Viral News: ಹೆಂಡ್ತಿ ತವರಿಗೆ ಹೋಗ್ತಿದ್ದಂತೆ ಪ್ರೇಯಸಿ ಜೊತೆ ಲವ್ವಿಡವ್ವಿ- ಸ್ಕೂಲ್‌ ಮೇಸ್ಟ್ರನ್ನು ರೆಡ್‌ಹ್ಯಾಂಡಾಗಿ ಹಿಡಿದು ಅಲ್ಲೇ ಮದ್ವೆ - Vistara News

ವೈರಲ್ ನ್ಯೂಸ್

Viral News: ಹೆಂಡ್ತಿ ತವರಿಗೆ ಹೋಗ್ತಿದ್ದಂತೆ ಪ್ರೇಯಸಿ ಜೊತೆ ಲವ್ವಿಡವ್ವಿ- ಸ್ಕೂಲ್‌ ಮೇಸ್ಟ್ರನ್ನು ರೆಡ್‌ಹ್ಯಾಂಡಾಗಿ ಹಿಡಿದು ಅಲ್ಲೇ ಮದ್ವೆ

Viral News: ಪರೋರ ಪಂಚಾಯತ್‌ನ ಬೆಲ್‌ಘಟ್ಟಿ ಬುಡಕಟ್ಟು ಕುಗ್ರಾಮದಲ್ಲಿ ಈ ಘಟನೆ ನಡೆದಿದೆ. ಸ್ಥಳೀಯರ ಪ್ರಕಾರ, ಜುನ್ನಿ ಇಸ್ತಂಬ್ರಾರ್ ಪಂಚಾಯತ್‌ನ ಬೇಗಂಪುರದ ಸರ್ಕಾರಿ ಶಾಲೆಯ ಶಿಕ್ಷಕ ಶೇಖರ್ ಪಾಸ್ವಾನ್ ಅಲಿಯಾಸ್ ರಾಜೇಶ್ ಕುಮಾರ್ ಗ್ರಾಮದ ಬುಡಕಟ್ಟು ಹುಡುಗಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಎರಡು ದಿನಗಳ ಹಿಂದೆ ಶಿಕ್ಷಕ ರಾಜೇಶ್ ಕುಮಾರ್ ಈ ಹುಡುಗಿಯ ಜೊತೆ ಮೋಜಿನಲ್ಲಿ ತೊಡಗಿದ್ದ ವೇಳೆ ಗ್ರಾಮಸ್ಥರ ಕೈಗೆ ರೆಡ್‌ ಹ್ಯಾಂಡಾಗಿ ಸಿಕ್ಕಿಬಿದಿದ್ದ.

VISTARANEWS.COM


on

Viral News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪಾಟ್ನಾ: ಶಾಲೆ ಶುರುವಾಗಿ ಗಂಟೆಗಳು ಕಳೆದರೂ ತರಗತಿ ನಡೆಸಬೇಕಾಗಿದ್ದ ಶಿಕ್ಷಕ ಬಂದೇ ಇರಲಿಲ್ಲ. ಇತರ ಶಿಕ್ಷಕರು ಮಕ್ಕಳನ್ನು ವಿಚಾರಿಸಿದಾಗ ಶಿಕ್ಷಕನನ್ನು ಊರಿನ ಜನರೆಲ್ಲಾ ಸೇರಿಕೊಂಡು ಮರಕ್ಕೆ ಕಟ್ಟಿ ಹಾಕಿರುವ ಬಗ್ಗೆ ವಿದ್ಯಾರ್ಥಿಯೊಬ್ಬ ಬಾಯ್ಬಿಟ್ಟಿದ್ದಾನೆ. ಏನಾಯ್ತಪ್ಪಾ ಅಂತಾ ಸ್ಥಳಕ್ಕೆ ಓಡೋಡಿ ಬಂದವರಿಗೆ ಶಾಕ್‌ ಕಾದಿತ್ತು. ಹೆಂಡ್ತಿ ತವರಿಗೆ ಹೋದ ಕೂಡಲೇ ಇತ್ತ ಪ್ರೇಯಸಿ ಜೊತೆ ಮಜಾ ಮಾಡಿ ಸಿಕ್ಕಿಬಿದ್ದಿದ್ದ ಶಿಕ್ಷಕನನ್ನು ಗ್ರಾಮಸ್ಥರು ರೆಡ್‌ ಹ್ಯಾಂಡಾಗಿ ಹಿಡಿದು ಮರಕ್ಕೆ ಕಟ್ಟಿ ಹಾಕಿದ್ದಾರೆ. ಅಷ್ಟೇ ಅಲ್ಲದೇ ಆ ಯುವತಿ ಜೊತೆಗೆ ಮದ್ವೆ ಮಾಡಿಸಿದ್ದಾರೆ. ಈ ವಿಚಿತ್ರ ಘಟನೆ(Viral News) ನಡೆದಿರುವುದು ಬಿಹಾರ(Bihar)ದ ಪುರ್ನಿಯಾದಲ್ಲಿ.

ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪರೋರ ಪಂಚಾಯತ್‌ನ ಬೆಲ್‌ಘಟ್ಟಿ ಬುಡಕಟ್ಟು ಕುಗ್ರಾಮದಲ್ಲಿ ಈ ಘಟನೆ ನಡೆದಿದೆ. ಸ್ಥಳೀಯರ ಪ್ರಕಾರ, ಜುನ್ನಿ ಇಸ್ತಂಬ್ರಾರ್ ಪಂಚಾಯತ್‌ನ ಬೇಗಂಪುರದ ಸರ್ಕಾರಿ ಶಾಲೆಯ ಶಿಕ್ಷಕ ಶೇಖರ್ ಪಾಸ್ವಾನ್ ಅಲಿಯಾಸ್ ರಾಜೇಶ್ ಕುಮಾರ್ ಗ್ರಾಮದ ಬುಡಕಟ್ಟು ಹುಡುಗಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಎರಡು ದಿನಗಳ ಹಿಂದೆ ಶಿಕ್ಷಕ ರಾಜೇಶ್ ಕುಮಾರ್ ಈ ಹುಡುಗಿಯ ಜೊತೆ ಮೋಜಿನಲ್ಲಿ ತೊಡಗಿದ್ದ ವೇಳೆ ಗ್ರಾಮಸ್ಥರ ಕೈಗೆ ರೆಡ್‌ ಹ್ಯಾಂಡಾಗಿ ಸಿಕ್ಕಿಬಿದಿದ್ದ.

