ಬೆಂಗಳೂರು: ವಾಲ್ಮೀಕಿ ನಿಗಮ ಹಗರಣದಲ್ಲಿ (Valmiki Corporation Scam) ಕೋಟ್ಯಂತರ ರೂಪಾಯಿ ತೆಲಂಗಾಣ ಕಂಪನಿಗಳಿಗೆ ವರ್ಗಾವಣೆಯಾಗಿದೆ ಎಂಬ ಆರೋಪಗಳು ಕೇಳಿಬಂದಿರುವುದರಿಂದ ಹಣ ವಾಪಸ್ ನೀಡುವಂತೆ ನೆರೆ ರಾಜ್ಯದ ಸಿಎಂಗೆ ಕನ್ನಡಿಗರು ಪತ್ರ ಬರೆದಿರುವುದು ಕಂಡುಬಂದಿದೆ. ಕರ್ನಾಟಕದ ಹಣವನ್ನು ತೆಲಂಗಾಣ ಚುನಾವಣೆಗೆ ಬಳಸಲಾಗಿದೆ. ಹೀಗಾಗಿ ಅಕ್ರಮವಾಗಿ ವರ್ಗಾವಣೆಯಾದ ಹಣವನ್ನು ಹಿಂತಿರುಗಿಸಬೇಕು ಎಂದು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರಿಗೆ ಮನವಿ ಮಾಡಲಾಗಿದೆ.
ತೆಲಂಗಾಣ ಸಿಎಂಗೆ ಕನ್ನಡಿಗರ ಹೆಸರಿನಲ್ಲಿ ಪತ್ರ ಬರೆದಿರುವ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಹಂಚಿಕೊಂಡಿದೆ. ಕರ್ನಾಟಕದ ವಾಲ್ಮೀಕಿ ಸಮುದಾಯಕ್ಕೆ ಸೇರಬೇಕಾಗಿದ್ದ ಸುಮಾರು 187 ಕೋಟಿ ರೂ. ಹಣವನ್ನು ನಿಮ್ಮ ನಾಯಕ ರಾಹುಲ್ ಗಾಂಧಿ ಅವರ ಆಣತಿಯಂತೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ, ಸಚಿವ ನಾಗೇಂದ್ರ ಅವರ ಮೂಲಕ ತೆಲಂಗಾಣದ ಕಾಂಗ್ರೆಸ್ ಚುನಾವಣಾ ಖರ್ಚಿಗೆ ಸಾಗಿಸಿದ್ದಾರೆ.
ಇದನ್ನೂ ಓದಿ | Congress Guarantee: ʼಸ್ಯಾಡಿಸ್ಟ್ʼ ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟವಾಗಿಲ್ಲ, ನಿಲ್ಲಿಸೋದೇ ಒಳಿತು ಎಂದ ಲಕ್ಷ್ಮಣ್!
ನಿಮ್ಮಲ್ಲಿ ಕನ್ನಡಿಗರು ಕೇಳಿಕೊಳ್ಳುವುದೇನೆಂದರೆ ನಮ್ಮ ರಾಜ್ಯಕ್ಕೆ ಸೇರಬೇಕಾಗಿದ್ದ ಹಣವನ್ನು ದಯಮಾಡಿ ಹಿಂತಿರುಗಿಸಿ ಕೊಡಿ. ಈ ಹಣ ವಾಲ್ಮೀಕಿ ಸಮುದಾಯದ ಏಳಿಗೆಗಾಗಿ ಬಳಕೆ ಆಗಬೇಕಿತ್ತು ಈ ನೀಚ ಸರ್ಕಾರ ಉಂಡು ಹೋದ ಕೊಂಡು ಹೋದ ಎಂಬಂತೆ ತಮ್ಮ ಸ್ವಾರ್ಥಕ್ಕಾಗಿ ಇಲ್ಲಿ ಲೂಟಿ ಹೊಡೆದದ್ದಲ್ಲದೆ, ಮಿಕ್ಕ ಹಣವನ್ನೂ ಬೇರೆ ಬೇರೆ ರಾಜ್ಯಗಳ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಖರ್ಚಿಗೆ ಸಾಗಿಸಿದ್ದಾರೆ.
