Viral Video : ಬೈಕ್‌ನಲ್ಲಿ `ಹುಡುಗಿಯರ' ಲಿಪ್‌ ಲಾಕ್‌! - Vistara News

ವೈರಲ್ ನ್ಯೂಸ್

Viral Video : ಬೈಕ್‌ನಲ್ಲಿ `ಹುಡುಗಿಯರ’ ಲಿಪ್‌ ಲಾಕ್‌!

ಇತ್ತೀಚೆಗೆ ಸೋಶಿಯಲ್‌ ಮೀಡಿಯಾದಲ್ಲಿ (Social Media) ರೀಲ್ಸ್‌ ಹಾವಳಿ (Reels) ಹೆಚ್ಚಾಗಿದ್ದು, ಯುವಜನತೆ ವಿಚಿತ್ರ ವರ್ತನೆಗಳು ವೈರಲ್‌ (Viral Video) ಆಗುತ್ತಿದೆ. ವೇಗವಾಗಿ ಚಲಿಸುವ ಬೈಕ್‌ನಲ್ಲಿ ಎದುರು ಬದುರಾಗಿ ಕುಳಿತು ಲಿಪ್‌ ಲಾಕ್‌ (Lip Lock) ಮಾಡಿದ್ದಾರೆ. ಲಿಪ್‌ಲಾಕ್‌ ಮಾಡಿದ್ದು ಹುಡುಗ-ಹುಡುಗಿನಾ ಅಂದರೆ ಅಲ್ಲವೇ ಅಲ್ಲ, ಇಬ್ಬರು ಹುಡುಗಿಯರು (Girls Lip lock) ಚುಂಬಿಸಿದ್ದಾರೆ.

VISTARANEWS.COM


on

Girls lip lock video goes viral in social media
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವೇಗವಾಗಿ ಚಲಿಸುತ್ತಿದ್ದ ಬೈಕ್‌ ಮೇಲೆ ಇಬ್ಬರು ಯುವತಿಯರು ಲಿಪ್‌ ಲಾಕ್‌ (Girls Lip lock) ಮಾಡಿರುವ ವಿಡಿಯೊ ಸದ್ಯ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ (Viral Video) ಆಗಿದೆ. ರಸ್ತೆ ಸುರಕ್ಷತೆ (Road safety) ಸಂಬಂಧ ಹಲವಾರು ಜಾಗೃತಿ ಮೂಡಿಸಿದರೂ ಕೆಲವರು ರೀಲ್ಸ್‌ (Reels video) ಮಾಡುವ ಬರದಲ್ಲಿ ದುಸ್ಸಾಹಸ ಮಾಡುವುದು ತಪ್ಪುತ್ತಿಲ್ಲ. ಇತ್ತೀಚೆಗೆ ಬೈಕ್‌ನಲ್ಲಿ ಹೋಗುತ್ತಿದ್ದ ಇಬ್ಬರು ಯುವತಿಯರೇ ಲಿಪ್‌ ಲಾಕ್‌ ಮಾಡಿಕೊಂಡಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ (Viral Video) ಹರಿದಾಡುತ್ತಿದೆ.

ಬೈಕ್‌ ಎರಿದ ಇಬ್ಬರು ಯುವತಿಯರು ಎದುರು ಬದುರಾಗಿ ಕುಳಿತುಕೊಂಡು ಹೋಗುತ್ತಿರುತ್ತಾರೆ. ಈ ವೇಳೆ ಅವರಿಬ್ಬರು ವೇಗವಾಗಿ ಚಲಿಸುತ್ತಿರುವ ಬೈಕ್‌ನಲ್ಲೇ ಲಿಪ್‌ಲಾಕ್ ಮಾಡಿ ತಬ್ಬಿಕೊಂಡಿದ್ದಾರೆ. ಅದೇ ರಸ್ತೆಯಲ್ಲೇ ಹೋಗುತ್ತಿದ್ದವರು ಈ ದೃಶ್ಯವನ್ನು ವಿಡಿಯೊ ಮಾಡಿದ್ದಾರೆ ಎನ್ನಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೊ ಹರಿಬಿಡಲಾಗಿದೆ.

Girls lip lock video goes viral

ವಿಡಿಯೊ ನೋಡಿರುವ ನೆಟ್ಟಿಗರು ಯುವತಿಯರ ಈ ಆಟಕ್ಕೆ ಬೈಯಲಾರಂಭಿಸಿದ್ದಾರೆ. ಇದೇನು ಕಾಲ ಬಂತೂ ಗುರು ಎಂದರೆ, ಮತ್ತೇ ಕೆಲವರು ಮೂರ್ಖ ಹುಡುಗಿಯರು (Stupid Girls) ಎಂದು ಕಾಮೆಂಟ್‌ ಮಾಡಿದ್ದಾರೆ. ಈ ವಿಡಿಯೊವನ್ನು ghantaa ಎನ್ನುವ ಹೆಸರಿನ ಟ್ವಿಟರ್‌ ಖಾತೆಯಲ್ಲಿ ಜು.28ರಂದು ಹಂಚಿಕೊಳ್ಳಲಾಗಿದೆ. ವಿಡಿಯೊಗೆ 81 ಸಾವಿರಕ್ಕೂ ಹೆಚ್ಚು ಲೈಕ್‌ಗಳು, ಸಾವಿರಕ್ಕೂ ಅಧಿಕ ಕಾಮೆಂಟ್‌ಗಳು ಬಂದಿವೆ. ವಿಡಿಯೋ ಪೋಸ್ಟ್‌ ಮಾಡಿ ನಿಮ್ಮ ಬೆಸ್ಟ್‌ ಫ್ರೆಂಡ್‌ ಟ್ಯಾಗ್‌ ಮಾಡಿ ಎನ್ನಲಾಗಿದೆ. ಜತೆಗೆ ವಿಡಿಯೋಗೆ ಪ್ರೀತಿ ಎಂದರೆ ಪ್ರೀತಿ (Love is love) ಎಂದು ಹ್ಯಾಶ್‌ ಟ್ಯಾಗ್‌ ಕೊಡಲಾಗಿದೆ.