ಇದಾದ ಬಳಿಕ ಗ್ರಾಮಸ್ಥರು ಅದೇ ಸ್ಥಿತಿಯಲ್ಲಿ ಆತನನ್ನು ಮರಕ್ಕೆ ಕಟ್ಟಿ ಹಾಕಿ ಹುಡುಗಿಯ ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಶಿಕ್ಷಕನ ಮನೆಯವರು ಸ್ಥಳಕ್ಕಾಗಮಿಸಿದಾಗ ಗ್ರಾಮಸ್ಥರು ಆತನಿಗೆ ಬಾಲಕಿಯೊಂದಿಗೆ ಮದುವೆ ಮಾಡಿಸಿದ್ದರು. ಮಾಹಿತಿ ಪಡೆದ ಪೊಲೀಸರು ಕೂಡ ಸ್ಥಳಕ್ಕಾಗಮಿಸಿ ಬಾಲಕಿಯನ್ನು ಶಿಕ್ಷಕ ಹಾಗೂ ಸಂಬಂಧಪಟ್ಟವರನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ. ಆದರೆ, ಈ ಅವಧಿಯಲ್ಲಿ ಯಾರ ವಿರುದ್ಧವೂ ದೂರು ನೀಡಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಪೊಲೀಸರು ಆತನನ್ನು ಆತನ ಮನೆಗೆ ಕಳುಹಿಸಿದ್ದಾರೆ. ಗ್ರಾಮಸ್ಥರು ಹೇಳುವ ಪ್ರಕಾರ ಶಿಕ್ಷಕ ರಾಜೇಶ್ ಕುಡಿತದ ಚಟ ಹೊಂದಿದ್ದ ಎನ್ನಲಾಗಿದೆ.

ಶಿಕ್ಷಕ ತನ್ನ ಸಹೋದರಿಯೊಂದಿಗೆ ಸುಮಾರು 7 ವರ್ಷಗಳಿಂದ ಸಂಪರ್ಕದಲ್ಲಿದ್ದಾರೆ ಎಂದು ಯುವತಿಯ ಸಹೋದರಿ ಹೇಳಿದ್ದಾರೆ. ಇತ್ತ, ತಂದೆ-ತಾಯಿಯ ಮನೆಯಿಂದ ಪತ್ನಿ ವಾಪಸಾದ ಬಳಿಕ ಶಿಕ್ಷಕನ ಮದುವೆ ಸುದ್ದಿ ಸಂಚಲನ ಮೂಡಿಸಿದೆ. ಅಣ್ಣನಿಗೆ ರಾಖಿ ಕಟ್ಟಲು ಹೋಗಿದ್ದೆ. ಅಷ್ಟರಲ್ಲಿ ವಂಚಕ ಪತಿ ಈ ಕೃತ್ಯ ಎಸಗಿದ್ದಾನೆ. ಶಿಕ್ಷಕನ ತಂದೆ ವೈದ್ಯನಾಥ ಪಾಸ್ವಾನ್, ಮಗನಿಗೆ ಈಗಾಗಲೇ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ, ಆತನ ಎರಡನೇ ಮದುವೆಯನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ ಎಂದಿದ್ದಾರೆ. ಅಲ್ಲದೇ ಬುಡಕಟ್ಟು ಜನರಿಗೆ ವಾಮಾಚಾರದ ಬಗ್ಗೆ ಗೊತ್ತಿದ್ದು, ವಾಮಾಚಾರದ ಮೂಲಕ ಮಗನನ್ನು ಬಲೆಗೆ ಬೀಳಿಸಿರುವುದು ಖಚಿತ ಎಂದು ಹೇಳಿದ್ದಾರೆ.

ಇದನ್ನೂ ಓದಿ: Viral Video: ಬೇಟೆಯಾಡಲು ಗೋಡೆ ಹತ್ತಿದ ದೈತ್ಯ ಹೆಬ್ಬಾವು; ಗಾಬರಿಗೊಳಿಸುವ ವಿಡಿಯೊ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Viral Video: ಹೆದ್ದಾರಿ ಅಪಘಾತದಲ್ಲಿ ಕೆಳಗೆ ಬಿದ್ದ ತಂದೆ, ತಾಯಿ; ಮಗುವಿನೊಂದಿಗೆ ಬಹುದೂರ ಚಲಿಸಿದ ಬೈಕ್! ಹಳೆಯ ವಿಡಿಯೊ ಮತ್ತೆ ವೈರಲ್‌

ಈ ಘಟನೆಯಲ್ಲಿ ಮಗು (Viral Video) ಸುಮಾರು 500 ಮೀಟರ್ ದೂರದವರೆಗೆ ಬೈಕಿನಲ್ಲಿ ಸಾಗಿ ನಂತರ ರಸ್ತೆ ಪಕ್ಕದ ಹುಲ್ಲುಗಾವಲು ಜಾಗಕ್ಕೆ ಹೋಗಿ ಬಿದ್ದಿದೆ. ವೈರಲ್ ಆದ ಈ ವಿಡಿಯೊವನ್ನು ಮತ್ತೊಂದು ಕಾರಿನ ಡ್ಯಾಶ್ ಕ್ಯಾಮ್ ಸೆರೆಹಿಡಿದಿದೆ. ಬಿದ್ದ ಮಗುವಿನ ಬಳಿ ಕೆಲವು ವ್ಯಕ್ತಿಗಳು ಬಂದು ಏನಾಯಿತು ಎಂಬುದನ್ನು ನೋಡಿದ ನಂತರ ಮಗುವನ್ನು ರಕ್ಷಿಸಿ ಎತ್ತಿಕೊಂಡು ಹೋಗಿದ್ದರು. ಈ ಭಯಾನಕ ವಿಡಿಯೊ ಎಲ್ಲರ ಮೈನಡುಗಿಸಿದೆ ಎಂಬುದರಲ್ಲಿ ಸಂಶಯವಿಲ್ಲ. ಹಲವಾರು ಜನರು ತಮ್ಮ ಆಘಾತವನ್ನು ವ್ಯಕ್ತಪಡಿಸಲು ವಿಡಿಯೊಗೆ ಕಾಮೆಂಟ್ ಮಾಡಿದ್ದಾರೆ.

