Video Viral: ಸ್ಕೂಲ್ ಬಸ್‌ನಡಿ ಬಿದ್ದ ವಿದ್ಯಾರ್ಥಿ; ಪಾರಾಗಿದ್ದೇ ಪವಾಡ! - Vistara News

ವೈರಲ್ ನ್ಯೂಸ್

Video Viral: ಸ್ಕೂಲ್ ಬಸ್‌ನಡಿ ಬಿದ್ದ ವಿದ್ಯಾರ್ಥಿ; ಪಾರಾಗಿದ್ದೇ ಪವಾಡ!

Video Viral: ಬಸ್‌ ಇಳಿಯುತ್ತಿದ್ದಂತೆ ಬಸ್‌ ಮುಂಭಾಗಕ್ಕೆ ಬಂದ ವಿದ್ಯಾರ್ಥಿಯನ್ನು ಗಮನಿಸದೆ ಚಾಲಕ ಬಸ್‌ ಚಲಾಯಿಸಿದ್ದು, ಬಾಲಕ ಬಸ್‌ನಡಿ ಸಿಲುಕಿದ್ದಾನೆ. ಎದುರಿನಲ್ಲಿದ್ದ ಇನ್ನೊಬ್ಬ ವಿದ್ಯಾರ್ಥಿ ಕಿರುಚಿಕೊಂಡಿದ್ದರಿಂದ ವಿಷಯ ಗೊತ್ತಾಗಿ ಡ್ರೈವರ್‌ ಬಸ್‌ ನಿಲ್ಲಿಸಿದ್ದಾನೆ. ಅದೃಷ್ಟವಶಾತ್‌ ಸಣ್ಣಪುಟ್ಟ ಗಾಯಗಳಿಂದ ವಿದ್ಯಾರ್ಥಿ ಬಚಾವ್‌ ಆಗಿದ್ದಾನೆ.

VISTARANEWS.COM


on

Video Viral Student falls under school bus He escaped with minor injuries
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಗಳೂರು: ತನ್ನದೇ ಶಾಲೆಯ ಸ್ಕೂಲ್ ಬಸ್‌ನಲ್ಲಿ (School Bus) ಮನೆಯ ಬಳಿ ಬಂದಿಳಿದ ವಿದ್ಯಾರ್ಥಿಯು ಅದೇ ಬಸ್‌ನಡಿ ಸಿಲುಕಿದ್ದು, ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ. ಬಸ್‌ ಇಳಿಯುತ್ತಿದ್ದಂತೆ ಬಸ್‌ ಮುಂಭಾಗಕ್ಕೆ ಬಂದ ವಿದ್ಯಾರ್ಥಿಯನ್ನು ಗಮನಿಸದೆ ಚಾಲಕ ಬಸ್‌ ಚಲಾಯಿಸಿದ್ದೇ ಈ ಘಟನೆಗೆ ಕಾರಣವಾಗಿದೆ. ಮಂಗಳೂರಿನ ಹೊರವಲಯದ ಕುಳಾಯಿ ಬಳಿ ಈ ಘಟನೆ ನಡೆದಿದೆ. ಈ ವಿಡಿಯೊ (Video Viral) ಈಗ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ವೈರಲ್‌ ಆಗಿದೆ.

ಸುರತ್ಕಲ್‌ನ‌ ಆಂಗ್ಲ‌ ಮಾಧ್ಯಮ ಶಾಲೆಯ ವಿದ್ಯಾರ್ಥಿ ಬಸ್‌ನಡಿ ಸಿಲುಕಿರುವುದು ಎಂದು ಗೊತ್ತಾಗಿದೆ. ಆತ ಅಪಾಯದಿಂದ‌ ಪಾರಾಗಿದ್ದಾನೆ. ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ.

ಏನಿದು ಘಟನೆ?

ಶಾಲೆಯ ಬಸ್ಸಿನಲ್ಲಿ ಬಂದು ಮನೆ ಸಮೀಪ ಇಳಿದ ವಿದ್ಯಾರ್ಥಿಯು ಬಸ್ ಚಲಾಯಿಸುವ‌ ಮೊದಲೇ ಬಸ್‌ನ ಮುಂಭಾಗದ ಮೂಲಕ ರಸ್ತೆ ದಾಟಲು ಮುಂದಾಗಿದ್ದಾನೆ. ಆದರೆ, ಇದು ಚಾಲಕನಿಗೆ ಗೊತ್ತಾಗಿಲ್ಲ. ಹೀಗಾಗಿ ಚಾಲಕ ಬಸ್‌ ಅನ್ನು ಮುಂದಕ್ಕೆ ಒಯ್ದಿದ್ದಾನೆ. ಆಗ ವಿದ್ಯಾರ್ಥಿಯು ಬಸ್‌ನಡಿ ಸಿಲುಕಿದ್ದಾನೆ. ಈ ವೇಳೆ ಎದುರು ಇದ್ದ ಇನ್ನೊಬ್ಬ ವಿದ್ಯಾರ್ಥಿ ಹಾಗೂ ಮಹಿಳೆಯೊಬ್ಬರು ಜೋರಾಗಿ ಕಿರುಚಿಕೊಂಡಿದ್ದಾರೆ.

ಇದನ್ನು ಗಮನಿಸಿದ ಬಸ್‌ ಚಾಲಕ ತಕ್ಷಣ ಬಸ್‌ ನಿಲ್ಲಿಸಿದ್ದಾನೆ. ಕೂಡಲೇ ಎಲ್ಲರೂ ಹೋಗಿ ಬಸ್‌ನಡಿ ನೋಡಿದ್ದಾರೆ. ಆದರೆ, ವಿದ್ಯಾರ್ಥಿಯು ಬಸ್‌ನ ಮಧ್ಯಕ್ಕೆ ಸಿಲುಕಿದ್ದರಿಂದ ಚಕ್ರ ಮೈಮೇಲೆ ಹರಿದಿರಲಿಲ್ಲ. ಹೀಗಾಗಿ ಸಣ್ಣ ಪುಟ್ಟ ಗಾಯಗಳೊಂದಿಗೆ ವಿದ್ಯಾರ್ಥಿ ಪಾರಾಗಿದ್ದಾನೆ. ಸ್ಕೂಲ್ ಬಸ್‌ನಲ್ಲಿ ನಿರ್ವಾಹಕ ಇಲ್ಲದಿರುವ ಕಾರಣ ಹೀಗಾಗಿದೆ. ಚಾಲಕನ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು, ಪ್ರಾಣ ಉಳಿಸಿದ ಡ್ರೈವರ್‌; ವಿಡಿಯೊ ಇದೆ!

