Site icon Vistara News

Viral News: ಗುಪ್ತಾಂಗ ಭಾಗದಲ್ಲಿ ಪತ್ತೆಯಾಯ್ತು ಮೊಬೈಲ್‌; ಪರೀಕ್ಷೆಯಲ್ಲಿ ಕಾಪಿ ಹೊಡಿಯೋಕೆ ಅಭ್ಯರ್ಥಿಗಳ ಹೊಸ ಟೆಕ್ನಿಕ್‌!

Viral News

ಕೋಲ್ಕತ್ತಾ: ಪರೀಕ್ಷೆಗಳಲ್ಲಿ ಚೀಟಿ ಇಟ್ಟುಕೊಂಡು ಅಕ್ರಮ ಎಸಗುವ ಕಾಲ ಹೋಯ್ತು. ಆದರೆ ಚೀಟಿಗಿಂತಲೂ ಈಗ ಮೊಬೈಲ್‌ ಸಹಾಯದಿಂದ ಅಕ್ರಮ ಎಸಗುವುದು ವಿದ್ಯಾರ್ಥಿಗಳಿಗೆ ಸುಲಭ. ಏಕೆಂದರೆ ಒಂದೇ ಒಂದು ಕ್ಲಿಕ್‌ನಲ್ಲಿ ಎಲ್ಲಾ ಮಾಹಿತಿ ಕಣ್ಣಮುಂದೆ ಇರುತ್ತದೆ. ಆದರೆ ಅಷ್ಟು ದೊಡ್ಡ ಮೊಬೈಲನ್ನು ಯಾರಿಗೂ ಗೊತ್ತಾಗದಂತೆ ಇಟ್ಟುಕೊಂಡು ಪರೀಕ್ಷಾ ಕೊಠಡಿಗೆ ಹೋಗುವುದಾದರೂ ಹೇಗೆ? ಅದಕ್ಕಂತಾನೇ ಈ ಕಿಲಾಡಿಗಳು ಮಾಡಿದ್ದೇನು ಗೊತ್ತಾ? ಪರಿಶೀಲನೆ ನಡೆಸಿದ ಸಿಬ್ಬಂದಿಗಳೇ ಒಂದು ಕ್ಷಣಕ್ಕೆ ದಂಗಾಗಿ ನಿಂತಿದ್ದರು. ಕೊನೆಗೆ ವಿಧಿಯಿಲ್ಲದೇ ಪರೀಕ್ಷೆಯನ್ನೇ ರದ್ದು ಮಾಡಬೇಕಾಗಿ ಬಂದಿತ್ತು(Viral News).

ಏನಿದು ಘಟನೆ? ಯಾವ ಪರೀಕ್ಷೆ?

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಬೀರ್ಭುಮ್‌ನ ಸೂರಿಯ ಬೆನಿಮಾಧಬ್ ಇನ್ಸ್ಟಿಟ್ಯೂಷನ್‌ನಲ್ಲಿ ಎಎನ್ಎಂ ಮತ್ತು ಜಿಎನ್ಎಂ ನರ್ಸಿಂಗ್ ಕೋರ್ಸ್‌ಗೆ ಪ್ರವೇಶ ಪರೀಕ್ಷೆ ನಡೆಯುತ್ತಿತ್ತು. ಮಾಲ್ಡಾದ ಕೆಲವು ವಿದ್ಯಾರ್ಥಿಗಳು ಸೂರಿಯ ಬೆನಿಮಾಧಬ್ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೆ ಹಾಜರಾಗುತ್ತಿದ್ದರು. ಪರೀಕ್ಷಾ ಕೇಂದ್ರಗಳ ಒಳಗೆ ಮೊಬೈಲ್ ಫೋನ್ ಗಳನ್ನು ಅನುಮತಿಸಲಾಗುವುದಿಲ್ಲ ಎಂದು ತಿಳಿಸಲಾಗಿತ್ತು.

