Site icon Vistara News

Viral Video: ವಿಮಾನದ ರೆಕ್ಕೆ ಮೇಲೆ ನಡೆದುಕೊಂಡು ಹೊರ ಬಂದ ಪ್ರಯಾಣಿಕರು; ವೈರಲಾಯ್ತು ವಿಡಿಯೋ

Viral Video

ನವದೆಹಲಿ: ಬೆಳ್ಳಂ ಬೆಳಗ್ಗೆ ದಿಲ್ಲಿಯಿಂದ ವಾರಣಾಸಿಗೆ ಪ್ರಯಾಣಿಸಬೇಕಾಗಿದ್ದ ಇಂಡಿಯೋ ವಿಮಾನ(Indigo Flight)ಕ್ಕೆ ಬಾಂಬ್‌ ಬೆದರಿಕೆ ಕರೆ(Bomb Threat) ಬಂದಿದ್ದು, ಕೆಲ ಹೊತ್ತು ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿದ ಘಟನೆ ವರದಿಯಾಗಿದೆ. ಬೆದರಿಕೆ ಬರುತ್ತಿದ್ದಂತೆ ಪ್ರಯಾಣಿಕರನ್ನು ಸುರಕ್ಷಿತವಾಗಿ ವಿಮಾನದಿಂದ ಹೊರಗೆ ಕರೆದೊಯ್ಯುವ ಕಾರ್ಯವೂ ನಡೆದಿತ್ತು. ಈ ವೇಳೆ ಮಹಿಳಾ ಪ್ರಯಾಣಿಕರೊಬ್ಬರು ಗಗನಸಖಿ ಜೊತೆಗೆ ವಿಮಾನ ರೆಕ್ಕೆಯ ಮೇಲೆ ನಡೆದುಕೊಂಡು ಬರುತ್ತಿರುವುದು ಮತ್ತು ಪೈಲಟ್‌ ತುರ್ತು ದ್ವಾರದ ಮೂಲಕ ಜಾರಿಗೊಂಡು ಹೊರ ಬರುತ್ತಿರುವ ದೃಶ್ಯ ಇದೀಗ ಎಲ್ಲೆ ವೈರಲ್‌(Viral Video) ಆಗುತ್ತಿದೆ.

ವೈರಲ್‌ ವಿಡಿಯೋದಲ್ಲೇನಿದೆ?

ಬಾಂಬ್‌ ಬೆದರಿಕೆ ಬರುತ್ತಿದ್ದಂತೆ ಎಲ್ಲಾ ಪ್ರಯಾಣಿಕರನ್ನು ತುರ್ತು ನಿರ್ಗಮನ ದ್ವಾರದ ಮೂಲಕ ಹೊರ ತರಲಾಯಿತು. ಈ ವೇಳೆ ಇಂಡಿಗೋ ಸಿಬ್ಬಂದಿ ಮಹಿಳೆಯನ್ನು ಕೈಯಲ್ಲಿ ಹಿಡಿದುಕೊಂಡು ವಿಮಾನದ ರೆಕ್ಕೆ ಮೇಲೆ ನಿಧಾನವಾಗಿ ನಡೆದುಕೊಂಡು ಬರುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಮತ್ತೊಂದೆಡೆ ಎಮರ್ಜೆನ್ಸಿ ಬಾಗಿನಿಂದ ಹೊರ ಬಂದ ಪೈಲಟ್‌ ಜಾರಿಕೊಂಡು ಬರುತ್ತಿರುವುದನ್ನು ವಿಡಯೊದಲ್ಲಿ ಕಾಣಬಹುದಾಗಿ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್‌ ವೈರಲ್‌ ಆಗುತ್ತಿದೆ.

ಘಟನೆ ವಿವರ:

ದಿಲ್ಲಿಯಿಂದ ವಾರಣಾಸಿಗೆ ಪ್ರಯಾಣಿಸಬೇಕಾಗಿದ್ದ ಇಂಡಿಗೋ ಏರ್‌ಲೈನ್ಸ್‌ನ 6E2211 ವಿಮಾನಕ್ಕೆ ಮಂಗಳವಾರ ಬೆಳಗ್ಗೆಬಾಂಬ್‌ ಬೆದರಿಕೆ ಕರೆ ಬಂದಿತ್ತು. ಇನ್ನೇನು ಟೇಕ್‌ ಆಫ್‌ ಆಗಬೇಕಾಗಿದ್ದ ವಿಮಾನವನ್ನು ಪ್ರತ್ಯೇಕ ರನ್‌ ವೇ ಒಯ್ದು ಭದ್ರತಾ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಎಲ್ಲ ಪ್ರಯಾಣಿಕರನ್ನು ಎಮರ್ಜೆನ್ಸಿ ಎಕ್ಸಿಟ್‌ ಬಾಗಿಲಿನಿಂದ ಸುರಕ್ಷಿತವಾಗಿ ಹೊರಗೆ ಕರೆದೊಯ್ಯಲಾಗಿದೆ. ಇನ್ನು ಬೆಳಗ್ಗೆ 5:35ಕ್ಕೆ ಹೊರಡಬೇಕಾಗಿದ್ದ ವಿಮಾನ ಇದಾಗಿತ್ತು. ವಿಮಾನ ಹೊರಡಬೇಕೆನ್ನುವ ಹೊತ್ತಿನಲ್ಲಿ ವಿಮಾನದ ಶೌಚಾಲಯದೊಳಗೆ ಬಾಂಬ್‌ @5.30 ಎಂಬ ಸಂದೇಶ ಬರೆದಿದ್ದ ಪತ್ರವೊಂದು ಸಿಕ್ಕಿತ್ತು.

ಇದನ್ನೂ ಓದಿ: Human trafficking Case: ದೇಶಾದ್ಯಂತ NIA ರೇಡ್‌; ಮಾನವ ಕಳ್ಳಸಾಗಣೆ ಜಾಲ ಬಯಲು

ಸದ್ಯ ಏರ್ಪೋರ್ಟ್‌ ಭದ್ರತಾ ಸಿಬ್ಬಂದಿ ದೆಹಲಿ ಪೊಲೀಸರು ಮತ್ತು ಬಾಂಬ್‌ ನಿಷ್ಕ್ರಿಯ ದಳ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸುತ್ತಿದೆ. ಇನ್ನು ವಿಮಾನದಲ್ಲಿ 176 ಪ್ರಯಾಣಿಕರಿದ್ದರು ಎನ್ನಲಾಗಿದೆ. ಇನ್ನು ನಿನ್ನೆಯಷ್ಟೇ ಮುಂಬೈನ ಮುಂಬೈನಲ್ಲಿರುವ ತಾಜ್‌ ಹೋಟೆಲ್‌ ಹಾಗೂ ಛತ್ರಪತಿ ಶಿವಾಜಿ ಮಹಾರಾಜ ಇಂಟರ್‌ನ್ಯಾಷನಲ್‌ ವಿಮಾನ ನಿಲ್ದಾಣವನ್ನು ಸ್ಫೋಟಿಸುವ ಕುರಿತು ಮುಂಬೈ ಪೊಲೀಸರಿಗೆ ಬೆದರಿಕೆ ಕರೆ ಬಂದಿತ್ತು. ಹಾಗಾಗಿ, ಮುಂಬೈ ತಾಜ್‌ ಹೋಟೆಲ್‌ ಹಾಗೂ ವಿಮಾನ ನಿಲ್ದಾಣದ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ತಿಳಿದುಬಂದಿದೆ.

Exit mobile version