Viral News: ಮಗನನ್ನೇ ಮಾರಾಟ ಮಾಡಲು ಮುಂದಾದ ತಂದೆ; ಹಿಂದಿದೆ ನೋವಿನ ಕಥೆ - Vistara News

ವೈರಲ್ ನ್ಯೂಸ್

Viral News: ಮಗನನ್ನೇ ಮಾರಾಟ ಮಾಡಲು ಮುಂದಾದ ತಂದೆ; ಹಿಂದಿದೆ ನೋವಿನ ಕಥೆ

Viral News: ಸಾಲ ಬಾಧೆಯ ಸುಳಿಗೆ ಸಿಲುಕಿರುವ ವ್ಯಕ್ತಿಯೊಬ್ಬ ಮಗನನ್ನೇ ಮಾರಾಟ ಮಾಡಲು ಮುಂದಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

VISTARANEWS.COM


on

up
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಕ್ನೋ: ಹಿಂದೆಲ್ಲ ಕಿತ್ತು ತಿನ್ನುವ ಬಡತನ ಕಾರಣಕ್ಕೆ ಕೆಲವರು ಮಕ್ಕಳನ್ನು ಮಾರಾಟ ಮಾಡುತ್ತಿದ್ದರು ಎನ್ನುವುದನ್ನು ಕೇಳಿದ್ದೇವೆ. ಇದೀಗ ಅಂತಹದ್ದೇ ಘೋರ ಘಟನೆಗೆ ಸಾಕ್ಷಿಯಾಗುವ ಸಂದರ್ಭ ಒದಗಿಬಂದಿದೆ. ಸಾಲ ತೀರಿಸಲು ಬಡ ತಂದೆಯೊಬ್ಬ ತನ್ನ ಸ್ವಂತ ಮಗನನ್ನೇ ಮಾರಾಟ ಮಾಡಲು ನಿರ್ಧರಿಸಿರುವ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಲಾಗಿದ್ದು, ವೈರಲ್‌ (Viral News) ಆಗಿದೆ.

ಏನಿದು ಘಟನೆ?

ಉತ್ತರ ಪ್ರದೇಶದ ಅಲಿಗಢದ ಮಹುವಾ ಖೇಡಾ ಪೊಲೀಸ್ ಠಾಣೆ ವ್ಯಾಪ್ತಿಯ ರಾಜ್‌ಕುಮಾರ್‌ ಎಂಬ ಇ-ರಿಕ್ಷಾ ಚಾಲಕ ತನ್ನ ಮಗನನ್ನು ಮಾರಾಟ ಮಾಡಲು ಮುಂದಾಗಿದ್ದಾರೆ. ಪ್ರಸ್ತುತ ಅವರ ಕುಟುಂಬ ಅಲಿಗಢದ ಗಾಂಧಿ ಪಾರ್ಕ್‌ನ ಕಂಪನಿ ಬಾಗ್ ಜಂಕ್ಷನ್‌ನಲ್ಲಿ ವಾಸಿಸುತ್ತಿದೆ. ರಾಜ್‌ಕುಮಾರ್‌ “ನಾನು ನನ್ನ ಮಗನನ್ನು ಮಾರಾಟ ಮಾಡಬೇಕು” ಎಂಬ ಬೋರ್ಡ್‌ ಒಂದನ್ನು ಕುತ್ತಿಗೆಗೆ ನೇತು ಹಾಕಿ ರಸ್ತೆ ಬದಿ ಕುಳಿತ ಫೊಟೊ ಎಲ್ಲೆಡೆ ಹರಿದಾಡುತ್ತಿದೆ. ಮಗನನ್ನು 6-8 ಲಕ್ಷ ರೂ.ಗೆ ಮಾರಾಟ ಮಾಡುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

ಸಾಲದ ಚಕ್ರವ್ಯೂಹ

ವಿಷಯ ತಿಳಿಯುತ್ತಿದ್ದಂತೆ ಪತ್ನಿ, ಇಬ್ಬರು ಮಕ್ಕಳೊಂದಿಗೆ ಕುಳಿತಿದ್ದ ರಾಜ್‌ಕುಮಾರ್‌ ಬಳಿ ಜನ ನೆರೆದು, ಇಂತಹ ಪರಿಸ್ಥಿತಿ ಉದ್ಭವಿಸಲು ಕಾರಣ ವಿಚಾರಿಸಿದ್ದಾರೆ. ಕೆಲವು ದಿನಗಳ ಹಿಂದೆ 50 ಸಾವಿರ ರೂ. ಸಾಲ ಮಾಡಿದ್ದೆ. ಇದೀಗ ಸಾಲಗಾರರ ಕಾಟ ವಿಪರೀತವಾಗಿದ್ದು, ಸಹಿಸಲು ಸಾಧ್ಯವಾಗದಾಗ ಇಂತಹ ಕಠಿಣ ನಿರ್ಧಾರ ಕೈಗೊಳ್ಳಬೇಕಾಯಿತು ಎಂದು ರಾಜ್‌ಕುಮಾರ್‌ ತಮ್ಮ ನೋವಿನ ಕಥೆಯನ್ನು ತೋಡಿಕೊಂಡರು. ʼʼಸಾಲ ತೀರಿಸಲು ಬೇರೆ ದಾರಿ ಕಾಣದೆ ನನ್ನ 11 ವರ್ಷದ ಮಗನನ್ನು ಮಾರಾಟ ಮಾಡಲು ನಿರ್ಧರಿಸಿದೆʼʼ ಎಂದು ರಾಜ್‌ಕುಮಾರ್‌ ಹೇಳಿಕೊಂಡಿದ್ದಾರೆ. ಸಾಲಗಾರರು ದೈಹಿಕ ಹಲ್ಲೆಗೆ ಮುಂದಾಗಿದ್ದಲ್ಲದೆ ತಮ್ಮ ಇ-ರಿಕ್ಷಾವನ್ನು ಮುಟ್ಟುಗೋಲು ಹಾಕಿದ್ದಾಗಿ ತಿಳಿಸಿದ್ದಾರೆ. ಆಟೋ ಕಿತ್ತುಕೊಂಡಿದ್ದ ಬಗ್ಗೆ ರಾಜ್‌ಕುಮಾರ್ ಸ್ಥಳೀಯ ಪೊಲೀಸರ ಮೊರೆ ಹೋಗಿದ್ದರಂತೆ. ಆದರೆ ದೂರು ದಾಖಲಿಸಲು ಅವರು ನಿರಾಕರಿಸಿದ್ದರು. ಆದ್ದರಿಂದ ಬೇಸರಗೊಂಡು ಈ ಹೆಜ್ಜೆ ಇಡಬೇಕಾಯಿತು ಎಂದೂ ಅವರು ಹೇಳಿಕೊಂಡಿದ್ದಾರೆ.