ಹುಡುಗಿಯರ ಲಿಪ್‌ ಲಾಕ್‌ ರೀಲ್ಸ್‌ ಇಲ್ಲಿದೆ ನೋಡಿ

ಇನ್ನಷ್ಟು ವೈರಲ್‌ ವಿಡಿಯೊಗೆ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಬೆಂಗಳೂರು

Namma Metro : ದೆಹಲಿ ನಂತರ ನಮ್ಮ ಮೆಟ್ರೋದಲ್ಲೂ ಯುವಕ-ಯುವತಿಯ ಡಿಂಗ್‌ ಡಾಂಗ್‌!

Delhi Metro : ದೆಹಲಿ ಮೆಟ್ರೋ ರೈಲಲ್ಲಿ ಅಪ್ಪಿಕೊಂಡು ನಿಂತ ಜೋಡಿಯೊಂದು ತುಟಿಗೆ ತುಟಿಯಿಟ್ಟು ಚುಂಬಿಸಿದ್ದರು. ಇದು ಸಹ ಪ್ರಯಾಣಿಕರಿಗೆ ಮುಜುಗರ ಉಂಟಾಗಿತ್ತು. ಈಗ ಇದೆ ರೀತಿಯ ವರ್ತನೆ ನಿಧಾನವಾಗಿ ಬೆಂಗಳೂರು ಮೆಟ್ರೋ ರೈಲಲ್ಲೂ (Namma Metro ) ಶುರುವಾಗಿದೆ. ಯುವಕ-ಯುವತಿಯ ವರ್ತನೆಗೆ ಸೋಶಿಯಲ್‌ ಮೀಡಿಯಾದಲ್ಲಿ ಆಕ್ರೋಶ ಕೇಳಿ ಬಂದಿದೆ.

VISTARANEWS.COM


on

By

Namma Metro
Koo

ಬೆಂಗಳೂರು: ನಮ್ಮ ಮೆಟ್ರೋ ರೈಲಿನ ಬಾಗಿಲ ಬಳಿ ಬಿಗಿದಪ್ಪಿ ನಿಂತಿದ್ದ ಯುವಕ- ಯುವತಿಯ ವರ್ತನೆಗೆ ಸಹ ಪ್ರಯಾಣಿಕರು ಕಿಡಿಕಾರಿದ್ದಾರೆ. ದೆಹಲಿ ಮೆಟ್ರೋದಂತೆ ಬೆಂಗಳೂರಲ್ಲಿ ನಮ್ಮ ಮೆಟ್ರೋ ಪರಿವರ್ತನೆ ಆಗುತ್ತಿದೆ ಎಂದು ಅಸಮಾಧಾನ (Namma Metro) ತೋರಿದ್ದಾರೆ.

ಸಾರ್ವಜನಿಕರ ಎದುರಿನಲ್ಲಿ ಈ ರೀತಿ ಅಸಭ್ಯವಾಗಿ ವರ್ತನೆ ಮಾಡುತ್ತಿರುವುದಕ್ಕೆ ಆಕ್ರೋಶಗಳು ಕೇಳಿ ಬಂದಿವೆ. ಸಹ ಪ್ರಯಾಣಿಕರೊಬ್ಬರು ಯುವಕ-ಯುವತಿಯ ವಿಡಿಯೊ ಸೆರೆಹಿಡಿದು ಎಕ್ಸ್‌ನ ಸ್ಯಾಮ್‌ (Sam459om) ಎಂಬುವವರ ಖಾತೆಯಿಂದ ಪೋಸ್ಟ್‌ ಆಗಿದೆ. ಯುವಕನನ್ನು ಒಪ್ಪಿಕೊಂಡಿದ್ದ ಯುವತಿ ಅಕ್ಷರಶಃ ಚುಂಬಿಸುತ್ತಿದ್ದಳು ಎಂದು ಬಿಎಂಆರ್‌ಸಿಎಲ್, ನಮ್ಮ ಮೆಟ್ರೋ ಹಾಗೂ ನಗರ ಪೊಲೀಸರಿಗೆ ಟ್ಯಾಗ್ ಮಾಡಿ ದೂರು ನೀಡಿದ್ದಾರೆ. ಇತ್ತ ಬೆಂಗಳೂರು ನಗರ ಪೊಲೀಸರು ಈ ಬಗ್ಗೆ ಕ್ರಮವಹಿಸಲಾಗುವುದು, ಘಟನೆ ಸಂಬಂಧ ಮಾಹಿತಿ ನೀಡಿ ಎಂದು ರೀ ಟ್ವೀಟ್‌ ಮಾಡಿದ್ದಾರೆ.

ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಬೆನ್ನಲ್ಲೇ, ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ಬಂದಿದೆ. ನಮ್ಮ ಮೆಟ್ರೋದಲ್ಲಿ ಮಕ್ಕಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿ ಎಲ್ಲ ವಯೋಮಾನದವರು ಪ್ರಯಾಣಿಸುತ್ತಾರೆ.‌ ಈ ರೀತಿಯ ನಡವಳಿಕೆಯು ಸರಿಯಲ್ಲ ಎಂದಿದ್ದಾರೆ.

ಕೆಲವರು ಪ್ರೀತಿ-ಪ್ರೇಮ, ಪ್ರಣಯವೆಲ್ಲ ಮನೆಯಲ್ಲಿದ್ದರೆ ಚೆನ್ನ ಎಂದಿದ್ದಾರೆ. ಹಾಗೇ, ಸಾರ್ವಜನಿಕ ಪ್ರದೇಶದಲ್ಲಿ ಹೀಗೆ ಮಾಡುವುದರಿಂದ ಉಳಿದವರಿಗೆ ಮುಜುಗರ ಆಗುತ್ತದೆ ಎಂದೂ ಹೇಳಿದ್ದಾರೆ. ಆದರೆ ಇನ್ನೂ ಕೆಲವರು. ಇದರಲ್ಲಿ ಅಸಭ್ಯ ವರ್ತನೆ ಏನಿದೆ. ಪರಸ್ಪರ ಅಪ್ಪಿಕೊಂಡು ನಿಂತಿದ್ದರಷ್ಟೇ. ಬೇರೆ ಯಾವುದೇ ತಪ್ಪು ಮಾಡಿಲ್ಲ ಎಂದಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರಿಕೆಟ್

MS Dhoni: ಧೋನಿಯ ಕ್ಲೀನ್​ ಬೌಲ್ಡ್​ ಕಂಡು ಬೇಸರಗೊಂಡ ಅಭಿಮಾನಿಗಳು; ವಿಡಿಯೊ ವೈರಲ್​

MS Dhoni: ಒಂಬತ್ತನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಧೋನಿಯ ನಿರ್ಧಾರಕ್ಕೆ ಭಾರತದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಟೀಕೆ ವ್ಯಕ್ತಪಡಿಸಿದ್ದಾರೆ. ಧೋನಿ 9 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವುದಕ್ಕಿಂತ ಚೆನ್ನೈ ಅವರ ಬದಲಿಗೆ ಮತ್ತೊಬ್ಬ ವೇಗಿಯನ್ನು ತಂಡಕ್ಕೆ ಸೇರಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

VISTARANEWS.COM


on

MS Dhoni
Koo

ಧರ್ಮಶಾಲಾ: ಹಿಮಾಲಯದ ತಪ್ಪಲಿನ ರಮಣೀಯ ತಾಣವಾದ ಧರ್ಮಶಾಲಾದಲ್ಲಿ ಭಾನುವಾರ ನಡೆದ ಪಂಜಾಬ್​ ಕಿಂಗ್ಸ್(Punjab Kings)​ ವಿರುದ್ಧದ ಐಪಿಎಲ್(IPL 2024)​ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್(Chennai Super Kings)​ 28 ರನ್​ಗಳ ಗೆಲುವು ಸಾಧಿಸಿತು. ಆದರೆ, ಈ ಪಂದ್ಯದಲ್ಲಿ ಮಹೇಂದ್ರ ಸಿಂಗ್​ ಧೋನಿ(MS Dhoni) ಮೊದಲ ಎಸೆತದಲ್ಲೇ ಕ್ಲೀನ್​ ಬೌಲ್ಡ್​ ಆಗಿ ಗೋಲ್ಡನ್​ ಡಕ್​(Dhoni golden duck) ಸಂಕಟಕ್ಕೆ ಸಿಲುಕಿದರು. ಇದನ್ನು ಕಂಡು ಅವರ ಅಭಿಮಾನಿಗಳು ಭಾರೀ ನಿರಾಸೆಗೊಂಡರು. ಇದರ ವಿಡಿಯೊ ವೈರಲ್​ ಆಗಿದೆ.

ಧೋನಿ ಎಂದರೆ ಅಭಿಮಾನಿಗಳಿಗೊಂದು ಎಮೋಷನ್ (ಭಾವನೆ). ಅವರು ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಕಳೆದ ವರ್ಷವೇ ಧೋನಿ ಅವರು ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿಯಾಗಲಿದೆ. ಈ ಮೂಲಕ ಧೋನಿ ಎಲ್ಲ ಮಾದರಿಯ ಕ್ರಿಕಟ್​ಗೂ ಗುಡ್​ಬೈ ಹೇಳಲಿದ್ದಾರೆ. ಹೀಗಾಗಿ ಧೋನಿ ಅವರ ಬ್ಯಾಟಿಂಗ್​ ಕುಣ್ತುಂಬಿಕೊಳ್ಳಲು ಅವರ ಅಭಿಮಾನಿಗಳು ಪ್ರತಿ ಪಂದ್ಯದ ವೇಳೆಯೂ ಬಹಳ ನಿರೀಕ್ಷೆಯಿಂದ ಕಾಯುತ್ತಿರುತ್ತಾರೆ. ಪಂಜಾಬ್​ ವಿರುದ್ಧದ ಪಂದ್ಯದಲ್ಲಿ ಧೋನಿ ಬ್ಯಾಟಿಂಗ್​ ನೋಡಲು ಅಭಿಮಾನಿಗಳು ಕಾಯುತ್ತಿದ್ದರು. ಆದರೆ ಶೂನ್ಯಕ್ಕೆ ಔಟ್​ ಆಗುವ ಮೂಲಕ ತಮ್ಮ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದರು. ಧೋನಿ ಔಟಾಗುತ್ತಿದ್ದಂತೆ ಅವರ ಅಭಿಮಾನಿಗಳು ಬೇಸರದಲ್ಲಿ ತಲೆ ಮೇಲೆ ಕೈ ಹೊತ್ತು ಕುಳಿತರ. ಈ ವಿಡಿಯೊ ವೈರಲ್​ ಆಗುತ್ತಿದೆ.

