Viral Video: ರೈಲ್ವೆ ನಿಲ್ದಾಣದಲ್ಲಿ ತುಂಬು ಗರ್ಭಿಣಿಯ ಪ್ರಾಣ ಕಾಪಾಡಿದ ಪೊಲೀಸ್‌ ಕಾನ್‌ಸ್ಟೆಬಲ್‌

ವೈರಲ್ ನ್ಯೂಸ್

Viral Video: ರೈಲ್ವೆ ನಿಲ್ದಾಣದಲ್ಲಿ ತುಂಬು ಗರ್ಭಿಣಿಯ ಪ್ರಾಣ ಕಾಪಾಡಿದ ಪೊಲೀಸ್‌ ಕಾನ್‌ಸ್ಟೆಬಲ್‌

Viral News: ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರು ತಮ್ಮ ಅವಸರದಿಂದಾಗಿಯೇ ಜೀವಕ್ಕೆ ಅಪಾಯ ತಂದುಕೊಳ್ಳುತ್ತಾರೆ. ಹೀಗಾಗಿ ರಕ್ಷಣಾ ಸಿಬ್ಬಂದಿಯೂ ಜಾಗೃತರಾಗಿರುವುದು ಅನಿವಾರ್ಯವೆಂಬಂತಾಗಿದೆ.

VISTARANEWS.COM


on

Viral News
ರೈಲ್ವೆ ನಿಲ್ದಾಣದಲ್ಲಿ ನಡೆದ ಘಟನೆಯ ದೃಶ್ಯ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಝಾನ್ಸಿ: ರೈಲ್ವೆ ನಿಲ್ದಾಣದಲ್ಲಿ ಕೆಲಸ ಮಾಡುವವರು ಮೈಯನ್ನೆಲ್ಲ ಕಣ್ಣಾಗಿಸಿಕೊಂಡಿರಬೇಕು ಎಂಬುದಕ್ಕೆ ಪೂರಕವಾಗಿರುವ ಸನ್ನಿವೇಶ ಆಗಾಗ ಎದುರಾಗುತ್ತಿರುತ್ತದೆ. ರೈಲು ಹತ್ತುವ ಅವಸರದಲ್ಲಿ ಅದೆಷ್ಟೋ ಪ್ರಯಾಣಿಕರು ಅಪಾಯ ಮೈಮೇಲೆ ಎಳೆದುಕೊಳ್ಳುತ್ತಾರೆ. ಅವರನ್ನು ರಕ್ಷಿಸುವ ಸಲುವಾಗಿ ಈ ರಕ್ಷಣಾ ಸಿಬ್ಬಂದಿಯೂ ತಮ್ಮ ಜೀವದ ಆಸೆ ಬಿಟ್ಟು ಪ್ರಯತ್ನ ಮಾಡುತ್ತಾರೆ. ಇಂಥ ಘಟನೆಗಳು ನಡೆದ ಹಲವು ವಿಡಿಯೋಗಳನ್ನು ನೀವು ಸೋಷಿಯಲ್‌ ಮೀಡಿಯಾಗಳಲ್ಲಿ ಆಗಾಗ ನೋಡಬಹುದು.

ಅದೇ ತರಹದ ಒಂದು ಘಟನೆ ಉತ್ತರ ಪ್ರದೇಶದ ವೀರಾಂಗನಾ ಲಕ್ಷ್ಮೀಬಾಯಿ ಝಾನ್ಸಿ ಸ್ಟೇಶನ್‌ನಲ್ಲಿ ನಡೆದಿದ್ದು ಅದರ ವಿಡಿಯೋ ಸಖತ್‌ ವೈರಲ್‌ ಆಗುತ್ತಿದೆ. ಚಲಿಸುತ್ತಿದ್ದ ರೈಲನ್ನು ಹತ್ತಲು ಪ್ರಯತ್ನಿಸಿ ಆಯತಪ್ಪಿದ ಗರ್ಭಿಣಿಯನ್ನು ಆರ್‌ಪಿಎಫ್‌ ಕಾನ್‌ಸ್ಟೆಬಲ್‌ ಕಾಪಾಡಿದ್ದಾರೆ. ಇದು ರೈಲ್ವೆ ನಿಲ್ದಾಣದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವಿಡಿಯೋವನ್ನು ರೈಲ್ವೆ ಸಚಿವಾಲಯ ಶೇರ್‌ ಮಾಡಿಕೊಂಡಿದ್ದಾರೆ.

