Site icon Vistara News

Viral news: ಚುನಾವಣೆಗೆ ಮೊದಲೇ 19 ಲಕ್ಷ ಇವಿಎಂ ಕಾಣೆಯಾಗಿದ್ದು ನಿಜವೇ? ಏನಿದರ ಅಸಲಿಯತ್ತು ?

Lok Sabha Election 2024

ನವದೆಹಲಿ: ಲೋಕಸಭಾ ಚುನಾವಣೆ- 2024ರ (Lok sabha election-2024) ಮೊದಲ ಹಂತದ ಮತದಾನ ಪ್ರಕ್ರಿಯೆಗಳು ಶುಕ್ರವಾರ ದೇಶದ ವಿವಿಧ ಭಾಗಗಳಲ್ಲಿ ನಡೆದಿದೆ. ಮತದಾನ ಪ್ರಾರಂಭಕ್ಕೂ ಮೊದಲು 1.9 ಮಿಲಿಯನ್ ಎಲೆಕ್ಟ್ರಾನಿಕ್ ಮತಯಂತ್ರಗಳು (EVM) ಕಾಣೆಯಾಗಿವೆ ಎನ್ನುವ ಕುರಿತು ಸಾಮಾಜಿಕ ಜಾಲತಾಣದಲ್ಲಿ (social media) ಸಂದೇಶ ಹರಡಿದ್ದು (viral news) ಇದು ಸುಳ್ಳು ಎಂದು ತಿಳಿದು ಬಂದಿದೆ.

ಏಪ್ರಿಲ್ 19ರಂದು 2024ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಪ್ರಾರಂಭವಾಗುವ ಮೊದಲು ಚುನಾವಣಾ ಫಲಿತಾಂಶಗಳ ಮೇಲೆ ಪ್ರಭಾವ ಬೀರಲು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯನ್ನು ಹಂಚಿಕೊಳ್ಳಲಾಗಿತ್ತು. ಇದರಲ್ಲಿ 1.9 ಮಿಲಿಯನ್ ಎಲೆಕ್ಟ್ರಾನಿಕ್ ಮತಯಂತ್ರಗಳು ಕಾಣೆಯಾಗಿದೆ ಎಂದು ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಅನೇಕ ಬಳಕೆದಾರರು ಹೇಳಿಕೊಂಡಿದ್ದರು.

ಈ ಕುರಿತು ತನಿಖೆ ನಡೆಸಿದ ವಿಶ್ವಸ್ ನ್ಯೂಸ್ ಈ ಹೇಳಿಕೆ ಸುಳ್ಳು ಎಂದು ಪತ್ತೆ ಹಚ್ಚಿದೆ. ಚುನಾವಣಾ ಆಯೋಗವೂ ಕೂಡ ಇದೊಂದು ನಕಲಿ ಸುದ್ದಿ ಎಂದು ಹೇಳಿದೆ. ಈ ವರ್ಷದ ಮಾರ್ಚ್‌ನಲ್ಲಿ ಸುಪ್ರೀಂ ಕೋರ್ಟ್ ಕೂಡ ಇವಿಎಂ ನಾಪತ್ತೆಯಾಗಿರುವ ಆರೋಪಗಳನ್ನು ತಳ್ಳಿಹಾಕಿತ್ತು.

ಇದನ್ನೂ ಓದಿ: Viral Video: 7 ಮಕ್ಕಳನ್ನು ದೇವರು ಕೊಟ್ಟಿದ್ದಾದರೆ ಬಡತನಕ್ಕೆ ಮೋದಿ ಹೇಗೆ ಕಾರಣ? ಮುಸ್ಲಿಂ ಮಹಿಳೆಗೆ ತರಾಟೆ!


ಸುಳ್ಳು ಸುದ್ದಿ

ಸಾಮಾಜಿಕ ಮಾಧ್ಯಮ ಬಳಕೆದಾರ ನಿಹಾಲ್ ಸಿಂಗ್ ನಿಗಮ್ ಅವರು, 1.9 ಮಿಲಿಯನ್ ಇವಿಎಂ ಯಂತ್ರಗಳನ್ನು ಕಳವು ಮಾಡಲಾಗಿದೆ ಮತ್ತು ಈ ಬಗ್ಗೆ ಯಾವುದೇ ಕುರುಹು ಕಂಡು ಬಂದಿಲ್ಲ ಎನ್ನುವ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಅಂದಿನಿಂದ ಈ ಪೋಸ್ಟ್ ಭಾರೀ ವೈರಲ್ ಆಗಿದೆ. ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹಲವಾರು ಬಳಕೆದಾರರು ಇದನ್ನು ಹಂಚಿಕೊಂಡಿದ್ದಾರೆ.


ತನಿಖೆಯಲ್ಲೇನಿದೆ?

ದಿ ಎಕನಾಮಿಕ್ ಟೈಮ್ಸ್ ನ ಮಾರ್ಚ್ 15 ವರದಿಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶಗಳ ಮೇಲೆ ಪ್ರಭಾವ ಬೀರಲು 2016 ಮತ್ತು 2019 ರ ನಡುವೆ ಚುನಾವಣಾ ಆಯೋಗದ ಮೇಲ್ವಿಚಾರಣೆಯಲ್ಲಿ 1.9 ಮಿಲಿಯನ್ ಇವಿಎಂಗಳು ನಾಪತ್ತೆಯಾಗಿದೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್ ಶುಕ್ರವಾರ ಅರ್ಜಿಯನ್ನು ವಜಾಗೊಳಿಸಿತ್ತು. 1.9 ಮಿಲಿಯನ್ ಇವಿಎಂಗಳು ಕಾಣೆಯಾಗಿದೆ ಎಂದು ಐಎನ್‌ಸಿ ಹೇಳಿರುವುದು ಸಂಪೂರ್ಣವಾಗಿ ಆಧಾರ ರಹಿತವಾಗಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

2019ರಲ್ಲಿಯೂ ನಾಪತ್ತೆಯಾದ ಇವಿಎಂಗಳ ವರದಿಗಳು ಬಂದಿದ್ದವು. ಫ್ರಂಟ್‌ಲೈನ್ ಮತ್ತು ಟಿವಿ9 ಭಾರತ ವರ್ಷ್ ಈ ಕುರಿತು ವರದಿಗಳನ್ನು ಪ್ರಕಟಿಸಿತ್ತು. ಇದನ್ನೂಚುನಾವಣಾ ಆಯೋಗವು ಆಧಾರ ರಹಿತ ಎಂದು ಹೇಳಿ ಟ್ವಿಟ್ ಮಾಡಿದೆ.

ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿರುವ FAQ ವಿಭಾಗದಲ್ಲಿಯೂ ಈ ಸಮಸ್ಯೆಯನ್ನು ಉಲ್ಲೇಖಿಸಲಾಗಿದೆ. ವೈರಲ್ ಹಕ್ಕು ಕುರಿತು ಚುನಾವಣಾ ಆಯೋಗದ ಅಧಿಕಾರಿಗಳನ್ನು ಸಂಪರ್ಕಿಸಿರುವ ವಿಶ್ವಸ್ ನ್ಯೂಸ್ ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಷಯದ ಕುರಿತು ಸ್ಪಷ್ಟೀಕರಣವನ್ನು ನೀಡಲಾಗಿದೆ ಎಂದು ತಿಳಿಸಿರುವುದಾಗಿ ತಿಳಿದು ಬಂದಿದೆ.

Exit mobile version