ಚೆನ್ನೈ ಬ್ಯಾಟಿಂಗ್​ ಇನಿಂಗ್ಸ್​ನ 19ನೇ ಓವರ್​ನಲ್ಲಿ ಧೋನಿ ಅವರು ಹರ್ಷಲ್​ ಪಟೇಲ್​ ಎಸೆದ ಎಸೆತಕ್ಕೆ ಕ್ಲೀನ್​ ಬೌಲ್ಡ್​ ಆದರು. ಆದರೆ ಕೀಪಿಂಗ್​ನಲ್ಲಿ ಧೋನಿ ಒಂದು ಸೊಗಸಾದ ಕ್ಯಾಚ್​ ಹಿಡಿದು ಮಿಂಚಿದರು. ಜಿತೇಶ್​ ಶರ್ಮ ಅವರ ಕ್ಯಾಚ್​ ಇದಾಗಿತ್ತು.

ಇದನ್ನೂ ಓದಿ IPL 2024 Points Table: ರಾಜಸ್ಥಾನ್​ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಕೆಕೆಆರ್​; ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

ಹರ್ಭಜನ್​ ಟೀಕೆ


ಈ ಪಂದ್ಯದಲ್ಲಿ ಒಂಬತ್ತನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಧೋನಿಯ ನಿರ್ಧಾರಕ್ಕೆ ಭಾರತದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಟೀಕೆ ವ್ಯಕ್ತಪಡಿಸಿದ್ದಾರೆ. ಧೋನಿ 9 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವುದಕ್ಕಿಂತ ಚೆನ್ನೈ ಅವರ ಬದಲಿಗೆ ಮತ್ತೊಬ್ಬ ವೇಗಿಯನ್ನು ತಂಡಕ್ಕೆ ಸೇರಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆಯಲ್ಲಿ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ಚೆನ್ನೈ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 167 ರನ್‌ ಗಳಿಸಿತು. ಸ್ಪರ್ಧಾತ್ಮಕ ಗುರಿ ಬೆನ್ನಟ್ಟಿದ ಪಂಜಾಬ್‌ ಕಿಂಗ್ಸ್‌, ಸತತವಾಗಿ ವಿಕೆಟ್‌ ಕಳೆದುಕೊಂಡು ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 9 ವಿಕೆಟ್‌ ಕಳೆದುಕೊಂಡು 139 ರನ್‌ ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು.

Continue Reading

ವೈರಲ್ ನ್ಯೂಸ್

Viral News: ಅವಳಿ-ತ್ರಿವಳಿ ಅಲ್ಲ.. ಏಕಕಾಲದಲ್ಲಿ ಐದು ಮಕ್ಕಳಿಗೆ ಜನ್ಮಕೊಟ್ಟ ಮಹಾತಾಯಿ

Viral News:ಇಲ್ಲೊಬ್ಬ ತಾಯಿ ಐದು ಮಕ್ಕಳಿಗೆ ಏಕಕಾಲದಲ್ಲಿ ಜನ್ಮ ನೀಡಿರುವ ಘಟನೆ ವರದಿಯಾಗಿದೆ. ಈ ಅಪರೂಪದಲ್ಲಿ ಅಪರೂಪವಾದ ಘಟನೆ ನಡೆದಿದ್ದು ಬಿಹಾರದಲ್ಲಿ. ಇಲ್ಲಿನ ಕೃಷ್ಣಗಂಜ್‌ ಜಿಲ್ಲೆಯ ಪೋತಿಹಾ ತಾಲೂಕಿನಲ್ಲಿರುವ ಖಾಸಗಿ ನರ್ಸಿಂಗ್‌ ಹೋಂನಲ್ಲಿ ಮಹಿಳೆಗೆ ಹೆರಿಗೆಯಾಗಿದೆ. ಇನ್ನು ಜನಿಸಿದ ಎಲ್ಲಾ ಐದು ಮಕ್ಕಳ ಹೆಣ್ಣು ಮಕ್ಕಳಾಗಿದ್ದು, ಮಹಿಳೆಗೆ ಸುಖ ಪ್ರಸವ ಆಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇನ್ನು ಮಕ್ಕಳು ಮತ್ತು ತಾಯಿ ಆರೋಗ್ಯವಾಗಿದ್ದಾರೆ. ಮಕ್ಕಳನ್ನು ವೈದ್ಯರು ನಿಗಾದಲ್ಲಿಟ್ಟಿದ್ದಾರೆ.