ಬೆಂಗಳೂರು: ಕಾರೊಂದು ಬಿಎಂಟಿಸಿ ಬಸ್‌ಗೆ ಡಿಕ್ಕಿ ಹೊಡೆದು ಸುಟ್ಟು ಕರಕಲಾದ ಘಟನೆ (Car Hits bus and catches fire in Bangalore) ಬೆಂಗಳೂರಿನ ಚಂದ್ರಾ ಲೇಔಟ್‌ ಸಮೀಪದ ನಾಗರಬಾವಿ ರಿಂಗ್‌ ರಸ್ತೆಯಲ್ಲಿ (Nagarabavi Ring Road) ಮೂರು ತಿಂಗಳ ಹಿಂದೆ ನಡೆದಿತ್ತು. ಘಟನೆಯಲ್ಲಿ ಕಾರು ಬಸ್ಸಿಗೆ ಅಂಟಿಕೊಂಡಿದ್ದರಿಂದ ಬಸ್‌ಗೂ ಬೆಂಕಿ ಹತ್ತಿಕೊಂಡಿತ್ತು (video Viral). ಗೊತ್ತಾಗುತ್ತಿದ್ದಂತೆ ಬಸ್‌ನ ಚಾಲಕ ಪ್ರಯಾಣಿಕರನ್ನು ಇಳಿಸಿ ರಕ್ಷಿಸಿದ್ದಲ್ಲದೆ, ಸಮಯಪ್ರಜ್ಞೆ ಮೆರೆದು (Time sense of driver) ಬಸ್‌ನಿಂದ ಕಾರನ್ನು ಬೇರ್ಪಡಿಸಿದ್ದಾರೆ. ಈ ಮೂಲಕ ಬಸ್‌ ಸಂಪೂರ್ಣ ಸುಟ್ಟು ಹೋಗುವುದನ್ನು (Fire Accident) ತಪ್ಪಿಸಿದ್ದರು.

ಯಶವಂತಪುರದಿಂದ ನಾಯಂಡಹಳ್ಳಿ ಕಡೆ ತೆರಳುತ್ತಿದ್ದ ಬಸ್‌ ಚಂದ್ರಾ ಲೇಔಟ್ ಬಳಿ ನಿಂತಿತ್ತು. ಆಗ ಹಿಂಬದಿಯಿಂದ ವೇಗವಾಗಿ ಬಂದ ಕಾರೊಂದು ಬಸ್‌ಗೆ ಡಿಕ್ಕಿ ಹೊಡೆದಿತ್ತು. ಅತ್ಯಂತ ರಭಸದಿಂದ ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ಕ್ಷಣಾರ್ಧದಲ್ಲಿಯೇ ಬೆಂಕಿ ಹತ್ತಿಕೊಂಡಿತ್ತು. ಆಗ ಕಾರಿನ ಪ್ರಯಾಣಿಕರು ಕೂಡಲೇ ಇಳಿದು ಜೀವ ರಕ್ಷಿಸಿಕೊಂಡಿದ್ದರು.

ಇಷ್ಟರ ನಡುವೆ ಕಾರು ಬಸ್ಸಿಗೆ ಅಂಟಿಕೊಂಡು ಹೊತ್ತಿ ಉರಿಯತೊಡಗಿತ್ತು. ಬಸ್ಸನ್ನು ಸ್ವಲ್ಪ ಮಂದೆ ಕೊಂಡು ಹೋಗಲು ಪ್ರಯತ್ನಿಸಿದಾಗ ಅದು ಅಂಟಿಕೊಂಡಿದ್ದು ಗೊತ್ತಾಯಿತು. ಅದನ್ನು ಹೇಗಾದರೂ ಬೇರ್ಪಡಿಸಬೇಕು ಎಂದು ಯೋಚಿಸಿದ ಬಿಎಂಟಿಸಿ ಚಾಲಕ, ಕಾರು ಹೊತ್ತಿ ಉರಿಯುತ್ತಿದ್ದಂತೆಯೇ ಬಸ್ಸನ್ನು ಮುಂದಕ್ಕೆ ಚಲಾಯಿಸಿದರು. ಆಗ ಕಾರು ಕಳಚಿಕೊಳ್ಳಬಹುದು ಎನ್ನುವುದು ಅವರ ಯೋಚನೆಯಾಗಿತ್ತು. ಆದರೆ, ಅದು ಕಳಚಿಕೊಳ್ಳಲಿಲ್ಲ. ಬದಲಾಗಿ ಗಾಳಿಯ ವೇಗಕ್ಕೆ ಬೆಂಕಿ ಇನ್ನಷ್ಟು ಧಗಧಗಿಸಿತು.

Car catches fire after hitting bus
ತಡೆಗೋಡೆಗೆ ಡಿಕ್ಕಿ ಹೊಡೆದು ಬಸ್ಸಿನಿಂದ ಕಾರನ್ನು ಬೇರ್ಪಡಿಸಲು ಪ್ರಯತ್ನ

ಈ ವೇಳೆ ಚಾಲಕ ಬಸ್ಸನ್ನು ಸ್ವಲ್ಪ ದೂರ ಹೋಗಿ ನಿಲ್ಲಿಸಿ ಇನ್ನೊಂದು ಪ್ಲ್ಯಾನ್‌ ಮಾಡಿದರು. ಇದೊಂದು ಡಬಲ್‌ ರೋಡ್‌ ಆಗಿದ್ದು, ಒಂದು ಭಾಗದಲ್ಲಿ ತಡೆಗೋಡೆ ಇದೆ. ಚಾಲಕ ಬಸ್ಸನ್ನು ಆ ತಡೆಗೋಡೆಗೆ ಡಿಕ್ಕಿ ಹೊಡೆಸಿ ಕಾರನ್ನು ಕದಲಿಸುವ ಪ್ರಯತ್ನವನ್ನು ಮಾಡಿದರು. ಆದರೆ, ಕಾರು ಬಿಡಿಸಿಕೊಳ್ಳಲೇ ಇಲ್ಲ.

ಇದನ್ನೂ ಓದಿ: Murder Case : ಕಲ್ಲಿನಿಂದ ಜಜ್ಜಿ ಅತ್ತೆಯನ್ನೇ ಕೊಂದ ಅಳಿಯ

ಈ ನಡುವೆ, ಕಾರು ಸುಟ್ಟು ಹೋಗುವ ವೇಗ ಜಾಸ್ತಿಯಾಯಿತು. ಪೆಟ್ರೋಲ್‌ ಟ್ಯಾಂಕ್‌ ಕೂಡಾ ಸಿಡಿಯಿತು. ಬಸ್ಸಿಗೂ ಬೆಂಕಿ ಹತ್ತಿಕೊಳ್ಳುವ ವೇಗ ಜಾಸ್ತಿಯಾಯಿತು. ಇಷ್ಟಾದರೂ ಚಾಲಕ ತನ್ನ ಪ್ರಯತ್ನವನ್ನು ಬಿಡಲಿಲ್ಲ, ವ್ಯವಧಾನವನ್ನು ಕಳೆದುಕೊಳ್ಳಲಿಲ್ಲ.

