Site icon Vistara News

Viral Video: ಬೆಂಕಿ ದುರಂತ ಸ್ಥಳದಲ್ಲಿ ಜಮಾಯಿಸಿದ್ದ ಜನ; ಆಮೇಲೆ ನಡೆದಿದ್ದೇ ಬೇರೆ- ವಿಡಿಯೋ ನೋಡಿ

Viral Video

ತಿರುನೆಲ್ವೆಲಿ: ಸಮೋಸ ಅಂಗಡಿ(Samosa Shop)ಯಲ್ಲಿ ಸಿಲಿಂಡರ್‌ ಸ್ಫೋಟ(Cylinder Blast)ಗೊಂಡು ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಿರುನೆಲ್ವೆಲಿ ಜಿಲ್ಲೆಯಲ ಉತ್ತರ ರಾಧಾ ರಸ್ತೆಯಲ್ಲಿರುವ ಸಮೋಸಾ ಅಂಗಡಿಯಲ್ಲಿ ಈ ಘಟನೆ ನಡೆದಿದ್ದು, ಅಂಗಡಿ ಮಾಲೀಕ ಸೇರಿದಂತೆ ಆರು ಮಂದಿ ಗಂಭೀರವಾಗಿ ಗಾಯಗೊಂಡು ಜೀವನ್ಮರಣದಲ್ಲಿ ಹೋರಾಟ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ. ಘಟನೆಯ ಭೀಕರ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ವಿಡಿಯೋ ಎಲ್ಲೆಡೆ ವೈರಲ್‌(Viral Video) ಆಗುತ್ತಿದೆ.

ಘಟನೆ ವಿವರ:

ಸಮೋಸಾ ಅಂಗಡಿಯಲ್ಲಿ ಏಕಾಏಕಿ ಬೆಂಕಿ(Fire Accident )ಕಾಣಿಸಿಕೊಂಡಿತ್ತು. ಧಗಧಗನೇ ಹೊತ್ತಿ ಉರಿಯುತ್ತಿದ್ದ ಬೆಂಕಿಯನ್ನು ನಂದಿಸಲು ಜನ ಹರಸಾಹಸ ಪಡುತ್ತಿದ್ದರು. ಮತ್ತೆ ಕೆಲವರು ರಸ್ತೆಯಲ್ಲಿ ನಿಂತು ನೋಡುತ್ತಿದ್ದರು. ಇನ್ನು ಕೆಲವು ಮೊಬೈಲ್‌ನಲ್ಲಿ ಘಟನೆಯ ದೃಶ್ಯವನ್ನು ರೆಕಾರ್ಡ್‌ ಮಾಡಿಕೊಳ್ಳುತ್ತಿದ್ದರು. ಈ ವೇಳೆ ಅಲ್ಲೇ ಇದ್ದ ಸಿಲಿಂಡರ್‌ಗೂ ಬೆಂಕಿ ತಗುಲಿ ಸ್ಫೋಟಗೊಂಡಿದೆ. ಸ್ಫೋಟದ ರಭಸಕ್ಕೆ ಅಲ್ಲೇ ಇದ್ದ ಜನರಿಗೆ ಬೆಂಕಿ ಜ್ವಾಲೆ ತಗುಲಿದೆ. ತಕ್ಷಣ ಸ್ಥಳಕ್ಕೆ ಪೊಲೀಸರು, ಅಗ್ನಿ ಶಾಮಕ ದಳ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಿನಲ್ಲಿ ನಿನ್ನೆ ಇಂತಹದ್ದೇ ಒಂದು ಘಟನೆ ವರದಿಯಾಗಿತ್ತು. ಸಂಪಿಗೇಹಳ್ಳಿ ಸಮೀಪದ ಎಂಎಸ್ ನಗರದಲ್ಲಿ ಮನೆಯೊಂದರಲ್ಲಿ ಅಡುಗೆ ಅನಿಲ ಸ್ಫೋಟಗೊಂಡು ಐವರು ಗಂಭೀರ ಗಾಯಗೊಂಡಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ಒಂದೇ ಕುಂಟುಂಬದ ಐವರಿಗೆ ಶೇ.90ರಷ್ಟು ಸುಟ್ಟ ಗಾಯಗಳಿಗೆ ತುತ್ತಾಗಿದ್ದಾರೆ. ದಂಪತಿ ಮದನ್ ಚೌಹಾರ (32), ಪ್ರೇಮ್ ಜಾಲ(28) ಹಾಗೂ ಮಕ್ಕಳಾದ ಹಿರದ್ (12), ಪ್ರಶಾಂತ್ (06), ಅನಿತಾ (8) ಈ ಐವರು ಗಂಭೀರ ಗಾಯಗೊಂಡಿದ್ದಾರೆ. ತಡರಾತ್ರಿ ಗ್ಯಾಸ್‌ ಲಿಂಕ್‌ ಆಗಿದ್ದು, ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಏಕಾಏಕಿ ಸಿಲಿಂಡರ್‌ ಸ್ಫೋಟಗೊಂಡಿದೆ ಎನ್ನಲಾಗಿದೆ. ನಿದ್ದೆ ಮಂಪರಿನಲ್ಲಿದ್ದವರಿಗೆ ಗಂಭೀರವಾದ ಸುಟ್ಟು ಗಾಯವಾಗಿವೆ.

ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಅಸ್ಪತ್ರೆಗೆ ರವಾನೆ ಮಾಡಲಾಗಿದೆ. ನೇಪಾಳ ಮೂಲದ ಕುಟುಂಬವು ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಸಂಪಿಗೇಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Viral Video: KSRTC ಬಸ್‌ನಲ್ಲೇ ಮಹಿಳೆಗೆ ಹೆರಿಗೆ ಮಾಡಿಸಿದ ವೈದ್ಯರು! ಡ್ರೈವರ್‌ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ

Exit mobile version