Viral Video: ದಬಾಂಗ್‌ ಸ್ಟೈಲ್‌ನಲ್ಲಿ ಆಸ್ಪತ್ರೆಯೊಳಗೆ ನುಗ್ಗಿದ ಪೊಲೀಸ್‌ ಜೀಪ್‌! ವಿಡಿಯೋ ವೈರಲ್‌ - Vistara News

ವೈರಲ್ ನ್ಯೂಸ್

Viral Video: ದಬಾಂಗ್‌ ಸ್ಟೈಲ್‌ನಲ್ಲಿ ಆಸ್ಪತ್ರೆಯೊಳಗೆ ನುಗ್ಗಿದ ಪೊಲೀಸ್‌ ಜೀಪ್‌! ವಿಡಿಯೋ ವೈರಲ್‌

Viral Video:ರಿಶಿಕೇಶ್‌ ಏಮ್ಸ್‌ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಆಸ್ಪತ್ರೆಯ ವೈದ್ಯೆಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯ ಬಂಧನಕ್ಕೆಂದು ಬಂದಿದ್ದ ಪೊಲೀಸರು ಜೀಪು ಸಮೇತ ಆಸ್ಪತ್ರೆಯೊಳಗೆ ನುಗ್ಗಿದ್ದಾರೆ. ನೇರವಾಗಿ ಆಸ್ಪತ್ರೆಯ ನಾಲ್ಕನೇ ಮಹಡಿಗೆ ಬಂದ ಪೊಲೀಸರು ಐಸಿಯು ಒಳಗೆ ಜೀಪು ಚಲಾಯಿಸಿದ್ದಾರೆ. ಈ ದೃಶ್ಯವನ್ನು ಆಸ್ಪತೆಯಲ್ಲಿದ್ದವರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು, ಎಕ್ಸ್‌ನಲ್ಲಿ ಹರಿಬಿಟ್ಟಿದ್ದು, ವಿಡಿಯೋ ವೈರಲಾಗಿದೆ

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉತ್ತರಾಖಂಡ: ಸಿನಿಮಾಗಳಲ್ಲಿ ಹೀರೋ ಬಿಲ್ಡಿಂಗ್‌, ಕಾಪೌಂಡ್‌ ಅನ್ನು ಲೆಕ್ಕಿಸದೇ ವಾಹನ ನುಗ್ಗಿಸುವ ದೃಶ್ಯ ನೋಡಿರ್ತೀರಿ. ಅದರಲ್ಲೂ ಹೀರೋ ಒಂದುವೇಳೆ ಪೊಲೀಸ್‌ ಆಗಿದ್ದರೆ ತನ್ನ ಜೀಪ್‌ನಲ್ಲೇ ಅಪರಾಧಿಗಳನ್ನು ಚೇಸ್‌ ಮಾಡಿ ಹಿಡಿಯುವ ಹಲವಾರು ದೃಶ್ಯಗಳನ್ನು ನೋಡಿರ್ತೇವೆ. ಅಂತಹದ್ದೇ ಒಂದು ದೃಶ್ಯ ಋಷಿಕೇಶದಲ್ಲಿ ನಡೆದಿದೆ. ಪೊಲೀಸ್‌ ಅಧಿಕಾರಿಯೊಬ್ಬರು ಲೈಂಗಿಕ ಕಿರುಕುಳ(Sexual harassments) ಆರೋಪಿಯನ್ನು ಅರೆಸ್ಟ್‌ ಮಾಡಲೆಂದು ನೇರವಾಗಿ ಆಸ್ಪತ್ರೆ(Hospital)ಯ ಐಸಿಯು ಒಳಗೆ ತಮ್ಮ ಜೀಪನ್ನು ನುಗ್ಗಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಈ ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral Video) ಆಗಿದೆ.

ವಿಡಿಯೋ ಫುಲ್‌ ವೈರಲ್‌

ರಿಶಿಕೇಶ್‌ ಏಮ್ಸ್‌ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಆಸ್ಪತ್ರೆಯ ವೈದ್ಯೆಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯ ಬಂಧನಕ್ಕೆಂದು ಬಂದಿದ್ದ ಪೊಲೀಸರು ಜೀಪು ಸಮೇತ ಆಸ್ಪತ್ರೆಯೊಳಗೆ ನುಗ್ಗಿದ್ದಾರೆ. ನೇರವಾಗಿ ಆಸ್ಪತ್ರೆಯ ನಾಲ್ಕನೇ ಮಹಡಿಗೆ ಬಂದ ಪೊಲೀಸರು ಐಸಿಯು ಒಳಗೆ ಜೀಪು ಚಲಾಯಿಸಿದ್ದಾರೆ. ಈ ದೃಶ್ಯವನ್ನು ಆಸ್ಪತೆಯಲ್ಲಿದ್ದವರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು, ಎಕ್ಸ್‌ನಲ್ಲಿ ಹರಿಬಿಟ್ಟಿದ್ದು, ವಿಡಿಯೋ ವೈರಲಾಗಿದೆ.

ನರ್ಸಿಂಗ್‌ ಅಧಿಕಾರಿಯಿಂದ ಲೈಂಗಿಕ ಕಿರುಕುಳ

ಏಮ್ಸ್‌ನ ನರ್ಸಿಂಗ್‌ ಅಧಿಕಾರಿ ಸತೀಶ್‌ ಕುಮಾರ್‌ ಎಂಬಾತ ವೈದ್ಯೆಯೊಬ್ಬರಿಗೆ ಎಂಎಂಎಸ್‌ ಕಳುಹಿಸಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ದೂರು ದಾಖಲಾಗಿತ್ತು. ಆರೋಪಿ ಬಂಧನಕ್ಕೆಂದು ಏಮ್ಸ್‌ ಆಸ್ಪತ್ರೆಗೆ ಪೊಲೀಸರು ಬರುತ್ತಿರುವ ವಿಚಾರ ತಿಳಿಯುತ್ತಿದ್ದಂತೆ ಸತೀಶ್‌ ಕುಮಾರ್‌ ಎಸ್ಕೇಪ್‌ ಆಗಲು ಯತ್ನಿಸಿದ್ದ. ಇದು ತಿಳಿದ ಡೆಹ್ರಾಡೂನ್‌ ಪೊಲೀಸರು ಆಸ್ಪತ್ರೆಯ ಒಳಗೆ ಜೀಪ್‌ ಚಲಾಯಿಸಿದಾರೆ. ನೇರವಾಗಿ ನಾಲ್ಕನೇ ಮಹಡಿಗೆ ತಲುಪಿದ ಜೀಪ್‌ ಐಸಿಯು ಒಳಗೆ ಬಂದು ನಿಂತಿದೆ.