ಇದು ಡಬಲ್‌ ರೋಡ್‌ ಆಗಿದ್ದರಿಂದ ನಡುವೆ ಸಣ್ಣ ರಸ್ತೆ ವಿಭಜಕ ಇತ್ತು. ಚಾಲಕ ಬಸ್ಸನ್ನು ತಿರುಗಿಸಿ ಆ ತಡೆಗೋಡೆಯ ಮೇಲೆ ಕಾರನ್ನು ಹಾರಿಸಿದರು. ಆಗ ಅಂಟಿಕೊಂಡಿದ್ದ ಕಾರು ಕಳಚಿಕೊಂಡಿತು. ಈ ನಡುವೆ, ಕಾರು ಸಂಪೂರ್ಣ ಸುಟ್ಟು ಹೋದರೆ, ಬಸ್‌ಗೆ ಅಲ್ಲಿದ್ದವರೆಲ್ಲ ಸ್ವಲ್ಪ ಸ್ವಲ್ಪ ನೀರು ತಂದೇ ಸಿಂಪಡಿಸಿ ಬೆಂಕಿಯನ್ನು ಆರಿಸಿದರು.

Car catches fire after hitting bus
ರಸ್ತೆ ವಿಭಜಕವನ್ನು ಹಾಯಿಸಿ ಕಾರು ಬೇರ್ಪಡಿಸಿದ ಬಗೆ..

ಒಟ್ಟಾರೆ ಘಟನೆಯ ಫುಲ್‌ ವಿಡಿಯೊ ಇಲ್ಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral Video: ರೈಲು ಹತ್ತುವಾಗ ಕೆಳಗೆ ಬಿದ್ದ ವ್ಯಕ್ತಿ; ಮಹಿಳಾ ಪೇದೆಯಿಂದ ರಕ್ಷಣೆ-ರೋಚಕ ವಿಡಿಯೋ ವೈರಲ್‌

Viral Video: ಚಲಿಸುತಿದ್ದ ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದಿದ್ದು, ತಕ್ಷಣ ಅಲ್ಲೇ ಇದ್ದ ಮಹಿಳಾ ಪೊಲೀಸ್‌ ಸಿಬ್ಬಂದಿ ಆತನನ್ನು ರಕ್ಷಿಸಿ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ.

VISTARANEWS.COM


on

Koo

ಉತ್ತರಾಖಂಡ: ಕೆಲವೊಮ್ಮೆ ಅದೃಷ್ಟ ನೆಟ್ಟಗಿದ್ದರೆ ಸಾವಿಗೂ ಸವಾಲೆಸೆದು ಬರಬಹುದು ಎಂಬ ಮಾತಿದೆ. ಇನ್ನು ಕೆಲವೊಮ್ಮೆ ಸಾವಿನ ಬಾಯಿಗೆ ಇನ್ನೇನು ತುತ್ತಾಗುತ್ತಿದ್ದೇವೆ ಅನ್ನೋವಾಗಲೇ ಯಾರಾದರೂ ಆಪದ್ಬಾಂಧವರಂತೆ ಬಂದು ಕಾಪಾಡಿ ಬಿಡುತ್ತಾರೆ. ಅಂತಹದ್ದೇ ಒಂದು ಘಟನೆ(Viral Video) ಉತ್ತರಾಖಂಡ(Uttarakhanda)ದಲ್ಲಿ ನಡೆದಿದೆ. ಚಲಿಸುತಿದ್ದ ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದಿದ್ದು, ತಕ್ಷಣ ಅಲ್ಲೇ ಇದ್ದ ಮಹಿಳಾ ಪೊಲೀಸ್‌ ಸಿಬ್ಬಂದಿ ಆತನನ್ನು ರಕ್ಷಿಸಿ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣ(Social Media)ದಲ್ಲಿ ವೈರಲ್‌ ಆಗಿದ್ದು, ಸಿಬ್ಬಂದಿಯ ಶಕ್ತಿ ಸಾಮರ್ಥ್ಯ ಹಾಗೂ ಕರ್ತವ್ಯ ಪ್ರಜ್ಞೆಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಏನಿದು ಘಟನೆ?

ಉತ್ತರಾಖಂಡದ ಲಸ್ಕರ್‌ ರೈಲ್ವೇ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಕೋಲ್ಕತ್ತಾ-ಜಮ್ಮು ಟವಿ ಎಕ್ಸ್‌ಪ್ರೆಸ್‌ ರೈಲಿಗೆ ಹತ್ತಲು ಹೋಗಿದ್ದ ವ್ಯಕ್ತಿ ಫ್ಲ್ಯಾಟ್‌ಫಾರ್ಮ್‌ ಮತ್ತು ರೈಲಿನ ನಡುವಿನ ಸಂದಿಗೆ ಬಿದ್ದಿದ್ದಾನೆ. ಇದನ್ನು ಗಮನಿಸಿದ ಜಿಆರ್‌ಪಿ ಕಾನ್‌ಸ್ಟೇಬಲ್‌ ಉಮಾ, ಆಪದ್ಬಾಂಧವಳಂತೆ ಬಂದು ಆತನನ್ನು ರಕ್ಷಿಸಿದ್ದಾರೆ. ಇನ್ನು ಈ ಘಟನೆ ಏ.24ರಂದು ನಡೆದಿದ್ದು, ಆಹಾರ ಮತ್ತು ಜ್ಯೂಸ್‌ ತೆಗೆದು ಕೊಳ್ಳಲೆಂದು ಆ ವ್ಯಕ್ತಿ ರೈಲಿನಿಂದ ಇಳಿದಿದ್ದ. ತಕ್ಷಣ ಹೊರಡುತ್ತಿದ್ದನ್ನು ಗಮನಿಸಿದ ಆ ಓಡಿ ಹೋಗಿ ಹತ್ತಿದ್ದಾನೆ ಎನ್ನಲಾಗಿದೆ. ಕೈನಲ್ಲಿ ಆಹಾರ ಪೊಟ್ಟಣಗಳು ಇದ್ದ ಕಾರಣ ಆತನಿಗೆ ಸುಲಭವಾಗಿ ಹತ್ತಲು ಸಾಧ್ಯವಾಗಿಲ್ಲ. ಹೀಗಾಗಿ ಆಯ ತಪ್ಪಿ ಕೆಳಗೆ ಬಿದ್ದಿದ್ದಾನೆ.