ರೈಲ್ವೆ ರಕ್ಷಣಾ ಪಡೆಯ ಪೊಲೀಸ್‌ ಕಾನ್‌ಸ್ಟೆಬಲ್‌ ನರ್ಪಾಲ್‌ ಸಿಂಗ್‌ ಶನಿವಾರ ಸಂಜೆ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಬರೌನಿ-ಗ್ವಾಲಿಯರ್‌ ರೈಲು ನಿಲ್ದಾಣವನ್ನು ಪ್ರವೇಶಿಸಿ ಕೆಲ ಕಾಲ ನಿಂತು ಅಲ್ಲಿಂದ ಹೊರಟಿತು. ಹೀಗೆ ರೈಲು ಚಲನೆ ಪ್ರಾರಂಭಿಸಿದ ತಕ್ಷಣ ತುಂಬು ಗರ್ಭಿಣಿಯೊಬ್ಬರು ಓಡುತ್ತ ಬಂದರು. ರೈಲು ತಪ್ಪಿ ಹೋದರೆ ಎಂಬ ಆತಂಕದಲ್ಲಿ ಓಡಿ ಬಂದು ಇನ್ನೇನು ಹತ್ತಬೇಕು ಎನ್ನುವಷ್ಟರಲ್ಲಿ ಅವರ ಕಾಲು ಎಡವಿ ಆಯತಪ್ಪಿದ್ದಾರೆ. ಅಷ್ಟರಲ್ಲಿ ನರ್ಪಾಲ್‌ ಸಿಂಗ್‌ ಓಡಿಬಂದು ಆಕೆಯನ್ನು ಹಿಡಿದುಕೊಂಡಿದ್ದಾರೆ. ಮಹಿಳೆ ಪಕ್ಕದಲ್ಲಿ, ಮಗುವನ್ನು ಎತ್ತಿಕೊಂಡು ಬರುತ್ತಿದ್ದ ವ್ಯಕ್ತಿಯೊಬ್ಬ ಕೂಡ ಆಕೆಯನ್ನು ಹಿಡಿದು ಎಳೆದಿದ್ದಾರೆ. ಗರ್ಭಿಣಿ ಅಪಾಯದಿಂದ ಪಾರಾಗಿದ್ದಾರೆ. ಪೊಲೀಸ್‌ ಕಾನ್‌ಸ್ಟೆಬಲ್‌ ಸ್ವಲ್ಪವೇ ತಡ ಮಾಡಿದ್ದರೂ ಆಕೆಯ ಜೀವವೇ ಹೋಗುವ ಸಾಧ್ಯತೆ ಇತ್ತು. ಅಥವಾ ಗಂಭೀರ ಗಾಯಗೊಂಡು ಹೊಟ್ಟೆಯಲ್ಲಿರುವ ಮಗುವಿಗೂ ಅಪಾಯ ಎದುರಾಗುತ್ತಿತ್ತು. ವಿಡಿಯೋ ನೋಡಿದ ಜನರು ಆರ್‌ಪಿಎಫ್‌ ಸಿಬ್ಬಂದಿಯನ್ನು ಶ್ಲಾಘಿಸಿದ್ದಾರೆ.

ಇದನ್ನೂ ಓದಿ: Video: ಮೈ ಜುಂ ಎನ್ನುವ ದೃಶ್ಯ; ಹಳಿ ಮೇಲೆ ಬಿದ್ದ ವೃದ್ಧನ ರಕ್ಷಣೆಗೆ ಜೀವ ಪಣಕ್ಕಿಟ್ಟ ರೈಲ್ವೆ ಉದ್ಯೋಗಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ವೈರಲ್ ಬೆಡಗಿ ಕುಂಭಮೇಳದ ಮೋನಾಲಿಸಾ ಬಗ್ಗೆ ಬಿಗ್ ಅಪ್ಡೇಟ್: ಪತ್ನಿ ಗರ್ಭಿಣಿ ಎಂದು ಪೊಲೀಸರಿಗೆ ಪತಿ ಫರ್ಮಾನ್ ಮಾಹಿತಿ