VISTARANEWS.COM


on

Viral News
Koo

ನವದೆಹಲಿ: ಮಗುವೊಂದು ಹುಟ್ಟಿತೆಂದರೆ ಒಂದು ಮನೆಯಲ್ಲಿ, ಕುಟುಂಬದಲ್ಲಿ ಸಂಭ್ರಮವೋ ಸಂಭ್ರಮ. ಅದೇ ಅವಳಿ ಜವಳಿ ಮಕ್ಕಳು ಹುಟ್ಟಿತೆಂದರೆ ಆ ಖುಷಿ ಇನ್ನು ಡಬಲ್‌ ಆಗುತ್ತದೆ. ಕೆಲವೊಂದು ಸಂದರ್ಭದಲ್ಲಿ ತಾಯಿ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿರುವ ಘಟನೆಗಳು ಬಹಳಷ್ಟು ಸರಿ ನಡೆದಿದೆ. ಇನ್ನೂ ಮುಂದುವರೆದು ನಾಲ್ಕು ಮಕ್ಕಳಿಗೆ ಜನ್ಮ ನೀಡಿ ಅಚ್ಚರಿ ಮೂಡಿಸಿದ ಘಟನೆಗಳೂ ನಡೆದಿದ್ದಿದೆ. ಆದರೆ ಇಲ್ಲೊಬ್ಬ ತಾಯಿ ಐದು ಮಕ್ಕಳಿಗೆ(Five babies) ಏಕಕಾಲದಲ್ಲಿ ಜನ್ಮ ನೀಡಿರುವ ಘಟನೆ(Viral News) ವರದಿಯಾಗಿದೆ.

ಈ ಅಪರೂಪದಲ್ಲಿ ಅಪರೂಪವಾದ ಘಟನೆ ನಡೆದಿದ್ದು ಬಿಹಾರದಲ್ಲಿ. ಇಲ್ಲಿನ ಕೃಷ್ಣಗಂಜ್‌ ಜಿಲ್ಲೆಯ ಪೋತಿಹಾ ತಾಲೂಕಿನಲ್ಲಿರುವ ಖಾಸಗಿ ನರ್ಸಿಂಗ್‌ ಹೋಂನಲ್ಲಿ ಮಹಿಳೆಗೆ ಹೆರಿಗೆಯಾಗಿದೆ. ಇನ್ನು ಜನಿಸಿದ ಎಲ್ಲಾ ಐದು ಮಕ್ಕಳ ಹೆಣ್ಣು ಮಕ್ಕಳಾಗಿದ್ದು, ಮಹಿಳೆಗೆ ಸುಖ ಪ್ರಸವ ಆಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇನ್ನು ಮಕ್ಕಳು ಮತ್ತು ತಾಯಿ ಆರೋಗ್ಯವಾಗಿದ್ದಾರೆ. ಮಕ್ಕಳನ್ನು ವೈದ್ಯರು ನಿಗಾದಲ್ಲಿಟ್ಟಿದ್ದಾರೆ.

ಇನ್ನು 2021ರಲ್ಲಿ ಮೊರಾಕೋದಲ್ಲಿ ಮಹಿಳೆಯೊಬ್ಬಳು ಏಕಕಾಲದಲ್ಲಿ ಒಂಬತ್ತು ಮಕ್ಕಳಿಗೆ ಜನ್ಮ ನೀಡಿ ಇಡೀ ಪ್ರಪಂಚದ ಮಂದಿಯನ್ನು ಬೆಸ್ತು ಬೀಳಿಸಿದ್ದಳು. ಈ ಕುರಿತು ಅಧಿಕೃತವಾಗಿ ತಿಳಿಸಿರುವ ಮೊರಕೊ ಸರ್ಕಾರ, ಇದೊಂದು ಅಪರೂಪದಲ್ಲಿಯೇ ಅಪರೂಪ ಘಟನೆಯಾಗಿದೆ. ಒಂಭತ್ತು ಮಕ್ಕಳು ಕೂಡ ಆರೋಗ್ಯವಾಗಿದ್ದಾವೆ ಎಂದು ತಿಳಿಸಿದ್ದು, ಇದರಲ್ಲಿ ಐದು ಮಕ್ಕಳು ಹೆಣ್ಣಾಗಿದ್ದು, ನಾಲ್ಕು ಮಕ್ಕಳು ಗಂಡಾಗಿದ್ದವು.

ಪಾಕಿಸ್ತಾನದಲ್ಲೂ ಇಂತಹದ್ದೇ ಅಪರೂಪದ ಘಟನೆಯೊಂದು ನಡೆದಿದ್ದು, ಮಹಿಳೆಯೊಬ್ಬರು ಒಂದೇ ಹೆರಿಗೆಯಲ್ಲಿ ಆರು ಮಕ್ಕಳಿಗೆ ಜನ್ಮ ನೀಡಿದ್ದರು. ಏಪ್ರಿಲ್ 19 ರಂದು ರಾವಲ್ಪಿಂಡಿಯ ಆಸ್ಪತ್ರೆಯಲ್ಲಿ ಮಹಾತಾಯಿ 6 ಮಕ್ಕಳಿಗೆ ( ಜನ್ಮ ನೀಡಿರುವುದನ್ನ ಪಾಕಿಸ್ತಾನದ ಡಾನ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ಈ ಆರು ಮಕ್ಕಳಲ್ಲಿ ನಾಲ್ಕು ಗಂಡು ಮತ್ತು ಇಬ್ಬರು ಹೆಣ್ಣು ಮಕ್ಕಳು ಎಂದು ತಿಳಿದುಬಂದಿದೆ.

