Viral Video: "ನೀವು ಅಲ್ಲಿಂದ ದಾಳಿ ಮಾಡಿ..ನಾವು ಇಲ್ಲಿಂದ ಅಟ್ಯಾಕ್‌ ಮಾಡ್ತೇವೆ..ಪಾಕ್‌ ಧ್ವಂಸ ಆಗೋದು ಪಕ್ಕಾ"-ಆಫ್ಗನ್‌ ವೃದ್ಧನ ಈ ವಿಡಿಯೋ ಫುಲ್‌ ವೈರಲ್‌ - Vistara News

ವೈರಲ್ ನ್ಯೂಸ್

Viral Video: “ನೀವು ಅಲ್ಲಿಂದ ದಾಳಿ ಮಾಡಿ..ನಾವು ಇಲ್ಲಿಂದ ಅಟ್ಯಾಕ್‌ ಮಾಡ್ತೇವೆ..ಪಾಕ್‌ ಧ್ವಂಸ ಆಗೋದು ಪಕ್ಕಾ”-ಆಫ್ಗನ್‌ ವೃದ್ಧನ ಈ ವಿಡಿಯೋ ಫುಲ್‌ ವೈರಲ್‌

Viral Video:ಅಫ್ಘಾನಿಸ್ತಾನ ಪ್ರವಾಸದಲ್ಲಿದ್ದ ಭಾರತೀಯ ಯೂಟ್ಯೂಬರ್‌ ಜೊತೆ ಮಾತನಾಡಿದ ಅಲ್ಲಿನ ವೃದ್ಧರೊಬ್ಬರು ಭಾರತ ಮತ್ತು ಅಫ್ಘಾನಿಸ್ತಾನ ಜೊತೆಗೂಡಿದರೆ ಪಾಕ್‌ ಅಂತ್ಯ ಖಂಡಿತ ಎಂಬ ಮಾತನ್ನು ಹೇಳಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಹಳ ಸದ್ದುಮಾಡುತ್ತಿದೆ. “ಭಾರತ ಮತ್ತು ಅಫ್ಘಾನಿಸ್ತಾನ ಮಿತ್ರ ರಾಷ್ಟ್ರಗಳು. ನಾವು ಸಹೋದರರಿದ್ದಂತೆ. ಐತಿಹಾಸಿಕ ಮತ್ತು ಸಾಂಸ್ಕೃತಿಕ ಬೆಸುಗೆ ಎರಡೂ ದೇಶಗಳನ್ನು ಒಗ್ಗೂಡಿಸುತ್ತದೆ. ಹೀಗಾಗಿ ಎರಡೂ ರಾಷ್ಟ್ರಗಳು ಜೊತೆಗೂಡಿದರೆ ನಮ್ಮ ಶತ್ರು ರಾಷ್ಟ್ರವನ್ನು ಬಹಳ ಸುಲಭವಾಗಿ ಸರ್ವನಾಶ ಮಾಡಬಹುದಾಗಿ ಎಂದು ಅವರು ಹೇಳಿದ್ದಾರೆ.

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಪಾಕಿಸ್ತಾನ(Pakistan) ಎಂದರೆ ಭಾರತ ಮಾತ್ರ ಅಲ್ಲ, ಪ್ರಪಂಚದ ಬಹುತೇಕ ಎಲ್ಲಾ ರಾಷ್ಟ್ರಗಳು ದ್ವೇಷಿಸುವ ರಾಷ್ಟ್ರ. ಇನ್ನು ನೆರೆಯ ಅಫ್ಘಾನಿಸ್ತಾನ(Afghanistan) ಅಂತೂ ಪಾಕಿಸ್ತಾನದ ಕುಕೃತ್ಯದಿಂದ ಬೇಸತ್ತಿರೋದಂತೂ ಅಕ್ಷರಶಃ ನಿಜ. ಹೀಗಾಗಿಯೇ ಅಲ್ಲಿನ ಜನ ಪಾಕಿಸ್ತಾನ ಅಂದ್ರೆ ಸಾಕು ಕೆಂಡ ಕಾರುತ್ತಾರೆ ಇದಕ್ಕೆ ಪೂರಕ ಎಂಬಂತೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ(Viral Video)ವೊಂದು ಭಾರೀ ಸದ್ದು ಮಾಡುತ್ತಿದ್ದು, ಹೀಗೇ ಮುಂದುವರೆದರೆ ಪಾಕ್‌ ಸಂಪೂರ್ಣವಾಗಿ ನಿರ್ಣಾಮ ಆಗದಂತೂ ನಿಜ ಅಂತಿದ್ದಾರೆ ವಿಡಿಯೋ ನೋಡಿದ ನೆಟ್ಟಿಗರು.

ಏನಿದು ವಿಡಿಯೋ?

ಅಫ್ಘಾನಿಸ್ತಾನ ಪ್ರವಾಸದಲ್ಲಿದ್ದ ಭಾರತೀಯ ಯೂಟ್ಯೂಬರ್‌ ಜೊತೆ ಮಾತನಾಡಿದ ಅಲ್ಲಿನ ವೃದ್ಧರೊಬ್ಬರು ಭಾರತ ಮತ್ತು ಅಫ್ಘಾನಿಸ್ತಾನ ಜೊತೆಗೂಡಿದರೆ ಪಾಕ್‌ ಅಂತ್ಯ ಖಂಡಿತ ಎಂಬ ಮಾತನ್ನು ಹೇಳಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಹಳ ಸದ್ದುಮಾಡುತ್ತಿದೆ. “ಭಾರತ ಮತ್ತು ಅಫ್ಘಾನಿಸ್ತಾನ ಮಿತ್ರ ರಾಷ್ಟ್ರಗಳು. ನಾವು ಸಹೋದರರಿದ್ದಂತೆ. ಐತಿಹಾಸಿಕ ಮತ್ತು ಸಾಂಸ್ಕೃತಿಕ ಬೆಸುಗೆ ಎರಡೂ ದೇಶಗಳನ್ನು ಒಗ್ಗೂಡಿಸುತ್ತದೆ. ಹೀಗಾಗಿ ಎರಡೂ ರಾಷ್ಟ್ರಗಳು ಜೊತೆಗೂಡಿದರೆ ನಮ್ಮ ಶತ್ರು ರಾಷ್ಟ್ರವನ್ನು ಬಹಳ ಸುಲಭವಾಗಿ ಸರ್ವನಾಶ ಮಾಡಬಹುದಾಗಿ ಎಂದು ಅವರು ಹೇಳಿದ್ದಾರೆ.

