ್ಯೆ ಎಲ್ಲೆಂದರಲ್ಲಿ ಕಂಡುಬರುವುದು ಸಾಮಾನ್ಯ. ಕೆಲವೊಂದು ಕಡೆ ರಸ್ತೆಗಳ ಸಮಸ್ಯೆಯಿಂದಾಗಿ ವಾಹನಗಳು ಮುಂದೆ ಚಲಾಯಿಸಲಾಗದೆ ಗಂಟೆಗಟ್ಟಲೆ ಅಲ್ಲೇ ನಿಂತು ಕಾಯುವಂತಾಗುತ್ತದೆ. ಇದರಿಂದ ಕೆಲಸಕ್ಕೆ ಹೋಗುವವರು, ಶಾಲಾ ಮಕ್ಕಳಿಗೆ ತುಂಬಾ ಸಮಸ್ಯೆಯಾಗುತ್ತದೆ. ದೆಹಲಿ, ಬೆಂಗಳೂರಿನಂತಹ ಸಿಟಿಗಳಲ್ಲಿ ಈ ಸಮಸ್ಯೆ ಸಾಮಾನ್ಯ. ಇದೀಗ ಇಂತಹ ಟ್ರಾಫಿಕ್‌ನಿಂದಾಗಿ ರೊಚ್ಚಿಗೆದ್ದ ಯುವತಿಯೊಬ್ಬಳು ಆಟೋ ಚಾಲಕನ ಮೇಲೆ ಕಬ್ಬಿಣದ ಉಪಕರಣದಿಂದ ಹಲ್ಲೆ ಮಾಡಿದ ಘಟನೆ ದೆಹಲಿಯ ನಿಹಾಲ್ ವಿಹಾರ್‌ನಲ್ಲಿ ನಡೆದಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದ ಪೋಸ್ಟ್ ಆಗಿದ್ದು, ಸಖತ್ ವೈರಲ್ (Viral Video) ಆಗಿ ಚರ್ಚೆಗೆ ಕಾರಣವಾಗಿದೆ.

ದೆಹಲಿಯ ನಿಹಾಲ್ ವಿಹಾರ್‌ನ ರಸ್ತೆಯೊಂದರಲ್ಲಿ ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಆಟೋ ಚಾಲಕ ಟ್ರಾಫಿಕ್‍ನಿಂದಾಗಿ ತನ್ನ ವಾಹನವನ್ನು ನಿಲ್ಲಿಸಿದಾನೆ. ಆಗ ಹಿಂದೆ ಬುಲೆಟ್‍ನಲ್ಲಿ ಬಂದ ಯುವತಿ ಆಟೋ ಚಾಲಕನಿಗೆ ಹಾರ್ನ್ ಮಾಡಿದ್ದಾಳೆ. ಆದರೆ ಆತನಿಗೆ ವಾಹನವೊಂದು ರಸ್ತೆಗೆ ತಡಲಾಗಿ ನಿಂತಿದ್ದರಿಂದ ತನ್ನ ಆಟೋವನ್ನು ಮುಂದೆ ಸಾಗಿಸಲು ಸಾಧ್ಯವಾಗಲಿಲ್ಲ. ನಂತರ ಯುವತಿ ತಾಳ್ಮೆ ಕಳೆದುಕೊಂಡು ಆಟೊ ಚಾಲಕನೊಂದಿಗೆ ಗಲಾಟೆಗೆ ಇಳಿದಿದ್ದಾಳೆ, ನಂತರ ಕೋಪಗೊಂಡು ಕಬ್ಬಿಣದ ಉಪಕರಣದಿಂದ ಆಟೋ ಚಾಲಕನ ಮೇಲೆ ದೈಹಿಕವಾಗಿ ಹಲ್ಲೆ ಮಾಡಿದ್ದಾಳೆ. ಇದರಿಂದ ಆತನ ತಲೆಗೆ ಗಾಯವಾಗಿ ರಕ್ತ ಸೋರಿದೆ.

