Urfi Javed: ಚಿಟ್ಟೆ, ಬ್ರಹ್ಮಾಂಡ ಎಲ್ಲಾ ಆಯ್ತು! ಈಗ ಅಕ್ಟೋಪಸ್​​ನಂತೆ ಬಂದ ಉರ್ಫಿ! - Vistara News

ವೈರಲ್ ನ್ಯೂಸ್

Urfi Javed: ಚಿಟ್ಟೆ, ಬ್ರಹ್ಮಾಂಡ ಎಲ್ಲಾ ಆಯ್ತು! ಈಗ ಅಕ್ಟೋಪಸ್​​ನಂತೆ ಬಂದ ಉರ್ಫಿ!

Urfi Javed: ಇದಕ್ಕೂ ಮುಂಚೆ ಯೂನಿವರ್ಸ್-ಪ್ರೇರಿತ ಉಡುಗೆ ತೊಟ್ಟು ಪೋಸ್‌ ಕೊಟ್ಟಿದ್ದರು. ಉಡುಪಿನೊಳಗೇ ಬ್ರಹ್ಮಾಂಡ ತೋರಿಸಿದ್ದರು ನಟಿ ಉರ್ಫಿ. ಉರ್ಫಿ ಅವರನ್ನು ಆಧುನಿಕ ಶ್ರೀಕೃಷ್ಣ ಎನ್ನುತ್ತಿದ್ದರು ಫ್ಯಾನ್ಸ್​. ತಮ್ಮ ಸ್ಕರ್ಟ್‌ನಲ್ಲಿ ಬ್ರಹ್ಮಾಂಡ ತಿರುಗುವ ರೀತಿಯಲ್ಲಿ ತೋರಿಸಿದ್ದರು. ಇಡೀ ಗ್ರಹಗಳನ್ನು ಸ್ಕರ್ಟ್‌ನಲ್ಲಿ ನೋಡಬಹುದಾಗಿತ್ತು.

VISTARANEWS.COM


on

Urfi Javed Octopus Dress Is The Most EPIC Thing Of The Day
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೆಲವು ದಿನಗಳಿಂದ ನಟಿ ಉರ್ಫಿ ಜಾವೇದ್ (Urfi Javed) ಕುಡಿದು ತೇಲಡುತ್ತಿರುವ ವಿಡಿಯೊ ಭಾರಿ ವೈರಲ್‌ ಆಗಿತ್ತು. ಹೀಗಾಗಿ ಉರ್ಫಿಯ ಫ್ಯಾಷನ್‌ ಬಗ್ಗೆಯೇ ಸಾಕಷ್ಟು ಸುದ್ದಿಯಾಗಿತ್ತು. ಇದೀಗ ಮತ್ತೆ ಉರ್ಫಿ ಹೊಸ ಅವತರಾದಲ್ಲಿ ಕಂಡಿದ್ದಾರೆ. ಬಬಲ್ ಗಮ್ ಟಾಪ್‌ನಿಂದ ಕಸದ ಚೀಲದ ಉಡುಪಿನವರೆಗೆ ಬಿಗ್ ಬಾಸ್ OTT 1 ಖ್ಯಾತಿಯ ಉರ್ಫಿ ಸದ್ದು ಮಾಡುತ್ತಲೇ ಇರುತ್ತಾರೆ. ಈ ಬಾರಿ ಅಕ್ಟೋಪಸ್ ಡ್ರೆಸ್ ನಿಂದ ಬಹಳ ಮಜವಾಗಿ ಕಂಡಿದ್ದರು.

ಉರ್ಫಿ ಜಾವೇದ್ ಕಪ್ಪು ಡ್ರೆಸ್‌ನಲ್ಲಿ ಕಾಣಿಸಿಕೊಂಡಿದ್ದು, ಅಕ್ಟೋಪಸ್ ರೀತಿಯ ತೋಳುಗಳನ್ನು ಹೊಂದಿತ್ತು ಈ ಉಡುಗೆ. ಸದಾ ತನ್ನ ಉಡುಪಿನ ವಿಚಾರವಾಗಿ ಟ್ರೋಲ್‌ ಆಗುವ ಉರ್ಫಿ ಈ ಬಾರಿ ನೆಟ್ಟಿಗರಿಂದ ಪ್ರಶಂಸೆ ಪಡೆದಿದ್ದಾರೆ. ಬಟ್ಟೆಗಳಲ್ಲಿಯ ಉರ್ಫಿಯ ಸೃಜನಶೀಲತೆಗೆ 10 ಅಂಕ ಎಂದು ಕಮೆಂಟ್‌ ಮಾಡುತ್ತಿದ್ದಾರೆ.

ಇದಕ್ಕೂ ಮುಂಚೆ ಯೂನಿವರ್ಸ್-ಪ್ರೇರಿತ ಉಡುಗೆ ತೊಟ್ಟು ಪೋಸ್‌ ಕೊಟ್ಟಿದ್ದರು. ಉಡುಪಿನೊಳಗೇ ಬ್ರಹ್ಮಾಂಡ ತೋರಿಸಿದ್ದರು ನಟಿ ಉರ್ಫಿ. ಉರ್ಫಿ ಅವರನ್ನು ಆಧುನಿಕ ಶ್ರೀಕೃಷ್ಣ ಎನ್ನುತ್ತಿದ್ದರು ಫ್ಯಾನ್ಸ್​. ತಮ್ಮ ಸ್ಕರ್ಟ್‌ನಲ್ಲಿ ಬ್ರಹ್ಮಾಂಡ ತಿರುಗುವ ರೀತಿಯಲ್ಲಿ ತೋರಿಸಿದ್ದರು. ಇಡೀ ಗ್ರಹಗಳನ್ನು ಸ್ಕರ್ಟ್‌ನಲ್ಲಿ ನೋಡಬಹುದಾಗಿತ್ತು. ʻಕೆಲವರು ಶ್ರೀಕೃಷ್ಣ ಪರಮಾತ್ಮ ಬಾಯಲ್ಲಿ ಬ್ರಹ್ಮಾಂಡ ತೋರಿದರೆ, ನೀವು ಉಡುಪಿನೊಳಗೇ ಬ್ರಹ್ಮಾಂಡ ತೋರಿದ್ದೀರಿ, ಆಧುನಿಕ ಕೃಷ್ಣ ನೀವುʼ ಎನ್ನುತ್ತಿದ್ದರು.