ಪೊಲೀಸ್‌ ವಾಹನ್‌ ಆಸ್ಪತ್ರೆ ಒಳಗೆ ಬರುತ್ತಿದ್ದಂತೆ ಅಲ್ಲಿದ್ದ ರೋಗಿಗಳು, ಜನರು ಒಂದು ಕ್ಷಣಕ್ಕೆ ಗಾಬರಿ ಆಗಿದ್ದಾರೆ. ರೋಗಿಗಳು ಮಲಗಿದ್ದ ಮಂಚ ಸರಿಸಿ ಪೊಲೀಸ್‌ ವಾಹನಕ್ಕೆ ಜಾಗ ಮಾಡಿಕೊಡುತ್ತಿರುವ ದೃಶ್ಯವನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಇದಾಗಿಯೂ ಪೊಲೀಸ್‌ ವಾಹನ ಮಾತ್ರ ನಿಲ್ಲುವುದೇ ಇಲ್ಲ. ತನ್ನ ಗುರಿ ತಲುಪಿದ ಮೇಲಷ್ಟೇ ವಾಹನಕ್ಕೆ ಬ್ರೇಕ್‌ ಬೀಳುತ್ತದೆ.

ಇದನ್ನೂ ಓದಿ:ಹಿಮಾಲಯ ಋಷಿಗಳ ದಿವ್ಯ ಸಂದೇಶಗಳು- ಇವು ಗುರು ಸಕಲಮಾ ಬದುಕಿನ ಅಧ್ಯಾಯಗಳು!

ಪೊಲೀಸ್‌ ಕ್ರಮಕ್ಕೆ ಖಂಡನೆ

ಇನ್ನು ಪೊಲೀಸರ ಈ ಕ್ರಮಕ್ಕೆ ಹಲವರಿಂದ ಖಂಡನೆ ವ್ಯಕ್ತವಾಗಿದೆ. ಆಸ್ಪತ್ರೆಯಂತಹ ಸೂಕ್ಷ್ಮ ಸ್ಥಳಗಳಲ್ಲಿ ಇಂತಹ ವಾತಾವರಣ ಸೃಷ್ಟಿಸುವುದು ಸರಿಯಲ್ಲ. ಮುಂದೆ ಇಂತಹ ಘಟನೆ ನಡೆಯದಂತೆ ಎಚ್ಚರ ವಹಿಸಬೇಕೆಂದು ಜನ ಆಗ್ರಹಿಸಿದ್ದಾರೆ. ಅಲ್ಲದೇ ಅಲ್ಲಿದ್ದ ರೋಗಿಗಳು ಹಾಗೂ ಅವರ ಕುಟುಂಬಸ್ಥರೂ ಪೊಲೀಸರ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಉತ್ತರಾಖಂಡ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಘಟನೆಯ ಬಗ್ಗೆ ಗಮನ ಹರಿಸಿದ್ದು,. ಕಿರುಕುಳಕ್ಕೊಳಗಾದ ಮಹಿಳಾ ವೈದ್ಯರನ್ನು ಭೇಟಿ ಮಾಡಲು ಮತ್ತು ಪರಿಸ್ಥಿತಿಯನ್ನು ನೇರವಾಗಿ ನಿರ್ಣಯಿಸಲು AIIMS ಗೆ ಭೇಟಿ ನೀಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral Video: ಥೂ..ಇವನೆಂಥಾ ಕ್ರೂರಿ! ಸತ್ತ ನಾಯಿಯನ್ನು ಕಾರಿಗೆ ಕಟ್ಟಿ ಎಳೆದೊಯ್ದ ಪಾಪಿ

Viral Video: ಟೊಯೋಟಾ ಇನೋವಾ ಕಾರಿಗೆ ಸತ್ತ ನಾಯಿಯನ್ನು ಕಟ್ಟಿ ಅಹಮಾದಾಬಾದ್‌ ಹೆದ್ದಾರಿಯಲ್ಲಿ ಎಳೆದುಕೊಂಡು ಹೋಗುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್‌ ವೈರಲ್‌ ಆಗಿದ್ದು, ನೆಟ್ಟಿಗರು ಆಕ್ರೋಶ ಹೊರ ಹಾಕಿದ್ದಾರೆ. ಆದರೆ ಘಟನೆ ಬಗ್ಗೆ ಇದುವರೆಗೆ ಯಾವುದೇ ಪೊಲೀಸ್‌ ಕೇಸ್‌ ದಾಖಲಾಗಿಲ್ಲ. ಅದೂ ಅಲ್ಲದೇ ಇದು ನಿಖರವಾಗಿ ಯಾವ ಸ್ಥಳದಲ್ಲಿ ನಡೆದಿದೆ ಎಂಬ ಬಗ್ಗೆಯೂ ಮಾಹಿತಿ ಸಿಕ್ಕಿಲ್ಲ.