ವಿಡಿಯೊದಲ್ಲಿ ಯುವತಿ ಕಬ್ಬಿಣದ ಉಪಕರಣದಿಂದ ಆಟೋ ಚಾಲಕನನ್ನು ಅಟ್ಟಾಡಿಸಿಕೊಂಡು ಹೊಡೆಯುವುದನ್ನು ಕಾಣಬಹುದು. ಅಲ್ಲಿದ್ದವರು ಆಕೆಯನ್ನು ತಡೆದರೂ ಕೇಳದ ಯುವತಿ ಮತ್ತೆ ಆತನಿಗೆ ಹೊಡೆದಿದ್ದಾಳೆ. ಚಾಲಕನ ತಲೆಯಲ್ಲಿ ರಕ್ತ ಸೋರುತ್ತಿರುವುದು ಕಂಡುಬಂದಿದೆ. ಇಷ್ಟಾದರೂ ಯುವತಿ ವಾಗ್ದಾಳಿ ನಡೆಸುವುದನ್ನು ನಿಲ್ಲಿಸಿಲ್ಲ. ಈ ಘಟನೆಯನ್ನು ನೋಡುಗರು ವಿಡಿಯೊ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಇದು ಜನರ ಗಮನ ಸೆಳೆದಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ನಡುರಸ್ತೆಯಲ್ಲೇ ಕಳ್ಳರು ಬ್ಯಾಗ್‌ ಕಸಿದು ಓಡುತ್ತಾರೆ! ಪೋಲಿಸ್ರು ಏನ್‌ ಮಾಡ್ತಿದ್ದಾರೋ!

ಈ ಘಟನೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದೆ. ರಸ್ತೆ ಶಿಷ್ಟಾಚಾರ, ಸುರಕ್ಷತೆ ಮತ್ತು ಅಂತಹ ಘರ್ಷಣೆಗಳನ್ನು ತಡೆಗಟ್ಟುವಲ್ಲಿ ಕಾನೂನು ಜಾರಿಯ ಪಾತ್ರದ ಬಗ್ಗೆ ಜನರು ಚರ್ಚೆ ಮಾಡಿದ್ದಾರೆ. ದೆಹಲಿಯಂತಹ ಮೆಟ್ರೋಪಾಲಿಟನ್ ಪ್ರದೇಶಗಳಲ್ಲಿ ರಸ್ತೆ ಮೂಲಸೌಕರ್ಯಗಳಲ್ಲಿ ಸಮಸ್ಯೆ ಎದುರಿಸುತ್ತಿರುವುದನ್ನು ಕಂಡು ಆಶ್ವರ್ಯವಾಗಿದೆ. ಕಿಕ್ಕಿರಿದ ರಸ್ತೆಗಳಲ್ಲಿ ಸಂಚರಿಸುವಾಗ ಸುರಕ್ಷತೆ ಮತ್ತು ಪರಸ್ಪರ ಗೌರವಕ್ಕೆ ಆದ್ಯತೆ ನೀಡುವಂತೆ ಚಾಲಕರಿಗೆ ಮನದಟ್ಟು ಮಾಡಲಾಗಿದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ತಡೆಯಲು ರಸ್ತೆ ಸುರಕ್ಷತೆ ಮತ್ತು ಜವಾಬ್ದಾರಿಯುತ ಚಾಲನೆಯ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನಗಳು ನಡೆಯಬೇಕಿದೆ ಎಂದು ಹೇಳಲಾಗಿದೆ.

Continue Reading

Latest

Viral News: ಚಾಲಕನ ಹೆಸರು ʼಯಮರಾಜʼ ಎನ್ನುವುದು ಗೊತ್ತಾಗುತ್ತಲೇ ಕ್ಯಾಬ್ ಬುಕಿಂಗ್‌ ಕ್ಯಾನ್ಸಲ್‌ ಮಾಡಿದ ಗ್ರಾಹಕ!