ಇದನ್ನೂ ಓದಿ: Kannada New Movie: `ನೈಸ್ ರೋಡ್’ ಸಿನಿಮಾಗೆ ನೋಟಿಸ್ ; ಅಷ್ಟಕ್ಕೂ ಆಗಿದ್ದೇನು?

ಫ್ಯಾಷನ್‌ ಐಕಾನ್‌ ಎಂದೇ ಖ್ಯಾತಿ ಪಡೆದಿರುವ ಉರ್ಫಿ ಜಾವೇದ್ (Urfi Javed) ಆಗಾಗ ಸುದ್ದಿಯಾಗುತ್ತಲೇ ಇರುತ್ತಾರೆ. ಇದರ ಜತೆಗೆ ಉರ್ಫಿ ಜಾವೇದ್‌ ಬಾಲಿವುಡ್‌ಗೂ ಕಾಲಿಟ್ಟಿದ್ದಾರೆ. ಏಕ್ತಾ ಕಪೂರ್ ನಿರ್ಮಾಣದ ‘ಲವ್ ಸೆಕ್ಸ್ ಔರ್ ಧೋಖಾ 2’ ಸಿನಿಮಾದಲ್ಲಿ ಅವರು ಅಭಿನಯಿಸಿದ್ದರು. ಏಪ್ರಿಲ್ 19ರಂದು ಸಿನಿಮಾ ಬಿಡುಗಡೆಯಾಗಿತ್ತು. ಈ ಚಿತ್ರವನ್ನು ದಿವಾಕರ್ ಬ್ಯಾನರ್ಜಿ ನಿರ್ದೇಶಿಸಿದ್ದರು. ಈ ಹಿಂದೆ ಇವರು ʻಲವ್ ಸೆಕ್ಸ್ ಔರ್ ಧೋಖಾʼ ಸಿನಿಮಾಕ್ಕೆ ಆ್ಯಕ್ಷನ್‌ ಕಟ್‌ ಹೇಳಿದ್ದರು. ʼಲವ್ ಸೆಕ್ಸ್ ಔರ್ ಧೋಖಾ 2ʼನಲ್ಲಿ ಆಸಕ್ತಿದಾಯಕ ಕಥೆ ಇರಲಿದೆ ಎಂದು ಚಿತ್ರತಂಡ ಹೇಳಿಕೊಂಡಿತ್ತು. ಇಂಟರ್‌ನೆಟ್‌ ಜಗತ್ತಿನಲ್ಲಿ ನಡೆಯುವ ಪ್ರೀತಿಯ ಕಥೆ ಇರಲಿದೆ ಎನ್ನಲಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Heavy Rain: ನೋಡ ನೋಡುತ್ತಿದ್ದಂತೆ ನದಿಯಲ್ಲಿ ಕೊಚ್ಚಿ ಹೋಯ್ತು ಬಹುಮಹಡಿ ಕಟ್ಟಡ; ಭೀಕರ ದೃಶ್ಯ ಇಲ್ಲಿದೆ

Heavy Rain: ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಪಾರ್ವತಿ ನದಿ ಮೇರೆ ಮೀರಿ ಹರಿಯುತ್ತಿದ್ದು, ಬಹುಮಹಡಿ ಕಟ್ಟಡ ಕುಸಿದು ಬೀಳುತ್ತಿರುವ ಭಯಾನಕ ವಿಡಿಯೊ ವೈರಲ್‌ ಆಗಿದೆ. ಕುಲ್ಲುವಿನಲ್ಲಿ ಗುರುವಾರ ನದಿ ತೀರದ ಬಳಿ ಇದ್ದ ಕಟ್ಟಡವು ಇದ್ದಕ್ಕಿದ್ದಂತೆ ನೆಲಕ್ಕೆ ಕುಸಿದು ಬಿದ್ದು ಕೆಲವೇ ಸೆಕೆಂಡುಗಳಲ್ಲಿ ರಭಸವಾಗಿ ಹರಿಯುವ ನೀರಿನಲ್ಲಿ ಕೊಚ್ಚಿ ಹೋಗುವ ದೃಶ್ಯ ಇದಾಗಿದೆ. ವಿಡಿಯೊದಲ್ಲಿ ಈ ಬಹುಮಹಡಿ ಕಟ್ಟಡ ಕ್ಷಣಾರ್ಧಲ್ಲಿಯೇ ನದಿಯಲ್ಲಿ ಕಣ್ಮರೆಯಾಗುತ್ತಿರುವುದು ಕಂಡು ಬಂದಿದೆ.

VISTARANEWS.COM


on

Heavy Rain
Koo

ಧರ್ಮಶಾಲಾ: ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಅಪಾರ ನಾಶ ನಷ್ಟ ಸಂಭವಿಸುತ್ತಿದೆ (Heavy Rain). ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತಕ್ಕೆ (Wayanad Landslide) ಊರಿಗೆ ಊರೇ ನಾಮವಶೇಷವಾಗಿದ್ದು, 250ಕ್ಕಿಂತ ಅಧಿಕ ಮಂದಿ ಮೃತಪಟ್ಟಿದ್ದಾರೆ. ಈ ಮಧ್ಯೆ ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ (Cloudburst)ವಾಗಿದ್ದು, ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಪಾರ್ವತಿ ನದಿ ಮೇರೆ ಮೀರಿ ಹರಿಯುತ್ತಿದ್ದು, ಬಹುಮಹಡಿ ಕಟ್ಟಡ ಕುಸಿದು ಬೀಳುತ್ತಿರುವ ಭಯಾನಕ ವಿಡಿಯೊ ವೈರಲ್‌ ಆಗಿದೆ (Viral Video).