ʼʼಮಗನನ್ನು ಮಾರಾಟ ಮಾಡಿ ಲಭಿಸುವ ಹಣದಿಂದ ಸಾಲವನ್ನು ತೀರಿಸಲು ಸಾಧ್ಯವಾಗುತ್ತದೆ. ಅಲ್ಲದೆ ಇದರಿಂದ ಮಗಳಿಗೆ ಶಿಕ್ಷಣವನ್ನು ಒದಗಿಸುತ್ತೇನೆ. ಅವಳ ಮದುವೆ ವ್ಯವಸ್ಥೆ ಮಾಡಲು ಮತ್ತು ಕುಟುಂಬದ ಮೂಲಭೂತ ಅಗತ್ಯಗಳನ್ನು ಪೂರೈಸಲು ಇದರಿಂದ ಸಾಧ್ಯವಾಗಲಿದೆʼʼ ಎಂದು ರಾಜ್‌ಕುಮಾರ್‌ ಗದ್ಗದಿತರಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: Viral Video: ಪ್ರಜ್ಞೆ ತಪ್ಪಿದ ಹಾವಿನ ಪ್ರಾಣ ಉಳಿಸಿದ ಕಾನ್‌ಸ್ಟೇಬಲ್‌; ಶಹಬ್ಬಾಶ್‌ ಎಂದ ಜನ

ಪ್ರಕರಣ ಸುಖಾಂತ್ಯ

ಸದ್ಯ ಈ ಪ್ರಕರಣ ಸುಖಾಂತ್ಯವಾಗಿದೆ. ವಿಷಯ ತಿಳಿದು ಸ್ಥಳೀಯ ಪೊಲೀಸರು ಆಗಮಿಸಿ ರಾಜ್‌ಕುಮಾರ್‌ನನ್ನು ಪೊಲೀಸ್‌ ಠಾಣೆಗೆ ಕರೆದುಕೊಂಡು ಹೋಗಿ ಮನವೊಲಿಸಿದ್ದಾರೆ. ರಾಜ್‌ಕುಮಾರ್‌ ಕುಟುಂಬಕ್ಕೆ ನ್ಯಾಯ ಕೊಡಿಸಿ, ಆರೋಪಿಗಳಿಗೆ ಶಿಕ್ಷೆ ಕೊಡಿಸುವ ಭರವಸೆ ನೀಡಿ ಪೊಲೀಸರು ಅವರನ್ನು ಮನೆಗೆ ಕಳುಹಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಿರುಕುಳ ನೀಡಿದ ಸಾಲಗಾರರ ಬಗ್ಗೆ ಪೊಲೀಸರು ಈಗಾಗಲೇ ತನಿಖೆ ಆರಂಭಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Team India T20 World Cup: ಚಿಂಟುವಿನ ಆಸೆ ನೆರವೇರಿಸಲು ಟೀಮ್​ ಇಂಡಿಯಾ ಜತೆ ನ್ಯೂಯಾರ್ಕ್​ಗೆ ತೆರಳಿದ ತಾಯಿ

Team India T20 World Cup: 2007ರಲ್ಲಿ ನಡೆದಿದ್ದ ಚೊಚ್ಚಲ ಆವೃತ್ತಿಯಲ್ಲಿ ಕಪ್​ ಗೆದ್ದ ಬಳಿಕ ಇದುವರೆಗೆ ಭಾರತ(Team India) ಕಪ್​ ಗೆದಿಲ್ಲ. 17 ವರ್ಷಗಳ ಬಳಿಕ ಮತ್ತೊಂದು ಕಪ್​ ಗೆಲ್ಲುವ ಇರಾದೆಯೊಂದಿಗೆ ಆಟಗಾರರು ಕಣಕ್ಕಿಳಿಯಲಿದ್ದಾರೆ. ಇದೀಗ ಡ್ರೀಮ್​ ಇಲೆವೆನ್​ನ(Dream11) ಜಾಹೀರಾತೊಂದು ಭಾರೀ ಸದ್ದು ಮಾಡುತ್ತಿದೆ.

VISTARANEWS.COM


on

Team India Dream 11
Koo

ಮುಂಬಯಿ: ಟಿ20 ವಿಶ್ವಕಪ್​ ಟೂರ್ನಿ(T20 World Cup 2024) ಇನ್ನೆರಡು ದಿನಗಳಲ್ಲಿ ಕಾವೇರಲಿದೆ. ಭಾರತ(Team India T20 World Cup) ತನ್ನ ಮೊದಲ ಪಂದ್ಯವನ್ನು ಜೂನ್​ 5ರಂದು ಐರ್ಲೆಂಡ್​ ವಿರುದ್ಧ ಆಡುವ ಮೂಲಕ ಅಭಿಯಾನ ಆರಂಭಿಸಲಿದೆ. 2007ರಲ್ಲಿ ನಡೆದಿದ್ದ ಚೊಚ್ಚಲ ಆವೃತ್ತಿಯಲ್ಲಿ ಕಪ್​ ಗೆದ್ದ ಬಳಿಕ ಇದುವರೆಗೆ ಭಾರತ(Team India) ಕಪ್​ ಗೆದಿಲ್ಲ. 17 ವರ್ಷಗಳ ಬಳಿಕ ಮತ್ತೊಂದು ಕಪ್​ ಗೆಲ್ಲುವ ಇರಾದೆಯೊಂದಿಗೆ ಆಟಗಾರರು ಕಣಕ್ಕಿಳಿಯಲಿದ್ದಾರೆ. ಇದೀಗ ಡ್ರೀಮ್​ ಇಲೆವೆನ್​ನ(Dream11) ಜಾಹೀರಾತೊಂದು ಭಾರೀ ಸದ್ದು ಮಾಡುತ್ತಿದೆ.

