Viral Video : ತನ್ನ ಪ್ರಯಾಣಿಕರಿಗೆಂದು ವಿಶೇಷ ಆಟಗಳನ್ನು ಪರಿಚಯಿಸಿದ ಉಬರ್‌ ಡ್ರೈವರ್‌! - Vistara News

ವೈರಲ್ ನ್ಯೂಸ್

Viral Video : ತನ್ನ ಪ್ರಯಾಣಿಕರಿಗೆಂದು ವಿಶೇಷ ಆಟಗಳನ್ನು ಪರಿಚಯಿಸಿದ ಉಬರ್‌ ಡ್ರೈವರ್‌!

ಉಬರ್‌ ಚಾಲಕನೊಬ್ಬ ತನ್ನ ಪ್ರಯಾಣಿಕರಿಗೆಂದು ವಿಶೇಷ ಆಟಗಳನ್ನು ತಯಾರಿಸಿ ಟ್ಯಾಬ್‌ನಲ್ಲಿ ನೀಡುವ ವಿಶೇಷ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ವೈರಲ್‌ (Viral Video) ಆಗಿದೆ.

VISTARANEWS.COM


on

uber game video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿರುವವರು ಉಬರ್‌ನಲ್ಲಿ ಪ್ರಯಾಣ ಮಾಡಿರುತ್ತೀರಿ. ಉಬರ್‌ನಲ್ಲಿ ನೀವು ಪ್ರಯಾಣ ಮಾಡುವಾಗ ನಿಮ್ಮ ಬೇಜಾರು ಕಳೆಯಲೆಂದು ಫೋನ್‌ ಹಿಡಿದು ಕುಳಿತಿರುತ್ತೀರಲ್ಲವೇ? ಒಂದು ವೇಳೆ ಉಬರ್‌ನಲ್ಲಿ ಬೇಜಾರು ಕಳೆಯಲೆಂದೇ ಅದರ ಚಾಲಕ ವಿಶೇಷ ಆಟಗಳನ್ನು ಕಾರಿನ ಟ್ಯಾಬ್‌ನಲ್ಲಿ ಕೊಟ್ಟರೆ ಹೇಗಿರುತ್ತದೆ? ಊಹಿಸಿಕೊಳ್ಳುವುದಕ್ಕೆ ಸ್ವಲ್ಪ ಕಷ್ಟವಾಗುತ್ತಿದೆಯೇ? ಹಾಗಾದರೆ ಇಲ್ಲೊಂದು ವಿಶೇಷವಾದ ವಿಡಿಯೊವಿದೆ (Viral Video) ನೋಡಿ.

ಉಬರ್‌ನ ಚಾಲಕ ವಲ್ಲೇಸ್‌ ತನ್ನ ಪ್ರಯಾಣಿಕರಿಗೆಂದು ಹೊಸ ಹೊಸ ಆಟಗಳನ್ನು ಸೃಷ್ಟಿಸಿದ್ದಾನೆ. ಕಾರಿನಲ್ಲಿ ಡ್ರೈವರ್‌ ಸೀಟಿನ ಹಿಂಭಾಗಕ್ಕೆ ನೀಡಲಾಗಿರುವ ಟ್ಯಾಬ್‌ನಲ್ಲಿ ಆ ಆಟಗಳನ್ನು ನೀಡಲಾಗಿದೆ. ಅದರಲ್ಲಿ ವಲ್ಲೇಸ್‌ ಬಗ್ಗೆ ಹಲವಾರು ಪ್ರಶ್ನೆಗಳಿದ್ದು, ಪ್ರಯಾಣಿಕರು ಅದಕ್ಕೆ ಉತ್ತರಿಸುತ್ತ ಹೋಗಬೇಕು. ವಲ್ಲೇಸ್‌ ಕುಟುಂಬಕ್ಕೆ ಆತನನ್ನು ಕರೆದೊಯ್ದು ಬಿಡುವುದೂ ಕೂಡ ಒಂದು ಆಟವೇ. ಒಂದು ವೇಳೆ ನಿಮ್ಮ ಉತ್ತರ ಸರಿಯಿದ್ದರೆ ಅದಕ್ಕೆ ನಗುತ್ತ ಸರಿಉತ್ತರ ಎನ್ನುವ ವಲ್ಲೇಸ್‌, ಉತ್ತರ ಸರಿಯಲ್ಲದಿದ್ದರೆ ಬೇಜಾರಿನಿಂದ ʼನೋʼ ಎಂದು ಹೇಳುತ್ತಾನೆ.