ಕುಲ್ಲುವಿನಲ್ಲಿ ಗುರುವಾರ ನದಿ ತೀರದ ಬಳಿ ಇದ್ದ ಕಟ್ಟಡವು ಇದ್ದಕ್ಕಿದ್ದಂತೆ ನೆಲಕ್ಕೆ ಕುಸಿದು ಬಿದ್ದು ಕೆಲವೇ ಸೆಕೆಂಡುಗಳಲ್ಲಿ ರಭಸವಾಗಿ ಹರಿಯುವ ನೀರಿನಲ್ಲಿ ಕೊಚ್ಚಿ ಹೋಗುವ ದೃಶ್ಯ ಇದಾಗಿದೆ. ವಿಡಿಯೊದಲ್ಲಿ ಈ ಬಹುಮಹಡಿ ಕಟ್ಟಡ ಕ್ಷಣಾರ್ಧಲ್ಲಿಯೇ ನದಿಯಲ್ಲಿ ಕಣ್ಮರೆಯಾಗುತ್ತಿರುವುದು ಕಂಡು ಬಂದಿದೆ. ತಕ್ಷಣ ಅಲ್ಲಿದ್ದವರು ಓಡಿ ಜೀವ ಉಳಿಸಿಕೊಂಡಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದ್ದು, ಇದರಿಂದ ನದಿಗಳ ನೀರಿನ ಮಟ್ಟದಲ್ಲಿ ಗಮನಾರ್ಹ ಏರಿಕೆ ಕಂಡು ಬಂದಿದೆ.

ಇಬ್ಬರ ಸಾವು

ಇದುವರೆಗೆ ಹಿಮಾಚಲ ಪ್ರದೇಶದಲ್ಲಿ ಮಳೆ ದುರಂತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಸುಮಾರು 30 ಮಂದಿ ನಾಪತ್ತೆಯಾಗಿದ್ದಾರೆ. ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯಲ್ಲಿ ಭಾರೀ ಅನಾಹುತ ಸಂಭವಿಸಿದೆ. ಶಿಮ್ಲಾದಿಂದ 100 ಕಿ.ಮೀ. ದೂರದಲ್ಲಿರುವ ರಾಂಪುರದ ಜಕ್ರಿಯಲ್ಲಿ ಮತ್ತು ಮಂಡಿಯಲ್ಲಿ ಮೇಘಸ್ಫೋಟ ಉಂಟಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಹಿಮಾಚಲ ಪ್ರದೇಶಕ್ಕೆ ಆರೆಂಜ್ ಅಲರ್ಟ್ ನೀಡಿದ್ದು, ಮುಂದಿನ 2-3 ದಿನಗಳವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ.

ʼʼಶಿಮ್ಲಾ ಜಿಲ್ಲೆಯ ರಾಂಪುರದಲ್ಲಿ ನಡೆದ ಮೇಘಸ್ಫೋಟದ ನಂತರ ಇಬ್ಬರು ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಕಾಣೆಯಾಗಿದ್ದಾರೆ. ಈ ಪ್ರದೇಶದ ರಸ್ತೆಗಳು ಮತ್ತು ಜಲವಿದ್ಯುತ್ ಯೋಜನೆಗೂ ಹಾನಿಯಾಗಿದೆ. ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (NDRF), ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP) ಮತ್ತು ರಾಜ್ಯ ಪೊಲೀಸ್‌ ತಂಡಗಳನ್ನು ರಕ್ಷಣಾ ಕಾರ್ಯಾಚರಣೆಯನ್ನು ನಿಯೋಜಿಸಲಾಗಿದೆʼʼ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಿರಂತರ ಮಳೆಯಿಂದಾಗಿ ಭೂಕುಸಿತದ ಸಾಧ್ಯತೆ ಹೆಚ್ಚಾದ ಕಾರಣ ರಾಜ್ಯದ ಅನೇಕ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಮಂಡಿಯಲ್ಲಿ 29, ಕುಲ್ಲುನಲ್ಲಿ 8, ಶಿಮ್ಲಾದಲ್ಲಿ 4 ಮತ್ತು ಕಾಂಗ್ರಾ ಮತ್ತು ಕಿನ್ನೌರ್‌ನಲ್ಲಿ ತಲಾ 2 ಸೇರಿದಂತೆ ಒಟ್ಟು 45 ರಸ್ತೆಗಳನ್ನು ಮುಚ್ಚಲಾಗಿದೆ ಎಂದು ತುರ್ತು ಕಾರ್ಯಾಚರಣೆ ಕೇಂದ್ರ ತಿಳಿಸಿದೆ. ಸುಮಾರು 215 ಟ್ರಾನ್ಸ್‌ಫಾರ್ಮರ್‌ಗಳು ಅಸ್ತವ್ಯಸ್ತಗೊಂಡಿರುವುದರಿಂದ ವಿದ್ಯುತ್ ಸರಬರಾಜಿನ ಮೇಲೂ ಪರಿಣಾಮ ಬೀರಿದೆ.

ಇದನ್ನೂ ಓದಿ: Wayanad Landslide: ವಯನಾಡು ದುರಂತದಲ್ಲಿ ಮೃತರ ಸಂಖ್ಯೆ 254ಕ್ಕೆ ಏರಿಕೆ; ಸೇನೆಯ ತಾತ್ಕಾಲಿಕ ಸೇತುವೆ ಬಹುತೇಕ ಪೂರ್ಣ

ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರಾಜ್ಯಕ್ಕೆ 425 ಕೋಟಿ ರೂ.ಗಳ ನಷ್ಟವಾಗಿದೆ. ಜುಲೈ ಮೊದಲ ವಾರದಲ್ಲಿ ಸುರಿದ ಭಾರಿ ಮಳೆಯಿಂದಾಗಿ 76 ರಸ್ತೆಗಳು ಬಂದ್ ಆಗಿದ್ದು, 34 ವಿದ್ಯುತ್ ಸರಬರಾಜು ಯೋಜನೆಗಳು ಮತ್ತು 69 ನೀರು ಸರಬರಾಜು ಯೋಜನೆಗಳು ಅಸ್ತವ್ಯಸ್ತಗೊಂಡಿದ್ದವು. ಇತ್ತ ದೆಹಲಿ ಮತ್ತು ಉತ್ತರಾಖಂಡದಲ್ಲಿ ಧಾರಾಕಾರ ಮಳೆ ಆರಂಭವಾಗಿದೆ.

Continue Reading

ವೈರಲ್ ನ್ಯೂಸ್

Viral Video: ಕೇಶ ವಿನ್ಯಾಸಕ್ಕೆ ಸಲಾಕೆ ಬಳಸಿದ ಕ್ಷೌರಿಕ!

