Viral News: ವ್ಯಾಕ್!‌ ಸಮೋಸದೊಳಗೆ ಕಾಂಡೋಮ್‌, ಗುಟ್ಕಾ, ಕಲ್ಲು! - Vistara News

ವೈರಲ್ ನ್ಯೂಸ್

Viral News: ವ್ಯಾಕ್!‌ ಸಮೋಸದೊಳಗೆ ಕಾಂಡೋಮ್‌, ಗುಟ್ಕಾ, ಕಲ್ಲು!

Viral News: ಬಂಧಿತರಲ್ಲಿ ಸಮೋಸಾಗಳನ್ನು ಸರಬರಾಜು ಮಾಡಲು ಒಪ್ಪಂದ ಮಾಡಿಕೊಳ್ಳಲಾದ ಉಪಗುತ್ತಿಗೆ ಸಂಸ್ಥೆಯ ಇಬ್ಬರು ಕಾರ್ಮಿಕರು, ಮತ್ತು ಈ ಹಿಂದೆ ಸಮೋಸಾ ಪೂರೈಸುತ್ತಿದ್ದ ಸಂಸ್ಥೆಯ ಮತ್ತೊಂದು ಸಂಸ್ಥೆಯ ಮೂವರು ಪಾಲುದಾರರೂ ಸೇರಿದ್ದಾರೆ. ಹೊಸ ಸಂಸ್ಥೆಯ ಹೆಸರು ಕೆಡಿಸುವುದಕ್ಕಾಗಿಯೇ ಹೀಗೆ ಮಾಡಲಾಗಿತ್ತು ಎಂದು ತಿಳಿದುಬಂದಿದೆ.

VISTARANEWS.COM


on

samosa viral news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪುಣೆ: ಆನಂದದಿಂದ ಸಮೋಸಾ (Samosa) ತಿನ್ನಲೆಂದು ಬಾಯಿ ಹಾಕಿದಾಗ ಅದರೊಳಗೆ ಕಾಂಡೋಮ್‌ (Condom), ಗುಟ್ಕಾ (Gutka) ಅಥವಾ ಕಲ್ಲು ಸಿಕ್ಕಿದರೆ ನಿಮ್ಮ ಪರಿಸ್ಥಿತಿ ಏನಾಗಬೇಡ! ಪುಣೆಯಲ್ಲಿ (Pune) ಇಂಥದೊಂದು ಘಟನೆ ನಡೆದಿದೆ. ಇಲ್ಲಿನ ಪಿಂಪರಿ ಚಿಂಚ್‌ವಾಡ್ ಮೂಲದ ಪ್ರಮುಖ ಆಟೋಮೊಬೈಲ್ (Automobile) ಕಂಪನಿಗೆ ಸರಬರಾಜು ಮಾಡಿದ ಸಮೋಸಾಗಳಲ್ಲಿ ಕಾಂಡೋಮ್, ಗುಟ್ಕಾ ಮತ್ತು ಕಲ್ಲುಗಳು ಪತ್ತೆಯಾಗಿವೆ. ಇದಾದ ನಂತರ ಐದು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಈ ಸುದ್ದಿ ವೈರಲ್‌ (Viral News) ಆಗಿದೆ.

ಆರೋಪಿಗಳನ್ನು ರಹೀಮ್ ಶೇಖ್, ಅಜರ್ ಶೇಖ್, ಮಝರ್ ಶೇಖ್, ಫಿರೋಜ್ ಶೇಖ್ ಮತ್ತು ವಿಕ್ಕಿ ಶೇಖ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಬಂಧಿತರಲ್ಲಿ ಸಮೋಸಾಗಳನ್ನು ಸರಬರಾಜು ಮಾಡಲು ಒಪ್ಪಂದ ಮಾಡಿಕೊಳ್ಳಲಾದ ಉಪಗುತ್ತಿಗೆ ಸಂಸ್ಥೆಯ ಇಬ್ಬರು ಕಾರ್ಮಿಕರು, ಮತ್ತು ಈ ಹಿಂದೆ ಸಮೋಸಾ ಪೂರೈಸುತ್ತಿದ್ದ ಸಂಸ್ಥೆಯ ಮತ್ತೊಂದು ಸಂಸ್ಥೆಯ ಮೂವರು ಪಾಲುದಾರರೂ ಸೇರಿದ್ದಾರೆ. ಹೊಸ ಸಂಸ್ಥೆಯ ಹೆಸರು ಕೆಡಿಸುವುದಕ್ಕಾಗಿಯೇ ಹೀಗೆ ಮಾಡಲಾಗಿತ್ತು ಎಂದು ತಿಳಿದುಬಂದಿದೆ.

ಪೊಲೀಸರ ಪ್ರಕಾರ, ಆಟೋಮೊಬೈಲ್ ಸಂಸ್ಥೆಯ ಕ್ಯಾಂಟೀನ್‌ಗೆ ತಿಂಡಿಗಳನ್ನು ಒದಗಿಸುವ ಜವಾಬ್ದಾರಿಯನ್ನು ಕ್ಯಾಟಲಿಸ್ಟ್ ಸರ್ವೀಸ್ ಸೊಲ್ಯೂಷನ್ಸ್ ಪ್ರೈ. ಲಿಮಿಟೆಡ್ ಹೊಂದಿತ್ತು. ಈ ಸಂಸ್ಥೆಯು ಮನೋಹರ್ ಎಂಟರ್‌ಪ್ರೈಸ್ ಹೆಸರಿನ ಮತ್ತೊಂದು ಉಪಗುತ್ತಿಗೆ ಸಂಸ್ಥೆಗೆ ಸಮೋಸಾ ನೀಡುವ ಉಪಗುತ್ತಿಗೆಯನ್ನು ನೀಡಿತ್ತು.

ಇದಕ್ಕೂ ಮುನ್ನ ಸಮೋಸಾ ಒದಗಿಸುವ ಗುತ್ತಿಗೆಯನ್ನು ಪುಣೆ ಮೂಲದ ಎಸ್‌ಆರ್‌ಎ ಎಂಟರ್‌ಪ್ರೈಸಸ್‌ ಹೊಂದಿತ್ತು. ಆದರೆ, ತಿಂಡಿಯಲ್ಲಿ ಕಲಬೆರಕೆ ಮಾಡಿದ್ದಕ್ಕಾಗಿ ಈ ಸಂಸ್ಥೆಯ ಜೊತೆಗಿನ ಒಪ್ಪಂದ ರದ್ದುಪಡಿಸಲಾಗಿತ್ತು. ಇವರು ಒದಗಿಸಿದ ಸಮೋಸಾಗಳನ್ನು ಫಸ್ಟ್‌ ಏಯ್ಡ್‌ ಬ್ಯಾಂಡೇಜ್‌ಗಳು ಕಂಡುಬಂದ ನಂತರ ಒಪ್ಪಂದ ರದ್ದುಪಡಿಸಲಾಗಿತ್ತು.