VISTARANEWS.COM


on

Viral Video
Koo

ಅಹ್ಮದಾಬಾದ್‌: ದೇಶದ ನಾನಾ ಕಡೆಗಳಲ್ಲಿ ಮೂಕ ಪ್ರಾಣಿಗಳ ವಿರುದ್ಧದ ಕ್ರೌರ್ಯ ಆಗಾಗ ಬೆಳಕಿಗೆ ಬರುತ್ತಿರುತ್ತವೆ. ಅದರಲ್ಲೂ ಬೀದಿ ನಾಯಿಗಳ ಮೇಲೆ ಅಮಾನುಷ ಕೃತ್ಯ ನಡೆಯುತ್ತಲೇ ಇರುತ್ತದೆ. ಇದೀಗ ಅಂತಹದ್ದೇ ಒಂದು ಘಟನೆ ಗುಜರಾತ್‌(Gujarat)ನ ಅಹಮದಾಬಾದ್‌ನಲ್ಲಿ ನಡೆದಿದೆ. ಪಾಪಿಯೋರ್ವ ಸತ್ತ ಬೀದಿ ನಾಯಿಯನ್ನು ತನ್ನ ಕಾರಿನ ಹಿಂಬದಿಗೆ ಕಟ್ಟಿ ಎಳೆದುಕೊಂಡು ಕೆಲ ದೂರ ಹೋಗಿರುವ ಭೀಕರ ಘಟನೆ ವರದಿಯಾಗಿದೆ. ಘಟನೆ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral Video) ಆಗಿದೆ.

ವಿಡಿಯೋದಲ್ಲೇನಿದೆ?

ಟೊಯೋಟಾ ಇನೋವಾ ಕಾರಿಗೆ ಸತ್ತ ನಾಯಿಯನ್ನು ಕಟ್ಟಿ ಅಹಮಾದಾಬಾದ್‌ ಹೆದ್ದಾರಿಯಲ್ಲಿ ಎಳೆದುಕೊಂಡು ಹೋಗುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್‌ ವೈರಲ್‌ ಆಗಿದ್ದು, ನೆಟ್ಟಿಗರು ಆಕ್ರೋಶ ಹೊರ ಹಾಕಿದ್ದಾರೆ. ಆದರೆ ಘಟನೆ ಬಗ್ಗೆ ಇದುವರೆಗೆ ಯಾವುದೇ ಪೊಲೀಸ್‌ ಕೇಸ್‌ ದಾಖಲಾಗಿಲ್ಲ. ಅದೂ ಅಲ್ಲದೇ ಇದು ನಿಖರವಾಗಿ ಯಾವ ಸ್ಥಳದಲ್ಲಿ ನಡೆದಿದೆ ಎಂಬ ಬಗ್ಗೆಯೂ ಮಾಹಿತಿ ಸಿಕ್ಕಿಲ್ಲ.

ಇನ್ನು ಘಟನೆಗೆ ಅನೇಕರು ಖಂಡನೆ ವ್ಯಕ್ತಪಡಿಸಿದ್ದು, ಪ್ರಾಣಿಗಳ ವಿರುದ್ಧ ಕ್ರೌರ್ಯ ಮೆರೆಯುವ ಕ್ರೂರಿಗಳ ವಿರುದ್ಧ ಕಟ್ಟು ನಿಟ್ಟಿನ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ. “ನಿಜವಾಗಿಯೂ ಮಾನವೀಯತೆ ಎಷ್ಟು ಕ್ರೂರವಾಗಿ ಮಾರ್ಪಟ್ಟಿದೆ…! ಶವವಾದರೂ ಹೀಗೆ ಎಳೆದುಕೊಂಡು ಹೋಗಬೇಕೇ, ಕಟ್ಟಿಹಾಕಬೇಕೇ? ಡ್ರೈವರ್ ತನ್ನ ಆತ್ಮೀಯರ ಶವವನ್ನು ಹೀಗೆ ತೆಗೆದುಕೊಂಡು ಹೋಗುತ್ತಾನೆಯೇ?” ಎಂದು ಒಬ್ಬ ನೆಟ್ಟಿಗ ಕಿಡಿ ಕಾರಿದ್ದಾರೆ. ಅಹಮದಾಬಾದ್‌ನಲ್ಲಿ ವ್ಯಕ್ತಿಯೊಬ್ಬ ಮಾನವೀಯತೆ ಮರೆತಿದ್ದಾನೆ. ಸತ್ತ ನಾಯಿಯನ್ನು ಗಾಡಿಗೆ ಕಟ್ಟಿ ಈ ರೀತಿ ಎಳೆದುಕೊಂಡು ಹೋಗುವುದು ಎಷ್ಟು ಸೂಕ್ತ? ನಾಚಿಕೆಗೇಡಿನ ಸಂಗತಿ ಇದು ಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ.

ವೈರಲ್ ವಿಡಿಯೋಗೆ ಪೇಟಾ ಪ್ರತಿಕ್ರಿಯೆ

ಭಾರತೀಯ ಪ್ರಾಣಿದಯಾ ಸಂಘವಾಗಿರುವ PETA ಕೂಡ ವೀಡಿಯೊಗೆ ಪ್ರತಿಕ್ರಿಯಿಸಿದೆ, “ಈ ಘಟನೆಯ ಬಗ್ಗೆ ವಿವರವಾದ ಮಾಹಿತಿಯನ್ನು ಒದಗಿಸಲು ನಮ್ಮ ತುರ್ತು ಸಂಖ್ಯೆ 98201 22602 ಗೆ ಕರೆ ಮಾಡಿ ಅಥವಾ ನಿಮ್ಮ ಸಂಪರ್ಕ ವಿವರಗಳನ್ನು ಒದಗಿಸಿ ಇದರಿಂದ ನಾವು ನಿಮ್ಮನ್ನು ಸಂಪರ್ಕಿಸಬಹುದು.” ಎಂದು ಎಕ್ಸ್‌ನಲಿ ಪೋಸ್ಟ್‌ ಮಾಡಿದೆ.