Viral News: ಮೊದಲೆಲ್ಲ ಬಸ್, ಆಟೊಗಳಿಗಾಗಿ ಕಾಯುತ್ತಿದ್ದರು. ಆದರೆ ಈ ಬುಕ್ಕಿಂಗ್ ಮಾಡಿ ಕಣ್ಮುಚ್ಚಿ ತೆರೆಯುವುದರೊಳಗೆ ಮನೆ ಮುಂದೆ ಕ್ಯಾಬ್ ಬಂದು ನಿಲ್ಲುತ್ತದೆ. ಅಲ್ಲದೇ ಓಲಾ ಮತ್ತು ಉಬರ್‌ನಂತಹ ಕ್ಯಾಬ್ ಕಂಪನಿಗಳು ತಮ್ಮ ಗ್ರಾಹಕರಿಗೆ ಹೆಚ್ಚಿನ ಸುರಕ್ಷತೆಗಾಗಿ ಕಂಪನಿಗಳು, ಡ್ರೈವರ್ ಹೆಸರುಗಳು ಮತ್ತು ಸ್ಥಳಗಳ ಬಗ್ಗೆ ಮೊದಲೇ ಮಾಹಿತಿ ನೀಡುತ್ತವೆ, ಹಾಗೇ ಇದರಲ್ಲಿ ಗ್ರಾಹಕರು ತಮ್ಮ ಬುಕಿಂಗ್ ಅನ್ನು ರದ್ದುಗೊಳಿಸುವ ಆಯ್ಕೆಯನ್ನು ಸಹ ಹೊಂದಿದ್ದಾರೆ. ಬುಕ್ಕಿಂಗ್ ಮಾಡಿದ ಪ್ರಯಾಣಿಕರೊಬ್ಬರು ಡ್ರೈವರ್ ಹೆಸರು ನೋಡಿ ಬುಕ್ಕಿಂಗ್ ಕ್ಯಾನ್ಸಲ್ ಮಾಡಿದ ತಮಾಷೆಯ ಘಟನೆಯೊಂದು ನಡೆದಿದೆ.

VISTARANEWS.COM


on

Viral News
Koo

ಇತ್ತೀಚಿನ ದಿನಗಳಲ್ಲಿ ಸಿಟಿಯಲ್ಲಿ ವಾಸಿಸುವ ಜನರು ಆಟೊಗಳಿಗಿಂತ ಹೆಚ್ಚು ಕ್ಯಾಬ್‌ಗಳನ್ನು ಬುಕ್ ಮಾಡಿಕೊಂಡು ಹೋಗುತ್ತಾರೆ. ಇದು ತುಂಬಾ ಸುಲಭ ಮತ್ತು ಕಡಿಮೆ ದರಗಳಲ್ಲಿ ನೀವು ಯಾವುದೇ ಭಯವಿಲ್ಲದೆ ನಿಮಗಿಷ್ಟ ಬಂದ ಕಡೆ ಹೋಗಬಹುದು. ಅಲ್ಲದೇ ಓಲಾ ಮತ್ತು ಉಬರ್‌ನಂತಹ ಕ್ಯಾಬ್ ಕಂಪನಿಗಳು ತಮ್ಮ ಗ್ರಾಹಕರಿಗೆ ಹೆಚ್ಚಿನ ಸುರಕ್ಷತೆಗಾಗಿ ಡ್ರೈವರ್ ಹೆಸರುಗಳು ಮತ್ತು ಸ್ಥಳಗಳ ಬಗ್ಗೆ ಮೊದಲೇ ಮಾಹಿತಿ ನೀಡುತ್ತವೆ. ಹಾಗೇ ಇದರಲ್ಲಿ ಗ್ರಾಹಕರು ತಮ್ಮ ಬುಕಿಂಗ್ ಅನ್ನು ರದ್ದುಗೊಳಿಸುವ ಆಯ್ಕೆಯನ್ನು ಸಹ ಹೊಂದಿದ್ದಾರೆ. ಆದರೆ ಈ ಸುರಕ್ಷತೆಯ ಸೌಲಭ್ಯಗಳು ಈಗ ಕ್ಯಾಬ್ ಕಂಪನಿಗಳಿಗೆ ಸಮಸ್ಯೆಯನ್ನುಂಟುಮಾಡಿದೆ. ಯಾಕೆಂದರೆ ಕ್ಯಾಬ್ ಡ್ರೈವರ್ ಹೆಸರು ತಿಳಿದು ವ್ಯಕ್ತಿಯೊಬ್ಬ ಬುಕ್ಕಿಂಗ್ ಅನ್ನು ರದ್ದು ಮಾಡಿದ್ದು, ಈ ತಮಾಷೆಯ ಕಾರಣದಿಂದ ಈ ಸುದ್ದಿ ಸಖತ್ ವೈರಲ್ (Viral News) ಆಗಿದೆ.