ಇದನ್ನೂ ಓದಿ:Crude Bomb: ಚೆಂಡೆಂದು ಭಾವಿಸಿ ಬಾಂಬ್‌ ಜೊತೆ ಮಕ್ಕಳ ಆಟ; ಪಶ್ಚಿಮ ಬಂಗಾಳದಲ್ಲಿ ಭಾರೀ ಸ್ಫೋಟ

ಹೆಚ್ಚು ಮಕ್ಕಳು ಹುಟ್ಟಲು ಕಾರಣವೇನು?

ವೀರ್ಯವು ಮೊಟ್ಟೆಯೊಂದಿಗೆ ಒಂದುಗೂಡಿದಾಗ ಸಾಮಾನ್ಯವಾಗಿ ಭ್ರೂಣವು ರೂಪುಗೊಳ್ಳುತ್ತದೆ. ಆದರೆ ಕೆಲವೊಮ್ಮೆ ಅವುಗಳನ್ನು ಎರಡಕ್ಕಿಂತ ಹೆಚ್ಚು ಭ್ರೂಣಗಳು ರೂಪುಗೊಂಡಾಗ ಅವಳಿ ಮಕ್ಕಳು ಹುಟ್ಟುತ್ತಾರೆ. ಕೆಲವು ಸಂದರ್ಭಗಳಲ್ಲಿ, ಅಂಡಾಣು ಗರ್ಭಾಶಯವನ್ನು ತಲುಪುವ ಮೊದಲು ಬೇರ್ಪಡುತ್ತದೆ, ಆಗ ಅವಳಿಗಳಿಗೆ ಜನ್ಮ ನೀಡುತ್ತಾರೆ. ಅಥವಾ ವಿಭಿನ್ನ ವೀರ್ಯವು ವಿಭಿನ್ನ ಮೊಟ್ಟೆಗಳೊಂದಿಗೆ ಒಂದಾದಾಗ ಈ ರೀತಿಯ ಅಪರೂಪದ ಘಟನೆ ಸಂಭವಿಸುತ್ತದೆ.ಆ ಸಮಯದಲ್ಲಿಯೇ ಮೊಟ್ಟೆಗಳು ಎರಡಕ್ಕಿಂತ ಹೆಚ್ಚು ವಿಭಜನೆಗೊಂಡು ಗರ್ಭಾಶಯದೊಳಗೆ ಹೋಗುತ್ತವೆ. ಬಹಳ ವಿರಳವಾಗಿ ಅವರು ಆರು ಭಾಗಗಳಾಗಿ ವಿಭಜಿಸುತ್ತವೆ. ಆಗ ಮಾತ್ರ ಒಂದು ಗರ್ಭದಲ್ಲಿ ಆರು ಶಿಶುಗಳು ಜನಿಸುತ್ತವೆ. ಇದು ಅಪರೂಪ ಆದರೆ ತುಂಬಾ ಅಪಾಯಕಾರಿ. ಕೆಲವೊಮ್ಮೆ ತಾಯಿ ಸಾಯಬಹುದು. ಆದರೆ ಇತ್ತೀಚಿನ ದಿನಗಳಲ್ಲಿ ಒಂದಕ್ಕಿಂತ ಹೆಚ್ಚು ಮಕ್ಕಳು ಹುಟ್ಟುವುದು ಸಾಮಾನ್ಯವಾಗಿದೆ.


Continue Reading

ವೈರಲ್ ನ್ಯೂಸ್

Boat Capsizes: ಜಲಾವೃತ ಸೇತುವೆಗೆ ದೋಣಿ ಡಿಕ್ಕಿ; ಶಾಕಿಂಗ್‌ ವಿಡಿಯೋ ವೈರಲ್‌

Boat Capsizes: ಬ್ರೆಜಿಲ್‌ನ ರಿಯೊ ಗ್ರಾಂಡೆ ಡೊ ಸುಲ್ ನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಪ್ರವಾಹಕ್ಕೆ ತುತ್ತಾಗಿ ಒಂದೇ ಪ್ರದೇಶದಲ್ಲಿ ಸಿಲುಕಿಕೊಂಡಿದ್ದ ಸಾವಿರಾರು ಜನರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರ ಮಾಡಲಾಗುತ್ತಿತ್ತು. ಈ ವೇಳೆ ಒಂದು ದೋಣಿ ಮುಗುಚಿದೆ ಎನ್ನಲಾಗಿದೆ. ಜನರನ್ನು ಹೊತ್ತು ಸಾಗುತ್ತಿದ್ದ ದೋಣಿ ಜಲಾವೃತಗೊಂಡಿದ್ದ ಸೇತುವೆಗೆ ಡಿಕ್ಕಿ ಹೊಡೆದಿದ್ದು, ಬಳಿಕ ಮಗುಚಿ ಬೀಳುತ್ತಿರುವ ಭಯಾನಕ ದೃಶ್ಯವನ್ನು ವೈರಲ್‌ ಆಗಿರುವ ವಿಡಿಯೋದಲ್ಲಿ ಕಾಣಬಹುದಾಗಿದೆ.