VISTARANEWS.COM


on

Viral Video
Koo


ತಂದೆ ತಾಯಿಯ ಜೊತೆ ಮಗುವೊಂದು ಬೈಕ್‍ನಲ್ಲಿ ಹೋಗುತ್ತಿದ್ದಾಗ ಬೈಕ್ ಅಪಘಾತಕ್ಕೀಡಾಗಿ ತಂದೆ ತಾಯಿ ಬೈಕ್‍ನಿಂದ ರಸ್ತೆಗೆ ಬಿದ್ದರೆ, ಮಗು ಮಾತ್ರ ಚಲಿಸುತ್ತಿದ್ದ ಬೈಕ್‍ನಲ್ಲಿ ಬಹುದೂರದವರೆಗೆ ಸಾಗಿ ನಂತರ ಕೆಳಗೆ ಬಿದ್ದ ಘಟನೆ ನಡೆದಿದೆ. ಈ ಘಟನೆಯ ವಿಡಿಯೊ ಸೋಶಿಯಲ್ ಮಿಡಿಯಾದಲ್ಲಿ ಹಂಚಿಕೊಳ್ಳಲಾಗಿದ್ದು, ಇದು ವೈರಲ್ (Viral Video) ಆಗಿದೆ. ಈ ದೃಶ್ಯ ನೋಡಿ ಹಲವರು ದಂಗಾಗಿದ್ದಾರೆ. ವೇಗವಾಗಿ ಸಾಗುತ್ತಿದ್ದ ಹಲವು ವಾಹನಗಳ ನಡುವೆ ಈ ಮಗು ಅಪಾಯದಿಂದ ಪಾರಾಗಿದ್ದೇ ಅಚ್ಚರಿಯಾಗಿದೆ. ಇದು ಕೆಲವು ವರ್ಷಗಳ ಹಿಂದೆ ಬೆಂಗಳೂರಿನ ಹೊರ ವಲಯದ ನೆಲಮಂಗಲದ ಹೆದ್ದಾರಿಯಲ್ಲಿ ನಡೆದ ಘಟನೆಯಾಗಿದ್ದು, ಈ ಹಳೆಯ ವಿಡಿಯೊ ಮತ್ತೆ ವೈರಲ್‌ ಆಗಿದೆ.

ಈ ಘಟನೆಯಲ್ಲಿ ಮಗು ಸುಮಾರು 500 ಮೀಟರ್ ದೂರದವರೆಗೆ ಬೈಕಿನಲ್ಲಿ ಸಾಗಿ ನಂತರ ರಸ್ತೆ ಪಕ್ಕದ ಹುಲ್ಲುಗಾವಲು ಜಾಗಕ್ಕೆ ಹೋಗಿ ಬಿದ್ದಿದೆ. ವೈರಲ್ ಆದ ಈ ವಿಡಿಯೊವನ್ನು ಮತ್ತೊಂದು ಕಾರಿನ ಡ್ಯಾಶ್ ಕ್ಯಾಮ್ ಸೆರೆಹಿಡಿದಿದೆ. ಬಿದ್ದ ಮಗುವಿನ ಬಳಿ ಕೆಲವು ವ್ಯಕ್ತಿಗಳು ಬಂದು ಏನಾಯಿತು ಎಂಬುದನ್ನು ನೋಡಿದ ನಂತರ ಮಗುವನ್ನು ರಕ್ಷಿಸಿ ಎತ್ತಿಕೊಂಡು ಹೋಗಿದ್ದರು. ಈ ಭಯಾನಕ ವಿಡಿಯೊ ಎಲ್ಲರ ಮೈನಡುಗಿಸಿದೆ ಎಂಬುದರಲ್ಲಿ ಸಂಶಯವಿಲ್ಲ. ಹಲವಾರು ಜನರು ತಮ್ಮ ಆಘಾತವನ್ನು ವ್ಯಕ್ತಪಡಿಸಲು ವಿಡಿಯೊಗೆ ಕಾಮೆಂಟ್ ಮಾಡಿದ್ದಾರೆ.

ವಿಡಿಯೊದಲ್ಲಿ ವ್ಯಕ್ತಿಯೊಬ್ಬ ತನ್ನ ಹೆಂಡತಿ ಮತ್ತು ಮಗುವಿನೊಂದಿಗೆ ಹೆದ್ದಾರಿಯಲ್ಲಿ ಬೈಕ್‍ನಲ್ಲಿ ಹೋಗುತ್ತಿದ್ದಾರೆ. ಅದೇ ರೀತಿ ಇತರ ವಾಹನಗಳು ರಸ್ತೆಯಲ್ಲಿ ಹೋಗುತ್ತಿದ್ದವು. ಈ ಮಧ್ಯೆ ಅನಿರೀಕ್ಷಿತವಾಗಿ ರಸ್ತೆ ಬದಿಯಲ್ಲಿ ವ್ಯಕ್ತಿಯೊಬ್ಬ ಬೈಕ್‌ ನಿಲ್ಲಿಸಿಕೊಂಡು ನಿಂತಿದ್ದ. ಆ ಬೈಕ್‌ಗೆ ದಂಪತಿ ಇದ್ದ ಬೈಕ್‌ ಡಿಕ್ಕಿ ಹೊಡೆದಿದೆ. ಆಗ ಅದರ ಮೇಲೆ ಕುಳಿತ ದಂಪತಿ ಕೆಳಗೆ ಬಿದ್ದು ರಸ್ತೆಯಲ್ಲಿ ಉರುಳಿದ್ದಾರೆ. ಆದರೆ ಬೈಕ್‍ನಲ್ಲಿದ್ದ ಪುಟ್ಟ ಮಗು ಮಾತ್ರ ತನ್ನ ಸೀಟಿನಲ್ಲಿ ಇನ್ನೂ ಕುಳಿತಿರುವುದು ವಿಡಿಯೊದಲ್ಲಿ ತೋರುತ್ತಿದೆ. ವಿಚಿತ್ರವೇನೆಂದರೆ ಮಗು ಇದ್ದ ಬೈಕ್ ಬೇರೆ ಯಾವುದೇ ವಾಹನಗಳಿಗೆ ಡಿಕ್ಕಿ ಹೊಡೆಯದೆ ಚಾಲಕನೇ ಇಲ್ಲದೆ ಸಹಾಯವಿಲ್ಲದೆ ಸುಮಾರು 500 ಮೀಟರ್ ದೂರ ಹೋಗಿದೆ. ನಂತರ ರಸ್ತೆ ಬದಿಗೆ ಹೋಗಿ ಬಿದ್ದಿದೆ. ಮುಂದೆಯೇ ಒಂದು ಲಾರಿ ವೇಗವಾಗಿ ಹೋಗುತ್ತಿತ್ತು. ಅದೇನಾದರೂ ಡಿಕ್ಕಿ ಹೊಡೆದಿದ್ದರೆ ಮಗುವಿನ ಜೀವಕ್ಕೆ ಅಪಾಯವಾಗುತ್ತಿತ್ತು.