ಈ ವೈರಲ್ ಪೋಸ್ಟ್ ಅನ್ನು @timepassstruggler ಎಂಬ ಇನ್‍ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ಇದು ಓಲಾದಿಂದ ಬಂದ ಸಂದೇಶದ ಸ್ಕ್ರೀನ್‍ಶಾಟ್ ಆಗಿದೆ. ಅದರಲ್ಲಿ “ಯಮರಾಜ ಆಗಮಿಸಿದ್ದಾರೆ ಮತ್ತು ನಿಮ್ಮ ಸ್ಥಳದಲ್ಲಿ ಕಾಯುತ್ತಿದ್ದಾರೆ” ಎಂದು ಬರೆಯಲಾಗಿತ್ತು. ಈ ಬಗ್ಗೆ ನೀಡಿದ ವಿವರಣೆಯಲ್ಲಿ ಕರ್ನಾಟಕದಲ್ಲಿ ಯಾರೋ ಒಬ್ಬರು ಓಲಾ ಕ್ಯಾಬ್ ಬುಕ್ ಮಾಡಿದ್ದರು. ಆದರೆ ಚಾಲಕನ ಹೆಸರು ʼಯಮರಾಜʼ ಎಂದು ನೋಡಿದ ನಂತರ ಅದನ್ನು ರದ್ದುಗೊಳಿಸಿದರು ಎನ್ನಲಾಗಿದೆ.

ಹಿಂದೂ ಧರ್ಮದ ಪ್ರಕಾರ, ಯಮರಾಜನು ಸಾವಿನ ದೇವರು. ಆತ ಬಂದಿದ್ದಾನೆ ಎಂದರೆ ಸಾವು ನಮ್ಮ ಹತ್ತಿರದಲ್ಲಿದೆ ಎಂಬ ನಂಬಿಕೆ ನಮ್ಮಲಿದೆ. ಆದ್ದರಿಂದ, ಯಮರಾಜ ಆಗಮಿಸಿದ್ದಾರೆ ಮತ್ತು ನಿಮ್ಮ ಸ್ಥಳದಲ್ಲಿ ಕಾಯುತ್ತಿದ್ದಾರೆ ಎಂದು ಬರೆದ ಮೆಸೇಜ್ ನೋಡಿ ಗ್ರಾಹಕರು ಹೆದರಿ ಕ್ಯಾಬ್ ಬುಕ್ಕಿಂಗ್ ಅನ್ನು ರದ್ದುಗೊಳಿಸಿದ್ದಾರೆ ಎಂದು ತಿಳಿಸುವ ಮೂಲಕ ಆಶ್ವರ್ಯವನ್ನುಂಟು ಮಾಡಿದ್ದಾರೆ.

ಇದನ್ನೂ ಓದಿ: ಭೋಲೆ ಬಾಬಾ ಇರುತ್ತಿದ್ದುದು ಫೈವ್‌ ಸ್ಟಾರ್‌ ಆಶ್ರಮದಲ್ಲಿ! ಅವರಿಗಿದೆ ಅಪಾರ ಆಸ್ತಿ!

ಇದೇ ತರಹದ ಘಟನೆ ಕಳೆದ ಜನವರಿಯಲ್ಲಿ ನಡೆದಿದ್ದು, ಇದು ಆನ್‌ಲೈನ್ ನಲ್ಲಿ ವೈರಲ್ ಆಗಿತ್ತು. ಅದನ್ನು @ashimhta ಎಂಬ ಬಳಕೆದಾರರು ತಮ್ಮ ಪೇಜ್‍ನಲ್ಲಿ ಹಂಚಿಕೊಂಡಿದ್ದಾರೆ. ಆಕೆ ತನ್ನ ಉಬರ್ ಡ್ರೈವರ್ ನಡುವಿನ ಸಂಭಾಷಣೆಯ ಸ್ಕ್ರೀನ್‍ಶಾಟ್ ಅನ್ನು ಹಂಚಿಕೊಂಡಿದ್ದು, ಇದರಲ್ಲಿ ಭರತ್ ಎಂಬ ಚಾಲಕ “ಈ ಬುಕ್ಕಿಂಗ್ ಅನ್ನು ರದ್ದುಗೊಳಿಸಿ, ನನಗೆ ನಿದ್ರೆ ಬರುತ್ತಿದೆ” ಎಂದು ಮೆಸೇಜ್ ಕಳುಹಿಸಿದರು. ತನಗೆ ತುಂಬಾ ಸುಸ್ತಾಗಿದೆ. ಹಾಗಾಗಿ ಬರಲು ಆಗಲ್ಲ ಎಂದಿದ್ದ ಮೆಸೇಜ್‌ನ ಸ್ಕ್ರೀನ್‍ಶಾಟ್ ಅನ್ನು ಪೋಸ್ಟ್ ಮಾಡಿದ್ದಾರೆ.