VISTARANEWS.COM


on

Boat Capsize
Koo

ಬ್ರೆಜಿಲ್‌: ಭೀಕರ ಪ್ರವಾಹದ ರಭಸಕ್ಕೆ ದೋಣಿಯೊಂದು ಮಗುಚಿರುವ ಘಟನೆ (Boat Capsizes) ಬ್ರೆಜಿಲ್‌(Brazil)ನಲ್ಲಿ ನಡೆದಿದೆ. ಭಾರೀ ಮಳೆಯಿಂದ ಪ್ರವಾಹ ಸ್ಥಿತಿ(Flood situation) ಎದುರಿಸುತ್ತಿರುವ ಬ್ರೆಜಿಲ್‌ನಲ್ಲಿ ನೂರಾರು ಜನರನ್ನು ಹೊತ್ತು ಸಾಗುತ್ತಿದ್ದ ದೋಣಿಯೊಂದು ಜಲಾವೃತಗೊಂಡಿದ್ದ ಸೇತುವೆಯಿಂದ ಕೆಳಗೆ ಬಿದ್ದಿದೆ. ಪರಿಣಾಮವಾಗಿ ಮಳೆಯಿಂದಾಗಿ ಸಾವನ್ನಪ್ಪಿರುವವರ ಸಂಖ್ಯೆ 56ಕ್ಕೆ ಏರಿಕೆಯಾಗಿದ್ದು, 74 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು 67 ಮಂದಿ ಕಣ್ಮರೆಯಾಗಿದ್ದಾರೆ ಬ್ರೆಜಿಲ್‌ ಅಧಿಕಾರಿಗಳು ಹೇಳಿದ್ದಾರೆ. ಇನ್ನು ಈ ಭೀಕರ ದುರ್ಘಟನೆ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಫುಲ್‌ ವೈರಲ್‌ ಆಗುತ್ತಿದೆ.

ಬ್ರೆಜಿಲ್‌ನ ರಿಯೊ ಗ್ರಾಂಡೆ ಡೊ ಸುಲ್ ನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಪ್ರವಾಹಕ್ಕೆ ತುತ್ತಾಗಿ ಒಂದೇ ಪ್ರದೇಶದಲ್ಲಿ ಸಿಲುಕಿಕೊಂಡಿದ್ದ ಸಾವಿರಾರು ಜನರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರ ಮಾಡಲಾಗುತ್ತಿತ್ತು. ಈ ವೇಳೆ ಒಂದು ದೋಣಿ ಮುಗುಚಿದೆ ಎನ್ನಲಾಗಿದೆ. ಜನರನ್ನು ಹೊತ್ತು ಸಾಗುತ್ತಿದ್ದ ದೋಣಿ ಜಲಾವೃತಗೊಂಡಿದ್ದ ಸೇತುವೆಗೆ ಡಿಕ್ಕಿ ಹೊಡೆದಿದ್ದು, ಬಳಿಕ ಮಗುಚಿ ಬೀಳುತ್ತಿರುವ ಭಯಾನಕ ದೃಶ್ಯವನ್ನು ವೈರಲ್‌ ಆಗಿರುವ ವಿಡಿಯೋದಲ್ಲಿ ಕಾಣಬಹುದಾಗಿದೆ. ಬ್ರೆಜಿಲ್‌ನಲ್ಲಿ ಕಳೆದ ಅನೇಕ ದಿನಗಳಿಂದ ಎಡೆಬಿಡದೇ ಮಳೆಯಾಗುತ್ತಿದ್ದು, ಭೂಕುಸಿತ, ಪ್ರವಾಹಕ್ಕೆ ಸಿಲುಕಿ ಜನ ತತ್ತರಿಸಿದ್ದಾರೆ.

ಇನ್ನು ನಾಲ್ಕು ತಿಂಗಳ ಹಿಂದೆ ಇಂತಹದ್ದೇ ಒಂದು ದುರಂತ ನಡೆದಿತ್ತು. ಗುಜರಾತ್‌ನ ವಡೋದಾರದ ಹರಿಣಿ ಸರೋವರದಲ್ಲಿ ಬೋಟ್ ಮಗುಚಿ 13 ಶಾಲಾ ಮಕ್ಕಳು ಹಾಗೂ ಇಬ್ಬರು ಶಿಕ್ಷಕರು ಮೃತಪಟ್ಟ ಘಟನೆ ನಡೆದಿತ್ತು.

ಇದನ್ನೂ ಓದಿ:Prajwal Revanna Case: ವಿದೇಶದಿಂದ ಮಧ್ಯಾಹ್ನ 3 ಗಂಟೆಗೆ ಪ್ರಜ್ವಲ್‌ ರೇವಣ್ಣ ಆಗಮನ? ಬಂದ ಕೂಡಲೇ ಅರೆಸ್ಟ್!