ಇದರಿಂದ ರೊಚ್ಚಿಗೆದ್ದ ಎಸ್‌ಆರ್‌ಎ ಎಂಟರ್‌ಪ್ರೈಸಸ್‌ನ ಮೂವರು ಪಾಲುದಾರರಾದ ರಹೀಮ್ ಶೇಖ್, ಅಜರ್ ಶೇಖ್, ಮಝರ್ ಶೇಖ್ ಎಂಬವರು ಒಳಸಂಚು ಹೂಡಿ, ತನ್ನ ಇಬ್ಬರು ಉದ್ಯೋಗಿಗಳಾದ ಫಿರೋಜ್ ಶೇಖ್ ಮತ್ತು ವಿಕ್ಕಿ ಶೇಖ್ ಎಂಬವರನ್ನು ಮಹೋಹರ್‌ ಎಂಟರ್‌ಪ್ರೈಸ್‌ಗೆ ಕಳಿಸಿದ್ದರು. ಇವರು ಸಮೋಸಾಗಳಲ್ಲಿ ಕಾಂಡೋಮ್, ಗುಟ್ಕಾ ಮತ್ತು ಕಲ್ಲುಗಳನ್ನು ತುಂಬಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ವಿಷದ ಮೂಲಕ ಹಾನಿ ಮಾಡುವ ಸಂಚು, ಕ್ರಿಮಿನಲ್ ಪಿತೂರಿ, ಕಲಬೆರಕೆ ಸೇರಿದಂತೆ ಕಾನೂನಿನ ಹಲವಾರು ಸೆಕ್ಷನ್‌ಗಳ ಅಡಿಯಲ್ಲಿ ಇವರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Viral News: ರಿಕ್ಷಾದ ಟಾಪ್‌ಗೆ ಹತ್ತಿ ಸ್ಟೆಪ್‌ ಹಾಕಿದ ಯುವಕ; ವಿಡಿಯೊ ಕೊನೆಯಲ್ಲಿರುವ ರೋಚಕ ಟ್ವಿಸ್ಟ್‌ ಮಿಸ್‌ ಮಾಡದೆ ನೋಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Cubbon park: ಕಬ್ಬನ್‌ ಪಾರ್ಕ್‌ನಲ್ಲಿ ಯುವಕನನ್ನು ಅಟ್ಟಾಡಿಸಿ ಚಪ್ಪಲಿಯಿಂದ ಹೊಡೆದ ಮಹಿಳೆಯರು!

Cubbon park : ಪಾರ್ಕಿಂಗ್‌ ಜಾಗದಲ್ಲಿ ಕಾರು ತೆಗೆಯುವ ವಿಚಾರಕ್ಕೆ ಶುರುವಾದ ಗಲಾಟೆಯು ವಿಕೋಪಕ್ಕೆ ತಿರುಗಿದೆ. ಕಾರಲ್ಲಿದ್ದ ಮಹಿಳೆಯರಿಬ್ಬರು ಯುವಕನನ್ನು ಅಟ್ಟಾಡಿಸಿಕೊಂಡು ಚಪ್ಪಲಿಯಿಂದ ಹೊಡೆದು ಅವಮಾನಿಸಿದ್ದಾರೆ. ಇತ್ತ ಮಹಿಳೆಯರ ಗೂಂಡಾ ವರ್ತನೆಗೆ ಸಾರ್ವಜನಿಕರು ಆಕ್ರೋಶ (Assault case) ಹೊರಹಾಕಿದ್ದಾರೆ.

VISTARANEWS.COM


on

By

Assault case Cubbon park
Koo

ಬೆಂಗಳೂರು: ಸಣ್ಣದಾಗಿ ಶುರುವಾದ ಜಗಳವು ಹೊಡಿಬಡಿ ಹಂತಕ್ಕೆ ತಲುಪಿತ್ತು. ಮಹಿಳೆಯರಿಬ್ಬರು ನಡುರಸ್ತೆಯಲ್ಲೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿರುವ (Assault Case) ಘಟನೆ ಬೆಂಗಳೂರಲ್ಲಿ ನಡೆದಿದೆ. ಮಹಿಳೆಯರ ವಿರುದ್ಧ ಅಲ್ಲಿದ್ದ ಪುರುಷರು ತಿರುಗಿ ಬಿದ್ದಿದ್ದರು. ಮೂರು ದಿನಗಳ ಹಿಂದೆ ಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿ (cubbon park) ಈ ಘಟನೆ ನಡೆದಿದೆ.

ಕಬ್ಬನ್‌ ಪಾರ್ಕ್‌ನಲ್ಲಿ ಯುವಕನೊಬ್ಬ ಪಾರ್ಕಿಂಗ್‌ ಜಾಗದಿಂದ ಕಾರು ತೆಗೆಯುತ್ತಿದ್ದ. ಇದೇ ವೇಳೆ ಮಹಿಳೆಯರಿಬ್ಬರು ಇದ್ದ ಕಾರು ಮುಂದಿನಿಂದ ಬಂದಿದೆ. ಈ ವಿಚಾರಕ್ಕೆ ಯುವಕನೊಂದಿಗೆ ಮಹಿಳೆಯರು ವಾಗ್ವಾದಕ್ಕೆ ಇಳಿದಿದ್ದರು. ಮಾತು ವಿಕೋಪಕ್ಕೆ ತಿರುಗಿದ್ದು, ಯುವಕನ ತಪ್ಪಿಲ್ಲದಿದ್ದರು ಮಹಿಳೆಯರಿಬ್ಬರು ಅಟ್ಟಾಡಿಸಿಕೊಂಡು ಹೊಡೆದು ಹಲ್ಲೆ ಮಾಡಿದ್ದಾರೆ.

