ಲಂಡನ್: ಹಾಡಹಗಲೇ ದುಷ್ಕರ್ಮಿಯೋರ್ವ ಕತ್ತಿಯಿಂದ ದಾಳಿ(Stabbed) ನಡೆಸಿದ್ದು, ಘಟನೆಯಲ್ಲಿ 14 ವರ್ಷದ ಬಾಲಕ ದಾರುಣವಾಗಿ ಮೃತಪಟ್ಟಿದ್ದಾನೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಲಂಡನ್(London)ನ ಹೈನಾಲ್ಟ್‌ನಲ್ಲಿ ಈ ಘಟನೆ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್(Viral Video) ಆಗಿದೆ. ತಕ್ಷಣ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಆತನನ್ನು ಹೆಡೆಮುರಿ ಕಟ್ಟಿದ್ದಾರೆ. 36 ವರ್ಷದ ಆರೋಪಿ ಏಕಾಏಕಿ ಚಾಕು ದಾಳಿ ನಡೆಸಿ ಎಸ್ಕೇಪ್ ಆಗೋಕೆ ಯತ್ನಿಸುತ್ತಿರುವಾಗಲೇ ಆತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
22 ಸೆಕೆಂಡ್ಸ್ ವಿಡಿಯೋದಲ್ಲಿ ಕೃತ್ಯದ ಬಳಿಕ ಓಡಿ ಹೋಗಲು ಯತ್ನಿಸುತ್ತಿದ್ದ ಹಳದಿ ಬಣ್ಣದ ಜ್ಯಾಕೆಟ್ ತೊಟ್ಟಿದ್ದ ದುಷ್ಕರ್ಮಿ ಬಳಿ ಮಹಿಳಾ ಪೊಲೀಸ್ ಸಿಬ್ಬಂದಿ ಪಿಸ್ತೂಲ್ ಹಿಡಿದು ಬರುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಕೆಲವು ನಿಮಿಷಗಳ ಬಳಿ ಆರು ಜನ ಪೊಲೀಸರು ಆತನನ್ನು ಹಿಡಿಯುವಲ್ಲಿ ಯಶಸ್ವಿ ಆಗಿದ್ದಾರೆ. ಕೃತ್ಯಕ್ಕೂ ಮುನ್ನ ಆತನ ವಾಹನ ಕಟ್ಟಡವೊಂದಕ್ಕೆ ಡಿಕ್ಕಿ ಹೊಡೆದು, ಆತನಿಗೆ ಸ್ವಲ್ಪ ಮಟ್ಟ ಗಾಯಗಳಾಗಿವೆ. ಹೀಗಾಗಿ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನೆ ವಿವರ:
ತಲ್ರೋ ಗಾರ್ಡನ್ ಬಳಿ ವಾಹನವೊಂದು ಏಕಾಏಕಿ ಕಟ್ಟಡಕ್ಕೆ ಗುದ್ದಿತ್ತು. ಅದರಲ್ಲಿದ್ದ ದುಷ್ಕರ್ಮಿ ಕೆಳಗಿಳಿದು ಕೈಯಲ್ಲಿ ಕತ್ತಿ ಹಿಡಿದುಕೊಂದು ಓಡಾಡುತ್ತಿದ್ದ. ಬಳಿಕ ಇದ್ದಕ್ಕಿದ್ದಂತೆ ಸಿಕ್ಕ ಸಿಕ್ಕವರ ಮೇಲೆ ಕತ್ತಿಯಿಂದ ದಾಳಿ ನಡೆಸಲು ಆರಂಭಿಸಿದ್ದ. ಎದುರಿಗೆ ಸಿಕ್ಕಿದ್ದ 14 ವರ್ಷದ ಬಾಲಕ ಸೇರಿದಂತೆ ಒಟ್ಟು ಐವರ ಮೇಲೆ ಕತ್ತಿಯಿಂದ ಚುಚ್ಚಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಸ್ಥಳದಲ್ಲೇ ಅಸುನೀಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ದೃಶ್ಯ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಅದನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಆರೋಪಿ ಯಾವುದಾದರೂ ಉಗ್ರ ಸಂಘಟನೆ ಜೊತೆ ನಂಟು ಹೊಂದಿದ್ದಾನೆಯೇ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸಿದ್ದು, ಆ ಅನುಮಾನ ಸುಳ್ಳಾಗಿದೆ ಎಂದು ಮಾಹಿತಿ ನೀಡಿದ್ದಾರೆ.
Moment Hainault attack suspect apprehended by police
— WeGotitBack 🏴🇬🇧🇺🇸 (@NotFarLeftAtAll) April 30, 2024
What a brave police woman! What do you notice about the police officer with the baton ? pic.twitter.com/IgQnbijeMz
ಇದನ್ನೂ ಓದಿ: Godrej Group: ಶತಮಾನದ ಇತಿಹಾಸ ಹೊಂದಿರುವ ಗೋದ್ರೇಜ್ ಗ್ರೂಪ್ ಇಬ್ಬಾಗ; ಎರಡು ಕುಟುಂಬಗಳಲ್ಲಿ ಆಡಳಿತ ವಿಭಜನೆ
ಕಿಂಗ್ ಚಾರ್ಲ್ಸ್, ರಿಷಿ ಸುನಕ್ ಖಂಡನೆ
ಇನ್ನು ಘಟನೆಗೆ ಬ್ರಿಟನ್ ರಾಜ ಚಾರ್ಲ್ಸ್, ಪ್ರಧಾನಿ ರಿಷಿ ಸುನಕ್ ಖಂಡನೆ ವ್ಯಕ್ತಪಡಿಸಿದ್ದಾರೆ. ದುರ್ಘಟನೆಯಲ್ಲಿ ಮೃತಪಟ್ಟ ಬಾಲಕ ಕುಟುಂಬಕ್ಕೆ ಸಾಂತ್ವನ ಹೇಳಿರುವ ಚಾರ್ಲ್ಸ್, ಮೃತ ಬಾಲಕನ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಈ ಸಂದರ್ಭದಲ್ಲಿ ದಿಟ್ಟತನ ತೋರಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರನ್ನು ಶ್ಲಾಘಿಸುತ್ತೇನೆ ಎಂದು ಹೇಳಿದ್ದಾರೆ. ಇನ್ನು ಇದೊಂದು ಆಘಾತಕಾರಿ ಘಟನೆ ಎಂದು ಕರೆದಿರುವ ರಿಷಿ ಸುನಕ್, ಇಂಥಹ ಘಟನೆಗಳು ದೇಶದಲ್ಲಿ ನಡೆಯಬಾರದು. ಮೃತ ಹಾಗೂ ಗಾಯಾಳುಗಳ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಪೊಲೀಸರನ್ನೂ ನಾನು ಪ್ರಶಂಸಿಸುತ್ತೇನೆ ಎಂದರು.