5 ಗಂಟೆ ರೈಲು ವಿಳಂಬ

ಇನ್ನು ಘಟನೆ ಬಳಿಕ ಕೋಲ್ಕತ್ತಾ-ಜಮ್ಮು ಟವಿ ಎಕ್ಸ್‌ಪ್ರೆಸ್‌ ರೈಲು ಐದು ಗಂಟೆ ತಡವಾಗಿ ಲಕ್ಷರ್‌ ರೈಲು ನಿಲ್ದಾಣಕ್ಕೆ ತಲುಪಿದೆ. ಆ ವ್ಯಕ್ತಿ ಕೆಳಗೆ ಬೀಳುತ್ತಿದ್ದನ್ನು ಗಮನಿಸಿದ ಸಹ ಪ್ರಯಾಣಿಕರು ತಕ್ಷಣ ರೈಲಿನ ಚೈನ್‌ ಎಳೆದು ರೈಲನ್ನು ನಿಲ್ಲಿಸಿದ್ದರು. ಜನರಲ್ಲಾ ರೈಲಿನಿಂದ ಕೆಳಗಿಳಿದು ಆ ವ್ಯಕ್ತಿಯ ರಕ್ಷಣೆಗೆ ಮುಂದಾಗಿದ್ದರು. ಇನ್ನು ಆತನಿಗೆ ಯಾವುದೇ ಗಂಭೀರವಾದ ಗಾಯಗಳಾಗಿಲ್ಲ, ಆತನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಅಲ್ಲಿ ಪ್ರಯಾಣಿಕರು ಮಾಹಿತಿ ನೀಡಿದ್ದಾರೆ.

ಪುಣೆಯಲ್ಲೂ ನಡೆದಿತ್ತು ಇಂತಹದ್ದೇ ಘಟನೆ

ಅದು ಪುಣೆಯ ಸಿವಿಲ್ ಕೋರ್ಟ್ ಎಲಿವೇಟೆಡ್ ನಿಲ್ದಾಣದ ಪ್ಲಾಟ್‌ಫಾರ್ಮ್‌ ಸಂಖ್ಯೆ 2. ಗಂಟೆ ಅಪರಾಹ್ನ 2.22ರ ಸುಮಾರು. ರೈಲ್ವೆ ನಿಲ್ದಾಣದಲ್ಲಿ ಓಡಾಡುತ್ತಿದ್ದ ಸುಮಾರು 2ರಿಂದ 3 ವರ್ಷದ ಬಾಲಕ ಇದ್ದಕ್ಕಿದ್ದಂತೆ ಆಕಸ್ಮಿಕವಾಗಿ ಹಳಿಗಳ ಮೇಲೆ ಬಿದ್ದು ಬಿಟ್ಟ. ತಾಯಿ ತನ್ನ ಮಗುವನ್ನು ರಕ್ಷಿಸಲು ಹಳಿಗಳ ಮೇಲೆ ಹಾರಿದರು. ಇನ್ನೇನು ರೈಲು ಬರುವ ಹೊತ್ತು. ಎಲ್ಲರೂ ದಂಗಾಗಿ, ಉಸಿರು ಬಿಗಿ ಹಿಡಿದು ನೋಡುತ್ತಿದ್ದರು. ಯಾರಿಗೆ ಏನು ಮಾಡಬೇಕೆಂದು ತೋಚದ ಕ್ಷಣವದು.

ಇದನ್ನೂ ಓದಿ:Sira News: ಬಿಸಿಲ ಬೇಗೆಗೆ ಮತ್ಸ್ಯಗಳ ಮಾರಣಹೋಮ; ನೀರಿಲ್ಲದೇ ವಿಲವಿಲನೇ ಒದ್ದಾಡಿ ಸಾವಿರಾರು ಮೀನುಗಳ ಸಾವು

ಆಗಲೇ ಆಪತ್ಬಾಂಧವನ ರೂಪದಲ್ಲಿ ನೆರವಿಗೆ ಧಾವಿಸಿದವರು ಕರ್ತವ್ಯದಲ್ಲಿದ್ದ ಭದ್ರತಾ ಸಿಬ್ಬಂದಿ ವಿಕಾಸ್ ಬಂಗಾರ್. ತಮ್ಮ ಸಮಯೋಚಿತ ಕರ್ತವ್ಯ ಪ್ರಜ್ಞೆಯಿಂದ ನಡೆಯಬಹುದಾದ ಅತಿ ದೊಡ್ಡ ಅವಘಢವನ್ನು ತಪ್ಪಿಸಿ ಅಕ್ಷರಶಃ ಹೀರೋ ಎನಿಸಿಕೊಂಡರು. ಕೂಡಲೇ ಅವರು ತುರ್ತು ರೈಲು ನಿಲುಗಡೆ (Emergency stop plunger-ESP) ಬಟನ್‌ ಒತ್ತಿದರು. ಧಾವಿಸಿ ಬರುತ್ತಿದ್ದ ರೈಲು ನಿಲ್ದಾಣದಿಂದ ಕೇವಲ 30 ಮೀಟರ್ ದೂರದಲ್ಲಿ ಎರಡೂ ಬದಿಗಳಲ್ಲಿ ನಿಂತು ಬಿಟ್ಟಿತು. ಪ್ರಯಾಣಿಕರು ನೆಮ್ಮದಿಯ ನಿಟ್ಟುಸಿರು ಬಿಟ್ಟು ಅಮ್ಮ-ಮಗುವಿನ ರಕ್ಷಣೆಗೆ ಧಾವಿಸಿದರು. ಈ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

Continue Reading

ಪ್ರಮುಖ ಸುದ್ದಿ

Viral Video: ನಮಗೆ ಹಿಂದೂ ಮತಗಳ ಅಗತ್ಯವಿಲ್ಲ: ಕಾಂಗ್ರೆಸ್‌ ನಾಯಕನ ವಿಡಿಯೋ ವೈರಲ್‌

Viral Video: ಹಿಂದೂಗಳ ವಿರುದ್ಧ ಕಾಂಗ್ರೆಸ್‌ ಪಕ್ಷ ಪೂರ್ವಗ್ರಹ ಪೀಡಿತ ಮನೋಭಾವ ಹೊಂದಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ಆರೋಪ ಮಾಡಿರುವ ಬೆನ್ನಲ್ಲೇ, 2024ರ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಹಿಂದೂ ಮತಗಳ ಅಗತ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ತುಮ್ಮಲ ನಾಗೇಶ್ವರರಾವ್ ಹೇಳಿಕೆ ನೀಡಿರುವ ವಿಡಿಯೋ ಹೊರಬಿದ್ದಿದೆ.