ಭಾರತ ತಂಡ ಉತ್ತಮವಾಗಿ ಆಡು ಕಪ್​ ಗೆಲ್ಲಲಿ ಎನ್ನುವ ಪ್ರಧಾನ ಗುರಿಯೊಂದಿಗೆ ಡ್ರೀಮ್​ ಇಲೆವೆನ್​ ಜಾಹೀರಾತೊಂದನ್ನು ಬಿಡುಗಡೆ ಮಾಡಿದೆ. ಇದಲ್ಲಿ ಪುಟ್ಟ ಮಗು ಭಾರತ ತಂಡ ಜೆರ್ಸಿ ತೊಟ್ಟು ತನ್ನ ತಾಯಿಯ ಬಳಿ ನನ್ನ ತಂದೆ, ಸಹೋದರ ಭಾರತ ತಂಡ ವಿಶ್ವಕಪ್​ ಗೆದ್ದಿರುವುದನ್ನು ನೋಡಿದ್ದಾರೆ. ಆದರೆ ನಾನು ಯಾವಾಗ ಈ ಸುಂದರ ಕ್ಷಣವನ್ನು ನೋಡಲು ಸಾಧ್ಯ. ಈ ಬಾರಿ ಖಂಡಿತವಾಗಿಯೂ ನೋಡಲು ಸಾಧ್ಯವೇ? ಎಂದು ಪ್ರಶ್ನೆ ಮಾಡುತ್ತಾನೆ. ಈ ವಿಡಿಯೊವನ್ನು ತಾಯಿ ಟೀಮ್​ ಇಂಡಿಯಾದ ಆಟಗಾರರಿಗೆ ತೋರಿಸಿ ನೀವು ಏನು ಮಾಡುತ್ತೀರಾ ಎಂದು ನನಗೆ ತಿಳಿದಿಲ್ಲ ನನ್ನ ಮಗ ಚಿಂಟುವಿನ ಆಸೆಯನ್ನು ಈ ಬಾರಿ ಈಡೇರಿಸಲೇ ಬೇಕೆಂದು ಮಗುವಿನ ತಾಯಿ ಆಟಗಾರರಿಗೆ ಖಡಕ್​ ಎಚ್ಚರಿಕೆಯ ಸಂದೇಶ ನೀಡಿದ್ದಾರೆ.

ಇದನ್ನೂ ಓದಿ T20 World Cup 2007: ಚೊಚ್ಚಲ ಟಿ20 ವಿಶ್ವಕಪ್ ಭಾರತ-ಪಾಕ್​ ಫೈನಲ್​ ಪಂದ್ಯದ ಮೆಲುಕು ನೋಟ

ಈ ಬಾರಿಯ ಟೂರ್ನಿಗೆ ಸಿದ್ಧತೆ ಹೇಗಿದೆ ಎಂದು ಕೇಳಿದಾಗ ರೋಹಿತ್​ ನಾವು ಕಠಿಣ ತರಬೇತಿ ಪಡೆಯುತ್ತಿದ್ದೇವೆ ಎನ್ನುತ್ತಾರೆ. ಈ ವೇಳೆ ಚಿಂಟು ತಾಯಿ ನೋಡುತ್ತಿದ್ದೇನೆ ನಿಮ್ಮ ತಯಾರಿಯನ್ನು… ಹೀಗೆ ಅಭ್ಯಾಸ ನಡೆಸಿದರೆ ಕಪ್​ ಗೆಲ್ಲಲು ಸಾಧ್ಯವೇ ಎನ್ನುತ್ತಾರೆ. ಈ ವೇಳೆ ಉಪನಾಯಕ ಹಾರ್ದಿಕ್​ ಪಾಂಡ್ಯ ನೀವು ಆಶೀರ್ವಾದ ಮಾಡಿ ಸಾಕು ಉಳಿದದ್ದು ನಾವು ನೋಡಿಕೊಳ್ಳುತ್ತೇವೆ ಎನ್ನುತ್ತಾರೆ. ನಾವು ವಿಶ್ವದ ನಂ.1 ತಂಡ ಎಂದು ರೋಹಿತ್​ ಹೇಳುತ್ತಾರೆ. ಆಗ ಈ ತಾಯಿ ತಾನು ಈ ವಿಶ್ವದ ನಂ.1 ಮಮ್ಮಿ ಎಂದು ಹೇಳುತ್ತಾರೆ. ಈ ವೇಳೆ ಜಡೇಜಾ ಮಮ್ಮಿಜೀ ಇದು ಕ್ರಿಕೆಟ್​ ಎಂದು ಹೇಳುತ್ತಾರೆ. ಇದಕ್ಕೆ ಮಮ್ಮಿ ಹಾ… ಇದು ಕ್ರಿಕೆಟ್..​ ಬ್ಯಾಟ್​, ವಿಕೆಟ್​ ಮತ್ತು ಚೆಂಡು ತಂದು ಅಭ್ಯಾಸ ಆರಂಭಿಸಿ ಎಂದು ಹೇಳುವ ಮೂಲಕ ಕೋಚಿಂಗ್​ ಮಾಡುತ್ತಾರೆ.