ಇದನ್ನೂ ಓದಿ: Viral Video: ಟ್ರಾಫಿಕ್‌ ಸಿಗ್ನಲ್‌ ವೇಳೆ ಬ್ಯಾಗ್‌ಗೆ ಕೈಹಾಕಿ ತಿಂಡಿ ತಿಂದ ಡೆಲಿವರಿ ಬಾಯ್; ಆರ್ಡರ್‌ ಮಾಡಿದವನ ಬಗ್ಗೆ ಮರುಕ
ಈ ರೀತಿಯ ಆಟವೆಲ್ಲದರಲ್ಲೂ ಮುಖ್ಯ ಪಾತ್ರ ಆ ಕಾರಿನ ಚಾಲಕ ವಲ್ಲೇಸ್‌ನದ್ದೇ. ಇಂಥದ್ದೊಂದು ವಿಶೇಷ ಆಟಗಳನ್ನು ಹೊಂದಿರುವ ಉಬರ್‌ ಕಾರಿನ ವಿಡಿಯೊವನ್ನು 0xEnjooyer ಹೆಸರಿನ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಉಬರ್‌ನಲ್ಲಿ ಇಂತಹ ಆಟವಿದ್ದರೆ ನಾನು ಉಬರ್‌ನಿಂದ ಕೆಳಗಿಳಿಯುವುದೇ ಇಲ್ಲ ಎಂದು ಟ್ವೀಟ್‌ನ ಕ್ಯಾಪ್ಶನ್‌ನಲ್ಲಿ ತಿಳಿಸಲಾಗಿದೆ.

ಹಾಗೆಯೇ ವಿಡಿಯೊದಲ್ಲಿ ಆ ವಲ್ಲೇಸ್‌ ಮಾತನಾಡುವುದನ್ನೂ ನೀವು ನೋಡಬಹುದಾಗಿದೆ. ಆಟವಾಡುತ್ತಿದ್ದ ವ್ಯಕ್ತಿಯೊಂದಿಗೆ ಮಾತನಾಡುವ ಆ ಚಾಲಕ, “ನನಗೆ ನನ್ನ ಕಾರನ್ನು ಚಲಾಯಿಸುವೆಂದರೆ ತುಂಬಾನೇ ಇಷ್ಟ” ಎಂದು ಹೇಳುವುದನ್ನು ನೀವು ಕಾಣಬಹುದು.

ಈ ವಿಡಿಯೊವನ್ನು ಆಗಸ್ಟ್‌ 8ರಂದು ಹಂಚಿಕೊಳ್ಳಲಾಗಿದೆ. ಅಂದಿನಿಂದ ಇಂದಿನವರೆಗೆ 18 ಲಕ್ಷಕ್ಕೂ ಅಧಿಕ ಮಂದಿ ಈ ವಿಡಿಯೊವನ್ನು ವೀಕ್ಷಿಸಿದ್ದಾರೆ. 8,800ಕ್ಕೂ ಅಧಿಕ ಮಂದಿ ಟ್ವೀಟ್‌ಗೆ ಲೈಕ್‌ ಮಾಡಿದ್ದಾರೆ. ನೂರಾರು ಮಂದಿ ಈ ಟ್ವೀಟ್‌ ಅನ್ನು ತಮ್ಮ ವಾಲ್‌ಗೆ ರಿಟ್ವೀಟ್‌ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Viral Video: ಟ್ರಾಫಿಕ್‌ ಸಿಗ್ನಲ್‌ ವೇಳೆ ಬ್ಯಾಗ್‌ಗೆ ಕೈಹಾಕಿ ತಿಂಡಿ ತಿಂದ ಡೆಲಿವರಿ ಬಾಯ್; ಆರ್ಡರ್‌ ಮಾಡಿದವನ ಬಗ್ಗೆ ಮರುಕ
“ಅಬ್ಬಾ, ನಾನು ಈ ವ್ಯಕ್ತಿಯನ್ನು ನನ್ನ ಡ್ರೈವರ್‌ ಆಗಿ ಕೆಲಸಕ್ಕೆ ತೆಗೆದುಕೊಳ್ಳುತ್ತೇನೆ. ನಾನು ಎಲ್ಲಿಗೂ ಹೋಗುವುದಿಲ್ಲವಾದರೂ ಪರವಾಗಿಲ್ಲ”, “ಇದು ಅದ್ಭುತವಾಗಿದೆ”, “ಮುರಿದ ಕಾಲಿನಲ್ಲೇ ಎದ್ದು ನಿಂತು ನೋ ಎಂದು ಹೇಳುವುದನ್ನು ನೋಡಿದರೆ ನನಗೆ ನಗು ತಡೆಯಲು ಆಗುತ್ತಿಲ್ಲ”, “ಅಬ್ಬಬ್ಬಾ, ಎಂತಹ ಚಾಲಾಕಿ ಡ್ರೈವರ್‌ ಇವರು”, “ಆ ಆಟದಲ್ಲಿ ಡ್ರೈವರ್‌ ನೋ ಎನ್ನುವುದು ಅದ್ಭುತವಾಗಿದೆ” ಎನ್ನುವಂತಹ ಕಾಮೆಂಟ್‌ಗಳು ವಿಡಿಯೊಗೆ ಬಂದಿವೆ. ಹಾಗೆಯೇ ಜನರು ಈ ಡ್ರೈವರ್‌ ಬಗ್ಗೆ ಮಾಹಿತಿ ಕೊಡಿ ಎಂದೂ ವಿಡಿಯೊಗೆ ಕಮೆಂಟ್‌ ಮಾಡಿ ಕೇಳಿಕೊಳ್ಳುತ್ತಿದ್ದಾರೆ.