ಪ್ರತಿಯೊಬ್ಬರನ್ನು ಸರಿಯಾಗಿ ಪರಿಶೀಲನೆ ನಡೆಸಿಯೇ ಮಹಿಳಾ ಸೆಕ್ಯುರಿಟಿ ಗಾರ್ಡ್‌ಗಳು ಪರೀಕ್ಷಾ ಕೊಠಡಿಗೆ ಹೋಗಲು ಅನುಮತಿಸುತ್ತಿದ್ದರು. ಪರಿಶೀಲನೆ ವೇಳೆ ಹಲವರ ಬಳಿ ಮೊಬೈಲ್‌, ಕಾಪಿ ಚೀಟಿ ಪತ್ತೆಯಾಗಿತ್ತು. ತಕ್ಷಣ ಅವರಿಂದ ಅದನ್ನು ಸೀಜ್‌ ಮಾಡಿ ಅವರನ್ನು ಪರೀಕ್ಷ ಕೊಠಡಿಗೆ ಕಳುಹಿಸಲಾಗಿತ್ತು. ಆದರೆ ಇನ್ನು ಕೆಲವರು ಸಿಬ್ಬಂದಿಗಳ ಕಣ್ತಪ್ಪಿಸಿ ಪರೀಕ್ಷೆ ಬರೆಯಲು ಮುಂದಾಗಿದ್ದರು.

ಗುಪ್ತಾಂಗದೊಳಗೂ ಸಿಕ್ತು ಮೊಬೈಲ್‌

ಆದರೆ ಪರೀಕ್ಷೆಗಳು ಪ್ರಾರಂಭವಾದ ತಕ್ಷಣ, ಕೊಠಡಿಯೊಳಗೆ ಕೆಲವು ಭದ್ರತಾ ಸಿಬ್ಬಂದಿಗಳಿಗೆ ಮೊಬೈಲ್‌ ಬಳಕೆ ಅನುಮಾನ ಬಂದಿತು. ನಂತರ ವಿದ್ಯಾರ್ಥಿಗಳನ್ನು ಪರೀಕ್ಷೆಗಾಗಿ ಮತ್ತೊಂದು ಸಭಾಂಗಣಕ್ಕೆ ಕರೆದೊಯ್ಯಲಾಯಿತು. ಅಲ್ಲಿ ಒಬ್ಬೊಬ್ಬರನ್ನೇ ವಿಚಾರಣೆಗೆ ಒಳಪಡಿಸಿ ತಪಾಸಣೆ ನಡೆಸಲಾಯಿತು. ಮೆಟಲ್ ಡಿಟೆಕ್ಟರ್‌ ಗಳ ಮೂಲಕ ದೇಹವನ್ನು ಹುಡುಕುತ್ತಿದ್ದಂತೆ, ಕೆಲ ವಿದ್ಯಾರ್ಥಿನಿಯರು ತಮ್ಮ ಗುಪ್ತಾಂಗದಲ್ಲಿ ಮೊಬೈಲ್‌ ಸಿಕ್ಕಿಸಿಕೊಂಡು ಬಂದಿದ್ದೂ ಪತ್ತೆಯಾಯಿತು.

ಮತ್ತೆ ಕೆಲವರು ಶೂ ಅನ್ನು ಅನ್ನು ಕತ್ತರಿಸಿ ಮೊಬೈಲ್ ಫೋನ್ ಅನ್ನು ಅದರಲ್ಲಿ ಇಟ್ಟುಕೊಂಡು ಬಂದಿದ್ದರು. ಕೂಡಲೇ ಹೀಗೆ ಮೊಬೈಲ್‌ ಇಟ್ಟುಕೊಂಡು ಬಂದಿದ್ದವರನ್ನೆಲ್ಲಾ ವಶಕ್ಕೆ ಪಡೆದ ಅಧಿಕಾರಿಗಳು ಅವರನ್ನು ಪರೀಕ್ಷೆಗಳಿಂದ ಡಿಬಾರ್‌ ಮಾಡುವ ಆದೇಶ ಹೊರಡಿಸಿದರು. ಮೊಬೈಲ್‌ಗಳನ್ನೂ ವಶಕ್ಕೆ ಪಡೆದರು. ಘಟನೆ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಲದ ಪರೀಕ್ಷಾ ನಿಯಂತ್ರಕರು ಪರೀಕ್ಷೆಗಳನ್ನು ರದ್ದುಪಡಿಸುವಂತೆ ಶಿಫಾರಸು ಮಾಡಿದ್ದು ಪರೀಕ್ಷೆ ರದ್ದುಪಡಿಸಲಾಗಿದೆ. ಹೊಸ ದಿನಾಂಕವನ್ನು ಪರೀಕ್ಷೆಗೆ ಪ್ರಕಟಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: NEET UG 2024: ನೀಟ್ ಅಕ್ರಮ; ಇಂದು ಸುಪ್ರೀಂಕೋರ್ಟ್‌ನಿಂದ ಮಹತ್ವದ ತೀರ್ಪು-CBI ಮೊದಲ ಚಾರ್ಜ್‌ಶೀಟ್‌ ಸಲ್ಲಿಕೆ

Exit mobile version