“ನೀವು ಆಕಡೆಯಿಂದ ದಾಳಿ ನಡೆಸಿ.. ನಾವು ಈ ಕಡೆಯಿಂದ ದಾಳಿ ನಡೆಸುತ್ತೇವೆ. ಅಫ್ಘಾನಿಸ್ತಾನ ನಿಮ್ಮ ಜೊತೆ ಯಾವಾಗಲೂ ಇದೆ. ಆಫ್ಗನ್‌ ಜನ ನಿಮ್ಮ ಜೊತೆಗಿದ್ದಾರೆ. ಇಬ್ಬರು ಜೊತೆಗೂಡಿ ದಾಳಿ ನಡೆಸಿದರೆ ಪಾಕ್‌ ಅನ್ನು ಮಟ್ಟ ಹಾಕಬಹುದು. ಅಲ್ಲಿನ ಸಾಮಾನ್ಯ ಜನರೊಡನೆ ನಮಗೇನು ದ್ವೇಷವಿಲ್ಲ. ಬದಲಾಗಿ ಅಲ್ಲಿನ ಆಡಳಿತ ವ್ಯವಸ್ಥೆ ಬಗ್ಗೆ ನಮಗೆ ಅಸಮಾಧಾನ ಇದೆ” ಎಂದು ವೃದ್ಧ ಹೇಳುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಹಳ ವೈರಲ್‌ ಆಗುತ್ತಿದ್ದು, ನೆಟ್ಟಿಗರು ವಿವಿಧ ರೀತಿಯಲ್ಲಿ ಕಮೆಂಟ್‌ ಮಾಡುತ್ತಿದ್ದಾರೆ. ಪಿಒಕೆ ಶೀಘ್ರದಲ್ಲೇ ಮತ್ತೆ ನಮ್ಮದಾಗುತ್ತದೆ ಎಂದು ಒಬ್ಬರು ಕಮೆಂಟ್‌ ಮಾಡಿದರೆ, ಪಾಕಿಸ್ತಾನವನ್ನು ಯಾರೂ ಇಷ್ಟ ಪಡುವುದಿಲ್ಲ… ಅಫ್ಘಾನಿಸ್ತಾನ ಅತ್ಯಂತ ಹೆಚ್ಚಾಗಿ ದ್ವೇಷಿಸುತ್ತದೆ ಎಂದು ಮತ್ತೊಬ್ಬರು ಪ್ರತಿಕ್ರಿಯಿಸಿದ್ದಾರೆ. ಮೋದಿ ಇದ್ದಲ್ಲಿ ಎಲ್ಲವೂ ಸಾಧ್ಯ ಎಂದು ಮತ್ತೊಬ್ಬ ನೆಟ್ಟಿಗ ರಿಯಾಕ್ಟ್‌ ಮಾಡಿದ್ದಾರೆ.

ಇನ್ನು ಈದೇ ವಿಡಿಯೋವನ್ನು ಇಟ್ಟುಕೊಂಡು ಹಲವು ಮೀಮ್ಸ್‌ಗಳು ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ.

ಇದನ್ನೂ ಓದಿ: Aditi Prabhudeva: ತಾಯಿಯಾದ ಬಳಿಕ ಮತ್ತೆ ಕಿರುತೆರೆಗೆ ಎಂಟ್ರಿ ಕೊಟ್ಟ ಅದಿತಿ ಪ್ರಭುದೇವ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral Video: ಏಳನೇ ಮಹಡಿಯಿಂದ ಬೀದಿ ನಾಯಿಯನ್ನು ಎಸೆದು ಕ್ರೌರ್ಯ-ವಿಡಿಯೋ ಇದೆ

Viral Video:ಗ್ರೇಟರ್‌ ನೋಯ್ಡಾದ ವಿಹಾನ್‌ ಹೆರಿಟೇಜ್‌ ಸೊಸೈಟ್‌ ಅಪಾರ್ಟ್‌ಮೆಂಟ್‌ನ ಏಳನೇ ಮಹಡಿಯಿಂದ ನಾಯಿಯನ್ನು ಯಾರೋ ಎಸೆದಿದ್ದಾರೆ. ನೆಲಕ್ಕೆ ಬಿದ್ದ ತಕ್ಷಣ ನಾಯಿ ದಾರುಣವಾಗಿ ಸಾವನ್ನಪ್ಪಿದೆ. ಈ ಘಟನೆ ವಿಡಿಯೋವನ್ನು ಗಾಜಿಯಾಬಾದ್‌ ಪ್ರಾಣಿ ದಯಾ ಸಂಘದ ಅಧ್ಯಕ್ಷ ಸುರಭಿ ರಾವತ್‌ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ವೈರಲ್‌ ಆಗುತ್ತಿದ್ದಂತೆ ನೆಟ್ಟಿಗರು ಕಿಡಿ ಕಾರಿದ್ದಾರೆ.

VISTARANEWS.COM


on

Viral video
Koo

ಉತ್ತರಪ್ರದೇಶ: ಇತ್ತೀಚೆಗಷ್ಟೇ ಸತ್ತ ಬೀದಿನಾಯಿಯೊಂದನ್ನು ಕಾರಿನ ಹಿಂಬದಿಗೆ ಕಟ್ಟಿ ಎಳೆದಾಡಿ ಕ್ರೌರ್ಯ ಮೆರೆದಿದ್ದ. ಈ ಘಟನೆ ಮಾಸುವ ಮುನ್ನವೇ ಅಂತಹದ್ದೇ ಮತ್ತೊಂದು ಘಟನೆ ವರದಿಯಾಗಿದೆ. ಬೀದಿ ನಾಯಿಯೊಂದನ್ನು ಅಪಾರ್ಟ್‌ಮೆಂಟ್‌ನ ಮೇಲಿನಿಂದ ಎಸೆದಿರುವ ಅಮಾನುಷ ಘಟನೆ ಉತ್ತರಪ್ರದೇಶದ ಗ್ರೇಟರ್‌ ನೋಯ್ಡಾದಲ್ಲಿ ನಡೆದಿದೆ. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಎಲ್ಲೆಡೆ ವೈರಲ್‌(Viral Video) ಆಗಿದೆ.