VISTARANEWS.COM


on

viral video tn rao
Koo

ಹೈದರಾಬಾದ್:‌ ತಮ್ಮ ಪಕ್ಷದ ಚುನಾವಣಾ ಗೆಲುವಿಗೆ ಹಿಂದೂಗಳ ಮತಗಳು ಅಗತ್ಯವಿಲ್ಲ ಎಂದು ತೆಲಂಗಾಣ ಕಾಂಗ್ರೆಸ್ (Telangana Congress) ನಾಯಕ ಟಿಎನ್ ರಾವ್ ಭಾಷಣದಲ್ಲಿ ಹೇಳಿದ್ದಾರೆ. ಅವರ ಈ ಮಾತಿನ ವಿಡಿಯೋ ವೈರಲ್ (viral video) ಆಗಿದೆ.

ಹಿಂದೂಗಳ ವಿರುದ್ಧ ಕಾಂಗ್ರೆಸ್‌ ಪಕ್ಷ ಪೂರ್ವಗ್ರಹ ಪೀಡಿತ ಮನೋಭಾವ ಹೊಂದಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ಆರೋಪ ಮಾಡಿರುವ ಬೆನ್ನಲ್ಲೇ, 2024ರ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಹಿಂದೂ ಮತಗಳ ಅಗತ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ತುಮ್ಮಲ ನಾಗೇಶ್ವರರಾವ್ ಹೇಳಿಕೆ ನೀಡಿರುವ ವಿಡಿಯೋ ಹೊರಬಿದ್ದಿದೆ.

ತಮ್ಮ ಮತ ಬ್ಯಾಂಕ್‌ಗಾಗಿ ಕಾಂಗ್ರೆಸ್ ಪಕ್ಷವು ಭಾರತದ ಹಿಂದೂಗಳ ವಿರುದ್ಧ ಪಕ್ಷಪಾತ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದರು. ಹಿಂದೂಗಳ ಆಸ್ತಿಯನ್ನು ಮುಸ್ಲಿಮರಿಗೆ ಹಂಚಿಕೆ ಮಾಡುವುದು ಕಾಂಗ್ರೆಸ್‌ನ ಆದ್ಯತೆಯಾಗಿದೆ ಎಂದ ಆರೋಪಿಸಿದ್ದರು. ಇದಾಗಿ ಕೆಲವೇ ದಿನಗಳಲ್ಲಿ, ತೆಲಂಗಾಣ ಕಾಂಗ್ರೆಸ್ ನಾಯಕ ತುಮ್ಮಲ ನಾಗೇಶ್ವರ ರಾವ್ ಅವರು ಹೀಗೆಂದಿದ್ದಾರೆ. ಚುನಾವಣಾ ಸಭೆಯನ್ನುದ್ದೇಶಿಸಿ ಮಾತನಾಡಿದ ರಾವ್, 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಹಿಂದೂ ಮತಗಳ ಅಗತ್ಯವಿಲ್ಲ ಎಂದಿದ್ದಾರೆ.

ಕಾಂಗ್ರೆಸ್ ಪ್ರಣಾಳಿಕೆಯನ್ನು ಮುಸ್ಲಿಂ ಲೀಗ್‌ನ ಸಿದ್ಧಾಂತಕ್ಕೆ ಪ್ರಧಾನಿ ಹೋಲಿಸಿ ಟೀಕಿಸಿದ್ದರು. ದೇಶದ ಸಂಪನ್ಮೂಲಗಳು ಮೊದಲು ಬಡವರಿಗೆ ಸಲ್ಲಬೇಕು ಎಂಬ ತತ್ವವನ್ನು ಒತ್ತಿ ಹೇಳಿದರು. ರಾಜಕೀಯ ಲಾಭಕ್ಕಾಗಿ ನಿರ್ದಿಷ್ಟವಾಗಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ಕೆಲವು ಧಾರ್ಮಿಕ ಗುಂಪುಗಳಿಗೆ ಕಾಂಗ್ರೆಸ್ ಒಲವು ತೋರುತ್ತಿದೆ ಎಂದು ಮೋದಿ ಆರೋಪಿಸಿದ್ದರು. ಕಾಂಗ್ರೆಸ್ ಪ್ರಣಾಳಿಕೆಯು ಮುಸ್ಲಿಂ ಲೀಗ್‌ನ ಧೋರಣೆಯ ಪ್ರಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ತಮ್ಮ ಹಿಂದಿನ ಹೇಳಿಕೆಯನ್ನು ಪುನರುಚ್ಚರಿಸಿದ್ದರು.

ಇದನ್ನೂ ಓದಿ: PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

Continue Reading

ವೈರಲ್ ನ್ಯೂಸ್

Viral Video: ನಾಲ್ಕನೇ ಮಹಡಿಯಿಂದ ವಿಂಡೋ ಪೋರ್ಚ್‌ ಮೇಲೆ ಬಿದ್ದ ಮಗು; ವಿಡಿಯೋ ವೈರಲ್‌

Viral video:ತಮಿಳುನಾಡಿನ ಚೆನ್ನೈನಲ್ಲಿ ನಡೆದಿದ್ದು,ಅಪಾರ್ಟ್‌ಮೆಂಟ್‌ನ ಕಿಟಕಿಯಿಂದ ಏಳು ತಿಂಗಳ ಮಗುವೊಂದು ವಿಂಡೋ ಪೋರ್ಚ್‌ ಮೇಲೆ ಬಿದ್ದಿದೆ.