ಉಬರ್‌ನಲ್ಲಿ ಸುಮ್ಮನೆ ಕುಳಿತು ಕಾಲಹರಣ ಮಾಡುವುದಕ್ಕಿಂತ ಈ ರೀತಿಯ ಮನರಂಜನೆ ಇದ್ದರೆ ಚೆನ್ನಾಗಿರುತ್ತದೆಯಲ್ಲವೇ. ಇದರಿಂದಾಗಿ ನಿಮಗೆ ಟೈಮ್‌ ಪಾಸ್‌ ಆಗುತ್ತದೆಯಷ್ಟೇ ಅಲ್ಲದೆ ಊಬರ್‌ ಚಾಲಕನ ಬದುಕಿನ ಬಗ್ಗೆಯೂ ಕೆಲವು ವಿಚಾರಗಳನ್ನು ತಿಳಿದುಕೊಂಡಂತಾಗುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಮುಂದೆ ಕಾದಿದೆ ಘೋರ ವಿಪತ್ತು: ಹವಾಮಾನ ವೈಪರಿತ್ಯ, ಅನ್ನ-ನೀರಿಗೂ ಹಾಹಾಕಾರ! ಕೋಡಿ ಶ್ರೀಗಳ ಭಯಾನಕ ಭವಿಷ್ಯಕ್ಕೆ ನಡುಗಿದ ನಾಡು

VISTARANEWS.COM


on

ತಮ್ಮ ನಿಖರ ಭವಿಷ್ಯವಾಣಿಗಳಿಗೆ ಹೆಸರಾಗಿರುವ ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು, ಇದೀಗ ದೇಶದ ಭವಿಷ್ಯದ ಕುರಿತು ಭಯಾನಕ ಮುನ್ಸೂಚನೆ ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಮಾತನಾಡಿದ ಶ್ರೀಗಳು, ಹವಾಮಾನ ವೈಪರಿತ್ಯದಿಂದ ಪ್ರಕೃತಿಯಲ್ಲಿ ಭಾರಿ ಏರುಪೇರು ಉಂಟಾಗಲಿದೆ ಎಂದು ಎಚ್ಚರಿಸಿದ್ದಾರೆ. ಈ ಹವಾಮಾನ ಬದಲಾವಣೆಯು ದೇಶದ ಹಲವು ಭಾಗಗಳಲ್ಲಿ ಅನ್ನ ಮತ್ತು ನೀರಿಗಾಗಿ ತೀವ್ರ ಹಾಹಾಕಾರ ಸೃಷ್ಟಿಸಲಿದ್ದು, ಅಪಮೃತ್ಯುಗಳ (ಅಕಾಲಿಕ ಮರಣ) ಸಂಖ್ಯೆ ಹೆಚ್ಚಾಗಲಿದೆ ಎಂಬ ಆಘಾತಕಾರಿ ಭವಿಷ್ಯ ನುಡಿದಿದ್ದಾರೆ.

ಜಾಗತಿಕ ಮಟ್ಟದಲ್ಲಿಯೂ ಭಾರಿ ಅಪಾಯಗಳು ಸಂಭವಿಸುವ ಲಕ್ಷಣಗಳಿವೆ ಎಂದು ಹೇಳಿರುವ ಶ್ರೀಗಳು, 2026ರ ಸಾಲಿನ ಬಗ್ಗೆ ಮಾರ್ಮಿಕವಾಗಿ ಮಾತನಾಡಿದ್ದಾರೆ. ಜಗತ್ತಿನಾದ್ಯಂತ ಜಲಪ್ರಳಯ ಹಾಗೂ ಅಗ್ನಿ ಅವಘಡಗಳಿಂದ ಲಕ್ಷಾಂತರ ಜನರು ಸಾವನ್ನಪ್ಪಿದ್ದಾರೆ, ಆದರೆ ಅತೃಪ್ತ ಆತ್ಮಗಳಿಗೆ ಸರಿಯಾದ ಸಂಸ್ಕಾರ ನಡೆಯದ ಕಾರಣ ಅವು ಮನುಕುಲಕ್ಕೆ ಕಂಟಕವಾಗಲಿವೆ ಎಂದು ಭೀತಿ ವ್ಯಕ್ತಪಡಿಸಿದ್ದಾರೆ. ಹವಾಮಾನ ವೈಪರಿತ್ಯದ ಈ ಭೀಕರತೆಯ ನಡುವೆ ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿಯೂ ಅತಂತ್ರ ಸ್ಥಿತಿ ನಿರ್ಮಾಣವಾಗಲಿದೆ ಎಂದು ಅವರು ಮುನ್ಸೂಚನೆ ನೀಡಿದ್ದಾರೆ.