ಘಟನೆ ವಿವರ:

ಗ್ರೇಟರ್‌ ನೋಯ್ಡಾದ ವಿಹಾನ್‌ ಹೆರಿಟೇಜ್‌ ಸೊಸೈಟ್‌ ಅಪಾರ್ಟ್‌ಮೆಂಟ್‌ನ ಏಳನೇ ಮಹಡಿಯಿಂದ ನಾಯಿಯನ್ನು ಯಾರೋ ಎಸೆದಿದ್ದಾರೆ. ನೆಲಕ್ಕೆ ಬಿದ್ದ ತಕ್ಷಣ ನಾಯಿ ದಾರುಣವಾಗಿ ಸಾವನ್ನಪ್ಪಿದೆ. ಈ ಘಟನೆ ವಿಡಿಯೋವನ್ನು ಗಾಜಿಯಾಬಾದ್‌ ಪ್ರಾಣಿ ದಯಾ ಸಂಘದ ಅಧ್ಯಕ್ಷ ಸುರಭಿ ರಾವತ್‌ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ವೈರಲ್‌ ಆಗುತ್ತಿದ್ದಂತೆ ನೆಟ್ಟಿಗರು ಕಿಡಿ ಕಾರಿದ್ದಾರೆ.

ಇನ್ನೂ ಪತ್ತೆಯಾಗದ ಆರೋಪಿ

ಇನ್ನು ಈ ದುಷ್ಕೃತ್ಯ ಎಸೆದವರು ಯಾರು ಎಂಬ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಅದೂ ಅಲ್ಲದೇ ಘಟನೆ ಬಗ್ಗೆ ಯಾವುದೇ ಕೇಸ್‌ ದಾಖಲಾಗಿಲ್ಲ. ಸಿಸಿಟಿವಿ ದೃಶ್ಯಾವಳಿ ಆಧಾರದಲ್ಲಿ ಸ್ಟೇಶನ್‌ ಹೌಸ್‌ ಅಧಿಕಾರಿ ಅರವಿಂದ ಕುಮಾರ್‌ ತನಿಖೆ ನಡೆಸಿದ್ದಾರೆ. ಆರೋಪಿಗಾಗಿ ಬಲೆ ಬೀಸಿದ್ದಾರೆ.

ಕೆಲವು ದಿನಗಳ ಹಿಂದೆ ಸತ್ತ ಬೀದಿನಾಯಿಯೊಂದನ್ನು ಕಾರಿನ ಹಿಂಬದಿಗೆ ಕಟ್ಟಿ ಎಳೆದಾಡಿ ಕ್ರೌರ್ಯ ಮೆರೆದಿದ್ದ. ಟೊಯೋಟಾ ಇನೋವಾ ಕಾರಿಗೆ ಸತ್ತ ನಾಯಿಯನ್ನು ಕಟ್ಟಿ ಅಹಮಾದಾಬಾದ್‌ ಹೆದ್ದಾರಿಯಲ್ಲಿ ಎಳೆದುಕೊಂಡು ಹೋಗುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್‌ ವೈರಲ್‌ ಆಗಿದ್ದು, ನೆಟ್ಟಿಗರು ಆಕ್ರೋಶ ಹೊರ ಹಾಕಿದ್ದಾರೆ. ಆದರೆ ಘಟನೆ ಬಗ್ಗೆ ಇದುವರೆಗೆ ಯಾವುದೇ ಪೊಲೀಸ್‌ ಕೇಸ್‌ ದಾಖಲಾಗಿಲ್ಲ. ಅದೂ ಅಲ್ಲದೇ ಇದು ನಿಖರವಾಗಿ ಯಾವ ಸ್ಥಳದಲ್ಲಿ ನಡೆದಿದೆ ಎಂಬ ಬಗ್ಗೆಯೂ ಮಾಹಿತಿ ಸಿಕ್ಕಿಲ್ಲ

ಇನ್ನು ಘಟನೆಗೆ ಅನೇಕರು ಖಂಡನೆ ವ್ಯಕ್ತಪಡಿಸಿದ್ದು, ಪ್ರಾಣಿಗಳ ವಿರುದ್ಧ ಕ್ರೌರ್ಯ ಮೆರೆಯುವ ಕ್ರೂರಿಗಳ ವಿರುದ್ಧ ಕಟ್ಟು ನಿಟ್ಟಿನ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ. “ನಿಜವಾಗಿಯೂ ಮಾನವೀಯತೆ ಎಷ್ಟು ಕ್ರೂರವಾಗಿ ಮಾರ್ಪಟ್ಟಿದೆ…! ಶವವಾದರೂ ಹೀಗೆ ಎಳೆದುಕೊಂಡು ಹೋಗಬೇಕೇ, ಕಟ್ಟಿಹಾಕಬೇಕೇ? ಡ್ರೈವರ್ ತನ್ನ ಆತ್ಮೀಯರ ಶವವನ್ನು ಹೀಗೆ ತೆಗೆದುಕೊಂಡು ಹೋಗುತ್ತಾನೆಯೇ?” ಎಂದು ಒಬ್ಬ ನೆಟ್ಟಿಗ ಕಿಡಿ ಕಾರಿದ್ದಾರೆ. ಅಹಮದಾಬಾದ್‌ನಲ್ಲಿ ವ್ಯಕ್ತಿಯೊಬ್ಬ ಮಾನವೀಯತೆ ಮರೆತಿದ್ದಾನೆ. ಸತ್ತ ನಾಯಿಯನ್ನು ಗಾಡಿಗೆ ಕಟ್ಟಿ ಈ ರೀತಿ ಎಳೆದುಕೊಂಡು ಹೋಗುವುದು ಎಷ್ಟು ಸೂಕ್ತ? ನಾಚಿಕೆಗೇಡಿನ ಸಂಗತಿ ಇದು ಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದರು.