ಗುಂಡಿಗೆ ಹೋದ ಹೆಣ, @INCKarnataka ನುಂಗಿದ ಹಣ ಎಂದಿಗೂ ವಾಪಸ್ ಬರುವುದಿಲ್ಲ ಎಂಬುದು ತಿಳಿದಿದ್ದರೂ ಕೊನೆ ಪ್ರಯತ್ನವಾಗಿ ತೆಲಂಗಾಣದ ಮುಖ್ಯಮಂತ್ರಿ @revanth_anumula ಅವರಿಗೆ ಕನ್ನಡಿಗರ ಪತ್ರ. pic.twitter.com/NEw7H12oqk
— Janata Dal Secular (@JanataDal_S) June 8, 2024
ಗುಂಡಿಗೆ ಹೋದ ಹೆಣ, ಕಾಂಗ್ರೆಸ್ ನುಂಗಿದ ಹಣ ಎಂದಿಗೂ ವಾಪಸ್ ಬರುವುದಿಲ್ಲ ಎಂಬುದು ನಮಗೆ ತಿಳಿದಿದೆ ಆದ್ರೆ ಕೊನೆ ಪ್ರಯತ್ನವಾಗಿ ನಿಮ್ಮಲ್ಲಿ ಈ ಮನವಿ ಮಾಡುತ್ತಿದ್ದೇವೆ, ಹಣ ಹಿಂತಿರುಗಿಸಿ ವಿಶ್ವಾಸ ಉಳಿಸಿಕೊಳ್ಳಿ ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ. ಸದ್ಯ ಈ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಇದನ್ನೂ ಓದಿ | ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣದಲ್ಲಿ ಸಚಿವ ಶರಣ ಪ್ರಕಾಶ್ ಪಾಟೀಲ್ ಹೆಸರು; ಡಾ. ಜಿ.ಪರಮೇಶ್ವರ್ ಹೇಳಿದ್ದೇನು?
ತೆಲಂಗಾಣ ಸಹಕಾರ ಬ್ಯಾಂಕ್ ಅಧ್ಯಕ್ಷನನ್ನು ಬಂಧಿಸಿದ್ದ ಎಸ್‌ಐಟಿ
ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್‌ನ ಸಹಕಾರ ಬ್ಯಾಂಕ್ ಅಧ್ಯಕ್ಷ ಸತ್ಯನಾರಾಯಣ ಇಟಕಾರಿ ಎಂಬುವವರನ್ನು ಸಿಐಡಿ ಎಸ್‌ಐಟಿ ಜೂನ್ 4ರಂದು ಬಂಧಿಸಿತ್ತು. ಆರೋಪಿ ಸತ್ಯನಾರಾಯಣ ಹೈದರಾಬಾದ್‌ನ ನಲ್ಲಕುಂಟ ಪ್ರದೇಶದಲ್ಲಿರುವ ಫಸ್ಟ್ ಫೈನಾನ್ಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್‌ನ ಅಧ್ಯಕ್ಷ ಹಾಗೂ ವ್ಯವಸ್ಥಾಪಕರಾಗಿದ್ದಾರೆ.
ವಾಲ್ಮೀಕಿ ನಿಗಮದ 94.73 ಕೋಟಿ ರೂ. ಅಕ್ರಮ ವರ್ಗಾವಣೆಯಲ್ಲಿ ಸತ್ಯನಾರಾಯಣ ಪ್ರಧಾನ ಸೂತ್ರಧಾರ ಆರೋಪಿಯಾಗಿದ್ದಾರೆ. ಯೂನಿಯನ್ ಬ್ಯಾಂಕ್‌ನಲ್ಲಿರುವ ವಾಲ್ಮೀಕಿ ನಿಗಮದ ಖಾತೆಯಿಂದ 18 ನಕಲಿ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಆಗಿತ್ತು. ತನಿಖೆ ವೇಳೆ ಫೈನಾನ್ಸ್ ಕಂಪನಿ ಸತ್ಯನಾರಾಯಣ ಅವರೇ 18 ನಕಲಿ ಖಾತೆಗಳನ್ನು ಸೃಷ್ಟಿಸಿ ಹಣ ವರ್ಗಾವಣೆ ಮಾಡಿಸಿಕೊಂಡಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿತ್ತು. ಹೀಗಾಗಿ ಅವರನ್ನು ಎಸ್‌ಐಟಿ ಬಂಧಿಸಿತ್ತು.