ಈ ವಿಡಿಯೊವನ್ನು ಬಿಸಿಸಿಐ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡು, ವಿಶ್ವಕಪ್‌ಗಳು ಅಭಿಮಾನಿಗಳ ಶಕ್ತಿಯ ಜತೆಗೆ ಈ ಬಾರಿ ತಾಯಂದಿರ ಹರ್ಷೋದ್ಗಾರ ಜೋರಾಗಿರಲಿವೆ. ‘ಮಮ್ಮಿ ಕೆ ಮ್ಯಾಜಿಕ್ ಕೆ ಸಾಥ್'(ತಾಯಿಯ ವಿಶೇಷ ಬೆಂಬಲದೊಂದಿಗೆ) ಟೀಮ್​ ಇಂಡಿಯಾ ವಿಶ್ವಕಪ್​ ಗೆಲ್ಲಲು ಸಜ್ಜಾಗಿದೆ ಎಂದು ಬರೆದುಕೊಂಡಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

Continue Reading

ವೈರಲ್ ನ್ಯೂಸ್

Viral News: ಸರ ಕದ್ದು ಪರಾರಿಯಾಗಲು ಬೈಕ್‌ ಏರಿದವರಿಗೆ ಕಾದಿತ್ತು ಶಾಕ್‌; ವಿಡಿಯೊ ಇಲ್ಲಿದೆ

Viral News: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕತ್ತಿನಿಂದ ಸರ ಕಸಿದ ಕಳ್ಳರು ಬೈಕ್‌ನಲ್ಲಿ ಪರಾರಿಯಾಗಲು ಯತ್ನಿಸಿದ ಕಳ್ಳರಿಬ್ಬರಿಗೆ ಬಸ್‌ ಚಾಲಕನೊಬ್ಬ ತಕ್ಕ ಪಾಠ ಕಲಿಸಿದ ವಿಡಿಯೊ ಸದ್ಯ ಸೋಷಿಯಲ್‌ ಮೀಡಿಯಾದಲ್ಲಿ ಸದ್ದು ಮಡುತ್ತಿದೆ. ಬಸ್‌ ಚಾಲಕ ಬೈಕ್‌ಗೆ ಡಿಕ್ಕಿ ಹೊಡೆದು ಕಳ್ಳರಿಬ್ಬರನ್ನು ಬೀಳಿಸಿದ್ದು, ಆತನ ಸಮಯ ಪ್ರಜ್ಞೆಯನ್ನು ನೆಟ್ಟಿಗರು ಶ್ಲಾಘಿಸಿದ್ದಾರೆ.

VISTARANEWS.COM


on

Viral News
Koo

ಚಂಡೀಗಢ: ಸರ ಕಳ್ಳತನ-ಸಾಮಾನ್ಯವಾಗಿ ನಾವು ಆಗಾಗ ಕೇಳುವ ಕ್ರೈಂ ಸುದ್ದಿ ಇದು. ರಸ್ತೆಯಲ್ಲಿ ಓಡಾಡುವ ಮಹಿಳೆಯರು, ವೃದ್ಧೆಯರು, ಮಕ್ಕಳ ಕುತ್ತಿಗೆಯಿಂದ ಚಿನ್ನದ ಸರ ಕಸಿಯುವ ಚಾಲಾಕಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ನಗರ ಇರಲಿ, ಗ್ರಾಮಾಂತರ ಪ್ರದೇಶವೇ ಇರಲಿ ಈ ಕಳ್ಳರ ಕೃತ್ಯಕ್ಕೆ ಕಡಿವಾಣ ಹಾಕಲು ಸಾಧ್ಯವಾಗುತ್ತಿಲ್ಲ. ಅದರಲ್ಲಿಯೂ ದ್ವಿಚಕ್ರ ವಾಹನದಲ್ಲಿ ಬರುವ ಖದೀಮರಿಗೆ ಒಂಟಿ ಮಹಿಳೆಯರೇ ಟಾರ್ಗೆಟ್‌. ಕೆಲವೊಮ್ಮೆ ಈ ಕೃತ್ಯ ಸಂತ್ರಸ್ತರಿಗೆ ಮಾರಣಾಂತಿಕವಾಗಿಯೂ ಪರಿಣಮಿಸುತ್ತದೆ. ಈಗ ಇಷ್ಟೆಲ್ಲ ಪೀಠಿಕೆ ಹಾಕಲೂ ಕಾರಣವಿದೆ. ಸದ್ಯ ಇಂತಹ ಚಾಲಕಿ ಕಳ್ಳರ ಕೈ ಚಳಕ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆದರೆ ಫಾರ್‌ ಎ ಚೇಂಜ್‌ ಎಂಬಂತೆ ಈ ಘಟನೆಯ ಕೊನೆಯಲ್ಲಿ ಸಖತ್‌ ಟ್ವಿಸ್ಟ್‌ ಎದುರಾಗುತ್ತದೆ. ಅದು ಏನು ಎನ್ನುವುದನ್ನು ತಿಳಿಯಲು ಈ ವಿಡಿಯೊ ನೋಡಿ (Viral News).

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕತ್ತಿನಿಂದ ಸರ ಕಸಿದ ಕಳ್ಳರು ಬೈಕ್‌ನಲ್ಲಿ ಪರಾರಿಯಾಗಲು ಯತ್ನಿಸುತ್ತಾರೆ. ಇದನ್ನು ಗಮನಿಸಿದ ಬಸ್‌ ಡ್ರೈವರ್‌ ಎದುರಿನಿಂದ ಬಂದು ಬೈಕ್‌ಗೆ ಡಿಕ್ಕಿ ಹೊಡೆದು ಕಳ್ಳರಿಬ್ಬರನ್ನು ಬೀಳಿಸುತ್ತಾನೆ. ಅನಿರೀಕ್ಷಿತ ಆಘಾತದಿಂದ ಕಳ್ಳರು ತತ್ತರಿಸುತ್ತಾರೆ. ಸದ್ಯ ಈ ವಿಡಿಯೊ ವೈರಲ್‌ ಆಗಿದ್ದು, ಬಸ್‌ ಚಾಲಕನ ಸಮಯ ಪ್ರಜ್ಞೆಗೆ ನೆಟ್ಟಿಗರು ಶಹಬ್ಬಾಸ್‌ಗಿರಿ ನೀಡಿದ್ದಾರೆ.