ಈ ಎಲ್ಲಾ ಆತಂಕಕಾರಿ ಬೆಳವಣಿಗೆಗಳ ನಡುವೆ ಕರ್ನಾಟಕದ ಜನತೆಗೆ ಶ್ರೀಗಳು ಸಮಾಧಾನದ ಸುದ್ದಿಯನ್ನೂ ನೀಡಿದ್ದಾರೆ. ದೇಶದ ಬೇರೆ ಭಾಗಗಳಲ್ಲಿ ಸಮಸ್ಯೆಗಳಿದ್ದರೂ, ಕರ್ನಾಟಕದಲ್ಲಿ ಜನರಿಗೆ ದೈವಾರಾಧನೆ ಮತ್ತು ಭಕ್ತಿಯ ಮೇಲಿನ ಶ್ರದ್ಧೆ ಹೆಚ್ಚಿರುವುದರಿಂದ ನಾಡಿನಲ್ಲಿ ಮಳೆ-ಬೆಳೆ ಸಮೃದ್ಧವಾಗಿರಲಿದೆ ಎಂದು ಅವರು ಹೇಳಿದ್ದಾರೆ. ರಾಜ್ಯದ ಜನರಲ್ಲಿ ಹೆಚ್ಚುತ್ತಿರುವ ಧಾರ್ಮಿಕ ಪ್ರಜ್ಞೆಯು ನಾಡನ್ನು ಬರಗಾಲದಿಂದ ರಕ್ಷಿಸಲಿದ್ದು, ಸಮೃದ್ಧ ಜೀವನ ನಡೆಸಲು ಸಹಕಾರಿಯಾಗಲಿದೆ ಎಂದು ಕೋಡಿ ಶ್ರೀಗಳು ಅಭಿಪ್ರಾಯಪಟ್ಟಿದ್ದಾರೆ.

Continue Reading

Latest

ಬದುಕು ಸುಂದರವಾಗಿರಲು ಮದುವೆ-ಮಕ್ಕಳೇ ಬೇಕಿಲ್ಲ! ವೈಯಕ್ತಿಕ ಜೀವನದ ಬಗ್ಗೆ ನಿತ್ಯಾ ಮೆನನ್ ಹಂಚಿಕೊಂಡ ಮನದಾಳದ ಮಾತು

VISTARANEWS.COM


on

ದಕ್ಷಿಣ ಭಾರತದ ಪ್ರತಿಭಾವಂತ ನಟಿ ನಿತ್ಯಾ ಮೆನನ್ ತಮ್ಮ ನೇರ ನುಡಿ ಹಾಗೂ ವೈಚಾರಿಕ ನಿಲುವುಗಳಿಂದ ಸದಾ ಸುದ್ದಿಯಲ್ಲಿರುತ್ತಾರೆ. ಇತ್ತೀಚೆಗೆ ಕನ್ನಡ ನಟಿ ಭಾವನಾ ರಾಮಣ್ಣ ಅವರು ಮದುವೆಯಾಗದೆ ಐವಿಎಫ್ (IVF) ಮೂಲಕ ಮಗು ಪಡೆದ ವಿಷಯದ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪರ-ವಿರೋಧದ ಚರ್ಚೆಗಳು ನಡೆಯುತ್ತಿವೆ. ಈ ಬೆನ್ನಲ್ಲೇ, ಮದುವೆ ಮತ್ತು ಮಾತೃತ್ವದ ಕುರಿತು ನಿತ್ಯಾ ಮೆನನ್ ಈ ಹಿಂದೆ ನೀಡಿದ್ದ ಹೇಳಿಕೆಗಳು ಮತ್ತೆ ಮುನ್ನಲೆಗೆ ಬಂದಿದ್ದು, ಭಾರೀ ವೈರಲ್ ಆಗುತ್ತಿವೆ. ಮದುವೆಯಾಗದೆಯೇ ಮಕ್ಕಳನ್ನು ಹೊಂದುವ ನಿರ್ಧಾರದಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳುವ ಮೂಲಕ ಅವರು ಆಧುನಿಕ ಬದುಕಿನ ಆಯ್ಕೆಗಳನ್ನು ಸಮರ್ಥಿಸಿಕೊಂಡಿದ್ದಾರೆ.

ತಮಿಳಿನ ‘ಕಾದಲಿಕ್ಕಾ ನೇರಮಿಲ್ಲೈ’ ಸಿನಿಮಾದ ಪ್ರಚಾರದ ವೇಳೆ ನೀಡಿದ ಸಂದರ್ಶನವೊಂದರಲ್ಲಿ ಅವರು ಈ ಕುರಿತು ಮುಕ್ತವಾಗಿ ಮಾತನಾಡಿದ್ದಾರೆ. “ಮದುವೆಗಿಂತ ಮೊದಲು ಅಥವಾ ನಂತರ ಗರ್ಭಿಣಿಯಾಗುವುದು ಎನ್ನುವುದಕ್ಕಿಂತ, ಮದುವೆಯೇ ಇಲ್ಲದೆ ಗರ್ಭಿಣಿಯಾಗುವುದು ಅಥವಾ ಮಗು ಪಡೆಯುವುದರಲ್ಲಿ ತಪ್ಪೇನಿಲ್ಲ” ಎಂಬುದು ನಿತ್ಯಾ ಅವರ ಅಭಿಪ್ರಾಯ. ಒಬ್ಬ ಹೆಣ್ಣಿಗೆ ಮಗು ಬೇಕು ಎನಿಸಿದರೆ, ಆದರೆ ಮದುವೆಯ ಬಂಧನ ಇಷ್ಟವಿಲ್ಲದಿದ್ದರೆ ಅವಳು ಮಗು ಪಡೆಯುವ ನಿರ್ಧಾರ ಮಾಡಬಹುದು. ಇದಕ್ಕೆ ಈಗ ವೈದ್ಯಕೀಯವಾಗಿ ಸಾಕಷ್ಟು ಅವಕಾಶಗಳಿವೆ ಮತ್ತು ಹಲವರು ಇದನ್ನು ಯಶಸ್ವಿಯಾಗಿ ಅನುಸರಿಸುತ್ತಿದ್ದಾರೆ ಎಂದು ಅವರು ವಿವರಿಸಿದ್ದಾರೆ.