ಮಾತ್ರವಲ್ಲದೆ ಮಹಿಳೆಯರಿಬ್ಬರು ಯುವಕನಿಗೆ ಚಪ್ಪಲಿಯಿಂದ ಹೊಡೆದು ಅವಮಾನ ಮಾಡಿದ್ದಾರೆ. ಇತ್ತ ಮಹಿಳೆಯರ ವರ್ತನೆಗೆ ಅಲ್ಲಿದ್ದವರು ಆಕ್ರೋಶ ಹೊರಹಾಕಿದರು. ಮಹಿಳೆಯರ ಗೂಂಡಾ ವರ್ತನೆಗೆ ಸಿಟ್ಟಾಗಿ ನಂತರ ಯುವಕನ ಪರವಾಗಿ ನಿಂತಿದ್ದಾರೆ. ಮಹಿಳೆಯರ ಹಾರಾಟ ಹಾಗೂ ಚಿರಾಟಕ್ಕೆ ಸಾರ್ವಜನಿಕರು ವಾಪಾಸ್‌ ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: Narendra Modi: ಗುರುದ್ವಾರದಲ್ಲಿ ಅಡುಗೆ ಮಾಡಿ ಭಕ್ತರಿಗೆ ಬಡಿಸಿದ ಪ್ರಧಾನಿ; ವಿಡಿಯೋ ವೈರಲ್‌

ಸಾಲಿನಲ್ಲಿ ಬನ್ನಿ ಅಂದಿದ್ದೇ ತಪ್ಪಾಯ್ತಾ? ಮತದಾರನಿಗೆ MLA ಕಪಾಳಮೋಕ್ಷ

ಹೈದರಾಬಾದ್‌: ಕೆಲವೊಮ್ಮೆ ಜನಪ್ರತಿನಿಧಿ(Politicians)ಗಳು ತಾವು ಜನಸೇವಕರು ಎಂಬುದನ್ನೇ ಮರೆತು ದರ್ಪದಿಂದ ವರ್ತಿಸುವ ಘಟನೆ ಆಗಾಗ ಕಣ್ಣ ಮುಂದೆ ಬರುತ್ತಲೇ ಇರುತ್ತವೆ. ಇದೀಗ ಅಂತಹದ್ದೇ ಒಂದು ಘಟನೆ ಆಂಧ್ರ ಪ್ರದೇಶದಲ್ಲಿ(Andra Pradesh) ನಡೆದಿದ್ದು, ಮತದಾರನ ಮೇಲೆ ಶಾಸಕ(Andra Pradesh MLA)ನೋರ್ವ ದರ್ಪ ಮೆರೆದಿದ್ದು, ಕಪಾಳಮೋಕ್ಷ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ (Viral Video) ಆಗುತ್ತಿದ್ದು, ಹಲವರಿಂದ ಖಂಡನೆ ವ್ಯಕ್ತವಾಗಿದೆ.

ಏನಿದು ಘಟನೆ?

ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ತೆನಾಲಿ ಮತಗಟ್ಟೆಯೊಂದರಲ್ಲಿ ಈ ಘಟನೆ ನಡೆದಿದೆ. ಮತ ಚಾಲಾಯಿಸಲೆಂದು ಸಾಲಿನಲ್ಲಿ ನಿಂತಿದ್ದ ಮತದಾರನಿಗೆ ಜಗನ್‌ ಮೋಹನ್‌ ರೆಡ್ಡಿ ನೇತೃತ್ವದ ವೈಎಸ್‌ಆರ್‌ ಕಾಂಗ್ರೆಸ್‌ ಅಭ್ಯರ್ಥಿ, ತೆನಾಲಿ ಕ್ಷೇತ್ರದ ಶಾಸಕ ಅನ್ನಬತುನಿ ಶಿವಕುಮಾರ್ ಎಂಬುವವರು ಕಪಾಳಮೋಕ್ಷ ಮಾಡಿದ್ದಾನೆ. ಶಾಸಕ ಶಿವಕುಮಾರ್ ಇಂದು ಮತದಾನಕ್ಕೆಂದು ಮತಗಟ್ಟೆಗೆ ಆಗಮಿಸಿದ್ದರು. ಈ ವೇಳೆ ನೂರಾರು ಜನ ಸಾಲಿನಲ್ಲಿ ನಿಂತಿದ್ದರೂ ಅದನು ಲೆಕ್ಕಿಸದೇ ಸಾಲು ತಪ್ಪಿಸಿ ನೇರವಾಗಿ ಮತಗಟ್ಟೆಯೊಳಗೆ ಪ್ರವೇಶಿಸಲು ಯತ್ನಿಸಿದ್ದಾರೆ. ಈ ವೇಳೆ ಇದನ್ನು ಕಂಡ ಮತದಾರನೊಬ್ಬ ಶಾಸಕರ ಈ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಸಾಲಿನಲ್ಲೇ ನಿಂತು ಮತ ಚಲಾಯಿಸುವಂತೆ ಆತ ಒತ್ತಾಯಿಸಿದ್ದ. ಇದರಿಂದ ಆಕ್ರೋಶಗೊಂಡ ಶಾಸಕ ಶಿವಕುಮಾರ್ ನೋಡ ನೋಡುತ್ತಲೇ ಪ್ರಶ್ನಿಸಿದ ಮತದಾರನ ಕಪಾಳಕ್ಕೆ ಹೊಡೆದಿದ್ದಾರೆ.

ಮತದಾರರನಿಗೆ ಕಪಾಳಮೋಕ್ಷ ಮಾಡಿರುವ ಬೆನ್ನಲ್ಲೇ ಶಿವಕುಮಾರ್ ಜೊತೆಗಿದ್ದ ಆತನ ಬೆಂಬಲಿಗರು ಹಿಂದೆ ಮುಂದೆ ನೋಡದೆ ಮತದಾರನ ಮೇಲೆ ಮುಗಿಬಿದ್ದು ಸಾಮೂಹಿಕ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಮತದಾರನನ್ನು ಹೊರಗೆ ಎಳೆದೊಯ್ದಿದ್ದಾರೆ. ಈ ವೇಳೆ ಭದ್ರತೆಗೆ ನಿಯೋಜಿಸಿದ್ದ ಪೊಲೀಸರು ಮಧ್ಯ ಪ್ರವೇಶಿಸಿ ಗಲಾಟೆ ನಿಯಂತ್ರಿಸಿದ್ದಾರೆ. ಸ್ಥಳದಲ್ಲಿ ಕೆಲಹೊತ್ತು ಭಾರೀ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಇನ್ನ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆ ಟಿಡಿಪಿ ಪ್ರತಿಕ್ರಿಯಿಸಿದ್ದು, ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷಕ್ಕೆ ಸೋಲು ಖಚಿತ ಎಂಬುದು ಸ್ಪಷ್ಟವಾಗಿದೆ. ಆ ಹತಾಶೆಯಲ್ಲಿ ಈ ರೀತಿ ಮಾಡುತ್ತಿದ್ದಾರೆ ಎಂದು ಟೀಕಿಸಿದೆ. ಇನ್ನು ಈ ಘಟನೆ ಬಗ್ಗೆ ಪ್ರತಿಕ್ರಿಯಿಸಲು ವೈಎಸ್‌ಆರ್‌ ಕಾಂಗ್ರೆಸ್‌ ನಿರಾಕರಿಸಿದೆ. ಘಟನೆಗೆ ಸಂಬಂಧಿಸಿದಂತೆ ಟಿಡಿಪಿ ಮತ್ತು ವೈಎಸ್‌ಆರ್‌ ಕಾಂಗ್ರೆಸ್‌ ನಡುವೆ ವಾಕ್ಸಮರ ಮುಂದುವರೆದಿದೆ.