ಇದನ್ನೂ ಓದಿ: Mamata Banerjee: ಬಾಂಗ್ಲಾದೇಶದೊಂದಿಗೆ ಜಲ ಹಂಚಿಕೆಯ ಮಾತುಕತೆ: ಮಮತಾ ಬ್ಯಾನರ್ಜಿ ವಿರೋಧ; ಪ್ರಧಾನಿಗೆ ಪತ್ರ

Continue Reading

ಕ್ರಿಕೆಟ್

IND vs AUS: ಟೀಮ್​ ಇಂಡಿಯಾ ಆಟಗಾರರ ಮೇಲೆ ಹಿಟ್ ಅಂಡ್ ರನ್ ಗಂಭೀರ ಆರೋಪ ಮಾಡಿದ ದೆಹಲಿ ಪೊಲೀಸರು!

IND vs AUS: ರೋಹಿತ್‌ 41 ಎಸೆತಗಳಲ್ಲಿ 92 ರನ್‌ ಬಾರಿಸಿ ಟಿ20 ವಿಶ್ವಕಪ್‌ನಲ್ಲಿ ಜೀವನಶ್ರೇಷ್ಠ ಬ್ಯಾಟಿಂಗ್‌ ಪ್ರದರ್ಶನ ತೋರಿದರು. ಅದರಲ್ಲೂ ಸ್ಟಾರ್ಕ್‌ ಅವರ 3ನೇ ಓವರ್‌ನಲ್ಲಿ ಬರೋಬ್ಬರಿ 29 ರನ್‌ ಚಚ್ಚಿದರು. ರೋಹಿತ್‌ ತಮ್ಮ 92 ರನ್ನುಗಳ ಸೊಗಸಾದ ಬ್ಯಾಟಿಂಗ್‌ ವೇಳೆ 8 ಸಿಕ್ಸರ್‌ ಮತ್ತು 7 ಬೌಂಡರಿ ಹೊಡೆದರು.

VISTARANEWS.COM


on

IND vs AUS
Koo

ಗ್ರಾಸ್‌ ಐಲೆಟ್‌ (ಸೇಂಟ್‌ ಲೂಸಿಯ): ಸೋಮವಾರ ರಾತ್ರಿ ನಡೆದ ಹಾಲಿ ಟಿ20 ವಿಶ್ವಕಪ್​ ಟೂರ್ನಿಯ ಸೂಪರ್​-8(IND vs AUS Super 8)​ ಪಂದ್ಯದಲ್ಲಿ ರೋಹಿತ್​ ಶರ್ಮ(Rohit Sharma) ಸಾರಥ್ಯದ ಟೀಮ್​ ಇಂಡಿಯಾ ಆಸ್ಟ್ರೇಲಿಯಾವನ್ನು(IND vs AUS) 24 ರನ್​ಗಳಿಂದ ಬಗ್ಗುಬಡಿದು ಸೆಮಿಫೈನಲ್​ ಪ್ರವೇಶಿಸಿತ್ತು. ಭಾರತ ತಂಡದ ಗೆಲುವಿನ ಬಳಿಕ ದೆಹಲಿ ಪೊಲೀಸರು ಮಾಡಿರುವ ಟ್ವೀಟ್​ ಒಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್(viral news)​ ಆಗಿದೆ.

ಡ್ಯಾರೆನ್​ ಶಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಭಾರತ, ಹಿಟ್​ಮ್ಯಾನ್​ ಖ್ಯಾತಿಯ ರೋಹಿತ್‌ ಶರ್ಮ(Rohit Sharma) ಅವರ ಸಿಡಿಲಬ್ಬರದ ಬ್ಯಾಟಿಂಗ್‌ ಸಾಹಸದ ನೆರವಿನಿಂದ 5 ವಿಕೆಟಿಗೆ 205 ರನ್‌ ಬಾರಿಸಿ ಸವಾಲೊಡ್ಡಿತು. ಗುರಿ ಬೆನ್ನಟ್ಟಿದ ಆಸೀಸ್ ಟ್ರಾವಿಸ್​ ಹೆಡ್​(76) ಅರ್ಧಶತಕದ ಹೊರತಾಗಿಯೂ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 181 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಗಿ ಸೋಲು ಕಂಡಿತು. ಕಳೆದ ವರ್ಷ ನೆಡೆದಿದ್ದ ಏಕದಿನ ವಿಶ್ವಕಪ್ ಫೈನಲ್ ಸೋಲಿನ ಸೇಡನ್ನು ಭಾರತ ಇಲ್ಲಿ ತೀರಿಸಿಕೊಂಡಿತು.

ಭಾರತ ತಂಡ ಗೆದ್ದ ಬಳಿಕ ದೆಹಲಿ ಪೊಲೀಸರು ತನ್ನ ಅಧಿಕೃತ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ‘ದಿಸ್ ಜಸ್ಟ್ ಇನ್: ಕೆರಿಬಿಯನ್‌ನಲ್ಲಿ ನಡೆದ ‘ಹಿಟ್-ಅಂಡ್-ರನ್’ ಘಟನೆಯಲ್ಲಿ, ಟೀಮ್​ ಇಂಡಿಯಾದ 11 ಆಟಗಾರರು ಒಂದು ಶತಕೋಟಿ ಹೃದಯಗಳನ್ನು ‘ಕಳ್ಳತನ’ ಮಾಡಿದ್ದಾರೆ. ಆರಂಭಿಕ ತನಿಖೆಯು 19/11ರ ಪ್ರತೀಕಾರದ ಉದ್ದೇಶವನ್ನು ತೋರಿಸುತ್ತದೆ’ ಎಂದು ಹಾಸ್ಯಸ್ಪದವಾಗಿ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್​ ವೈರಲ್​ ಆಗಿದೆ.