ಇದನ್ನೂ ಓದಿ:ಮಹಿಳೆ ಮೇಲೆ ಅತ್ಯಾಚಾರ ಎಸಗಿ ಜನನಾಂಗದೊಳಗೆ ಗನ್ ತೂರಿಸಿದ ತೃಣಮೂಲ ಕಾರ್ಯಕರ್ತ!

ಈ ಹಳೆಯ ವಿಡಿಯೊವನ್ನು ಎಕ್ಸ್‌ನಲ್ಲಿ ಹಂಚಿಕೊಳ್ಳಲಾಗಿದ್ದು, 4 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ. ಕಾಮೆಂಟ್ ವಿಭಾಗದಲ್ಲಿ, ಬಳಕೆದಾರರೊಬ್ಬರು “ಇದು ಪವಾಡ. ಮಗು ಸುರಕ್ಷಿತವಾಗಿದೆ ಎಂದು ಸಂತೋಷವಾಗಿದೆ. ಆದರೂ ಇದು ಸಂಭವಿಸಿರುವುದು ಭಯಾನಕವಾಗಿದೆ.” ಎಂದಿದ್ದಾರೆ. ಮತ್ತೊಬ್ಬರು ಇದು ನಿಜವಾಗಿಯೂ ಪವಾಡ” ಎಂದು ಹೇಳಿದ್ದಾರೆ. ಒಬ್ಬ ಬಳಕೆದಾರರು ತಮಾಷೆಯಾಗಿ “ಟಾರ್ಜೆನ್, ಅದ್ಭುತ ಬೈಕ್.” ಎಂದಿದ್ದಾರೆ. ಇನ್ನೊಬ್ಬ ಬಳಕೆದಾರರು, “ಇದು ಬೆಂಗಳೂರು ಬಳಿಯ ನೆಲಮಂಗಲದಲ್ಲಿ ನಡೆದ ಹಳೆಯ ವೀಡಿಯೊ” ಎಂದು ತಿಳಿಸಿದ್ದಾರೆ.

Continue Reading

Latest

Viral Video: ಬಾಲ್ಕನಿಯಿಂದ ಬಿದ್ದು 3 ವರ್ಷದ ಬಾಲಕಿ ದಾರುಣ ಸಾವು; ಆಘಾತಕಾರಿ ವಿಡಿಯೊ

ಪಶ್ಚಿಮ ದೆಹಲಿಯ ಸಾಗರ್‌ಪುರ ಪ್ರದೇಶದಲ್ಲಿ ಅಪಾರ್ಟ್ಮೆಂಟ್ ಒಂದರ ಮೂರನೇ ಮಹಡಿಯಿಂದ ಬಿದ್ದು (Viral Video) ಮೂರು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ನಡೆದಿದೆ. ಇಡೀ ಘಟನೆಯು ಆ ಪ್ರದೇಶದಲ್ಲಿ ಅಳವಡಿಸಲಾದ ಸಿಸಿಟಿವಿಗಳಲ್ಲಿ ಸೆರೆಯಾಗಿದೆ. ಇದು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ವೈದ್ಯರು ಅವಳನ್ನು ಉಳಿಸಲು ಸಾಧ್ಯವಾಗಲಿಲ್ಲ.

VISTARANEWS.COM


on

Viral Video
Koo


ನವದೆಹಲಿ: ಪೋಷಕರು ಮಕ್ಕಳ ಬಗ್ಗೆ ನಿಗಾ ಇಡಬೇಕು. ಅವರು ಆಟವಾಡುವಾಗ ಅವರ ಪಾಡಿಗೆ ಅವರನ್ನು ಬಿಡುವಂತಹ ತಪ್ಪುಗಳನ್ನು ಮಾಡಬೇಡಿ. ಇದರಿಂದ ಅನಾಹುತಗಳೇ ಸಂಭವಿಸುತ್ತವೆ. ಅಷ್ಟೆ ಅಲ್ಲದೇ ಮಕ್ಕಳನ್ನು ಮನೆಯ ಬಾಲ್ಕನಿಯಲ್ಲಿ ಆಡಲು ಬಿಡುವ ತಾಯಂದಿರು ಅವರು ಸುರಕ್ಷಿತವಾಗಿರುತ್ತಾರೆ ಎಂದು ಭಾವಿಸುತ್ತಾರೆ. ಆದರೆ ಇದು ತುಂಬಾ ಅಪಾಯಕಾರಿ ಎಂಬುದನ್ನು ಮೊದಲು ತಿಳಿಯಿರಿ. ಪಶ್ಚಿಮ ದೆಹಲಿಯ ಸಾಗರ್‌ಪುರ ಪ್ರದೇಶದಲ್ಲಿ ಅಪಾರ್ಟ್‍ಮೆಂಟ್ ಒಂದರ ಮೂರನೇ ಮಹಡಿಯಿಂದ ಬಿದ್ದು ಮೂರು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ನಡೆದಿದೆ. ಇಡೀ ಘಟನೆಯು ಆ ಪ್ರದೇಶದಲ್ಲಿ ಅಳವಡಿಸಲಾದ ಸಿಸಿಟಿವಿಗಳಲ್ಲಿ ಸೆರೆಯಾಗಿದೆ. ಇದು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.