ಇತ್ತೀಚೆಗೆ ಬಿಜೆಪಿ ಮುಖಂಡ, ನಟಿ ಅಮೂಲ್ಯ ಮಾವ ರಾಮಚಂದ್ರ ಅವರು ಕೂಡ ಸಾರ್ವಜನಿಕ ಸ್ಥಳದಲ್ಲಿ ತಮ್ಮ ಬೆಂಬಲಿಗರಿಗೆ ಕಪಾಳಮೋಕ್ಷ ಮಾಡಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Viral Video: ಸಾಲಿನಲ್ಲಿ ಬನ್ನಿ ಅಂದಿದ್ದೇ ತಪ್ಪಾಯ್ತಾ? ಮತದಾರನಿಗೆ MLA ಕಪಾಳಮೋಕ್ಷ

Viral Video: ಮತ ಚಾಲಾಯಿಸಲೆಂದು ಸಾಲಿನಲ್ಲಿ ನಿಂತಿದ್ದ ಮತದಾರನಿಗೆ ಜಗನ್‌ ಮೋಹನ್‌ ರೆಡ್ಡಿ ನೇತೃತ್ವದ ವೈಸಿಪಿ ಪಕ್ಷದ ಅಭ್ಯರ್ಥಿ, ತೆನಾಲಿ ಕ್ಷೇತ್ರದ ಶಾಸಕ ಅನ್ನಬತುನಿ ಶಿವಕುಮಾರ್ ಎಂಬುವವರು ಕಪಾಳಮೋಕ್ಷ ಮಾಡಿದ್ದಾನೆ. ಶಾಸಕ ಶಿವಕುಮಾರ್ ಇಂದು ಮತದಾನಕ್ಕೆಂದು ಮತಗಟ್ಟೆಗೆ ಆಗಮಿಸಿದ್ದರು. ಈ ವೇಳೆ ನೂರಾರು ಜನ ಸಾಲಿನಲ್ಲಿ ನಿಂತಿದ್ದರೂ ಅದನು ಲೆಕ್ಕಿಸದೇ ಸಾಲು ತಪ್ಪಿಸಿ ನೇರವಾಗಿ ಮತಗಟ್ಟೆಯೊಳಗೆ ಪ್ರವೇಶಿಸಲು ಯತ್ನಿಸಿದ್ದಾರೆ. ಈ ವೇಳೆ ಇದನ್ನು ಕಂಡ ಮತದಾರನೊಬ್ಬ ಶಾಸಕರ ಈ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಸಾಲಿನಲ್ಲೇ ನಿಂತು ಮತ ಚಲಾಯಿಸುವಂತೆ ಆತ ಒತ್ತಾಯಿಸಿದ್ದ. ಇದರಿಂದ ಆಕ್ರೋಶಗೊಂಡ ಶಾಸಕ ಶಿವಕುಮಾರ್ ನೋಡ ನೋಡುತ್ತಲೇ ಪ್ರಶ್ನಿಸಿದ ಮತದಾರನ ಕಪಾಳಕ್ಕೆ ಹೊಡೆದಿದ್ದಾರೆ.

VISTARANEWS.COM


on

Viral Video
Koo

ಹೈದರಾಬಾದ್‌: ಕೆಲವೊಮ್ಮೆ ಜನಪ್ರತಿನಿಧಿ(Politicians)ಗಳು ತಾವು ಜನಸೇವಕರು ಎಂಬುದನ್ನೇ ಮರೆತು ದರ್ಪದಿಂದ ವರ್ತಿಸುವ ಘಟನೆ ಆಗಾಗ ಕಣ್ಣ ಮುಂದೆ ಬರುತ್ತಲೇ ಇರುತ್ತವೆ. ಇದೀಗ ಅಂತಹದ್ದೇ ಒಂದು ಘಟನೆ ಆಂಧ್ರ ಪ್ರದೇಶದಲ್ಲಿ(Andra Pradesh) ನಡೆದಿದ್ದು, ಮತದಾರನ ಮೇಲೆ ಶಾಸಕ(Andra Pradesh MLA)ನೋರ್ವ ದರ್ಪ ಮೆರೆದಿದ್ದು, ಕಪಾಳಮೋಕ್ಷ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ (Viral Video) ಆಗುತ್ತಿದ್ದು, ಹಲವರಿಂದ ಖಂಡನೆ ವ್ಯಕ್ತವಾಗಿದೆ.

ಏನಿದು ಘಟನೆ?

ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ತೆನಾಲಿ ಮತಗಟ್ಟೆಯೊಂದರಲ್ಲಿ ಈ ಘಟನೆ ನಡೆದಿದೆ. ಮತ ಚಾಲಾಯಿಸಲೆಂದು ಸಾಲಿನಲ್ಲಿ ನಿಂತಿದ್ದ ಮತದಾರನಿಗೆ ಜಗನ್‌ ಮೋಹನ್‌ ರೆಡ್ಡಿ ನೇತೃತ್ವದ ವೈಎಸ್‌ಆರ್‌ ಕಾಂಗ್ರೆಸ್‌ ಅಭ್ಯರ್ಥಿ, ತೆನಾಲಿ ಕ್ಷೇತ್ರದ ಶಾಸಕ ಅನ್ನಬತುನಿ ಶಿವಕುಮಾರ್ ಎಂಬುವವರು ಕಪಾಳಮೋಕ್ಷ ಮಾಡಿದ್ದಾನೆ. ಶಾಸಕ ಶಿವಕುಮಾರ್ ಇಂದು ಮತದಾನಕ್ಕೆಂದು ಮತಗಟ್ಟೆಗೆ ಆಗಮಿಸಿದ್ದರು. ಈ ವೇಳೆ ನೂರಾರು ಜನ ಸಾಲಿನಲ್ಲಿ ನಿಂತಿದ್ದರೂ ಅದನು ಲೆಕ್ಕಿಸದೇ ಸಾಲು ತಪ್ಪಿಸಿ ನೇರವಾಗಿ ಮತಗಟ್ಟೆಯೊಳಗೆ ಪ್ರವೇಶಿಸಲು ಯತ್ನಿಸಿದ್ದಾರೆ. ಈ ವೇಳೆ ಇದನ್ನು ಕಂಡ ಮತದಾರನೊಬ್ಬ ಶಾಸಕರ ಈ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಸಾಲಿನಲ್ಲೇ ನಿಂತು ಮತ ಚಲಾಯಿಸುವಂತೆ ಆತ ಒತ್ತಾಯಿಸಿದ್ದ. ಇದರಿಂದ ಆಕ್ರೋಶಗೊಂಡ ಶಾಸಕ ಶಿವಕುಮಾರ್ ನೋಡ ನೋಡುತ್ತಲೇ ಪ್ರಶ್ನಿಸಿದ ಮತದಾರನ ಕಪಾಳಕ್ಕೆ ಹೊಡೆದಿದ್ದಾರೆ.