ರೋಹಿತ್‌ 41 ಎಸೆತಗಳಲ್ಲಿ 92 ರನ್‌ ಬಾರಿಸಿ ಟಿ20 ವಿಶ್ವಕಪ್‌ನಲ್ಲಿ ಜೀವನಶ್ರೇಷ್ಠ ಬ್ಯಾಟಿಂಗ್‌ ಪ್ರದರ್ಶನ ತೋರಿದರು. ಅದರಲ್ಲೂ ಸ್ಟಾರ್ಕ್‌ ಅವರ 3ನೇ ಓವರ್‌ನಲ್ಲಿ ಬರೋಬ್ಬರಿ 29 ರನ್‌ ಚಚ್ಚಿದರು. ರೋಹಿತ್‌ ತಮ್ಮ 92 ರನ್ನುಗಳ ಸೊಗಸಾದ ಬ್ಯಾಟಿಂಗ್‌ ವೇಳೆ 8 ಸಿಕ್ಸರ್‌ ಮತ್ತು 7 ಬೌಂಡರಿ ಹೊಡೆದರು.

ಇದನ್ನೂ ಓದಿ AFG vs BAN: ‘ನಿಧಾನವಾಗಿ ಆಡಿ, ಮಳೆ ಬರುತ್ತೆ’; ಆಫ್ಘನ್​ ಆಟಗಾರರಿಗೆ ಸಲಹೆ ನೀಡಿದ ಕೋಚ್​; ವಿಡಿಯೊ ವೈರಲ್​

ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಪಂದ್ಯ ಗೆದ್ದ ನಾಯಕ ಎಂಬ ಹಿರಿಮೆಗೆ ರೋಹಿತ್​ ಪಾತ್ರರಾಗಿದ್ದಾರೆ. ರೋಹಿತ್​ ನಾಯಕತ್ವದಲ್ಲಿ ಭಾರತ 60 ಪಂದ್ಯಗಳನ್ನು ಆಡಿ 48 ಪಂದ್ಯಗಳನ್ನು ಗೆದ್ದಿದೆ. ಬಾಬರ್​ ಅಜಂ ಕೂಡ ನಾಯಕನಾಗಿ 48 ಪಂದ್ಯಗಳನ್ನು ಗೆದ್ದಿದ್ದಾರೆ. ಆದರೆ, 85 ಪಂದ್ಯಗಳನ್ನು ಆಡಿದ್ದಾರೆ. ಹೀಗಾಗಿ ಈ ಪಟ್ಟಿಯಲ್ಲಿ ರೋಹಿತ್​ ಮೊದಲ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

ಜೂನ್ 27 ರಂದು ಗಯಾನಾದಲ್ಲಿ ನಡೆಯುವ 2 ನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತವು ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಈ ರಾತ್ರಿ 8 ಗಂಟೆಗೆ ಪಂದ್ಯ ಆರಂಭವಾಗಲಿದೆ. ಮೊದಲ ಸೆಮಿಫೈನಲ್​ ನಾಳೆ(ಬುಧವಾರ) ನಡೆಯಲಿದ್ದು ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಮತ್ತು ಅಫಘಾನಿಸ್ತಾನ ಮುಖಾಮುಖಿಯಾಗಲಿವೆ.

Continue Reading

Latest

Nita Ambani: ಕಾಶಿಯಲ್ಲಿ ಮದುವೆ ಆಮಂತ್ರಣ ಪೂಜೆ; ಚಾಟ್‌ ಅಂಗಡಿಗೂ ಭೇಟಿ ನೀಡಿದ ನೀತಾ ಅಂಬಾನಿ

Nita Ambani ಮಕ್ಕಳ ಮದುವೆ ಎಂದರೆ ತಂದೆ-ತಾಯಂದಿರ ಮನಸ್ಸಿನಲ್ಲಿ ಆಗುವ ಖುಷಿನೇ ಬೇರೆ. ಅಂಬಾನಿ ಕುಟುಂಬ ಕೂಡ ಇದಕ್ಕೆ ಹೊರತಾಗಿಲ್ಲ. ಅಂಬಾನಿ ಮನೆಯಲ್ಲಿ ಈಗ ಮದುವೆಯ ಸಂಭ್ರಮ. ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಅವರ ವಿವಾಹವು ಜುಲೈ 12ರಂದು ನಡೆಯಲಿದೆ. ಇನ್ನು ನೀತಾ ಅಂಬಾನಿ ಇವರಿಬ್ಬರ ಮದುವೆ ಆಮಂತ್ರಣ ಪತ್ರಿಕೆಯನ್ನು ಕಾಶಿ ವಿಶ್ವನಾಥ ಸನ್ನಿಧಿಯಲ್ಲಿ ಇಟ್ಟು ಪೂಜೆ ಸಲ್ಲಿಸಿದರು. ಇನ್ನು ಕಾಶಿಯಲ್ಲಿರುವ ಚಾಟ್ ಅಂಗಡಿಗೆ ಭೇಟಿ ನೀಡಿ ತನ್ನಿಷ್ಟದ ತಿಂಡಿಗಳನ್ನು ಸವಿದರು.