Continue Reading

Latest

Viral Video: ಹೆಂಡತಿಯನ್ನು ಯಾಮಾರಿಸಿ ಪ್ರೇಯಸಿಯನ್ನು ಮನೆಗೆ ಕರೆಸಬಾರದಿತ್ತು! ಗೂಸಾ ತಿಂದವನ ಪ್ರತಿಕ್ರಿಯೆ!

Viral Video: ವ್ಯಕ್ತಿಯೊಬ್ಬ ಮಹಿಳೆಯನ್ನು ಮನೆಗೆ ಕರೆತಂದ್ದ. ಇದು ಅಕ್ರಮ ಸಂಬಂಧವೆಂದು ನಿರ್ಧರಿಸಿ ಗ್ರಾಮ ಸಭೆಯಲ್ಲಿ ಇವರಿಬ್ಬರಿಗೆ ಸಾರ್ವಜನಿಕವಾಗಿ ಥಳಿತಕ್ಕೆ ಒಳಗಾಗುವಂತೆ ಶಿಕ್ಷೆ ವಿಧಿಸಲಾಗಿತ್ತು. ಈ ವಿಡಿಯೊ ವೈರಲ್ ಆದ ಕೆಲವು ದಿನಗಳ ನಂತರ ಸುದ್ದಿವಾಹಿನಿಯೊಂದರಲ್ಲಿ ಮಾತನಾಡಿದ ಸಂತ್ರಸ್ತ ವ್ಯಕ್ತಿ, ಈ ಘಟನೆಗೆ ಕಾರಣವೇನು ಎಂಬುದರ ಬಗ್ಗೆ ವಿವರಣೆ ನೀಡಿರುವುದ ಜೊತೆಗೆ ಈ ಘಟನೆ ಆಗಿದ್ದು ಒಳ್ಳೆಯದೇ ಆಯಿತು ಎಂದು ಹೇಳುವ ಮೂಲಕ ಅಚ್ಚರಿ ಉಂಟು ಮಾಡಿದ್ದಾನೆ.

VISTARANEWS.COM


on

Viral Video
Koo

ಪಶ್ಚಿಮ ಬಂಗಾಳದ ಉತ್ತರ ದಿನಾಜ್ಪುರ ಜಿಲ್ಲೆಯ ಚೋಪ್ರಾದಲ್ಲಿ ಪುರುಷ ಮತ್ತು ಮಹಿಳೆಗೆ ಸಾರ್ವಜನಿಕವಾಗಿ ಥಳಿಸಿದ್ದು ಭಾರಿ ಸುದ್ದಿಯಾಗಿತ್ತು. ಈ ಘಟನೆಗೆ ಸಂಬಂಧಪಟ್ಟ ದೃಶ್ಯ ವೈರಲ್ (Viral Video) ಆಗಿತ್ತು. ಹಾಗಾಗಿ ಈ ಬಗ್ಗೆ ಜನಾಕ್ರೋಶ ವ್ಯಕ್ತವಾಗಿತ್ತು. ದುಷ್ಕರ್ಮಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಲಾಗಿತ್ತು. ಆದರೆ ಈಗ, ಭೀಕರವಾಗಿ ಹಲ್ಲೆಗೊಳಗಾದ ವ್ಯಕ್ತಿ ಮಾತ್ರ ʼಆಗಿದ್ದೆಲ್ಲಾ ಒಳ್ಳೆಯದಕ್ಕೆʼ ಎಂದು ಹೇಳುವ ಮೂಲಕ ಆಶ್ಚರ್ಯನ್ನುಂಟುಮಾಡಿದ್ದಾನೆ!