ಮತದಾರರನಿಗೆ ಕಪಾಳಮೋಕ್ಷ ಮಾಡಿರುವ ಬೆನ್ನಲ್ಲೇ ಶಿವಕುಮಾರ್ ಜೊತೆಗಿದ್ದ ಆತನ ಬೆಂಬಲಿಗರು ಹಿಂದೆ ಮುಂದೆ ನೋಡದೆ ಮತದಾರನ ಮೇಲೆ ಮುಗಿಬಿದ್ದು ಸಾಮೂಹಿಕ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಮತದಾರನನ್ನು ಹೊರಗೆ ಎಳೆದೊಯ್ದಿದ್ದಾರೆ. ಈ ವೇಳೆ ಭದ್ರತೆಗೆ ನಿಯೋಜಿಸಿದ್ದ ಪೊಲೀಸರು ಮಧ್ಯ ಪ್ರವೇಶಿಸಿ ಗಲಾಟೆ ನಿಯಂತ್ರಿಸಿದ್ದಾರೆ. ಸ್ಥಳದಲ್ಲಿ ಕೆಲಹೊತ್ತು ಭಾರೀ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಇನ್ನ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆ ಟಿಡಿಪಿ ಪ್ರತಿಕ್ರಿಯಿಸಿದ್ದು, ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷಕ್ಕೆ ಸೋಲು ಖಚಿತ ಎಂಬುದು ಸ್ಪಷ್ಟವಾಗಿದೆ. ಆ ಹತಾಶೆಯಲ್ಲಿ ಈ ರೀತಿ ಮಾಡುತ್ತಿದ್ದಾರೆ ಎಂದು ಟೀಕಿಸಿದೆ. ಇನ್ನು ಈ ಘಟನೆ ಬಗ್ಗೆ ಪ್ರತಿಕ್ರಿಯಿಸಲು ವೈಎಸ್‌ಆರ್‌ ಕಾಂಗ್ರೆಸ್‌ ನಿರಾಕರಿಸಿದೆ. ಘಟನೆಗೆ ಸಂಬಂಧಿಸಿದಂತೆ ಟಿಡಿಪಿ ಮತ್ತು ವೈಎಸ್‌ಆರ್‌ ಕಾಂಗ್ರೆಸ್‌ ನಡುವೆ ವಾಕ್ಸಮರ ಮುಂದುವರೆದಿದೆ.

ಇದನ್ನೂ ಓದಿ: Gold Heist Case: ಬಹುಕೋಟಿ ಚಿನ್ನ, ವಿದೇಶಿ ಕರೆನ್ಸಿ ದರೋಡೆ; ಭಾರತೀಯ ಮೂಲದ ವ್ಯಕ್ತಿ ಲಾಕ್‌!

ಇತ್ತೀಚೆಗೆ ಬಿಜೆಪಿ ಮುಖಂಡ, ನಟಿ ಅಮೂಲ್ಯ ಮಾವ ರಾಮಚಂದ್ರ ಅವರು ಕೂಡ ಸಾರ್ವಜನಿಕ ಸ್ಥಳದಲ್ಲಿ ತಮ್ಮ ಬೆಂಬಲಿಗರಿಗೆ ಕಪಾಳಮೋಕ್ಷ ಮಾಡಿದ್ದರು.

Continue Reading

ವೈರಲ್ ನ್ಯೂಸ್

Elephant Attack: ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ; ಬೆಚ್ಚಿಬಿದ್ದ ಡ್ರೈವರ್‌ನಿಂದ ಅಪಘಾತ!

Elephant Attack: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ ಓಡಾಟ ಮಿತಿಮೀರಿದೆ. ಪ್ರತಿ ರಾತ್ರಿ ಎಂಬಂತೆ ಇಲ್ಲಿ 8, 9, 10 ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗುತ್ತಿದೆ. ನಿನ್ನೆ ರಾತ್ರಿ 9ನೇ ತಿರುವಿನಲ್ಲಿ ಇದ್ದಕ್ಕಿದ್ದಂತೆ ರಸ್ತೆಯಲ್ಲಿ ಕಾಡಾನೆ ಪ್ರತ್ಯಕ್ಷವಾಗಿದೆ. ಇದನ್ನು ಕಂಡು ಗಾಬರಿಯಾದ ಚಾಲಕ ವಾಹನದ ಮೇಲಿನ ನಿಯಂತ್ರಣ ಕಳೆದುಕೊಂಡಿದ್ದಾನೆ. ವಾಹನ ರಸ್ತೆಯ ಬದಿಗೆ ಸರಿದು ಚರಂಡಿಗೆ ಬಿದ್ದಿದೆ.