ಕ್ಷೌರಿಕನೊಬ್ಬ ತನ್ನ ಗ್ರಾಹಕರಿಗೆ ಸಲಾಕೆಯಿಂದ ಕ್ಷೌರವನ್ನು ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದೆ. ಈ ವಿಡಿಯೋ ಆನ್‌ಲೈನ್‌ನಲ್ಲಿ ಹೆಚ್ಚು ಮಂದಿಯ ಗಮನ ಸೆಳೆದಿದ್ದು, ಸಾಕಷ್ಟು ಮಂದಿ ಬೆಚ್ಚಿ ಬೀಳುವಂತೆ ಮಾಡಿದೆ.

VISTARANEWS.COM


on

By

Viral video
Koo

ಕ್ಷೌರ ಮಾಡಲು ಸೆಲೂನ್ ಗೆ (barber salon) ಹೋದಾಗ ಕ್ಷೌರಿಕನ (Barber) ಕೈಯಲ್ಲಿ ಕತ್ತರಿ, ಟ್ರಿಮ್ಮರ್ ಬದಲಿಗೆ ಸಲಾಕೆ ಇದ್ದರೆ ಗ್ರಾಹಕ ಒಮ್ಮೆ ಹೌಹಾರುವುದು ಖಚಿತ. ಆದರೆ ಇಲ್ಲೊಬ್ಬ ಕ್ಷೌರಿಕ ಕೇಶ ವಿನ್ಯಾಸಕ್ಕೆ (hair style) ಸಲಾಕೆ ಬಳಸಿ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗಿದ್ದಾನೆ. ಈತನ ವಿಡಿಯೋ ಈಗ ವೈರಲ್ (Viral Video) ಆಗಿದೆ.

ಕ್ಷೌರಿಕನು ತನ್ನ ಕೆಲಸವನ್ನು ಚೂಪಾದ ಕತ್ತರಿ ಅಥವಾ ಕೂದಲಿನ ಟ್ರಿಮ್ಮರ್ ಬಳಸಿ ಮಾಡುತ್ತಾನೆ ಎಂಬುದು ಎಲ್ಲರ ನಿರೀಕ್ಷೆ. ಕೆಲವೊಮ್ಮೆ, ಹೆಚ್ಚಿನ ಗ್ರಾಹಕರನ್ನು ಆಕರ್ಷಿಸಲು ಕೇಶ ವಿನ್ಯಾಸಕರು ವಿವಿಧ ತಂತ್ರಗಳನ್ನು ಬಳಸುತ್ತಾರೆ.

ಮುಖ್ಯವಾಗಿ ಕೂದಲಿನ ಒಡೆದ ತುದಿಗಳನ್ನು ಸುಡಲು ಬೆಂಕಿಯನ್ನು ಬಳಸುತ್ತಾರೆ. ಆದರೆ ಇಲ್ಲೊಬ್ಬ ಯುವಕನಿಗೆ ಕ್ಷೌರಿಕನು ಕೇಶ ವಿನ್ಯಾಸ ಮಾಡಲು ಕತ್ತರಿ ಅಥವಾ ಟ್ರಿಮ್ಮರ್‌ಗಳನ್ನು ಬಳಸದೆ ಅಸಾಂಪ್ರದಾಯಿಕ ಸಾಧನವನ್ನು ಬಳಸಲು ನಿರ್ಧರಿಸಿದ. ಇದು ಸಾಕಷ್ಟು ಸಾಹಸಮಯವಾಗಿತ್ತು.

ಕ್ಷೌರಿಕನೊಬ್ಬ ತನ್ನ ಗ್ರಾಹಕರಿಗೆ ಸಲಿಕೆಯಿಂದ ಕ್ಷೌರವನ್ನು ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋ ಆನ್‌ಲೈನ್‌ನಲ್ಲಿ ಹೆಚ್ಚು ಮಂದಿಯ ಗಮನ ಸೆಳೆದಿದ್ದು, ಸಾಕಷ್ಟು ಮಂದಿ ಬೆಚ್ಚಿ ಬೀಳುವಂತೆ ಮಾಡಿದೆ. ಒಬ್ಬ ಯುವಕ ಕುರ್ಚಿಯಲ್ಲಿ ಕುಳಿತು ಕ್ಷೌರಿಕನಿಂದ ಕೂದಲನ್ನು ಕತ್ತರಿಸುವುದನ್ನು ಇದು ತೋರಿಸುತ್ತದೆ. ಅವನು ತನ್ನ ಕೂದಲನ್ನು ಕ್ಷೌರ ಮಾಡಲು ಹೇರ್ ಟ್ರಿಮ್ಮರ್ ಬದಲಿಗೆ ಸಲಾಕೆಯನ್ನು ಬಳಸುತ್ತಾನೆ.

ಕ್ಷೌರಿಕನು ಗ್ರಾಹಕರ ಕೂದಲನ್ನು ಒರಟಾಗಿ ಮತ್ತು ಅಸಮವಾಗಿ ಕಾಣುವಂತೆ ಮಾಡುತ್ತದೆ. ಈ ಕ್ಲಿಪ್ ಇನ್ ಸ್ಟಾ ಗ್ರಾಮ್ ನಲ್ಲಿ ಸುಮಾರು 40 ಮಿಲಿಯನ್ ವೀಕ್ಷಣೆಗಳನ್ನು ಗಳಿಸಿದೆ.

ಸಾಕಷ್ಟು ನೆಟ್ಟಿಗರು ಇದಕ್ಕೆ ಕಾಮೆಂಟ್ ಮಾಡಿ ಆಘಾತ ಮತ್ತು ಅಪನಂಬಿಕೆಯನ್ನು ವ್ಯಕ್ತಪಡಿಸಿದ್ದಾರೆ. ಒಬ್ಬ ಬಳಕೆದಾರನು ಬ್ರೋ, ನೀವು ಜೆಸಿಬಿಗೆ ಕರೆ ಮಾಡಬಹುದಿತ್ತು ಎಂದು ಹೇಳಿದ್ದರೆ, ಮತ್ತೊಬ್ಬರು ನಾನು ಈ ವಿಡಿಯೋವನ್ನು ನೋಡುವುದನ್ನು ನಿಲ್ಲಿಸಲು ಸಾಧ್ಯವಿಲ್ಲ ಎಂದು ಟೀಕಿಸಿದರು.