VISTARANEWS.COM


on

ಕುಂಭಮೇಳದಲ್ಲಿ ರುದ್ರಾಕ್ಷಿ ಮಾರಾಟ ಮಾಡುತ್ತಿದ್ದ ಫೋಟೋ ವೈರಲ್ ಆಗುವ ಮೂಲಕ ರಾತ್ರೋರಾತ್ರಿ ಇಂಟರ್ನೆಟ್‌ ಸೆಲೆಬ್ರಿಟಿಯಾಗಿದ್ದ ಮೋನಾಲಿಸಾ ಭೋಸ್ಲೆ ಈಗ ಮತ್ತೊಂದು ದೊಡ್ಡ ವಿವಾದದ ಕೇಂದ್ರಬಿಂದುವಾಗಿದ್ದಾರೆ. ಕಳೆದ ಮಾರ್ಚ್‌ನಲ್ಲಿ ಕೇರಳದ ದೇವಸ್ಥಾನವೊಂದರಲ್ಲಿ ಫರ್ಮಾನ್ ಖಾನ್ ಎಂಬಾತನನ್ನು ವಿವಾಹವಾಗಿದ್ದ ಮೋನಾಲಿಸಾ, ಅಂದಿನಿಂದಲೂ ಅಂತರಧರ್ಮೀಯ ವಿವಾಹ ಮತ್ತು ವಯಸ್ಸಿನ ಕಾರಣಕ್ಕೆ ಸುದ್ದಿಯಲ್ಲಿದ್ದರು. ಇದೀಗ ಆಕೆ ಗರ್ಭಿಣಿಯಾಗಿದ್ದಾರೆ ಎಂಬ ಸ್ಫೋಟಕ ಮಾಹಿತಿಯನ್ನು ಆಕೆಯ ಪತಿ ಫರ್ಮಾನ್ ಪೊಲೀಸರಿಗೆ ನೀಡಿದ್ದು, ಪ್ರಕರಣಕ್ಕೆ ಹೊಸ ತಿರುವು ಲಭಿಸಿದೆ.

ವಾಸ್ತವವಾಗಿ, ಈ ಮದುವೆಯನ್ನು ಮೋನಾಲಿಸಾ ಕುಟುಂಬದವರು ತೀವ್ರವಾಗಿ ವಿರೋಧಿಸಿದ್ದು, ಇದನ್ನು ‘ಲವ್ ಜಿಹಾದ್’ ಎಂದು ಆರೋಪಿಸಿದ್ದರು. ಅಷ್ಟೇ ಅಲ್ಲದೆ, ಮದುವೆಯ ಸಮಯದಲ್ಲಿ ಮೋನಾಲಿಸಾ ಅಪ್ರಾಪ್ತ ವಯಸ್ಕಳಾಗಿದ್ದರು ಎಂದು ಕುಟುಂಬದವರು ದೂರು ನೀಡಿದ್ದರು. ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ (NCST) ನಡೆಸಿದ ತನಿಖೆಯಲ್ಲಿ ಮೋನಾಲಿಸಾಗೆ ಕೇವಲ 16 ವರ್ಷ ಎಂದು ತಿಳಿದುಬಂದ ಹಿನ್ನೆಲೆಯಲ್ಲಿ, ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ (POCSO) ಕಾಯ್ದೆಯಡಿ ಗಂಭೀರ ಪ್ರಕರಣ ದಾಖಲಾಗಿದೆ. ಪ್ರಸ್ತುತ ಕೇರಳ ಹೈಕೋರ್ಟ್ ಫರ್ಮಾನ್ ಬಂಧನಕ್ಕೆ ಮೇ 20ರವರೆಗೆ ತಡೆಯಾಜ್ಞೆ ನೀಡಿದೆ.

ಇತ್ತೀಚೆಗೆ ಮಧ್ಯಪ್ರದೇಶ ಪೊಲೀಸರು ವಿಚಾರಣೆಗಾಗಿ ಮೋನಾಲಿಸಾರನ್ನು ಹಾಜರುಪಡಿಸುವಂತೆ ಸೂಚಿಸಿದಾಗ, ಆಕೆ ಗರ್ಭಿಣಿಯಾಗಿರುವ ಕಾರಣ ಪ್ರಯಾಣಿಸಲು ಸಾಧ್ಯವಿಲ್ಲ ಎಂದು ಫರ್ಮಾನ್ ತಿಳಿಸಿದ್ದಾರೆ. ಈ ಹೇಳಿಕೆಯು ತನಿಖಾಧಿಕಾರಿಗಳಲ್ಲಿ ಕುತೂಹಲ ಮೂಡಿಸಿದ್ದು, ಫರ್ಮಾನ್ ನೀಡಿರುವ ಮಾಹಿತಿಯನ್ನು ಪೊಲೀಸರು ಈಗ ವೈದ್ಯಕೀಯ ವರದಿಗಳ ಮೂಲಕ ಪರಿಶೀಲಿಸುತ್ತಿದ್ದಾರೆ. ವೈದ್ಯಕೀಯ ತಪಾಸಣೆಯ ನಂತರವಷ್ಟೇ ಮುಂದಿನ ಕಾನೂನು ಕ್ರಮಗಳ ಬಗ್ಗೆ ಸ್ಪಷ್ಟತೆ ಸಿಗಲಿದ್ದು, ಈ ಹೈಪ್ರೊಫೈಲ್ ಪ್ರಕರಣವು ಈಗ ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

