Site icon Vistara News

Vicky Pedia: ʻಬಿಸಿ ಗಾಳಿ.. ಬಿಸಿ ಗಾಳಿ.. ಸಹಿ ಹಾಕಿದೆ ಬಿಸಿಲಿನಲಿʼಎಂದು ಹಾಡಿದ ವಿಕಾಸ್ ವಿಕ್ಕಿಪಿಡಿಯ: ಫ್ಯಾನ್ಸ್‌ ಫಿದಾ!

Vicky Pedia New reels about heat in Karnataka

ಬೆಂಗಳೂರು: ರಾಜ್ಯದಲ್ಲಿ ಅಲ್ಲಲ್ಲಿ ಸುರಿಯುತ್ತಿದ್ದ ಮಳೆಯು, ಕಳೆದ ನಾಲ್ಕೈದು ದಿನಗಳಿಂದ ಕಣ್ಮರೆಯಾಗಿದ್ದರಿಂದ ಹಲವೆಡೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ.  ಹೀಗಿರುವಾಗ ಇದೇ ಟಾಪಿಕ್‌ ಇಟ್ಟುಕೊಂಡು ವಿಕಾಸ್ ವಿಕ್ಕಿಪಿಡಿಯ (Vicky Pedia) ತಂಡ ಹೊಸ ರೀಲ್ಸ್‌ವೊಂದು ಶೇರ್‌ ಮಾಡಿಕೊಂಡಿದೆ. ʻಆ ದಿನಗಳುʼ ಸಿನಿಮಾದ ಸಿಹಿ ಗಾಳಿ ಸಿಹಿ ಗಾಳಿ ಸಹಿ ಹಾಕಿದೆ ಮನಸಿನಲ್ಲಿ ಹಾಡಿನ ಟ್ಯೂನ್‌ ಬಳಸಿಕೊಂಡು ವಿಡಿಯೊವೊಂದನ್ನು ಶೇರ್‌ ಮಾಡಿಕೊಂಡಿದ್ದಾರೆ. ಇದೀಗ ತಂಡದ ಕ್ರಿಯೇಟಿವಿಟಿ ಲೆವಲ್‌ಗೆ ನೋಡುಗರು ಫಿದಾ ಆಗಿದ್ದಾರೆ.

“ಬಿಸಿ ಗಾಳಿ ಬಿಸಿ ಗಾಳಿ ಸಹಿ ಹಾಕಿದೆ ಬಿಸಿಲಿನಲಿ..
BURN ಆಯ್ತು
Sweat ಆಯ್ತು
ಕೈ ಕಾಲು HEATನಲಿ
ಸೂರ್ಯ ಬಂದರೆ ಸಾಕು ದಿನವೂ ಬೆವರಲೇ ಬೇಕು
ನೀರು ಖಾಲಿ ಆಗೈತೆ..ತುಂಬಸೋಣ ಬಾ..ʼʼಎಂದು ರೀಲ್ಸ್‌ ಶೇರ್‌ ಮಾಡಿಕೊಂಡಿದ್ದಾರೆ. ಇದೀಗ ಈ ವಿಡಿಯೊ ವೈರಲ್‌ ಆಗುತ್ತಿದ್ದಂತೆ ʻʻಅಷ್ಟು ಬಿಸಿಲು ಇದ್ರೂ ಶಾಲು ಬೇಕಾʼʼಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ. ಮತ್ತೊಬ್ಬರು ʻʻಹಂಸಲೇಖ ಅವ್ರು ಹಿಂಗ್ ಬರ್ಯಲ್ಲ ಗುರುʼʼ ಎಂದು ಕಮೆಂಟ್‌ ಮಾಡಿದ್ದಾರೆ.

ತಮ್ಮ ವಿಭಿನ್ನ ಕಾಮಿಡಿ ವಿಡಿಯೊಗಳಿಂದ ವಿಡಿಯೊ ಕ್ರಿಯೇಟರ್ ವಿಕಾಸ್ ( ವಿಕ್ಕಿ ಪೀಡಿಯಾ) (Vicky Pedia) ಆಗಾಗ ಸುದ್ದಿಯಾಗುತ್ತಲೇ ಇರುತ್ತಾರೆ. ಇತ್ತೀಚಿನ ʻನಾನು ನಂದಿನಿʼ ಹಾಡಿಗೆ ರೀಲ್ಸ್‌ ಮಾಡಿ ಸಖತ್‌ ಫೇಮಸ್‌ ಆಗಿದ್ದರು. ವಿಕ್ಕಿಪೀಡಿಯಾ ಖ್ಯಾತಿಯ (Vicky Pedia) ವಿಕಾಸ್‌ (vickypedia) ಕಂಟೆಂಟ್ ಕ್ರಿಯೇಟರ್. ವಿಡಿಯೊದಲ್ಲಿ ವಿಕ್ಕಿಪೀಡಿಯಾ ವಿಕ್ಕಿ ಪಿಂಕ್‌ ವಿಗ್‌ ಧರಿಸಿ ಈ ರೀತಿಯ ಕ್ರಿಯೇಟಿವ್‌ ರೀಲ್ಸ್‌ ಹಂಚಿಕೊಳ್ಳುತ್ತಲೇ ಇರುತ್ತಾರೆ.

ಇದನ್ನೂ ಓದಿ: Vicky Pedia: ಕರ್ನಾಟಕದಲ್ಲಿ ಬರಗಾಲ: ʻಓ ನಲ್ಲ ನೀರಿಲ್ಲʼ ಎಂದ ವಿಕಾಸ್ ವಿಕ್ಕಿಪಿಡಿಯ!

ವಿಕ್ಕಿಪೀಡಿಯಾ ಖ್ಯಾತಿಯ (Vicky Pedia) ವಿಕಾಸ್‌ (vickypedia) ಕಂಟೆಂಟ್ ಕ್ರಿಯೇಟರ್. ಭಾಷಣ ಟ್ರಾನ್ಸ್‌ಲೇಟ್‌ ವಿಡಿಯೊ ಅಣಕ ಮಾಡಿ ಇವರು ಸಾಕಷ್ಟು ಫೇಮಸ್ ಆಗಿದ್ದರು. ಚುನಾವಣಾ ಸಮಯದಲ್ಲಿ ರಾಷ್ಟ್ರಮಟ್ಟದ ನಾಯಕರ ಹಿಂದಿ ಭಾಷೆಯ ಭಾಷಣವನ್ನು ಸಖತ್‌ ಆಗಿ ಕಾಮಿಡಿಯಾಗಿ ಅಣುಕಿಸಿದ್ದರು.

ಮೇ 8 ರಿಂದ ಎರಡು ದಿನಗಳ ಕಾಲ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ ಬೀಳುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಲ್ಲಿ ಮೇ 8 ರಿಂದ ಮೇ 10ರವರೆಗೆ ಬಿರುಸಾಗಿ ಮಳೆ ಬೀಳುವ ಸಾಧ್ಯತೆ ಇದೆ. ಇನ್ನು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮೇ 9ರಿಂದ ಮುಂದಿನ ಎರಡು ದಿನ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ವರದಿಯಾಗಿದೆ.

Exit mobile version