ಕೇವಲ ಮಕ್ಕಳ ಬಗ್ಗೆ ಮಾತ್ರವಲ್ಲದೆ, ಮದುವೆಯಾದ ನಂತರ ಮಕ್ಕಳಿಲ್ಲದ ದಂಪತಿಗಳ ಬಗ್ಗೆಯೂ ನಿತ್ಯಾ ಮೆನನ್ ಸಂವೇದನಾಶೀಲವಾಗಿ ಮಾತನಾಡಿದ್ದಾರೆ. “ಮದುವೆಯಾದ ಮೇಲೆ ಮಕ್ಕಳಾಗಲೇಬೇಕು ಎಂಬ ಹಠ ಬೇಡ, ಮಕ್ಕಳಿಲ್ಲದಿದ್ದರೂ ಬದುಕು ಸುಂದರವಾಗಿರಲು ಸಾಧ್ಯವಿದೆ” ಎಂಬುದು ಅವರ ನಿಲುವು. ಸಮಾಜದ ಅಲಿಖಿತ ನಿಯಮಗಳನ್ನು ಪ್ರಶ್ನಿಸಿರುವ ಅವರು, ಪ್ರತಿಯೊಬ್ಬರಿಗೂ ತಮ್ಮ ಜೀವನದ ಬಗ್ಗೆ ಸ್ವತಂತ್ರ ನಿರ್ಧಾರ ತೆಗೆದುಕೊಳ್ಳುವ ಹಕ್ಕಿದೆ ಎಂದು ಒತ್ತಿ ಹೇಳಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಇವರ ಈ ‘ಬೋಲ್ಡ್’ ಹೇಳಿಕೆಗಳು ಈಗ ಯುವಜನತೆಯ ಮೆಚ್ಚುಗೆಗೆ ಪಾತ್ರವಾಗುತ್ತಿವೆ.

Continue Reading

ಕರ್ನಾಟಕ

ಹುಬ್ಬಳ್ಳಿಯಲ್ಲಿ ವಾರದಲ್ಲಿ ಮೂರನೇ ಬಾರಿ ವಿಮಾನ ಲ್ಯಾಂಡಿಂಗ್ ಸಮಸ್ಯೆ; ಕೂದಲೆಳೆ ಅಂತರದಲ್ಲಿ ಪಾರಾದ ಪ್ರಯಾಣಿಕರು

VISTARANEWS.COM


on

ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಫ್ಲೈ 91 (Fly 91) ವಿಮಾನಯಾನ ಸಂಸ್ಥೆಯ ವಿಮಾನಗಳು ಸತತವಾಗಿ ತಾಂತ್ರಿಕ ಸಂಕಷ್ಟಕ್ಕೆ ಸಿಲುಕುತ್ತಿದ್ದು, ಪ್ರಯಾಣಿಕರಲ್ಲಿ ಭೀತಿ ಮೂಡಿಸಿವೆ. ಕಳೆದ ಒಂದು ವಾರದ ಅವಧಿಯಲ್ಲಿ ಇದು ಮೂರನೇ ಘಟನೆಯಾಗಿದ್ದು, ನಿನ್ನೆ ಹೈದರಾಬಾದ್‌ನಿಂದ ಬಂದ ವಿಮಾನವು ಲ್ಯಾಂಡಿಂಗ್‌ಗಾಗಿ ಸುಮಾರು 40 ನಿಮಿಷಗಳ ಕಾಲ ಆಕಾಶದಲ್ಲಿಯೇ ಸುತ್ತು ಹೊಡೆದಿದೆ. ಮಧ್ಯಾಹ್ನ 3.13ಕ್ಕೆ ಹೈದರಾಬಾದ್‌ನಿಂದ ಹೊರಟಿದ್ದ ವಿಮಾನವು ಸಂಜೆ 4.30ಕ್ಕೆ ಲ್ಯಾಂಡ್ ಆಗಬೇಕಿತ್ತು. ಆದರೆ ಹವಾಮಾನ ವೈಪರೀತ್ಯದ ನೆಪವೊಡ್ಡಿ ವಿಮಾನವನ್ನು ಆಕಾಶದಲ್ಲೇ ತಡೆಹಿಡಿದ ಪರಿಣಾಮ, ಅಂತಿಮವಾಗಿ 5.09ಕ್ಕೆ ಸುರಕ್ಷಿತವಾಗಿ ಲ್ಯಾಂಡ್ ಆಯಿತು. ಈ ವಿಳಂಬದಿಂದಾಗಿ ವಿಮಾನದಲ್ಲಿದ್ದ ಪ್ರಯಾಣಿಕರು ಪ್ರಾಣಭಯದಿಂದ ತತ್ತರಿಸುವಂತಾಯಿತು.

