Site icon Vistara News

Viral Video: ಇವನೇ ನಿಜವಾದ ಹೀರೋ! ಇವರ ಧೈರ್ಯ, ಶೌರ್ಯಕ್ಕೆ ಸರಿಸಾಟಿಯೇ ಇಲ್ಲ; ವೈರಲಾಯ್ತು ವಿಡಿಯೋ

Viral Video

ಜಮ್ಮು ಕಾಶ್ಮೀರ: ಸಂಕಷ್ಟದಲ್ಲಿ ಸಿಲುಕಿದವರ ರಕ್ಷಣೆಗಾಗಿ ಕೆಲವೊಮ್ಮೆ ದೇವರು ಆಪತ್ಬಾಂದವರನ್ನು ಯಾವ ರೀತಿಯಲ್ಲಾದರೂ ಹೇಗಾದರೂ ಮಾಡಿ ಕಳಿಸುತ್ತಾನೆ. ಹಾಗೆ ಬಂದ ವ್ಯಕ್ತಿ ತನ್ನ ಜೀವದ ಹಂಗನ್ನು ತೊರೆದು ಸಾವಿನೊಂದಿಗೆ ಸೆಣಸಾಡಿ ಕಷ್ಟದಲ್ಲಿದ್ದ ವ್ಯಕ್ತಿಯನ್ನು ರಕ್ಷಿಸುತ್ತಾನೆ. ಅಂತಹದ್ದೇ ಒಂದು ಘಟನೆ ಜಮ್ಮು ಕಾಶ್ಮೀರದಲ್ಲಿ ನಡೆದಿದೆ. ಇದು ನಿಜ ಜೀವನದ ಸೂಪರ್‌ ಹೀರೋನ ಕಥೆ. ಈತನ ಧೈರ್ಯ, ಸಮಯಪ್ರಜ್ಞೆಗೆ ಸಾಟಿಯೇ ಇಲ್ಲ. ಆತನ ಈ ವಿಡಿಯೋ ಒಂದು ಕ್ಷಣಕ್ಕೆ ಎಲ್ಲರನ್ನೂ ದಂಗಾಗಿಸಿದೆ. ಸೋಶಿಯಲ್‌ ಮೀಡಿಯಾ(Social Media)ದಲ್ಲಿ ಈ ವಿಡಿಯೋ ಫುಲ್‌ ವೈರಲ್‌(Viral Video) ಆಗಿದೆ

ಆಕಸ್ಮಿಕವಾಗಿ ನದಿಗೆ ಬಿದ್ದು ಸಾವಿನೊಂದಿಗೆ ಸೆಣಸಾಡುತ್ತಿದ್ದ ಪುಟ್ಟ ಕಂದನನ್ನು ತನ್ನ ಜೀವದ ಹಂಗು ತೊರೆದು ವ್ಯಕ್ತಿಯೊಬ್ಬರು ರಕ್ಷಿಸಿದ್ದಾರೆ. ಇದರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಈಗ ಫುಲ್ ವೈರಲ್ ಆಗಿದ್ದು, ಆ ವ್ಯಕ್ತಿಗೆ ಪ್ರಶಂಸೆಗಳ ಸುರಿಮಳೆಯೇ ಹರಿದು ಬರುತ್ತಿದೆ. ಈ ಘಟನೆ ಜಮ್ಮು ಕಾಶ್ಮೀರದಲ್ಲಿನ ಶ್ರೀನಗರದ ಸಫಾಕದಲ್ ಏರಿಯಾದಲ್ಲಿ ನಡೆದಿದ್ದು, ಏಳು ವರ್ಷದ ಬಾಲಕ ಆಕಸ್ಮಿಕವಾಗಿ ಝೀಲಂ ನದಿಗೆ ಬಿದ್ದಿದ್ದಾನೆ. ಆತ ನೀರಿನಲ್ಲಿ ಮುಳುಗಿ ಕೈ ಕಾಲು ಬಡಿಯುತ್ತಿದ್ದಾಗ ಇದನ್ನು ಸ್ಥಳೀಯರು ಗಮನಿಸಿದ್ದಾರೆ.