ಘಟನೆಯ ವಿವರ

ನಡು ರಸ್ತೆಯಲ್ಲಿ ವ್ಯಕ್ತಿಯೊಬ್ಬ ಬೈಕ್‌ ನಿಲ್ಲಿಸಿಕೊಂಡಿರುವ ದೃಶ್ಯವನ್ನು ತೋರಿಸುವ ಮೂಲಕ ವಿಡಿಯೊ ಆರಂಭವಾಗುತ್ತಿದೆ. ಆತನ ʼಕ್ರೈಂ ಪಾರ್ಟನರ್‌ʼ ಮಹಿಳೆಯ ಕುತ್ತಿಗೆಯಿಂದ ಸರವನ್ನು ಎಗರಿಸುವ ದೃಶ್ಯ ಹಿನ್ನಲೆಯಲ್ಲಿ ಅಸ್ಪಷ್ಟವಾಗಿ ಕಾಣಿಸುತ್ತದೆ. ಬಳಿಕ ಆತ ಓಡಿ ಬಂದು ಬೈಕ್‌ ಏರುತ್ತಾನೆ. ಮೊದಲೇ ಬೈಕ್‌ ಸ್ಟಾರ್ಟ್‌ ಮಾಡಿ ಕಾದುಕೊಂಡಿದ್ದ ಇನ್ನೊಬ್ಬ ತಮ್ಮ ʼಮಿಷನ್‌ ಸಕ್ಸಸ್‌ʼ ಆದ ಖುಷಿಯಲ್ಲಿ ಬೈಕ್‌ ಓಡಿಸುತ್ತಾನೆ. ಆದರೆ ಅಷ್ಟರಲ್ಲಿ ʼರಿಯಲ್‌ ಹೀರೋʼನ ಎಂಟ್ರಿಯಾಗುತ್ತದೆ. ಇದನ್ನೆಲ್ಲ ಗಮನಿಸುತ್ತಿದ್ದ ಬಸ್‌ ಚಾಲಕ ಬೇಕಂತಲೇ ಮುಂದಕ್ಕೆ ಬಂದು ಬೈಕ್‌ಗೆ ಮೆಲ್ಲನೆ ಡಿಕ್ಕಿ ಹೊಡೆಯುತ್ತಾನೆ.

ಇದರಿಂದ ಕಳ್ಳರಿಬ್ಬರು ಬೈಕ್‌ ಸಮೇತ ರಸ್ತೆಗೆ ಬಿದ್ದು ಬಿಡುತ್ತಾರೆ. ಬಸ್‌ ಚಾಲಕ ಉದ್ದೇಶ ಪೂರ್ವಕವಾಗಿ ಡಿಕ್ಕಿ ಹೊಡೆದಿದ್ದರಿಂದ ಇಬ್ಬರಿಗೆ ಯಾವುದೇ ರೀತಿಯ ಗಾಯಗಳಾಗಿಲ್ಲ. ಬೈಕ್‌ ನೆಲಕ್ಕೆ ಉರುಳುತ್ತಿದ್ದಂತೆ ಇಬ್ಬರೂ ʼಬದುಕಿದರೆ ಬೇಡಿಯಾದರೂ ತಿನ್ನಬಹುದುʼ ಎನ್ನುವಂತೆ ಅಲ್ಲಿಂದ ಓಡಿ ಹೋಗುತ್ತಾರೆ. ಬಳಿಕ ಅವರು ಸಿಕ್ಕಿ ಬಿದ್ದಿದ್ದಾರಾ ಅಥವಾ ಪರಾರಿಯಾಗಿದ್ದಾರಾ ಎನ್ನುವುದು ತಿಳಿದು ಬಂದಿಲ್ಲ.

ಇದನ್ನೂ ಓದಿ: Viral News: 10 ಅಡಿಯ ದೈತ್ಯ ಮೊಸಳೆಯಿಂದ ಕಬ್ಬಿಣದ ಗೇಟು ಹಾರಲು ಯತ್ನ; ಮೈ ಜುಮ್ಮೆನ್ನಿಸುವ ವಿಡಿಯೊ ಇಲ್ಲಿದೆ

ಅದೇನೇ ಇರಲಿ ಸದ್ಯ ಬಸ್‌ ಚಾಲಕನ ಸಮಯ ಪ್ರಜ್ಞೆಯನ್ನು ನೆಟ್ಟಿಗರು ಕೊಂಡಾಡುತ್ತಿದ್ದಾರೆ. ಆತನೇ ನಿಜವಾದ ಹೀರೋ ಎಂದೆಲ್ಲ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಖದೀಮರಿಗೆ ತಕ್ಕ ಪಾಠ ಕಲಿಸಲು ಇಂತಹ ಧೈರ್ಯವಂತರ ಅಗತ್ಯ ವಿದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ಕಳ್ಳರ ಅಹಂಕಾರಕ್ಕೆ ತಕ್ಕ ಶಾಸ್ತಿಯಾಗಿದೆ. ಒಂದೊಳ್ಳೆ ಆ್ಯಕ್ಷನ್‌ ಸಿನಿಮಾ ನೋಡಿದ ಅನುಭವವಾಯಿತು ಎಂದು ಇನ್ನು ಕೆಲವರು ಕಮೆಂಟ್‌ ಮಾಡಿದ್ದಾರೆ. ಒಟ್ಟಿನಲ್ಲಿ ಈ ಘಟನೆ ಸರ ಕಳ್ಳರಿಗೆ ನಡುಕ ಹುಟ್ಟಿಸಿದ್ದು ಸುಳ್ಳಲ್ಲ.