Continue Reading

ವೈರಲ್ ನ್ಯೂಸ್

Viral Video: ಅಬ್ಬಾ..ಎಂಥಾ ಭೀಕರ ದೃಶ್ಯ! ನೋಡ ನೋಡ್ತಿದ್ದಂತೆ ಕುಸಿದು ಬಿದ್ದು ಬಾಲಕ ಸಾವು

Viral Video:ಸಿವಾಲ್ಖಾಸ್‌ ಪ್ರದೇಶದ ನಿವಾಸಿಯಾಗಿರುವ 15 ವರ್ಷದ ಬಾಲಕ ಸಮೀರ್‌ ಬ್ಲೂ ಹೆವನ್‌ ಸ್ವಿಮ್ಮಿಂಗ್‌ಪೂಲ್‌ಗೆ ಈಜಾಡಲು ಬಂದಿದ್ದ. ನೀರಿನಿಂದ ಹೊರ ಬರುತ್ತಿದ್ದಂತೆ ಸಮೀರ್‌ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾನೆ ತಕ್ಷಣ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಘಟನೆ ಬಗ್ಗೆ ವರದಿಯಾಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಅದಾಗ್ಯೂ ಈ ಬಗ್ಗೆ ಬಾಲಕನ ಕುಟುಂಬಸ್ಥರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

VISTARANEWS.COM


on

Viral Video
Koo

ಮೀರತ್‌: ಸಾವು ಯಾರಿಗೆ ಹೇಗೆ ಬೇಕಾದರೂ ಬರಬಹುದು. ಅದನ್ನು ಊಹಿಸೋದಕ್ಕೂ ಸಾಧ್ಯವಿಲ್ಲ. ಅದರಲ್ಲೂ ಈಗೀಗ ಗಟ್ಟಿಮುಟ್ಟಾದ ಯುವಕರು ನೋಡ ನೋಡ್ತಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಆಗಾಗ ಬೆಳಕಿಗೆ ಬರುತ್ತಲೇ ಇರುತ್ತದೆ. ಇದೀಗ ಅಂತಹದ್ದೇ ಒಂದು ಘಟನೆ ಉತ್ತರಪ್ರದೇಶ(Uttar Pradesh)ದ ಮೀರತ್‌ನಲ್ಲಿ ನಡೆದಿದೆ. 15 ವರ್ಷದ ಬಾಲಕನೋರ್ವ ಸ್ವಿಮ್ಮಿಂಗ್‌ ಪೂಲ್‌(Swimming pool) ಸಮೀಪ ಎಲ್ಲರೂ ನೋಡುತ್ತಿದ್ದಂತೆ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ನಡೆದಿದ್ದು, ಈ ಶಾಕಿಂಗ್‌ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral Video) ಆಗಿದೆ.

ಘಟನೆ ವಿವರ

ಸಿವಾಲ್ಖಾಸ್‌ ಪ್ರದೇಶದ ನಿವಾಸಿಯಾಗಿರುವ 15 ವರ್ಷದ ಬಾಲಕ ಸಮೀರ್‌ ಬ್ಲೂ ಹೆವನ್‌ ಸ್ವಿಮ್ಮಿಂಗ್‌ಪೂಲ್‌ಗೆ ಈಜಾಡಲು ಬಂದಿದ್ದ. ನೀರಿನಿಂದ ಹೊರ ಬರುತ್ತಿದ್ದಂತೆ ಸಮೀರ್‌ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾನೆ ತಕ್ಷಣ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಘಟನೆ ಬಗ್ಗೆ ವರದಿಯಾಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಅದಾಗ್ಯೂ ಈ ಬಗ್ಗೆ ಬಾಲಕನ ಕುಟುಂಬಸ್ಥರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಶುಕ್ರವಾರ ಮಧ್ಯಾಹ್ನ ಕ್ರಿಕೆಟ್‌ ಆಟ ಆಡಿದ ಬಳಿಕ ಸಮೀರ್‌ ಬ್ಲೂ ಹೆವೆನ್‌ ಸ್ವಿಮ್ಮಿಂಗ್‌ಪೂಲ್‌ಗೆ ಬಂದಿದ್ದ. ಈಜುಕೊಳದಲ್ಲಿ ಮುಳುಗಿ ಮೇಲೆದ್ದು ಬರುತ್ತಾನೆ. ನಾಲ್ಕು ಹೆಜ್ಜೆ ನಡೆಯುವಾಗಲೇ ಆತ ಪ್ರಜ್ಞೆ ತಪ್ಪಿ ಬೀಳುತ್ತಾನೆ. ಉಳಿದವರು ಏನೂ ಅರಿದಂತೆ ಎಂಜಾಯ್‌ ಮಾಡುತ್ತಿರುತ್ತಾರೆ. ಕೆಲವರು ಬಾಲಕ ಕುಸಿದು ಬೀಳುತ್ತಿದ್ದಂತೆ ಓಡಿ ಬಂದು ಏನಾಯ್ತು ಎಂದು ನೋಡುತ್ತಾರೆ. ಅಷ್ಟರಲ್ಲಿ ಆತನ ಪ್ರಾಣ ಪಕ್ಷಿ ಹಾರಿ ಹೋಗುತ್ತದೆ. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಎಲ್ಲೆಡೆ ವೈರಲ್‌ ಆಗುತ್ತಿದೆ.

ಇಂತಹದ್ದೇ ಒಂದು ಘಟನೆ ತುಮಕೂರಿನಲ್ಲೂ ಕೆಲವು ದಿನಗಳ ಹಿಂದೆ ನಡೆದಿತ್ತು. 9ನೇ ತರಗತಿ ವಿದ್ಯಾರ್ಥಿಯೊಬ್ಬ ಆಟ ಆಡುತ್ತಿರುವಾಗ‌ಲೇ ದಿಢೀರ್ ಕುಸಿದುಬಿದ್ದು ಸಾವಿಗೀಡಾದ ಆತಂಕಕಾರಿ ದುರ್ಘಟನೆ (Student Death) ನಡೆದಿತ್ತು. ತುಮಕೂರು‌ ತಾಲೂಕು‌ ಸಿರಿವಾರ‌ದಲ್ಲಿ ಘಟನೆ ನಡೆದಿದ್ದು, ಧನು (14) ಎಂಬ ವಿದ್ಯಾರ್ಥಿ ಮೃತ ದುರ್ದೈವಿ.