ವೈರಲ್ ಆಗಿರುವ ವೀಡಿಯೊದಲ್ಲಿ ವ್ಯಕ್ತಿಯೊಬ್ಬ ದಂಪತಿಯನ್ನು ಬಿದಿರಿನ ಕೋಲಿನಿಂದ ಪದೇಪದೇ ಹೊಡೆಯುವುದನ್ನು ತೋರಿಸುತ್ತದೆ. ಸುತ್ತಲೂ ಜನರು ನಿಂತಿರುವುದು ಕಾಣಿಸುತ್ತದೆ. ಆದರೆ ಯಾರು ಈ ದಂಪತಿಯ ಸಹಾಯಕ್ಕೆ ಬರುತ್ತಿಲ್ಲ. ಸ್ಥಳೀಯ ಟಿಎಂಸಿ ನಾಯಕ ತಜ್ಜಿಮುಲ್ ಹಕ್ ಅವರ ನಿರ್ದೇಶನದಲ್ಲಿ ಈ ದಾಳಿ ನಡೆದಿದೆ ಎಂದು ಆರೋಪಿಸಲಾಗಿತ್ತು.

ಈ ವಿಡಿಯೊ ವೈರಲ್ ಆದ ಕೆಲವು ದಿನಗಳ ನಂತರ ಸುದ್ದಿವಾಹಿನಿಯೊಂದರಲ್ಲಿ ಮಾತನಾಡಿದ ಸಂತ್ರಸ್ತ ವ್ಯಕ್ತಿ, ಈ ಘಟನೆಗೆ ಕಾರಣವೇನು ಎಂಬುದರ ಬಗ್ಗೆ ವಿವರಣೆ ನೀಡಿರುವುದ ಜೊತೆಗೆ ಈ ಘಟನೆ ಆಗಿದ್ದು ಒಳ್ಳೆಯದೇ ಆಯಿತು ಎಂದು ಹೇಳುವ ಮೂಲಕ ಅಚ್ಚರಿ ಉಂಟು ಮಾಡಿದ್ದಾನೆ. ನಾನೊಬ್ಬ ವಿವಾಹಿತ. ಆದರೆ ನಾನು ಹೆಂಡತಿಗೆ ಮೋಸ ಮಾಡಿ ಮತ್ತೊಬ್ಬ ವಿವಾಹಿತ ಮಹಿಳೆಯನ್ನು ಮನೆಗೆ ಕರೆತಂದು ಮೋಜು ಮಾಡುತ್ತಿದ್ದೆ. ಬಳಿಕ ಗ್ರಾಮಸ್ಥರ ಕೈಗೆ ಸಿಕ್ಕಿ ಬಿದ್ದೆ. ಗ್ರಾಮ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರದಂತೆ ನಮಗಿಬ್ಬರಿಗೆ ನಡು ರಸ್ತೆಯಲ್ಲಿ ಬೆತ್ತದಿಂದ ಬಾರಿಸಲಾಯಿತು. ನನ್ನದೇ ತಪ್ಪಾಗಿರುವುದರಿಂದ ಈ ಬಗ್ಗೆ ಯಾರ ವಿರುದ್ಧವೂ ದೂರು ನೀಡುವುದಿಲ್ಲ ಎಂಬುದಾಗಿ ಆತ ತಿಳಿಸಿದ್ದಾನೆ. ಈಗ ಏನು ನಡೆಯಿತೋ ಅದು ಒಳ್ಳೆಯದೆ ಆಗಿದೆ. ಇದರಿಂದ ಈಗ ನನ್ನ ಪತ್ನಿಯ ಜೊತೆಗೆ ಶಾಂತಿಯಿಂದ ಬದುಕಬಹುದು ಎಂದಾತ ಖುಷಿ ವ್ಯಕ್ತಪಡಿಸಿದ್ದಾನೆ.

ಇದನ್ನೂ ಓದಿ: ಭೋಲೆ ಬಾಬಾ ಇರುತ್ತಿದ್ದುದು ಫೈವ್‌ ಸ್ಟಾರ್‌ ಆಶ್ರಮದಲ್ಲಿ! ಅವರಿಗಿದೆ ಅಪಾರ ಆಸ್ತಿ!