Continue Reading

ಕ್ರೀಡೆ

Viral Video: ಜಡಿ ಮಳೆಗೆ ಒದ್ದೆಯಾಗುತ್ತಲೇ ಓಡೋಡಿ ಬಂದು ಕಾರು ಹತ್ತಿದ ರೋಹಿತ್​, ದ್ರಾವಿಡ್​

Viral Video: ಬುಧವಾರ ಟೀಮ್​ ಇಂಡಿಯಾದ ಆಟಗಾರರೆಲ್ಲ ರನ್ನಿಂಗ್​ ಮತ್ತು ಫುಟ್ಬಾಲ್​ ಆಡುವ ಮೂಲಕ ಫಿಟ್​ನೆಸ್​ ತರಬೇತಿ ಪಡೆದಿದ್ದರು. ಇಂದಿನಿಂದ(ಗುರುವಾರ) ಬ್ಯಾಟಿಂಗ್​ ಮತ್ತು ಬೌಲಿಂಗ್​ ಅಭ್ಯಾಸ ನಡೆಸಲಿದ್ದಾರೆ.

VISTARANEWS.COM


on

Viral Video
Koo

ನ್ಯೂಯಾರ್ಕ್​: ಟಿ20 ವಿಶ್ವಕಪ್​(T20 World Cup 2024) ಆಡುವ ಸಲುವಾಗಿ ನ್ಯೂಯಾರ್ಕ್​ನಲ್ಲಿರುವ(New York) ಟೀಮ್​ ಇಂಡಿಯಾದ ನಾಯಕ ರೋಹಿತ್​ ಶರ್ಮ(Rohit Sharma) ಮತ್ತು ಕೋಚ್​ ರಾಹುಲ್​ ದ್ರಾವಿಡ್(Rahul Dravid)​ ಅವರು ಜಡಿ ಮಳೆಯಲ್ಲಿಯೇ ಒದ್ದೆಯಾಗುತ್ತಾ ಓಡಿ ಹೋಗಿ ಕಾರು ಹತ್ತಿದ ವಿಡಿಯೊ ವೈರಲ್​(Viral Video) ಆಗಿದೆ. ರೆಸ್ಟೋರೆಂಟ್​ನಲ್ಲಿ ಡಿನ್ನರ್​ ಮುಗಿಸಿ ಹೊರ ಬರುವ ವೇಳೆ ಭಾರೀ ಮಳೆ ಸುರಿದಿದೆ. ಮಳೆಯನ್ನು ಕೂಡ ಲೆಕ್ಕಿಸದೆ ರೋಹಿತ್​ ಓಡಿ ಹೋಗಿ ಕಾರು ಹತ್ತಿದ್ದಾರೆ. ಇದರ ಹಿಂದೆಯೇ ದ್ರಾವಿಡ್​ ಕೂಡ ಓಡೋಡಿ ಬಂದು ಕಾರು ಹತ್ತಿದರು.

ಬುಧವಾರ ಟೀಮ್​ ಇಂಡಿಯಾದ ಆಟಗಾರರೆಲ್ಲ ರನ್ನಿಂಗ್​ ಮತ್ತು ಫುಟ್ಬಾಲ್​ ಆಡುವ ಮೂಲಕ ಫಿಟ್​ನೆಸ್​ ತರಬೇತಿ ಪಡೆದಿದ್ದರು. ಇಂದಿನಿಂದ(ಗುರುವಾರ) ಬ್ಯಾಟಿಂಗ್​ ಮತ್ತು ಬೌಲಿಂಗ್​ ಅಭ್ಯಾಸ ನಡೆಸಲಿದ್ದಾರೆ. ಬಿಡುವಿನ ವೇಳೆ ಆಟಗಾರರು ನ್ಯೂಯಾರ್ಕ್​ ಸಿಟಿಗೆ ಒಂದು ರೌಂಡ್​ ಹಾಕಿದ್ದಾರೆ. ಇಲ್ಲಿನ ಕೆಲ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ ಫೋಟೊಗಳನ್ನು ಆಟಗಾರರು ತಮ್ಮ ಸಾಮಾಜಿಕ ಜಾಲತಾಣ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.

ಭಾರತ ತನ್ನ ಮೊದಲ ಲೀಗ್​ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ. ಭಾರತೀಯ ಕ್ರಿಕೆಟ್​ ಅಭಿಮಾನಿಗಳು ನೂತನ ಜೆರ್ಸಿ ತೊಟ್ಟು ತಂಡ ಕಪ್​ ಗೆಲ್ಲಲಿ ಎಂದು ಹಾರೈಸಿದ್ದಾರೆ.


ವಿರಾಟ್​ ಕೊಹ್ಲಿ ಮತ್ತು ಸಂಜು ಸ್ಯಾಮ್ಸನ್​ ತಮ್ಮ ವೈಯಕ್ತಿಕ ಕಾರಣಗಳಿಂದ ತಂಡ ಸೇರುವುದು ಕೊಂಚ ತಡವಾಗಲಿದೆ ಎಂದು ಬಿಸಿಸಿಐ ಈಗಾಗಲೇ ತಿಳಿಸಿದೆ. ಕೊಹ್ಲಿ ಬಾಂಗ್ಲಾದೇಶ ವಿರುದ್ಧದ ಏಕೈಕ ಅಭ್ಯಾಸ ಪಂದ್ಯಕ್ಕೂ ಅಲಭ್ಯರಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕೊಹ್ಲಿ ಮೇ 30ಕ್ಕೆ ಚಾರ್ಟರ್​ ವಿಮಾನದಲ್ಲಿ ಪ್ರಯಾಣಿಸಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ನಲ್ಲಿ ಎಷ್ಟು ಬೌಲರ್​ಗಳು ಹ್ಯಾಟ್ರಿಕ್​ ವಿಕೆಟ್​ ಕಿತ್ತ ಸಾಧನೆ ಮಾಡಿದ್ದಾರೆ?