VISTARANEWS.COM


on

Nita Ambani
Koo

ವಾರಣಾಸಿ: ಮುಕೇಶ್‌ ಅಂಬಾನಿ ಮನೆಯಲ್ಲಿ ಈಗ ಮದುವೆಯ ಸಂಭ್ರಮ ಮನೆಮಾಡಿದೆ. ಅನಂತ್‌ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್‌ ಈಗಾಗಲೇ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಇವರ ಪ್ರೀ ವೆಡ್ಡಿಂಗ್‌ ಶೂಟ್‌ಗಳು ಸಿಕ್ಕಾಪಟ್ಟೆ ವೈರಲ್‌ ಆಗಿತ್ತು. ಈ ಜೋಡಿಯ ಮದುವೆ ತಯಾರಿ ಕೂಡ ಜೋರಾಗಿ ನಡೆಯುತ್ತಿದೆ.  ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್‌ ಅವರ ವಿವಾಹಕ್ಕೂ ಮೊದಲು ನೀತಾ ಅಂಬಾನಿ (Nita Ambani) ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಸೋಮವಾರ ವಾರಣಾಸಿಯಲ್ಲಿ ರಿಲಯನ್ಸ್ ಫೌಂಡೇಶನ್ ಅಧ್ಯಕ್ಷ ಮತ್ತು ಬಿಲಿಯನೇರ್ ಮುಖೇಶ್ ಅಂಬಾನಿ ಪತ್ನಿ ನೀತಾ ಅಂಬಾನಿ ತಮ್ಮ ಕಿರಿಯ ಪುತ್ರ ಅನಂತ್ ಅಂಬಾನಿ ಅವರ ವಿವಾಹಕ್ಕೂ ಮುನ್ನ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ನೀತಾ ಅಂಬಾನಿ ಪವಿತ್ರ ನಗರದ ಸ್ಥಳೀಯ ಚಾಟ್ ಅಂಗಡಿಗೆ ಭೇಟಿ ನೀಡಿ ಸ್ಥಳೀಯ ಭಕ್ಷ್ಯಗಳನ್ನು ರುಚಿ ನೋಡಿದರು. ಹಾಗೂ ಅಲ್ಲಿನ ಸಿಬ್ಬಂದಿಗಳ ಜೊತೆ ಖುಷಿಯಿಂದ ಮಾತನಾಡಿದರು.

ಈ ಸಂದರ್ಭದಲ್ಲಿ ಅವರು ಮಗ ಅನಂತ್ ಅಂಬಾನಿ ಮತ್ತು ಸೊಸೆ ರಾಧಿಕಾ ಮರ್ಚೆಂಟ್‌ ಅವರ ವಿವಾಹ ಆಮಂತ್ರಣವನ್ನು ಶಿವನ ಪಾದಗಳಿಗೆ ಅರ್ಪಿಸಿ ಪೂಜೆ ಸಲ್ಲಿಸಿದರು. ತಮ್ಮ ಕುಟುಂಬದ ಮೇಲೆ ಶ್ರೀ ದೇವರ ಆಶೀರ್ವಾದವಿರಲಿ ಎಂದು ಬೇಡಿಕೊಂಡರು.

ಇನ್ನು ಉತ್ತರ ಪ್ರದೇಶದ ವಾರಣಾಸಿ ನಗರದ ಚಾಟ್ ಅಂಗಡಿಯಲ್ಲಿ ನೀತಾ ಅಂಬಾನಿ ಸ್ಥಳೀಯ ಅಂಗಡಿಯವರೊಂದಿಗೆ ಮಾತುಕತೆ ನಡೆಸಿ, ತಮ್ಮಿಷ್ಟದ ಭಕ್ಷ್ಯಗಳನ್ನು ಸವಿದಿದ್ದಾರೆ. ಅವರಿಷ್ಟದ ಆಲೂ ಚಾಟ್ ಅನ್ನು ಬಹಳ ಖುಷಿಯಿಂದ ಎಲ್ಲರ ಜೊತೆ ಕುಳಿತು ಸವಿದಿದ್ದಾರೆ.

ಈ ಸಂದರ್ಭದಲ್ಲಿ ಪತಿ ಮುಕೇಶ್ ಅವರನ್ನು ನೆನಪಿಸಿಕೊಂಡ ನೀತಾ, “ಮುಕೇಶ್ ಇದನ್ನು ಖಂಡಿತಾ ಇಷ್ಟಪಡುತ್ತಿದ್ದರು’ ಎಂದಿದ್ದಾರೆ. ಮುಕೇಶ್ ಸ್ವತಃ ಚಾಟ್ ಪ್ರಿಯರಾಗಿದ್ದು ಮುಂಬಯಿಯ ಸ್ವಾತಿ ಸ್ನಾಕ್ಸ್ ಮಳಿಗೆಯಿಂದ ಕನಿಷ್ಠ ವಾರಕ್ಕೊಮ್ಮೆ ವೈವಿಧ್ಯಮಯ ತಿನಿಸುಗಳನ್ನು ಆರ್ಡರ್ ಮಾಡುತ್ತಿರುತ್ತಾರೆ.

ಇದನ್ನೂ ಓದಿ: ವೃದ್ಧ ರೋಗಿಯ ಮೇಲೆ ದರ್ಪ ತೋರಿದ ಆಸ್ಪತ್ರೆ ಸಿಬ್ಬಂದಿ; ಆಘಾತಕಾರಿ ವಿಡಿಯೊ

ಡಿಸೈನರ್ ಮನಿಷ್ ಮಲ್ಹೋತ್ರಾ ಈ ಸಂದರ್ಭದಲ್ಲಿ ನೀತಾ ಜೊತೆಗಿದ್ದರು. ಆ ಬಳಿಕ ಗಂಗಾ ನದಿ ತಟದಲ್ಲಿ ನಡೆದ ಗಂಗಾರತಿಯ ಸೊಬಗನ್ನೂ ಕಣ್ತುಂಬಿಕೊಂಡರು. ಇನ್ನು ಅನಂತ್‌ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್‌ ಅವರ ಮದುವೆ ಜುಲೈ 12ರಂದು ನಡೆಯಲಿದೆ.

Continue Reading

Latest

Viral Video: ಕ್ಯಾಸಿನೋದಲ್ಲಿ 33 ಕೋಟಿ ರೂ. ಜಾಕ್‌ಪಾಟ್‌; ಖುಷಿ ಹೆಚ್ಚಾಗಿ ಹಾರ್ಟ್‌ ಅಟ್ಯಾಕ್‌!