ಫ್ಲೈ 91 ಸಂಸ್ಥೆಯ ವಿಮಾನಗಳಿಗೆ ಹುಬ್ಬಳ್ಳಿಯಲ್ಲಿ ಇಂತಹ ಸಮಸ್ಯೆ ಎದುರಾಗುತ್ತಿರುವುದು ಇದೇ ಮೊದಲೇನಲ್ಲ. ಕಳೆದ ಏಪ್ರಿಲ್ 19 ರಂದು ಹೈದರಾಬಾದ್‌ನಿಂದ ಬರುತ್ತಿದ್ದ ಇದೇ ಸಂಸ್ಥೆಯ ವಿಮಾನವೊಂದು ವೇಗ ನಿಯಂತ್ರಣ ಕಳೆದುಕೊಂಡು ಬರೊಬ್ಬರಿ 4 ಗಂಟೆಗಳ ಕಾಲ ಆಗಸದಲ್ಲೇ ಹಾರಾಡಿ, ಕೊನೆಗೆ ಬೆಂಗಳೂರಿನಲ್ಲಿ ತುರ್ತು ಲ್ಯಾಂಡಿಂಗ್ ಮಾಡಿತ್ತು. ಆಗಲೂ ಹವಾಮಾನದ ಕಾರಣ ನೀಡಲಾಗಿತ್ತಾದರೂ, ತಾಂತ್ರಿಕ ದೋಷವೇ ಅಸಲಿ ಕಾರಣ ಎಂಬ ಬಲವಾದ ಶಂಕೆ ವ್ಯಕ್ತವಾಗಿತ್ತು. ವಿಮಾನಯಾನ ಸಂಸ್ಥೆಯು ಈ ಬಗ್ಗೆ ಸರಿಯಾದ ಮಾಹಿತಿ ನೀಡದೆ ನಿರ್ಲಕ್ಷ್ಯ ತೋರಿದ್ದಕ್ಕೆ ಪ್ರಯಾಣಿಕರ ಕುಟುಂಬಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಘಟನೆ ನಡೆದ ಎರಡೇ ದಿನಗಳಲ್ಲಿ ಅಂದರೆ ಏಪ್ರಿಲ್ 21 ರಂದು ಬೆಂಗಳೂರಿನಿಂದ ಬಂದಿದ್ದ ವಿಮಾನಕ್ಕೂ ಇಂತಹುದೇ ಸ್ಥಿತಿ ಎದುರಾಗಿತ್ತು. ಈಗ ಕೇವಲ ಮೂರು ದಿನಗಳ ಅಂತರದಲ್ಲಿ ಮತ್ತೆ ಅದೇ ರೀತಿಯ ಲ್ಯಾಂಡಿಂಗ್ ಸಮಸ್ಯೆ ಉಂಟಾಗಿರುವುದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಇತರ ವಿಮಾನ ಸಂಸ್ಥೆಗಳು ಸುಗಮವಾಗಿ ಸಂಚರಿಸುತ್ತಿರುವಾಗ ಫ್ಲೈ 91 ವಿಮಾನಗಳಿಗೆ ಮಾತ್ರ ಏಕೆ ಪದೇ ಪದೇ ಈ ತೊಂದರೆ ಆಗುತ್ತಿದೆ ಎಂಬ ಪ್ರಶ್ನೆ ಈಗ ಎದ್ದಿದೆ. ವಿಮಾನಗಳ ಫಿಟ್‌ನೆಸ್ ಹಾಗೂ ನಿರ್ವಹಣೆಯಲ್ಲಿ ಸಂಸ್ಥೆ ತೋರುತ್ತಿರುವ ನಿರ್ಲಕ್ಷ್ಯದ ಬಗ್ಗೆ ಪ್ರಯಾಣಿಕರಿಂದ ಈಗ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದ್ದು, ಉನ್ನತ ಮಟ್ಟದ ತನಿಖೆಗೆ ಒತ್ತಾಯ ಕೇಳಿಬಂದಿದೆ.