ಸಿಸಿಟಿವಿ ದೃಶ್ಯಾವಳಿಗಳಲ್ಲಿ ಮಗು ಇದ್ದಕ್ಕಿದ್ದಂತೆ ಕೆಳಗಿನ ಬೀದಿಗೆ ಬಿದ್ದಿದೆ. ಸ್ವಲ್ಪ ಹೊತ್ತಿನ ನಂತರ, ಮಹಿಳೆಯೊಬ್ಬಳು ರಕ್ತದ ಮಡುವಿನಲ್ಲಿ ಬಿದ್ದ ಮಗುವನ್ನು ಕಂಡು ಭಯಭೀತಳಾಗಿ ಮಗುವಿನ ಬಳಿ ಓಡಿಬರುತ್ತಾಳೆ. ಸ್ವಲ್ಪ ಸಮಯದ ನಂತರ ಬಾಲಕಿಯ ಕುಟುಂಬದವರು ಘಟನಾ ಸ್ಥಳಕ್ಕೆ ಬರುತ್ತಾರೆ. ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ವೈದ್ಯರು ಅವಳನ್ನು ಉಳಿಸಲು ಸಾಧ್ಯವಾಗಲಿಲ್ಲ. ಮಗು ಸ್ಥಳದಲ್ಲೇ ಸಾವನಪ್ಪಿದೆ ಎಂದು ವೈದ್ಯರು ಕೈ ಚೆಲ್ಲಿದರು.‌

ಬಾಲಕಿ ಮೂರನೇ ಮಹಡಿಯಿಂದ ಬಿದ್ದಿದ್ದು ಹೇಗೆ ಎಂಬುದನ್ನು ಕಂಡುಹಿಡಿಯಲು ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಬಾಲ್ಕನಿಯಲ್ಲಿ ಒಬ್ಬಂಟಿಯಾಗಿ ಆಡುತ್ತಿದ್ದಾಗ ಬಾಲಕಿ ಆಕಸ್ಮಿಕವಾಗಿ ಬಿದ್ದಿರಬಹುದು. ಘಟನೆಯ ಬಗ್ಗೆ ಹೆಚ್ಚಿನ ವಿವರಗಳನ್ನು ಸಂಗ್ರಹಿಸಲು ಪೊಲೀಸರು ಆ ಪ್ರದೇಶದ ಇತರ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಕಳೆದ ಡಿಸೆಂಬರ್ ನಲ್ಲಿ ನೋಯ್ಡಾದಲ್ಲಿ ನಡೆದ ಇದೇ ರೀತಿಯ ಘಟನೆಯಲ್ಲಿ, ಮೂರು ವರ್ಷದ ಬಾಲಕಿ ಆಟವಾಡುವಾಗ ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಳು.

ಇದನ್ನೂ ಓದಿ: ಮಹಿಳೆ ಮೇಲೆ ಅತ್ಯಾಚಾರ ಎಸಗಿ ಜನನಾಂಗದೊಳಗೆ ಗನ್ ತೂರಿಸಿದ ತೃಣಮೂಲ ಕಾರ್ಯಕರ್ತ!

ಮತ್ತೊಂದು ಘಟನೆಯಲ್ಲಿ, ದೆಹಲಿಯ ಜಫ್ರಾಬಾದ್ ಪ್ರದೇಶದಲ್ಲಿ ಮನೆಯ ಕಿಟಕಿಯ ಬಳಿ ಆಟವಾಡುತ್ತಿದ್ದ ಮಗು ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿತ್ತು. ಬ್ಯಾಲೆನ್ಸ್‌ ಕಳೆದುಕೊಂಡು ಮಗು ಕೆಳಗೆ ಬಿದ್ದಿತ್ತು. ಮಗುವನ್ನು ಉಳಿಸಲು ವೈದ್ಯರು ಎಲ್ಲ ಪ್ರಯತ್ನಗಳನ್ನು ಮಾಡಿದರೂ ಸಾಧ್ಯವಾಗಿರಲಿಲ್ಲ.

Continue Reading

Latest

Viral Video: ಬೇಟೆಯಾಡಲು ಗೋಡೆ ಹತ್ತಿದ ದೈತ್ಯ ಹೆಬ್ಬಾವು; ಗಾಬರಿಗೊಳಿಸುವ ವಿಡಿಯೊ

ಹೆಬ್ಬಾವು ಎಂದರೆ ಯಾರು ತಾನೇ ಬೆಚ್ಚಿ ಬೀಳಲ್ಲ ಹೇಳಿ? ಇಲ್ಲೊಂದು (Viral Video) ದೈತ್ಯಾಕಾರದ ಹೆಬ್ಬಾವು ತನ್ನ ಬೇಟೆಗಾಗಿ ಗೋಡೆ ಹತ್ತುತ್ತಿರುವ ವಿಡಿಯೊವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಭಾರತೀಯ ಅರಣ್ಯ ಸೇವೆಗಳ ಅಧಿಕಾರಿ ಸುಸಂತ ನಂದ ಅವರು ಟ್ವಿಟರ್‌ನಲ್ಲಿ ರೆಟಿಕ್ಯುಲೇಟೆಡ್ ಹೆಬ್ಬಾವಿನ ವಿಡಿಯೊವೊಂದನ್ನು ಹಂಚಿಕೊಂಡಿದ್ದಾರೆ. ಈ ಹಾವುಗಳಲ್ಲಿ ವಿಷವಿಲ್ಲದಿದ್ದರೂ ಇವು ತುಂಬಾ ಅಪಾಯಕಾರಿಯಾಗಿವೆ ಎಂದವರು ಮಾಹಿತಿ ನೀಡಿದ್ದಾರೆ.