Continue Reading

Latest

ಫ್ಲೈ-91 ವಿಮಾನದಲ್ಲಿ ಮತ್ತೆ ಲ್ಯಾಂಡಿಂಗ್ ಸಮಸ್ಯೆ: ಹುಬ್ಬಳ್ಳಿ ಆಗಸದಲ್ಲಿ ಪ್ರಯಾಣಿಕರ ತಳಮಳ

VISTARANEWS.COM


on

ಹುಬ್ಬಳ್ಳಿ: ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸಿದ ಫ್ಲೈ-91 (Fly91) ವಿಮಾನದಲ್ಲಿ ಮತ್ತೆ ಲ್ಯಾಂಡಿಂಗ್ ಸಮಸ್ಯೆ ಕಾಣಿಸಿಕೊಂಡಿದ್ದು, ಸುಮಾರು 70ಕ್ಕೂ ಹೆಚ್ಚು ಪ್ರಯಾಣಿಕರು ಎರಡು ಗಂಟೆಗಳ ಕಾಲ ಆಗಸದಲ್ಲೇ ಜೀವ ಬಿಗಿಹಿಡಿದು ಕುಳಿತುಕೊಳ್ಳುವಂತಾದ ಘಟನೆ ನಡೆದಿದೆ. ಮಂಗಳವಾರ ಸಂಜೆ 6 ಗಂಟೆಗೆ ಬೆಂಗಳೂರಿನಿಂದ ಹೊರಟಿದ್ದ IC3412 ಸಂಖ್ಯೆಯ ವಿಮಾನವು ನಿಗದಿತ ಸಮಯದಂತೆ 6:50ಕ್ಕೆ ಹುಬ್ಬಳ್ಳಿ ತಲುಪಿತ್ತಾದರೂ, ತಾಂತ್ರಿಕ ಕಾರಣಗಳಿಂದಾಗಿ ರನ್‌ವೇ ಮೇಲೆ ಇಳಿಯಲು ಸಾಧ್ಯವಾಗಲಿಲ್ಲ. ಇದರಿಂದಾಗಿ ವಿಮಾನವು ಸತತ ಎರಡು ಗಂಟೆಗಳ ಕಾಲ ನಗರದ ಆಗಸದಲ್ಲೇ ಸುತ್ತಾಟ ನಡೆಸಬೇಕಾಯಿತು, ಅಂತಿಮವಾಗಿ ರಾತ್ರಿ 9:15ಕ್ಕೆ ವಿಮಾನವು ಸುರಕ್ಷಿತವಾಗಿ ಭೂಸ್ಪರ್ಶ ಮಾಡಿತು.