VISTARANEWS.COM


on

Koo

ಚೆನ್ನೈ: ಈಗಿನ ಕಾಲದಲ್ಲಿ ಮನೆಯಲ್ಲಿ ಪುಟ್ಟ ಮಕ್ಕಳಿದ್ದ ಅವರನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಳ್ಳಬೇಕಾಗುತ್ತದೆ. ಸ್ವಲ್ಪ ಎಚ್ಚರ ತಪ್ಪಿದ್ದರೂ ಅಪಾಯ ಕಟ್ಟಿಟ್ಟ ಬುತ್ತಿ. ಇಂತಹದ್ದೇ ಒಂದು ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದ್ದು,(Viral video) ಅಪಾರ್ಟ್‌ಮೆಂಟ್‌(Apartment)ನ ಕಿಟಕಿಯಿಂದ ಏಳು ತಿಂಗಳ ಮಗುವೊಂದು(Toddler) ವಿಂಡೋ ಪೋರ್ಚ್‌(Window Porch) ಮೇಲೆ ಬಿದ್ದಿದೆ. ಅದೃಷ್ಟವಶಾತ್‌ ಸ್ಥಳೀಯರ ಸಹಾಯದಿಂದ ಮಗು ದೊಡ್ಡ ಅನಾಹುತವೊಂದು ತಪ್ಪಿದೆ. ತಾಯಿಯ ಮಡಿಲಿನಲ್ಲಿ ಆಟವಾಡುತ್ತಿದ್ದ ಮಗು ಇದ್ದಕ್ಕಿದ್ದಂತೆ ಕಿಟಕಿಯಿಂದ ಪ್ಲಾಸ್ಟಿಕ್‌ ಶೀಟ್‌ ಕವರ್‌ ಮಾಡಲಾಗಿದ್ದ ವಿಂಡೋ ಪೋರ್ಚ್‌ ಮೇಲೆ ಬಿದ್ದಿದೆ.

ಅವಡಿಯ ತಿರುಮಲ್ಲೈವೋವಲ್‌ನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ನಡೆದಿದ್ದು, ಮಗುವಿನ ರಕ್ಷಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ವಿಂಡೋ ಪೋರ್ಚ್‌ ಮೇಲೆ ಬಿದ್ದಿ ಮಗುವಿನ ರಕ್ಷಣೆಗೆ ದೌಡಾಯಿಸಿದ್ದ ಅಪಾರ್ಟ್‌ಮೆಂಟ್‌ ನಿವಾಸಿಗಳು ಮತ್ತೊಂದು ಕಿಟಕಿಯಿಂದ ಹೊರಬಂದು ಮಗುವನ್ನು ರಕ್ಷಿಸಿಲು ಹರಸಾಹನ ಪಟ್ಟರು. ನಾಲ್ಕೈದು ಜನ ಕಿಟಕಿಯ ಹೊರ ಭಾಗದಲ್ಲಿರುವ ಸಣ್ಣ ಜಾಗದಲ್ಲಿ ನಿಂತು ಮಗುವಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ರಕ್ಷಿಸಿದ್ದಾರೆ. ಇನ್ನು ಕೆಳಗೆ ಅನೇಕ ಜನ ದೊಡ್ಡ ಬಟ್ಟೆಯೊಂದು ಹಿಡಿದು ಮಗುವಿನ ರಕ್ಷಣೆಗೆ ಸಹಾಯ ಮಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಪ್ರಶಂಸೆ ವ್ಯಕ್ತಪಡಿಸಿರುವ ನೆಟ್ಟಿಗರು, ಅಚಾನಕ್ಕಾಗಿ ನಾಲ್ಕನೇ ಮಹಡಿಯಿಂದ ವಿಂಡೋ ಪೋರ್ಚ್‌ ಮೇಲೆ ಬಿದ್ದಿದ್ದ 7 ತಿಂಗಳಿನ ಮಗುವನ್ನು ಬಹಳ ಜಾಣ್ಮೆಯಿಂದ ರಕ್ಷಿಸಿದ್ದಾರೆ. ಅವರ ಕಾರ್ಯಕ್ಕೆ ಸಲಾಂ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸದ್ಯ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಇದನ್ನೂ ಓದಿ:Srinivasa Prasad passes away‌: 7 ಬಾರಿ ಸಂಸದರಾಗಿದ್ದ ಸ್ವಾಭಿಮಾನಿ, ದಕ್ಷಿಣ ಕರ್ನಾಟಕದ ʼದಲಿತ ಸೂರ್ಯʼ

ಕೆಲವು ದಿನಗಳ ಹಿಂದೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ‌ ಲಚ್ಯಾಣ ಗ್ರಾಮದ ಜಮೀನಿನಲ್ಲಿದ್ದ ಕೊಳವೆ ಬಾವಿಗೆ ಸಾತ್ವಿಕ್‌ ಮುಜಗೊಂಡ ಎಂಬ ಎರಡು ವರ್ಷದ ಬಾಲಕ ಬಿದ್ದಿದ್ದ. ಸುಮಾರು 20 ಗಂಟೆಗಳ ಕಾರ್ಯಾಚರಣೆ ಬಳಿಕ ಮಗುವನ್ನು ಸುರಕ್ಷಿತವಾಗಿ ಹೊರತೆಗೆಯಲಾಗಿತ್ತು. ಸಂಜೆ 5.30ರ ಸುಮಾರಿಗೆ ಮಗು ಕೊಳವೆಬಾವಿಗೆ ಬಿದ್ದಿದ್ದು, ಇದಾದ ಅರ್ಧ ಗಂಟೆಯಲ್ಲಿಯೇ ಕಾರ್ಯಾಚರಣೆ ಆರಂಭಿಸಿದ್ದು ಸಿಬ್ಬಂದಿಯು ಸತತ ಪ್ರಯತ್ನ ಮಾಡಿತು. ರಾತ್ರಿಯೇ ಎರಡು ಹಿಟಾಚಿ, ಮೂರು ಜೆಸಿಬಿ ಯಂತ್ರಗಳ ಮೂಲಕ ಕೊಳವೆಬಾವಿಯ ಸುತ್ತ 15 ಅಡಿ ಅಗೆಯಲಾಯಿತು. ಕೆಲವೇ ಗಂಟೆಗಳಲ್ಲಿ ಇಷ್ಟೊಂದು ಪ್ರಗತಿ ಕಂಡಿದ್ದು, ರಂಧ್ರ ಕೊರೆದು ಮಗುವಿನ ರಕ್ಷಣೆ ಮಾಡಲು ಸಾಧ್ಯವಾಯಿತು.