ಮತ್ತೊಬ್ಬರು ಕಾಮೆಂಟ್ ನಲ್ಲಿ ನೀವು ಯಾವ ರೀತಿಯ ಎಂಜಿನಿಯರಿಂಗ್ ಮಾಡಿದ್ದೀರಿ ಸಹೋದರ, ಯಾರ್ ಇದು ನಾಟಕ ಯಾವುದು? ಎಂದು ತಿಳಿಸಿದ್ದಾರೆ.

ಕ್ಷೌರಿಕನು ಸಲಿಕೆಯಿಂದ ಚಿಕ್ಕ ಹುಡುಗನ ತಲೆಯನ್ನು ಬೋಳಿಸಿಕೊಂಡ ರೀತಿ ತುಂಬಾ ಸಾಂದರ್ಭಿಕವಾಗಿತ್ತು ಮತ್ತು ಗಮನವನ್ನು ಸೆಳೆಯಲು ಅವನು ಹೊಸ ಪ್ರವೃತ್ತಿಯನ್ನು ಪ್ರಾರಂಭಿಸಲು ಪ್ರಯತ್ನಿಸುತ್ತಿರುವಂತೆ ತೋರುತ್ತಿದೆ.

ಇದನ್ನೂ ಓದಿ: Manu Bhaker: ವಯಲಿನ್‌ ಮೂಲಕ ರಾಷ್ಟ್ರಗೀತೆ ನುಡಿಸಿದ ಮನು ಭಾಕರ್; ವಿಡಿಯೊ ವೈರಲ್​

ಇತ್ತೀಚೆಗೆ, ಮತ್ತೊಂದು ಕ್ಲಿಪ್ ವೈರಲ್ ಆಗಿದೆ. ಅಲ್ಲಿ ಖಾತೆಯು ಬೇರೆ ಗ್ರಾಹಕರ ಮೇಲೆ ಸಲಿಕೆ ಬಳಸಿ ಕ್ಷೌರಿಕನ ಮತ್ತೊಂದು ಕ್ಲಿಪ್ ಅನ್ನು ಪೋಸ್ಟ್ ಮಾಡಿದೆ. ಅವರು ತಮ್ಮ ಗ್ರಾಹಕರಿಗೆ ಹಿಂದಿನಿಂದ ಕಳೆಗುಂದಿದ ಕೇಶವಿನ್ಯಾಸವನ್ನು ನೀಡಿದರು ಮತ್ತು ಸಲಿಕೆ ಬಳಸಿ ಕೂದಲನ್ನು ತೆಗೆದರು.


ಈ ಕ್ಲಿಪ್ ಅನ್ನು ಸೂಕ್ಷ್ಮವಾಗಿ ಗಮನಿಸಿದರೆ, ಅವನು ಈಗಾಗಲೇ ಕೂದಲನ್ನು ತೆಗೆದು ಸಲಿಕೆಯನ್ನು ಬಳಸಿ ವಿಶೇಷ ವಿನ್ಯಾಸ ನೀಡಲು ಬಳಸಿದಂತೆ ತೋರುತ್ತದೆ. ಈ ಕ್ಲಿಪ್‌ ಬಗ್ಗೆ ಯಾವುದೇ ದೃಢೀಕರಣ ಖಾತ್ರಿಪಡಿಸಲಾಗದಿದ್ದರೂ ಇದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಯನ್ನು ಹುಟ್ಟು ಹಾಕಿದೆ.

Continue Reading

ಕ್ರೀಡೆ

Virat Kohli: ಗಂಭೀರ್​ ಮಾರ್ಗದರ್ಶನದಂತೆ ಅತ್ಯಂತ ಜೋಶ್​ನಿಂದ ಬ್ಯಾಟಿಂಗ್​ ಅಭ್ಯಾಸ ನಡೆಸಿದ ಕೊಹ್ಲಿ; ಫೋಟೊ ವೈರಲ್​

Virat Kohli: ಶ್ರೀಲಂಕಾ(India tour of Sri Lanka) ವಿರುದ್ಧದ ಏಕದಿನ ಸರಣಿಯಲ್ಲಿ ವಿರಾಟ್​ ಕೊಹ್ಲಿ 152 ರನ್ ಗಳಿಸಿದರೆ ಏಕದಿನ ಕ್ರಿಕೆಟ್​ನಲ್ಲಿ 14 ಸಾವಿರ ರನ್ ಪೂರೈಸಲಿದ್ದಾರೆ. ಈ ಸಾಧನೆ ಮಾಡಿದ ವಿಶ್ವದ ಮೂರನೇ ಬ್ಯಾಟರ್​ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

