ಮಹೋಬಾ: ಕೆಲವು ದಿನಗಳ ಹಿಂದೆಯಷ್ಟೇ ಸ್ವಿಮ್ಮಿಂಗ್ ಮಾಡುತ್ತಿದ್ದ ಬಾಲಕನೋರ್ವ ನೋಡ ನೋಡ್ತಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು. ಇದೀಗ ಅಂತಹದ್ದೇ ಒಂದು ಘಟನೆ ಉತ್ತರಪ್ರದೇಶ(Uttar Pradesh)ದ ಮಹೋಬಾದಲ್ಲಿ ನಡೆದಿದೆ. ಎಂದಿನಂತೆ ತಮ್ಮ ಕರ್ತವ್ಯದಲ್ಲಿ ಬ್ಯುಸಿ ಆಗಿದ್ದ ಬ್ಯಾಂಕ್ ನೌಕರರೊಬ್ಬರು ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಇದೀಗ ಈ ದೃಶ್ಯ ಸಿಸಿಟಿವಿ(CCTV)ಯಲ್ಲಿ ಸೆರೆಯಾಗಿದ್ದು, ಭಾರೀ ವೈರಲ್(Viral Video) ಆಗುತ್ತಿದೆ.
ವಿಡಿಯೋದಲ್ಲೇನಿದೆ?
ಉತ್ತರ ಪ್ರದೇಶದ ಮಹೋಬಾದಲ್ಲಿನ ಎಚ್‌ಡಿಎಫ್‌ಸಿ ಶಾಖೆಯಲ್ಲಿ ಅಗ್ರಿ ಜನರಲ್ ಮ್ಯಾನೇಜರ್ ರಾಜೇಶ್ ಕುಮಾರ್ ಶಿಂಧೆ ಅವರು ಎಂದಿನಂತೆ ತಮ್ಮ ಲ್ಯಾಪ್‌ಟಾಪ್‌ನಲ್ಲಿ ಕೆಲಸ ಮಾಡುತ್ತಿದ್ದಾಗಇದ್ದಕ್ಕಿದ್ದಂತೆ ತಮ್ಮ ಕುರ್ಚಿಯ ಮೇಲೆ ಕುಸಿದು ಬಿದ್ದಿದ್ದಾರೆ. ಅವರ ಪಕ್ಕದಲ್ಲಿ ಕುಳಿತಿದ್ದ ಸಹೋದ್ಯೋಗಿಗಳು ತಕ್ಷಣ ಧಾವಿಸಿ ಅವರನ್ನು ಎಚ್ಚರಿಸಲು ಪ್ರಯತ್ನಿಸಿದರು. ಅವರು ಅವನ ಮುಖದ ಮೇಲೆ ನೀರನ್ನು ಚಿಮುಕಿಸಿದರು ಮತ್ತು ಅವರಿಗೆ ಸಿಪಿಆರ್ ನೀಡಲು ಸಹ ಪ್ರಯತ್ನಿಸಿದರು. ಆದರೆ ಅವರ ಸ್ಥಿತಿ ಹದಗೆಟ್ಟಿದ್ದರಿಂದ, ಅವರು ಅವನನ್ನು ಆಸ್ಪತ್ರೆಗೆ ಕರೆದೊಯ್ದರು, ಆದರೆ ಅದು ತುಂಬಾ ತಡವಾಗಿದ್ದ ಕಾರಣ ಅವರು ಕೊನೆಯುಸಿರೆಳೆದರು. ಇನ್ನು ಈ ಘಟನೆ ಜೂನ್ 19 ರಂದು ನಡೆದಿದ್ದು, ಈ ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಎಲ್ಲರೂ ಆಘಾತ ವ್ಯಕ್ತಪಡಿಸಿದ್ದಾರೆ.
Bank employee suddenly suffered a heart attack while working, lost his life.#Mahoba #UP #Heart_attack pic.twitter.com/zndrMHzKQ9
— SANDEEP SINGH RAWAT (@iamsandeeprwt) June 26, 2024
ಕಳೆದ ಶುಕ್ರವಾರ ಅಂತಹದ್ದೇ ಒಂದು ಘಟನೆ ಉತ್ತರಪ್ರದೇಶದ ಮೀರತ್‌ನಲ್ಲಿ ನಡೆದಿತ್ತು. 15 ವರ್ಷದ ಬಾಲಕನೋರ್ವ ಸ್ವಿಮ್ಮಿಂಗ್ ಪೂಲ್(Swimming pool) ಸಮೀಪ ಎಲ್ಲರೂ ನೋಡುತ್ತಿದ್ದಂತೆ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ನಡೆದಿದ್ದು, ಈ ಶಾಕಿಂಗ್ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್(Viral Video) ಆಗಿತ್ತು.
ಸಿವಾಲ್ಖಾಸ್ ಪ್ರದೇಶದ ನಿವಾಸಿಯಾಗಿರುವ 15 ವರ್ಷದ ಬಾಲಕ ಸಮೀರ್ ಬ್ಲೂ ಹೆವನ್ ಸ್ವಿಮ್ಮಿಂಗ್‌ಪೂಲ್‌ಗೆ ಈಜಾಡಲು ಬಂದಿದ್ದ. ನೀರಿನಿಂದ ಹೊರ ಬರುತ್ತಿದ್ದಂತೆ ಸಮೀರ್ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾನೆ ತಕ್ಷಣ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಘಟನೆ ಬಗ್ಗೆ ವರದಿಯಾಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಅದಾಗ್ಯೂ ಈ ಬಗ್ಗೆ ಬಾಲಕನ ಕುಟುಂಬಸ್ಥರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಶುಕ್ರವಾರ ಮಧ್ಯಾಹ್ನ ಕ್ರಿಕೆಟ್ ಆಟ ಆಡಿದ ಬಳಿಕ ಸಮೀರ್ ಬ್ಲೂ ಹೆವೆನ್ ಸ್ವಿಮ್ಮಿಂಗ್‌ಪೂಲ್‌ಗೆ ಬಂದಿದ್ದ. ಈಜುಕೊಳದಲ್ಲಿ ಮುಳುಗಿ ಮೇಲೆದ್ದು ಬರುತ್ತಾನೆ. ನಾಲ್ಕು ಹೆಜ್ಜೆ ನಡೆಯುವಾಗಲೇ ಆತ ಪ್ರಜ್ಞೆ ತಪ್ಪಿ ಬೀಳುತ್ತಾನೆ. ಉಳಿದವರು ಏನೂ ಅರಿದಂತೆ ಎಂಜಾಯ್ ಮಾಡುತ್ತಿರುತ್ತಾರೆ. ಕೆಲವರು ಬಾಲಕ ಕುಸಿದು ಬೀಳುತ್ತಿದ್ದಂತೆ ಓಡಿ ಬಂದು ಏನಾಯ್ತು ಎಂದು ನೋಡುತ್ತಾರೆ. ಅಷ್ಟರಲ್ಲಿ ಆತನ ಪ್ರಾಣ ಪಕ್ಷಿ ಹಾರಿ ಹೋಗುತ್ತದೆ. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಎಲ್ಲೆಡೆ ವೈರಲ್ ಆಗುತ್ತಿದೆ.
ಇದನ್ನೂ ಓದಿ: Mamata Banerjee: ಬಾಂಗ್ಲಾದೇಶದೊಂದಿಗೆ ಜಲ ಹಂಚಿಕೆಯ ಮಾತುಕತೆ: ಮಮತಾ ಬ್ಯಾನರ್ಜಿ ವಿರೋಧ; ಪ್ರಧಾನಿಗೆ ಪತ್ರ