Continue Reading

Latest

ವಿಜಯ್ ಪಕ್ಷಕ್ಕೆ ಮತ ಚಲಾಯಿಸಲು ಸಾಧ್ಯವಾಗದೆ ಬಿಕ್ಕಿ ಬಿಕ್ಕಿ ಅತ್ತ ಯುವತಿ! ವಿಡಿಯೋ ವೈರಲ್

VISTARANEWS.COM


on

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಕಣ ರಂಗೇರಿದ್ದು, ನಟ ದಳಪತಿ ವಿಜಯ್ ಅವರ ರಾಜಕೀಯ ಪ್ರವೇಶ ಈ ಬಾರಿಯ ಚುನಾವಣೆಯನ್ನು ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯುವಂತೆ ಮಾಡಿದೆ. ಇದೇ ಹೊತ್ತಲ್ಲಿ, ಮಲೇಷ್ಯಾದಿಂದ ತನ್ನ ನೆಚ್ಚಿನ ನಟನಿಗಾಗಿ ಮತ ಚಲಾಯಿಸಲು ಬಂದ ಯುವತಿಯೊಬ್ಬರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಕೆಲಸದ ನಿಮಿತ್ತ ಮಲೇಷ್ಯಾದಲ್ಲಿದ್ದ ಈ ಯುವತಿ, ಮತದಾನದ ದಿನದಂದೇ ತಾಯ್ನಾಡಿಗೆ ಬರುವ ವಿಮಾನವನ್ನು (Flight) ತಪ್ಪಿಸಿಕೊಂಡ ಕಾರಣ, ಮತ ಚಲಾಯಿಸಲು ಸಾಧ್ಯವಾಗುತ್ತಿಲ್ಲ ಎಂದು ನಡುರಸ್ತೆಯಲ್ಲೇ ಬಿಕ್ಕಿ ಬಿಕ್ಕಿ ಅತ್ತು ವಿಜಯ್ ಬಳಿ ಕ್ಷಮೆಯಾಚಿಸಿದ್ದರು.

“ನನ್ನ ತಪ್ಪಿನಿಂದ ಫ್ಲೈಟ್ ಮಿಸ್ ಆಯ್ತು, ವಿಜಯ್ ಅಣ್ಣನ ಮೊದಲ ಹೆಜ್ಜೆಗೆ ಬೆಂಬಲ ನೀಡಲು ಸಾಧ್ಯವಾಗುತ್ತಿಲ್ಲವಲ್ಲ ಎಂಬ ನೋವು ನನ್ನನ್ನು ಕಾಡುತ್ತಿದೆ. ನನ್ನ ಒಂದು ವೋಟ್‌ನಿಂದ ಏನಾಗುತ್ತೆ ಎಂದು ಕೆಲವರು ಕೇಳಬಹುದು, ಆದರೆ ‘ನಾವು ನಿಮ್ಮ ಜೊತೆ ಇದ್ದೀವಿ’ ಎಂದು ಅವರಿಗೆ ಭರವಸೆ ನೀಡುವ ದಾರಿ ಇದಾಗಿತ್ತು” ಎಂದು ಆ ಯುವತಿ ಕಣ್ಣೀರಿಡುತ್ತಾ ಹೇಳಿಕೊಂಡಿದ್ದರು. ಈ ಹೃದಯವಿದ್ರಾವಕ ವಿಡಿಯೋ ನೋಡಿ ದಳಪತಿ ಅಭಿಮಾನಿಗಳು ಸಹ ಬೇಸರ ವ್ಯಕ್ತಪಡಿಸಿದ್ದರು. ಆದರೆ ಈ ಕಥೆಗೆ ಒಂದು ಸುಖಾಂತ್ಯವಿದ್ದು, ಆ ಯುವತಿ ಕೇವಲ ಅತ್ತು ಸುಮ್ಮನಾಗದೆ, ಎಲ್ಲಾ ಅಡೆತಡೆಗಳನ್ನು ದಾಟಿ ಮತ್ತೊಂದು ವಿಮಾನದ ಮೂಲಕ ಹೇಗಾದರೂ ಮಾಡಿ ತಮಿಳುನಾಡಿಗೆ ತಲುಪಿದ್ದಾರೆ.

ಏಪ್ರಿಲ್ 22, 2026 ರಂದು ಹರಿದಾಡುತ್ತಿರುವ ಲೇಟೆಸ್ಟ್ ಮಾಹಿತಿಯ ಪ್ರಕಾರ, ಕಣ್ಣೀರಿಟ್ಟಿದ್ದ ಅದೇ ಯುವತಿ ಕೊನೆಗೂ ಸಮಯಕ್ಕೆ ಸರಿಯಾಗಿ ತನ್ನ ಮತಗಟ್ಟೆಗೆ ಬಂದು ಮತ ಚಲಾಯಿಸುವಲ್ಲಿ ಯಶಸ್ವಿಯಾಗಿದ್ದಾರೆ. “ಧೈರ್ಯ ಬಿಡದೆ ಮನೆಗೆ ಬಂದು ಮತ ಚಲಾಯಿಸಿದ್ದಾರೆ” ಎಂಬ ಟ್ವೀಟ್‌ಗಳು ಈಗ ಅಭಿಮಾನಿಗಳ ವಲಯದಲ್ಲಿ ಸಂಚಲನ ಮೂಡಿಸಿವೆ. ಇನ್ನುಳಿದಂತೆ ತಮಿಳುನಾಡು ಚುನಾವಣೆಯಲ್ಲಿ ನಟ ಅಜಿತ್ ಕುಮಾರ್ ಮೊದಲನೆಯವರಾಗಿ ಮತ ಚಲಾಯಿಸಿದರೆ, ನಂತರ ರಜನಿಕಾಂತ್, ತ್ರಿಷಾ, ವಿಕ್ರಮ್ ಮತ್ತು ಸೂರ್ಯ ಸೇರಿದಂತೆ ದಿಗ್ಗಜ ನಟರು ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸುವ ಮೂಲಕ ಸಾರ್ವಜನಿಕರಿಗೆ ಮಾದರಿಯಾದರು.