ಕಳೆದ ವಾರ ಕಾರವಾರದಲ್ಲೂ ಅರಬ್ಬೀ ಸಮುದ್ರದಲ್ಲಿ ಭಾರಿ ಗಾಳಿ ಮಳೆಯಿಂದಾಗಿ ಒಂದು ಮೀನುಗಾರಿಕಾ ಬೋಟ್ ಮುಳುಗಡೆಯಾಗಿದ್ದು, ಬೋಟ್‌ನಲ್ಲಿದ್ದ 4 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಹಳ ವೈರಲ್‌ ಆಗಿತ್ತು. ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮಾವಿನಕುರ್ವೆ ಮೀನುಗಾರಿಕಾ ಬಂದರು ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮಹಾದೇವ ಖಾರ್ವಿ ಎಂಬವರ ಮಾಲಕತ್ವದ ಓಂ ಮಹಾಗಣಪತಿ ಹೆಸರಿನ ಬೋಟ್ ಮುಳುಗಡೆಯಾಗಿತ್ತು. ಬೆಳಿಗ್ಗೆ 5 ಗಂಟೆಯ ವೇಳೆಗೆ 4 ಮಂದಿ ಮೀನುಗಾರರು ಈ ಬೋಟ್‌ನಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಅರಬ್ಬೀ ಸಮದ್ರದಲ್ಲಿ ಕಾಣಿಸಿಕೊಂಡ ಭಾರೀ ಗಾಳಿ ಮಳೆಗೆ ಬೋಟ್ ಪಲ್ಟಿಯಾಗಿದೆ. ಸ್ಥಳದಲ್ಲಿದ್ದ ಇನ್ನೊಂದು ಬೋಟ್‌ನವರಿಂದ ಮೀನುಗಾರರ ರಕ್ಷಣೆ ಮಾಡಲಾಗಿದೆ. ಬೋಟ್ ದುರ್ಘಟನೆಯಿಂದ ಮಾಲೀಕರಿಗೆ ಲಕ್ಷಾಂತರ ರೂಪಾಯಿ ಹಾನಿಯಾಗಿತ್ತು.

Continue Reading
Advertisement
No Diet Day 2024
ಆರೋಗ್ಯ13 mins ago

No Diet Day 2024: ಇಂದು ಡಯೆಟ್‌ ರಹಿತ ದಿನ ಆಚರಿಸುವುದೇಕೆ?

pakistan team
ಕ್ರೀಡೆ14 mins ago

Pakistan Cricket: ಟಿ20 ವಿಶ್ವಕಪ್​ ಗೆದ್ದರೆ ಪಾಕ್​ ಆಟಗಾರರಿಗೆ ಸಿಗಲಿದೆ ಭಾರೀ ಬಹುಮಾನ ಮೊತ್ತ

Gold Rate Today
ಕರ್ನಾಟಕ19 mins ago

Gold Rate Today: 22 ಕ್ಯಾರಟ್‌, 24 ಕ್ಯಾರಟ್‌ ಚಿನ್ನದ ಬೆಲೆ ಇಂದು ಹೀಗಿವೆ; ತುಸುವೇ ಏರಿಕೆ

Puttakkana makkalu sahana dead
ಕಿರುತೆರೆ25 mins ago

Puttakkana Makkalu: ಸಹನಾಳ ಸಾವಿನ ಸುದ್ದಿ ಕೇಳಿ ಮುಗಿಲುಮುಟ್ಟಿತು ಪುಟ್ಟಕ್ಕನ ಆಕ್ರಂದನ

Rekha Jhunjhunwala
ವಾಣಿಜ್ಯ28 mins ago

Rekha Jhunjhunwala: ಷೇರು ಮಾರುಕಟ್ಟೆಯಲ್ಲಿ ರೇಖಾ ಜುಂಜುನ್‌ವಾಲಾಗೆ 805 ಕೋಟಿ ರೂ. ನಷ್ಟ; ಕಾರಣವೇನು?

viral news
ಕ್ರಿಕೆಟ್43 mins ago

Viral News: ಕ್ರಿಕೆಟ್‌ ಆಡುವಾಗ ಖಾಸಗಿ ಭಾಗಕ್ಕೆ ಚೆಂಡು ಬಡಿದು ಬಾಲಕ ದಾರುಣ ಸಾವು; ವಿಡಿಯೊ ಇದೆ

Sunita Williams
ವಿದೇಶ58 mins ago

Sunita Williams: 3ನೇ ಬಾರಿಗೆ ಬಾಹ್ಯಾಕಾಶಕ್ಕೆ ತೆರಳಲು ಸುನೀತಾ ವಿಲಿಯಮ್ಸ್‌ ಸಜ್ಜು

Namma Metro
ಬೆಂಗಳೂರು1 hour ago

Namma Metro : ದೆಹಲಿ ನಂತರ ನಮ್ಮ ಮೆಟ್ರೋದಲ್ಲೂ ಯುವಕ-ಯುವತಿಯ ಡಿಂಗ್‌ ಡಾಂಗ್‌!

Prajwal Revanna Case Who leaked the pen drive Devaraje Gowda gives evidence to SIT
ಕ್ರೈಂ2 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸಲ್ಲಿ ಎಚ್‌ಡಿಡಿ, ಎಚ್‌ಡಿಕೆ ಹೆಸರು ಬಳಸಂಗಿಲ್ಲ; ಕೋರ್ಟ್‌ ತಡೆಯಾಜ್ಞೆ

ICSE Results 202
ಶಿಕ್ಷಣ2 hours ago

CISCE Results 2024: ಸಿಐಎಸ್‌ಸಿಇಯ 10 & 12ನೇ ತರಗತಿಯ ಫಲಿತಾಂಶ ಪ್ರಕಟ; ಹೀಗೆ ಪರಿಶೀಲಿಸಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ10 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ19 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ21 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ21 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

ಟ್ರೆಂಡಿಂಗ್‌