VISTARANEWS.COM


on

Viral Video
Koo


ರೆಟಿಕ್ಯುಲೇಟೆಡ್ ಹೆಬ್ಬಾವು ವಿಶ್ವದ ಅತಿದೊಡ್ಡ ಮತ್ತು ಭಾರವಾದ ಹಾವುಗಳಲ್ಲಿ ಒಂದಾಗಿದೆ. ಈ ಹೆಬ್ಬಾವು ವಿಷರಹಿತವಾಗಿದೆ. ಭಾರತೀಯ ಅರಣ್ಯ ಸೇವೆಗಳ ಅಧಿಕಾರಿ ಸುಸಂತ ನಂದ ಅವರು ಟ್ವಿಟರ್‌ನಲ್ಲಿ ರೆಟಿಕ್ಯುಲೇಟೆಡ್ ಹೆಬ್ಬಾವಿನ ವಿಡಿಯೊವೊಂದನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ರೆಟಿಕ್ಯುಲೇಟೆಡ್ ಹೆಬ್ಬಾವು ತನ್ನ ಬೇಟೆಯನ್ನು ಹಿಡಿಯಲು ಗೋಡೆಯನ್ನು ಹತ್ತುತ್ತಿರುವುದನ್ನು ತೋರಿಸಲಾಗಿದೆ. ಇದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ (Viral Video) ಆಗಿದ್ದು, ನೆಟ್ಟಿಗರು ಇದನ್ನು ಕಂಡು ಬೆಚ್ಚಿಬಿದ್ದಿದ್ದಾರೆ.

ಈ ಹಾವು ತನ್ನ ದೇಹವನ್ನು ಅದರ ಸುತ್ತಲೂ ಸುತ್ತುವ ಮೂಲಕ ತನ್ನ ಬೇಟೆಯನ್ನು ಜೀರ್ಣಿಸಿಕೊಳ್ಳುವ ಸಾಮರ್ಥ್ಯಕ್ಕೆ ಹೆಸರುವಾಸಿಯಾಗಿದೆ. ಸಾಮಾನ್ಯವಾಗಿ ರೆಟಿಕ್ಯುಲೇಟೆಡ್ ಹೆಬ್ಬಾವು ಅತಿ ಉದ್ದದ ಹಾವುಗಳಲ್ಲಿ ಒಂದಾಗಿದೆ. ಕೆಲವು 33 ಅಡಿ ಉದ್ದಗಳವರೆಗೆ ಬೆಳಯುತ್ತವೆ. ಅವು ತೂಕ 165 ಪೌಂಡ್‌ಗಳವರೆಗೆ ಇರಬಹುದು. ಈ ಹಾವುಗಳಲ್ಲಿ ವಿಷವಿಲ್ಲದಿದ್ದರೂ ಇವು ತುಂಬಾ ಅಪಾಯಕಾರಿಯಾಗಿವೆ. ಎಲ್ಲ ಶಕ್ತಿಯನ್ನು ಹಾಕಿ ತನ್ನ ಹೊಟ್ಟೆಯೊಳಗಿರುವ ಬೇಟೆಯನ್ನು ಹಿಂಡಲು ಪ್ರಯತ್ನಿಸುತ್ತದೆ. ಇದು ಮನುಷ್ಯನನ್ನು ಕೂಡ ಕೊಂದುಹಾಕುತ್ತದೆ ಎಂದು ನಂದಾ ತಮ್ಮ ಟ್ವೀಟರ್‌ನಲ್ಲಿ ಉಲ್ಲೇಖಿಸಿದ್ದಾರೆ.

ವಿಡಿಯೊದಲ್ಲಿ ಕಂಡುಬರುವಂತೆ ರೆಟಿಕ್ಯುಲೇಟೆಡ್ ಹೆಬ್ಬಾವು ಎಷ್ಟು ಎತ್ತರದ ಸ್ಥಳಗಳನ್ನು ಬೇಕಾದರೂ ಹತ್ತುತ್ತದೆ. ಹಾಗಾಗಿ ಇದು ಪಕ್ಷಿಗಳು, ಸಸ್ತನಿಗಳು ಮತ್ತು ಇತರ ಸರೀಸೃಪಗಳಂತಹ ಬೇಟೆಯನ್ನು ತಲುಪಲು ಸಹಾಯ ಮಾಡುತ್ತದೆ. ತನ್ನ ಬೇಟೆಯನ್ನು ಹಿಡಿದ ನಂತರ, ಹೆಬ್ಬಾವು ಅದನ್ನು ಉಸಿರುಗಟ್ಟುವವರೆಗೆ ಹಿಂಡುತ್ತದೆ, ನಂತರ ಅದನ್ನು ಸಂಪೂರ್ಣವಾಗಿ ನುಂಗುತ್ತದೆ, ಹಾಗೇ ದೊಡ್ಡ ಜೀವಿಗಳನ್ನು ತಿನ್ನಲು ಅವು ತನ್ನ ದವಡೆಯಿಂದ ಜಗಿಯುತ್ತವೆ ಎನ್ನಲಾಗಿದೆ.

ಇದನ್ನೂ ಓದಿ: ‘ಶೀಲಾ ಕಿ ಜವಾನಿ’ ಹಾಡಿಗೆ ಸಖತ್ ಆಗಿ ಸೊಂಟ ಬಳುಕಿಸಿದ ಬೆಡಗಿ! ವಿಡಿಯೊ ನೋಡಿ

ವೈರಲ್ ವಿಡಿಯೊದಲ್ಲಿ ರೆಟಿಕ್ಯುಲೇಟೆಡ್ ಹೆಬ್ಬಾವು ತನ್ನ ಬೇಟೆಯನ್ನು ಹಿಡಿಯಲು ಗೋಡೆಯನ್ನು ಏರುತ್ತಿರುವುದನ್ನು ಕಂಡು ನೆಟ್ಟಿಗರು ಗಾಬರಿಗೊಂಡಿದ್ದಾರೆ. ಅನೇಕ ಬಳಕೆದಾರರು ಹಾವಿನ ಅಪಾರ ಗಾತ್ರ ಮತ್ತು ಶಕ್ತಿಯ ಬಗ್ಗೆ ಆಶ್ಚರ್ಯವನ್ನು ವ್ಯಕ್ತಪಡಿಸಿದ್ದಾರೆ. ಒಬ್ಬ ಬಳಕೆದಾರರು, “ವಾಹ್, ಅದು ಒಂದು ದೊಡ್ಡ ಹೆಬ್ಬಾವು! ನಾನು ಖಂಡಿತವಾಗಿಯೂ ಅದರೊಂದಿಗೆ ಹೋರಾಡಲು ಬಯಸುವುದಿಲ್ಲ.” ಎಂದು ತಿಳಿಸಿದ್ದಾರೆ. ಇನ್ನೊಬ್ಬರು “ಪ್ರಕೃತಿ ನಿಜವಾಗಿಯೂ ನಂಬಲಾಗದು. ಈ ಜೀವಿಗಳು ತಮ್ಮ ಆವಾಸಸ್ಥಾನಗಳಲ್ಲಿ ಹೇಗೆ ಹೊಂದಿಕೊಳ್ಳುತ್ತವೆ ಮತ್ತು ಅಭಿವೃದ್ಧಿ ಹೊಂದುತ್ತವೆ ಎಂಬುದನ್ನು ನೋಡುವುದು ಆಶ್ಚರ್ಯಕರವಾಗಿದೆ ಎಂದು ಬರೆದಿದ್ದಾರೆ.