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

ಭಾರತದ ಪಂದ್ಯಗಳು

ದಿನಾಂಕಎದುರಾಳಿಸ್ಥಳ
ಜೂನ್​ 5ಐರ್ಲೆಂಡ್​ನ್ಯೂಯಾರ್ಕ್​
ಜೂನ್​ 9ಪಾಕಿಸ್ತಾನನ್ಯೂಯಾರ್ಕ್​
ಜೂನ್​ 12ಅಮೆರಿಕನ್ಯೂಯಾರ್ಕ್
ಜೂನ್​ 15ಕೆನಡಾಫ್ಲೋರಿಡಾ
Continue Reading

ವೈರಲ್ ನ್ಯೂಸ್

Viral Video: ಬಾಯ್‌ಫ್ರೆಂಡನ್ನು ಹೆದರಿಸಲು ರೈಲ್ವೇ ಟ್ರ್ಯಾಕ್‌ಗೆ ಇಳಿದಳು.. ಆಮೇಲೆ ಆಗಿದ್ದೇ ಬೇರೆ! ಶಾಕಿಂಗ್‌ ವಿಡಿಯೋ ನೋಡಿ

Viral Video: ಹಳಿಯಲ್ಲಿ ನಿಂತು ರಾಣಿ ಕಿಶೋರ್‌ ಜೊತೆ ವಾಗ್ವಾದ ನಡೆಸುತ್ತಾಳೆ. ಆಗ ಅದೇ ಹಳಿಯಲ್ಲಿ ರೈಲು ಬಂದಿದ್ದು, ರೈಲನ್ನು ನೋಡುತ್ತಿದ್ದಂತೆ ರಾಣಿ ಫ್ಲ್ಯಾಟ್‌ಫಾರ್ಮ್‌ಗೆ ಹತ್ತಲ್ಲು ಓಡಿ ಬಂದಿದ್ದಾಳೆ. ಆಗ ರೈಲಿನಡಿಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಳು. ಗಾಯಗೊಂಡಿದ್ದ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಆಕೆ ಕೊನೆಯುಸಿರೆಳೆದಿದ್ದಾಳೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಎಲ್ಲೆಡೆ ವೈರಲ್‌ ಆಗಿದೆ.

VISTARANEWS.COM


on

Viral Video
Koo

ಆಗ್ರಾ: ಸಣ್ಣ ಪುಟ್ಟ ಕೋಪ, ಜಗಳದಿಂದ ಮಾಡು ತಪ್ಪು ಎಂಥಾ ದೊಡ್ಡ ಅನಾಹುತವನ್ನು ತಂದೊಡ್ಡುತ್ತದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಬಾಯ್‌ಫ್ರೆಂಡ್‌ ಜೊತೆ ಜಗಳ ಮಾಡಿಕೊಂಡು ಸಾಯುತ್ತೇನೆ ಎಂದು ಹೆಸರಿಸಲು ರೈಲ್ವೇ ಹಳಿ(Railway Track)ಗಿಳಿದ್ದಿದ್ದ ಮಹಿಳೆಯೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾಳೆ. ಈ ಭೀಕರ ವಿಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ ಆಗಿದ್ದು, ಸೋಶಿಯಲ್‌ ಮೀಡಿಯಾ(Social Media)ದಲ್ಲಿ ವೈರಲ್‌(Viral Video) ಆಗುತ್ತಿದೆ.

ಘಟನೆ ವಿವರ:

ಆಗ್ರಾದ ರಾಜಾ ಕಿ ಮಂಡಿ ಸ್ಟೇಷನ್‌ನಲ್ಲಿ ಈ ಘಟನೆ ನಡೆದಿದ್ದು, ಮೃತ ದುರ್ದೈವಿಯನ್ನು38 ವರ್ಷದ ರಾಣಿ ಎಂದು ಗುರುತಿಸಲಾಗಿದೆ. ಸ್ಟೇಷನ್‌ನಲ್ಲಿ ಕುಳಿತಿದ್ದ ರಾಣಿ ಮತ್ತು ಆಕೆಯ ಲಿವಿಂಗ್‌ ಪಾರ್ಟನರ್‌ ಕಿಶೋರ್‌ ನಡುವೆ ಯಾವುದೋ ವಿಚಾರಕ್ಕೆ ಜಗಳ ನಡೆಯುತ್ತದೆ. ಮಾತಿಗೆ ಮಾತು ಬೆಳೆದು ಜಗಳ ತಾರಕಕ್ಕೇರುತ್ತದೆ. ಕೊನೆಗೆ ಕೋಪದ ಭರದಲ್ಲಿ ರೈಲ್ವೇ ಹಳಿಗೆ ಹಾರಿದ ಆಕೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕಿಶೋರ್‌ಗೆ ಬೆದರಿಕೆಯೊಡ್ಡಿದ್ದಾಳೆ. ರಾಣಿ ಸುಮ್ಮನೆ ಹೆದರಿಸಲು ಈ ರೀತಿ ಮಾಡುತ್ತಿರುವುದು ಎಂದು ಆತನೂ ಕುಳಿತ ಜಾಗದಿಂದ ಕದಡಲಿಲ್ಲ.