ಸಿರಿವಾರದ ಸರ್ಕಾರಿ ಪ್ರೌಢಾಶಾಲಾ ಆವರಣದಲ್ಲಿ ಆಟವಾಡುತ್ತಿದ್ದಾಗ ಬಾಲಕ ಕುಸಿದು ಬಿದ್ದಿದ್ದ. ಗೆಳೆಯರ ಜೊತೆಗೆ ವಾಲಿಬಾಲ್ ಆಡುವ ವೇಳೆ ಈತ ಕುಸಿದು ಬಿದ್ದಿದ್ದು, ಗೆಳೆಯರು ಬಳಿ ಬಂದು ನೋಡಿದಾಗ ಉಸಿರಾಟ ನಿಂತಿತ್ತು. ನಂತರ ಅಧ್ಯಾಪಕರು ಈತನ ಪೋಷಕರಿಗೆ ಮಾಹಿತಿ ನೀಡಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಜೀವ ಹೋಗಿತ್ತು.

ಇದನ್ನೂ ಓದಿ: Viral Video: ಕಾರು ತಡೆದ ಟ್ರಾಫಿಕ್‌ ಪೊಲೀಸ್‌ ಕ್ಯಾಬ್‌ ಡ್ರೈವರ್‌ ಮಾಡಿದ್ದೇನು ಗೊತ್ತಾ?

Continue Reading

Latest

Viral News: ನಿವೃತ್ತಿಯಾದ ಪೊಲೀಸ್‌ ನಾಯಿಗೆ ಬೀಳ್ಕೊಟ್ಟಿದ್ದು ಹೇಗೆ? ವಿಡಿಯೊ ನೋಡಿ!

Viral News: ನಿಷ್ಠೆಗೆ ಇನ್ನೊಂದು ಹೆಸರು ನಾಯಿಗಳು ಎನ್ನಬಹುದು. ಒಮ್ಮೆ ಪ್ರೀತಿ ತೋರಿಸಿದರೆ ಅವು ಯಾವತ್ತೂ ಮರೆಯುವುದಿಲ್ಲ. ಇನ್ನು ಪೊಲೀಸ್ ನಾಯಿ ಎಂದರೆ ಕೇಳಬೇಕೆ…? ಕಳ್ಳರು, ಕೊಲೆಗಾರರನ್ನು ಹಿಡಿಯುವ ಕೆಲಸದಲ್ಲಿ ಮತ್ತು ಕೊಲೆಗೆ ಬಳಸುವ ವಸ್ತುಗಳನ್ನು ಕಂಡುಹಿಡಿಯುವ ಕೆಲಸದಲ್ಲಿ ಪೊಲೀಸರಿಗೆ ಸಹಾಯ ಮಾಡುತ್ತವೆ. ಎಷ್ಟೋ ಪ್ರಕರಣದ ಆರೋಪಿಗಳನ್ನು ಈ ನಾಯಿಗಳೇ ಹಿಡಿದಿವೆ. ಇದೀಗ ಆದಿಲಾಬಾದ್ ನಲ್ಲಿರುವ ಜಿಲ್ಲಾ ಪೊಲೀಸ್ ಪ್ರಧಾನ ಕಚೇರಿಯಲ್ಲಿ 11 ವರ್ಷಗಳ ಕಾಲ ಇಲಾಖೆಯಲ್ಲಿ ಸೇವೆ ಸಲ್ಲಿಸಿದ ಸ್ನಿಫರ್ ಡಾಗ್ ಜಗಿಲಂ ತಾರಾ ನಿವೃತ್ತಿ ಹೊಂದಿದೆಯಂತೆ.

VISTARANEWS.COM


on

viral News
Koo

ಪೊಲೀಸ್ ವೃತ್ತಿಯನ್ನು ಬರೀ ಪೊಲೀಸರು ಮಾತ್ರ ನಿರ್ವಹಿಸುವುದಿಲ್ಲ ಜೊತೆಗೆ ಪೊಲೀಸ್ ನಾಯಿಗಳೆಂದು ಕರೆಯವ ವೆಲ್ ಟ್ರೈನರ್ ಶ್ವಾನಗಳೂ ಡ್ಯೂಟಿ ಮಾಡುತ್ತವೆ. ಅವುಗಳು ಕಳ್ಳರು, ಕೊಲೆಗಾರರನ್ನು ಹಿಡಿಯುವ ಕೆಲಸದಲ್ಲಿ ಮತ್ತು ಕೊಲೆಗೆ ಬಳಸುವ ವಸ್ತುಗಳನ್ನು ಕಂಡುಹಿಡಿಯುವ ಕೆಲಸದಲ್ಲಿ ಪೊಲೀಸರಿಗೆ ಸಹಾಯ ಮಾಡುತ್ತವೆ. ಎಷ್ಟೋ ಪ್ರಕರಣದ ಆರೋಪಿಗಳನ್ನು ಈ ನಾಯಿಗಳೇ ಹಿಡಿದಿವೆ. ಹಾಗಾಗಿ ಇದೀಗ ಜಿಲ್ಲಾ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಸೇವೆ ಸಲ್ಲಿಸಿದ ಸ್ನಿಫರ್ ಡಾಗ್ ವೊಂದು ನಿವೃತ್ತಿ ಹೊಂದಿದೆ ಎಂಬುದಾಗಿ ತಿಳಿದುಬಂದಿದೆ. ಸೋಶಿಯಲ್‌ ಮೀಡಿಯಾದಲ್ಲಿ ಈ ಸುದ್ದಿ ವೈರಲ್‌ (Viral News) ಆಗಿದೆ.