VISTARANEWS.COM


on

Virat Kohli
Koo

ಕೊಲಂಬೊ: ಶ್ರೀಲಂಕಾ ವಿರುದ್ಧ ಟಿ20 ಸರಣಿ ಗೆದ್ದ ಜೋಶ್​ನಲ್ಲಿರುವ ಟೀಮ್​ ಇಂಡಿಯಾ ಇದೀಗ ಏಕದಿನ ಸರಣಿಯನ್ನಾಡಲು ಸಜ್ಜಾಗಿದೆ. ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯ ಆಗಸ್ಟ್​ 2ರಂದು ನಡೆಯಲಿದೆ. ಈಗಾಗಲೇ ಲಂಕಾ ತಲುಪಿರುವ ಏಕದಿನ ತಂಡದ ಆಟಗಾರರು ಅಭ್ಯಾಸ ಆರಂಭಿಸಿದ್ದಾರೆ. ಬುಧವಾರ ವಿರಾಟ್​ ಕೊಹ್ಲಿ(Virat Kohli) ಅವರು ನೂತನ ಕೋಚ್​ ಗೌತಮ್ ಗಂಭೀರ್(Head Coach Gambhir)​ ಜತೆ ಅತ್ಯಂತ ಆತ್ಮೀಯವಾಗಿ ಚರ್ಚಿಸುತ್ತಿರುವುದು ಕಂಡು ಬಂತು. ಈ ಫೋಟೊ(photo viral) ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ವಿರಾಟ್​ ಕೊಹ್ಲಿ ಅವರು ಗಂಭೀರ್(Gautam Gambhir)​ ಜತೆ ಬ್ಯಾಟಿಂಗ್​ ಮಾರ್ಗದರ್ಶನ ಮತ್ತು ಆತ್ಮೀಯವಾಗಿ ಚರ್ಚಿಸುತ್ತಿರುವ ಫೋಟೊವನ್ನು ನೆಟ್ಟಿಗರೊಬ್ಬರು ತಮ್ಮ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೊ ಕಂಡ ಅನೇಕ ನೆಟ್ಟಿಗರು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಗಂಭೀರ್​ ಕೋಚ್​ ಆಗುತ್ತಿದ್ದಂತೆಯೇ ಕೆಲ ನೆಟ್ಟಿಗರು ಗಂಭೀರ್​ ಮತ್ತು ಕೊಹ್ಲಿ ನಡುವಣ ಆನ್ ಫೀಲ್ಡ್ ಜಗಳ ಮತ್ತೆ ಶುರುವಾಗಿ ಇದು ತಂಡಕ್ಕೆ ಭಾದಿಸಲಿದೆ ಎಂದು ಹೇಳಿದ್ದರು. ನೆಟ್ಟಿಗರು ಈ ಮಾತು ಹೇಳಲು ಕೂಡ ಕಾರಣವಿತ್ತು. ಅದೇನೆಂದರೆ, ವಿರಾಟ್​ ಕೊಹ್ಲಿ ಮತ್ತು ಗಂಭೀರ್​ ಐಪಿಎಲ್​ ವೇಳೆ ಹಾವು ಮುಂಗುಸಿಯಂತೆ ಕಿತ್ತಾಡಿಕೊಳ್ಳುತ್ತಿದ್ದರು. ಕಳೆದ ವರ್ಷದ ಐಪಿಎಲ್​ ವೇಳೆ ಕೈ ಕೈ ಮಿಲಾಯಿಸುವ ಹಂತಕ್ಕೂ ಇಬರಿಬ್ಬರ ಜಗಳ ಮುಂದುವರಿದಿತ್ತು. ಕೊಹ್ಲಿಯ ವಿರುದ್ಧ ಹಲವು ಬಾರಿ ಬಹಿರಂಗವಾಗಿ ಮುನಿಸನ್ನು ಕೂಡ ಗಂಭೀರ್ ಪ್ರದರ್ಶಿಸಿದ್ದರು. ಹೀಗಿರುವಾಗ ಇವರಿಬ್ಬರ ಜಗಳ ಮತ್ತೆ ಮುಂದುವರಿದರೆ ತಂಡದ ಒಗ್ಗಟ್ಟು ಇಲ್ಲದಂತಾಗಬಹುದೆಂದು ಆತಂಕ ವ್ಯಕ್ತಪಡಿಸಿದ್ದರು. ಆದರೆ, ಇದೀಗ ಇಬರಿಬ್ಬರು ಎಲ್ಲ ಮುನಿಸು ಮರೆತು ಆತ್ಮೀಯವಾಗಿರುವಂತೆ ಕಾಣಿಸಿದೆ.

ಏಕದಿನ ಸರಣಿ ಆರಂಭಕ್ಕೂ ಮುನ್ನವೇ ಕೊಹ್ಲಿ ಅವರು ಬಿಸಿಸಿಐ ಬಳಿ ತಾನು ಗಂಭೀರ್ ಜತೆಗೆ ನಡೆಸಿದ ಕಿತ್ತಾಟಗಳನ್ನು ಮರೆತು ಅವರೊಂದಿಗೆ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುವುದಾಗಿ, ಗಂಭೀರ್​ ಕೂಡ ತಾನು ಕೊಹ್ಲಿ ಜತೆ ಉತ್ತಮ ಬಾಂಧವ್ಯದೊಂದಿಗೆ ಇರುವುದಾಗಿ ತಿಳಿಸಿದ್ದಾಗಿ ವರದಿಯಾಗಿತ್ತು.

ಇದನ್ನೂ ಓದಿ Virat Kohli: ಬಿಸಿಸಿಐ ಅಧಿಕಾರಿಗಳನ್ನು ಸಂಪರ್ಕಿಸಿ ಕೋಚ್​ ಗಂಭೀರ್​ ವಿಚಾರದಲ್ಲಿ ಕೊಹ್ಲಿ ಕೊಟ್ಟ ಆಶ್ವಾಸನೆ ಏನು?

ದಾಖಲೆ ಬರೆಯಲು ಕೊಹ್ಲಿ ಸಜ್ಜು

ವಿರಾಟ್​ ಕೊಹ್ಲಿಗೆ(Virat Kohli) ಶ್ರೀಲಂಕಾ(India tour of Sri Lanka) ವಿರುದ್ಧದ ಏಕದಿನ ಸರಣಿಯಲ್ಲಿ ವಿಶೇಷ ದಾಖಲೆಯೊಂದನ್ನು ಬರೆಯುವ ಅವಕಾಶವಿದೆ. ಹೌದು, ಕೊಹ್ಲಿ 152 ರನ್ ಗಳಿಸಿದರೆ ಏಕದಿನ ಕ್ರಿಕೆಟ್​ನಲ್ಲಿ 14 ಸಾವಿರ ರನ್ ಪೂರೈಸಲಿದ್ದಾರೆ. ಈ ಸಾಧನೆ ಮಾಡಿದ ವಿಶ್ವದ ಮೂರನೇ ಬ್ಯಾಟರ್​ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಸದ್ಯ 292* ಏಕದಿನ ಪಂದ್ಯಗಳನ್ನಾಡಿರುವ ವಿರಾಟ್​ ಕೊಹ್ಲಿ 13,848* ರನ್(virat kohli odi runs)​ ಬಾರಿಸಿದ್ದಾರೆ. ಲಂಕಾ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ಕೊಹ್ಲಿ 152 ರನ್​ ಬಾರಿಸಿದರೆ 14 ಸಾವಿರ ರನ್​ ಮೈಲುಗಲ್ಲು ತಲುಪಲಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ 14000ಕ್ಕೂ ಹೆಚ್ಚು ರನ್ ಗಳಿಸಿದ ಸಾರ್ವಕಾಲಿದ ದಾಖಲೆ ಸಚಿನ್ ತೆಂಡೂಲ್ಕರ್ ಮತ್ತು ಕುಮಾರ ಸಂಗಕ್ಕಾರ ಹೆಸರಿನಲ್ಲಿದೆ. ಸಚಿನ್ 463 ಏಕದಿನ ಪಂದ್ಯಗಳಲ್ಲಿ 18,426 ರನ್ ಗಳಿಸಿದ್ದರೆ, ಕುಮಾರ ಸಂಗಕ್ಕಾರ 404 ಪಂದ್ಯಗಳನ್ನಾಡಿ 14,234 ರನ್ ಬಾರಿಸಿದ್ದಾರೆ. ಕೊಹ್ಲಿಗೆ ಸಂಗಕ್ಕಾರ ದಾಖಲೆ ಮುರಿಯುವ ಅವಕಾಶವಿದೆ. ಆದರೆ ಸಚಿನ್​ ದಾಖಲೆ ಮುರಿಯುವುದು ಕಷ್ಟ ಸಾಧ್ಯ.