VISTARANEWS.COM


on

elephant attack charmadi ghat
Koo

ಚಿಕ್ಕಮಗಳೂರು: ಬೆಂಗಳೂರು ಹಾಗೂ ಕರಾವಳಿ ಕರ್ನಾಟಕದ ಪ್ರಮುಖ ಕೊಂಡಿಯಾದ ಘಾಟಿಗಳಲ್ಲಿ ಒಂದಾಗಿರುವ ಚಾರ್ಮಾಡಿ ಘಾಟಿಯ (Charmadi Ghat) ರಸ್ತೆಯಲ್ಲಿ ಕಾಡಾನೆ ((Elephant Attack) ಮತ್ತೆ ಮತ್ತೆ ಕಾಣಿಸಿಕೊಳ್ಳುತ್ತಿದೆ. ನಿನ್ನೆ ರಾತ್ರಿ ‌ರಸ್ತೆಯಲ್ಲಿ ಇದ್ದಕ್ಕಿದ್ದಂತೆ ಕಾಣಿಸಿಕೊಂಡ ಕಾಡಾನೆಯನ್ನು ಕಂಡು ಗಾಬರಿಯಾದ ಮಹಿಂದ್ರ ಜೀಪ್‌ ಚಾಲಕನೊಬ್ಬ ಗಾಡಿಯ ಮೇಲಿನ ನಿಯಂತ್ರಣ ಕಳೆದುಕೊಂಡಿದ್ದಾನೆ. ವಾಹನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದಿದೆ.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ ಓಡಾಟ ಮಿತಿಮೀರಿದೆ. ಪ್ರತಿ ರಾತ್ರಿ ಎಂಬಂತೆ ಇಲ್ಲಿ 8, 9, 10 ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗುತ್ತಿದೆ. ನಿನ್ನೆ ರಾತ್ರಿ 9ನೇ ತಿರುವಿನಲ್ಲಿ ಇದ್ದಕ್ಕಿದ್ದಂತೆ ರಸ್ತೆಯಲ್ಲಿ ಕಾಡಾನೆ ಪ್ರತ್ಯಕ್ಷವಾಗಿದೆ. ಇದನ್ನು ಕಂಡು ಗಾಬರಿಯಾದ ಚಾಲಕ ವಾಹನದ ಮೇಲಿನ ನಿಯಂತ್ರಣ ಕಳೆದುಕೊಂಡಿದ್ದಾನೆ. ವಾಹನ ರಸ್ತೆಯ ಬದಿಗೆ ಸರಿದು ಚರಂಡಿಗೆ ಬಿದ್ದಿದೆ.

ಮಂಜು ಕವಿದ ವಾತಾವರಣದಲ್ಲಿ ರಸ್ತೆಯೇ ಸರಿಯಾಗಿ ಕಾಣುತ್ತಿಲ್ಲ. ವಾಹನ ಚಾಲಕರು ಪರದಾಡುತ್ತ ವಾಹನ ಚಲಾಯಿಸುತ್ತಾರೆ. ಇಂಥ ಹೊತ್ತಿನಲ್ಲಿ ಏಕಾಏಕಿ ಕಾಡಾನೆ ಪ್ರತ್ಯಕ್ಷವಾಗುತ್ತಿರುವುದರಿಂದ ವಾಹನ ಸವಾರರು ಭಯಭೀತರಾಗುತ್ತಿದ್ದಾರೆ. ಕಳೆದ ಒಂದು ವಾರದಿಂದ ಚಾರ್ಮಾಡಿ ಘಾಟಿಯಲ್ಲಿ ಆನೆ ಪ್ರತ್ಯಕ್ಷವಾಗುತ್ತಿದೆ. ಹಗಲು ಕೂಡ ಆನೆ ಕಾಣಿಸಿಕೊಳ್ಳುತ್ತಿರುವುದರಿಂದ ವಾಹನ ಸವಾರರು ಗಲಿಬಿಲಿ ಆಗುತ್ತಿದ್ದಾರೆ.

ಚಾರ್ಮಾಡಿ ಘಾಟಿಯಲ್ಲಿ ಘಾಟಿ ಕೆಳಗಿನ ಧರ್ಮಸ್ಥಳ ಮುಂತಾದ ತೀರ್ಥಕ್ಷೇತ್ರಗಳಿಗೆ ಬರುವವರ ವಾಹನಗಳ ಸಂಖ್ಯೆ ಹೆಚ್ಚು ಇದೆ. ಈಗ ಶಾಲೆಗಳಿಗೆ ರಜೆಯೂ ಇರುವುದರಿಂದ ವಾಹನಗಳು ಇನ್ನಷ್ಟು ಹೆಚ್ಚಿವೆ. ದೊಡ್ಡ ವಾಹನಗಳಲ್ಲಿ ಇರುವವರು ಆನೆಗೆ ಕ್ಯಾರೇ ಎನ್ನದೆ ಸ್ಲೋ ಮಾಡಿ ಆನೆ ನೋಡಲು ನಿಲ್ಲಿಸುತ್ತಿರುವುದರಿಂದ, ಸಣ್ಣ ವಾಹನಗಳಿಗೆ ಹಾಗೂ ದ್ವಿಚಕ್ರ ಸವಾರರಿಗೆ ತೊಂದರೆಯಾಗುತ್ತಿದೆ. ರಸ್ತೆಯಲ್ಲಿ ಆನೆ ಓಡಾಟದಿಂದ ಪದೇಪದೇ ಟ್ರಾಫಿಕ್ ಜಾಮ್ ಆಗುತ್ತಿದೆ. ಆದರೆ ಅರಣ್ಯ ಇಲಾಖೆ ಅಧಿಕಾರಿಗಳು ತಲೆಕೆಡಿಸಿಕೊಳ್ಳುತ್ತಿಲ್ಲ. ಸಲಗ ವಾಹನಗಳ ಮೇಲೆ ಎರಗುವುದಕ್ಕೆ ಮೊದಲು ಎಚ್ಚೆತ್ತುಕೊಳ್ಳಬೇಕಿದೆ ಎಂದು ಸ್ಥಳೀಯರು ದೂರಿದ್ದಾರೆ.

ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ಶಿವಮೊಗ್ಗ: ಶಿವಮೊಗ್ಗದಲ್ಲಿ ಕಾಡು ಪ್ರಾಣಿಗಳ ಹಾವಳಿಗೆ ಜನರು ತತ್ತರಿಸಿ ಹೋಗಿದ್ದಾರೆ. ಮನೆಯಿಂದ ಹೊರಗೆ ಕಾಲಿಟ್ಟರೆ ವಾಪಸ್‌ ಬದುಕಿ ಬರುವ ಗ್ಯಾರಂಟಿ ಇಲ್ಲದಂತಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಮನೆ ಸಮೀಪದ ಕಾಡಿಗೆ ತೆರಳುತ್ತಿದ್ದ ವ್ಯಕ್ತಿ ಮಸಣ ಸೇರಿದ್ದಾನೆ. ಕಾಡಾನೆ ದಾಳಿಗೆ ವ್ಯಕ್ತಿ (Elephant attack) ಬಲಿಯಾಗಿದ್ದಾರೆ.