Viral Video: ಸಿಂಗಾಪುರದ ಮರೀನಾ ಬೇ ಸ್ಯಾಂಡ್ಸ್ ಕ್ಯಾಸಿನೊದಲ್ಲಿ 4ಮಿಲಿಯನ್ ಡಾಲರ್ ಜಾಕ್‌ಪಾಟ್‌ ಗೆದ್ದ ಶ್ರೀಮಂತ ವ್ಯಕ್ತಿಯೊಬ್ಬ ಗೆಲುವಿನ ಖುಷಿ ತಡೆದುಕೊಳ್ಳಲಾಗದೆ ಹೃದಯ ಸ್ತಂಭನದಿಂದ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ. ಹಣ ಗೆದ್ದ ಖುಷಿಯಲ್ಲಿದ್ದ ಅವರು ಆ ಖುಷಿಯನ್ನು ಅನುಭವಿಸಲು ಮಾತ್ರ ಆಗಲಿಲ್ಲ. ಗೆದ್ದ ಉತ್ಸಾಹದಲ್ಲಿದ್ದ ಅವರು ಕಾರ್ಡಿಯಾಕ್ ಅರೆಸ್ಟ್ ಆಗಿ ಅಲ್ಲೆ ಕುಸಿದು ಬಿದ್ದರು. ಜಾಕ್‌ಪಾಟ್ ಹೊಡೆದ ಖುಷಿಯನ್ನು ತಡೆದುಕೊಳ್ಳಲಾಗದೆ ಭಾವಪರವಶರಾಗಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

VISTARANEWS.COM


on

Viral Video
Koo

ತುಂಬಾ ಖುಷಿಯಾದಾಗ ಕೆಲವರಿಗೆ ತಮ್ಮ ಖುಷಿಯನ್ನು ಹೇಗೆ ವ್ಯಕ್ತಪಡಿಸುವುದು ಎಂದು ಗೊತ್ತಾಗುವುದಿಲ್ಲ. ಇನ್ನು ಕೆಲವರಿಗೆ ಯಾವುದಾದರೂ ಶಾಕಿಂಗ್‌ ನ್ಯೂಸ್‌ ಸುದ್ದಿ ಹೇಳಿದರೂ ಯಾವುದೇ ತರಹದ ಪ್ರತಿಕ್ರಿಯೆ ವ್ಯಕ್ತಪಡಿಸುವುದಿಲ್ಲ. ಇಷ್ಟೆಲ್ಲಾ ಪೀಠಿಕೆ ಯಾಕೆಂದರೆ ಇಲ್ಲೊಬ್ಬರು ಖುಷಿಯನ್ನು ತಡೆದುಕೊಳ್ಳಲಾಗದೇ ಮೃತಪಟ್ಟ ಘಟನೆ ನಡೆದಿದೆ. ಸಿಂಗಾಪುರದ ಮರೀನಾ ಬೇ ಸ್ಯಾಂಡ್ಸ್ ಕ್ಯಾಸಿನೊನದಲ್ಲಿ ಕೋಟಿ ಕೋಟಿ ಹಣ ಗೆದ್ದ ವ್ಯಕ್ತಿಯೊಬ್ಬರು ಖುಷಿಯನ್ನು ತಡೆದುಕೊಳ್ಳಲಾಗದೇ ಮೃತಪಟ್ಟಿರುವ ವಿಡಿಯೊವೊಂದು ವೈರಲ್‌ (Viral Video) ಆಗಿದೆ.

ಸಿಂಗಾಪುರದ ಮರೀನಾ ಬೇ ಸ್ಯಾಂಡ್ಸ್ ಕ್ಯಾಸಿನೊದಲ್ಲಿ 4 ಮಿಲಿಯನ್ ಡಾಲರ್ (ಸುಮಾರು 33 ಕೋಟಿ ರೂ. ) ಜಾಕ್‌ಪಾಟ್‌ ಗೆದ್ದ ಶ್ರೀಮಂತ ವ್ಯಕ್ತಿಯೊಬ್ಬ ಗೆಲುವಿನ ಖುಷಿ ತಡೆದುಕೊಳ್ಳಲಾಗದೆ ಹೃದಯ ಸ್ತಂಭನದಿಂದ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ. ಕ್ಯಾಸಿನೊಗೆ ನಿಯಮಿತವಾಗಿ ಭೇಟಿ ನೀಡುತ್ತಿದ್ದ ವ್ಯಕ್ತಿ ಪ್ರತಿ ಸಲ ಬರಿಗೈಯಲ್ಲಿ ವಾಪಾಸ್‌ ಆಗುತ್ತಿದ್ದರಂತೆ. ಆದರೆ ಈ ಬಾರಿ ಮಾತ್ರ ಇವರಿಗೆ ಜಾಕ್‌ಪಾಟ್‌ ಹೊಡೆದಿದೆ.

ಅವರು ನಿರೀಕ್ಷಿಸದಂತಹ ಖುಷಿ ಅಂದು ಅವರ ಪಾಲಿಗೆ ಒಲಿದು ಬಂದಿತ್ತು. ಹಣ ಗೆದ್ದ ಖುಷಿಯಲ್ಲಿದ್ದ ಅವರು ಆ ಖುಷಿಯನ್ನು ಅನುಭವಿಸಲು ಮಾತ್ರ ಆಗಲಿಲ್ಲ. ಗೆದ್ದ ಉತ್ಸಾಹದಲ್ಲಿದ್ದ ಅವರು ಕಾರ್ಡಿಯಾಕ್ ಅರೆಸ್ಟ್‌ ಆಗಿ ಅಲ್ಲೆ ಕುಸಿದು ಬಿದ್ದರು. ಜಾಕ್‌ಪಾಟ್‌ ಹೊಡೆದ ಖುಷಿಯನ್ನು ತಡೆದುಕೊಳ್ಳಲಾಗದೆ ಭಾವಪರವಶರಾಗಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಕುಸಿದುಬಿದ್ದ ವ್ಯಕ್ತಿಗೆ ಕ್ಯಾಸಿನೊ ಸಿಬ್ಬಂದಿ ಮತ್ತು ತುರ್ತು ವೈದ್ಯಕೀಯ ಚಿಕಿತ್ಸೆ ಒದಗಿಸಿದರೂ ವ್ಯಕ್ತಿಯನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಅತಿಯಾದ ಸಂತೋಷವೇ ವ್ಯಕ್ತಿಯ ಕಾರ್ಡಿಯಾಕ್‌ ಅರೆಸ್ಟ್‌ಗೆ ಕಾರಣ ಎಂದು ವೈದ್ಯರು ಘೋಷಿಸಿದರು.