ಕೇವಲ ಐದು ದಿನಗಳ ಅಂತರದಲ್ಲಿ ಫ್ಲೈ-91 ಸಂಸ್ಥೆಯ ವಿಮಾನಕ್ಕೆ ಎದುರಾದ ಎರಡನೇ ಲ್ಯಾಂಡಿಂಗ್ ಸಮಸ್ಯೆ ಇದಾಗಿದ್ದು, ಪ್ರಯಾಣಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಕಳೆದ ವಾರವಷ್ಟೇ ಹೈದರಾಬಾದ್‌ನಿಂದ ಬಂದಿದ್ದ ಇದೇ ಸಂಸ್ಥೆಯ ವಿಮಾನವು ಹವಾಮಾನ ವೈಪರಿತ್ಯದ ನೆಪವೊಡ್ಡಿ ಮೂರು ಗಂಟೆಗಳ ಕಾಲ ಹಾರಾಟ ನಡೆಸಿತ್ತು. ಆದರೆ ಮಂಗಳವಾರದ ಘಟನೆಯ ವೇಳೆ ವಿಮಾನ ನಿಲ್ದಾಣದಲ್ಲಿ ಹವಾಮಾನವು ಸಹಜವಾಗಿಯೇ ಇತ್ತು. ಅದೇ ಸಮಯದಲ್ಲಿ ಇತರ ಸಂಸ್ಥೆಗಳ ವಿಮಾನಗಳು ಯಾವುದೇ ಅಡೆತಡೆಯಿಲ್ಲದೆ ಟೇಕಾಫ್ ಮತ್ತು ಲ್ಯಾಂಡಿಂಗ್ ನಡೆಸುತ್ತಿದ್ದುದು, ಫ್ಲೈ-91 ವಿಮಾನಗಳ ಸುರಕ್ಷತೆಯ ಬಗ್ಗೆ ಸಾರ್ವಜನಿಕರಲ್ಲಿ ದೊಡ್ಡ ಮಟ್ಟದ ಅನುಮಾನಗಳನ್ನು ಹುಟ್ಟುಹಾಕಿದೆ.

ವಿಮಾನವು ಆಗಸದಲ್ಲೇ ಗಿರಕಿ ಹೊಡೆಯುತ್ತಿದ್ದಾಗ ಒಳಗಿದ್ದ ಪ್ರಯಾಣಿಕರು ತೀವ್ರ ಭಯಭೀತರಾಗಿ ದೇವರ ಮೊರೆ ಹೋಗಿದ್ದರು. ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆಗುವವರೆಗೆ ಪ್ರಯಾಣಿಕರು ಅನುಭವಿಸಿದ ಮಾನಸಿಕ ಒತ್ತಡವು ವಿಮಾನ ನಿಲ್ದಾಣದಲ್ಲಿ ಆಕ್ರೋಶಕ್ಕೆ ಕಾರಣವಾಯಿತು. ಪದೇ ಪದೇ ಇಂತಹ ಘಟನೆಗಳು ಮರುಕಳಿಸುತ್ತಿರುವುದು ವಿಮಾನಯಾನ ಸಂಸ್ಥೆಯ ನಿರ್ವಹಣಾ ಲೋಪವೇ ಅಥವಾ ತಾಂತ್ರಿಕ ದೋಷವೇ ಎಂಬ ಪ್ರಶ್ನೆ ಕಾಡುತ್ತಿದ್ದು, ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಈ ಬಗ್ಗೆ ತನಿಖೆ ನಡೆಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Continue Reading

Latest

ಮೋದಿ-ಸಿದ್ದರಾಮಯ್ಯ ಗುಸುಗುಸು: ಇಬ್ಬರೂ ಮಾತನಾಡಿದ ವಿಷಯ ಬಹಿರಂಗ

VISTARANEWS.COM


on

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿದಾಗ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದ್ದು ಸರಿಯಷ್ಟೇ. ಈ ಸಂದರ್ಭದಲ್ಲಿ ಮೋದಿ ಅವರು ಸಿದ್ದರಾಮಯ್ಯ ಅವರ ಕಿವಿಯಲ್ಲಿ ಪಿಸುಗುಟ್ಟಿದ ಫೋಟೋ ಭಾರಿ ವೈರಲ್‌ ಆಗಿದ್ದು, ತೀವ್ರ ಕುತೂಹಲ ಮೂಡಿಸಿತ್ತು. ಮೋದಿ ಅವರು ಸಿದ್ದರಾಮಯ್ಯ ಅವರ ಕಿವಿಯಲ್ಲಿ ಏನು ಹೇಳಿರಬಹುದು ಎಂದು ಕುತೂಹಲ ಮೂಡಿದ್ದು ಮಾತ್ರವಲ್ಲದೆ, ಊಹಾಪೋಹಗಳಿಗೂ ಕಾರಣವಾಗಿತ್ತು.
ಇದೀಗ ಮೋದಿ-ಸಿದ್ದರಾಮಯ್ಯ ಅವರ ಮಾತಿನ ರಹಸ್ಯ ಬಹಿರಂಗವಾಗಿದೆ. ಸ್ವತಃ ಸಿದ್ದರಾಮಯ್ಯ ಅವರೇ ಗುಟ್ಟನ್ನು ಬಹಿರಂಗಗೊಳಿಸಿದ್ದಾರೆ.
ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ನಾನು ಮೋದಿ ಇಬ್ಬರು ಗುಟ್ಟಾಗಿ ಏನನ್ನೂ ಮಾತನಾಡಿಲ್ಲ. ಮಹಿಳಾ ಮೀಸಲಾತಿ ಬಗ್ಗೆ ನಿಮ್ಮ ಅಭಿಪ್ರಾಯ ಏನು ಎಂದು ಕೇಳೀದರು. ನಾನು ಮಹಿಳಾ ಮೀಸಲಾತಿ ಪರವಾಗಿದ್ದೇನೆ ಎಂದು ಉತ್ತರಿಸಿದೆ. ಇಷ್ಟು ವಿಚಾರ ಬಿಟ್ಟು ಬೇರೆ ಏನೂ ಇಲ್ಲ ಎಂದು ಸಿಎಂ ಸ್ಪಷ್ಟನೆ ನೀಡಿದ್ದಾರೆ.