Continue Reading

ವೈರಲ್ ನ್ಯೂಸ್

ನೆಚ್ಚಿನ ಶ್ವಾನ ಮರಿ ನಾಪತ್ತೆಯಾದ ಕೊರಗಿನಿಂದ ಆತ್ಮಹತ್ಯೆಗೆ ಶರಣಾದ 12 ವರ್ಷದ ಬಾಲಕಿ

Crime News: ಆಘಾತಕಾರಿ ಘಟನೆಯೊಂದರಲ್ಲಿ ಹರಿಯಾಣದಲ್ಲಿ 12 ವರ್ಷದ ಬಾಲಕಿಯೊಬ್ಬಳು ತನ್ನ ಪ್ರೀತಿಯ ಶ್ವಾನ ನಾಪತ್ತೆಯಾದ ಕೊರಗಿನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಲಕಿ ಈ ಕೃತ್ಯ ಎಸಗಿದ್ದಳು. ನಾಯಿ ಮರಿ 5 ದಿನಗಳ ಹಿಂದೆ ನಾಪತ್ತೆಯಾಗಿತ್ತು. ಬಾಲಕಿ ಮತ್ತು ಶ್ವಾನದ ಮಧ್ಯೆ ಮೂರು ತಿಂಗಳಿಂದ ಉತ್ತಮ ಬಾಂಧವ್ಯ ರೂಪುಗೊಂಡಿತ್ತು ಎಂದು ಮನೆಯವರು ತಿಳಿಸಿದ್ದಾರೆ. ಶ್ವಾನಮರಿ ನಾಪತ್ತೆಯಾದಾಗಿನಿಂದ ಆಕೆ ಖಿನ್ನತೆಗೆ ಜಾರಿದ್ದಳು ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Crime News
Koo

ಚಂಡಿಗಢ: ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂತು ಎಂಬ ಕಾರಣಕ್ಕೆ, ಅಪ್ಪ-ಅಮ್ಮ ಬೈದರು, ಮೊಬೈಲ್​ ನೋಡಬೇಡ ಎಂದು ಹೇಳಿದರು ಎಂಬಿತ್ಯಾದಿ ಕ್ಷುಲ್ಲಕ ಕಾರಣಕ್ಕೆ ಮಕ್ಕಳು / ಹದಿಹರೆಯದವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳನ್ನು ಕೇಳಿದ್ದೇವೆ. ಇದೂ ಕೂಡ ಅಂತಹದ್ದೇ ಮಾದರಿಯ ಘಟನೆ. ಆಘಾತಕಾರಿ ಘಟನೆಯೊಂದರಲ್ಲಿ ಹರಿಯಾಣದಲ್ಲಿ 12 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತನ್ನ ಪ್ರೀತಿಯ ಶ್ವಾನ ನಾಪತ್ತೆಯಾದುದೇ ಆಕೆಯ ಆತ್ಮಹತ್ಯೆಗೆ ಕಾರಣ ಎಂದು ಮೂಲಗಳು ತಿಳಿಸಿವೆ. ಶನಿವಾರ (ಏಪ್ರಿಲ್‌ 27) ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹೊರಗೆ ಹೋಗಿದ್ದ ತಾಯಿ ಬಂದ ಕೂಡಲೇ ಇದನ್ನು ಗಮನಿಸಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಈ ವೇಳೆ ಆಕೆ ಮೃತಪಟ್ಟಿದ್ದಳು (Crime News).

ʼʼಕೆಲವು ದಿನಗಳ ಹಿಂದೆ ನಾಪತ್ತೆಯಾದ ನೆಚ್ಚಿನ ಶ್ವಾನ ಇನ್ನೂ ಪತ್ತೆಯಾಗದ ಕೊರಗಿನಿಂದ 12 ವರ್ಷದ ಬಾಲಕಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೆಲವು ದಿನಗಳಿಂದ ಆಕೆ ಈ ವಿಚಾರದಲ್ಲಿ ಕೊರಗುತ್ತಿದ್ದಳು ಎಂದು ಕುಟುಂಬಸ್ಥರು ತಿಳಿಸಿದ್ದಾರೆʼʼ ಎಂದು ಪೊಲೀಸರು ಹೇಳಿದ್ದಾರೆ.

ಘಟನೆಯ ವಿವರ

ʼʼಐದು ದಿನಗಳ ಹಿಂದೆ ನಮ್ಮ ಸಾಕು ನಾಯಿ ಕಾಣೆಯಾಗಿತ್ತು. ಈ ಶ್ವಾನ ಮತ್ತು ಬಾಲಕಿಯ ಮಧ್ಯೆ ಸುಮಾರು 3 ತಿಂಗಳಿಂದ ಉತ್ತಮ ಬಾಂಧವ್ಯ ರೂಪುಗೊಂಡಿತ್ತುʼʼ ಎಂದು ಮನೆಯವರು ತಿಳಿಸಿದ್ದಾರೆ. ʼʼಶ್ವಾನ ಕಾಣೆಯಾದಾಗಿನಿಂದ ಆಕೆ ಖಿನ್ನತೆಗೆ ಒಳಗಾಗಿದ್ದಳು. ಬಳಿಕ ತೀವ್ರ ಚಿಂತೆಗೆ ಒಳಗಾಗಿದ್ದ ಅವಳು ಸರಿಯಾಗಿ ಆಹಾರವನ್ನೂ ಸೇವಿಸುತ್ತಿರಲಿಲ್ಲʼʼ ಎಂದು ಅವರು ವಿವರಿಸಿದ್ದಾರೆ. ಕುಟುಂಬಸ್ಥರು ಆಕೆಯನ್ನು ಸಮಾಧಾನಪಡಿಸಲು ಎಷ್ಟೇ ಪ್ರಯತ್ನಿಸಿದರೂ ನಾಯಿಮರಿಯನ್ನು ಕಳೆದುಕೊಂಡ 6ನೇ ತರಗತಿಯ ವಿದ್ಯಾರ್ಥಿನಿಯ ದುಃಖವನ್ನು ಕಡಿಮೆ ಮಾಡಲು ಸಾಧ್ಯವಾಗಲಿಲ್ಲ ಎಂದು ಮೂಲಗಳು ತಿಳಿಸಿವೆ.