ತೆಲಂಗಾಣ ಆದಿಲಾಬಾದ್ ನಲ್ಲಿರುವ ಜಿಲ್ಲಾ ಪೊಲೀಸ್ ಪ್ರಧಾನ ಕಚೇರಿಯಲ್ಲಿ 11 ವರ್ಷಗಳ ಕಾಲ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಜೂನ್ 18ರಂದು ನಿವೃತ್ತಿ ಹೊಂದಿದ ಪೊಲೀಸ್ ಸ್ನಿಫರ್ ಡಾಗ್ ಜಗಿಲಂ ತಾರಾಗೆ ಮಾಲಾರ್ಪಣೆ ಮಾಡಿ ಗೌರವಿಸಲಾಗಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದ್ದು, ಅನೇಕರು ತಾರಾನನ್ನು ಹೊಗಳಿದ್ದಾರೆ.

ಈ ವಿಡಿಯೊದಲ್ಲಿ ಡಾಗ್ ತಾರಾನನ್ನು ಹೂಮಾಲೆಗಳಿಂದ ಅಲಂಕರಿಸಲಾಗಿದೆ. ಮತ್ತು ಅಲ್ಲಿ ನೆರೆದಿದ್ದ ಪೊಲೀಸ್ ಅಧಿಕಾರಿಗಳು ಸಂತಸದಿಂದ ಚಪ್ಪಾಳೆ ತಟ್ಟುತ್ತಾ ತಾರಾಗೆ ಶಾಲು ಹೊದಿಸಿ ಸನ್ಮಾನ ಮಾಡುತ್ತಿರುವುದು ಕಂಡುಬಂದಿದೆ. ಈ ಸಮಾರಂಭದಲ್ಲಿ ಆದಿಲಾಬಾದ್ ಪೊಲೀಸ್ ವರಿಷ್ಠಾಧಿಕಾರಿ ಗೌಶ್ ಆಲಂ ಅವರು ತಾರಾ ಅವರ ಅಚಲ ನಿಷ್ಠೆ ಮತ್ತು ಕೊಡುಗೆಗಳನ್ನು ಹೊಗಳಿದ್ದಾರೆ.

ತಾರಾ ಲ್ಯಾಬ್ರಡಾರ್ ರಿಟ್ರೈವರ್, ಸ್ಫೋಟಕಗಳನ್ನು ಪತ್ತೆಹಚ್ಚುವಲ್ಲಿ ತನ್ನ ನಿಷ್ಠೆ ಮತ್ತು ಪ್ರಾವೀಣ್ಯತೆಗಾಗಿ ಹೆಚ್ಚು ಹೆಸರುವಾಸಿಯಾಗಿದೆ. ತಾರಾ ಒಂದು ದಶಕಕ್ಕೂ ಹೆಚ್ಚು ಕಾಲ ಆದಿಲಾಬಾದ್ ನ ಶ್ವಾನದಳದಲ್ಲಿ ಶ್ರದ್ಧೆಯಿಂದ ಸೇವೆ ಸಲ್ಲಿಸಿ ತಂಡದ ವಿಶ್ವಾಸಾರ್ಹ ಮತ್ತು ಪ್ರೀತಿಯ ಸದಸ್ಯೆ ಆಗಿದೆ.

ಇದನ್ನೂ ಓದಿ:ಮತ್ತೊಂದು ರೀಲ್‌ ಕ್ರೇಜ್‌; ಚಲಿಸುವ ರೈಲಿನಲ್ಲಿ ಯುವತಿಯ ಡೇಂಜರಸ್‌ ಡ್ಯಾನ್ಸ್‌!

ಜನವರಿ 22, 2013ರಂದು ಜನಿಸಿದ ತಾರಾ ತೆಲಂಗಾಣದ ಮೊಯಿನಾಬಾದ್ ನಲ್ಲಿರುವ ಇಂಟಿಗ್ರೇಟೆಡ್ ಇಂಟೆಲಿಜೆನ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ಸ್ಪೋಟಕ ಪತ್ತೆ ತಜ್ಞರಾಗಿ ತರಬೇತಿ ಪಡೆದಿದೆ. ತಾರಾ ನಿವೃತ್ತಿಯು ಆದಿಲಾಬಾದ್ ಪೊಲೀಸ್ ಪಡೆಗೆ ಬೇಸರ ಮೂಡಿಸಿದೆ. ಇನ್ನು ತಮ್ಮ ಪ್ರೀತಿಯ ಒಡನಾಡಿಗೆ ಎಲ್ಲರೂ ವಿದಾಯ ಹೇಳಿದ್ದಾರೆ.

Continue Reading

ವೈರಲ್ ನ್ಯೂಸ್

Viral Video: ಕಾರು ತಡೆದ ಟ್ರಾಫಿಕ್‌ ಪೊಲೀಸ್‌ ಕ್ಯಾಬ್‌ ಡ್ರೈವರ್‌ ಮಾಡಿದ್ದೇನು ಗೊತ್ತಾ?

Viral Video: ವರದಿ ಪ್ರಕಾರ, ರಾಜಸ್ಥಾನ ರಿಜಿಸ್ಟರ್ಡ್‌ ಕಾರು ಕಾರನ್ನು ತಡೆದ ಟ್ರಾಫಿಕ್‌ ಪೊಲೀಸರು ದಾಖಲೆ ಪರಿಶೀಲನೆಗೆ ಮುಂದಾಗುತ್ತಾರೆ. ದಾಖಲೆ ಪರಿಶೀಲನೆ ವೇಳೆ ಕಾರು ಚಾಲಕ ಮತ್ತು ಪೊಲೀಸ್‌ ಇನ್‌ಸ್ಪೆಕ್ಟರ್‌ ನಡುವೆ ಭಾರೀ ವಾಗ್ವಾದ ನಡೆದಿದೆ. ಇದರಿಂದ ಕೋಪಗೊಂಡ ಚಾಲಕ ಕಾರು ಚಲಾಯಿಸಿದ್ದಾನೆ. ಕಾರಿನ ಬಾಗಿಲಿನಲ್ಲಿ ಪೊಲೀಸ್‌ ನೇತಾಡುತ್ತಿದ್ದಂತೆ ಚಾಲಕ ಕಾರನ್ನು ವೇಗವಾಗಿ ಮುಂದಕ್ಕೆ ಚಲಾಯಿಸಿದ್ದಾನೆ. ಸ್ವಲ್ಪ ಮುಂದಕ್ಕೆ ಕಾರು ಚಲಾಯಿಸಿದ ಬಳಿಕ ತಕ್ಷಣ ನಿಲ್ಲಿಸುತ್ತಾನೆ. ಕಾರಿನಿಂದ ಮತ್ತೊರ್ವ ವ್ಯಕ್ತಿ ಹೊರಗೆ ಬರುತ್ತಾನೆ.