Continue Reading
Advertisement
Hardik Pandya
ಪ್ರಮುಖ ಸುದ್ದಿ9 mins ago

Hardik Pandya : ಅವಮಾನ ಮಾಡಿದ ಪ್ರೇಕ್ಷಕರಿಂದಲೇ ಜೈಕಾರ ಹಾಕಿಸಿಕೊಂಡ ಹಾರ್ದಿಕ್ ಪಾಂಡ್ಯ!

Heavy rain in Uttara Kannada district district NDRF team for rescue says DC Gangubai Manakar
ಉತ್ತರ ಕನ್ನಡ11 mins ago

Uttara Kannada News: ಉ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆ, ರಕ್ಷಣೆಗೆ ಎನ್.ಡಿ.ಆರ್.ಎಫ್ ತಂಡ

Central Govt approves quadrilateral road in Shira at a cost of Rs 1000 rs crore says TB Jayachandra
ತುಮಕೂರು12 mins ago

Shira News: ಶಿರಾದಲ್ಲಿ 1,000 ಕೋಟಿ ರೂ. ವೆಚ್ಚದಲ್ಲಿ ಚತುಷ್ಪಥ ರಸ್ತೆಗೆ ಕೇಂದ್ರದಿಂದ ಅನುಮೋದನೆ: ಟಿ.ಬಿ ಜಯಚಂದ್ರ

Viral Video
Latest15 mins ago

Viral Video: ನೀರು ತುಂಬಿದ್ದ ರಸ್ತೆ ಗುಂಡಿಗೆ ಬಿದ್ದ ಬಾಲಕಿ; ಜೀವ ಉಳಿಸಿದ ಹುಡುಗ

Robot Suicide
ತಂತ್ರಜ್ಞಾನ43 mins ago

Robot Suicide: ದ. ಕೊರಿಯಾದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೋಬೋಟ್! ಕೆಲಸದ ಹೊರೆ ಕಾರಣ?

Muda site allocation Politically motivated allegation says CM Siddaramaiah
ಕರ್ನಾಟಕ47 mins ago

CM Siddaramaiah: ನಮಗೆ ನಿವೇಶನ ಕೊಟ್ಟಿರುವುದು ತಪ್ಪು ಎಂದರೆ ಪರಿಹಾರ ಕೊಡಲಿ; ಸಿದ್ದರಾಮಯ್ಯ ಸವಾಲು

Narendra modi
ಪ್ರಮುಖ ಸುದ್ದಿ49 mins ago

Narendra Modi : ಭಾರತ ತಂಡಕ್ಕೆ ಆತಿಥ್ಯ ನೀಡಿದ ಬಳಿಕ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ ನರೇಂದ್ರ ಮೋದಿ

LK Advani
ದೇಶ1 hour ago

LK Advani: ಎಲ್‌.ಕೆ. ಅಡ್ವಾಣಿ ಆರೋಗ್ಯದಲ್ಲಿ ಚೇತರಿಕೆ; ಆಸ್ಪತ್ರೆಯಿಂದ ಡಿಸ್‌ಚಾರ್ಜ್‌

Kannada New Movie Kadalura Kanmani will release soon
ಕರ್ನಾಟಕ1 hour ago

Kannada New Movie: ಶೀಘ್ರದಲ್ಲೇ ತೆರೆಗೆ ಬರಲಿದೆ ‘ಕಡಲೂರ ಕಣ್ಮಣಿ’ ಚಿತ್ರ

Zircon Jewellery Fashion
ಫ್ಯಾಷನ್1 hour ago

Zircon Jewellery Fashion: ಹೈ ಫ್ಯಾಷನ್‌ ಜ್ಯುವೆಲರಿ ಲಿಸ್ಟ್‌ಗೆ ಸೇರಿದ ವೈವಿಧ್ಯಯಮಯ ಜಿರ್ಕೊನ್‌ ಆಭರಣಗಳ ಹಂಗಾಮಾ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ4 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ5 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ7 hours ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ7 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ8 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ9 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

ಟ್ರೆಂಡಿಂಗ್‌