ಶಿವಮೊಗ್ಗದ ಹೊಸನಗರ ತಾಲೂಕಿನ ಬಸವಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ತಿಮ್ಮಪ್ಪ (58) ಕಾಡಾನೆ ದಾಳಿಯಿಂದ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಜನರ ಮೇಲೆ ದಾಳಿ ಮಾಡುತ್ತಿರುವ ಕಾಡಾನೆಯನ್ನು ಸೆರೆಹಿಡಿಯುವಂತೆ ಒತ್ತಾಯ ಕೇಳಿ ಬಂದಿದೆ. ಕಾಡು ಪ್ರಾಣಿಗಳ ಹಾವಳಿಯಿಂದ ಮನೆಯಿಂದ ಹೊರ ಹೋಗಲು ಎದುರುವಂತಾಗಿದೆ ಎಂದು ಗ್ರಾಮಸ್ಥರು ಕಿಡಿಕಾರಿದರು.

ಇದನ್ನೂ ಓದಿ: Elephant attack : ನಿಲ್ಲದ ಕಾಡು ಪ್ರಾಣಿಗಳ ಹಾವಳಿ; ಶಿವಮೊಗ್ಗದಲ್ಲಿ ಆನೆ ದಾಳಿಗೆ ವ್ಯಕ್ತಿ ಬಲಿ

Continue Reading

ದೇಶ

Viral Video: ವಂದೇ ಭಾರತ್ ರೈಲಿನಡಿ ಸಿಲುಕಿದರೂ ಹಸು ಪ್ರಾಣಾಪಾಯದಿಂದ ಪಾರಾಗಿದ್ದು ಹೇಗೆ?

ಹಸುವೊಂದು ವಂದೇ ಭಾರತ್ ರೈಲಿನಡಿ ಸಿಲುಕಿಕೊಂಡರೂ ಲೋಕೋ ಪೈಲೆಟ್ ನ ಮುನ್ನೆಚ್ಚರಿಕೆ ಕ್ರಮವಾಗಿ ಬದುಕಿ ಉಳಿದಿದೆ. ಇದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದೆ.

VISTARANEWS.COM


on

By

Viral Video
Koo

ಮುಂಬಯಿ: ರೈಲು ಅಪಘಾತದಿಂದ (rail accident) ಪ್ರಾಣಿಗಳು ಮಾತ್ರವಲ್ಲ ಮನುಷ್ಯರೂ ಸಾವನ್ನಪ್ಪುತ್ತಿರುವ ಘಟನೆಗಳು ಆಗಾಗ ನಡೆಯುತ್ತಲೇ ಇರುತ್ತದೆ. ಇತ್ತೀಚೆಗಂತೂ ದೇಶದಾದ್ಯಂತ ವೇಗವಾಗಿ ಬರುತ್ತಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ (Vande Bharat Express trains) ಹಸುಗಳು ಢಿಕ್ಕಿ ಹೊಡೆದು ಮೃತಪಡುತ್ತಿರುವ ಘಟನೆಗಳು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿ ವೈರಲ್ (Viral Video) ಆಗುತ್ತಿರುತ್ತದೆ.

ವೇಗವಾಗಿ ಬರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಡಿಕ್ಕಿಯಾಗಿ ಹಲವು ಹಸುಗಳು ಸಾವನ್ನಪ್ಪಿವೆ. ಆದರೆ ಇದೀಗ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಲೋಕೋಮೋಟಿವ್ ಪೈಲಟ್ ತುರ್ತು ಬ್ರೇಕ್ ಹಾಕುವ ಮೂಲಕ ಹಸುವನ್ನು ರಕ್ಷಿಸಿದಘಟನೆ ನಡೆದಿದೆ. ಇದರ ದೃಶ್ಯ ಕೆಮರಾದಲ್ಲಿ ಸೆರೆಯಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಂದೇ ಭಾರತ್ ರೈಲಿನ ಕೆಳಗೆ ಹಸು ಸಿಲುಕಿಕೊಂಡಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಲೋಕೋ ಪೈಲಟ್ ರೈಲು ಹಳಿಯ ಮೇಲೆ ಹಸುವನ್ನು ಗುರುತಿಸಿ ಪ್ರಾಣಿಯನ್ನು ರಕ್ಷಿಸಲು ತುರ್ತು ಬ್ರೇಕ್ ಹಾಕಿದರು ಎನ್ನಲಾಗಿದೆ.


ರೈಲಿನಡಿ ಸಿಲುಕಿಕೊಂಡಿತ್ತು

ಲೋಕೋ ಪೈಲಟ್ ಬ್ರೇಕ್ ಹಾಕುವಷ್ಟರಲ್ಲಿ ಹಸುವಿನ ಅರ್ಧ ಭಾಗ ರೈಲಿನ ಕೆಳಗೆ ಸಿಲುಕಿಕೊಂಡಿತ್ತು. ರೈಲಿನ ಮುಂಭಾಗದ ಭಾಗವು ಹಸುವಿನ ಮೇಲೆ ಬಿದ್ದಾಗ ಹಸು ನೋವಿನಿಂದ ಕೂಗಿತ್ತು.

ಅನಂತರ ಚಾಲಕ ರೈಲನ್ನು ಹಿಮ್ಮುಖ ದಿಕ್ಕಿನಲ್ಲಿ ಚಲಿಸಿ ಹಸುವನ್ನು ರಕ್ಷಿಸಿದರು. ಬಳಿಕ ಹಸು ಎದ್ದು ಟ್ರ್ಯಾಕ್‌ನಿಂದ ಹೊರನಡೆದಿದೆ. ಹಸುವಿಗೆ ಯಾವುದೇ ಗಾಯವಾಗಿಲ್ಲ. ಸಕಾಲಕ್ಕೆ ಲೋಕೋ ಪೈಲೆಟ್ ಬ್ರೇಕ್ ಹಾಕಿದ್ದರಿಂದ ಹಸು ಪ್ರಾಣಾಪಾಯದಿಂದ ಪಾರಾಗಿದೆ.


ಚಾಲಕನ ಚಾಲಾಕಿತನಕ್ಕೆ ಶ್ಲಾಘನೆ

ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದರಿಂದ ಹಸು ಪ್ರಾಣಾಪಾಯದಿಂದ ಪಾರಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿದಾಡುತ್ತಿದ್ದು ಚಾಲಕನಿಗೆ ಸಾಕಷ್ಟು ಮೆಚ್ಚುಗೆಯ ಮಾತುಗಳು ಹರಿದು ಬರುತ್ತಿವೆ.