Continue Reading

Latest

Crocodile Attack: ತಂದೆಯ ಜೀವ ಉಳಿಸಲು ಮೊಸಳೆ ಬಾಯಿಗೆ ಕೈ ಹಾಕಿದ ಬಾಲಕ!

Crocodile Attack: ರಬಿಯುಲ್ ಶೇಖ್ ಎಂಬ 12 ವರ್ಷದ ಬಾಲಕ ತನ್ನ ತಂದೆಯನ್ನು ಉಳಿಸುವ ಪ್ರಯತ್ನದಲ್ಲಿ ಸುಂದರ್ ಬನ್‌ನಲ್ಲಿ ಮೊಸಳೆಯೊಂದಿಗೆ ಹೋರಾಡಿದ್ದಾನೆ. ಆದರೆ ಆತನ ನಿರಂತರ ಹೋರಾಟದ ಹೊರತಾಗಿಯೂ, ಅವನು ತನ್ನ ತಂದೆಯನ್ನು ಮೊಸಳೆಯ ಹಿಡಿತದಿಂದ ಬಿಡಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಹಳ್ಳಿಗೆ ಹೋಗಿ ಮಗ ಕೆಲವು ಜನರೊಂದಿಗೆ ಹಿಂದಿರುಗಿದ. ಆದರೆ ಅಷ್ಟರಲ್ಲಿ ಮೊಸಳೆ ಆತನ ತಂದೆಯನ್ನು ನದಿಗೆ ಎಳೆದುಕೊಂಡು ಹೋಗಿತ್ತು.

VISTARANEWS.COM


on

Crocodile Attack
Koo


ಮಳೆಗಾಲದಲ್ಲಿ ನದಿಗಳಲ್ಲಿ ನೀರು ತುಂಬಿ ಹರಿಯುವುದರಿಂದ ನದಿಯಲ್ಲಿರುವ ಮೊಸಳೆಗಳು ದಡಕ್ಕೆ ಬಂದು ಸೇರುತ್ತವೆ. ಅವುಗಳಿಗೆ ಆಹಾರ ಸಿಗದಿದ್ದಾಗ ಕೆಲವೊಮ್ಮೆ ಅವುಗಳು ಮನುಷ್ಯರ ಮೇಲೆ ದಾಳಿ ಮಾಡುತ್ತವೆ. ಅಂತಹದೊಂದು ಘಟನೆ ಇತ್ತೀಚೆಗೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಪಶ್ಚಿಮ ಬಂಗಾಳದಲ್ಲಿ ಮೀನುಗಾರಿಕೆಗಾಗಿ ನದಿಗೆ ತೆರಳಿದ್ದ ವ್ಯಕ್ತಿಯೊಬ್ಬರ ಮೇಲೆ ಮೊಸಳೆ ದಾಳಿ (Crocodile Attack)ಮಾಡಿದ್ದು, ಆಗ ಆತನ ಜೊತೆಗಿದ್ದ 12 ವರ್ಷದ ಬಾಲಕನೊಬ್ಬ ತನ್ನ ತಂದೆಯನ್ನು ಮೊಸಳೆ ಹಿಡಿತದಿಂದ ರಕ್ಷಿಸಲು ಮೊಸಳೆ ಜೊತೆಗೆ ಹೋರಾಡಿದ್ದಾನೆ.