Continue Reading
Advertisement
Latest19 minutes ago

ಡೆಲ್ಲಿ ವಿರುದ್ಧ ಸೇಡು ತೀರಿಸಿಕೊಳ್ಳಲು ಸಜ್ಜಾದ RCB! ಹೇಗಿರಲಿದೆ ಹೈವೋಲ್ಟೇಜ್‌ ಮ್ಯಾಚ್‌?

Latest17 hours ago

ಮೇ 15ಕ್ಕೆ ಸಿಗುತ್ತಾ ಗುಡ್​ ನ್ಯೂಸ್?​ ಸಂಭ್ರಮಾಚರಣೆ ಬೇಡವೆಂದು ಬೆಂಬಲಿಗರಿಗೆ ಖಡಕ್​ ಸೂಚನೆ! ಡಿ ಕೆ ಬ್ರದರ್ಸ್‌ ಪ್ಲ್ಯಾನ್‌ಗೆ ಟಕ್ಕರ್‌ ಕೊಡ್ತಾರಾ ಸಿಎಂ

Latest17 hours ago

ಮುಂದೆ ಕಾದಿದೆ ಘೋರ ವಿಪತ್ತು: ಹವಾಮಾನ ವೈಪರಿತ್ಯ, ಅನ್ನ-ನೀರಿಗೂ ಹಾಹಾಕಾರ! ಕೋಡಿ ಶ್ರೀಗಳ ಭಯಾನಕ ಭವಿಷ್ಯಕ್ಕೆ ನಡುಗಿದ ನಾಡು

Latest17 hours ago

ಮುಂದಿನ ಪಂದ್ಯದಿಂದ ‘ಯಂಗ್ ಸೆನ್ಸೇಷನ್’ ಔಟ್? ವೈಭವ್ ಸೂರ್ಯವಂಶಿ ಬಗ್ಗೆ ಕೋಚ್ ಕೊಟ್ಟ ಅಪ್ಡೇಟ್ ಏನು?

Latest18 hours ago

ಅಧ್ಯಕ್ಷ ಹುದ್ದೆ ಇಷ್ಟು ಡೇಂಜರ್ ಅಂತ ಗೊತ್ತಿರಲಿಲ್ಲ!”: ಗುಂಡಿನ ದಾಳಿಯಿಂದ ಬಚಾವಾದ ಬೆನ್ನಲ್ಲೇ ಟ್ರಂಪ್ ವ್ಯಂಗ್ಯ

Latest19 hours ago

ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಹೊಸ ಬಲ: ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸಿದ ಶಿಕ್ಷಣ ಇಲಾಖೆ

Latest19 hours ago

‘ಟಾಕ್ಸಿಕ್’ ಬೋಲ್ಡ್ ದೃಶ್ಯದ ವಿವಾದಕ್ಕೆ ರಾಕಿಂಗ್ ಸ್ಟಾರ್ ಖಡಕ್ ರಿಯಾಕ್ಷನ್: ಟೀಕಾಕಾರರಿಗೆ ತಮ್ಮದೇ ಸ್ಟೈಲ್‌ನಲ್ಲಿ ಉತ್ತರ ಕೊಟ್ಟ ಯಶ್

Latest19 hours ago

ಬದುಕು ಸುಂದರವಾಗಿರಲು ಮದುವೆ-ಮಕ್ಕಳೇ ಬೇಕಿಲ್ಲ! ವೈಯಕ್ತಿಕ ಜೀವನದ ಬಗ್ಗೆ ನಿತ್ಯಾ ಮೆನನ್ ಹಂಚಿಕೊಂಡ ಮನದಾಳದ ಮಾತು

Latest21 hours ago

ಆರ್‌ಸಿಬಿ ಪ್ಲೇಯಿಂಗ್ 11 ಅಪ್‌ಡೇಟ್: ಡೆಲ್ಲಿ ವಿರುದ್ಧದ ಪಂದ್ಯಕ್ಕೆ ಇಬ್ಬರು ಸ್ಟಾರ್ ಆಟಗಾರರು ಡೌಟ್?

Latest22 hours ago

ಬಿಗಿ ಭದ್ರತೆಯ ನಡುವೆಯೂ ಟ್ರಂಪ್ ಪಾರ್ಟಿಗೆ ಅತಿಥಿಯಂತೆ ಬಂದಿದ್ದ ದಾಳಿಕೋರ! ಸೀಕ್ರೆಟ್ ಸರ್ವಿಸ್ ಕಣ್ಣು ತಪ್ಪಿಸಿದ್ದು ಹೇಗೆ?

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