Continue Reading

ಹಾಸನ

Wild Animals Attack : ಅತ್ತೆ ಮನೆಗೆ ಬಂದ ಅಳಿಯನ ಅಟ್ಟಾಡಿಸಿದ ಕಾಡಾನೆ! ಮುಂದೇನಾಯ್ತು

Wild Animals Attack : ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿ ಹೆಚ್ಚಾಗುತ್ತಿದೆ. ಇತ್ತ ಚಾಮರಾಜನಗರದಲ್ಲಿ ಚಿರತೆ ಮರಿಗಳು ಪ್ರತ್ಯಕ್ಷಗೊಂಡಿದೆ. ಕಾಲುವೆ ನೀರಲ್ಲಿ ಕೊಚ್ಚಿ ಹೋಗುತ್ತಿದ್ದ ಹಸುವೊಂದನ್ನು ಯುವಕರು ರಕ್ಷಣೆ ಮಾಡಿದ್ದಾರೆ.

VISTARANEWS.COM


on

By

wild animals attack
Koo

ಹಾಸನ: ಅತ್ತೆ ಮನೆಗೆ ಬಂದ ಅಳಿಯನನ್ನು ಕಾಡಾನೆಯೊಂದು (Wild Animals Attack) ಅಟ್ಟಾಡಿಸಿಕೊಂಡು ಬಂದಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಉದೇವಾರ ಗ್ರಾಮದಲ್ಲಿ ಘಟನೆ ನಡೆದಿದೆ.

ಕೋಲಾರ ಮೂಲದ ನಾಗೇಶ್ (35) ಎಂಬುವವರು ಉದೇವಾರ ಗ್ರಾಮದಲ್ಲಿದ್ದ ತಮ್ಮ ಅತ್ತೆ ಮನೆಗೆ ಬಂದಿದ್ದರು. ಊಟಕ್ಕೆ ಮೊಸರು ತರಲೆಂದು ಅಂಗಡಿಗೆ ತೆರಳುತ್ತಿದ್ದರು. ಅದ್ಯಾವ ಕಡೆಯಿಂದಲೋ ಓಡಿ ಬಂದ ಕಾಡಾನೆಯೊಂದು ನಾಗೇಶ್‌ರನ್ನು ಅಡ್ಡಗಟ್ಟಿತ್ತು.

ಕಾಡಾನೆಯಿಂದ ತಪ್ಪಿಸಿಕೊಂಡು ಓಡಿ ಹೋಗಲು ಯತ್ನಿಸಿದ ನಾಗೇಶ್‌ ಗಾಬರಿಯಲ್ಲಿ ಮುಗ್ಗರಿಸಿ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಗಾಯಗೊಂಡ ನಾಗೇಶ್‌ ಸಕಲೇಶಪುರ ಪ್ರಾಥಮಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಗಾಯಾಳು ಆರೋಗ್ಯ ವಿಚಾರಣೆಗೆ ಅರಣ್ಯಾಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Wild animals Attack
Wild animals Attack

ಇದನ್ನೂ ಓದಿ: Prabhas: ಶಾರುಖ್, ಸಲ್ಮಾನ್ ಹಿಂದಿಕ್ಕಿ ‘ಅತ್ಯಂತ ಜನಪ್ರಿಯ ಪುರುಷ ತಾರೆ’ಯಾಗಿ ಹೊರಹೊಮ್ಮಿದ ಪ್ರಭಾಸ್!

ಕೊಚ್ಚಿ ಹೋಗುತ್ತಿದ್ದ ಹಸುವನ್ನು ರಕ್ಷಿಸಿದ ಯುವಕರು

ನೋಡ ನೋಡುತ್ತಿದ್ದಂತೆ ರಭಸವಾಗಿ ಹರಿಯುತ್ತಿದ್ದ ಕಾಲುವೆ ನೀರಲ್ಲಿ ಹಸುವೊಂದು ಕೊಚ್ಚಿ ಹೋಗುತ್ತಿತ್ತು. ಇದನ್ನು ಗಮನಿಸಿದ ಯುವಕರು ಪ್ರಾಣವನ್ನು ಲೆಕ್ಕಿಸದೆ ಹಸು ರಕ್ಷಣೆ ಮಾಡಿದ್ದಾರೆ. ವಿಜಯನಗರದ ಹೊಸಪೇಟೆ ಹೊರವಲಯದ ಎಚ್‌ಎಲ್‌ಸಿ ಕಾಲುವೆಯಲ್ಲಿ ಘಟನೆ ನಡೆದಿದೆ.

31ನೇ ವಾರ್ಡಿನ ಯುವಕ ಕೃಷ್ಣನ ನೇತೃತ್ವದಲ್ಲಿ ರಕ್ಷಣೆ ಮಾಡಲಾಗಿದೆ. ನೀರು ಕುಡಿಯಲು ಹೋದ ಸಂದರ್ಭದಲ್ಲಿ ಹಸುವೊಂದು ಆಯತಪ್ಪಿ ಬಿದ್ದಿತ್ತು. ಅಲ್ಲಿಯೇ ಇದ್ದ ಸ್ಥಳೀಯ ಯುವಕರು ಕೂಡಲೇ ಅಗ್ಗದ ಮೂಲಕ ಹಸು ರಕ್ಷಣೆಗೆ ಮುಂದಾಗಿದ್ದಾರೆ.