ರಬಿಯುಲ್ ಶೇಖ್ ಎಂಬ 12 ವರ್ಷದ ಬಾಲಕ ತನ್ನ ತಂದೆಯನ್ನು ಉಳಿಸುವ ಪ್ರಯತ್ನದಲ್ಲಿ ಸುಂದರ್ ಬನ್‌ನಲ್ಲಿ 10 ಅಡಿ ಉಪ್ಪುನೀರಿನ ಮೊಸಳೆಯೊಂದಿಗೆ ಹೋರಾಡಿದ್ದಾನೆ. ಆದರೆ ಆತನ ನಿರಂತರ ಹೋರಾಟದ ಹೊರತಾಗಿಯೂ, ಅವನು ತನ್ನ ತಂದೆಯನ್ನು ಮೊಸಳೆಯ ಹಿಡಿತದಿಂದ ಬಿಡಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ದಕ್ಷಿಣ 24-ಪರಗಣದ ಪಥರ್ ಪ್ರತಿಮಾದ ಸತ್ಯದಾಸ್ಪುರ ಗ್ರಾಮದ ಜಗದ್ದಲ್ ನದಿಯ ದಡದಲ್ಲಿ ಭಾನುವಾರ ಈ ಘಟನೆ ನಡೆದಿದೆ. ತಂದೆ ಮಗ ಇಬ್ಬರೂ ನದಿಗೆ ಮೀನುಗಾರಿಕೆಗೆ ಹೋಗಿದ್ದರು. ಮೀನುಗಾರಿಕೆ ಬಲೆಯನ್ನು ಹಿಂಪಡೆಯಲು ಪ್ರಯತ್ನಿಸುತ್ತಿದ್ದ 45 ವರ್ಷದ ಅಸ್ಮುದ್ದೀನ್ ಶೇಖ್ ಮೇಲೆ ಮೊಸಳೆ ದಾಳಿ ಮಾಡಿದೆ. ಇದನ್ನು ನೋಡಿದ ಮಗ ಮೊಸಳೆಯ ಮೇಲೆ ಹಾರಿ ತನ್ನ ತಂದೆಯ ತೋಳನ್ನು ಮೊಸಳೆಯ ಬಾಯಿಂದ ಬಿಡಿಸಲು ತನ್ನ ಕೈಗಳಿಂದ ಅದರ ದವಡೆಗಳನ್ನು ತೆರೆಯಲು ಪ್ರಯತ್ನಿಸಿದನು. ತನ್ನ ಮಗ ಹೆಣಗಾಡುತ್ತಿರುವುದನ್ನು ನೋಡಿದ ಅಸ್ಮಾವುದ್ದೀನ್, ಹಳ್ಳಿಗೆ ಹೋಗಿ ಕೆಲವು ಜನರನ್ನು ತನ್ನೊಂದಿಗೆ ಕರೆತರುವಂತೆ ಮಗನಿಗೆ ಹೇಳಿದ್ದಾನೆ. ಬಾಲಕ ನದಿಯ ದಡಕ್ಕೆ ಧಾವಿಸಿ ಕೆಲವು ನಿಮಿಷಗಳಲ್ಲಿ ಕೆಲವು ಜನರೊಂದಿಗೆ ಹಿಂದಿರುಗಿದನು. ಆದರೆ ಅಷ್ಟರಲ್ಲಿ ಮೊಸಳೆ ಆತನ ತಂದೆಯನ್ನು ನದಿಗೆ ಎಳೆದುಕೊಂಡು ಹೋಗಿತ್ತು.

ಇದನ್ನೂ ಓದಿ: ಕೆಸರು ಗದ್ದೆಯಲ್ಲಿ ಹೊರಳಾಡಿದ ದಂಪತಿ; ವೈರಲ್ ಆಯ್ತು ಇವರಿಬ್ಬರ ನಾಗಿನಿ ಡ್ಯಾನ್ಸ್‌!

ಆನಂತರ ಈ ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಅರಣ್ಯ ಅಧಿಕಾರಿಗಳ ಸಹಾಯದಿಂದ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಅಸ್ಮುದ್ದೀನ್ ಅವರ ಶವ ಸೋಮವಾರ ಬೆಳಿಗ್ಗೆ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ತನ್ನ ತಂದೆಯನ್ನು ಉಳಿಸಲು ಅಸಾಮಾನ್ಯ ಧೈರ್ಯವನ್ನು ತೋರಿಸಿದ ಹುಡುಗನನ್ನು ಪೊಲೀಸರು ಹೊಗಳಿದ್ದಾರೆ. ಆದರೆ ಎಷ್ಟೇ ಹೋರಾಡಿದರೂ ತನ್ನ ತಂದೆಯ ಪ್ರಾಣ ಉಳಿಸಿಕೊಳ್ಳಲು ಸಾಧ್ಯವಾಗದೆ ಆತ ದುಃಖಿಸುತ್ತಿದ್ದಾನೆ.

Continue Reading
Advertisement
Supreme Court SC ST Quota
ಪ್ರಮುಖ ಸುದ್ದಿ8 mins ago

Supreme Court Sc St Quota: ಎಸ್‌ಸಿ ಎಸ್‌ಟಿ ಒಳಮೀಸಲು; ಸುಪ್ರೀಂ ಕೋರ್ಟ್‌ ತೀರ್ಪಿನಿಂದಾಗಿ ಕೇಂದ್ರದಿಂದ ರಾಜ್ಯ ಸರ್ಕಾರದ ಅಂಗಳಕ್ಕೆ ಬಂದ ಚೆಂಡು

karnataka Rain
ಮಳೆ9 mins ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ28 mins ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ40 mins ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

Stock Market
ವಾಣಿಜ್ಯ49 mins ago

Stock Market: ಷೇರುಪೇಟೆಯಲ್ಲಿ ಗೂಳಿ ಜಿಗಿತ; ಮೊದಲ ಬಾರಿ 82,000 ಗಡಿ ದಾಟಿದ ಸೆನ್ಸೆಕ್ಸ್

ಕ್ರೀಡೆ1 hour ago

Paris Olympics: ಇಂದು ಲಕ್ಷ್ಯ ಸೇನ್‌-ಪ್ರಣಯ್ ಮಧ್ಯೆ ಪ್ರೀ ಕ್ವಾರ್ಟರ್​ ಮುಖಾಮುಖಿ; ಭಾರತಕ್ಕೆ ಒಂದು ಪದಕ ನಷ್ಟ

police firing gadag
ಕ್ರೈಂ1 hour ago

Police Firing: ದರೋಡೆ ಎಸಗಿದ ರೌಡಿಶೀಟರ್ ಕಾಲಿಗೆ ಪೊಲೀಸರ ಗುಂಡು, ಬಂಧನ

Pushpa 2 Allu Arjun climax leaked Fans urge producers to take action
ಟಾಲಿವುಡ್1 hour ago

Pushpa 2: ಪುಷ್ಪ 2 ಕ್ಲೈ ಮ್ಯಾಕ್ಸ್‌ ದೃಶ್ಯ ಲೀಕ್‌; ಕೋಪ ಹೊರ ಹಾಕಿದ ಅರ್ಜುನ್‌ ಫ್ಯಾನ್ಸ್‌!

Supreme Court Sc St Quota
ದೇಶ2 hours ago

Supreme Court SC ST Quota: ಪರಿಶಿಷ್ಟ ಜಾತಿ- ಪಂಗಡ ಒಳಮೀಸಲಾತಿ ಕಾನೂನುಬದ್ಧ: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

Gold Rate Today
ಚಿನ್ನದ ದರ2 hours ago

Gold Rate Today: ಮತ್ತೆ ಶಾಕ್‌ ಕೊಟ್ಟ ಚಿನ್ನದ ದರ; ಬಂಗಾರ ಇಂದು ಇಷ್ಟು ದುಬಾರಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ9 mins ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ28 mins ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ40 mins ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ2 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ2 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ3 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ3 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ3 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ4 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