Site icon Vistara News

Viral Video: ಮೆಟ್ರೋ, ವಿಮಾನ ಆಯಿತು ಈಗ ರೈಲಿನಲ್ಲಿ ಮಕ್ಕಳ ಎದುರೇ ಜೋಡಿಯ ಸರಸ!

Viral Video

ನವದೆಹಲಿ: ದೆಹಲಿ ಮೆಟ್ರೋದಲ್ಲಿ (delhi metro) ಅಶ್ಲೀಲ ವರ್ತನೆಯ ವಿಡಿಯೋಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ (social media) ಆಗಾಗ ವೈರಲ್ (Viral Video) ಆಗುತ್ತಿದೆ. ಇದೀಗ ರೈಲಿನಲ್ಲೂ (train) ಜೋಡಿಯೊಂದು ಅಶ್ಲೀಲವಾಗಿ ವರ್ತಿಸಿ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ.

ಕಳೆದ ಕೆಲವು ದಿನಗಳಿಂದ ಮೆಟ್ರೋದಲ್ಲಿ, ಬೈಕ್ ನಲ್ಲಿ ಅಸಭ್ಯವಾಗಿ ವರ್ತಿಸುತ್ತಿರುವ ಜೋಡಿಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿತ್ತು. ಇದೀಗ ಇನ್ ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿರುವ ವಿಡಿಯೋವೊಂದರಲ್ಲಿ ಜೋಡಿಯೊಂದು ಸಣ್ಣ ಮಕ್ಕಳ ಎದುರೇ ರೈಲಿನಲ್ಲಿ ಮುದ್ದಾಡುತ್ತಾ ಸಾಗಿರುವುದು ವೈರಲ್ ಆಗಿದೆ.

ಸ್ಲೀಪರ್ ಕೋಚ್‌ನಲ್ಲಿ ದಂಪತಿ ಮುದ್ದಾಡುತ್ತಿದ್ದಾಗ ರೈಲಿನ ಟಿಕೇಟ್ ಪರೀಕ್ಷಿಸಲು ಪರೀಕ್ಷಕರು ಅಲ್ಲಿಗೆ ಬಂದಿದ್ದಾರೆ. ಅವರೊಂದಿಗೆ ಮಾತನಾಡುತ್ತಿದ್ದರೂ ದಂಪತಿ ಈ ಬಗ್ಗೆ ತಲೆಕೆಡಿಸಿಕೊಳ್ಳದೆ ಎಲ್ಲರ ಉಪಸ್ಥಿತಿಯಲ್ಲಿಯೂ ಪರಸ್ಪರ ಮುದ್ದಾಡುತ್ತಿದ್ದರು. ಇದು ಮಕ್ಕಳು ಸೇರಿದಂತೆ ಇತರ ಪ್ರಯಾಣಿಕರಿಗೂ ಮುಜುಗರ ಉಂಟು ಮಾಡುವಂತಿತ್ತು.
ಈ ವಿಡಿಯೋ ಯಾವಾಗ ಮತ್ತು ಎಲ್ಲಿ ತೆಗೆದಿರುವುದೆಂದು ತಿಳಿದು ಬಂದಿಲ್ಲ. ಈ ಕುರಿತು ಸಾಕಷ್ಟು ನೆಟ್ಟಿಗರು ಕಾಮೆಂಟ್ ಕೂಡ ಮಾಡಿದ್ದಾರೆ.


ಎಕ್ಸ್ ನಲ್ಲಿ ಈ ವಿಡಿಯೋವನ್ನು ಪೋಸ್ಟ್ ಮಾಡಲಾಗಿದೆ. 2.6 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿರುವ ಈ ವಿಡಿಯೋ ನೋಡಿ ಸಾಕಷ್ಟು ನೆಟ್ಟಿಗರು ಟೀಕಿಸಿದ್ದಾರೆ.

ಒಬ್ಬ ಬಳಕೆದಾರ, ರೈಲಿನಲ್ಲಿ ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. ಇನ್ನೊಬ್ಬರು ಇದು ಜಾಸ್ತಿಯಾಯಿತು, ನಾಚಿಕೆ ಎನ್ನುವುದೇ ಇಲ್ಲ ಎಂದು ತಿಳಿಸಿದ್ದಾರೆ.

ಏಪ್ರಿಲ್‌ನಲ್ಲಿ ವಿಮಾನದಲ್ಲಿ ಜೋಡಿಯೊಂದು ಆಸನದಲ್ಲಿ ಕುಳಿತು ಮುದ್ದಾಡಿದ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವಿಮಾನ ಹಾರಾಟದ 4 ಗಂಟೆಗಳ ಕಾಲ ಜೋಡಿಯು ಆಲಿಂಗನದಲ್ಲಿದ್ದು ಸಾಕಷ್ಟು ನೆಟ್ಟಿಗರ ಟೀಕೆಗೆ ಗುರಿಯಾಗಿತ್ತು.