ಇದನ್ನೂ ಓದಿ: Viral Video: ಬಸ್‌, ರೈಲಿನಲ್ಲಿ ಮಾತ್ರ ಅಲ್ಲ.. ಫ್ಲೈಟ್‌ನಲ್ಲೂ ನಡೆಯುತ್ತೆ ಸೀಟಿಗಾಗಿ ಮಾರಾಮಾರಿ

ತಡವಾದ ರೈಲು, ಬಾಗಿಲುಗಳ ದೋಷಗಳು

ಅಹಮದಾಬಾದ್- ಮುಂಬಯಿ ವಂದೇ ಭಾರತ್‌ನ ಪ್ರಯಾಣಿಕರು ಸಾಮಾಜಿಕ ಮಾಧ್ಯಮದಲ್ಲಿ ರೈಲಿನಲ್ಲಿರುವ ಸಮಸ್ಯೆಗಳ ಬಗ್ಗೆಯೂ ಈ ಸಂದರ್ಭದಲ್ಲಿ ಹೇಳಿಕೊಂಡಿದ್ದಾರೆ.

ಇತ್ತೀಚಿನ ಘಟನೆಯೊಂದರಲ್ಲಿ ಕಾನ್ಪುರದಿಂದ ದೆಹಲಿ ಕಡೆಗೆ ಹೋಗುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಡಿಕ್ಕಿ ಹೊಡೆದು ಹಸು ಸಾವನ್ನಪ್ಪಿತ್ತು. ರೈಲಿನ ಚಾಲಕ ತುರ್ತು ಬ್ರೇಕ್‌ಗಳನ್ನು ಹಾಕಿದ್ದನು, ಆದರೆ, ಹಸುವಿನ ಮೃತ ದೇಹ ರೈಲಿನಲ್ಲಿ ಸಿಲುಕಿಕೊಂಡಿತು. ರೈಲಿನಿಂದ ಪ್ರಾಣಿಯ ಅವಶೇಷಗಳನ್ನು ತೆಗೆದುಹಾಕಲು ರೈಲನ್ನು ಹತ್ತು ನಿಮಿಷಗಳ ಕಾಲ ನಿಲ್ಲಿಸಬೇಕಾಯಿತು. ದೆಹಲಿ- ಹೌರಾ ಮಾರ್ಗದಲ್ಲಿ ಈ ಘಟನೆ ಸಂಭವಿಸಿದ್ದು, ರೈಲನ್ನು ಅಚಲ್ದಾ ನಿಲ್ದಾಣದಲ್ಲಿ ನಿಲ್ಲಿಸಲಾಗಿತ್ತು ಎಂದು ಪ್ರಯಾಣಿಕರೊಬ್ಬರು ಹೇಳಿಕೊಂಡಿದ್ದಾರೆ.

Continue Reading
Advertisement
karnataka politics eknath shinde
ಪ್ರಮುಖ ಸುದ್ದಿ26 mins ago

Karnataka Politics: ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ಪತನ? ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ ಮಹತ್ವದ ಸುಳಿವು!

Vijayapura news Drowned in water
ವಿಜಯಪುರ28 mins ago

Vijayapura News: ನಾಪತ್ತೆಯಾಗಿದ್ದ ಮೂವರು ಮಕ್ಕಳು ಚರಂಡಿ ಶುದ್ಧೀಕರಣ ಕೇಂದ್ರಕ್ಕೆ ಬಿದ್ದು ಸಾವು

Road Accident between Bolero and bike Couple dies on the spot
ಕಲಬುರಗಿ36 mins ago

Road Accident: ಬುಲೇರೋ – ಬೈಕ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಆಳಂದದ ದಂಪತಿ ಸಾವು

Arvind Kejriwal
ದೇಶ46 mins ago

Arvind Kejriwal: ಕೇಜ್ರಿವಾಲ್‌ಗೆ ಮತ್ತೊಂದು ರಿಲೀಫ್‌; ಸಿಎಂ ಸ್ಥಾನ ವಜಾಕ್ಕೆ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕಾರ

Assault case Cubbon park
ಬೆಂಗಳೂರು53 mins ago

Cubbon park: ಕಬ್ಬನ್‌ ಪಾರ್ಕ್‌ನಲ್ಲಿ ಯುವಕನನ್ನು ಅಟ್ಟಾಡಿಸಿ ಚಪ್ಪಲಿಯಿಂದ ಹೊಡೆದ ಮಹಿಳೆಯರು!

A Manju and Naveen Gowda
ಕ್ರೈಂ1 hour ago

Prajwal Revanna Case: ಪೆನ್‌ ಡ್ರೈವ್‌ ಹಂಚಿಕೆ ಆರೋಪ ಮಾಡಿದ್ದ ನವೀನ್‌ ಗೌಡ ಮೇಲೆ ಶಾಸಕ ಮಂಜು ದೂರು

Viral Video
ದೇಶ1 hour ago

Viral Video: ಸಾಲಿನಲ್ಲಿ ಬನ್ನಿ ಅಂದಿದ್ದೇ ತಪ್ಪಾಯ್ತಾ? ಮತದಾರನಿಗೆ MLA ಕಪಾಳಮೋಕ್ಷ

POK Explainer in Kannada
ರಾಜಕೀಯ1 hour ago

POK Explainer in Kannada: ಪಾಕ್ ಆಕ್ರಮಿತ ಕಾಶ್ಮೀರ ಕುರಿತ 15 ಕುತೂಹಲಕಾರಿ ಸಂಗತಿಗಳು

Vijay Surya changes his name on mothers day
ಕಿರುತೆರೆ1 hour ago

Vijay Surya: ತಾಯಂದಿರ ದಿನ ತನ್ನ ಹೆಸರನ್ನೇ ಬದಲಿಸಿಕೊಂಡ ʻಅಗ್ನಿಸಾಕ್ಷಿ’ ನಟ! ಹೊಸ ಹೆಸರೇನು?

gold rate today 34
ಚಿನ್ನದ ದರ2 hours ago

Gold Rate Today: ಬಂಗಾರದ ಬೆಲೆಯಲ್ಲಿ ಇಳಿಕೆ; ರಾಜ್ಯ ಮಾರುಕಟ್ಟೆಯಲ್ಲಿ ಚಿನ್ನ- ಬೆಳ್ಳಿ ದರಗಳು ಹೀಗಿವೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ3 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ8 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ10 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ20 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ21 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ21 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ1 day ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು2 days ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

ಟ್ರೆಂಡಿಂಗ್‌