Continue Reading

Latest

ಹುಬ್ಬಳ್ಳಿ ರನ್-ವೇ ಬದಲಿಗೆ ಬೆಂಗಳೂರಲ್ಲಿ ಲ್ಯಾಂಡ್ ಆದ ಫ್ಲೈಟ್: ಆಗಸದಲ್ಲಿ ವಿಮಾನ ಸುತ್ತಾಡಿದ್ದೇಕೆ?

VISTARANEWS.COM


on

ಹುಬ್ಬಳ್ಳಿ: ವಿಮಾನ ನಿಲ್ದಾಣದಲ್ಲಿ ನಡೆಯಲಿದ್ದ ಸಂಭವನೀಯ ದುರಂತವೊಂದು ಪೈಲಟ್ ಜಾಣ್ಮೆಯಿಂದ ತಪ್ಪಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ಹೊರಟಿದ್ದ Fly91 ಏರ್​​ಲೈನ್ಸ್ ವಿಮಾನವು ನಿಗದಿತ ಸಮಯಕ್ಕೆ ಲ್ಯಾಂಡ್ ಆಗಲು ಸಾಧ್ಯವಾಗದೆ, ಬರೋಬ್ಬರಿ 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಡಿ ಕೊನೆಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿದೆ.

ಮಧ್ಯಾಹ್ನ 3 ಗಂಟೆಗೆ ಹೈದರಾಬಾದ್‌ನಿಂದ ಟೇಕಾಫ್ ಆಗಿದ್ದ ವಿಮಾನ 4:30ಕ್ಕೆ ಹುಬ್ಬಳ್ಳಿಯಲ್ಲಿ ಇಳಿಯಬೇಕಿತ್ತು. ಆದರೆ ತಾಂತ್ರಿಕ ದೋಷ ಅಥವಾ ಹವಾಮಾನ ವೈಪರೀತ್ಯದಿಂದಾಗಿ ಹುಬ್ಬಳ್ಳಿಯಲ್ಲಿ ಲ್ಯಾಂಡಿಂಗ್ ಮಾಡಲು ಸಾಧ್ಯವಾಗಿಲ್ಲ. ಇದರಿಂದಾಗಿ ವಿಮಾನವು ಮುಂಡಗೋಡ, ದಾವಣಗೆರೆ ಹಾಗೂ ಶಿವಮೊಗ್ಗದ ಆಗಸದಲ್ಲಿ ಸುಮಾರು 4 ಗಂಟೆಗಳ ಕಾಲ ಹಾರಾಟ ನಡೆಸಬೇಕಾಯಿತು. ಈ ಅನಿಶ್ಚಿತತೆಯಿಂದಾಗಿ ವಿಮಾನದಲ್ಲಿದ್ದ ಪ್ರಯಾಣಿಕರು ತೀವ್ರ ಆತಂಕಕ್ಕೊಳಗಾಗಿ, ಪ್ರಾಣಭಯದಿಂದ ಕಣ್ಣೀರಿಟ್ಟ ಪ್ರಸಂಗವೂ ನಡೆಯಿತು.