ಇದನ್ನೂ ಓದಿ: Dating Trend: ʼ3 ತಿಂಗಳ ಡೇಟಿಂಗ್‌ʼ! ಯುವ ಜನತೆಯ ಹೊಸ ಟ್ರೆಂಡ್‌!

ಮರೀನಾ ಕೊಲ್ಲಿಯಲ್ಲಿರುವ ಈ ಕ್ಯಾಸಿನೊ ಅದರ ನಾಲ್ಕು ಹಂತದ ಗೇಮಿಂಗ್ ಫ್ಲೋರ್ರ ಸ್ಪೇಸ್ ಮತ್ತು 2300ಕ್ಕೂ ಹೆಚ್ಚಿನ ಸ್ಲಾಟ್ ಯಂತ್ರಗಳೊಂದಿಗೆ ಹೊಸ ಮತ್ತು ಜನಪ್ರಿಯ ಎಲೆಕ್ಟ್ರಾನಿಕ್ ಗೇಮಿಂಗ್ ಆಯ್ಕೆಯನ್ನೂ ಗ್ರಾಹಕರಿಗೆ ಒದಗಿಸುತ್ತದೆ. 250ಕ್ಕೂ ಹೆಚ್ಚಿನ ಆಟಗಳೊಂದಿಗೆ ಭೇಟಿನೀಡುವ ಪ್ರತಿಯೊಬ್ಬರಿಗೂ ಭರಪೂರ ಮನರಂಜನೆ ಒದಗಿಸುತ್ತದೆ. ಇಲ್ಲಿ ಮೂವತ್ತಕ್ಕೂ ಹೆಚ್ಚಿನ ಖಾಸಗಿ ಗೇಮಿಂಗ್ ಕೊಠಡಿಗಳಿವೆ. 500ಕ್ಕೂ ಹೆಚ್ಚಿನ ಗೇಮಿಂಗ್ ಟೇಬಲ್‌ಗಳಿವೆ. 

Continue Reading
Advertisement
Arvind Kejriwal
ದೇಶ31 seconds ago

Arvind Kejriwal: ಕೇಜ್ರಿವಾಲ್‌ಗೆ ಜೈಲೂಟವೇ ಗತಿ! ಜಾಮೀನಿಗೆ ಹೈಕೋರ್ಟ್‌ ತಡೆಯಾಜ್ಞೆ

AFG vs BAN
ಕ್ರೀಡೆ21 mins ago

AFG vs BAN: ಆಫ್ಘನ್​ ತಂಡದ ಐತಿಹಾಸಿಕ ಸಾಧನೆಯನ್ನು ಕೊಂಡಾಡಿದ ಸಚಿನ್​ ತೆಂಡೂಲ್ಕರ್​

Viral video
ವೈರಲ್ ನ್ಯೂಸ್45 mins ago

Viral Video: ಏಳನೇ ಮಹಡಿಯಿಂದ ಬೀದಿ ನಾಯಿಯನ್ನು ಎಸೆದು ಕ್ರೌರ್ಯ-ವಿಡಿಯೋ ಇದೆ

Anantkumar Hegde home fire
ಉತ್ತರ ಕನ್ನಡ60 mins ago

Anantkumar Hegde: ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗ್ಡೆ ಮನೆಯಲ್ಲಿ ಬೆಂಕಿ ಆಕಸ್ಮಿಕ

Parliament Session 2024
ದೇಶ1 hour ago

Parliament Session 2024: ಸಂಸತ್‌ನಲ್ಲಿ ಈ ಬಾರಿ ಮೋದಿಗೆ ಪ್ರತಿಪಕ್ಷಗಳ ಪ್ರಬಲ ಸವಾಲು! Live ನೋಡಿ

Milk Price
ಪ್ರಮುಖ ಸುದ್ದಿ1 hour ago

Milk Price: ಹಾಲಿನ ದರ ಏರಿಕೆ ಬಗ್ಗೆ ಗೊತ್ತಿಲ್ಲ ಎಂದ ಸಿಎಂ; 50ml ಹೆಚ್ಚಿಗೆ ಕೊಟ್ಟು 2 ರೂ. ಜಾಸ್ತಿ ಮಾಡಿದ್ದೇವೆ ಎಂದ ಕೆಎಂಎಫ್‌ ಅಧ್ಯಕ್ಷ!

mandya kannada sahitya sammelana
ಪ್ರಮುಖ ಸುದ್ದಿ1 hour ago

Kannada Sahitya Sammelana: ಡಿಸೆಂಬರ್‌ 20, 21, 22ರಂದು ಮಂಡ್ಯದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

IND vs AUS
ಕ್ರಿಕೆಟ್1 hour ago

IND vs AUS: ಟೀಮ್​ ಇಂಡಿಯಾ ಆಟಗಾರರ ಮೇಲೆ ಹಿಟ್ ಅಂಡ್ ರನ್ ಗಂಭೀರ ಆರೋಪ ಮಾಡಿದ ದೆಹಲಿ ಪೊಲೀಸರು!

prajwal revanna case preetham gowda
ಪ್ರಮುಖ ಸುದ್ದಿ2 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಮೇಲೆ ಮತ್ತೊಂದು ಎಫ್‌ಐಆರ್‌; ಪ್ರೀತಂ ಗೌಡ ಮೇಲೂ ದೂರು

Lok Sabha Speaker Election
ದೇಶ2 hours ago

Lok Sabha Speaker Election: ಲೋಕಸಭೆ ಇತಿಹಾಸದಲ್ಲೇ ಮೊದಲ ಬಾರಿ ಸ್ಪೀಕರ್‌ ಹುದ್ದೆಗೆ ನಡೆಯಲಿದೆ ಚುನಾವಣೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ20 hours ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ4 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ4 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ5 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