ಹಳಿಯಲ್ಲಿ ನಿಂತು ರಾಣಿ ಕಿಶೋರ್‌ ಜೊತೆ ವಾಗ್ವಾದ ನಡೆಸುತ್ತಾಳೆ. ಆಗ ಅದೇ ಹಳಿಯಲ್ಲಿ ರೈಲು ಬಂದಿದ್ದು, ರೈಲನ್ನು ನೋಡುತ್ತಿದ್ದಂತೆ ರಾಣಿ ಫ್ಲ್ಯಾಟ್‌ಫಾರ್ಮ್‌ಗೆ ಹತ್ತಲ್ಲು ಓಡಿ ಬಂದಿದ್ದಾಳೆ. ಆಗ ರೈಲಿನಡಿಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಳು. ಗಾಯಗೊಂಡಿದ್ದ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಆಕೆ ಕೊನೆಯುಸಿರೆಳೆದಿದ್ದಾಳೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಎಲ್ಲೆಡೆ ವೈರಲ್‌ ಆಗಿದೆ. ಇನ್ನು ರಾಣಿ ಮತ್ತು ಕಿಶೋರ್‌ ಲಿವಿಂಗ್‌ ರಿಲೇಶನ್‌ಶಿಪ್‌ನಲ್ಲಿದ್ದು, ಲೋಹಾಮಂಡಿ ಪ್ರದೇಶದಲ್ಲಿ ವಾಸವಾಗಿದ್ದರು. ಕಿಶೋರ್‌ಗೆ ಕುಡಿಯುವ ಚಟ ಇರುವ ಕಾರಣ ಇದೇ ವಿಚಾರಕ್ಕೆ ಇಬ್ಬರ ನಡುವೆ ಆಗಾಗ ಜಗಳ ಆಗುತ್ತಿರುತ್ತಿತ್ತು. ಸೋಮವಾರವೂ ಇದೇ ರೀತಿ ಜಗಳ ಆಗಿತ್ತು ಎನ್ನಲಾಗಿದೆ.

ಇದನ್ನೂ ಓದಿ: Firecracker Explosion: ಪುರಿ ಜಗನ್ನಾಥ ದೇಗುಲದಲ್ಲಿ ಅಗ್ನಿ ದುರಂತ; 15 ಮಂದಿಗೆ ಗಾಯ

ಇನ್ನು ಕಿಶೋರ್‌ನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. ಆಕೆಯ ಮಾಜಿ ಪತಿ ಸಾವಿನ ಬಳಿಕ ರಾಣಿ ಬಹಳ ನೊಂದಿದ್ದಳು. ಅದೂ ಅಲ್ಲದೇ ಆಕೆ ಮಾನಸಿಕ ಖಿನ್ನತೆಗೊಳಗಾಗಿದ್ದಳು ಎಂಬುದು ವಿಚಾರಣೆ ವೇಳೆ ಬಯಲಾಗಿದೆ.

Continue Reading
Advertisement
Chhota Rajan
ಕ್ರೈಂ19 seconds ago

Chhota Rajan: ಹೊಟೇಲ್‌ ಉದ್ಯಮಿ ಹತ್ಯೆ ಕೇಸ್‌; ಗ್ಯಾಂಗ್‌ಸ್ಟರ್‌ ಛೋಟಾ ರಾಜನ್‌ಗೆ ಜೀವಾವಧಿ ಶಿಕ್ಷೆ

Fake CBI Officer
ಬೆಂಗಳೂರು6 mins ago

Fake CBI Officer : ಸಿಬಿಐ ಪೊಲೀಸರೆಂದು ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡಿದ ನಾಲ್ವರು ಅರೆಸ್ಟ್‌

Prajwal Devaraj death news take leagal action by family
ಸ್ಯಾಂಡಲ್ ವುಡ್22 mins ago

Prajwal Devaraj: ಪ್ರಜ್ವಲ್​ ದೇವರಾಜ್ ಇನ್ನಿಲ್ಲ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳು; ಕುಟುಂಬಸ್ಥರ ಆಕ್ರೋಶ!

Prajwal Revanna Case
ಕ್ರೈಂ26 mins ago

Prajwal Revanna Case: ಅಶ್ಲೀಲ ವಿಡಿಯೋ ಹಂಚಿದ ಆರೋಪಿಗಳಾದ ಚೇತನ್‌, ಲಿಖಿತ್‌ಗೆ ಜಾಮೀನು

Agnikul Cosmos
ತಂತ್ರಜ್ಞಾನ42 mins ago

Agnikul Cosmos: ಯಶಸ್ವಿಯಾಗಿ ರಾಕೆಟ್ ಉಡಾವಣೆ ಮಾಡಿದ ಸ್ಟಾರ್ಟ್ ಅಪ್ ಕಂಪನಿ ಅಗ್ನಿಕುಲ್ ಕಾಸ್ಮೋಸ್; ಮೋದಿ ಅಭಿನಂದನೆ

PM Modi
Lok Sabha Election 202446 mins ago

PM Modi: ಕನ್ಯಾಕುಮಾರಿಯಲ್ಲಿ ಪ್ರಧಾನಿ ಧ್ಯಾನ; ಪ್ರಧಾನಿ ಈ ಸ್ಥಳವನ್ನೇ ಆಯ್ಕೆ ಮಾಡಲು ಏನು ಕಾರಣ?

Love Case in vijayapura
ವಿಜಯಪುರ55 mins ago

Love Case : ಪ್ರೇಮಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಕೇಸ್‌; ಯುವತಿ ತಂದೆ ಅರೆಸ್ಟ್‌

Kantara Movie Mollywood actor enters
ಸಿನಿಮಾ59 mins ago

Kantara Movie: `ಕಾಂತಾರ ಚಾಪ್ಟರ್‌ 1‌’ ಸಿನಿಮಾಗೆ ಖ್ಯಾತ ಮಾಲಿವುಡ್‌ ನಟ ಎಂಟ್ರಿ!

Singapore Open
ಕ್ರೀಡೆ1 hour ago

Singapore Open: ದ್ವಿತೀಯ ಸುತ್ತಿಗೆ ಆಟ ಮುಗಿಸಿದ ಭಾರತದ ಪಿ.ವಿ.ಸಿಂಧು

prajwalrevanna case hassan protest
ಕ್ರೈಂ1 hour ago

Prajwal Revanna Case: ಪ್ರಜ್ವಲ್‌ ರೇವಣ್ಣ ಬಂಧಿಸಲು ಆಗ್ರಹಿಸಿ ಹಾಸನದಲ್ಲಿ ಬೃಹತ್‌ ಪ್ರತಿಭಟನೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 hours ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು2 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ3 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ4 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