ಕೂಡಲೇ ಸಮಯ ಪ್ರಜ್ಞೆ ಮೆರೆದ ವ್ಯಕ್ತಿಯೊಬ್ಬರು ನದಿಗೆ ಹಾರಿ ಬಾಲಕನನ್ನು ಸುರಕ್ಷಿತವಾಗಿ ದಂಡೆಗೆ ಕರೆ ತಂದಿದ್ದಾರೆ. ಈ ಸಂದರ್ಭದಲ್ಲಿ ದಡದ ಮೇಲಿದ್ದ ಮತ್ತೊಬ್ಬ ವ್ಯಕ್ತಿ ಮಗುವನ್ನು ಎತ್ತಿಕೊಂಡಿದ್ದು, ಬಳಿಕ ಸಿಪಿಆರ್ ಮಾಡಿ ಆತನನ್ನು ಸಾವಿನಿಂದ ರಕ್ಷಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಅಂತಹದ್ದೇ ಒಂದು ಘಟನೆ ಕೆಲವು ದಿನಗಳ ಹಿಂದೆ ಉತ್ತರಾಖಂಡದಲ್ಲಿ ನಡೆದಿತ್ತು. ಚಲಿಸುತಿದ್ದ ರೈಲು ಹತ್ತಲು ಹೋಗಿ ವ್ಯಕ್ತಿಯೊಬ್ಬ ಕಾಲು ಜಾರಿ ಬಿದ್ದಿದ್ದು, ತಕ್ಷಣ ಅಲ್ಲೇ ಇದ್ದ ಮಹಿಳಾ ಪೊಲೀಸ್‌ ಸಿಬ್ಬಂದಿ ತಮ್ಮ ಜೀವದ ಹಂಗನ್ನು ತೊರೆದು ಆತನನ್ನು ರಕ್ಷಿಸಿ ಕರ್ತವ್ಯ ಪ್ರಜ್ಞೆ ಮೆರೆದಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣ(Social Media)ದಲ್ಲಿ ವೈರಲ್‌ ಆಗಿದ್ದು, ಸಿಬ್ಬಂದಿಯ ಶಕ್ತಿ ಸಾಮರ್ಥ್ಯ ಹಾಗೂ ಕರ್ತವ್ಯ ಪ್ರಜ್ಞೆಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ:Viral Video: ದಿಗಂಬರ ಜೈನ ಮುನಿಗಳಿಗೆ ಈ ಪಾಪಿ ಮಾಡಿದ್ದೇನು ಗೊತ್ತಾ? ಶಾಕಿಂಗ್‌ ವಿಡಿಯೋ ವೈರಲ್‌

ಉತ್ತರಾಖಂಡದ ಲಸ್ಕರ್‌ ರೈಲ್ವೇ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿಗೆ ಹತ್ತಲು ಹೋಗಿದ್ದ ವ್ಯಕ್ತಿ ಫ್ಲ್ಯಾಟ್‌ಫಾರ್ಮ್‌ ಮತ್ತು ರೈಲಿನ ನಡುವಿನ ಸಂದಿಗೆ ಬಿದ್ದಿದ್ದಾನೆ. ಇದನ್ನು ಗಮನಿಸಿದ ಜಿಆರ್‌ಪಿ ಕಾನ್‌ಸ್ಟೇಬಲ್‌ ಉಮಾ, ಆಪದ್ಬಾಂಧವಳಂತೆ ಬಂದು ಆತನನ್ನು ರಕ್ಷಿಸಿದ್ದಾರೆ. ಇನ್ನು ಈ ಘಟನೆ ಏ.24ರಂದು ನಡೆದಿದ್ದು, ಆಹಾರ ಮತ್ತು ಜ್ಯೂಸ್‌ ತೆಗೆದು ಕೊಳ್ಳಲೆಂದು ಆ ವ್ಯಕ್ತಿ ರೈಲಿನಿಂದ ಇಳಿದಿದ್ದ. ತಕ್ಷಣ ಹೊರಡುತ್ತಿದ್ದನ್ನು ಗಮನಿಸಿದ ಆ ಓಡಿ ಹೋಗಿ ಹತ್ತಿದ್ದಾನೆ ಎನ್ನಲಾಗಿದೆ. ಕೈನಲ್ಲಿ ಆಹಾರ ಪೊಟ್ಟಣಗಳು ಇದ್ದ ಕಾರಣ ಆತನಿಗೆ ಸುಲಭವಾಗಿ ಹತ್ತಲು ಸಾಧ್ಯವಾಗಿಲ್ಲ. ಹೀಗಾಗಿ ಆಯ ತಪ್ಪಿ ಕೆಳಗೆ ಬಿದ್ದಿದ್ದ.

Exit mobile version