ಚಿಕ್ಕಮಗಳೂರಿನಲ್ಲಿ ಒಂಟಿ ಸಲಗದ ದಾಂಧಲೆ

ಚಿಕ್ಕಮಗಳೂರು ತಾಲೂಕಿನ ಮಾವಿನಗುಣಿ ಗ್ರಾಮದ ಬಳಿ ಒಂಟಿ ಸಲಗದ ದಾಂಧಲೆ ಮುಂದುವರಿದಿದೆ. ಕಾಫಿ, ಅಡಿಕೆ ತೋಟಗಳಿಗೆ ನುಗ್ಗಿ ನಾಶ ಮಾಡಿದೆ. ಒಂದು ತೋಟದಿಂದ ಮತ್ತೊಂದು ತೋಟಕ್ಕೆ ಒಂಟಿ ಸಲಗ ಲಗ್ಗೆಯಿಡುತ್ತಿದ್ದು, ಸುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿದೆ. ವಾಹನ ಸವಾರರು, ತೋಟಕ್ಕೆ ತೆರಳುವ ಕಾರ್ಮಿಕರಿಗೆ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.

ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪ್ರತ್ಯಕ್ಷ

ಕಬ್ಬು ಕಟಾವು ಮಾಡುವ ವೇಳೆ ಎರಡು ಚಿರತೆ ಮರಿಗಳು ಪ್ರತ್ಯಕ್ಷವಾಗಿವೆ. ಕಾರ್ಮಿಕರು ಚಿರತೆ ಮರಿಗಳನ್ನು ಕಂಡು ಅವಕ್ಕಾದರು. ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಹಂಗಳಪುರದ ರೈತ ಮಹೇಶ್ ಎಂಬುವರ ಜಮೀನಿನಲ್ಲಿ ಚಿರತೆ ಮರಿಗಳು ಪತ್ತೆಯಾಗಿವೆ. ಕಬ್ಬು ಕಟಾವು ಮಾಡುವಾಗ ತಾಯಿಗಾಗಿ ಮರಿಗಳ ಚೀರಾಟ ಕೇಳಿ ಕಾರ್ಮಿಕರು ರಕ್ಷಿಸಿದ್ದಾರೆ. ಚಿರತೆ ಮರಿಗಳನ್ನು ಬೋನಿನಲ್ಲಿಟ್ಟು ತಾಯಿ ಚಿರತೆ ಜತೆ ಸೇರಿಸಲು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Non Vegetarian Population
ಆಹಾರ/ಅಡುಗೆ1 min ago

Non Vegetarian Population: ಜಗತ್ತಿನಲ್ಲಿ ಕುಸಿಯುತ್ತಿದೆ ಮಾಂಸಾಹಾರಿಗಳ ಸಂಖ್ಯೆ! ಕಡಿಮೆ ಮಾಂಸಾಹಾರದ ದೇಶಗಳಲ್ಲಿ ಭಾರತವೇ ನಂ.1

Cheapest Currency
ವಾಣಿಜ್ಯ17 mins ago

Cheapest Currency: ವಿಶ್ವದಲ್ಲೇ ಅಗ್ಗದ ಕರೆನ್ಸಿ ಹೊಂದಿರುವ ದೇಶಗಳಲ್ಲಿ ಭಾರತದ 1 ರೂ.ನ ಮೌಲ್ಯ ಎಷ್ಟಾಗುತ್ತೆ ನೋಡಿ!

ಪ್ರಮುಖ ಸುದ್ದಿ24 mins ago

Vande Bharat Express: ಇನ್ನು ಮುಂದೆ ತುಮಕೂರಿನಲ್ಲೂ ನಿಲ್ಲಲಿದೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು; ಟಿಕೆಟ್‌ ದರ ಎಷ್ಟು?

Health Tips
ಆರೋಗ್ಯ25 mins ago

Health Tips: ಮಲಗುವ ಮುನ್ನ ಹಾಲು, ಬೆಲ್ಲ ಸೇವಿಸಿದರೆ ಹಲವು ಸಮಸ್ಯೆಗಳಿಗೆ ಪರಿಹಾರ

Goodbye to black robes
ದೇಶ40 mins ago

Goodbye to black Robes: ಘಟಿಕೋತ್ಸವದಲ್ಲಿ ಧರಿಸುವ ಕಪ್ಪು ನಿಲುವಂಗಿ, ಟೋಪಿಗೆ ಗುಡ್‌ಬೈ- ಕೇಂದ್ರದಿಂದ ಮಹತ್ವದ ಘೋಷಣೆ

Kolkata Doctor Murder Case
ಕ್ರೈಂ44 mins ago

Kolkata Doctor Murder Case: ಕೋಲ್ಕತಾ ವೈದ್ಯೆಯ ಹಂತಕನಲ್ಲಿ ಕ್ರೂರ ಮೃಗದ ಲಕ್ಷಣ! ಪಶ್ಚಾತ್ತಾಪವೇ ಇಲ್ಲ

Kannada New Movie
ಬೆಂಗಳೂರು53 mins ago

Kannada New Movie: ʼಪೆನ್ ಡ್ರೈವ್ʼ ಚಿತ್ರದಲ್ಲಿ ಮಾಲಾಶ್ರೀ; ಇದು ತನಿಷಾ ಕುಪ್ಪಂಡ ಅಭಿನಯದ ಚಿತ್ರ

Viral Video
Latest1 hour ago

Viral Video: ಹೆದ್ದಾರಿ ಅಪಘಾತದಲ್ಲಿ ಕೆಳಗೆ ಬಿದ್ದ ತಂದೆ, ತಾಯಿ; ಮಗುವಿನೊಂದಿಗೆ ಬಹುದೂರ ಚಲಿಸಿದ ಬೈಕ್! ಹಳೆಯ ವಿಡಿಯೊ ಮತ್ತೆ ವೈರಲ್‌

Shreyas Patel
ಕರ್ನಾಟಕ1 hour ago

Shreyas Patel: ಸಂಸದ ಶ್ರೇಯಸ್‌ ಪಟೇಲ್‌ ಆಯ್ಕೆ ಅಸಿಂಧು ಕೋರಿ ಅರ್ಜಿ; ವಿಚಾರಣೆ ಮುಂದೂಡಿದ ಹೈಕೋರ್ಟ್‌

karnataka weather forecast
ಮಳೆ1 hour ago

Karnataka Weather : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ-ಕೊಳ್ಳಗಳು; ಹಳ್ಳ ದಾಟಲು ಗ್ರಾಮಸ್ಥರ ಪರದಾಟ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