ಕೊನೆಗೆ ಸಂಜೆ 7:30ರ ಸುಮಾರಿಗೆ ಬೆಂಗಳೂರಿನಲ್ಲಿ ವಿಮಾನವನ್ನು ತುರ್ತು ಲ್ಯಾಂಡಿಂಗ್ ಮಾಡಿಸಲಾಯಿತು. ಘಟನೆ ಸಂಭವಿಸಿದಾಗ ಏರ್‌ಲೈನ್ಸ್ ಸಿಬ್ಬಂದಿ ಸರಿಯಾದ ಮಾಹಿತಿ ನೀಡದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಪ್ರಯಾಣಿಕರ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹವಾಮಾನ ವೈಪರೀತ್ಯವೇ ಅಥವಾ ವಿಮಾನದ ತಾಂತ್ರಿಕ ದೋಷವೇ ಈ ಹೈಡ್ರಾಮಾಗೆ ಕಾರಣ ಎಂಬ ಬಗ್ಗೆ ಸದ್ಯ ತನಿಖೆ ನಡೆಯುತ್ತಿದೆ.

Continue Reading
Advertisement
BJP State President B Y Vijayendra latest statement in bengaluru
Latest30 minutes ago

ಸರ್ಕಾರಿ ನೌಕರರಿಗೆ ಸಂಬಳ ಕೊಡದ ಸರ್ಕಾರ: ವಿಜಯೇಂದ್ರ ವಾಗ್ದಾಳಿ

Latest52 minutes ago

ವೈರಲ್ ಬೆಡಗಿ ಕುಂಭಮೇಳದ ಮೋನಾಲಿಸಾ ಬಗ್ಗೆ ಬಿಗ್ ಅಪ್ಡೇಟ್: ಪತ್ನಿ ಗರ್ಭಿಣಿ ಎಂದು ಪೊಲೀಸರಿಗೆ ಪತಿ ಫರ್ಮಾನ್ ಮಾಹಿತಿ

Latest56 minutes ago

ಪಹಲ್ಗಾಮ್‌ ದಾಳಿ: ವರ್ಷದ ನಂತರ ಕಣಿವೆ ರಾಜ್ಯದಲ್ಲಿ ಹೆಚ್ಚಿದ ಬಂಡವಾಳ ಹೂಡಿಕೆ, ಸ್ಟಾರ್ಟ್‌ ಅಪ್‌ ಗಳ ಆರಂಭ

Latest1 hour ago

ಅಮೆರಿಕಾ ವಶಪಡಿಸಿಕೊಂಡ ಇರಾನಿನ ಕಾರ್ಗೋ ಹಡಗು: ಸಂಬಂಧ ನಿರಾಕರಿಸಿದ ಚೀನಾ

Latest2 hours ago

ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿ ವಿರುದ್ಧ ದಿನಕರ್ ತೂಗುದೀಪ ಕಿಡಿ: ಮೋಸಗಾರ ಎಂದಿದ್ದೇಕೆ ಚಾಲೆಂಜಿಂಗ್‌ಸ್ಟಾರ್‌ ಸಹೋದರ?

Latest2 hours ago

ಫ್ಲೈ-91 ವಿಮಾನದಲ್ಲಿ ಮತ್ತೆ ಲ್ಯಾಂಡಿಂಗ್ ಸಮಸ್ಯೆ: ಹುಬ್ಬಳ್ಳಿ ಆಗಸದಲ್ಲಿ ಪ್ರಯಾಣಿಕರ ತಳಮಳ

Latest2 hours ago

ಬೆಸ್ಕಾಂ ಗ್ರಾಹಕರಿಗೆ ಪ್ರಮುಖ ಸೂಚನೆ: ಗೃಹ ಜ್ಯೋತಿ ಯೋಜನೆಯಲ್ಲಿ ಮಹತ್ವದ ಬದಲಾವಣೆ

ಅವಿಭಾಗೀಕೃತ2 hours ago

ಎಲ್‌ ಪಿಜಿ ಬಿಕ್ಕಟ್ಟು; ಬೆಂಗಳೂರಿನಲ್ಲಿ ನಾಯಿಗಳ ಊಟಕ್ಕೂ ಕುತ್ತು

Latest2 hours ago

ಪಶ್ಚಿಮ ಬಂಗಾಳದ ಮೊದಲ ಹಂತದ ಮತದಾನಕ್ಕೆ ಕಣ ಸಜ್ಜು

Latest3 hours ago

ಆನ್‌ಲೈನ್‌ ನಲ್ಲಿ ಆರ್ಡರ್‌ ಮಾಡಿದರೆ ಮನೆಬಾಗಿಲಿಗೆ ಜಲಮಂಡಳಿ ಕುಡಿವ ನೀರು ಪೂರೈಕೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