VISTARANEWS.COM


on

Viral Video
Koo

ಹರಿಯಾಣ: ದಾಖಲೆ ಪರಿಶೀಲನೆ ವೇಳೆ ಕಿಡಿಗೇಡಿ ಕ್ಯಾಬ್‌ ಡ್ರೈವರ್‌(Cab Driver)ವೊಬ್ಬ ಟ್ರಾಫಿಕ್‌ ಪೊಲೀಸ್‌ ಅನ್ನೇ ಕಾರಿನಲ್ಲಿ ಎಳೆದಾಡಿದ ಘಟನೆ ಹರ್ಯಾಣ(Haryana)ದ ಬಲ್ಲಾಬ್‌ಗರ್‌ನಲ್ಲಿ ನಡೆದಿದೆ. ಟ್ರಾಫಿಕ್‌ ಸಿಗ್ನಲ್‌ ಬಿದ್ದ ತಕ್ಷಣ ಟ್ರಾಫಿಕ್‌ ಪೊಲೀಸ್‌ ಕಾರೊಂದನ್ನು ತಡೆದು ದಾಖಲೆ ಪರಿಶೀಲನೆ ಮುಂದಾದಾಗ ಈ ಘಟನೆ ನಡೆದಿದೆ. ಈ ಶಾಕಿಂಗ್‌ ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral Video) ಆಗಿದೆ.

ಘಟನೆ ವಿವರ

ವರದಿ ಪ್ರಕಾರ, ರಾಜಸ್ಥಾನ ರಿಜಿಸ್ಟರ್ಡ್‌ ಕಾರು ಕಾರನ್ನು ತಡೆದ ಟ್ರಾಫಿಕ್‌ ಪೊಲೀಸರು ದಾಖಲೆ ಪರಿಶೀಲನೆಗೆ ಮುಂದಾಗುತ್ತಾರೆ. ದಾಖಲೆ ಪರಿಶೀಲನೆ ವೇಳೆ ಕಾರು ಚಾಲಕ ಮತ್ತು ಪೊಲೀಸ್‌ ಇನ್‌ಸ್ಪೆಕ್ಟರ್‌ ನಡುವೆ ಭಾರೀ ವಾಗ್ವಾದ ನಡೆದಿದೆ. ಇದರಿಂದ ಕೋಪಗೊಂಡ ಚಾಲಕ ಕಾರು ಚಲಾಯಿಸಿದ್ದಾನೆ. ಕಾರಿನ ಬಾಗಿಲಿನಲ್ಲಿ ಪೊಲೀಸ್‌ ನೇತಾಡುತ್ತಿದ್ದಂತೆ ಚಾಲಕ ಕಾರನ್ನು ವೇಗವಾಗಿ ಮುಂದಕ್ಕೆ ಚಲಾಯಿಸಿದ್ದಾನೆ. ಸ್ವಲ್ಪ ಮುಂದಕ್ಕೆ ಕಾರು ಚಲಾಯಿಸಿದ ಬಳಿಕ ತಕ್ಷಣ ನಿಲ್ಲಿಸುತ್ತಾನೆ. ಕಾರಿನಿಂದ ಮತ್ತೊರ್ವ ವ್ಯಕ್ತಿ ಹೊರಗೆ ಬರುತ್ತಾನೆ.

ಘಟನೆಯಲ್ಲಿ ಪೊಲೀಸ್‌ಗೆ ಗಂಭೀರ ಗಾಯಗಳಾಗಿವೆ. ಕಾರು ನಿಲ್ಲುತ್ತಿದ್ದಂತೆ ಚಾಲಕನನ್ನು ಕಾಲರ್‌ನಿಂದ ಹೊರಗೆಳೆದಿದ್ದಾನೆ. ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆ ಅನೇಕ ನೆಟ್ಟಿಗರು ನಾನಾ ರೀತಿಯಲ್ಲಿ ಕಮೆಂಟ್‌ ಮಾಡಿದ್ದಾರೆ. ಕಿಡಿಗೇಡಿ ಚಾಲಕನ ವಿರುದ್ಧ ಕೊಲೆ ಯತ್ನ ಕೇಸ್‌ ದಾಖಲಿಸುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Heat wave: ಉಷ್ಣ ಮಾರುತಕ್ಕೆ ತತ್ತರಿಸಿದ ಉತ್ತರ ಭಾರತ; ದೇಶಾದ್ಯಂತ 143 ಜನ ಬಲಿ