ಶನಿವಾರ ಸಂಜೆ ಬಾಲಕಿಯ ತಾಯಿ ಮತ್ತು ಸಹೋದರಿ ದಿನಸಿ ಖರೀದಿಗಾಗಿ ಮನೆಯಿಂದ ಹೊರ ಹೋಗಿದ್ದರು. ಮನೆಯಲ್ಲಿ ಒಬ್ಬಳೇ ಇದ್ದ ಬಾಲಕಿ ಈ ವೇಳೆ ಶಾಕಿಂಗ್‌ ನಿರ್ಧಾರ ಕೈಗೊಂಡಿದ್ದಾಳೆ. ನೇಣು ಬಿಗಿದುಕೊಂಡು ಜೀವ ಕಳೆದುಕೊಂಡಿದ್ದಾಳೆ. ಕೊನೆಯ ದಿನಗಳಲ್ಲಿ ಮಗಳ ದಿನಗಳನ್ನು ನೆನೆದು ತಾಯಿ ದುಃಖ ವ್ಯಕ್ತಪಡಿಸಿದ್ದಾರೆ. ʼʼಮೂರು ತಿಂಗಳಿಂದ ಆಕೆ ಮತ್ತು ಶ್ವಾನದ ಮಧ್ಯೆ ಅತ್ಯುತ್ತಮ ಬಾಂಧವ್ಯ ರೂಪುಗೊಂಡಿತ್ತು. ನಾಯಿ ಮರಿ ನಾಪತ್ತೆಯಾದಾಗಿನಿಂದ ಆಕೆ 5 ದಿನಗಳಿಂದ ಆಹಾರ ಸೇವಿಸುವುದನ್ನೇ ನಿಲ್ಲಿಸಿ ಬಿಟ್ಟಿದ್ದಳು. ನಿನ್ನೆ ನಾನು ತರಕಾರಿ ಖರೀದಿಗಾಗಿ ಹೊರ ಹೋಗಿದ್ದೆ. ಈ ವೇಳೆ ನಮ್ಮ ನೆರೆಯವರು ಕರೆ ಮಾಡಿ ಕೂಡಲೇ ಆಗಮಿಸುವಂತೆ ಹೇಳಿದ್ದರು. ಕೂಡಲೇ ಮನೆಗೆ ಧಾವಿಸಿ ಬಂದಿದ್ದೆ. ಈ ವೇಳೆ ಆಕೆ ಮೃತಪಟ್ಟಿದ್ದಳುʼʼ ಎಂದು ಬಾಲಕಿ ತಾಯಿ ನೋವಿನಿಂದ ಹೇಳಿದ್ದಾರೆ.

ಇದನ್ನೂ ಓದಿ: ಶಾಲೆಗೆ ಹೋಗದ್ದಕ್ಕೆ ಬೈದ ತಾಯಿ, ಬಾಲಕ ಆತ್ಮಹತ್ಯೆ

ವರ್ಷಗಳ ಹಿಂದೆ ಮಹಾರಾಷ್ಟ್ರದ ಭಯಂದರ್ ಎಂಬಲ್ಲಿ 13 ವರ್ಷದ ಬಾಲಕನೊಬ್ಬ ಅತ್ಯಂತ ಕ್ಷುಲ್ಲಕ ಮತ್ತು ವಿಚಿತ್ರ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದ. ‘ತನ್ನ ತಲೆಕೂದಲನ್ನು ಅತ್ಯಂತ ಚಿಕ್ಕದಾಗಿ ಕತ್ತರಿಸಿಬಿಟ್ಟರು’ ಎಂಬ ಕಾರಣಕ್ಕೆ ಅಪಾರ್ಟ್​ಮೆಂಟ್​​ನ 16ನೇ ಮಹಡಿಯಲ್ಲಿರುವ ತಮ್ಮ ಮನೆಯಿಂದ ಕೆಳಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದ.

Continue Reading
Advertisement
Hasan Pen Drive case Prajwal Revanna expelled from JDS
ರಾಜಕೀಯ4 seconds ago

Hassan Pen Drive Case: ಪ್ರಜ್ವಲ್‌ ರೇವಣ್ಣ ಜೆಡಿಎಸ್‌ನಿಂದ ಉಚ್ಚಾಟನೆ? ಎಚ್‌.ಡಿ. ದೇವೇಗೌಡರ ನಿರ್ಧಾರಕ್ಕೇನು ಕಾರಣ?

Ballari Lok Sabha Constituency Congress Candidate E Tukaram Election Campaign in Daroji
ಬಳ್ಳಾರಿ17 mins ago

Lok Sabha Election 2024: ದರೋಜಿ ಗ್ರಾ.ಪಂ ವ್ಯಾಪ್ತಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ ಬಿರುಸಿನ ಪ್ರಚಾರ

Lok Sabha Election
ಪ್ರಮುಖ ಸುದ್ದಿ24 mins ago

Lok Sabha Election: ಇಂದೋರ್​ ಕಾಂಗ್ರೆಸ್​ ಅಭ್ಯರ್ಥಿ ಕಣದಿಂದ ಹಿಂದಕ್ಕೆ; ಚುನಾವಣೆಗೆ ಮೊದಲೇ ಬಿಜೆಪಿಗೆ ಮತ್ತೊಂದು ಸೀಟು!

PM Narendra modi in Bagalakote and Attack on Congress
Lok Sabha Election 202429 mins ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

Family Drama Trailer Out
ಸಿನಿಮಾ38 mins ago

Family Drama Trailer: ʻಡೇರ್ ಡೆವಿಲ್ ಮುಸ್ತಾಫ’ ತಂಡದಿಂದ ವಿಭಿನ್ನ ಸಿನಿಮಾ!

gold rate today rakul
ಚಿನ್ನದ ದರ42 mins ago

Gold Rate Today: ಚಿನ್ನದ ಬೆಲೆಯಲ್ಲಿ ₹330 ಇಳಿಕೆ; ಇಂದಿನ ಬಂಗಾರ- ಬೆಳ್ಳಿ ದರಗಳು ಇಲ್ಲಿವೆ

Narenda Modi Sonia gandhi
ದೇಶ47 mins ago

Narendra Modi: ರಾಜಕೀಯ ದ್ವೇಷ ಮರೆತು ಸೋನಿಯಾ, ರಾಹುಲ್‌ಗೆ ಸಹಾಯ; ಹೀಗ್ಯಾಕಂದ್ರು ಪ್ರಧಾನಿ ಮೋದಿ?

dheeren rajkumar announces a new film change his name
ಸ್ಯಾಂಡಲ್ ವುಡ್1 hour ago

Dheeren Rajkumar: ಹೆಸರು ಬದಲಿಸಿಕೊಂಡು ಅದೃಷ್ಟ ಪರೀಕ್ಷೆಗಿಳಿದ ರಾಜ್‌ಕುಮಾರ್ ಮೊಮ್ಮಗ!

MS Dhoni
Latest1 hour ago

MS Dhoni : ಐಪಿಎಲ್​ನಲ್ಲಿ 150 ಪಂದ್ಯಗಳನ್ನು ಗೆದ್ದ ಹೆಗ್ಗಳಿಕೆಗೆ ಪಾತ್ರರಾದ ಧೋನಿ; ಅವರ ಬಳಿಕ ಯಾರಿದ್ದಾರೆ?

Mahesh Babu shares sweet moments with sister Manjula and Prabhas aunt
South Cinema1 hour ago

Mahesh Babu: ಸಹೋದರಿ ಮಂಜುಳಾ, ಪ್ರಭಾಸ್ ಚಿಕ್ಕಮ್ಮ ಜತೆ ಸಿಹಿಕ್ಷಣ ಹಂಚಿಕೊಂಡ ಮಹೇಶ್‌ ಬಾಬು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 202429 mins ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ9 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202421 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202423 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