ರೈಲಿನಲ್ಲಿ ಹುಟ್ಟಿದ ಮಗುವಿಗೆ ʼಮಹಾಲಕ್ಷ್ಮಿʼ ಎಂದು ಹೆಸರಿಟ್ಟ ಮುಸ್ಲಿಂ ದಂಪತಿ

ಚಲಿಸುತ್ತಿದ್ದ ರೈಲಿನಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಆ ಮಗುವಿಗೆ ʼಮಹಾಲಕ್ಷ್ಮಿ ʼ ಎಂದು ನಾಮಕರಣ ಮಾಡಿದ್ದಾರಂತೆ ಎನ್ನುವ ಕುರಿತು ಸುದ್ದಿಯೊಂದು ವೈರಲ್ ಆಗಿದೆ.

ಜೂನ್ 6ರಂದು ಕೋಲ್ಹಾಪುರ-ಮುಂಬೈ ಮಹಾಲಕ್ಷ್ಮಿ ಎಕ್ಸ್ ಪ್ರೆಸ್ ನಲ್ಲಿ ಮೀರಾ ರೋಡ್ ನ ಫಾತಿಮಾ ಖಾತುನ್ ಎಂಬ 31 ವರ್ಷದ ಗರ್ಭಿಣಿ ಪ್ರಯಾಣಿಸುತ್ತಿದ್ದರು. ಆ ವೇಳೆ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಈ ವಿಚಾರ ಮಹಿಳೆ ತನ್ನ ಪತಿಗೆ ತಿಳಿಸಿದ್ದಾಳೆ ಮತ್ತು ನೋವು ಹೆಚ್ಚಾದ ಕಾರಣ ರೈಲಿನಲ್ಲಿರುವ ಶೌಚಾಲಯಕ್ಕೆ ತೆರಳಿದ್ದಾಳೆ. ಬಳಿಕ ರೈಲು ಲೋನಾವಾಲಾ ದಾಟಿದ ನಂತರ ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ರೈಲಿನಲ್ಲಿದ್ದ ಇತರ ಮಹಿಳಾ ಪ್ರಯಾಣಿಕರು ಆಕೆಗೆ ಸಹಾಯ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಈ ಬಗ್ಗೆ ಮಹಿಳೆಯ ಪತಿ ತಯ್ಯಬ್ ಕರ್ಜಾತ್ ಸರ್ಕಾರಿ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ತಾಯಿ ಮಗುವನ್ನು ರೈಲಿನಿಂದ ಕೆಳಗಿಳಿಸಿ ಹತ್ತಿರವಿದ್ದ ಉಪಜಿಲ್ಲಾ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿನ ಸಿಬ್ಬಂದಿಗಳು ತಾಯಿ, ಮಗುವಿಗೆ ಅಗತ್ಯವಿರುವ ಚಿಕಿತ್ಸೆ ನೀಡಿ ಮೂರು ದಿನಗಳ ನಂತರ ಡಿಸ್ಚಾರ್ಜ್ ಮಾಡಿದ್ದಾರೆ. ನಂತರ ಆ ಮುಸ್ಲಿಂ ದಂಪತಿ ಮಗುವಿಗೆ ‘ಮಹಾಲಕ್ಷ್ಮಿ’ ಎಂದು ಹಿಂದೂ ದೇವರ ಹೆಸರನ್ನು ಇಟ್ಟು ಕುತೂಹಲ ಮೂಡಿಸಿದ್ದಾರೆ.

ಈ ಬಗ್ಗೆ ಮಗುವಿನ ತಂದೆ ತಯ್ಯಬ್ ಕರ್ಜಾತ್ ಅವರು ಪ್ರತಿಕ್ರಿಯಿಸಿ ತಿರುಪತಿಯಿಂದ ಕೊಲ್ಲಾಪುರದ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಪ್ರಯಾಣಿಸಿದ ಕೆಲವು ಸಹ ಪ್ರಯಾಣಿಕರು ತನ್ನ ಮಗಳು ಈ ರೈಲಿನಲ್ಲಿ ಹುಟ್ಟಿದ್ದು, ದೇವಿಯ ದರ್ಶನ ಪಡೆದಂತೆ ಆಯಿತು ಎಂದು ಹೇಳಿದರಂತೆ. ಹಾಗಾಗಿ ತಾನು ಮಗುವಿಗೆ ಈ ಹೆಸರಿಟ್ಟೆ ಎಂದು ತಿಳಿಸಿದ್ದಾರೆ.

Exit mobile version