ಗುಜರಾತ್‌ನಲ್ಲೂ ಇಂತಹದ್ದೇ ಒಂದು ಘಟನೆ ವರದಿಯಾಗಿದೆ. ವಾಹನ ಚಾಲಕನ ನಿರ್ಲಕ್ಷ್ಯದಿಂದ ಚಲಿಸುತ್ತಿದ್ದ ವಾಹನದ ಬಾಗಿಲು ತೆರೆದುಕೊಂಡು ಇಬ್ಬರು ವಿದ್ಯಾರ್ಥಿನಿಯರು ವಾಹನದಿಂದ ಹೊರಬಿದ್ದು ಗಾಯಗೊಂಡ ಘಟನೆ ಗುಜರಾತ್‌ನ ವಡೋದರದಲ್ಲಿ ನಡೆದಿದೆ. ಮಾರುತಿ ಇಕೋ ವಾಹನದಲ್ಲಿ ಮಕ್ಕಳನ್ನು ತುಂಬಿಸಿಕೊಂಡು ಚಾಲಕ ಶಾಲೆಯತ್ತ ವೇಗವಾಗಿ ವಾಹನವನ್ನು ಚಲಾಯಿಸಿದ್ದಾನೆ. ಆ ವೇಳೆ ಕಾರಿನ ಹಿಂಬದಿಯ ಬಾಗಿಲು ಸರಿಯಾಗಿ ಹಾಕದ ಕಾರಣ ಅದು ತೆರೆದುಕೊಂಡು ಹಿಂದೆ ಕುಳಿತಿದ್ದ ಇಬ್ಬರು ವಿದ್ಯಾರ್ಥಿನಿಯರು ರಸ್ತೆಯ ಮೇಲೆ ಬಿದ್ದಿದ್ದಾರೆ. ಈ ಘಟನೆಯಿಂದ ಆ ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯವಾಗಿದೆ.

ಹಿಂಬದಿಯಿಂದ ಯಾವುದೇ ವಾಹನ ಬಾರದ ಕಾರಣ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಸ್ತೆಗೆ ಬಿದ್ದ ವಿದ್ಯಾರ್ಥಿನಿಯರನ್ನು ಸ್ಥಳೀಯರು ಮೇಲಕ್ಕೆತ್ತಿ ಚಿಕಿತ್ಸೆ ಮಾಡಿದ್ದಾರೆ. ಆದರೆ ಚಾಲಕ ಮಾತ್ರ ಮಕ್ಕಳು ಬಿದ್ದಿರುವುದು ತಿಳಿದರೂ ವಾಹನ ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಬಗ್ಗೆ ಸ್ಥಳೀಯರು ವಿದ್ಯಾರ್ಥಿನಿಯ ಮನೆಯವರಿಗೆ ಮಾಹಿತಿ ನೀಡಿದ್ದ ಹಿನ್ನಲೆಯಲ್ಲಿ ಸ್ಥಳಕ್ಕೆ ಬಂದು ತಮ್ಮ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗಿದ್ದಾರೆ.

Continue Reading
Advertisement
Suraj Revanna Case
ಕರ್ನಾಟಕ13 mins ago

Suraj Revanna Case: ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌; ಎಂಎಲ್‌ಸಿ ಪ್ರಜ್ವಲ್‌ ರೇವಣ್ಣ ಅರೆಸ್ಟ್‌

Doodle V3 E-Cycle
ಆಟೋಮೊಬೈಲ್21 mins ago

Doodle V3 E-Cycle: ‘ಕಲ್ಕಿ 2898 ಎಡಿ’ನಿಂದ ಪ್ರೇರಿತವಾದ ಇ-ಸೈಕಲ್ ಮಾರುಕಟ್ಟೆಗೆ

Suraj Revanna Case
ಕರ್ನಾಟಕ42 mins ago

Suraj Revanna Case:  ಸಲಿಂಗ ಕಾಮ ಆರೋಪ; ಸಂತ್ರಸ್ತನ ವೈದ್ಯಕೀಯ ಪರೀಕ್ಷೆ ಬಳಿಕ ಇಂದೇ ಅರೆಸ್ಟ್‌ ಆಗ್ತರಾ ಸೂರಜ್‌ ರೇವಣ್ಣ?

Empty Stomach Foods
ಆರೋಗ್ಯ1 hour ago

Empty Stomach Foods: ಬೆಳಗ್ಗೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ಈ ಆಹಾರಗಳನ್ನು ತಿನ್ನಬೇಡಿ!

karnataka weather Forecast
ಮಳೆ2 hours ago

Karnataka Weather : ಕರಾವಳಿ, ಮಲೆನಾಡಿಗೆ ಗುಡುಗು ಸಹಿತ ಭಾರಿ ಮಳೆ; 9 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Menopausal Weight Gain
ಆರೋಗ್ಯ2 hours ago

Menopausal Weight Gain: ಋತುಚಕ್ರ ನಿಂತ ಬಳಿಕ ತೂಕ ಹೆಚ್ಚುವುದನ್ನು ತಡೆಯಬಹುದೇ?

Vastu Tips
ಧಾರ್ಮಿಕ3 hours ago

Vastu Tips: ತಿಳಿದಿರಲಿ, ಕನ್ನಡಿಯೂ ನುಡಿಯುತ್ತದೆ ನಮ್ಮ ಭವಿಷ್ಯ!

Virat kohli
ಪ್ರಮುಖ ಸುದ್ದಿ3 hours ago

Virat Kohli : ಐಸಿಸಿ ಟೂರ್ನಿಯಲ್ಲಿ ಗರಿಷ್ಠ ರನ್ ಬಾರಿಸಿ ವಿಶೇಷ ಮೈಲುಗಲ್ಲು ಸ್ಥಾಪಿಸಿದ ವಿರಾಟ್​ ಕೊಹ್ಲಿ

Dina bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರು ಮಡದಿಯ ಪ್ರೀತಿಗೆ ಸೋಲುವಿರಿ; ಮನೆಯಲ್ಲಿ ಸಂತೋಷದ ದಿನ

NEET UG
ಪ್ರಮುಖ ಸುದ್ದಿ8 hours ago

NEET UG : ನೀಟ್​ ಪರೀಕ್ಷೆ ಅಕ್ರಮಗಳ ತನಿಖೆ ಹೊಣೆ ಸಿಬಿಐಗೆ ಒಪ್ಪಿಸಿದ ಕೇಂದ್ರ ಸರ್ಕಾರ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ2 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ3 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು6 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು6 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ7 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ7 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ7 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